< ಯೆಹೆಜ್ಕೇಲನು 18 >
1 ೧ ಯೆಹೋವನು ಮತ್ತೊಂದು ವಾಕ್ಯವನ್ನು ನನಗೆ ದಯಪಾಲಿಸಿದನು,
E veio a mim a palavra do SENHOR, dizendo:
2 ೨ “ತಂದೆಗಳು ಹುಳಿ ದ್ರಾಕ್ಷಿಯನ್ನು ತಿಂದರು ಆದರೆ, ಮಕ್ಕಳ ಹಲ್ಲುಗಳು ಚಳಿತುಹೋಗಿವೆ ಎಂಬ ಗಾದೆಯನ್ನು ನೀವು ಇಸ್ರಾಯೇಲ್ ದೇಶದ ವಿಷಯವಾಗಿ ಹೇಳುವುದೇಕೆ?”
O que vós pensais, vós que dizeis este provérbio sobre a terra de Israel, dizendo: Os pais comeram uvas verdes, mas foram os dentes dos filhos que se estragaram?
3 ೩ ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನನ್ನ ಜೀವದಾಣೆ, ನೀವು ಈ ಗಾದೆಯನ್ನು ಇಸ್ರಾಯೇಲಿನಲ್ಲಿ ಇನ್ನು ಎತ್ತಬೇಕಾಗುವುದಿಲ್ಲ.
Vivo eu, diz o Senhor DEUS, que nunca mais direis este provérbio em Israel.
4 ೪ ಇಗೋ, ಸಕಲ ನರಪ್ರಾಣಿಗಳು ನನ್ನವೇ; ತಂದೆಯೇನು, ಮಗನೇನು, ನರಪ್ರಾಣಿಗಳೆಲ್ಲವೂ ನನ್ನ ಅಧೀನದಲ್ಲಿವೆ; ಪಾಪಮಾಡುವ ಪ್ರಾಣಿಯೇ ಸಾಯುವನು.
Eis que todas as almas são minhas; tanto a alma do pai como alma do filho são minhas; a alma que pecar, essa morrerá.
5 ೫ “ಒಬ್ಬನು ಸದ್ಧರ್ಮಿಯಾಗಿ ನೀತಿ ನ್ಯಾಯಗಳನ್ನು ನಡೆಸಿ,
Se um homem for justo, e fizer juízo e justiça;
6 ೬ ಗುಡ್ಡಗಳ ಮೇಲೆ ಯಜ್ಞಶೇಷವನ್ನು ತಿನ್ನದೆ, ಇಸ್ರಾಯೇಲ್ ವಂಶದವರ ವಿಗ್ರಹಗಳ ಕಡೆಗೆ ಕಣ್ಣೆತ್ತದೆ, ನೆರೆಯವನ ಹೆಂಡತಿಯನ್ನು ಕೆಡಿಸದೆ,
Não comer sobre os montes, nem levantar seus olhos para os ídolos da casa de Israel, nem contaminar a mulher de seu próximo, nem se achegar à mulher menstruada,
7 ೭ ಮುಟ್ಟಿನ ಹೆಂಗಸನ್ನು ಸೇರದೆ, ಯಾರನ್ನೂ ಹಿಂಸಿಸದೆ, ಸಾಲಮಾಡಿದವನ ಒತ್ತೆಯನ್ನು ಬಿಗಿಹಿಡಿಯದೆ, ಯಾರ ಸೊತ್ತನ್ನೂ ಅಪಹರಿಸದೆ, ಹಸಿದವನಿಗೆ ಅನ್ನಕೊಟ್ಟು, ಬೆತ್ತಲೆಯಿರುವವನಿಗೆ ಹೊದಿಕೆಯನ್ನು ಹೊದಿಸಿ,
E a ninguém oprimir; devolver ao devedor o seu penhor, não cometer roubo, der de seu pão ao faminto, e cobrir com roupa ao nu;
8 ೮ ಸಾಲಕ್ಕೆ ಬಡ್ಡಿತೆಗೆಯದೆ, ಲಾಭಕ್ಕೆ ಹಣಕೊಡದೆ, ಅನ್ಯಾಯಕ್ಕೆ ಕೈಹಾಕದೆ, ವಾದಿ ಪ್ರತಿವಾದಿಗಳಿಗೆ ಸರಿಯಾಗಿ ನ್ಯಾಯತೀರಿಸಿ,
Não emprestar a juros, nem receber lucros; e desviar sua mão da injustiça, e fizer juízo entre dois homens com base na verdade;
9 ೯ ನನ್ನ ನಿಯಮಗಳನ್ನು ಅನುಸರಿಸಿ, ನನ್ನ ವಿಧಿಗಳನ್ನು ಕೈಕೊಂಡು, ಸತ್ಯಪರನಾಗಿಯೇ ನಡೆದರೆ ಇಂಥವನು ಸದ್ಧರ್ಮಿಯಾಗಿರುವುದರಿಂದ ಖಂಡಿತವಾಗಿ ಜೀವಿಸುವನು” ಇದು ಕರ್ತನಾದ ಯೆಹೋವನ ನುಡಿ.
E andar em meus estatutos, e guardar meus juízos, para agir com base na verdade, este justo certamente viverá, diz o Senhor DEUS.
10 ೧೦ “ಇಂಥವನನ್ನು ಪಡೆದ ಮಗನು, ಈಗ ಹೇಳಿದ ದುಷ್ಕೃತ್ಯಗಳಲ್ಲಿ ಯಾವುದನ್ನಾದರೂ ನಡೆಸಿ,
E se ele gerar um filho ladrão, derramador de sangue, que fizer a seu irmão alguma destas coisas;
11 ೧೧ ಒಳ್ಳೆಕಾರ್ಯಗಳಲ್ಲಿ ಯಾವುದನ್ನೂ ನಡೆಸದೆ ಗುಡ್ಡಗಳ ಮೇಲೆ ಯಜ್ಞಶೇಷವನ್ನು ತಿಂದು ನೆರೆಯವನ ಹೆಂಡತಿಯನ್ನು ಕೆಡಿಸಿ,
(Ainda que [o pai] não faça tais coisas): como comer sobre os montes, contaminar a mulher de seu próximo,
12 ೧೨ ದೀನದರಿದ್ರರನ್ನು ಹಿಂಸಿಸಿ, ಜನರ ಸೊತ್ತನ್ನು ಅಪಹರಿಸಿ, ಸಾಲಗಾರನ ಒತ್ತೆಯನ್ನು ಬಿಗಿಹಿಡಿದು, ವಿಗ್ರಹಗಳ ಕಡೆಗೆ ಕಣ್ಣೆತ್ತಿ,
Oprimir o pobre e o necessitado, cometer roubos, não devolver o penhor, levantar seus olhos para os ídolos, praticar abominação,
13 ೧೩ ಅಸಹ್ಯಕಾರ್ಯವನ್ನು ಮಾಡಿ, ಸಾಲಕ್ಕೆ ಬಡ್ಡಿತೆಗೆದು, ಲಾಭಕ್ಕೆ ಹಣಕೊಟ್ಟು, ಬಲಾತ್ಕಾರಿಯೂ ಮತ್ತು ರಕ್ತಸುರಿಸುವವನೂ ಆಗಿದ್ದರೆ ಜೀವಿಸುವನೇ? ಖಂಡಿತ ಜೀವಿಸುವುದಿಲ್ಲ; ಈ ದುರಾಚಾರಗಳನ್ನೆಲ್ಲಾ ನಡೆಸಿದನಲ್ಲವೇ? ಅವನು ಸಾಯುವುದು ಖಂಡಿತ; ತನ್ನ ಮರಣ ದಂಡನೆಗೆ ತಾನೇ ಕಾರಣ.
Emprestar a juros, e receber lucro. Por acaso viveria? Não viverá. Ele fez todas estas abominações; certamente morrerá; o seu sangue será sobre ele.
14 ೧೪ “ಇಗೋ, ಇವನು ಪಡೆದ ಮಗನು, ತನ್ನ ತಂದೆಯು ಮಾಡಿದ ಪಾಪಗಳನ್ನೆಲ್ಲಾ ಕಂಡು ಭಯಪಟ್ಟು ಇಂಥಾ ಕಾರ್ಯಗಳನ್ನು ನಡೆಸದೆ,
E eis que se, [por sua vez] ele gerar um filho, que vir todos os pecados que seu pai fez, e olhar para não fazer conforme a eles,
15 ೧೫ “ಗುಡ್ಡಗಳ ಮೇಲೆ ಯಜ್ಞಶೇಷವನ್ನು ತಿನ್ನದೆ, ಇಸ್ರಾಯೇಲ್ ವಂಶದವರ ವಿಗ್ರಹಗಳ ಕಡೆಗೆ ಕಣ್ಣೆತ್ತದೆ, ನೆರೆಯವನ ಹೆಂಡತಿಯನ್ನು ಕೆಡಿಸದೆ,
Não comer sobre os montes, nem levantar seus olhos para os ídolos da casa de Israel; nem contaminar a mulher de seu próximo;
16 ೧೬ ಯಾರನ್ನೂ ಹಿಂಸಿಸದೆ, ಒತ್ತೆಯನ್ನು ಕೇಳದೆ, ಯಾರ ಸೊತ್ತನ್ನೂ ಅಪಹರಿಸದೆ, ಹಸಿದವನಿಗೆ ಅನ್ನಕೊಟ್ಟು, ಬೆತ್ತಲೆಯಿರುವವನಿಗೆ ಹೊದಿಕೆಯನ್ನು ಹೊದಿಸಿ,
Nem oprimir a ninguém; nem retiver o penhor, nem cometer roubos; der de seu pão ao faminto, e cobrir com roupa ao nu;
17 ೧೭ ಬಡವನ ಮೇಲೆ ಕೈಮಾಡದೆ, ಬಡ್ಡಿಯನ್ನು ಕೇಳದೆ, ಲಾಭಕ್ಕೆ ಹಣಕೊಡದೆ, ನನ್ನ ವಿಧಿಗಳನ್ನು ಆಚರಿಸಿ, ನನ್ನ ನಿಯಮಗಳನ್ನು ಅನುಸರಿಸಿದರೆ ತನ್ನ ತಂದೆಯ ಅಧರ್ಮದ ನಿಮಿತ್ತ ಸಾಯುವುದಿಲ್ಲ, ಖಂಡಿತವಾಗಿ ಜೀವಿಸುವನು.
Desviar sua mão de [fazer mal a] o pobre, não receber juros nem lucro; e praticar meus juízos, e andar em meus estatutos, este não morrerá pela maldade de seu pai; certamente viverá.
18 ೧೮ ಇವನ ತಂದೆಯೋ, ಸ್ವಕುಲದವರನ್ನು ಬಹಳವಾಗಿ ಅರೆದು, ಸುಲಿದು, ಸ್ವಜನರ ನಡುವೆ ಕೆಟ್ಟದನ್ನು ನಡೆಸಿದ ಕಾರಣ, ಇಗೋ, ತನ್ನ ಅಧರ್ಮದಿಂದಲೇ ಸಾಯುವನು.
Seu pai, dado que fez opressão, roubou os bens do irmão, e fez o que não era bom no meio de seu povo, eis que morrerá por sua maldade.
19 ೧೯ “ಆದರೆ ನೀವು, ‘ತಂದೆಯ ದೋಷಫಲವನ್ನು ಮಗನು ಅನುಭವಿಸುವುದು ಖಂಡಿತ’ ಎಂದು ಆಕ್ಷೇಪಿಸುವಿರೋ? ಮಗನು ನೀತಿನ್ಯಾಯಗಳನ್ನು ನಡೆಸಿ, ನನ್ನ ವಿಧಿಗಳನ್ನೆಲ್ಲಾ ಕೈಕೊಂಡು ಆಚರಿಸಿದರೆ ಖಂಡಿತವಾಗಿ ಜೀವಿಸುವನು.
Porém dizeis: Por que o filho não será punido pela maldade do pai? Porque o filho fez juízo e justiça, guardou todas o meus estatutos, e as praticou, certamente viverá.
20 ೨೦ ಪಾಪ ಮಾಡುವವನೇ ಸಾಯುವನು; ಮಗನು ತಂದೆಯ ದೋಷಫಲವನ್ನು ಅನುಭವಿಸನು; ಶಿಷ್ಟನ ಶಿಷ್ಟತನದ ಫಲವು ಶಿಷ್ಟನದೇ, ದುಷ್ಟನ ದುಷ್ಟತನದ ಫಲವು ದುಷ್ಟನದೇ.
A alma que pecar, essa morrerá; o filho não será punido pela maldade do pai, nem o pai será punido pela maldade do filho; a justiça do justo será sobre ele, e a perversidade do perverso será sobre ele.
21 ೨೧ “ಆದರೆ ದುಷ್ಟನು ತಾನು ಮಾಡುತ್ತಿದ್ದ ಪಾಪಗಳನ್ನೆಲ್ಲಾ ಬಿಟ್ಟುಬಿಟ್ಟು, ನನ್ನ ಸಕಲ ವಿಧಿಗಳನ್ನು ಕೈಕೊಂಡು, ನೀತಿನ್ಯಾಯಗಳನ್ನು ನಡೆಸಿದರೆ ಸಾಯುವುದಿಲ್ಲ, ಖಂಡಿತವಾಗಿ ಜೀವಿಸುವನು.
Mas se o perverso se converter de todos os seus pecados que cometeu, e [passar a] guardar todos os meus estatutos, e fizer juízo e justiça, certamente viverá; não morrerá.
22 ೨೨ ಅವನು ಮಾಡಿದ ಯಾವ ಅಪರಾಧವು ಅವನ ಲೆಕ್ಕಕ್ಕೆ ಸೇರಿಸಲ್ಪಡುವುದಿಲ್ಲ, ಅವನು ಮಾಡುತ್ತಿರುವ ಸದ್ಧರ್ಮದಿಂದಲೇ ಅವನು ಜೀವಿಸುವನು.”
Todas as suas transgressões que cometeu não lhe serão lembradas; por sua justiça que praticou, viverá.
23 ೨೩ ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ದುಷ್ಟನ ಸಾವಿನಲ್ಲಿ ನನಗೆ ಸ್ವಲ್ಪವಾದರೂ ಸಂತೋಷವಿಲ್ಲ. ಅವನು ತನ್ನ ದುರ್ಮಾರ್ಗವನ್ನು ಬಿಟ್ಟು ಬಾಳುವುದೇ ನನಗೆ ಸಂತೋಷ.
Por acaso eu prefiro a morte do ímpio?, diz o Senhor DEUS, E não que ele se converta de seus caminhos, e viva?
24 ೨೪ ಆದರೆ ಶಿಷ್ಟನು ತನ್ನ ಶಿಷ್ಟತನವನ್ನು ಬಿಟ್ಟು, ಅಧರ್ಮಮಾಡಿ, ದುಷ್ಟನು ನಡೆಸುವ ದುರಾಚಾರಗಳನ್ನೆಲ್ಲಾ ನಡೆಸಿದರೆ ಅವನು ಜೀವಿಸುವನೋ? ಅವನು ಮಾಡಿದ ಯಾವ ಸುಕೃತ್ಯವು ಅವನ ಲೆಕ್ಕಕ್ಕೆ ಸೇರಿಸಲ್ಪಡುವುದಿಲ್ಲ, ಅವನು ಮಾಡುತ್ತಿರುವ ಪಾಪ ಅಪರಾಧಗಳಿಂದಲೇ ಸಾಯುವನು.
Mas se o justo se desviar de sua justiça, e [passar a] praticar maldade, e fizer conforme a todas as abominações que o perverso faz, por acaso ele viveria? Todas as suas justiças que praticou não serão lembradas; por sua transgressão com que transgrediu, e por seu pecado com que pecou, por causa deles morrerá.
25 ೨೫ “ಆದರೆ ನೀವು, ‘ಕರ್ತನ ಕ್ರಮವು ಸರಿಯಲ್ಲ’ ಎಂದು ಹೇಳುತ್ತಿದ್ದೀರಿ; ಇಸ್ರಾಯೇಲ್ ವಂಶದವರೇ, ನನ್ನ ಕ್ರಮವು ಸರಿಯಲ್ಲವೋ? ನಿಮ್ಮ ಕ್ರಮವೇ ಸರಿಯಲ್ಲ.
Porém dizeis: O caminho do Senhor não é justo. Ouvi agora, ó casa de Israel: por acaso o meu caminho não é justo? [Ou] não são os vossos caminhos que são injustos?
26 ೨೬ ಶಿಷ್ಟನು ತನ್ನ ಶಿಷ್ಟತನವನ್ನು ಬಿಟ್ಟು, ಅಧರ್ಮಮಾಡಿ, ಅದರಲ್ಲಿ ಸತ್ತರೆ ತಾನು ಮಾಡಿದ ಅಧರ್ಮದಿಂದಲೇ ಸಾಯಬೇಕಾಯಿತು.
Se o justo de desviar de sua justiça, e [passar a] praticar maldade, ele morrerá por ela; pela maldade que cometeu, morrerá.
27 ೨೭ ದುಷ್ಟನು ತಾನು ಮಾಡುತ್ತಿದ್ದ ದುಷ್ಟತನವನ್ನು ಬಿಟ್ಟು, ನೀತಿನ್ಯಾಯಗಳನ್ನು ನಡೆಸಿದರೆ ತನ್ನ ಪ್ರಾಣವನ್ನು ಉಳಿಸಿಕೊಳ್ಳುವನು.
Porém se o perverso se desviar de sua perversidade que cometeu, e [passar a] praticar juízo e justiça, esse conservará sua alma em vida;
28 ೨೮ ಅವನು ಯೋಚಿಸಿ, ತಾನು ಮಾಡುತ್ತಿದ್ದ ಅಪರಾಧಗಳನ್ನೆಲ್ಲಾ ಬಿಟ್ಟದ್ದರಿಂದ ಸಾಯುವುದಿಲ್ಲ, ಖಂಡಿತವಾಗಿ ಜೀವಿಸುವನು.
Porque observou, e se converteu de todas as suas transgressões que cometera, certamente viverá, não morrerá.
29 ೨೯ ಆದರೆ ಇಸ್ರಾಯೇಲ್ ವಂಶದವರು ಕರ್ತನ ಕ್ರಮವು ಸಮವಲ್ಲ ಎಂದು ಹೇಳುತ್ತಿದ್ದಾರೆ; ಇಸ್ರಾಯೇಲ್ ವಂಶದವರೇ, ನನ್ನ ಕ್ರಮವು ಸರಿಯಿಲ್ಲವೋ? ನಿಮ್ಮ ಕ್ರಮವೇ ಸರಿಯಿಲ್ಲವಷ್ಟೆ.”
Contudo a casa de Israel diz: O caminho do Senhor não é justo. Por acaso os meus caminhos não são justos, ó casa de Israel? [Ou] não são vossos caminhos que são injustos?
30 ೩೦ ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಇಸ್ರಾಯೇಲ್ ವಂಶದವರೇ, ನಿಮ್ಮ ನಿಮ್ಮ ನಡತೆಗೆ ತಕ್ಕ ಹಾಗೆ ನಾನು ನಿಮಗೆ ತೀರ್ಪುಮಾಡುವೆನು; ಅಧರ್ಮವು ನಿಮ್ಮನ್ನು ನಾಶಮಾಡದಂತೆ ತಿರುಗಿಕೊಂಡು ನಿಮ್ಮ ಅಪರಾಧಗಳನ್ನೆಲ್ಲಾ ಬಿಟ್ಟುಬಿಡಿರಿ.
Portanto eu vos julgarei a cada um conforme seus [próprios] caminhos, ó casa de Israel, diz o Senhor DEUS. Convertei-vos e desviai-vos de todas as vossas transgressões; e assim a maldade não será vossa queda.
31 ೩೧ “ನೀವು ಮಾಡುತ್ತಾ ಬಂದಿರುವ ಅಪರಾಧಗಳನ್ನೆಲ್ಲಾ ನಿಮ್ಮಿಂದ ತೊಲಗಿಸಿಬಿಟ್ಟು ನಿಮ್ಮ ಹೃದಯವನ್ನೂ ಮತ್ತು ಸ್ವಭಾವವನ್ನೂ ನೂತನಪಡಿಸಿಕೊಳ್ಳಿರಿ; ಇಸ್ರಾಯೇಲ್ ವಂಶದವರೇ, ನೀವು ಸಾಯಬೇಕೇ?
Lançai fora de vós todas as vossas transgressões com que transgredistes, e fazei para vós um novo coração e um novo espírito. Pois por que tendes que morrer, ó casa de Israel?
32 ೩೨ ಯಾರ ಸಾವಿನಲ್ಲೂ ನನಗೆ ಸಂತೋಷವಿಲ್ಲ; ಪಾಪದಿಂದ ತಿರುಗಿಕೊಂಡು ಜೀವಿಸಿರಿ” ಇದು ಕರ್ತನಾದ ಯೆಹೋವನ ನುಡಿ.
Porque eu não me agrado da morte do que morre, diz o Senhor DEUS; convertei-vos, pois, e vivereis.