< ಯೆಹೆಜ್ಕೇಲನು 2 >

1 ಯೆಹೋವನು ನನಗೆ, “ನರಪುತ್ರನೇ, ಎದ್ದು ನಿಂತುಕೋ, ನಿನ್ನ ಸಂಗಡ ಮಾತನಾಡುವೆನು” ಎಂದು ಹೇಳಿದನು.
וַיֹּ֖אמֶר אֵלָ֑י בֶּן־אָדָם֙ עֲמֹ֣ד עַל־רַגְלֶ֔יךָ וַאֲדַבֵּ֖ר אֹתָֽךְ׃
2 ಆತನು ಈ ಮಾತನ್ನು ಹೇಳುವಾಗ ದೇವರಾತ್ಮವು ನನ್ನೊಳಗೆ ಪ್ರವೇಶಿಸಿ, ನಾನು ಎದ್ದು ನಿಂತುಕೊಳ್ಳುವಂತೆ ಮಾಡಿತು; ಆಗ ನನ್ನೊಡನೆ ಮಾತನಾಡಿದಾತನ ನುಡಿಯನ್ನು ಕೇಳಿದೆನು.
וַתָּ֧בֹא בִ֣י ר֗וּחַ כַּֽאֲשֶׁר֙ דִּבֶּ֣ר אֵלַ֔י וַתַּעֲמִדֵ֖נִי עַל־רַגְלָ֑י וָאֶשְׁמַ֕ע אֵ֖ת מִדַּבֵּ֥ר אֵלָֽי׃ פ
3 ಆತನು ನನಗೆ ಹೀಗೆ ಹೇಳಿದನು, “ನರಪುತ್ರನೇ, ನನ್ನ ವಿರುದ್ಧವಾಗಿ ತಿರುಗಿಬಿದ್ದು ದ್ರೋಹಮಾಡಿದ ಜನಾಂಗದವರಾದ ಇಸ್ರಾಯೇಲರ ಬಳಿಗೆ ನಿನ್ನನ್ನು ಕಳುಹಿಸುತ್ತೇನೆ; ಈ ದಿನದವರೆಗೆ ಅವರೂ, ಅವರ ಪೂರ್ವಿಕರೂ ನನ್ನ ವಿರುದ್ಧವಾಗಿ ಪಾಪಮಾಡುತ್ತಲೇ ಇದ್ದಾರೆ.
וַיֹּ֣אמֶר אֵלַ֗י בֶּן־אָדָם֙ שֹׁולֵ֨חַ אֲנִ֤י אֹֽותְךָ֙ אֶל־בְּנֵ֣י יִשְׂרָאֵ֔ל אֶל־גֹּויִ֥ם הַמֹּורְדִ֖ים אֲשֶׁ֣ר מָרְדוּ־בִ֑י הֵ֤מָּה וַאֲבֹותָם֙ פָּ֣שְׁעוּ בִ֔י עַד־עֶ֖צֶם הַיֹּ֥ום הַזֶּֽה׃
4 “ನಾನು ಯಾವ ಸಂತಾನದವರ ಬಳಿಗೆ ನಿನ್ನನ್ನು ಕಳುಹಿಸುತ್ತೇನೋ ಆ ಸಂತಾನದವರು ನಾಚಿಕೆಗೆಟ್ಟವರೂ, ಹಟಗಾರರೂ ಆಗಿರುತ್ತಾರೆ; ನೀನು ಅವರಿಗೆ, ‘ಕರ್ತನಾದ ಯೆಹೋವನು ಇಂತೆನ್ನುತ್ತಾನೆ’ ಎಂದು ನುಡಿ.
וְהַבָּנִ֗ים קְשֵׁ֤י פָנִים֙ וְחִזְקֵי־לֵ֔ב אֲנִ֛י שֹׁולֵ֥חַ אֹותְךָ֖ אֲלֵיהֶ֑ם וְאָמַרְתָּ֣ אֲלֵיהֶ֔ם כֹּ֥ה אָמַ֖ר אֲדֹנָ֥י יְהֹוִֽה׃
5 ಅವರು ಕೇಳಲಿ ಅಥವಾ ಕೇಳದೇ ಇರಲಿ ಏಕೆಂದರೆ ಅವರು ತಿರುಗಿ ಬೀಳುವ ವಂಶದವರು. ಆದರೆ ಒಬ್ಬ ಪ್ರವಾದಿಯು ತಮ್ಮ ಮಧ್ಯದಲ್ಲಿ ಇದ್ದಾನೆಂದು ತಿಳಿದುಕೊಳ್ಳುವರು.”
וְהֵ֙מָּה֙ אִם־יִשְׁמְע֣וּ וְאִם־יֶחְדָּ֔לוּ כִּ֛י בֵּ֥ית מְרִ֖י הֵ֑מָּה וְיָ֣דְע֔וּ כִּ֥י נָבִ֖יא הָיָ֥ה בְתֹוכָֽם׃ פ
6 “ನರಪುತ್ರನೇ, ನೀನು ಮುಳ್ಳುಪೊದೆಗಳಲ್ಲಿ ಸಿಕ್ಕಿಕೊಂಡು, ಚೇಳುಗಳ ನಡುವೆ ವಾಸಿಸುವಂತೆ ಅವರ ಮಧ್ಯದಲ್ಲಿದ್ದರೂ ಅವರಿಗೆ ಭಯಪಡಬೇಡ, ಅವರ ಗದರಿಕೆಗೆ ಹೆದರದಿರು; ಅವರು ತಿರುಗಿ ಬೀಳುವ ವಂಶದವರು; ಅವರ ಬಿರುನುಡಿಗೆ ಭಯಪಡಬೇಡ, ಅವರ ಬಿರುನೋಟಕ್ಕೆ ಹೆದರದಿರು.
וְאַתָּ֣ה בֶן־אָ֠דָם אַל־תִּירָ֨א מֵהֶ֜ם וּמִדִּבְרֵיהֶ֣ם אַל־תִּירָ֗א כִּ֣י סָרָבִ֤ים וְסַלֹּונִים֙ אֹותָ֔ךְ וְאֶל־עַקְרַבִּ֖ים אַתָּ֣ה יֹושֵׁ֑ב מִדִּבְרֵיהֶ֤ם אַל־תִּירָא֙ וּמִפְּנֵיהֶ֣ם אַל־תֵּחָ֔ת כִּ֛י בֵּ֥ית מְרִ֖י הֵֽמָּה׃
7 ಅವರು ಕೇಳಿದರೂ, ಕೇಳದೆ ಹೋದರೂ ನೀನು ನನ್ನ ಮಾತುಗಳನ್ನು ಅವರಿಗೆ ಹೇಳಬೇಕು; ಅವರು ಖಂಡಿತವಾಗಿ ದ್ರೋಹಿಗಳೇ.”
וְדִבַּרְתָּ֤ אֶת־דְּבָרַי֙ אֲלֵיהֶ֔ם אִֽם־יִשְׁמְע֖וּ וְאִם־יֶחְדָּ֑לוּ כִּ֥י מְרִ֖י הֵֽמָּה׃ פ
8 ಇದಲ್ಲದೆ ಆತನು, “ನರಪುತ್ರನೇ, ನಾನು ನಿನಗೆ ಹೇಳುವ ಮಾತನ್ನು ಕೇಳು; ಅವಿಧೇಯರಾದ ಆ ವಂಶದವರಂತೆ ನೀನು ಅವಿಧೇಯನಾಗಬೇಡ; ನಾನು ಕೊಡುವುದನ್ನು ಬಾಯಿದೆರೆದು ತಿಂದುಬಿಡು” ಅಂದನು.
וְאַתָּ֣ה בֶן־אָדָ֗ם שְׁמַע֙ אֵ֤ת אֲשֶׁר־אֲנִי֙ מְדַבֵּ֣ר אֵלֶ֔יךָ אַל־תְּהִי־מֶ֖רִי כְּבֵ֣ית הַמֶּ֑רִי פְּצֵ֣ה פִ֔יךָ וֶאֱכֹ֕ל אֵ֥ת אֲשֶׁר־אֲנִ֖י נֹתֵ֥ן אֵלֶֽיךָ׃
9 ಇಗೋ, ನಾನು ನೋಡುತ್ತಿರಲಾಗಿ ಒಂದು ಕೈ ನನ್ನ ಕಡೆಗೆ ಚಾಚಿತ್ತು, ಇಗೋ ಅದರಲ್ಲಿ ಗ್ರಂಥದ ಸುರುಳಿಯು ಕಾಣಿಸಿತು.
וָאֶרְאֶ֕ה וְהִנֵּה־יָ֖ד שְׁלוּחָ֣ה אֵלָ֑י וְהִנֵּה־בֹ֖ו מְגִלַּת־סֵֽפֶר׃
10 ೧೦ ಆತನು ಆ ಸುರುಳಿಯನ್ನು ನನ್ನೆದುರಿನಲ್ಲಿ ಬಿಚ್ಚಿದನು; ಅದರ ಎರಡು ಪಕ್ಕಗಳಲ್ಲಿಯೂ ಬರೆದಿತ್ತು; ಅದರಲ್ಲಿ ಬರೆದದ್ದು ಪ್ರಲಾಪ, ಗೋಳಾಟ, ಶೋಕ ಇವುಗಳೇ.
וַיִּפְרֹ֤שׂ אֹותָהּ֙ לְפָנַ֔י וְהִ֥יא כְתוּבָ֖ה פָּנִ֣ים וְאָחֹ֑ור וְכָת֣וּב אֵלֶ֔יהָ קִנִ֥ים וָהֶ֖גֶה וָהִֽי׃ ס

< ಯೆಹೆಜ್ಕೇಲನು 2 >