< ಯೆಹೆಜ್ಕೇಲನು 17 >

1 ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು,
וַיְהִ֥י דְבַר־יְהוָ֖ה אֵלַ֥י לֵאמֹֽר׃
2 “ನರಪುತ್ರನೇ, ನೀನು ಇಸ್ರಾಯೇಲ್ ವಂಶದವರಿಗೆ ಈ ಸಾಮ್ಯವನ್ನು ಒಗಟಾಗಿ ಹೇಳು,
בֶּן־אָדָ֕ם ח֥וּד חִידָ֖ה וּמְשֹׁ֣ל מָשָׁ֑ל אֶל־בֵּ֖ית יִשְׂרָאֵֽל׃
3 ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ಅಗಲವಾದ ಮತ್ತು ಉದ್ದವಾದ ರೆಕ್ಕೆಗಳಿಂದ ತುಂಬಿದ, ನಾನಾ ಬಣ್ಣದ ದೊಡ್ಡ ಹದ್ದು ಲೆಬನೋನಿಗೆ ಬಂದು, ದೇವದಾರು ಮರದ ಮೇಲ್ಗಡೆಯ ರೆಂಬೆಯನ್ನು ಕಿತ್ತು ಹಾಕಿತು.
וְאָמַרְתָּ֞ כֹּה־אָמַ֣ר ׀ אֲדֹנָ֣י יְהוִ֗ה הַנֶּ֤שֶׁר הַגָּדוֹל֙ גְּד֤וֹל הַכְּנָפַ֙יִם֙ אֶ֣רֶךְ הָאֵ֔בֶר מָלֵא֙ הַנּוֹצָ֔ה אֲשֶׁר־ל֖וֹ הָֽרִקְמָ֑ה בָּ֚א אֶל־הַלְּבָנ֔וֹן וַיִּקַּ֖ח אֶת־צַמֶּ֥רֶת הָאָֽרֶז׃
4 ತುಟ್ಟತುದಿಯ ಚಿಗುರುಗಳನ್ನು ಕಚ್ಚಿ, ವ್ಯಾಪಾರದ ದೇಶಕ್ಕೆ ತೆಗೆದುಕೊಂಡು ಹೋಗಿ ಬಹಳ ವರ್ತಕರಿರುವ ಪಟ್ಟಣದಲ್ಲಿ ಇಟ್ಟುಬಿಟ್ಟಿತು.
אֵ֛ת רֹ֥אשׁ יְנִֽיקוֹתָ֖יו קָטָ֑ף וַיְבִיאֵ֙הוּ֙ אֶל־אֶ֣רֶץ כְּנַ֔עַן בְּעִ֥יר רֹכְלִ֖ים שָׂמֽוֹ׃
5 “‘ಆಮೇಲೆ ಅದು ಆ ದೇವದಾರು ಇದ್ದ ದೇಶದ ಒಂದು ಬೀಜವನ್ನು ತೆಗೆದುಕೊಂಡು ಫಲವತ್ತಾದ ನೀರಾವರಿಯ ಭೂಮಿಯಲ್ಲಿ ನೆಟ್ಟು, ನೀರವಂಜಿಯ ಮರದ ಹಾಗೆ ಬೆಳೆಯಿಸಿತು.
וַיִּקַּח֙ מִזֶּ֣רַע הָאָ֔רֶץ וַֽיִּתְּנֵ֖הוּ בִּשְׂדֵה־זָ֑רַע קָ֚ח עַל־מַ֣יִם רַבִּ֔ים צַפְצָפָ֖ה שָׂמֽוֹ׃
6 ಅದು ಮೊಳೆತು ದ್ರಾಕ್ಷಾಲತೆಯಾಗಿ ತುಂಬಾ ಹರಡಿಕೊಂಡು ತನ್ನ ರೆಂಬೆಗಳನ್ನು ಆ ಹದ್ದಿನ ಕಡೆಗೆ ಚಾಚಿ ಅದರ ಕೆಳಗೆ ತನ್ನ ಬೇರುಗಳನ್ನು ಬಿಟ್ಟಿತು; ಅದು ಲತೆಯಾಗಿ ಬೆಳೆದು, ರೆಂಬೆಗಳನ್ನು ಹರಡಿಸಿ, ಚಿಗುರುಗಳನ್ನು ಹೊರಡಿಸಿತು.
וַיִּצְמַ֡ח וַיְהִי֩ לְגֶ֨פֶן סֹרַ֜חַת שִׁפְלַ֣ת קוֹמָ֗ה לִפְנ֤וֹת דָּלִיּוֹתָיו֙ אֵלָ֔יו וְשָׁרָשָׁ֖יו תַּחְתָּ֣יו יִֽהְי֑וּ וַתְּהִ֣י לְגֶ֔פֶן וַתַּ֣עַשׂ בַּדִּ֔ים וַתְּשַׁלַּ֖ח פֹּארֽוֹת׃
7 “‘ಅಗಲವಾದ ರೆಕ್ಕೆಗಳುಳ್ಳ ಗರಿ ತುಂಬಿದ ಮತ್ತೊಂದು ದೊಡ್ಡ ಹದ್ದು ಇತ್ತು; ಇಗೋ, ಆ ದ್ರಾಕ್ಷಾಲತೆಯು ತಾನು ನಾಟಿಕೊಂಡಿದ್ದ ಪಾತಿಯೊಳಗಿಂದ ಅದರ ಕಡೆಗೆ ತನ್ನ ಬೇರುಗಳನ್ನು ತಿರುಗಿಸಿ, ತನ್ನ ರೆಂಬೆಗಳನ್ನು ಚಾಚಿ ಅದರಿಂದ ನೀರನ್ನು ಹಾಯಿಸುತ್ತಿತ್ತು.
וַיְהִ֤י נֶֽשֶׁר־אֶחָד֙ גָּד֔וֹל גְּד֥וֹל כְּנָפַ֖יִם וְרַב־נוֹצָ֑ה וְהִנֵּה֩ הַגֶּ֨פֶן הַזֹּ֜את כָּֽפְנָ֧ה שָׁרֳשֶׁ֣יהָ עָלָ֗יו וְדָֽלִיּוֹתָיו֙ שִׁלְחָה־לּ֔וֹ לְהַשְׁק֣וֹת אוֹתָ֔הּ מֵעֲרֻג֖וֹת מַטָּעָֽהּ׃
8 ಅದು ಸೊಂಪಾದ ದ್ರಾಕ್ಷಾಲತೆಯಾಗಿ ರೆಂಬೆಗಳನ್ನು ಹರಡಿ ಫಲಕೊಡುವುದಕ್ಕೆ ಅನುಕೂಲವಾದ ಒಳ್ಳೆಯ ನೀರಾವರಿಯ ನೆಲದಲ್ಲಿ ನಾಟಿಕೊಂಡಿತ್ತು.’”
אֶל־שָׂ֥דֶה טּ֛וֹב אֶל־מַ֥יִם רַבִּ֖ים הִ֣יא שְׁתוּלָ֑ה לַעֲשׂ֤וֹת עָנָף֙ וְלָשֵׂ֣את פֶּ֔רִי לִהְי֖וֹת לְגֶ֥פֶן אַדָּֽרֶת׃ ס
9 ಈ ಮಾತನ್ನು ನುಡಿ, “ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ಅದು ಸಮೃದ್ಧವಾಗಿಯೇ ಇರುವುದೋ? ಅದನ್ನು ನಾಟಿದ ಹದ್ದು ಅದರ ಬೇರುಗಳನ್ನು ಕಿತ್ತು, ಅದರ ಫಲವನ್ನು ಕಡಿದುಬಿಡಲು ಅದು ಒಣಗಿ ಅದರ ಹಸುರೆಲೆಗಳೆಲ್ಲಾ ಬಾಡುವುದಲ್ಲವೆ? ಅದು ಬೇರು ಸಹಿತ ಕೀಳಲ್ಪಡುವುದು; ಬಹಳ ಬಲದಿಂದಲ್ಲ, ಬಹಳ ಜನರಿಂದಲ್ಲ.
אֱמֹ֗ר כֹּ֥ה אָמַ֛ר אֲדֹנָ֥י יְהֹוִ֖ה תִּצְלָ֑ח הֲלוֹא֩ אֶת־שָׁרָשֶׁ֨יהָ יְנַתֵּ֜ק וְאֶת־פִּרְיָ֣הּ ׀ יְקוֹסֵ֣ס וְיָבֵ֗שׁ כָּל־טַרְפֵּ֤י צִמְחָהּ֙ תִּיבָ֔שׁ וְלֹֽא־בִזְרֹ֤עַ גְּדוֹלָה֙ וּבְעַם־רָ֔ב לְמַשְׂא֥וֹת אוֹתָ֖הּ מִשָּׁרָשֶֽׁיהָ׃
10 ೧೦ ಆಹಾ, ನಾಟಿಕೊಂಡಿದ್ದ ಆ ಲತೆಯು ಸಮೃದ್ಧವಾಗಿಯೇ ಇರುವುದೋ? ಮೂಡಣ ಗಾಳಿಯು ಬಡಿಯುವಾಗ ಬಾಡೇ ಬಾಡುವುದಲ್ಲವೇ? ಬೆಳೆದ ಪಾತಿಯಲ್ಲಿಯೇ ಒಣಗಿಹೋಗುವುದು.”
וְהִנֵּ֥ה שְׁתוּלָ֖ה הֲתִצְלָ֑ח הֲלוֹא֩ כְגַ֨עַת בָּ֜הּ ר֤וּחַ הַקָּדִים֙ תִּיבַ֣שׁ יָבֹ֔שׁ עַל־עֲרֻגֹ֥ת צִמְחָ֖הּ תִּיבָֽשׁ׃ פ
11 ೧೧ ಯೆಹೋವನು ಇನ್ನೊಂದು ವಾಕ್ಯವನ್ನು ನನಗೆ ದಯಪಾಲಿಸಿದನು,
וַיְהִ֥י דְבַר־יְהוָ֖ה אֵלַ֥י לֵאמֹֽר׃
12 ೧೨ “ದ್ರೋಹಿ ವಂಶದವರಾದ ಈ ಜನರಿಗೆ ಹೀಗೆ ಹೇಳು, ಇದರ ಅಭಿಪ್ರಾಯವು ನಿಮಗೆ ಗೊತ್ತಿಲ್ಲವೋ? ಇಗೋ, ಬಾಬೆಲಿನ ಅರಸನು ಯೆರೂಸಲೇಮಿಗೆ ಬಂದು ಅಲ್ಲಿನ ಅರಸನನ್ನೂ ಮತ್ತು ಪ್ರಧಾನರನ್ನೂ ಹಿಡಿದು ಬಾಬಿಲೋನಿಗೆ ತೆಗೆದುಕೊಂಡು ಹೋದನು.
אֱמָר־נָא֙ לְבֵ֣ית הַמֶּ֔רִי הֲלֹ֥א יְדַעְתֶּ֖ם מָה־אֵ֑לֶּה אֱמֹ֗ר הִנֵּה־בָ֨א מֶֽלֶךְ־בָּבֶ֤ל יְרוּשָׁלִַ֙ם֙ וַיִּקַּ֤ח אֶת־מַלְכָּהּ֙ וְאֶת־שָׂרֶ֔יהָ וַיָּבֵ֥א אוֹתָ֛ם אֵלָ֖יו בָּבֶֽלָה׃
13 ೧೩ ರಾಜವಂಶದವನೊಬ್ಬನನ್ನು ಆರಿಸಿ ಅವನೊಂದಿಗೆ ಒಡಂಬಡಿಕೆ ಮಾಡಿಕೊಂಡು ಅವನಿಂದ ಆಣೆಯಿಡಿಸಿದನು.
וַיִּקַּח֙ מִזֶּ֣רַע הַמְּלוּכָ֔ה וַיִּכְרֹ֥ת אִתּ֖וֹ בְּרִ֑ית וַיָּבֵ֤א אֹתוֹ֙ בְּאָלָ֔ה וְאֶת־אֵילֵ֥י הָאָ֖רֶץ לָקָֽח׃
14 ೧೪ ಇವನ ರಾಜ್ಯವು ಮೇಲಕ್ಕೆ ಏಳಲಾರದೆ ಇದ್ದರೂ, ಒಡಂಬಡಿಕೆಯನ್ನು ಕೈಗೊಳ್ಳುವುದರಿಂದ ಅದು ನಿಲ್ಲುವುದು.
לִֽהְיוֹת֙ מַמְלָכָ֣ה שְׁפָלָ֔ה לְבִלְתִּ֖י הִתְנַשֵּׂ֑א לִשְׁמֹ֥ר אֶת־בְּרִית֖וֹ לְעָמְדָֽהּ׃
15 ೧೫ ಆದರೆ ಅವನು ಬಾಬೆಲಿನ ಅರಸನ ಮೇಲೆ ತಿರುಗಿಬಿದ್ದು ಕುದುರೆಗಳನ್ನೂ ಮತ್ತು ಬಹಳ ಮಂದಿ ಸೈನಿಕರನ್ನೂ ನಮಗೆ ಒದಗಿಸೆಂದು ಐಗುಪ್ತಕ್ಕೆ ರಾಯಭಾರಿಗಳನ್ನು ಕಳುಹಿಸಿದನು. ಆದರೂ ಇವನು ಗೆಲ್ಲುವನೋ? ಇಂಥಾ ಕೃತ್ಯಗಳನ್ನು ನಡೆಸಿದವನು ಪಾರಾಗುವನೋ? ಒಡಂಬಡಿಕೆಯನ್ನು ಮೀರಿದವನು ತಪ್ಪಿಸಿಕೊಂಡಾನೇ?”
וַיִּמְרָד־בּ֗וֹ לִשְׁלֹ֤חַ מַלְאָכָיו֙ מִצְרַ֔יִם לָֽתֶת־ל֥וֹ סוּסִ֖ים וְעַם־רָ֑ב הֲיִצְלָ֤ח הֲיִמָּלֵט֙ הָעֹשֵׂ֣ה אֵ֔לֶּה וְהֵפֵ֥ר בְּרִ֖ית וְנִמְלָֽט׃
16 ೧೬ ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನನ್ನ ಜೀವದಾಣೆ, ಇವನು ಯಾರಿಂದ ಅರಸನಾಗಿ ನೇಮಿಸಲ್ಪಟ್ಟನೋ, ಯಾವನಿಗೆ ಮಾಡಿದ ಪ್ರಮಾಣವನ್ನು ತಿರಸ್ಕರಿಸಿದನೋ, ಯಾರ ಒಡಂಬಡಿಕೆಯನ್ನು ಮೀರಿದನೋ, ಆ ಅರಸನ ಬಳಿಯಲ್ಲಿ, ಅಂದರೆ ಬಾಬೆಲೆಂಬ ಅವನ ವಾಸಸ್ಥಾನದಲ್ಲಿ ಇವನು ಸಾಯುವುದು ಖಂಡಿತ.
חַי־אָ֗נִי נְאֻם֮ אֲדֹנָ֣י יְהוִה֒ אִם־לֹ֗א בִּמְקוֹם֙ הַמֶּ֙לֶךְ֙ הַמַּמְלִ֣יךְ אֹת֔וֹ אֲשֶׁ֤ר בָּזָה֙ אֶת־אָ֣לָת֔וֹ וַאֲשֶׁ֥ר הֵפֵ֖ר אֶת־בְּרִית֑וֹ אִתּ֥וֹ בְתוֹךְ־בָּבֶ֖ל יָמֽוּת׃
17 ೧೭ ಫರೋಹನೂ, ಅವನ ಮಹಾಸೈನ್ಯವೂ, ದೊಡ್ಡ ಪರಿವಾರವೂ ಬಂದು ಬಹಳ ಜನರನ್ನು ಕೊಲ್ಲುವುದಕ್ಕೆ ದಿಬ್ಬಗಳನ್ನು ಹಾಕಿ, ಕೋಟೆಗಳನ್ನು ಕಟ್ಟಿದರೂ ಯುದ್ಧದಲ್ಲಿ ಇವನಿಗೆ ಏನೂ ಸಹಾಯವಾಗುವುದಿಲ್ಲ.
וְלֹא֩ בְחַ֨יִל גָּד֜וֹל וּבְקָהָ֣ל רָ֗ב יַעֲשֶׂ֨ה אוֹת֤וֹ פַרְעֹה֙ בַּמִּלְחָמָ֔ה בִּשְׁפֹּ֥ךְ סֹלְלָ֖ה וּבִבְנ֣וֹת דָּיֵ֑ק לְהַכְרִ֖ית נְפָשׁ֥וֹת רַבּֽוֹת׃
18 ೧೮ ಏಕೆಂದರೆ ಇವನು ಇಟ್ಟ ಆಣೆಯನ್ನು ತಿರಸ್ಕರಿಸಿ ಒಡಂಬಡಿಕೆಯನ್ನು ಮೀರಿದನಲ್ಲವೇ? ಕೈಯ ಮೇಲೆ ಕೈಯಿಟ್ಟು ಆಣೆಮಾಡಿದರೆ ಪ್ರಯೋಜನವೇನು? ಇದನ್ನೆಲ್ಲಾ ಮಾಡಿದ್ದರಿಂದ ಇವನು ಪಾರಾಗನು.”
וּבָזָ֥ה אָלָ֖ה לְהָפֵ֣ר בְּרִ֑ית וְהִנֵּ֨ה נָתַ֥ן יָד֛וֹ וְכָל־אֵ֥לֶּה עָשָׂ֖ה לֹ֥א יִמָּלֵֽט׃ ס
19 ೧೯ ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನನ್ನ ಜೀವದಾಣೆ, ನನಗೆ ಮಾಡಿದ ಪ್ರಮಾಣವನ್ನು ಅವನು ತಿರಸ್ಕರಿಸಿ, ನನ್ನ ಒಡಂಬಡಿಕೆಯನ್ನು ಮೀರಿದ ದೋಷವನ್ನು ಅವನ ತಲೆಗೆ ಕಟ್ಟುವೆನು.
לָכֵ֞ן כֹּה־אָמַ֨ר אֲדֹנָ֣י יְהוִה֮ חַי־אָנִי֒ אִם־לֹ֗א אָֽלָתִי֙ אֲשֶׁ֣ר בָּזָ֔ה וּבְרִיתִ֖י אֲשֶׁ֣ר הֵפִ֑יר וּנְתַתִּ֖יו בְּרֹאשֽׁוֹ׃
20 ೨೦ ನಾನು ಅವನಿಗೆ ನನ್ನ ಬಲೆಯೊಡ್ಡುವೆನು, ನಾನು ಹಾಕಿದ ಉರುಲಿನಲ್ಲಿ ಸಿಕ್ಕಿಬೀಳುವನು, ಅವನನ್ನು ಬಾಬಿಲೋನಿಗೆ ತಂದು ಅಲ್ಲೇ ಅವನೊಂದಿಗೆ ವಾದಿಸಿ, ಅವನು ನನಗೆ ಮಾಡಿದ ಅಪರಾಧವನ್ನು ಅವನ ಮೇಲೆ ಹೊರಿಸುವೆನು.
וּפָרַשְׂתִּ֤י עָלָיו֙ רִשְׁתִּ֔י וְנִתְפַּ֖שׂ בִּמְצֽוּדָתִ֑י וַהֲבִיאוֹתִ֣יהוּ בָבֶ֗לָה וְנִשְׁפַּטְתִּ֤י אִתּוֹ֙ שָׁ֔ם מַעֲל֖וֹ אֲשֶׁ֥ר מָֽעַל־בִּֽי׃
21 ೨೧ ಅವನ ಸೇನೆಗಳೆಲ್ಲಾ ಚದರಿ ಓಡಿಹೋಗಿ, ಕತ್ತಿಯ ಬಾಯಿಗೆ ತುತ್ತಾಗುವುವು; ಉಳಿದವರನ್ನು ಎಲ್ಲಾ ಕಡೆಯ ಗಾಳಿಗೂ ತೂರಿಬಿಡುವೆನು; ಈ ಮಾತನ್ನು ಆಡಿದವನು ಯೆಹೋವನಾದ ನಾನೇ ಎಂದು ನಿಮಗೆ ಗೊತ್ತಾಗುವುದು.”
וְאֵ֨ת כָּל־מִבְרָחָ֤יו בְּכָל־אֲגַפָּיו֙ בַּחֶ֣רֶב יִפֹּ֔לוּ וְהַנִּשְׁאָרִ֖ים לְכָל־ר֣וּחַ יִפָּרֵ֑שׂוּ וִידַעְתֶּ֕ם כִּ֛י אֲנִ֥י יְהוָ֖ה דִּבַּֽרְתִּי׃ ס
22 ೨೨ ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನಾನೇ ಎತ್ತರವಾದ ದೇವದಾರು ಮರದ ಮೇಲ್ಗಡೆಯ ರೆಂಬೆಯನ್ನು ತೆಗೆದು ಅದನ್ನು ನೆಡುವೆನು; ತುಟ್ಟತುದಿಯ ಚಿಗುರುಗಳಲ್ಲಿ ಅತಿ ಕೋಮಲವಾದದ್ದನ್ನು ಚಿವುಟಿ ತಂದು, ಉನ್ನತೋನ್ನತವಾದ ಪರ್ವತದ ಮೇಲೆ ನೆಡುವೆನು.
כֹּ֤ה אָמַר֙ אֲדֹנָ֣י יְהוִ֔ה וְלָקַ֣חְתִּי אָ֗נִי מִצַּמֶּ֧רֶת הָאֶ֛רֶז הָרָמָ֖ה וְנָתָ֑תִּי מֵרֹ֤אשׁ יֹֽנְקוֹתָיו֙ רַ֣ךְ אֶקְטֹ֔ף וְשָׁתַ֣לְתִּי אָ֔נִי עַ֥ל הַר־גָּבֹ֖הַ וְתָלֽוּל׃
23 ೨೩ ನಾನು ಅದನ್ನು ಇಸ್ರಾಯೇಲಿನ ಉನ್ನತ ಪರ್ವತಾಗ್ರದಲ್ಲಿ ನೆಡಲು, ಅದು ಸೊಂಪಾದ ದೇವದಾರು ಮರವಾಗಿ ರೆಂಬೆಗಳನ್ನು ಹರಡಿ ಫಲಕೊಡುವುದು; ಅದರಲ್ಲಿ ಸಕಲವಿಧವಾದ ಪಕ್ಷಿಗಳು ವಾಸಿಸುತ್ತಾ ಅದರ ರೆಂಬೆಗಳ ನೆರಳನ್ನು ಆಶ್ರಯಿಸುವವು.
בְּהַ֨ר מְר֤וֹם יִשְׂרָאֵל֙ אֶשְׁתֳּלֶ֔נּוּ וְנָשָׂ֤א עָנָף֙ וְעָ֣שָׂה פֶ֔רִי וְהָיָ֖ה לְאֶ֣רֶז אַדִּ֑יר וְשָׁכְנ֣וּ תַחְתָּ֗יו כֹּ֚ל צִפּ֣וֹר כָּל־כָּנָ֔ף בְּצֵ֥ל דָּלִיּוֹתָ֖יו תִּשְׁכֹּֽנָּה׃
24 ೨೪ ಆಗ ಯೆಹೋವನಾದ ನಾನು ಎತ್ತರವಾದ ಮರವನ್ನು ತಗ್ಗಿಸಿ, ತಗ್ಗಾದದ್ದನ್ನು ಎತ್ತರಗೊಳಿಸಿ, ಹಸುರಾದದ್ದನ್ನು ಒಣಗಿಸಿ, ಒಣಗಿದ್ದನ್ನು ಚಿಗುರಿಸಿದ್ದೇನೆ ಎಂದು ಅರಣ್ಯದ ಸಕಲ ವೃಕ್ಷಗಳು ತಿಳಿಯುವವು. ಇದನ್ನು ಯೆಹೋವನಾದ ನಾನೇ ನುಡಿದು ನಡೆಸಿದ್ದೇನೆ.”
וְֽיָדְע֞וּ כָּל־עֲצֵ֣י הַשָּׂדֶ֗ה כִּ֣י אֲנִ֤י יְהוָה֙ הִשְׁפַּ֣לְתִּי ׀ עֵ֣ץ גָּבֹ֗הַ הִגְבַּ֙הְתִּי֙ עֵ֣ץ שָׁפָ֔ל הוֹבַ֙שְׁתִּי֙ עֵ֣ץ לָ֔ח וְהִפְרַ֖חְתִּי עֵ֣ץ יָבֵ֑שׁ אֲנִ֥י יְהוָ֖ה דִּבַּ֥רְתִּי וְעָשִֽׂיתִי׃ פ

< ಯೆಹೆಜ್ಕೇಲನು 17 >