< ಯೆಹೆಜ್ಕೇಲನು 15 >
1 ೧ ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು,
여호와의 말씀이 내게 임하여 가라사대
2 ೨ “ನರಪುತ್ರನೇ, ದ್ರಾಕ್ಷಿಯ ಗಿಡವು ಉಳಿದ ಗಿಡಗಳಿಗಿಂತ ಎಷ್ಟು ಹೆಚ್ಚು? ವನವೃಕ್ಷಗಳಲ್ಲಿ ದ್ರಾಕ್ಷಾಲತೆಯ ವಿಶೇಷವೇನು?
인자야! 포도나무가 모든 나무보다 나은 것이 무엇이랴 삼림 중 여러 나무 가운데 있는 그 포도나무 가지가 나은 것이 무엇이랴
3 ೩ ಜನರು ದ್ರಾಕ್ಷಿಯ ಕಟ್ಟಿಗೆಯನ್ನು ತೆಗೆದುಕೊಂಡು ಅದರಿಂದ ಯಾವ ಕೆಲಸವನ್ನಾದರೂ ಮಾಡುವರೋ ಅಥವಾ ಅದರ ಮೇಲೆ ಯಾವ ವಸ್ತುವನ್ನಾದರೂ ನೇತು ಹಾಕುವುದಕ್ಕೆ ಅದರಿಂದ ಗೂಟವನ್ನು ಮಾಡಿಕೊಳ್ಳುವರೋ?
그 나무를 가지고 무엇을 제조할 수 있겠느냐 그것으로 무슨 그릇을 걸 못을 만들 수 있겠느냐?
4 ೪ ಇಲ್ಲ, ಸೌದೆಯಾಗಿ ಬೆಂಕಿಯಲ್ಲಿ ಹಾಕುವರು; ಬೆಂಕಿಯು ಅದರ ಎರಡು ಕೊನೆಗಳನ್ನು ಸುಟ್ಟುಬಿಡುವುದು, ಮಧ್ಯಭಾಗವು ಇದ್ದಲಾಗಿ ಯಾವ ಕೆಲಸಕ್ಕೂ ಬರುವುದಿಲ್ಲ.
불에 던질 화목이 될 뿐이라 불이 그 두 끝을 사르고 그 가운데도 태웠으면 제조에 무슨 소용이 있겠느냐?
5 ೫ ಅದು ಸಂಪೂರ್ಣವಾಗಿ ಇದ್ದಾಗ ಯಾವ ಕೆಲಸಕ್ಕೂ ಬರಲಿಲ್ಲ; ಬೆಂಕಿಯಲ್ಲಿ ಸುಟ್ಟು ಇದ್ದಲಾದ ಮೇಲೆ ಯಾವ ಕೆಲಸಕ್ಕೆ ಬಂದೀತು?”
그것이 온전할 때에도 아무 제조에 합당치 않았거든 하물며 불에 살라지고 탄 후에 어찌 제조에 합당하겠느냐?
6 ೬ ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ವನ ವೃಕ್ಷಗಳಲ್ಲಿ ದ್ರಾಕ್ಷಿಯ ಗಿಡವನ್ನು ನಾನು ಹೇಗೆ ಬೆಂಕಿಗೆ ಸೌದೆಯನ್ನಾಗಿ ಕೊಟ್ಟಿದ್ದೇನೋ, ಹಾಗೆಯೇ ನಾನು ಯೆರೂಸಲೇಮಿನವರನ್ನು ವಿನಾಶಕ್ಕೆ ಗುರಿಮಾಡಿದ್ದೇನೆ.
그러므로 주 여호와 내가 말하노라 내가 수풀 가운데 포도나무를 불에 던질 화목이 되게 한 것같이 내가 예루살렘 거민도 그같이 할지라
7 ೭ ಅವರ ಮೇಲೆ ಕೋಪ ದೃಷ್ಟಿಯನ್ನಿಡುವೆನು; ಅವರು ಬೆಂಕಿಯೊಳಗಿಂದ ತಪ್ಪಿಸಿಕೊಂಡರೂ, ಬೆಂಕಿಯು ಅವರನ್ನು ನುಂಗಿಬಿಡುವುದು; ನಾನು ಅವರ ಮೇಲೆ ಕೋಪ ದೃಷ್ಟಿಯನ್ನಿಡುವಾಗ ನಾನೇ ಯೆಹೋವನು ಎಂದು ನಿಮಗೆ ಗೊತ್ತಾಗುವುದು.
내가 그들을 대적한즉 그들이 그 불에서 나와도 불이 그들을 사르리니 내가 그들을 대적할 때에 너희가 나를 여호와인 줄 알리라
8 ೮ ಅವರು ದ್ರೋಹ ಮಾಡಿದ್ದರಿಂದ ನಾನು ದೇಶವನ್ನು ಹಾಳುಮಾಡುವೆನು” ಇದು ಕರ್ತನಾದ ಯೆಹೋವನ ನುಡಿ.
내가 그 땅을 황무케 하리니 이는 그들이 범법함이니라 나 주 여호와의 말이니라 하시니라