< ಯೆಹೆಜ್ಕೇಲನು 16 >

1 ಆಮೇಲೆ ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು,
फिर यहोवा का यह वचन मेरे पास पहुँचा,
2 “ನರಪುತ್ರನೇ, ನೀನು ಯೆರೂಸಲೇಮಿಗೆ ಅದರ ಅಸಹ್ಯಕಾರ್ಯಗಳನ್ನು ತಿಳಿಯಪಡಿಸಿ ಹೀಗೆ ನುಡಿ,
“हे मनुष्य के सन्तान, यरूशलेम को उसके सब घृणित काम जता दे,
3 ಕರ್ತನಾದ ಯೆಹೋವನು ಯೆರೂಸಲೇಮ್ ಎಂಬಾಕೆಗೆ ಈ ಮಾತನ್ನು ಹೇಳಿಕಳುಹಿಸಿದ್ದಾನೆ, ‘ನೀನು ಹುಟ್ಟಿದ್ದು ಕಾನಾನ್ ದೇಶದಲ್ಲಿ, ಅದೇ ನಿನ್ನ ಜನ್ಮಭೂಮಿ, ನಿನ್ನ ತಂದೆ ಅಮೋರಿಯನು, ನಿನ್ನ ತಾಯಿ ಹಿತ್ತಿಯಳು.
और उससे कह, हे यरूशलेम, प्रभु यहोवा तुझ से यह कहता है: तेरा जन्म और तेरी उत्पत्ति कनानियों के देश से हुई; तेरा पिता तो एमोरी और तेरी माता हित्तिन थी।
4 ನಿನ್ನ ಜನನವನ್ನು ಕುರಿತು ಏನು ಹೇಳಲಿ! ನೀನು ಹುಟ್ಟಿದ ದಿನದಲ್ಲಿ ತಾಯಿಯು ನಿನ್ನ ಹೊಕ್ಕಳು ಕೊಯ್ದು ಕಟ್ಟಲಿಲ್ಲ, ನಿನ್ನನ್ನು ನೀರಿನಿಂದ ತೊಳೆದು ಶುಚಿಮಾಡಲಿಲ್ಲ, ನಿನಗೆ ಉಪ್ಪನ್ನು ಸ್ವಲ್ಪವೂ ಸವರಲಿಲ್ಲ, ನಿನ್ನನ್ನು ಬಟ್ಟೆಯಲ್ಲು ಸುತ್ತಲಿಲ್ಲ.
तेरा जन्म ऐसे हुआ कि जिस दिन तू जन्मी, उस दिन न तेरा नाल काटा गया, न तू शुद्ध होने के लिये धोई गई, न तुझ पर नमक मला गया और न तू कुछ कपड़ों में लपेटी गई।
5 ನಿನ್ನನ್ನು ಕಟಾಕ್ಷಿಸಿ, ಕರುಣಿಸಿ ಯಾರೂ ನಿನಗೆ ಇಂಥಾ ಸಹಾಯ ಮಾಡಲಿಲ್ಲ; ನಿನ್ನ ಜನನ ದಿನದಲ್ಲಿ ನೀನು ಹೇಸಿಗೆಯಾಗಿದ್ದೆ, ನಿನ್ನನ್ನು ಬಯಲಿನಲ್ಲಿ ಬಿಸಾಡಿ ಬಿಟ್ಟರು.’
किसी की दयादृष्टि तुझ पर नहीं हुई कि इन कामों में से तेरे लिये एक भी काम किया जाता; वरन् अपने जन्म के दिन तू घृणित होने के कारण खुले मैदान में फेंक दी गई थी।
6 “‘ನಾನು ಹಾದುಹೋಗುತ್ತಾ, ನಿನ್ನ ರಕ್ತದಲ್ಲೇ ಹೊರಳಾಡುತ್ತಿದ್ದ ನಿನ್ನನ್ನು ನೋಡಿ, ನೀನು ರಕ್ತದಿಂದ ಹೊಲೆಯಾಗಿದ್ದರೂ ಬದುಕು’ ಎಂದು ಹೇಳಿದೆನು. ಹೌದು, ‘ನೀನು ರಕ್ತದಿಂದ ಹೊಲೆಯಾಗಿದ್ದರೂ ಬದುಕು’ ಎಂದು ಹೇಳಿ ಬದುಕಿಸಿದೆನು.
“जब मैं तेरे पास से होकर निकला, और तुझे लहू में लोटते हुए देखा, तब मैंने तुझ से कहा, ‘हे लहू में लोटती हुई जीवित रह;’ हाँ, तुझ ही से मैंने कहा, ‘हे लहू में लोटती हुई, जीवित रह।’
7 ‘ಭೂಮಿಯಲ್ಲಿ ಮೊಳೆಯುವ ಮೊಳಿಕೆಯನ್ನೋ ಎಂಬಂತೆ ನಾನು ನಿನ್ನನ್ನು ಬೆಳೆಯಿಸಲು, ನೀನು ಬಲಿತು ಪ್ರಾಯತುಂಬಿ ಅತಿಸುಂದರಿಯಾದಿ; ನಿನಗೆ ಸ್ತನಗಳು ಮೂಡಿದವು, ನಿನ್ನ ಕೂದಲು ಉದ್ದವಾಯಿತು; ಆದರೆ ನೀನು ಬಟ್ಟೆಯಿಲ್ಲದೆ ಬೆತ್ತಲೆಯಾಗಿದ್ದೆ.
फिर मैंने तुझे खेत के पौधे के समान बढ़ाया, और तू बढ़ते-बढ़ते बड़ी हो गई और अति सुन्दर हो गई; तेरी छातियाँ सुडौल हुईं, और तेरे बाल बढ़े; तो भी तू नंगी थी।
8 ನಾನು ಹಾದುಹೋಗುತ್ತಾ ನಿನ್ನನ್ನು ನೋಡಲು ಇಗೋ, ನೀನು ಮದುವೆಗೆ ಸಿದ್ಧಳಾಗಿದ್ದಿ; ಆಗ ನಾನು ನನ್ನ ಹೊದಿಕೆಯನ್ನು ನಿನಗೆ ಹೊದಿಸಿ ನಿನ್ನ ಮಾನವನ್ನು ಕಾಪಾಡಿದೆನು; ಇದಲ್ಲದೆ ನಾನು ನಿನಗೆ ಪ್ರಮಾಣಮಾಡಿ ಒಡಂಬಡಿಕೆ ಮಾಡಿಕೊಂಡೆ ಆದುದರಿಂದ ನೀನು ನನ್ನವಳಾದೆ’” ಇದು ಕರ್ತನಾದ ಯೆಹೋವನ ನುಡಿ.
“मैंने फिर तेरे पास से होकर जाते हुए तुझे देखा, और अब तू पूरी स्त्री हो गई थी; इसलिए मैंने तुझे अपना वस्त्र ओढ़ाकर तेरा तन ढाँप दिया; और सौगन्ध खाकर तुझ से वाचा बाँधी और तू मेरी हो गई, प्रभु यहोवा की यही वाणी है।
9 “ಆಗ ನಾನು ನೀರಿನಲ್ಲಿ ನಿನ್ನನ್ನು ಸ್ನಾನಮಾಡಿಸಿ ನಿನ್ನ ಮೇಲಣ ರಕ್ತವನ್ನು ತೊಳೆದುಬಿಟ್ಟು ನಿನಗೆ ತೈಲವನ್ನು ಹಚ್ಚಿದೆನು.
तब मैंने तुझे जल से नहलाकर तुझ पर से लहू धो दिया, और तेरी देह पर तेल मला।
10 ೧೦ ಇದಲ್ಲದೆ ನಾನು ಕಸೂತಿಯ ಬಟ್ಟೆಯನ್ನು ನಿನಗೆ ತೊಡಿಸಿ, ಕಡಲಪ್ರಾಣಿಯ ಕೆಂಪು ಚರ್ಮದ ಕೆರಗಳನ್ನು ನಿನ್ನ ಕಾಲಿಗೆ ಮೆಟ್ಟಿಸಿ, ನಯವಾದ ನಾರು ಮಡಿಯನ್ನು ನಿನಗೆ ಉಡಿಸಿ, ರೇಷ್ಮೆಯ ಹೊದಿಕೆಯನ್ನು ನಿನಗೆ ಹೊದಿಸಿದೆನು.
१०फिर मैंने तुझे बूटेदार वस्त्र और सुइसों के चमड़े की जूतियाँ पहनाई; और तेरी कमर में सूक्ष्म सन बाँधा, और तुझे रेशमी कपड़ा ओढ़ाया।
11 ೧೧ ಮತ್ತು ನಾನು ನಿನ್ನ ಕೈಗಳಿಗೆ ಬಳೆಗಳನ್ನು, ಕಂಠಕ್ಕೆ ಮಾಲೆಯನ್ನು,
११तब मैंने तेरा श्रृंगार किया, और तेरे हाथों में चूड़ियाँ और गले में हार पहनाया।
12 ೧೨ ಮೂಗಿಗೆ ಮೂಗುತಿಯನ್ನು, ಶಿರಸ್ಸಿಗೆ ಸುಂದರ ಕಿರೀಟವನ್ನು ಇಟ್ಟು, ನಿನ್ನನ್ನು ಆಭರಣಗಳಿಂದ ಸಿಂಗರಿಸಿದೆನು.
१२फिर मैंने तेरी नाक में नत्थ और तेरे कानों में बालियाँ पहनाई, और तेरे सिर पर शोभायमान मुकुट धरा।
13 ೧೩ ನಿನ್ನ ಒಡವೆಗಳು ಬೆಳ್ಳಿಬಂಗಾರದವು; ನಿನ್ನ ಉಡುಪು ನಯವಾದ ನಾರುಮಡಿ, ರೇಷ್ಮೆಯ ಹೊದಿಕೆ, ಕಸೂತಿಯ ಬಟ್ಟೆ; ನಿನ್ನ ಆಹಾರವು ಗೋದಿಹಿಟ್ಟು, ಜೇನು, ಎಣ್ಣೆ; ನಿನ್ನ ಲಾವಣ್ಯವು, ಅತಿಮನೋಹರ; ನೀನು ವೃದ್ಧಿಗೊಂಡು ರಾಣಿಯಾದೆ.
१३तेरे आभूषण सोने चाँदी के और तेरे वस्त्र सूक्ष्म सन, रेशम और बूटेदार कपड़े के बने; फिर तेरा भोजन मैदा, मधु और तेल हुआ; और तू अत्यन्त सुन्दर, वरन् रानी होने के योग्य हो गई।
14 ೧೪ ನಾನು ನಿನಗೆ ಅನುಗ್ರಹಿಸಿದ ನನ್ನ ವೈಭವದಿಂದ ನಿನ್ನ ಸೌಂದರ್ಯವು ಪರಿಪೂರ್ಣವಾಯಿತು; ನಿನ್ನ ಚೆಲುವು ಹೆಸರುವಾಸಿಯಾಗಿ ಜನಾಂಗಗಳಲ್ಲಿ ಹಬ್ಬಿತು” ಇದು ಕರ್ತನಾದ ಯೆಹೋವನ ನುಡಿ.
१४तेरी सुन्दरता की कीर्ति अन्यजातियों में फैल गई, क्योंकि उस प्रताप के कारण, जो मैंने अपनी ओर से तुझे दिया था, तू अत्यन्त सुन्दर थी, प्रभु यहोवा की यही वाणी है।
15 ೧೫ “ಆದರೆ ನೀನು ನಿನ್ನ ಸೌಂದರ್ಯದಲ್ಲಿಯೇ ನಂಬಿಕೆಯಿಟ್ಟು, ನಾನು ಪ್ರಸಿದ್ಧಳಾಗಿದ್ದೇನಲ್ಲಾ ಎಂದು ಉಬ್ಬಿಕೊಂಡು ವ್ಯಭಿಚಾರಮಾಡಿದಿ; ಹಾದುಹೋಗುವ ಪ್ರತಿಯೊಬ್ಬನ ಸಂಗಡ ಮಿತಿಮೀರಿ ವ್ಯಭಿಚಾರಮಾಡಿದೆ, ಪ್ರತಿಯೊಬ್ಬನ ಸಂಗಡ ವ್ಯಭಿಚಾರಕ್ಕೆ ಒಳಗಾದೆ.
१५“परन्तु तू अपनी सुन्दरता पर भरोसा करके अपनी नामवरी के कारण व्यभिचार करने लगी, और सब यात्रियों के संग बहुत कुकर्म किया, और जो कोई तुझे चाहता था तू उसी से मिलती थी।
16 ೧೬ ನೀನು ಪೂಜಾ ಸ್ಥಾನಗಳನ್ನು ಕಟ್ಟಿಕೊಂಡು ನಿನ್ನ ಚಿತ್ರವಿಚಿತ್ರ ವಸ್ತ್ರಗಳಿಂದ ಅವುಗಳನ್ನು ಅಲಂಕರಿಸಿ ಅಲ್ಲಿ ವ್ಯಭಿಚಾರ ನಡಿಸಿದೆ. ಇದು ನಡೆಯತಕ್ಕದ್ದಲ್ಲ. ಆಗಬಾರದಾಗಿತ್ತು.
१६तूने अपने वस्त्र लेकर रंग-बिरंगे ऊँचे स्थान बना लिए, और उन पर व्यभिचार किया, ऐसे कुकर्म किए जो न कभी हुए और न होंगे।
17 ೧೭ ಮತ್ತು ನಾನು ನನ್ನ ಬೆಳ್ಳಿ ಬಂಗಾರದಿಂದ ನಿನಗೆ ಮಾಡಿಸಿಕೊಟ್ಟಿದ್ದ ನಿನ್ನ ಚಂದವಾದ ಆಭರಣಗಳನ್ನು ನೀನು ತೆಗೆದು ಅವುಗಳಿಂದ ಪುರುಷ ಮೂರ್ತಿಗಳನ್ನು ರೂಪಿಸಿಕೊಂಡು ಅವುಗಳೊಡನೆ ವ್ಯಭಿಚಾರ ಮಾಡಿದೆ.
१७तूने अपने सुशोभित गहने लेकर जो मेरे दिए हुए सोने-चाँदी के थे, उनसे पुरुषों की मूरतें बना ली, और उनसे भी व्यभिचार करने लगी;
18 ೧೮ ನಿನ್ನ ಕಸೂತಿಯ ಬಟ್ಟೆಗಳನ್ನು ತೆಗೆದು ಮೂರ್ತಿಗಳಿಗೆ ಹೊದಿಸಿ, ಅವುಗಳ ಮುಂದೆ ನನ್ನ ತೈಲವನ್ನೂ ನನ್ನ ಧೂಪವನ್ನೂ ಅರ್ಪಿಸಿದೆ.
१८और अपने बूटेदार वस्त्र लेकर उनको पहनाए, और मेरा तेल और मेरा धूप उनके सामने चढ़ाया।
19 ೧೯ ನಾನು ನಿನಗೆ ಕೊಟ್ಟ ರೊಟ್ಟಿಯನ್ನೂ, ನಿನ್ನ ಆಹಾರಕ್ಕೆ ನಾನು ಒದಗಿಸಿದ ಗೋದಿಹಿಟ್ಟು, ಎಣ್ಣೆ, ಜೇನು ಇವುಗಳನ್ನೂ ನೀನು ಆ ಮೂರ್ತಿಗಳ ಮುಂದೆ ಸುಗಂಧಹೋಮ ಮಾಡಿದೆ; ಅಯ್ಯೋ, ಹೀಗಾಯಿತಲ್ಲ!” ಇದು ಕರ್ತನಾದ ಯೆಹೋವನ ನುಡಿ.
१९जो भोजन मैंने तुझे दिया था, अर्थात् जो मैदा, तेल और मधु मैं तुझे खिलाता था, वह सब तूने उनके सामने सुखदायक सुगन्ध करके रखा; प्रभु यहोवा की यही वाणी है कि ऐसा ही हुआ।
20 ೨೦ “ಇದಲ್ಲದೆ ನೀನು ನನಗೆ ಹೆತ್ತ ಗಂಡು ಮತ್ತು ಹೆಣ್ಣು ಮಕ್ಕಳನ್ನು ಹಿಡಿದು ಮೂರ್ತಿಗಳಿಗೆ ಆಹಾರವಾಗಲೆಂದು ಯಜ್ಞಮಾಡಿದೆ. ನಿನ್ನ ವ್ಯಭಿಚಾರವು ಅಲ್ಪಕಾರ್ಯವೆಂದು ಭಾವಿಸಿದಿಯೋ?
२०फिर तूने अपने पुत्र-पुत्रियाँ लेकर जिन्हें तूने मेरे लिये जन्म दिया, उन मूर्तियों को बलिदान करके चढ़ाई। क्या तेरा व्यभिचार ऐसी छोटी बात थीं;
21 ೨೧ ಅದನ್ನೂ ಮೀರಿಸಬೇಕೆಂದು ನೀನು ನನ್ನ ಮಕ್ಕಳನ್ನು ಹತಿಸಿ, ಆಹುತಿಕೊಟ್ಟು ಮೂರ್ತಿಗಳಿಗೆ ಅರ್ಪಿಸಿದಿಯೋ?
२१कि तूने मेरे बाल-बच्चे उन मूर्तियों के आगे आग में चढ़ाकर घात किए हैं?
22 ೨೨ ಈ ನಿನ್ನ ಅಸಹ್ಯಕಾರ್ಯಗಳನ್ನೂ, ವ್ಯಭಿಚಾರವನ್ನು ನೀನು ಪದೇ ಪದೇ ನಡೆಸುತ್ತಿದ್ದಾಗ ನೀನು ಬಟ್ಟೆಯಿಲ್ಲದೆ ಬೆತ್ತಲೆಯಾಗಿ ನಿನ್ನ ರಕ್ತದಲ್ಲಿ ಹೊರಳಾಡುತ್ತಿದ್ದ ನಿನ್ನ ಎಳೆತನವನ್ನು ನೀನು ಜ್ಞಾಪಕಕ್ಕೆ ತಂದುಕೊಳ್ಳಲಿಲ್ಲ.
२२तूने अपने सब घृणित कामों में और व्यभिचार करते हुए, अपने बचपन के दिनों की कभी सुधि न ली, जबकि तू नंगी अपने लहू में लोटती थी।
23 ೨೩ ಅಯ್ಯೋ, ನಿನ್ನ ಗತಿಯನ್ನು ಏನು ಹೇಳಲಿ!” ಎಂಬುದು ಕರ್ತನಾದ ಯೆಹೋವನ ನುಡಿ.
२३“तेरी उस सारी बुराई के पीछे क्या हुआ? प्रभु यहोवा की यह वाणी है, हाय, तुझ पर हाय!
24 ೨೪ “ನೀನು ಈ ದುಷ್ಕೃತ್ಯಗಳನ್ನೆಲ್ಲಾ ನಡೆಸಿದ್ದಲ್ಲದೆ ಪ್ರತಿಯೊಂದು ಚೌಕದಲ್ಲಿ ಮಂಟಪವನ್ನು ಮಾಡಿ ಜಗಲಿಯನ್ನು ಕಟ್ಟಿಕೊಂಡಿರುವೆ.
२४तूने एक गुम्मट बनवा लिया, और हर एक चौक में एक ऊँचा स्थान बनवा लिया;
25 ೨೫ ಒಂದೊಂದು ಬೀದಿಯ ಕೊನೆಯಲ್ಲಿಯೂ ನೀನು ಜಗಲಿಯನ್ನು ಕಟ್ಟಿಕೊಂಡು, ನಿನ್ನ ಸೌಂದರ್ಯವನ್ನು ನೀಚ ಕೆಲಸಕ್ಕೆ ಒಪ್ಪಿಸಿ, ಹಾದುಹೋಗುವವರೆಲ್ಲರನ್ನು ಸೇರಿಸಿ ವ್ಯಭಿಚಾರವನ್ನು ಹೆಚ್ಚಾಗಿ ನಡೆಸಿರುವೆ.
२५और एक-एक सड़क के सिरे पर भी तूने अपना ऊँचा स्थान बनवाकर अपनी सुन्दरता घृणित करा दी, और हर एक यात्री को कुकर्म के लिये बुलाकर महाव्यभिचारिणी हो गई।
26 ೨೬ ನಿನ್ನ ನೆರೆಯವರೂ ಅತಿಕಾಮಿಗಳೂ ಆದ ಐಗುಪ್ತ್ಯರೊಂದಿಗೆ ಸಹ ನೀನು ಬೆರೆತು ಹೆಚ್ಚಾಗಿ ವ್ಯಭಿಚಾರಮಾಡಿ ನನ್ನನ್ನು ರೇಗಿಸಿರುವೆ.
२६तूने अपने पड़ोसी मिस्री लोगों से भी, जो मोटे-ताजे हैं, व्यभिचार किया और मुझे क्रोध दिलाने के लिये अपना व्यभिचार बढ़ाती गई।
27 ೨೭ ಆದಕಾರಣ ನಾನು ನಿನ್ನ ಮೇಲೆ ಕೈಯೆತ್ತಿ ನಿನ್ನ ಆಹಾರವನ್ನು ಕಡಿಮೆಮಾಡಿದೆನು; ನಿನ್ನನ್ನು ದ್ವೇಷಿಸಿ ನಿನ್ನ ಕೆಟ್ಟ ನಡತೆಗೆ ಅಸಹ್ಯಪಡುವವರಾದ ಫಿಲಿಷ್ಟಿಯದ ಕುಮಾರ್ತೆಯರ ಕೈಗೆ ನಿನ್ನನ್ನು ಸಿಕ್ಕಿಸಿದೆನು.
२७इस कारण मैंने अपना हाथ तेरे विरुद्ध बढ़ाकर, तेरा प्रतिदिन का खाना घटा दिया, और तेरी बैरिन पलिश्ती स्त्रियाँ जो तेरे महापाप की चाल से लजाती है, उनकी इच्छा पर मैंने तुझे छोड़ दिया है।
28 ೨೮ ಮತ್ತು ಇಷ್ಟೂ ಸಾಲದೆಂದು ಅಶ್ಶೂರ್ಯರೊಂದಿಗೂ ವ್ಯಭಿಚಾರಮಾಡಿದಿ; ಹೌದು, ಅವರೊಡನೆ ವ್ಯಭಿಚಾರಮಾಡಿದರೂ ನಿನಗೆ ತೃಪ್ತಿಯಾಗಲಿಲ್ಲ.
२८फिर भी तेरी तृष्णा न बुझी, इसलिए तूने अश्शूरी लोगों से भी व्यभिचार किया; और उनसे व्यभिचार करने पर भी तेरी तृष्णा न बुझी।
29 ೨೯ ಇದಲ್ಲದೆ ನೀನು ತುಂಬಾ ವ್ಯಾಪಾರವುಳ್ಳ ಕಸ್ದೀಯ ದೇಶಕ್ಕೆ ಸೇರಿ, ಅಲ್ಲಿಯೂ ಬಹಳ ವ್ಯಭಿಚಾರಮಾಡಿದೆ, ಆದರೂ ನಿನಗೆ ತೃಪ್ತಿಯಾಗಲಿಲ್ಲ.”
२९फिर तू लेन-देन के देश में व्यभिचार करते-करते कसदियों के देश तक पहुँची, और वहाँ भी तेरी तृष्णा न बुझी।
30 ೩೦ ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನಿನ್ನ ಮನಸ್ಸು ಮೋಹಕ್ಕೆ ಎಷ್ಟೋ ಸೋತಿದೆ! ಇಷ್ಟೆಲ್ಲಾ ದುಷ್ಕೃತ್ಯಗಳನ್ನು ನಡೆಸಿ ಕಟ್ಟಿಲ್ಲದ ಜಾರಸ್ತ್ರೀಯಾಗಿರುವೆ.
३०“प्रभु यहोवा की यह वाणी है कि तेरा हृदय कैसा चंचल है कि तू ये सब काम करती है, जो निर्लज्ज वेश्या ही के काम हैं?
31 ೩೧ ಒಂದೊಂದು ಬೀದಿಯ ಕೊನೆಯಲ್ಲಿಯೂ ನೀನು ಗದ್ದುಗೆಯನ್ನು ಕಟ್ಟಿ, ಎಲ್ಲಾ ಚೌಕಗಳಲ್ಲಿ ಜಗಲಿಯನ್ನು ಸ್ಥಾಪಿಸಿಕೊಂಡಿರುವೆ; ದೊರೆತದ್ದನ್ನು ಕಡಿಮೆಯೆಂದು ತಿರಸ್ಕರಿಸುವ ವ್ಯಭಿಚಾರಿಯಂತೆ ನೀನು ನಡೆಯುವವಳಲ್ಲ.
३१तूने हर एक सड़क के सिरे पर जो अपना गुम्मट, और हर चौक में अपना ऊँचा स्थान बनवाया है, क्या इसी में तू वेश्या के समान नहीं ठहरी? क्योंकि तू ऐसी कमाई पर हँसती है।
32 ೩೨ “ನೀನು ವ್ಯಭಿಚಾರಮಾಡುವ ಪತಿವ್ರತೆ! ಗಂಡನಿಗೆ ಬದಲಾಗಿ ಅನ್ಯರನ್ನು ಸೇರುವ ಜಾರಿಣಿ!
३२तू व्यभिचारिणी पत्नी है। तू पराए पुरुषों को अपने पति के बदले ग्रहण करती है।
33 ೩೩ ಎಲ್ಲಾ ಕಡೆ ವ್ಯಭಿಚಾರಿ ಸ್ತ್ರೀಗೆ ಹಣಕೊಡುವುದುಂಟು; ನೀನಾದರೋ ನಿನ್ನ ಪ್ರಿಯರಿಗೆಲ್ಲ ನೀನೇ ಹಣವನ್ನು ಕೊಡುತ್ತಿರುವೆ; ಅವರು ಎಲ್ಲಾ ಕಡೆಯಿಂದಲೂ ಬಂದು ನಿನ್ನಲ್ಲಿ ವ್ಯಭಿಚಾರಮಾಡುವಂತೆ ಅವರಿಗೆ ಬಹುಮಾನ ಕೊಡುತ್ತಿರುವೆ.
३३सब वेश्याओं को तो रुपया मिलता है, परन्तु तूने अपने सब मित्रों को स्वयं रुपये देकर, और उनको लालच दिखाकर बुलाया है कि वे चारों ओर से आकर तुझ से व्यभिचार करें।
34 ೩೪ ನಿನ್ನ ವ್ಯಭಿಚಾರಕ್ಕೂ, ಇತರ ವೇಶ್ಯೆಯರ ವ್ಯಭಿಚಾರಕ್ಕೂ ವ್ಯತ್ಯಾಸವುಂಟು; ನಿನ್ನಲ್ಲಿ ವ್ಯಭಿಚಾರ ಮಾಡಲಿಕ್ಕೆ ಯಾರೂ ನಿನ್ನ ಹಿಂದೆ ಬಾರರು; ನೀನೇ ಕೊಡುತ್ತೀಯೇ ಹೊರತು ನಿನಗೇನೂ ಸಿಕ್ಕದು; ನಿನ್ನ ದುರಾಚಾರವು ವಿಪರೀತವೇ!”
३४इस प्रकार तेरा व्यभिचार अन्य व्यभिचारियों से उलटा है। तेरे पीछे कोई व्यभिचारी नहीं चलता, और तू किसी से दाम लेती नहीं, वरन् तू ही देती है; इसी कारण तू उलटी ठहरी।
35 ೩೫ ಹೀಗಿರಲು ವ್ಯಭಿಚಾರಿಯೇ, ಯೆಹೋವನ ಈ ವಾಕ್ಯವನ್ನು ಕೇಳು,
३५“इस कारण, हे वेश्या, यहोवा का वचन सुन,
36 ೩೬ ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಆಹಾ, ಮಿತಿಮೀರಿದ ನಿನ್ನ ಕಾಮಾತುರ, ನಿನ್ನಲ್ಲಿ ವ್ಯಭಿಚಾರಮಾಡಿದ ನಿನ್ನ ಪ್ರಿಯರ ಮೂಲಕ ನಿನಗಾದ ಮಾನಭಂಗ, ನಿನ್ನ ಎಲ್ಲಾ ಅಸಹ್ಯ ವಿಗ್ರಹಗಳು, ನೀನು ಅವುಗಳಿಗೆ ಅರ್ಪಿಸಿದ ನಿನ್ನ ಮಕ್ಕಳ ರಕ್ತ,
३६प्रभु यहोवा यह कहता है: तूने जो व्यभिचार में अति निर्लज्ज होकर, अपनी देह अपने मित्रों को दिखाई, और अपनी मूर्तियों से घृणित काम किए, और अपने बच्चों का लहू बहाकर उन्हें बलि चढ़ाया है,
37 ೩೭ ಇವುಗಳನ್ನು ನಾನು ನೋಡಿ, ನೀನು ಸಂಭೋಗಿಸಿದ ನಿನ್ನ ಎಲ್ಲಾ ಮಿಂಡರನ್ನೂ, ನೀನು ಮೋಹಿಸಿದ ಸಮಸ್ತರನ್ನೂ ನೀನು ಹಗೆಮಾಡಿದ ಎಲ್ಲರೊಂದಿಗೆ ಸುತ್ತುಮುತ್ತಲು ನಿನ್ನ ವಿರುದ್ಧವಾಗಿ ಕೂಡಿಸಿ, ಅವರ ಕಣ್ಣೆದುರಿಗೆ ನಿನ್ನನ್ನು ಬೆತ್ತಲೆಗೈದು ನಿನ್ನ ಮಾನವನ್ನು ಬಟ್ಟಬಯಲು ಮಾಡುವೆನು.
३७इस कारण देख, मैं तेरे सब मित्रों को जो तेरे प्रेमी हैं और जितनों से तूने प्रीति लगाई, और जितनों से तूने बैर रखा, उन सभी को चारों ओर से तेरे विरुद्ध इकट्ठा करके उनको तेरी देह नंगी करके दिखाऊँगा, और वे तेरा तन देखेंगे।
38 ೩೮ ವ್ಯಭಿಚಾರ ಮಾಡುವಂಥ, ರಕ್ತಸುರಿಸುವಂಥ ಹೆಂಗಸರಿಗೆ ತಕ್ಕ ದಂಡನೆಗಳನ್ನು ನಾನು ನಿನಗೆ ವಿಧಿಸಿ ಕೋಪೋದ್ರೇಕದಿಂದಲೂ, ರೋಷಾವೇಶದಿಂದಲೂ ನಿನ್ನ ರಕ್ತವನ್ನು ಸುರಿಸುವೆನು.
३८तब मैं तुझको ऐसा दण्ड दूँगा, जैसा व्यभिचारिणियों और लहू बहानेवाली स्त्रियों को दिया जाता है; और क्रोध और जलन के साथ तेरा लहू बहाऊँगा।
39 ೩೯ ನಾನು ನಿನ್ನನ್ನು ಸುತ್ತಲಿನವರ ಕೈವಶಮಾಡುವೆನು; ಅವರು ನಿನ್ನ ಮಂಟಪವನ್ನು ಕೆಡವಿ, ನಿನ್ನ ಜಗಲಿಗಳನ್ನು ಒಡೆದು, ನಿನ್ನ ಬಟ್ಟೆಗಳನ್ನು ಕಿತ್ತು ನಿನ್ನ ಒಡವೆಗಳನ್ನು ಸುಲಿದುಕೊಂಡು, ನಿನ್ನನ್ನು ಬಟ್ಟಬರಿದಾಗಿ ಬಿಟ್ಟುಹೋಗುವರು.
३९इस रीति मैं तुझे उनके वश में कर दूँगा, और वे तेरे गुम्मटों को ढा देंगे, और तेरे ऊँचे स्थानों को तोड़ देंगे; वे तेरे वस्त्र जबरन उतारेंगे, और तेरे सुन्दर गहने छीन लेंगे, और तुझे नंगा करके छोड़ देंगे।
40 ೪೦ ಅವರು ನಿನ್ನ ವಿಚಾರವಾಗಿ ನ್ಯಾಯಸಭೆಯನ್ನು ಕೂಡಿಸಿ, ನಿನ್ನನ್ನು ಕಲ್ಲೆಸೆದು ಕೊಲ್ಲುವರು, ಕತ್ತಿಗಳಿಂದ ಹತಿಸುವರು.
४०तब तेरे विरुद्ध एक सभा इकट्ठी करके वे तुझ पर पथराव करेंगे, और अपनी कटारों से आर-पार छेदेंगे।
41 ೪೧ ನಿನ್ನ ಮನೆಗಳನ್ನು ಬೆಂಕಿಯಿಂದ ಸುಡುವರು; ಬಹುಮಂದಿ ಹೆಂಗಸರ ಕಣ್ಣೆದುರಿನಲ್ಲಿ ನಿನ್ನನ್ನು ದಂಡಿಸುವರು; ನೀನು ನಿನ್ನ ಸೂಳೆತನವನ್ನು ನಿಲ್ಲಿಸಿಬಿಡುವಂತೆ ನಾನು ಮಾಡುವೆನು; ನೀನು ನಿನ್ನ ಮಿಂಡರಿಗೆ ಇನ್ನು ಹಣಕೊಡದಿರುವಿ.
४१तब वे आग लगाकर तेरे घरों को जला देंगे, और तुझे बहुत सी स्त्रियों के देखते दण्ड देंगे; और मैं तेरा व्यभिचार बन्द करूँगा, और तू फिर वेश्यावृत्ति के लिये दाम न देगी।
42 ೪೨ ಹೀಗೆ ನಾನು ನಿನ್ನ ಮೇಲಣ ಸಿಟ್ಟನ್ನು ತೀರಿಸಲು, ನನ್ನ ರೋಷವು ನಿನ್ನ ಕಡೆಯಿಂದ ತೊಲಗಿ ಬಿಡುವುದು; ನಾನು ಶಾಂತನಾಗಿ ಇನ್ನು ಮೇಲೆ ಕೋಪಗೊಳ್ಳೆನು.
४२जब मैं तुझ पर पूरी जलजलाहट प्रगट कर चुकूँगा, तब तुझ पर और न जलूँगा वरन् शान्त हो जाऊँगा, और फिर क्रोध न करूँगा।
43 ೪೩ “ನೀನು ನಿನ್ನ ಯೌವನ ಕಾಲವನ್ನು ಜ್ಞಾಪಕಮಾಡಿಕೊಳ್ಳದೆ, ಈ ದುಷ್ಕೃತ್ಯಗಳನ್ನೆಲ್ಲಾ ನಡೆಸಿ ನನ್ನನ್ನು ರೇಗಿಸಿದ್ದರಿಂದ ಇಗೋ, ನಾನು ನಿನ್ನ ದುರ್ಮಾರ್ಗದ ಫಲವನ್ನು ನಿನ್ನ ತಲೆಗೆ ಕಟ್ಟುವೆನು; ನೀನು ಲೆಕ್ಕವಿಲ್ಲದ ದುರಾಚಾರಗಳನ್ನು ನಡೆಸಿದ್ದಲ್ಲದೆ ಈ ಅಸಹ್ಯ ಕಾರ್ಯವನ್ನೂ ಮಾಡಿರುವೆ” ಇದು ಕರ್ತನಾದ ಯೆಹೋವನ ನುಡಿ.
४३तूने जो अपने बचपन के दिन स्मरण नहीं रखे, वरन् इन सब बातों के द्वारा मुझे चिढ़ाया; इस कारण मैं तेरा चाल चलन तेरे सिर पर डालूँगा और तू अपने सब पिछले घृणित कामों से और अधिक महापाप न करेगी, प्रभु यहोवा की यही वाणी है।
44 ೪೪ “ಆಹಾ, ಗಾದೆಗಳಲ್ಲಿ ಜಾಣರು ‘ತಾಯಿಯಂತೆ ಮಗಳು’ ಎಂಬ ಗಾದೆಯನ್ನು ನಿನ್ನ ವಿಷಯವಾಗಿ ನುಡಿಯುವರು.
४४“देख, सब कहावत कहनेवाले तेरे विषय यह कहावत कहेंगे, ‘जैसी माँ वैसी पुत्री।’
45 ೪೫ ಗಂಡನಿಗೂ, ಮಕ್ಕಳಿಗೂ ಬೇಸರಪಡುವವಳಾದ ನಿನ್ನ ತಾಯಿಗೆ ನೀನು ತಕ್ಕ ಮಗಳು; ಗಂಡನಿಗೂ, ಮಕ್ಕಳಿಗೂ ಬೇಸರಪಡುವವರಾದ ನಿನ್ನ ಅಕ್ಕಂದಿರಿಗೆ ನೀನು ತಕ್ಕ ತಂಗಿ; ನಿನ್ನ ತಾಯಿ ಹಿತ್ತಿಯಳು, ನಿನ್ನ ತಂದೆ ಅಮೋರಿಯನು.
४५तेरी माँ जो अपने पति और बच्चों से घृणा करती थी, तू भी ठीक उसकी पुत्री ठहरी; और तेरी बहनें जो अपने-अपने पति और बच्चों से घृणा करती थीं, तू भी ठीक उनकी बहन निकली। तेरी माता हित्तिन और पिता एमोरी था।
46 ೪೬ ನಿನ್ನ ಉತ್ತರಕ್ಕೆ ತನ್ನ ಕುಮಾರ್ತೆಯರೊಂದಿಗೆ ವಾಸಿಸುವ ಸಮಾರ್ಯ ನಿನ್ನ ಅಕ್ಕ, ನಿನ್ನ ದಕ್ಷಿಣಕ್ಕೆ ನಿನ್ನ ಕುಮಾರ್ತೆಯರೊಂದಿಗೆ ವಾಸಿಸುವ ಸೊದೋಮ್ ನಿನ್ನ ತಂಗಿ.
४६तेरी बड़ी बहन सामरिया है, जो अपनी पुत्रियों समेत तेरी बाईं ओर रहती है, और तेरी छोटी बहन, जो तेरी दाहिनी ओर रहती है वह पुत्रियों समेत सदोम है।
47 ೪೭ ಆದರೆ ನೀನು ನಡೆದ ದುರ್ಮಾರ್ಗವು ಅವರು ನಡೆದಂಥದಲ್ಲ, ನಿನ್ನ ಅಸಹ್ಯಕಾರ್ಯಗಳು ಅವರು ನಡೆಸಿದಂಥವುಗಳಲ್ಲ, ಅವರ ದುರ್ನಡತೆಯು ಅತ್ಯಲ್ಪವೆಂದು ಸರ್ವದಾ ಅವರಿಗಿಂತ ಬಹುಕೆಟ್ಟವಳಾಗಿ ನಡೆದುಕೊಂಡೆ.”
४७तू उनकी सी चाल नहीं चली, और न उनके से घृणित कामों ही से सन्तुष्ट हुई; यह तो बहुत छोटी बात ठहरती, परन्तु तेरा सारा चाल चलन उनसे भी अधिक बिगड़ गया।
48 ೪೮ ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನನ್ನ ಜೀವದಾಣೆ, ನೀನೂ ನಿನ್ನ ಕುಮಾರ್ತೆಯರೂ ನಡೆದಂತೆ ಸೊದೋಮೆಂಬ ನಿನ್ನ ತಂಗಿಯಾಗಲಿ, ಆಕೆಯ ಕುಮಾರ್ತೆಯರಾಗಲಿ ನಡೆಯಲಿಲ್ಲ.
४८प्रभु यहोवा की यह वाणी है, मेरे जीवन की सौगन्ध, तेरी बहन सदोम ने अपनी पुत्रियों समेत तेरे और तेरी पुत्रियों के समान काम नहीं किए।
49 ೪೯ ಸೊದೋಮೆಂಬ ನಿನ್ನ ತಂಗಿಯ ದೋಷವನ್ನು ನೋಡು; ಹೆಮ್ಮೆಪಡುವುದು, ಹೊಟ್ಟೆತುಂಬಿಸಿಕೊಳ್ಳುವುದು, ಸ್ವಂತ ಸುಖದಲ್ಲಿ ಮುಳುಗಿರುವುದು, ಇವು ಆಕೆಯಲ್ಲಿಯೂ ಮತ್ತು ಆಕೆಯ ಕುಮಾರ್ತೆಯರಲ್ಲಿಯೂ ಇದ್ದವು. ಅಲ್ಲದೆ ಆಕೆಯು ದೀನದರಿದ್ರರಿಗೆ ಬೆಂಬವಾಗಿರಲಿಲ್ಲ.
४९देख, तेरी बहन सदोम का अधर्म यह था, कि वह अपनी पुत्रियों सहित घमण्ड करती, पेट भर भरकर खाती और सुख चैन से रहती थी; और दीन दरिद्र को न सम्भालती थी।
50 ೫೦ ಅವರು ಸೊಕ್ಕೇರಿ ನನ್ನ ಕಣ್ಣೆದುರಿಗೆ ಅಸಹ್ಯಾಚಾರಗಳನ್ನು ನಡೆಸಿದರು; ನಾನು ಅದನ್ನು ನೋಡಿ ಅವರನ್ನು ನಿರ್ಮೂಲ ಮಾಡಿದೆನು.
५०अतः वह गर्व करके मेरे सामने घृणित काम करने लगी, और यह देखकर मैंने उन्हें दूर कर दिया।
51 ೫೧ ಸಮಾರ್ಯವೆಂಬಾಕೆಯು ಕೂಡ ನೀನು ಮಾಡಿದ ಪಾಪಗಳಲ್ಲಿ ಅರ್ಧವನ್ನೂ ಮಾಡಲಿಲ್ಲ. ನೀನು ನಿನ್ನ ಅಕ್ಕತಂಗಿಯರಿಗಿಂತಲೂ ಅತ್ಯಧಿಕವಾದ ಅಸಹ್ಯಕಾರ್ಯಗಳನ್ನು ನಡೆಸಿರುವೆ; ನೀನು ಮಾಡಿದ ಲೆಕ್ಕವಿಲ್ಲದ ದುರಾಚಾರಗಳಿಂದ ಅವರನ್ನು ನಿರ್ದೋಷಿಗಳೆಂದು ತೋರ್ಪಡಿಸಿರುವೆ.
५१फिर सामरिया ने तेरे पापों के आधे भी पाप नहीं किए, तूने तो उससे बढ़कर घृणित काम किए, और अपने घोर घृणित कामों के द्वारा अपनी बहनों से जीत गई।
52 ೫೨ ನಿನ್ನ ದೋಷಗಳೇ ನಿನ್ನ ಅಕ್ಕತಂಗಿಯರ ಪಕ್ಷವಾಗಿ ನಿಂತಿದ್ದರಿಂದ ನೀನು ನಾಚಿಕೆಪಡು; ಅವರಿಗಿಂತ ಅಧಿಕವಾಗಿ ನೀನು ಮಾಡಿದ ಅಸಹ್ಯ ಪಾಪಗಳ ಮೂಲಕ ಅವರು ನಿನಗಿಂತ ಉತ್ತಮರೆಂದು ಕಂಡುಬಂದಿದ್ದಾರೆ; ಹೌದು, ನೀನು ಲಜ್ಜೆಪಡು, ನಾಚಿಕೆಗೊಳ್ಳು; ನಿನ್ನ ಅಕ್ಕತಂಗಿಯರನ್ನು ನಿರ್ದೋಷಿಗಳೆಂದು ತೋರ್ಪಡಿಸಿರುವೆ.
५२इसलिए तूने जो अपनी बहनों का न्याय किया, इस कारण लज्जित हो, क्योंकि तूने उनसे बढ़कर घृणित पाप किए हैं; इस कारण वे तुझ से कम दोषी ठहरी हैं। इसलिए तू इस बात से लज्जा कर और लजाती रह, क्योंकि तूने अपनी बहनों को कम दोषी ठहराया है।
53 ೫೩ “ಸೊದೋಮ್ ಮತ್ತು ಆಕೆಯ ಕುಮಾರ್ತೆಯರು, ಸಮಾರ್ಯ ಮತ್ತು ಆಕೆಯ ಕುಮಾರ್ತೆಯರು, ಇವರ ದುರಾವಸ್ಥೆಯನ್ನು ನಾನು ತಪ್ಪಿಸುವೆನು, ಅದರೊಂದಿಗೆ ನಿನ್ನ ದುರಾವಸ್ಥೆಯನ್ನೂ ತಪ್ಪಿಸುವೆನು.
५३“जब मैं उनको अर्थात् पुत्रियों सहित सदोम और सामरिया को बँधुआई से लौटा लाऊँगा, तब उनके बीच ही तेरे बन्दियों को भी लौटा लाऊँगा,
54 ೫೪ ಹೀಗಿರಲು ನೀನು ನಿನ್ನ ಲೆಕ್ಕವಿಲ್ಲದ ದುಷ್ಕೃತ್ಯಗಳ ಮೂಲಕ ಅವರನ್ನು ಸಂತೈಸಿದ್ದರಿಂದ ಲಜ್ಜೆಪಡುವಿ, ನಾಚಿಕೆಗೊಳ್ಳುವಿ.
५४जिससे तू लजाती रहे, और अपने सब कामों को देखकर लजाए, क्योंकि तू उनकी शान्ति ही का कारण हुई है।
55 ೫೫ ಆಗ ಸಮಾರ್ಯ ಮತ್ತು ಸೊದೋಮ್ ಎಂಬ ನಿನ್ನ ಅಕ್ಕತಂಗಿಯರೂ ಮತ್ತು ಅವರ ಕುಮಾರ್ತೆಯರೂ ತಮ್ಮ ಪೂರ್ವಸ್ಥಿತಿಗೆ ಸೇರುವರು, ನೀನೂ ನಿನ್ನ ಕುಮಾರ್ತೆಯರೂ ನಿಮ್ಮ ಪೂರ್ವಸ್ಥಿತಿಗೆ ಸೇರುವಿರಿ.
५५तेरी बहनें सदोम और सामरिया अपनी-अपनी पुत्रियों समेत अपनी पहली दशा को फिर पहुँचेंगी, और तू भी अपनी पुत्रियों सहित अपनी पहली दशा को फिर पहुँचेगी।
56 ೫೬ ಅರಾಮಿನ ಕುಮಾರ್ತೆಯರು ಮತ್ತು ಆಕೆಯ ಸುತ್ತಮುತ್ತಲಿನ ಸಮಸ್ತರು, ನಿನ್ನನ್ನು ಎಲ್ಲೆಲ್ಲೂ ಹೀನೈಸುತ್ತಿರುವ ಫಿಲಿಷ್ಟಿಯದ ಕುಮಾರ್ತೆಯರು, ಇವರೆಲ್ಲರ ದೂಷಣೆಗೆ ನೀನು ಗುರಿಯಾಗುವುದಕ್ಕೆ ಮೊದಲು,
५६जब तक तेरी बुराई प्रगट न हुई थी, अर्थात् जिस समय तक तू आस-पास के लोगों समेत अरामी और पलिश्ती स्त्रियों की जो अब चारों ओर से तुझे तुच्छ जानती हैं, नामधराई करती थी,
57 ೫೭ ನಿನ್ನ ಕೆಟ್ಟತನವು ಬಯಲಿಗೆ ಬರುವುದಕ್ಕೆ ಮೊದಲು, ಆ ನಿನ್ನ ಗರ್ವಕಾಲದಲ್ಲಿ ಅರಾಮ್ಯರ ಪುತ್ರಿಯರಿಂದಲೂ ಮತ್ತು ಫಿಲಿಷ್ಟಿಯರ ಪುತ್ರಿಯರಿಂದಲೂ ನಿನ್ನ ಹೆಸರು ಅವರ ಬಾಯಲ್ಲಿ ಬರಲೇ ಇಲ್ಲ.
५७उन अपने घमण्ड के दिनों में तो तू अपनी बहन सदोम का नाम भी न लेती थी।
58 ೫೮ ಈಗ ನಿನ್ನ ದುರ್ನಡತೆಯ ಮತ್ತು ದುರಾಚಾರಗಳ ಫಲವನ್ನು ನೀನು ಅನುಭವಿಸಬೇಕಾಗಿ ಬಂತು” ಇದು ಯೆಹೋವನ ನುಡಿ.
५८परन्तु अब तुझको अपने महापाप और घृणित कामों का भार आप ही उठाना पड़ा है, यहोवा की यही वाणी है।
59 ೫೯ ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನೀನು ಒಡಂಬಡಿಕೆಯನ್ನು ಮೀರಿ ನಿನ್ನ ಆಣೆಯನ್ನು ತಿರಸ್ಕರಿಸಿರುವೆ ನೀನು ಮಾಡಿದ್ದಕ್ಕೆ ತಕ್ಕದ್ದನ್ನು ನಾನು ನಿನಗೆ ಮಾಡುವೆನು.
५९“प्रभु यहोवा यह कहता है: मैं तेरे साथ ऐसा ही बर्ताव करूँगा, जैसा तूने किया है, क्योंकि तूने तो वाचा तोड़कर शपथ तुच्छ जानी है,
60 ೬೦ ಆದರೂ ನಾನು ನಿನ್ನ ಯೌವನಕಾಲದಲ್ಲಿ ನಿನ್ನೊಂದಿಗೆ ಮಾಡಿಕೊಂಡ ಒಡಂಬಡಿಕೆಯನ್ನು ಜ್ಞಾಪಕಕ್ಕೆ ತಂದುಕೊಂಡು, ನಿನ್ನ ಸಂಗಡ ಎಂದಿಗೂ ತಪ್ಪದ ಶಾಶ್ವತವಾದ ಒಡಂಬಡಿಕೆಯನ್ನು ಮಾಡಿಕೊಂಡು ದೃಢೀಕರಿಸುವೆನು.
६०तो भी मैं तेरे बचपन के दिनों की अपनी वाचा स्मरण करूँगा, और तेरे साथ सदा की वाचा बाँधूँगा।
61 ೬೧ ಇದಕ್ಕನುಸಾರ ನಾನು ಕುಮಾರ್ತೆಯರನ್ನೋ ಎಂಬಂತೆ ನಿನಗೆ ದಯಪಾಲಿಸುವ ನಿನ್ನ ಅಕ್ಕಂದಿರೂ ಮತ್ತು ತಂಗಿಯರೂ ನಿನ್ನಲ್ಲಿ ಸೇರಿಕೊಳ್ಳುವಾಗ ನೀನು ನಿನ್ನ ದುರ್ಮಾರ್ಗಗಳನ್ನು ನೆನಪಿಸಿಕೊಂಡು ನಾಚಿಕೆಪಡುವಿ; ಈ ನನ್ನ ದಯೆ ನಿನ್ನ ಹಿಂದಿನ ಒಡಂಬಡಿಕೆಯ ಫಲವಲ್ಲ.
६१जब तू अपनी बहनों को अर्थात् अपनी बड़ी और छोटी बहनों को ग्रहण करे, तब तू अपना चाल चलन स्मरण करके लज्जित होगी; और मैं उन्हें तेरी पुत्रियाँ ठहरा दूँगा; परन्तु यह तेरी वाचा के अनुसार न करूँगा।
62 ೬೨ ನಾನು ಈ ಒಡಂಬಡಿಕೆಯನ್ನು ನಿನ್ನೊಂದಿಗೆ ಮಾಡಿಕೊಳ್ಳುವಾಗ ನಾನೇ ಯೆಹೋವನು ಎಂದು ಗೊತ್ತಾಗುವುದು.
६२मैं तेरे साथ अपनी वाचा स्थिर करूँगा, और तब तू जान लेगी कि मैं यहोवा हूँ,
63 ೬೩ ನಾನು ನಿನ್ನ ದುಷ್ಕೃತ್ಯಗಳನ್ನೆಲ್ಲಾ ಕ್ಷಮಿಸಿಬಿಟ್ಟ ಮೇಲೆ, ನೀನು ಅವುಗಳನ್ನು ಜ್ಞಾಪಕಕ್ಕೆ ತಂದು ನಾಚಿಕೆಪಟ್ಟು ನಿನ್ನ ಅವಮಾನದ ನಿಮಿತ್ತ ಇನ್ನು ಬಾಯಿ ತೆರೆಯದಿರುವಿ” ಇದು ಕರ್ತನಾದ ಯೆಹೋವನ ನುಡಿ.
६३जिससे तू स्मरण करके लज्जित हो, और लज्जा के मारे फिर कभी मुँह न खोले। यह उस समय होगा, जब मैं तेरे सब कामों को ढाँपूँगा, प्रभु यहोवा की यही वाणी है।”

< ಯೆಹೆಜ್ಕೇಲನು 16 >