< ಯೆಹೆಜ್ಕೇಲನು 20 >

1 ಏಳನೆಯ ವರ್ಷದ, ಐದನೆಯ ತಿಂಗಳಿನ ಹತ್ತನೆಯ ದಿನದಲ್ಲಿ ಇಸ್ರಾಯೇಲಿನ ಹಿರಿಯರಲ್ಲಿ ಕೆಲವರು ಯೆಹೋವನನ್ನು ಪ್ರಶ್ನೆ ಕೇಳುವುದಕ್ಕೆ ಬಂದು ನನ್ನ ಮುಂದೆ ಕುಳಿತುಕೊಂಡರು.
וַיְהִ֣י ׀ בַּשָּׁנָ֣ה הַשְּׁבִיעִ֗ית בַּֽחֲמִשִׁי֙ בֶּעָשׂ֣וֹר לַחֹ֔דֶשׁ בָּ֧אוּ אֲנָשִׁ֛ים מִזִּקְנֵ֥י יִשְׂרָאֵ֖ל לִדְרֹ֣שׁ אֶת־יְהוָ֑ה וַיֵּשְׁב֖וּ לְפָנָֽי׃ ס
2 ಆಗ ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು,
וַיְהִ֥י דְבַר־יְהוָ֖ה אֵלַ֥י לֵאמֹֽר׃
3 “ನರಪುತ್ರನೇ, ಇಸ್ರಾಯೇಲಿನ ಹಿರಿಯರನ್ನು ಸಂಬೋಧಿಸಿ ಹೀಗೆ ಹೇಳು, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ನನ್ನನ್ನು ಪ್ರಶ್ನೆ ಕೇಳುವುದಕ್ಕೆ ಬಂದಿರೋ? ನನ್ನ ಜೀವದಾಣೆ, ನಾನು ನಿಮಗೆ ಉತ್ತರ ಕೊಡುವುದೇ ಇಲ್ಲ’” ಇದು ಕರ್ತನಾದ ಯೆಹೋವನ ನುಡಿ.
בֶּן־אָדָ֗ם דַּבֵּ֞ר אֶת־זִקְנֵ֤י יִשְׂרָאֵל֙ וְאָמַרְתָּ֣ אֲלֵהֶ֔ם כֹּ֤ה אָמַר֙ אֲדֹנָ֣י יְהוִ֔ה הֲלִדְרֹ֥שׁ אֹתִ֖י אַתֶּ֣ם בָּאִ֑ים חַי־אָ֙נִי֙ אִם־אִדָּרֵ֣שׁ לָכֶ֔ם נְאֻ֖ם אֲדֹנָ֥י יְהוִֽה׃
4 “ನರಪುತ್ರನೇ, ಇವರಿಗೆ ನ್ಯಾಯತೀರಿಸಲು ನಿನ್ನ ಮನಸ್ಸು ಸ್ಥಿರವಾಗಿದೆಯೋ? ಇವರ ಪೂರ್ವಿಕರ ದುರಾಚಾರಗಳನ್ನು ಇವರಿಗೆ ಹೀಗೆ ತಿಳಿಸು,
הֲתִשְׁפֹּ֣ט אֹתָ֔ם הֲתִשְׁפּ֖וֹט בֶּן־אָדָ֑ם אֶת־תּוֹעֲבֹ֥ת אֲבוֹתָ֖ם הוֹדִיעֵֽם׃
5 ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ಯಾವ ದಿನದಲ್ಲಿ ನಾನು ಇಸ್ರಾಯೇಲನ್ನು ಆರಿಸಿಕೊಂಡು, ಯಾಕೋಬ ಸಂತಾನದವರಿಗೆ ಮಾತುಕೊಟ್ಟು, ನಾನು ನಿಮ್ಮ ದೇವರಾದ ಯೆಹೋವನು’ ಎಂದು ಐಗುಪ್ತ ದೇಶದಲ್ಲಿ ಪ್ರಮಾಣ ಪೂರ್ವಕವಾಗಿ ತಿಳಿಯಪಡಿಸಿದೆನೋ,
וְאָמַרְתָּ֣ אֲלֵיהֶ֗ם כֹּֽה־אָמַר֮ אֲדֹנָ֣י יְהוִה֒ בְּיוֹם֙ בָּחֳרִ֣י בְיִשְׂרָאֵ֔ל וָאֶשָּׂ֣א יָדִ֗י לְזֶ֙רַע֙ בֵּ֣ית יַֽעֲקֹ֔ב וָאִוָּדַ֥ע לָהֶ֖ם בְּאֶ֣רֶץ מִצְרָ֑יִם וָאֶשָּׂ֨א יָדִ֤י לָהֶם֙ לֵאמֹ֔ר אֲנִ֖י יְהוָ֥ה אֱלֹהֵיכֶֽם׃
6 ಆ ದಿನದಲ್ಲಿ ನಾನು ಅವರಿಗೆ, ‘ಸಕಲ ದೇಶ ಶಿರೋಮಣಿಯಾದ ದೇಶವನ್ನು ನಿಮಗಾಗಿ ನೋಡಿದ್ದೇನೆ; ನಾನು ನಿಮ್ಮನ್ನು ಐಗುಪ್ತ ದೇಶದೊಳಗಿಂದ ಉದ್ಧರಿಸಿ ಹಾಲೂ ಮತ್ತು ಜೇನೂ ಹರಿಯುವ ಆ ದೇಶಕ್ಕೆ ಸೇರಿಸುವೆನು’ ಎಂದು ಪ್ರಮಾಣಮಾಡಿದೆನು.
בַּיּ֣וֹם הַה֗וּא נָשָׂ֤אתִי יָדִי֙ לָהֶ֔ם לְהֽוֹצִיאָ֖ם מֵאֶ֣רֶץ מִצְרָ֑יִם אֶל־אֶ֜רֶץ אֲשֶׁר־תַּ֣רְתִּי לָהֶ֗ם זָבַ֤ת חָלָב֙ וּדְבַ֔שׁ צְבִ֥י הִ֖יא לְכָל־הָאֲרָצֽוֹת׃
7 ‘ನೀವೆಲ್ಲರೂ ನಿಮ್ಮ ಕಣ್ಣಿಗೆ ಕಾಣುವ ಇಷ್ಟವಾದ ಅಸಹ್ಯ ವಸ್ತುಗಳನ್ನು ಬಿಸಾಡಿಬಿಡಿರಿ, ಐಗುಪ್ತದ ವಿಗ್ರಹಗಳಿಂದ ನಿಮ್ಮನ್ನು ಹೊಲಸು ಮಾಡಿಕೊಳ್ಳಬೇಡಿರಿ; ನಾನು ನಿಮ್ಮ ದೇವರಾದ ಯೆಹೋವನು’” ಎಂಬುದಾಗಿ ಅವರನ್ನು ಎಚ್ಚರಿಸಿದೆನು.
וָאֹמַ֣ר אֲלֵהֶ֗ם אִ֣ישׁ שִׁקּוּצֵ֤י עֵינָיו֙ הַשְׁלִ֔יכוּ וּבְגִלּוּלֵ֥י מִצְרַ֖יִם אַל־תִּטַּמָּ֑אוּ אֲנִ֖י יְהוָ֥ה אֱלֹהֵיכֶֽם׃
8 “‘ಅವರಾದರೋ ನನ್ನ ಮಾತನ್ನು ನಿರಾಕರಿಸಿ, ನನ್ನ ಮೇಲೆ ತಿರುಗಿ ಬಿದ್ದರು; ತಮ್ಮ ಕಣ್ಣಿಗೆ ಕಾಣುವ ಇಷ್ಟವಾದ ಅಸಹ್ಯ ವಸ್ತುಗಳನ್ನು ಯಾರೂ ಬಿಸಾಡಿಬಿಡಲಿಲ್ಲ, ಐಗುಪ್ತದ ವಿಗ್ರಹಗಳನ್ನು ತ್ಯಜಿಸಲಿಲ್ಲ; ಆಗ ನಾನು ಇವರ ಮೇಲೆ ಐಗುಪ್ತ ದೇಶದೊಳಗೆ ನನ್ನ ರೋಷಾಗ್ನಿಯನ್ನು ಸುರಿಸಿ ನನ್ನ ಕೋಪವನ್ನು ತೀರಿಸಿಕೊಳ್ಳುವೆನು’ ಅಂದುಕೊಂಡೆನು.
וַיַּמְרוּ־בִ֗י וְלֹ֤א אָבוּ֙ לִּשְׁמֹ֣עַ אֵלַ֔י אִ֣ישׁ אֶת־שִׁקּוּצֵ֤י עֵֽינֵיהֶם֙ לֹ֣א הִשְׁלִ֔יכוּ וְאֶת־גִּלּוּלֵ֥י מִצְרַ֖יִם לֹ֣א עָזָ֑בוּ וָאֹמַ֞ר לִשְׁפֹּ֧ךְ חֲמָתִ֣י עֲלֵיהֶ֗ם לְכַלּ֤וֹת אַפִּי֙ בָּהֶ֔ם בְּת֖וֹךְ אֶ֥רֶץ מִצְרָֽיִם׃
9 ‘ಆದರೂ ನಿಮ್ಮನ್ನು ಐಗುಪ್ತ ದೇಶದೊಳಗಿಂದ ಪಾರುಮಾಡುವೆನು ಎಂಬುದಾಗಿ ಜನಾಂಗಗಳ ಮುಂದೆಯೇ ನನ್ನನ್ನು ಇವರಿಗೆ ಪ್ರಕಟಿಸಿಕೊಂಡೆನಲ್ಲಾ ಎಂದು ಯೋಚಿಸಿ, ಅವರ ಸುತ್ತಣ ಆ ಜನಾಂಗಗಳ ಮುಂದೆ ನನ್ನ ಹೆಸರು ಅಪಕೀರ್ತಿಗೆ ಗುರಿಯಾಗದಂತೆ ನನ್ನ ಹೆಸರಿನ ನಿಮಿತ್ತವೇ ಸಹಿಸಿಕೊಂಡೆನು.
וָאַ֙עַשׂ֙ לְמַ֣עַן שְׁמִ֔י לְבִלְתִּ֥י הֵחֵ֛ל לְעֵינֵ֥י הַגּוֹיִ֖ם אֲשֶׁר־הֵ֣מָּה בְתוֹכָ֑ם אֲשֶׁ֨ר נוֹדַ֤עְתִּי אֲלֵיהֶם֙ לְעֵ֣ינֵיהֶ֔ם לְהוֹצִיאָ֖ם מֵאֶ֥רֶץ מִצְרָֽיִם׃
10 ೧೦ ಆಗ ನಾನು ಅವರನ್ನು ಐಗುಪ್ತ ದೇಶದೊಳಗಿಂದ ಬಿಡಿಸಿ, ಅರಣ್ಯಕ್ಕೆ ಕರೆದು ತರಲು,
וָאֽוֹצִיאֵ֖ם מֵאֶ֣רֶץ מִצְרָ֑יִם וָאֲבִאֵ֖ם אֶל־הַמִּדְבָּֽר׃
11 ೧೧ ಕೈಗೊಳ್ಳುವವರಿಗೆ ಜೀವಾಧಾರವಾದ ನನ್ನ ಆಜ್ಞಾವಿಧಿಗಳನ್ನು ಅವರಿಗೆ ತಿಳಿಸಿಕೊಟ್ಟೆನು.
וָאֶתֵּ֤ן לָהֶם֙ אֶת־חֻקּוֹתַ֔י וְאֶת־מִשְׁפָּטַ֖י הוֹדַ֣עְתִּי אוֹתָ֑ם אֲשֶׁ֨ר יַעֲשֶׂ֥ה אוֹתָ֛ם הָאָדָ֖ם וָחַ֥י בָּהֶֽם׃
12 ೧೨ ಇದಲ್ಲದೆ ತಮ್ಮನ್ನು ಪರಿಶುದ್ಧ ಜನರನ್ನಾಗಿ ಮಾಡಿರುವ ಯೆಹೋವನು ನಾನೇ ಎಂದು ಅವರು ತಿಳಿದುಕೊಳ್ಳುವಂತೆ ನನಗೂ, ಅವರಿಗೂ ಗುರುತಾದ ಸಬ್ಬತ್ ದಿನಗಳನ್ನು ಅವರಿಗೆ ಗುರುತಾಗಿ ನೇಮಿಸಿದೆನು.
וְגַ֤ם אֶת־שַׁבְּתוֹתַי֙ נָתַ֣תִּי לָהֶ֔ם לִהְי֣וֹת לְא֔וֹת בֵּינִ֖י וּבֵֽינֵיהֶ֑ם לָדַ֕עַת כִּ֛י אֲנִ֥י יְהוָ֖ה מְקַדְּשָֽׁם׃
13 ೧೩ “‘ಆದರೆ ಇಸ್ರಾಯೇಲ್ ವಂಶದವರು ಅರಣ್ಯದಲ್ಲಿ ನನ್ನ ಮೇಲೆ ತಿರುಗಿ ಬಿದ್ದರು. ಕೈಗೊಳ್ಳುವವರಿಗೆ ಜೀವಾಧಾರವಾದ ನನ್ನ ಆಜ್ಞಾವಿಧಿಗಳನ್ನು ಅನುಸರಿಸದೆ ನಿರಾಕರಿಸಿದರು, ನಾನು ನೇಮಿಸಿದ ಸಬ್ಬತ್ ದಿನಗಳನ್ನು ವಿಶೇಷವಾಗಿ ಹೊಲೆಮಾಡಿದರು; ಆಗ ನಾನು ಇವರ ಮೇಲೆ ಅರಣ್ಯದೊಳಗೆ ನನ್ನ ರೋಷಾಗ್ನಿಯನ್ನು ಸುರಿಸಿ ಇವರನ್ನು ಧ್ವಂಸಮಾಡುವೆನು’ ಅಂದುಕೊಂಡೆನು.
וַיַּמְרוּ־בִ֨י בֵֽית־יִשְׂרָאֵ֜ל בַּמִּדְבָּ֗ר בְּחֻקּוֹתַ֨י לֹא־הָלָ֜כוּ וְאֶת־מִשְׁפָּטַ֣י מָאָ֗סוּ אֲשֶׁר֩ יַעֲשֶׂ֨ה אֹתָ֤ם הָֽאָדָם֙ וָחַ֣י בָּהֶ֔ם וְאֶת־שַׁבְּתֹתַ֖י חִלְּל֣וּ מְאֹ֑ד וָאֹמַ֞ר לִשְׁפֹּ֨ךְ חֲמָתִ֧י עֲלֵיהֶ֛ם בַּמִּדְבָּ֖ר לְכַלּוֹתָֽם׃
14 ೧೪ ‘ಆದರೂ ಯಾವ ಜನಾಂಗಗಳ ಮುಂದೆ ಅವರನ್ನು ಪಾರುಮಾಡಿದೆನೋ, ಆ ಜನಾಂಗಗಳ ಮುಂದೆ ನನ್ನ ಹೆಸರು ಅಪಕೀರ್ತಿಗೆ ಗುರಿಯಾಗಬಾರದೆಂದು ನನ್ನ ಹೆಸರಿನ ನಿಮಿತ್ತವೇ ಸಹಿಸಿಕೊಂಡೆನು.
וָאֶעֱשֶׂ֖ה לְמַ֣עַן שְׁמִ֑י לְבִלְתִּ֤י הֵחֵל֙ לְעֵינֵ֣י הַגּוֹיִ֔ם אֲשֶׁ֥ר הוֹצֵאתִ֖ים לְעֵינֵיהֶֽם׃
15 ೧೫ ಆ ಮೇಲೆ ಸಕಲ ದೇಶ ಶಿರೋಮಣಿಯಾದ ಯಾವ ದೇಶವನ್ನು ವಾಗ್ದಾನಮಾಡಿದೆನೋ, ಹಾಲೂ ಮತ್ತು ಜೇನು ಹರಿಯುವ ಆ ದೇಶಕ್ಕೆ ನಿಮ್ಮನ್ನು ಸೇರಿಸುವುದಿಲ್ಲ ಎಂದು ಅರಣ್ಯದಲ್ಲಿ ಅವರಿಗೆ ಪ್ರಮಾಣ ಮಾಡಿದೆನು.
וְגַם־אֲנִ֗י נָשָׂ֧אתִי יָדִ֛י לָהֶ֖ם בַּמִּדְבָּ֑ר לְבִלְתִּי֩ הָבִ֨יא אוֹתָ֜ם אֶל־הָאָ֣רֶץ אֲשֶׁר־נָתַ֗תִּי זָבַ֤ת חָלָב֙ וּדְבַ֔שׁ צְבִ֥י הִ֖יא לְכָל־הָאֲרָצֽוֹת׃
16 ೧೬ ಏಕೆಂದರೆ ಅವರ ಹೃದಯವು ತಮ್ಮ ವಿಗ್ರಹಗಳಲ್ಲಿ ಆಸಕ್ತರಾಗಿ, ಅವರು ನನ್ನ ಆಜ್ಞಾವಿಧಿಗಳನ್ನು ಅನುಸರಿಸದೆ ನಿರಾಕರಿಸಿ, ನಾನು ನೇಮಿಸಿದ ಸಬ್ಬತ್ ದಿನಗಳನ್ನು ಹೊಲೆ ಮಾಡಿದವರಾಗಿದ್ದರು.
יַ֜עַן בְּמִשְׁפָּטַ֣י מָאָ֗סוּ וְאֶת־חֻקּוֹתַי֙ לֹא־הָלְכ֣וּ בָהֶ֔ם וְאֶת־שַׁבְּתוֹתַ֖י חִלֵּ֑לוּ כִּ֛י אַחֲרֵ֥י גִלּוּלֵיהֶ֖ם לִבָּ֥ם הֹלֵֽךְ׃
17 ೧೭ ಆದರೂ ನಾನು ಅವರನ್ನು ನಾಶ ಮಾಡಲಿಲ್ಲ; ನನ್ನ ಕಟಾಕ್ಷವು ಅವರನ್ನು ಉಳಿಸಿತು; ನಾನು ಅವರನ್ನು ಅರಣ್ಯದಲ್ಲಿ ನಿರ್ಮೂಲಮಾಡಲಿಲ್ಲ.’”
וַתָּ֧חָס עֵינִ֛י עֲלֵיהֶ֖ם מִֽשַּׁחֲתָ֑ם וְלֹֽא־עָשִׂ֧יתִי אוֹתָ֛ם כָּלָ֖ה בַּמִּדְבָּֽר׃
18 ೧೮ ಆ ಮೇಲೆ ನಾನು ಅರಣ್ಯದಲ್ಲಿ ಅವರ ಸಂತಾನದವರಿಗೆ, “ನೀವು ನಿಮ್ಮ ತಂದೆಗಳ ಆಜ್ಞೆಗಳನ್ನು ಅನುಸರಿಸದೆ, ಅವರ ವಿಧಿಗಳನ್ನು ಕೈಕೊಳ್ಳದೆ, ಅವರ ವಿಗ್ರಹಗಳಿಂದ ನಿಮ್ಮನ್ನು ಹೊಲಸು ಮಾಡಿಕೊಳ್ಳದೆ ಇರಬೇಕು.
וָאֹמַ֤ר אֶל־בְּנֵיהֶם֙ בַּמִּדְבָּ֔ר בְּחוּקֵּ֤י אֲבֽוֹתֵיכֶם֙ אַל־תֵּלֵ֔כוּ וְאֶת־מִשְׁפְּטֵיהֶ֖ם אַל־תִּשְׁמֹ֑רוּ וּבְגִלּוּלֵיהֶ֖ם אַל־תִּטַּמָּֽאוּ ׃
19 ೧೯ ನಾನು ನಿಮ್ಮ ದೇವರಾದ ಯೆಹೋವನು; ನೀವು ನನ್ನ ಆಜ್ಞೆಗಳನ್ನು ಅನುಸರಿಸಿ, ನನ್ನ ವಿಧಿಗಳನ್ನು ಕೈಕೊಂಡು ನಡೆಯಿರಿ.
אֲנִי֙ יְהוָ֣ה אֱלֹהֵיכֶ֔ם בְּחֻקּוֹתַ֖י לֵ֑כוּ וְאֶת־מִשְׁפָּטַ֥י שִׁמְר֖וּ וַעֲשׂ֥וּ אוֹתָֽם׃
20 ೨೦ ನಾನು ನೇಮಿಸಿದ ಸಬ್ಬತ್ ದಿನಗಳನ್ನು ನನ್ನ ಪರಿಶುದ್ಧ ದಿನಗಳೆಂದು ಆಚರಿಸಿರಿ; ನಾನು ನಿಮ್ಮ ದೇವರಾದ ಯೆಹೋವನು ಎಂದು ನೀವು ತಿಳಿದುಕೊಳ್ಳುವಂತೆ ಅವು ನಿಮಗೂ ಮತ್ತು ನನಗೂ ಗುರುತಾಗಿರುವುವು” ಎಂದು ಹೇಳಿದೆನು.
וְאֶת־שַׁבְּתוֹתַ֖י קַדֵּ֑שׁוּ וְהָי֤וּ לְאוֹת֙ בֵּינִ֣י וּבֵֽינֵיכֶ֔ם לָדַ֕עַת כִּ֛י אֲנִ֥י יְהוָ֖ה אֱלֹהֵיכֶֽם׃
21 ೨೧ “ಆದರೆ ಆ ಸಂತಾನದವರಾದರೋ ನನ್ನ ಮೇಲೆ ತಿರುಗಿ ಬಿದ್ದರು; ನನ್ನ ಆಜ್ಞೆಗಳನ್ನು ಅನುಸರಿಸಲಿಲ್ಲ; ಕೈಗೊಂಡವರಿಗೆ ಜೀವಾಧಾರವಾದ ನನ್ನ ವಿಧಿಗಳನ್ನು ಅನುಸರಿಸಿ ನಡೆಯಲಿಲ್ಲ; ನಾನು ನೇಮಿಸಿದ ಸಬ್ಬತ್ ದಿನಗಳನ್ನು ಹೊಲೆ ಮಾಡಿದರು; ಆದುದರಿಂದ ನಾನು ಅರಣ್ಯದಲ್ಲಿ ಇವರ ಮೇಲೆ ನನ್ನ ರೋಷಾಗ್ನಿಯನ್ನು ಸುರಿಸಿ, ನನ್ನ ಕೋಪವನ್ನು ತೀರಿಸಿಕೊಳ್ಳುವೆನು” ಅಂದುಕೊಂಡೆನು.
וַיַּמְרוּ־בִ֣י הַבָּנִ֗ים בְּחֻקּוֹתַ֣י לֹֽא־הָ֠לָכוּ וְאֶת־מִשְׁפָּטַ֨י לֹא־שָׁמְר֜וּ לַעֲשׂ֣וֹת אוֹתָ֗ם אֲשֶׁר֩ יַעֲשֶׂ֨ה אוֹתָ֤ם הָֽאָדָם֙ וָחַ֣י בָּהֶ֔ם אֶת־שַׁבְּתוֹתַ֖י חִלֵּ֑לוּ וָאֹמַ֞ר לִשְׁפֹּ֧ךְ חֲמָתִ֣י עֲלֵיהֶ֗ם לְכַלּ֥וֹת אַפִּ֛י בָּ֖ם בַּמִּדְבָּֽר׃
22 ೨೨ “ಆದರೂ ನಾನು ಯಾವ ಜನಾಂಗಗಳ ಮುಂದೆ ಅವರನ್ನು ಪಾರು ಮಾಡಿದೆನೋ ಆ ಜನಾಂಗಗಳ ಮುಂದೆ ನನ್ನ ಹೆಸರು ಅಪಕೀರ್ತಿಗೆ ಗುರಿಯಾಗಬಾರದೆಂದು ನನ್ನ ಹೆಸರಿನ ನಿಮಿತ್ತವೇ ಸಹಿಸಿಕೊಂಡು ಕೈಯನ್ನು ಹಿಂದಕ್ಕೆ ತೆಗೆದುಕೊಂಡೆನು.
וַהֲשִׁבֹ֙תִי֙ אֶת־יָדִ֔י וָאַ֖עַשׂ לְמַ֣עַן שְׁמִ֑י לְבִלְתִּ֤י הֵחֵל֙ לְעֵינֵ֣י הַגּוֹיִ֔ם אֲשֶׁר־הוֹצֵ֥אתִי אוֹתָ֖ם לְעֵינֵיהֶֽם׃
23 ೨೩ ನಾನು ಅವರನ್ನು ಅನ್ಯಜನಾಂಗಗಳಲ್ಲಿ ಚದರಿಸುತ್ತೇನೆಂದೂ ದೇಶದಲ್ಲಿ ಹರಡಿಸುತ್ತೇನೆಂದೂ ಮರುಭೂಮಿಯಲ್ಲಿ ಪ್ರಮಾಣ ಮಾಡಿ ಹೇಳಿದೆ.
גַּם־אֲנִ֗י נָשָׂ֧אתִי אֶת־יָדִ֛י לָהֶ֖ם בַּמִּדְבָּ֑ר לְהָפִ֤יץ אֹתָם֙ בַּגּוֹיִ֔ם וּלְזָר֥וֹת אוֹתָ֖ם בָּאֲרָצֽוֹת׃
24 ೨೪ ಏಕೆಂದರೆ ನನ್ನ ಜನರು ನನ್ನ ಆಜ್ಞೆಗಳನ್ನು ಕೈಕೊಳ್ಳದೆ, ನನ್ನ ವಿಧಿಗಳನ್ನು ನಿರಾಕರಿಸಿ ನಾನು ನೇಮಿಸಿದ ಸಬ್ಬತ್ ದಿನಗಳನ್ನು ಹೊಲೆಮಾಡಿ, ತಮ್ಮ ಪೂರ್ವಿಕರ ವಿಗ್ರಹಗಳ ಮೇಲೆ ಕಣ್ಣುಹಾಕಿದ್ದರಿಂದ, ನಾನು ನಿಮ್ಮನ್ನು ಜನಾಂಗಗಳಲ್ಲಿ ಚದರಿಸಿ, ದೇಶ ದೇಶಗಳಿಗೆ ಚೆಲ್ಲಾಪಿಲ್ಲಿಯಾಗಿಸುವೆನು.” ಎಂದು ಅರಣ್ಯದಲ್ಲಿ ಅವರಿಗೆ ಪ್ರಮಾಣಮಾಡಿದೆನು.
יַ֜עַן מִשְׁפָּטַ֤י לֹֽא־עָשׂוּ֙ וְחֻקּוֹתַ֣י מָאָ֔סוּ וְאֶת־שַׁבְּתוֹתַ֖י חִלֵּ֑לוּ וְאַחֲרֵי֙ גִּלּוּלֵ֣י אֲבוֹתָ֔ם הָי֖וּ עֵינֵיהֶֽם׃
25 ೨೫ “ಇದಲ್ಲದೆ, ನಾನೇ ಯೆಹೋವನು ಎಂದು ಅವರು ತಿಳಿದುಕೊಳ್ಳುವಂತೆ ನಾನು ಅವರಿಗೆ ಅಹಿತವಾದ ಆಜ್ಞೆಗಳನ್ನೂ, ಜೀವಾಧಾರವಲ್ಲದ ವಿಧಿಗಳನ್ನೂ ನೇಮಿಸಿದೆನು.
וְגַם־אֲנִי֙ נָתַ֣תִּי לָהֶ֔ם חֻקִּ֖ים לֹ֣א טוֹבִ֑ים וּמִ֨שְׁפָּטִ֔ים לֹ֥א יִֽחְי֖וּ בָּהֶֽם׃
26 ೨೬ ಅವರು ತಮ್ಮ ಚೊಚ್ಚಲಮಕ್ಕಳನ್ನು ಆಹುತಿಕೊಟ್ಟು ಅರ್ಪಿಸುತ್ತಿದ್ದ ಬಲಿಗಳಿಂದಲೇ ಅವರನ್ನು ಹೊಲೆಗೆಡಿಸಿ, ಕೇವಲ ದುರಾವಸ್ಥೆಗೆ ತಂದೆನು.”
וָאֲטַמֵּ֤א אוֹתָם֙ בְּמַתְּנוֹתָ֔ם בְּהַעֲבִ֖יר כָּל־פֶּ֣טֶר רָ֑חַם לְמַ֣עַן אֲשִׁמֵּ֔ם לְמַ֙עַן֙ אֲשֶׁ֣ר יֵֽדְע֔וּ אֲשֶׁ֖ר אֲנִ֥י יְהוָֽה׃ ס
27 ೨೭ ಹೀಗಿರಲು, “ನರಪುತ್ರನೇ, ಇಸ್ರಾಯೇಲ್ ವಂಶದವರಿಗೆ ಈ ಮಾತನ್ನು ಹೇಳು, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ನಿಮ್ಮ ಪೂರ್ವಿಕರು ಇನ್ನೂ ಒಂದು ದ್ರೋಹವನ್ನು ಮಾಡಿ ನನ್ನನ್ನು ದೂಷಿಸಿದ್ದಾರೆ.
לָכֵ֞ן דַּבֵּ֨ר אֶל־בֵּ֤ית יִשְׂרָאֵל֙ בֶּן־אָדָ֔ם וְאָמַרְתָּ֣ אֲלֵיהֶ֔ם כֹּ֥ה אָמַ֖ר אֲדֹנָ֣י יְהוִ֑ה ע֗וֹד זֹ֚את גִּדְּפ֤וּ אוֹתִי֙ אֲב֣וֹתֵיכֶ֔ם בְּמַעֲלָ֥ם בִּ֖י מָֽעַל׃
28 ೨೮ ನಾನು ಪ್ರಮಾಣ ಪೂರ್ವಕವಾಗಿ ಅವರಿಗೆ ವಾಗ್ದಾನ ಮಾಡಿದ ದೇಶಕ್ಕೆ ಅವರನ್ನು ಸೇರಿಸಿದ ಮೇಲೆ ಅವರು ಎತ್ತರವಾದ ಎಲ್ಲಾ ಗುಡ್ಡಗಳನ್ನೂ, ಸೊಂಪಾಗಿ ಬೆಳೆದಿರುವ ಎಲ್ಲಾ ಮರಗಳನ್ನೂ ನೋಡಿ ಅಲ್ಲಿ ಯಜ್ಞಪಶುಗಳನ್ನು ವಧಿಸಿ, ನನ್ನನ್ನು ರೇಗಿಸುವ ನೈವೇದ್ಯವನ್ನರ್ಪಿಸಿ, ಸುಗಂಧ ಹೋಮಮಾಡಿ, ಪಾನದ್ರವ್ಯವನ್ನು ಸುರಿದು, ಬಲಿ ಅರ್ಪಿಸುತ್ತಿದ್ದರು.’
וָאֲבִיאֵם֙ אֶל־הָאָ֔רֶץ אֲשֶׁ֤ר נָשָׂ֙אתִי֙ אֶת־יָדִ֔י לָתֵ֥ת אוֹתָ֖הּ לָהֶ֑ם וַיִּרְאוּ֩ כָל־גִּבְעָ֨ה רָמָ֜ה וְכָל־עֵ֣ץ עָבֹ֗ת וַיִּזְבְּחוּ־שָׁ֤ם אֶת־זִבְחֵיהֶם֙ וַיִּתְּנוּ־שָׁם֙ כַּ֣עַס קָרְבָּנָ֔ם וַיָּשִׂ֣ימוּ שָׁ֗ם רֵ֚יחַ נִיח֣וֹחֵיהֶ֔ם וַיַּסִּ֥יכוּ שָׁ֖ם אֶת־נִסְכֵּיהֶֽם׃
29 ೨೯ ನೀವು ಹೋಗುವ, ‘ಬಾಮಾ ಎಂಬ ಪೂಜಾಸ್ಥಾನ ಇದು ಎಂಥ ಸ್ಥಳ?’” (ಇಂದಿನ ವರೆಗೂ ಇಂಥಾ ಪೂಜಾಸ್ಥಾನಗಳಿಗೆ ಬಾಮಾ ಎಂದೇ ಹೆಸರು).
וָאֹמַ֣ר אֲלֵהֶ֔ם מָ֣ה הַבָּמָ֔ה אֲשֶׁר־אַתֶּ֥ם הַבָּאִ֖ים שָׁ֑ם וַיִּקָּרֵ֤א שְׁמָהּ֙ בָּמָ֔ה עַ֖ד הַיּ֥וֹם הַזֶּֽה׃
30 ೩೦ ಇಸ್ರಾಯೇಲ್ ವಂಶದವರಿಗೆ ಹೀಗೆ ಹೇಳು, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನಿಮ್ಮ ಪೂರ್ವಿಕರಂತೆ ನಿಮ್ಮನ್ನು ನೀವೇ ಹೊಲಸು ಮಾಡಿಕೊಳ್ಳುತ್ತೀರೋ? ಅವರು ಪೂಜಿಸುತ್ತಿದ್ದ ಅಸಹ್ಯ ವಸ್ತುಗಳನ್ನು ನೀವೂ ಪೂಜಿಸಿ ದೇವದ್ರೋಹ ಮಾಡುತ್ತೀರೋ?
לָכֵ֞ן אֱמֹ֣ר ׀ אֶל־בֵּ֣ית יִשְׂרָאֵ֗ל כֹּ֤ה אָמַר֙ אֲדֹנָ֣י יְהוִ֔ה הַבְּדֶ֥רֶךְ אֲבֽוֹתֵיכֶ֖ם אַתֶּ֣ם נִטְמְאִ֑ים וְאַחֲרֵ֥י שִׁקּוּצֵיהֶ֖ם אַתֶּ֥ם זֹנִֽים׃
31 ೩೧ ನೀವು ಬಲಿಯರ್ಪಿಸುತ್ತಾ ನಿಮ್ಮ ಮಕ್ಕಳನ್ನು ಆಹುತಿಕೊಟ್ಟು ಇಂದಿನವರೆಗೂ ನಿಮ್ಮನ್ನು ಅಶುದ್ಧ ಮಾಡಿಕೊಳ್ಳುತ್ತಿದ್ದೀರೋ? ಇಸ್ರಾಯೇಲ್ ವಂಶದವರೇ, ನಾನು ನಿಮ್ಮಂಥವರಿಗೆ ದೈವೋತ್ತರವನ್ನು ದಯಪಾಲಿಸಬಹುದೋ? ನನ್ನ ಜೀವದಾಣೆ, ನಿಮಗೆ ದೈವೋತ್ತರವನ್ನು ದಯಪಾಲಿಸುವುದಿಲ್ಲ” ಇದು ಕರ್ತನಾದ ಯೆಹೋವನ ನುಡಿ.
וּבִשְׂאֵ֣ת מַתְּנֹֽתֵיכֶ֡ם בְּֽהַעֲבִיר֩ בְּנֵיכֶ֨ם בָּאֵ֜שׁ אַתֶּם֩ נִטְמְאִ֤֨ים לְכָל־גִּלּֽוּלֵיכֶם֙ עַד־הַיּ֔וֹם וַאֲנִ֛י אִדָּרֵ֥שׁ לָכֶ֖ם בֵּ֣ית יִשְׂרָאֵ֑ל חַי־אָ֗נִי נְאֻם֙ אֲדֹנָ֣י יְהוִ֔ה אִם־אִדָּרֵ֖שׁ לָכֶֽם׃
32 ೩೨ “ನಾವು ಜನಾಂಗಗಳಂತೆ, ಅನ್ಯದೇಶಗಳವರಂತೆ ಮರಕಲ್ಲುಗಳ ಬೊಂಬೆಗಳನ್ನು ಭಜಿಸುವೆವು ಎಂದು ನಿಮ್ಮ ಮನಸ್ಸಿನಲ್ಲಿ ಹುಟ್ಟುವ ಯೋಚನೆಯು ಖಂಡಿತ ನೆರವೇರುವುದಿಲ್ಲ.”
וְהָֽעֹלָה֙ עַל־ר֣וּחֲכֶ֔ם הָי֖וֹ לֹ֣א תִֽהְיֶ֑ה אֲשֶׁ֣ר ׀ אַתֶּ֣ם אֹמְרִ֗ים נִֽהְיֶ֤ה כַגּוֹיִם֙ כְּמִשְׁפְּח֣וֹת הָאֲרָצ֔וֹת לְשָׁרֵ֖ת עֵ֥ץ וָאָֽבֶן׃
33 ೩೩ ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನನ್ನ ಜೀವದಾಣೆ, ನಾನು ಶಿಕ್ಷಾಹಸ್ತವನ್ನೆತ್ತಿ, ಭುಜಪರಾಕ್ರಮವನ್ನು ತೋರಿಸಿ, ರೋಷಾಗ್ನಿಯನ್ನು ಸುರಿಸುತ್ತಾ ನಿಮ್ಮ ಮೇಲೆ ದೊರೆತನ ಮಾಡುವೆನು.
חַי־אָ֕נִי נְאֻ֖ם אֲדֹנָ֣י יְהוִ֑ה אִם־לֹ֠א בְּיָ֨ד חֲזָקָ֜ה וּבִזְר֧וֹעַ נְטוּיָ֛ה וּבְחֵמָ֥ה שְׁפוּכָ֖ה אֶמְל֥וֹךְ עֲלֵיכֶֽם׃
34 ೩೪ ಹೌದು, ನಾನು ಶಿಕ್ಷಾಹಸ್ತವನ್ನೆತ್ತಿ ಭುಜಪರಾಕ್ರಮವನ್ನು ತೋರಿಸಿ, ರೋಷಾಗ್ನಿಯನ್ನು ಸುರಿಸುತ್ತಾ ನಿಮ್ಮನ್ನು ಜನಾಂಗಗಳೊಳಗಿಂದ ಪಾರುಮಾಡಿ ನೀವು ಚದರಿಹೋಗಿರುವ ದೇಶಗಳಿಂದ ನಿಮ್ಮನ್ನು ಕೂಡಿಸುವೆನು.
וְהוֹצֵאתִ֤י אֶתְכֶם֙ מִן־הָ֣עַמִּ֔ים וְקִבַּצְתִּ֣י אֶתְכֶ֔ם מִן־הָ֣אֲרָצ֔וֹת אֲשֶׁ֥ר נְפוֹצֹתֶ֖ם בָּ֑ם בְּיָ֤ד חֲזָקָה֙ וּבִזְר֣וֹעַ נְטוּיָ֔ה וּבְחֵמָ֖ה שְׁפוּכָֽה׃
35 ೩೫ ಜನಾಂಗಗಳ ಮಧ್ಯದ ಅರಣ್ಯಕ್ಕೆ ಕರೆ ತಂದು ಅಲ್ಲೇ ಮುಖಾಮುಖಿಯಾಗಿ ನಿಮ್ಮೊಂದಿಗೆ ವಾದಿಸುವೆನು.
וְהֵבֵאתִ֣י אֶתְכֶ֔ם אֶל־מִדְבַּ֖ר הָֽעַמִּ֑ים וְנִשְׁפַּטְתִּ֤י אִתְּכֶם֙ שָׁ֔ם פָּנִ֖ים אֶל־פָּנִֽים׃
36 ೩೬ ನಾನು ಐಗುಪ್ತದ ಅರಣ್ಯದಲ್ಲಿ ನಿಮ್ಮ ಪೂರ್ವಿಕರ ಸಂಗಡ ವಾದಿಸಿದಂತೆ, ನಿಮ್ಮ ಸಂಗಡಲೂ ವಾದಿಸುವೆನು” ಇದು ಕರ್ತನಾದ ಯೆಹೋವನ ನುಡಿ.
כַּאֲשֶׁ֤ר נִשְׁפַּ֙טְתִּי֙ אֶת־אֲב֣וֹתֵיכֶ֔ם בְּמִדְבַּ֖ר אֶ֣רֶץ מִצְרָ֑יִם כֵּ֚ן אִשָּׁפֵ֣ט אִתְּכֶ֔ם נְאֻ֖ם אֲדֹנָ֥י יְהוִֽה׃
37 ೩೭ “ನಾನು ನಿಮ್ಮನ್ನು ಲೆಕ್ಕಿಸುವಂತೆ, ದಂಡನೆಯ ಕೋಲಿನ ಕೆಳಗೆ ಹೋಗುವಂತೆ ಮಾಡಿ, ಒಡಂಬಡಿಕೆಯ ಕಟ್ಟಿನಿಂದ ಬಂಧಿಸುವೆನು.
וְהַעֲבַרְתִּ֥י אֶתְכֶ֖ם תַּ֣חַת הַשָּׁ֑בֶט וְהֵבֵאתִ֥י אֶתְכֶ֖ם בְּמָסֹ֥רֶת הַבְּרִֽית׃
38 ೩೮ ನನಗೆ ತಿರುಗಿ ಬಿದ್ದು ದ್ರೋಹಿಗಳಾದವರನ್ನು ನಿಮ್ಮೊಳಗಿಂದ ಕಳುಹಿಸಿ ಬಿಡುವೆನು; ಅವರು ಪ್ರವಾಸಿಗಳಾಗಿದ್ದ ದೇಶದಿಂದ ನಾನು ಅವರನ್ನು ಪಾರು ಮಾಡಿದರೂ, ಅವರು ಇಸ್ರಾಯೇಲ್ ದೇಶಕ್ಕೆ ಸೇರುವುದೇ ಇಲ್ಲ; ನಾನೇ ಯೆಹೋವನು” ಎಂದು ನಿಮಗೆ ಗೊತ್ತಾಗುವುದು.
וּבָרוֹתִ֣י מִכֶּ֗ם הַמֹּרְדִ֤ים וְהַפּֽוֹשְׁעִים֙ בִּ֔י מֵאֶ֤רֶץ מְגֽוּרֵיהֶם֙ אוֹצִ֣יא אוֹתָ֔ם וְאֶל־אַדְמַ֥ת יִשְׂרָאֵ֖ל לֹ֣א יָב֑וֹא וִֽידַעְתֶּ֖ם כִּי־אֲנִ֥י יְהוָֽה׃
39 ೩೯ ಇಸ್ರಾಯೇಲ್ ವಂಶದವರೇ, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಹೋಗಿರಿ, ನಿಮ್ಮ ವಿಗ್ರಹಗಳನ್ನು ಸೇವಿಸಿಕೊಳ್ಳಿರಿ; ಇನ್ನು ಮುಂದೆ ನನ್ನ ಮಾತನ್ನು ಕೇಳಿಯೇ ಕೇಳುವಿರಿ, ಇನ್ನು ಮೇಲಾದರೂ ನನ್ನ ಪರಿಶುದ್ಧ ನಾಮವನ್ನು ನಿಮ್ಮ ಬಲಿಗಳಿಂದಲೂ, ವಿಗ್ರಹಗಳಿಂದಲೂ ನೀವು ಅಪಕೀರ್ತಿಗೆ ಗುರಿಮಾಡುವುದೇ ಇಲ್ಲ.”
וְאַתֶּ֨ם בֵּֽית־יִשְׂרָאֵ֜ל כֹּֽה־אָמַ֣ר ׀ אֲדֹנָ֣י יְהֹוִ֗ה אִ֤ישׁ גִּלּוּלָיו֙ לְכ֣וּ עֲבֹ֔דוּ וְאַחַ֕ר אִם־אֵינְכֶ֖ם שֹׁמְעִ֣ים אֵלָ֑י וְאֶת־שֵׁ֤ם קָדְשִׁי֙ לֹ֣א תְחַלְּלוּ־ע֔וֹד בְּמַתְּנֽוֹתֵיכֶ֖ם וּבְגִלּוּלֵיכֶֽם׃
40 ೪೦ ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ದೇಶದಲ್ಲಿ ಇಸ್ರಾಯೇಲ್ ವಂಶದವರೆಲ್ಲರೂ ನನ್ನ ಪರಿಶುದ್ಧವಾದ ಬೆಟ್ಟದಲ್ಲಿ, ಇಸ್ರಾಯೇಲಿನ ಪರ್ವತಾಗ್ರದಲ್ಲಿ ನನ್ನನ್ನು ಸೇವಿಸುವರು; ಅಲ್ಲೇ ಅವರಿಗೆ ಪ್ರಸನ್ನನಾಗುವೆನು, ಅಲ್ಲೇ ನಿಮ್ಮ ಕಾಣಿಕೆಗಳನ್ನೂ, ಉತ್ತಮ ನೈವೇದ್ಯಗಳನ್ನೂ, ಮೀಸಲಾದ ಎಲ್ಲವನ್ನೂ ಬರಮಾಡಿಕೊಳ್ಳುವೆನು.
כִּ֣י בְהַר־קָדְשִׁ֞י בְּהַ֣ר ׀ מְר֣וֹם יִשְׂרָאֵ֗ל נְאֻם֙ אֲדֹנָ֣י יְהוִ֔ה שָׁ֣ם יַעַבְדֻ֜נִי כָּל־בֵּ֧ית יִשְׂרָאֵ֛ל כֻּלֹּ֖ה בָּאָ֑רֶץ שָׁ֣ם אֶרְצֵ֔ם וְשָׁ֞ם אֶדְר֣וֹשׁ אֶת־תְּרוּמֹֽתֵיכֶ֗ם וְאֶת־רֵאשִׁ֛ית מַשְׂאוֹתֵיכֶ֖ם בְּכָל־קָדְשֵׁיכֶֽם ׃
41 ೪೧ ನಾನು ನಿಮ್ಮನ್ನು ಜನಾಂಗಗಳೊಳಗಿಂದ ಪಾರುಮಾಡಿ, ನೀವು ಚದರಿಹೋಗಿರುವ ದೇಶಗಳಿಂದ ತಂದು ಕೂಡಿಸುವಾಗ ನಿಮ್ಮ ಸುಗಂಧಹೋಮವನ್ನು ಅಂಗೀಕರಿಸಿ, ನಿಮಗೆ ಪ್ರಸನ್ನನಾಗುವೆನು; ಸಕಲ ಜನಾಂಗಗಳೆದುರಿಗೆ ನಿಮ್ಮ ರಕ್ಷಣೆಯ ಮೂಲಕ ನನ್ನ ಗೌರವವನ್ನು ಕಾಪಾಡಿಕೊಳ್ಳುವೆನು.
בְּרֵ֣יחַ נִיחֹחַ֮ אֶרְצֶ֣ה אֶתְכֶם֒ בְּהוֹצִיאִ֤י אֶתְכֶם֙ מִן־הָ֣עַמִּ֔ים וְקִבַּצְתִּ֣י אֶתְכֶ֔ם מִן־הָ֣אֲרָצ֔וֹת אֲשֶׁ֥ר נְפֹצֹתֶ֖ם בָּ֑ם וְנִקְדַּשְׁתִּ֥י בָכֶ֖ם לְעֵינֵ֥י הַגּוֹיִֽם׃
42 ೪೨ ನಾನು ಪ್ರಮಾಣಮಾಡಿ, ನಿಮ್ಮ ಪೂರ್ವಿಕರಿಗೆ ಯಾವ ದೇಶವನ್ನು ಕೊಟ್ಟೆನೋ, ಆ ಇಸ್ರಾಯೇಲ್ ದೇಶಕ್ಕೆ ನಿಮ್ಮನ್ನು ಬರಮಾಡುವಾಗ ನಾನೇ ಯೆಹೋವನು ಎಂದು ನಿಮಗೆ ಗೊತ್ತಾಗುವುದು.
וִֽידַעְתֶּם֙ כִּֽי־אֲנִ֣י יְהוָ֔ה בַּהֲבִיאִ֥י אֶתְכֶ֖ם אֶל־אַדְמַ֣ת יִשְׂרָאֵ֑ל אֶל־הָאָ֗רֶץ אֲשֶׁ֤ר נָשָׂ֙אתִי֙ אֶת־יָדִ֔י לָתֵ֥ת אוֹתָ֖הּ לַאֲבֽוֹתֵיכֶֽם׃
43 ೪೩ ನೀವು ನಿಮ್ಮನ್ನು ಹೊಲಸು ಮಾಡಿಕೊಂಡಿರುವ ನಿಮ್ಮ ನಡತೆಯನ್ನೂ, ನಿಮ್ಮ ಎಲ್ಲಾ ಕಾರ್ಯಗಳನ್ನೂ ಅಲ್ಲಿ ಜ್ಞಾಪಕಕ್ಕೆ ತಂದುಕೊಂಡು, ನೀವು ನಡೆಸಿರುವ ಸಕಲ ದುಷ್ಕೃತ್ಯಗಳ ನಿಮಿತ್ತ ನಿಮ್ಮನ್ನು ನೋಡಿ ನೀವೇ ಅಸಹ್ಯಪಡುವಿರಿ.
וּזְכַרְתֶּם־שָׁ֗ם אֶת־דַּרְכֵיכֶם֙ וְאֵת֙ כָּל־עֲלִיל֣וֹתֵיכֶ֔ם אֲשֶׁ֥ר נִטְמֵאתֶ֖ם בָּ֑ם וּנְקֹֽטֹתֶם֙ בִּפְנֵיכֶ֔ם בְּכָל־רָעוֹתֵיכֶ֖ם אֲשֶׁ֥ר עֲשִׂיתֶֽם׃
44 ೪೪ ಇಸ್ರಾಯೇಲ್ ವಂಶದವರೇ, ನಿಮ್ಮ ದುರ್ನಡತೆಗೂ, ದುಷ್ಕೃತ್ಯಗಳಿಗೂ ತಕ್ಕ ಹಾಗೆ ನಾನು ನಿಮ್ಮನ್ನು ದಂಡಿಸದೆ, ನನ್ನ ಹೆಸರಿನ ನಿಮಿತ್ತವೇ ನಾನು ನಿಮ್ಮನ್ನು ಸಹಿಸಿಕೊಂಡಿರುವಾಗ ನಾನೇ ಯೆಹೋವನು ಎಂದು ನಿಮಗೆ ಗೊತ್ತಾಗುವುದು” ಇದು ಕರ್ತನಾದ ಯೆಹೋವನ ನುಡಿ.
וִֽידַעְתֶּם֙ כִּֽי־אֲנִ֣י יְהוָ֔ה בַּעֲשׂוֹתִ֥י אִתְּכֶ֖ם לְמַ֣עַן שְׁמִ֑י לֹא֩ כְדַרְכֵיכֶ֨ם הָרָעִ֜ים וְכַעֲלִילֽוֹתֵיכֶ֤ם הַנִּשְׁחָתוֹת֙ בֵּ֣ית יִשְׂרָאֵ֔ל נְאֻ֖ם אֲדֹנָ֥י יְהוִֽה׃ פ
45 ೪೫ ಆ ಮೇಲೆ ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು,
וַיְהִ֥י דְבַר־יְהוָ֖ה אֵלַ֥י לֵאמֹֽר׃
46 ೪೬ “ನರಪುತ್ರನೇ, ನೀನು ದಕ್ಷಿಣಾಭಿಮುಖನಾಗಿ ಆ ಕಡೆಗೆ ಮಾತನಾಡುತ್ತಾ ದಕ್ಷಿಣ ಸೀಮೆಯ ವನದ ಪ್ರಸ್ತಾಪವನ್ನೆತ್ತಿ,
בֶּן־אָדָ֗ם שִׂ֤ים פָּנֶ֙יךָ֙ דֶּ֣רֶךְ תֵּימָ֔נָה וְהַטֵּ֖ף אֶל־דָּר֑וֹם וְהִנָּבֵ֛א אֶל־יַ֥עַר הַשָּׂדֶ֖ה נֶֽגֶב׃
47 ೪೭ ಆ ವನಕ್ಕೆ ಹೀಗೆ ಪ್ರವಾದಿಸು, ಯೆಹೋವನ ಮಾತನ್ನು ಕೇಳು, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ಆಹಾ, ನಾನು ನಿನ್ನೊಳಗೆ ಬೆಂಕಿಯನ್ನು ಹೊತ್ತಿಸುವೆನು, ಅದು ನಿನ್ನಲ್ಲಿನ ಎಲ್ಲಾ ಹಸಿರು ಮರಗಳನ್ನೂ, ಒಣಮರಗಳನ್ನೂ ನುಂಗಿ ಬಿಡುವುದು; ಧಗಧಗಿಸುವ ಉರಿಯು ಆರದೆ ದಕ್ಷಿಣದಿಂದ ಉತ್ತರದವರೆಗೆ ಎಲ್ಲರ ಮುಖಗಳು ಸುಟ್ಟು ಹೋಗುವವು.
וְאָֽמַרְתָּ֙ לְיַ֣עַר הַנֶּ֔גֶב שְׁמַ֖ע דְּבַר־יְהוָ֑ה כֹּֽה־אָמַ֣ר אֲדֹנָ֣י יְהוִ֡ה הִנְנִ֣י מַֽצִּית־בְּךָ֣ ׀ אֵ֡שׁ וְאָכְלָ֣ה בְךָ֣ כָל־עֵֽץ־לַח֩ וְכָל־עֵ֨ץ יָבֵ֤שׁ לֹֽא־תִכְבֶּה֙ לַהֶ֣בֶת שַׁלְהֶ֔בֶת וְנִצְרְבוּ־בָ֥הּ כָּל־פָּנִ֖ים מִנֶּ֥גֶב צָפֽוֹנָה׃
48 ೪೮ ಅದನ್ನು ಹೊತ್ತಿಸಿದವನು ಯೆಹೋವನಾದ ನಾನೇ ಎಂಬುದು ಸಕಲ ನರಪ್ರಾಣಿಗಳಿಗೂ ಗೋಚರವಾಗುವುದು; ಅದು ಆರಿಹೋಗದು.’
וְרָאוּ֙ כָּל־בָּשָׂ֔ר כִּ֛י אֲנִ֥י יְהוָ֖ה בִּֽעַרְתִּ֑יהָ לֹ֖א תִּכְבֶּֽה׃
49 ೪೯ “ಆಗ ನಾನು, ‘ಅಯ್ಯೋ, ಕರ್ತನಾದ ಯೆಹೋವನೇ, ಇವನು ಒಗಟುಗಾರನಲ್ಲವೇ?’ ಎಂದು ಈ ಜನರು ನನ್ನ ವಿಷಯವಾಗಿ ಅಂದುಕೊಳ್ಳುತ್ತಾರೆ” ಎಂಬುದಾಗಿ ಅರಿಕೆಮಾಡಿದೆನು.
וָאֹמַ֕ר אֲהָ֖הּ אֲדֹנָ֣י יְהוִ֑ה הֵ֚מָּה אֹמְרִ֣ים לִ֔י הֲלֹ֛א מְמַשֵּׁ֥ל מְשָׁלִ֖ים הֽוּא׃ פ

< ಯೆಹೆಜ್ಕೇಲನು 20 >