< ಯೆಹೆಜ್ಕೇಲನು 18 >

1 ಯೆಹೋವನು ಮತ್ತೊಂದು ವಾಕ್ಯವನ್ನು ನನಗೆ ದಯಪಾಲಿಸಿದನು,
וַיְהִ֥י דְבַר־יְהוָ֖ה אֵלַ֥י לֵאמֹֽר׃
2 “ತಂದೆಗಳು ಹುಳಿ ದ್ರಾಕ್ಷಿಯನ್ನು ತಿಂದರು ಆದರೆ, ಮಕ್ಕಳ ಹಲ್ಲುಗಳು ಚಳಿತುಹೋಗಿವೆ ಎಂಬ ಗಾದೆಯನ್ನು ನೀವು ಇಸ್ರಾಯೇಲ್ ದೇಶದ ವಿಷಯವಾಗಿ ಹೇಳುವುದೇಕೆ?”
מַה־לָּכֶ֗ם אַתֶּם֙ מֹֽשְׁלִים֙ אֶת־הַמָּשָׁ֣ל הַזֶּ֔ה עַל־אַדְמַ֥ת יִשְׂרָאֵ֖ל לֵאמֹ֑ר אָבוֹת֙ יֹ֣אכְלוּ בֹ֔סֶר וְשִׁנֵּ֥י הַבָּנִ֖ים תִּקְהֶֽינָה׃
3 ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನನ್ನ ಜೀವದಾಣೆ, ನೀವು ಈ ಗಾದೆಯನ್ನು ಇಸ್ರಾಯೇಲಿನಲ್ಲಿ ಇನ್ನು ಎತ್ತಬೇಕಾಗುವುದಿಲ್ಲ.
חַי־אָ֕נִי נְאֻ֖ם אֲדֹנָ֣י יְהוִ֑ה אִם־יִֽהְיֶ֨ה לָכֶ֜ם ע֗וֹד מְשֹׁ֛ל הַמָּשָׁ֥ל הַזֶּ֖ה בְּיִשְׂרָאֵֽל׃
4 ಇಗೋ, ಸಕಲ ನರಪ್ರಾಣಿಗಳು ನನ್ನವೇ; ತಂದೆಯೇನು, ಮಗನೇನು, ನರಪ್ರಾಣಿಗಳೆಲ್ಲವೂ ನನ್ನ ಅಧೀನದಲ್ಲಿವೆ; ಪಾಪಮಾಡುವ ಪ್ರಾಣಿಯೇ ಸಾಯುವನು.
הֵ֤ן כָּל־הַנְּפָשׁוֹת֙ לִ֣י הֵ֔נָּה כְּנֶ֧פֶשׁ הָאָ֛ב וּכְנֶ֥פֶשׁ הַבֵּ֖ן לִי־הֵ֑נָּה הַנֶּ֥פֶשׁ הַחֹטֵ֖את הִ֥יא תָמֽוּת׃ ס
5 “ಒಬ್ಬನು ಸದ್ಧರ್ಮಿಯಾಗಿ ನೀತಿ ನ್ಯಾಯಗಳನ್ನು ನಡೆಸಿ,
וְאִ֖ישׁ כִּי־יִהְיֶ֣ה צַדִּ֑יק וְעָשָׂ֥ה מִשְׁפָּ֖ט וּצְדָקָֽה׃
6 ಗುಡ್ಡಗಳ ಮೇಲೆ ಯಜ್ಞಶೇಷವನ್ನು ತಿನ್ನದೆ, ಇಸ್ರಾಯೇಲ್ ವಂಶದವರ ವಿಗ್ರಹಗಳ ಕಡೆಗೆ ಕಣ್ಣೆತ್ತದೆ, ನೆರೆಯವನ ಹೆಂಡತಿಯನ್ನು ಕೆಡಿಸದೆ,
אֶל־הֶֽהָרִים֙ לֹ֣א אָכָ֔ל וְעֵינָיו֙ לֹ֣א נָשָׂ֔א אֶל־גִּלּוּלֵ֖י בֵּ֣ית יִשְׂרָאֵ֑ל וְאֶת־אֵ֤שֶׁת רֵעֵ֙הוּ֙ לֹ֣א טִמֵּ֔א וְאֶל־אִשָּׁ֥ה נִדָּ֖ה לֹ֥א יִקְרָֽב׃
7 ಮುಟ್ಟಿನ ಹೆಂಗಸನ್ನು ಸೇರದೆ, ಯಾರನ್ನೂ ಹಿಂಸಿಸದೆ, ಸಾಲಮಾಡಿದವನ ಒತ್ತೆಯನ್ನು ಬಿಗಿಹಿಡಿಯದೆ, ಯಾರ ಸೊತ್ತನ್ನೂ ಅಪಹರಿಸದೆ, ಹಸಿದವನಿಗೆ ಅನ್ನಕೊಟ್ಟು, ಬೆತ್ತಲೆಯಿರುವವನಿಗೆ ಹೊದಿಕೆಯನ್ನು ಹೊದಿಸಿ,
וְאִישׁ֙ לֹ֣א יוֹנֶ֔ה חֲבֹלָת֥וֹ חוֹב֙ יָשִׁ֔יב גְּזֵלָ֖ה לֹ֣א יִגְזֹ֑ל לַחְמוֹ֙ לְרָעֵ֣ב יִתֵּ֔ן וְעֵירֹ֖ם יְכַסֶּה־בָּֽגֶד׃
8 ಸಾಲಕ್ಕೆ ಬಡ್ಡಿತೆಗೆಯದೆ, ಲಾಭಕ್ಕೆ ಹಣಕೊಡದೆ, ಅನ್ಯಾಯಕ್ಕೆ ಕೈಹಾಕದೆ, ವಾದಿ ಪ್ರತಿವಾದಿಗಳಿಗೆ ಸರಿಯಾಗಿ ನ್ಯಾಯತೀರಿಸಿ,
בַּנֶּ֣שֶׁךְ לֹֽא־יִתֵּ֗ן וְתַרְבִּית֙ לֹ֣א יִקָּ֔ח מֵעָ֖וֶל יָשִׁ֣יב יָד֑וֹ מִשְׁפַּ֤ט אֱמֶת֙ יַֽעֲשֶׂ֔ה בֵּ֥ין אִ֖ישׁ לְאִֽישׁ׃
9 ನನ್ನ ನಿಯಮಗಳನ್ನು ಅನುಸರಿಸಿ, ನನ್ನ ವಿಧಿಗಳನ್ನು ಕೈಕೊಂಡು, ಸತ್ಯಪರನಾಗಿಯೇ ನಡೆದರೆ ಇಂಥವನು ಸದ್ಧರ್ಮಿಯಾಗಿರುವುದರಿಂದ ಖಂಡಿತವಾಗಿ ಜೀವಿಸುವನು” ಇದು ಕರ್ತನಾದ ಯೆಹೋವನ ನುಡಿ.
בְּחֻקּוֹתַ֧י יְהַלֵּ֛ךְ וּמִשְׁפָּטַ֥י שָׁמַ֖ר לַעֲשׂ֣וֹת אֱמֶ֑ת צַדִּ֥יק הוּא֙ חָיֹ֣ה יִֽחְיֶ֔ה נְאֻ֖ם אֲדֹנָ֥י יְהוִֽה׃
10 ೧೦ “ಇಂಥವನನ್ನು ಪಡೆದ ಮಗನು, ಈಗ ಹೇಳಿದ ದುಷ್ಕೃತ್ಯಗಳಲ್ಲಿ ಯಾವುದನ್ನಾದರೂ ನಡೆಸಿ,
וְהוֹלִ֥יד בֵּן־פָּרִ֖יץ שֹׁפֵ֣ךְ דָּ֑ם וְעָ֣שָׂה אָ֔ח מֵאַחַ֖ד מֵאֵֽלֶּה׃
11 ೧೧ ಒಳ್ಳೆಕಾರ್ಯಗಳಲ್ಲಿ ಯಾವುದನ್ನೂ ನಡೆಸದೆ ಗುಡ್ಡಗಳ ಮೇಲೆ ಯಜ್ಞಶೇಷವನ್ನು ತಿಂದು ನೆರೆಯವನ ಹೆಂಡತಿಯನ್ನು ಕೆಡಿಸಿ,
וְה֕וּא אֶת־כָּל־אֵ֖לֶּה לֹ֣א עָשָׂ֑ה כִּ֣י גַ֤ם אֶל־הֶֽהָרִים֙ אָכַ֔ל וְאֶת־אֵ֥שֶׁת רֵעֵ֖הוּ טִמֵּֽא׃
12 ೧೨ ದೀನದರಿದ್ರರನ್ನು ಹಿಂಸಿಸಿ, ಜನರ ಸೊತ್ತನ್ನು ಅಪಹರಿಸಿ, ಸಾಲಗಾರನ ಒತ್ತೆಯನ್ನು ಬಿಗಿಹಿಡಿದು, ವಿಗ್ರಹಗಳ ಕಡೆಗೆ ಕಣ್ಣೆತ್ತಿ,
עָנִ֤י וְאֶבְיוֹן֙ הוֹנָ֔ה גְּזֵל֣וֹת גָּזָ֔ל חֲבֹ֖ל לֹ֣א יָשִׁ֑יב וְאֶל־הַגִּלּוּלִים֙ נָשָׂ֣א עֵינָ֔יו תּוֹעֵבָ֖ה עָשָֽׂה׃
13 ೧೩ ಅಸಹ್ಯಕಾರ್ಯವನ್ನು ಮಾಡಿ, ಸಾಲಕ್ಕೆ ಬಡ್ಡಿತೆಗೆದು, ಲಾಭಕ್ಕೆ ಹಣಕೊಟ್ಟು, ಬಲಾತ್ಕಾರಿಯೂ ಮತ್ತು ರಕ್ತಸುರಿಸುವವನೂ ಆಗಿದ್ದರೆ ಜೀವಿಸುವನೇ? ಖಂಡಿತ ಜೀವಿಸುವುದಿಲ್ಲ; ಈ ದುರಾಚಾರಗಳನ್ನೆಲ್ಲಾ ನಡೆಸಿದನಲ್ಲವೇ? ಅವನು ಸಾಯುವುದು ಖಂಡಿತ; ತನ್ನ ಮರಣ ದಂಡನೆಗೆ ತಾನೇ ಕಾರಣ.
בַּנֶּ֧שֶׁךְ נָתַ֛ן וְתַרְבִּ֥ית לָקַ֖ח וָחָ֑י לֹ֣א יִֽחְיֶ֗ה אֵ֣ת כָּל־הַתּוֹעֵב֤וֹת הָאֵ֙לֶּה֙ עָשָׂ֔ה מ֣וֹת יוּמָ֔ת דָּמָ֖יו בּ֥וֹ יִהְיֶֽה׃
14 ೧೪ “ಇಗೋ, ಇವನು ಪಡೆದ ಮಗನು, ತನ್ನ ತಂದೆಯು ಮಾಡಿದ ಪಾಪಗಳನ್ನೆಲ್ಲಾ ಕಂಡು ಭಯಪಟ್ಟು ಇಂಥಾ ಕಾರ್ಯಗಳನ್ನು ನಡೆಸದೆ,
וְהִנֵּה֙ הוֹלִ֣יד בֵּ֔ן וַיַּ֕רְא אֶת־כָּל־חַטֹּ֥את אָבִ֖יו אֲשֶׁ֣ר עָשָׂ֑ה וַיִּרְאֶ֕ה וְלֹ֥א יַעֲשֶׂ֖ה כָּהֵֽן׃
15 ೧೫ “ಗುಡ್ಡಗಳ ಮೇಲೆ ಯಜ್ಞಶೇಷವನ್ನು ತಿನ್ನದೆ, ಇಸ್ರಾಯೇಲ್ ವಂಶದವರ ವಿಗ್ರಹಗಳ ಕಡೆಗೆ ಕಣ್ಣೆತ್ತದೆ, ನೆರೆಯವನ ಹೆಂಡತಿಯನ್ನು ಕೆಡಿಸದೆ,
עַל־הֶֽהָרִים֙ לֹ֣א אָכָ֔ל וְעֵינָיו֙ לֹ֣א נָשָׂ֔א אֶל־גִּלּוּלֵ֖י בֵּ֣ית יִשְׂרָאֵ֑ל אֶת־אֵ֥שֶׁת רֵעֵ֖הוּ לֹ֥א טִמֵּֽא׃
16 ೧೬ ಯಾರನ್ನೂ ಹಿಂಸಿಸದೆ, ಒತ್ತೆಯನ್ನು ಕೇಳದೆ, ಯಾರ ಸೊತ್ತನ್ನೂ ಅಪಹರಿಸದೆ, ಹಸಿದವನಿಗೆ ಅನ್ನಕೊಟ್ಟು, ಬೆತ್ತಲೆಯಿರುವವನಿಗೆ ಹೊದಿಕೆಯನ್ನು ಹೊದಿಸಿ,
וְאִישׁ֙ לֹ֣א הוֹנָ֔ה חֲבֹל֙ לֹ֣א חָבָ֔ל וּגְזֵלָ֖ה לֹ֣א גָזָ֑ל לַחְמוֹ֙ לְרָעֵ֣ב נָתָ֔ן וְעֵר֖וֹם כִּסָּה־בָֽגֶד׃
17 ೧೭ ಬಡವನ ಮೇಲೆ ಕೈಮಾಡದೆ, ಬಡ್ಡಿಯನ್ನು ಕೇಳದೆ, ಲಾಭಕ್ಕೆ ಹಣಕೊಡದೆ, ನನ್ನ ವಿಧಿಗಳನ್ನು ಆಚರಿಸಿ, ನನ್ನ ನಿಯಮಗಳನ್ನು ಅನುಸರಿಸಿದರೆ ತನ್ನ ತಂದೆಯ ಅಧರ್ಮದ ನಿಮಿತ್ತ ಸಾಯುವುದಿಲ್ಲ, ಖಂಡಿತವಾಗಿ ಜೀವಿಸುವನು.
מֵעָנִ֞י הֵשִׁ֣יב יָד֗וֹ נֶ֤שֶׁךְ וְתַרְבִּית֙ לֹ֣א לָקָ֔ח מִשְׁפָּטַ֣י עָשָׂ֔ה בְּחֻקּוֹתַ֖י הָלָ֑ךְ ה֗וּא לֹ֥א יָמ֛וּת בַּעֲוֹ֥ן אָבִ֖יו חָיֹ֥ה יִחְיֶֽה׃
18 ೧೮ ಇವನ ತಂದೆಯೋ, ಸ್ವಕುಲದವರನ್ನು ಬಹಳವಾಗಿ ಅರೆದು, ಸುಲಿದು, ಸ್ವಜನರ ನಡುವೆ ಕೆಟ್ಟದನ್ನು ನಡೆಸಿದ ಕಾರಣ, ಇಗೋ, ತನ್ನ ಅಧರ್ಮದಿಂದಲೇ ಸಾಯುವನು.
אָבִ֞יו כִּֽי־עָ֣שַׁק עֹ֗שֶׁק גָּזַל֙ גֵּ֣זֶל אָ֔ח וַאֲשֶׁ֥ר לֹא־ט֛וֹב עָשָׂ֖ה בְּת֣וֹךְ עַמָּ֑יו וְהִנֵּה־מֵ֖ת בַּעֲוֹנֽוֹ׃
19 ೧೯ “ಆದರೆ ನೀವು, ‘ತಂದೆಯ ದೋಷಫಲವನ್ನು ಮಗನು ಅನುಭವಿಸುವುದು ಖಂಡಿತ’ ಎಂದು ಆಕ್ಷೇಪಿಸುವಿರೋ? ಮಗನು ನೀತಿನ್ಯಾಯಗಳನ್ನು ನಡೆಸಿ, ನನ್ನ ವಿಧಿಗಳನ್ನೆಲ್ಲಾ ಕೈಕೊಂಡು ಆಚರಿಸಿದರೆ ಖಂಡಿತವಾಗಿ ಜೀವಿಸುವನು.
וַאֲמַרְתֶּ֕ם מַדֻּ֛עַ לֹא־נָשָׂ֥א הַבֵּ֖ן בַּעֲוֹ֣ן הָאָ֑ב וְהַבֵּ֞ן מִשְׁפָּ֧ט וּצְדָקָ֣ה עָשָׂ֗ה אֵ֣ת כָּל־חֻקּוֹתַ֥י שָׁמַ֛ר וַיַּעֲשֶׂ֥ה אֹתָ֖ם חָיֹ֥ה יִחְיֶֽה׃
20 ೨೦ ಪಾಪ ಮಾಡುವವನೇ ಸಾಯುವನು; ಮಗನು ತಂದೆಯ ದೋಷಫಲವನ್ನು ಅನುಭವಿಸನು; ಶಿಷ್ಟನ ಶಿಷ್ಟತನದ ಫಲವು ಶಿಷ್ಟನದೇ, ದುಷ್ಟನ ದುಷ್ಟತನದ ಫಲವು ದುಷ್ಟನದೇ.
הַנֶּ֥פֶשׁ הַחֹטֵ֖את הִ֣יא תָמ֑וּת בֵּ֞ן לֹא־יִשָּׂ֣א ׀ בַּעֲוֹ֣ן הָאָ֗ב וְאָב֙ לֹ֤א יִשָּׂא֙ בַּעֲוֹ֣ן הַבֵּ֔ן צִדְקַ֤ת הַצַּדִּיק֙ עָלָ֣יו תִּֽהְיֶ֔ה וְרִשְׁעַ֥ת הָרָשָׁ֖ע עָלָ֥יו תִּֽהְיֶֽה׃ ס
21 ೨೧ “ಆದರೆ ದುಷ್ಟನು ತಾನು ಮಾಡುತ್ತಿದ್ದ ಪಾಪಗಳನ್ನೆಲ್ಲಾ ಬಿಟ್ಟುಬಿಟ್ಟು, ನನ್ನ ಸಕಲ ವಿಧಿಗಳನ್ನು ಕೈಕೊಂಡು, ನೀತಿನ್ಯಾಯಗಳನ್ನು ನಡೆಸಿದರೆ ಸಾಯುವುದಿಲ್ಲ, ಖಂಡಿತವಾಗಿ ಜೀವಿಸುವನು.
וְהָרָשָׁ֗ע כִּ֤י יָשׁוּב֙ מִכָּל־חַטֹּאתָיו֙ אֲשֶׁ֣ר עָשָׂ֔ה וְשָׁמַר֙ אֶת־כָּל־חֻקּוֹתַ֔י וְעָשָׂ֥ה מִשְׁפָּ֖ט וּצְדָקָ֑ה חָיֹ֥ה יִחְיֶ֖ה לֹ֥א יָמֽוּת׃
22 ೨೨ ಅವನು ಮಾಡಿದ ಯಾವ ಅಪರಾಧವು ಅವನ ಲೆಕ್ಕಕ್ಕೆ ಸೇರಿಸಲ್ಪಡುವುದಿಲ್ಲ, ಅವನು ಮಾಡುತ್ತಿರುವ ಸದ್ಧರ್ಮದಿಂದಲೇ ಅವನು ಜೀವಿಸುವನು.”
כָּל־פְּשָׁעָיו֙ אֲשֶׁ֣ר עָשָׂ֔ה לֹ֥א יִזָּכְר֖וּ ל֑וֹ בְּצִדְקָת֥וֹ אֲשֶׁר־עָשָׂ֖ה יִֽחְיֶֽה׃
23 ೨೩ ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ದುಷ್ಟನ ಸಾವಿನಲ್ಲಿ ನನಗೆ ಸ್ವಲ್ಪವಾದರೂ ಸಂತೋಷವಿಲ್ಲ. ಅವನು ತನ್ನ ದುರ್ಮಾರ್ಗವನ್ನು ಬಿಟ್ಟು ಬಾಳುವುದೇ ನನಗೆ ಸಂತೋಷ.
הֶחָפֹ֤ץ אֶחְפֹּץ֙ מ֣וֹת רָשָׁ֔ע נְאֻ֖ם אֲדֹנָ֣י יְהוִ֑ה הֲל֛וֹא בְּשׁוּב֥וֹ מִדְּרָכָ֖יו וְחָיָֽה׃ ס
24 ೨೪ ಆದರೆ ಶಿಷ್ಟನು ತನ್ನ ಶಿಷ್ಟತನವನ್ನು ಬಿಟ್ಟು, ಅಧರ್ಮಮಾಡಿ, ದುಷ್ಟನು ನಡೆಸುವ ದುರಾಚಾರಗಳನ್ನೆಲ್ಲಾ ನಡೆಸಿದರೆ ಅವನು ಜೀವಿಸುವನೋ? ಅವನು ಮಾಡಿದ ಯಾವ ಸುಕೃತ್ಯವು ಅವನ ಲೆಕ್ಕಕ್ಕೆ ಸೇರಿಸಲ್ಪಡುವುದಿಲ್ಲ, ಅವನು ಮಾಡುತ್ತಿರುವ ಪಾಪ ಅಪರಾಧಗಳಿಂದಲೇ ಸಾಯುವನು.
וּבְשׁ֨וּב צַדִּ֤יק מִצִּדְקָתוֹ֙ וְעָ֣שָׂה עָ֔וֶל כְּכֹ֨ל הַתּוֹעֵב֜וֹת אֲשֶׁר־עָשָׂ֧ה הָרָשָׁ֛ע יַעֲשֶׂ֖ה וָחָ֑י כָּל־צִדְקֹתָ֤יו אֲשֶׁר־עָשָׂה֙ לֹ֣א תִזָּכַ֔רְנָה בְּמַעֲל֧וֹ אֲשֶׁר־מָעַ֛ל וּבְחַטָּאת֥וֹ אֲשֶׁר־חָטָ֖א בָּ֥ם יָמֽוּת׃
25 ೨೫ “ಆದರೆ ನೀವು, ‘ಕರ್ತನ ಕ್ರಮವು ಸರಿಯಲ್ಲ’ ಎಂದು ಹೇಳುತ್ತಿದ್ದೀರಿ; ಇಸ್ರಾಯೇಲ್ ವಂಶದವರೇ, ನನ್ನ ಕ್ರಮವು ಸರಿಯಲ್ಲವೋ? ನಿಮ್ಮ ಕ್ರಮವೇ ಸರಿಯಲ್ಲ.
וַאֲמַרְתֶּ֕ם לֹ֥א יִתָּכֵ֖ן דֶּ֣רֶךְ אֲדֹנָ֑י שִׁמְעוּ־נָא֙ בֵּ֣ית יִשְׂרָאֵ֔ל הֲדַרְכִּי֙ לֹ֣א יִתָּכֵ֔ן הֲלֹ֥א דַרְכֵיכֶ֖ם לֹ֥א יִתָּכֵֽנוּ׃
26 ೨೬ ಶಿಷ್ಟನು ತನ್ನ ಶಿಷ್ಟತನವನ್ನು ಬಿಟ್ಟು, ಅಧರ್ಮಮಾಡಿ, ಅದರಲ್ಲಿ ಸತ್ತರೆ ತಾನು ಮಾಡಿದ ಅಧರ್ಮದಿಂದಲೇ ಸಾಯಬೇಕಾಯಿತು.
בְּשׁוּב־צַדִּ֧יק מִצִּדְקָת֛וֹ וְעָ֥שָׂה עָ֖וֶל וּמֵ֣ת עֲלֵיהֶ֑ם בְּעַוְל֥וֹ אֲשֶׁר־עָשָׂ֖ה יָמֽוּת׃ ס
27 ೨೭ ದುಷ್ಟನು ತಾನು ಮಾಡುತ್ತಿದ್ದ ದುಷ್ಟತನವನ್ನು ಬಿಟ್ಟು, ನೀತಿನ್ಯಾಯಗಳನ್ನು ನಡೆಸಿದರೆ ತನ್ನ ಪ್ರಾಣವನ್ನು ಉಳಿಸಿಕೊಳ್ಳುವನು.
וּבְשׁ֣וּב רָשָׁ֗ע מֵֽרִשְׁעָתוֹ֙ אֲשֶׁ֣ר עָשָׂ֔ה וַיַּ֥עַשׂ מִשְׁפָּ֖ט וּצְדָקָ֑ה ה֖וּא אֶת־נַפְשׁ֥וֹ יְחַיֶּֽה׃
28 ೨೮ ಅವನು ಯೋಚಿಸಿ, ತಾನು ಮಾಡುತ್ತಿದ್ದ ಅಪರಾಧಗಳನ್ನೆಲ್ಲಾ ಬಿಟ್ಟದ್ದರಿಂದ ಸಾಯುವುದಿಲ್ಲ, ಖಂಡಿತವಾಗಿ ಜೀವಿಸುವನು.
וַיִּרְאֶ֣ה וַיָּ֔שָׁב מִכָּל־פְּשָׁעָ֖יו אֲשֶׁ֣ר עָשָׂ֑ה חָי֥וֹ יִחְיֶ֖ה לֹ֥א יָמֽוּת׃
29 ೨೯ ಆದರೆ ಇಸ್ರಾಯೇಲ್ ವಂಶದವರು ಕರ್ತನ ಕ್ರಮವು ಸಮವಲ್ಲ ಎಂದು ಹೇಳುತ್ತಿದ್ದಾರೆ; ಇಸ್ರಾಯೇಲ್ ವಂಶದವರೇ, ನನ್ನ ಕ್ರಮವು ಸರಿಯಿಲ್ಲವೋ? ನಿಮ್ಮ ಕ್ರಮವೇ ಸರಿಯಿಲ್ಲವಷ್ಟೆ.”
וְאָֽמְרוּ֙ בֵּ֣ית יִשְׂרָאֵ֔ל לֹ֥א יִתָּכֵ֖ן דֶּ֣רֶךְ אֲדֹנָ֑י הַדְּרָכַ֞י לֹ֤א יִתָּֽכְנּוּ֙ בֵּ֣ית יִשְׂרָאֵ֔ל הֲלֹ֥א דַרְכֵיכֶ֖ם לֹ֥א יִתָּכֵֽן׃
30 ೩೦ ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಇಸ್ರಾಯೇಲ್ ವಂಶದವರೇ, ನಿಮ್ಮ ನಿಮ್ಮ ನಡತೆಗೆ ತಕ್ಕ ಹಾಗೆ ನಾನು ನಿಮಗೆ ತೀರ್ಪುಮಾಡುವೆನು; ಅಧರ್ಮವು ನಿಮ್ಮನ್ನು ನಾಶಮಾಡದಂತೆ ತಿರುಗಿಕೊಂಡು ನಿಮ್ಮ ಅಪರಾಧಗಳನ್ನೆಲ್ಲಾ ಬಿಟ್ಟುಬಿಡಿರಿ.
לָכֵן֩ אִ֨ישׁ כִּדְרָכָ֜יו אֶשְׁפֹּ֤ט אֶתְכֶם֙ בֵּ֣ית יִשְׂרָאֵ֔ל נְאֻ֖ם אֲדֹנָ֣י יְהוִ֑ה שׁ֤וּבוּ וְהָשִׁ֙יבוּ֙ מִכָּל־פִּשְׁעֵיכֶ֔ם וְלֹֽא־יִהְיֶ֥ה לָכֶ֛ם לְמִכְשׁ֖וֹל עָוֹֽן׃
31 ೩೧ “ನೀವು ಮಾಡುತ್ತಾ ಬಂದಿರುವ ಅಪರಾಧಗಳನ್ನೆಲ್ಲಾ ನಿಮ್ಮಿಂದ ತೊಲಗಿಸಿಬಿಟ್ಟು ನಿಮ್ಮ ಹೃದಯವನ್ನೂ ಮತ್ತು ಸ್ವಭಾವವನ್ನೂ ನೂತನಪಡಿಸಿಕೊಳ್ಳಿರಿ; ಇಸ್ರಾಯೇಲ್ ವಂಶದವರೇ, ನೀವು ಸಾಯಬೇಕೇ?
הַשְׁלִ֣יכוּ מֵעֲלֵיכֶ֗ם אֶת־כָּל־פִּשְׁעֵיכֶם֙ אֲשֶׁ֣ר פְּשַׁעְתֶּ֣ם בָּ֔ם וַעֲשׂ֥וּ לָכֶ֛ם לֵ֥ב חָדָ֖שׁ וְר֣וּחַ חֲדָשָׁ֑ה וְלָ֥מָּה תָמֻ֖תוּ בֵּ֥ית יִשְׂרָאֵֽל׃
32 ೩೨ ಯಾರ ಸಾವಿನಲ್ಲೂ ನನಗೆ ಸಂತೋಷವಿಲ್ಲ; ಪಾಪದಿಂದ ತಿರುಗಿಕೊಂಡು ಜೀವಿಸಿರಿ” ಇದು ಕರ್ತನಾದ ಯೆಹೋವನ ನುಡಿ.
כִּ֣י לֹ֤א אֶחְפֹּץ֙ בְּמ֣וֹת הַמֵּ֔ת נְאֻ֖ם אֲדֹנָ֣י יְהוִ֑ה וְהָשִׁ֖יבוּ וִֽחְיֽוּ׃ פ

< ಯೆಹೆಜ್ಕೇಲನು 18 >