< ಯೆಹೆಜ್ಕೇಲನು 20 >
1 ೧ ಏಳನೆಯ ವರ್ಷದ, ಐದನೆಯ ತಿಂಗಳಿನ ಹತ್ತನೆಯ ದಿನದಲ್ಲಿ ಇಸ್ರಾಯೇಲಿನ ಹಿರಿಯರಲ್ಲಿ ಕೆಲವರು ಯೆಹೋವನನ್ನು ಪ್ರಶ್ನೆ ಕೇಳುವುದಕ್ಕೆ ಬಂದು ನನ್ನ ಮುಂದೆ ಕುಳಿತುಕೊಂಡರು.
제 칠년 오월 십일에 이스라엘 장로 두어 사람이 여호와께 물으려고 와서 내 앞에 앉으니
2 ೨ ಆಗ ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು,
여호와의 말씀이 내게 임하여 가라사대
3 ೩ “ನರಪುತ್ರನೇ, ಇಸ್ರಾಯೇಲಿನ ಹಿರಿಯರನ್ನು ಸಂಬೋಧಿಸಿ ಹೀಗೆ ಹೇಳು, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ನನ್ನನ್ನು ಪ್ರಶ್ನೆ ಕೇಳುವುದಕ್ಕೆ ಬಂದಿರೋ? ನನ್ನ ಜೀವದಾಣೆ, ನಾನು ನಿಮಗೆ ಉತ್ತರ ಕೊಡುವುದೇ ಇಲ್ಲ’” ಇದು ಕರ್ತನಾದ ಯೆಹೋವನ ನುಡಿ.
인자야 이스라엘 장로들에게 고하여 이르기를 주 여호와의 말씀에 너희가 내게 물으려고 왔느냐 나 주 여호와가 말하노라 내가 나의 삶을 두고 맹세하노니 너희가 내게 묻기를 내가 용납지 아니하리라 하셨다 하라
4 ೪ “ನರಪುತ್ರನೇ, ಇವರಿಗೆ ನ್ಯಾಯತೀರಿಸಲು ನಿನ್ನ ಮನಸ್ಸು ಸ್ಥಿರವಾಗಿದೆಯೋ? ಇವರ ಪೂರ್ವಿಕರ ದುರಾಚಾರಗಳನ್ನು ಇವರಿಗೆ ಹೀಗೆ ತಿಳಿಸು,
인자야 네가 그들을 국문하려느냐 네가 그들을 국문 하려하느냐 너는 그들로 그 열조의 가증한 일을 알게 하여
5 ೫ ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ಯಾವ ದಿನದಲ್ಲಿ ನಾನು ಇಸ್ರಾಯೇಲನ್ನು ಆರಿಸಿಕೊಂಡು, ಯಾಕೋಬ ಸಂತಾನದವರಿಗೆ ಮಾತುಕೊಟ್ಟು, ನಾನು ನಿಮ್ಮ ದೇವರಾದ ಯೆಹೋವನು’ ಎಂದು ಐಗುಪ್ತ ದೇಶದಲ್ಲಿ ಪ್ರಮಾಣ ಪೂರ್ವಕವಾಗಿ ತಿಳಿಯಪಡಿಸಿದೆನೋ,
이르기를 주 여호와의 말씀에 옛날에 내가 이스라엘을 택하고 야곱 집의 후예를 향하여 맹세하고 애굽 땅에서 그들에게 나타나서 맹세하여 이르기를 나는 여호와 너희 하나님이라 하였었노라
6 ೬ ಆ ದಿನದಲ್ಲಿ ನಾನು ಅವರಿಗೆ, ‘ಸಕಲ ದೇಶ ಶಿರೋಮಣಿಯಾದ ದೇಶವನ್ನು ನಿಮಗಾಗಿ ನೋಡಿದ್ದೇನೆ; ನಾನು ನಿಮ್ಮನ್ನು ಐಗುಪ್ತ ದೇಶದೊಳಗಿಂದ ಉದ್ಧರಿಸಿ ಹಾಲೂ ಮತ್ತು ಜೇನೂ ಹರಿಯುವ ಆ ದೇಶಕ್ಕೆ ಸೇರಿಸುವೆನು’ ಎಂದು ಪ್ರಮಾಣಮಾಡಿದೆನು.
그 날에 내가 그들에게 맹세하기를 애굽 땅에서 인도하여 내어서 그들을 위하여 찾아 두었던 땅 곧 젖과 꿀이 흐르는 땅이요 모든 땅 중의 아름다운 곳에 이르게 하리라 하고
7 ೭ ‘ನೀವೆಲ್ಲರೂ ನಿಮ್ಮ ಕಣ್ಣಿಗೆ ಕಾಣುವ ಇಷ್ಟವಾದ ಅಸಹ್ಯ ವಸ್ತುಗಳನ್ನು ಬಿಸಾಡಿಬಿಡಿರಿ, ಐಗುಪ್ತದ ವಿಗ್ರಹಗಳಿಂದ ನಿಮ್ಮನ್ನು ಹೊಲಸು ಮಾಡಿಕೊಳ್ಳಬೇಡಿರಿ; ನಾನು ನಿಮ್ಮ ದೇವರಾದ ಯೆಹೋವನು’” ಎಂಬುದಾಗಿ ಅವರನ್ನು ಎಚ್ಚರಿಸಿದೆನು.
또 그들에게 이르기를 너희는 눈을 드는바 가증한 것을 각기 버리고 애굽의 우상들로 스스로 더럽히지 말라 나는 여호와 너희 하나님이니라 하였으나
8 ೮ “‘ಅವರಾದರೋ ನನ್ನ ಮಾತನ್ನು ನಿರಾಕರಿಸಿ, ನನ್ನ ಮೇಲೆ ತಿರುಗಿ ಬಿದ್ದರು; ತಮ್ಮ ಕಣ್ಣಿಗೆ ಕಾಣುವ ಇಷ್ಟವಾದ ಅಸಹ್ಯ ವಸ್ತುಗಳನ್ನು ಯಾರೂ ಬಿಸಾಡಿಬಿಡಲಿಲ್ಲ, ಐಗುಪ್ತದ ವಿಗ್ರಹಗಳನ್ನು ತ್ಯಜಿಸಲಿಲ್ಲ; ಆಗ ನಾನು ಇವರ ಮೇಲೆ ಐಗುಪ್ತ ದೇಶದೊಳಗೆ ನನ್ನ ರೋಷಾಗ್ನಿಯನ್ನು ಸುರಿಸಿ ನನ್ನ ಕೋಪವನ್ನು ತೀರಿಸಿಕೊಳ್ಳುವೆನು’ ಅಂದುಕೊಂಡೆನು.
그들이 내게 패역하여 내 말을 즐겨 듣지 아니하고 그 눈을 드는 바 가증한 것을 각기 버리지 아니하며 애굽의 우상들을 떠나지 아니하므로 내가 말하기를 내가 애굽 땅에서 나의 분을 그들의 위에 쏟으며 노를 그들에게 이루리라 하였었노라
9 ೯ ‘ಆದರೂ ನಿಮ್ಮನ್ನು ಐಗುಪ್ತ ದೇಶದೊಳಗಿಂದ ಪಾರುಮಾಡುವೆನು ಎಂಬುದಾಗಿ ಜನಾಂಗಗಳ ಮುಂದೆಯೇ ನನ್ನನ್ನು ಇವರಿಗೆ ಪ್ರಕಟಿಸಿಕೊಂಡೆನಲ್ಲಾ ಎಂದು ಯೋಚಿಸಿ, ಅವರ ಸುತ್ತಣ ಆ ಜನಾಂಗಗಳ ಮುಂದೆ ನನ್ನ ಹೆಸರು ಅಪಕೀರ್ತಿಗೆ ಗುರಿಯಾಗದಂತೆ ನನ್ನ ಹೆಸರಿನ ನಿಮಿತ್ತವೇ ಸಹಿಸಿಕೊಂಡೆನು.
그러나 내가 그들의 거하는 이방인의 목전에서 그들에게 나타나서 그들을 애굽 땅에서 인도하여 내었었나니 이는 내 이름을 위 함이라 내 이름을 그 이방인의 목전에서 더럽히지 않으려 하여 행하였음이로라
10 ೧೦ ಆಗ ನಾನು ಅವರನ್ನು ಐಗುಪ್ತ ದೇಶದೊಳಗಿಂದ ಬಿಡಿಸಿ, ಅರಣ್ಯಕ್ಕೆ ಕರೆದು ತರಲು,
그러므로 내가 그들로 애굽 땅에서 나와서 광야에 이르게 하고
11 ೧೧ ಕೈಗೊಳ್ಳುವವರಿಗೆ ಜೀವಾಧಾರವಾದ ನನ್ನ ಆಜ್ಞಾವಿಧಿಗಳನ್ನು ಅವರಿಗೆ ತಿಳಿಸಿಕೊಟ್ಟೆನು.
사람이 준행하면 그로 인하여 삶을 얻을 내 율례를 주며 내 규례를 알게 하였고
12 ೧೨ ಇದಲ್ಲದೆ ತಮ್ಮನ್ನು ಪರಿಶುದ್ಧ ಜನರನ್ನಾಗಿ ಮಾಡಿರುವ ಯೆಹೋವನು ನಾನೇ ಎಂದು ಅವರು ತಿಳಿದುಕೊಳ್ಳುವಂತೆ ನನಗೂ, ಅವರಿಗೂ ಗುರುತಾದ ಸಬ್ಬತ್ ದಿನಗಳನ್ನು ಅವರಿಗೆ ಗುರುತಾಗಿ ನೇಮಿಸಿದೆನು.
또 나는 그들을 거룩하게 하는 여호와인 줄 알게 하려하여 내가 내 안식일을 주어 그들과 나 사이에 표징을 삼았었노라
13 ೧೩ “‘ಆದರೆ ಇಸ್ರಾಯೇಲ್ ವಂಶದವರು ಅರಣ್ಯದಲ್ಲಿ ನನ್ನ ಮೇಲೆ ತಿರುಗಿ ಬಿದ್ದರು. ಕೈಗೊಳ್ಳುವವರಿಗೆ ಜೀವಾಧಾರವಾದ ನನ್ನ ಆಜ್ಞಾವಿಧಿಗಳನ್ನು ಅನುಸರಿಸದೆ ನಿರಾಕರಿಸಿದರು, ನಾನು ನೇಮಿಸಿದ ಸಬ್ಬತ್ ದಿನಗಳನ್ನು ವಿಶೇಷವಾಗಿ ಹೊಲೆಮಾಡಿದರು; ಆಗ ನಾನು ಇವರ ಮೇಲೆ ಅರಣ್ಯದೊಳಗೆ ನನ್ನ ರೋಷಾಗ್ನಿಯನ್ನು ಸುರಿಸಿ ಇವರನ್ನು ಧ್ವಂಸಮಾಡುವೆನು’ ಅಂದುಕೊಂಡೆನು.
그러나 이스라엘 족속이 광야에서 내게 패역하여 사람이 준행하면 그로 인하여 삶을 얻을 나의 율례를 준행치 아니하며 나의 규례를 멸시하였고 나의 안식일을 크게 더럽혔으므로 내가 이르기를 내가 내 분노를 광야에서 그들의 위에 쏟아 멸하리라 하였으나
14 ೧೪ ‘ಆದರೂ ಯಾವ ಜನಾಂಗಗಳ ಮುಂದೆ ಅವರನ್ನು ಪಾರುಮಾಡಿದೆನೋ, ಆ ಜನಾಂಗಗಳ ಮುಂದೆ ನನ್ನ ಹೆಸರು ಅಪಕೀರ್ತಿಗೆ ಗುರಿಯಾಗಬಾರದೆಂದು ನನ್ನ ಹೆಸರಿನ ನಿಮಿತ್ತವೇ ಸಹಿಸಿಕೊಂಡೆನು.
내가 내 이름을 위하여 달리 행하였었나니 내가 그들을 인도하여 내는 것을 목도한 열국 앞에서 내 이름을 더럽히지 아니하려 하였음이로라
15 ೧೫ ಆ ಮೇಲೆ ಸಕಲ ದೇಶ ಶಿರೋಮಣಿಯಾದ ಯಾವ ದೇಶವನ್ನು ವಾಗ್ದಾನಮಾಡಿದೆನೋ, ಹಾಲೂ ಮತ್ತು ಜೇನು ಹರಿಯುವ ಆ ದೇಶಕ್ಕೆ ನಿಮ್ಮನ್ನು ಸೇರಿಸುವುದಿಲ್ಲ ಎಂದು ಅರಣ್ಯದಲ್ಲಿ ಅವರಿಗೆ ಪ್ರಮಾಣ ಮಾಡಿದೆನು.
또 내가 광야에서 그들에게 맹세하기를 내가 그들에게 허한 땅 곧 젖과 꿀이 흐르는 땅이요 모든 땅 중의 아름다운 곳으로 그들을 인도하여 들이지 아니하리라 한 것은
16 ೧೬ ಏಕೆಂದರೆ ಅವರ ಹೃದಯವು ತಮ್ಮ ವಿಗ್ರಹಗಳಲ್ಲಿ ಆಸಕ್ತರಾಗಿ, ಅವರು ನನ್ನ ಆಜ್ಞಾವಿಧಿಗಳನ್ನು ಅನುಸರಿಸದೆ ನಿರಾಕರಿಸಿ, ನಾನು ನೇಮಿಸಿದ ಸಬ್ಬತ್ ದಿನಗಳನ್ನು ಹೊಲೆ ಮಾಡಿದವರಾಗಿದ್ದರು.
그들이 마음으로 우상을 좇아 나의 규례를 업신여기며 나의 율례를 행치 아니하며 나의 안식일을 더럽혔음이니라
17 ೧೭ ಆದರೂ ನಾನು ಅವರನ್ನು ನಾಶ ಮಾಡಲಿಲ್ಲ; ನನ್ನ ಕಟಾಕ್ಷವು ಅವರನ್ನು ಉಳಿಸಿತು; ನಾನು ಅವರನ್ನು ಅರಣ್ಯದಲ್ಲಿ ನಿರ್ಮೂಲಮಾಡಲಿಲ್ಲ.’”
그러나 내가 그들을 아껴 보아 광야에서 멸하여 아주 없이 하지 아니하였었노라
18 ೧೮ ಆ ಮೇಲೆ ನಾನು ಅರಣ್ಯದಲ್ಲಿ ಅವರ ಸಂತಾನದವರಿಗೆ, “ನೀವು ನಿಮ್ಮ ತಂದೆಗಳ ಆಜ್ಞೆಗಳನ್ನು ಅನುಸರಿಸದೆ, ಅವರ ವಿಧಿಗಳನ್ನು ಕೈಕೊಳ್ಳದೆ, ಅವರ ವಿಗ್ರಹಗಳಿಂದ ನಿಮ್ಮನ್ನು ಹೊಲಸು ಮಾಡಿಕೊಳ್ಳದೆ ಇರಬೇಕು.
내가 광야에서 그들의 자손에게 이르기를 너희 열조의 율례를 좇지 말며 그 규례를 지키지 말며 그 우상들로 스스로 더럽히지 말라
19 ೧೯ ನಾನು ನಿಮ್ಮ ದೇವರಾದ ಯೆಹೋವನು; ನೀವು ನನ್ನ ಆಜ್ಞೆಗಳನ್ನು ಅನುಸರಿಸಿ, ನನ್ನ ವಿಧಿಗಳನ್ನು ಕೈಕೊಂಡು ನಡೆಯಿರಿ.
나는 여호와 너희 하나님이라 너희는 나의 율례를 좇으며 나의 규례를 지켜 행하고
20 ೨೦ ನಾನು ನೇಮಿಸಿದ ಸಬ್ಬತ್ ದಿನಗಳನ್ನು ನನ್ನ ಪರಿಶುದ್ಧ ದಿನಗಳೆಂದು ಆಚರಿಸಿರಿ; ನಾನು ನಿಮ್ಮ ದೇವರಾದ ಯೆಹೋವನು ಎಂದು ನೀವು ತಿಳಿದುಕೊಳ್ಳುವಂತೆ ಅವು ನಿಮಗೂ ಮತ್ತು ನನಗೂ ಗುರುತಾಗಿರುವುವು” ಎಂದು ಹೇಳಿದೆನು.
또 나의 안식일을 거룩하게 할지어다 이것이 나와 너희 사이에 표징이 되어 너희로 내가 여호와 너희 하나님인 줄 알게 하리라 하였었노라
21 ೨೧ “ಆದರೆ ಆ ಸಂತಾನದವರಾದರೋ ನನ್ನ ಮೇಲೆ ತಿರುಗಿ ಬಿದ್ದರು; ನನ್ನ ಆಜ್ಞೆಗಳನ್ನು ಅನುಸರಿಸಲಿಲ್ಲ; ಕೈಗೊಂಡವರಿಗೆ ಜೀವಾಧಾರವಾದ ನನ್ನ ವಿಧಿಗಳನ್ನು ಅನುಸರಿಸಿ ನಡೆಯಲಿಲ್ಲ; ನಾನು ನೇಮಿಸಿದ ಸಬ್ಬತ್ ದಿನಗಳನ್ನು ಹೊಲೆ ಮಾಡಿದರು; ಆದುದರಿಂದ ನಾನು ಅರಣ್ಯದಲ್ಲಿ ಇವರ ಮೇಲೆ ನನ್ನ ರೋಷಾಗ್ನಿಯನ್ನು ಸುರಿಸಿ, ನನ್ನ ಕೋಪವನ್ನು ತೀರಿಸಿಕೊಳ್ಳುವೆನು” ಅಂದುಕೊಂಡೆನು.
그러나 그 자손이 내게 패역하여 사람이 준행하면 그로 인하여 삶을 얻을 나의 율례를 좇지 아니하며 나의 규례를 지켜 행하지 아니하였고 나의 안식일을 더럽혔는지라 이에 내가 이르기를 내가 광야에서 내 분을 그들의 위에 쏟으며 내 노를 그들에게 이루리라 하였으나
22 ೨೨ “ಆದರೂ ನಾನು ಯಾವ ಜನಾಂಗಗಳ ಮುಂದೆ ಅವರನ್ನು ಪಾರು ಮಾಡಿದೆನೋ ಆ ಜನಾಂಗಗಳ ಮುಂದೆ ನನ್ನ ಹೆಸರು ಅಪಕೀರ್ತಿಗೆ ಗುರಿಯಾಗಬಾರದೆಂದು ನನ್ನ ಹೆಸರಿನ ನಿಮಿತ್ತವೇ ಸಹಿಸಿಕೊಂಡು ಕೈಯನ್ನು ಹಿಂದಕ್ಕೆ ತೆಗೆದುಕೊಂಡೆನು.
내가 내 이름을 위하여 내 손을 금하고 달리 행하였었나니 내가 그들을 인도하여 내는 것을 목도한 열국 앞에서 내 이름을 더럽히지 아니하려 하였음이로다
23 ೨೩ ನಾನು ಅವರನ್ನು ಅನ್ಯಜನಾಂಗಗಳಲ್ಲಿ ಚದರಿಸುತ್ತೇನೆಂದೂ ದೇಶದಲ್ಲಿ ಹರಡಿಸುತ್ತೇನೆಂದೂ ಮರುಭೂಮಿಯಲ್ಲಿ ಪ್ರಮಾಣ ಮಾಡಿ ಹೇಳಿದೆ.
또 내가 광야에서 그들에게 맹세하기를 내가 그들을 이방인 중에 흩으며 열방 중에 헤치리라 하였었나니
24 ೨೪ ಏಕೆಂದರೆ ನನ್ನ ಜನರು ನನ್ನ ಆಜ್ಞೆಗಳನ್ನು ಕೈಕೊಳ್ಳದೆ, ನನ್ನ ವಿಧಿಗಳನ್ನು ನಿರಾಕರಿಸಿ ನಾನು ನೇಮಿಸಿದ ಸಬ್ಬತ್ ದಿನಗಳನ್ನು ಹೊಲೆಮಾಡಿ, ತಮ್ಮ ಪೂರ್ವಿಕರ ವಿಗ್ರಹಗಳ ಮೇಲೆ ಕಣ್ಣುಹಾಕಿದ್ದರಿಂದ, ನಾನು ನಿಮ್ಮನ್ನು ಜನಾಂಗಗಳಲ್ಲಿ ಚದರಿಸಿ, ದೇಶ ದೇಶಗಳಿಗೆ ಚೆಲ್ಲಾಪಿಲ್ಲಿಯಾಗಿಸುವೆನು.” ಎಂದು ಅರಣ್ಯದಲ್ಲಿ ಅವರಿಗೆ ಪ್ರಮಾಣಮಾಡಿದೆನು.
이는 그들이 나의 규례를 행치 아니하며 나의 율례를 멸시하며 내 안식일을 더럽히고 눈으로 그 열조의 우상들을 사모함이며
25 ೨೫ “ಇದಲ್ಲದೆ, ನಾನೇ ಯೆಹೋವನು ಎಂದು ಅವರು ತಿಳಿದುಕೊಳ್ಳುವಂತೆ ನಾನು ಅವರಿಗೆ ಅಹಿತವಾದ ಆಜ್ಞೆಗಳನ್ನೂ, ಜೀವಾಧಾರವಲ್ಲದ ವಿಧಿಗಳನ್ನೂ ನೇಮಿಸಿದೆನು.
또 내가 그들에게 선치 못한 율례와 능히 살게 하지 못할 규례를 주었고
26 ೨೬ ಅವರು ತಮ್ಮ ಚೊಚ್ಚಲಮಕ್ಕಳನ್ನು ಆಹುತಿಕೊಟ್ಟು ಅರ್ಪಿಸುತ್ತಿದ್ದ ಬಲಿಗಳಿಂದಲೇ ಅವರನ್ನು ಹೊಲೆಗೆಡಿಸಿ, ಕೇವಲ ದುರಾವಸ್ಥೆಗೆ ತಂದೆನು.”
그들이 장자를 다 화제로 드리는 그 예물로 내가 그들을 더럽혔음은 그들로 멸망케 하여 나를 여호와인 줄 알게하려 하였음이니라
27 ೨೭ ಹೀಗಿರಲು, “ನರಪುತ್ರನೇ, ಇಸ್ರಾಯೇಲ್ ವಂಶದವರಿಗೆ ಈ ಮಾತನ್ನು ಹೇಳು, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ನಿಮ್ಮ ಪೂರ್ವಿಕರು ಇನ್ನೂ ಒಂದು ದ್ರೋಹವನ್ನು ಮಾಡಿ ನನ್ನನ್ನು ದೂಷಿಸಿದ್ದಾರೆ.
그런즉 인자야 이스라엘 족속에게 고하여 이르기를 주 여호와의 말씀에 너희 열조가 또 내게 범죄하여 나를 욕되게 하였느니라
28 ೨೮ ನಾನು ಪ್ರಮಾಣ ಪೂರ್ವಕವಾಗಿ ಅವರಿಗೆ ವಾಗ್ದಾನ ಮಾಡಿದ ದೇಶಕ್ಕೆ ಅವರನ್ನು ಸೇರಿಸಿದ ಮೇಲೆ ಅವರು ಎತ್ತರವಾದ ಎಲ್ಲಾ ಗುಡ್ಡಗಳನ್ನೂ, ಸೊಂಪಾಗಿ ಬೆಳೆದಿರುವ ಎಲ್ಲಾ ಮರಗಳನ್ನೂ ನೋಡಿ ಅಲ್ಲಿ ಯಜ್ಞಪಶುಗಳನ್ನು ವಧಿಸಿ, ನನ್ನನ್ನು ರೇಗಿಸುವ ನೈವೇದ್ಯವನ್ನರ್ಪಿಸಿ, ಸುಗಂಧ ಹೋಮಮಾಡಿ, ಪಾನದ್ರವ್ಯವನ್ನು ಸುರಿದು, ಬಲಿ ಅರ್ಪಿಸುತ್ತಿದ್ದರು.’
내가 그들에게 주기로 맹세한 땅으로 그들을 인도하여 들였더니 그들이 모든 높은 산과 모든 무성한 나무를 보고 거기서 제사를 드리고 격노케 하는 제물을 올리며 거기서 또 분향하고 전제를 부어 드린지라
29 ೨೯ ನೀವು ಹೋಗುವ, ‘ಬಾಮಾ ಎಂಬ ಪೂಜಾಸ್ಥಾನ ಇದು ಎಂಥ ಸ್ಥಳ?’” (ಇಂದಿನ ವರೆಗೂ ಇಂಥಾ ಪೂಜಾಸ್ಥಾನಗಳಿಗೆ ಬಾಮಾ ಎಂದೇ ಹೆಸರು).
이에 내가 그들에게 이르기를 너희가 다니는 산당이 무엇이냐 하였노라 (그것을 오늘날까지 바마라 일컫느니라)
30 ೩೦ ಇಸ್ರಾಯೇಲ್ ವಂಶದವರಿಗೆ ಹೀಗೆ ಹೇಳು, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನಿಮ್ಮ ಪೂರ್ವಿಕರಂತೆ ನಿಮ್ಮನ್ನು ನೀವೇ ಹೊಲಸು ಮಾಡಿಕೊಳ್ಳುತ್ತೀರೋ? ಅವರು ಪೂಜಿಸುತ್ತಿದ್ದ ಅಸಹ್ಯ ವಸ್ತುಗಳನ್ನು ನೀವೂ ಪೂಜಿಸಿ ದೇವದ್ರೋಹ ಮಾಡುತ್ತೀರೋ?
그러므로 너는 이스라엘 족속에게 이르기를 주 여호와의 말씀에 너희가 열조의 풍속을 따라 스스로 더럽히며 그 모든 가증한 것을 좇아 행음하느냐
31 ೩೧ ನೀವು ಬಲಿಯರ್ಪಿಸುತ್ತಾ ನಿಮ್ಮ ಮಕ್ಕಳನ್ನು ಆಹುತಿಕೊಟ್ಟು ಇಂದಿನವರೆಗೂ ನಿಮ್ಮನ್ನು ಅಶುದ್ಧ ಮಾಡಿಕೊಳ್ಳುತ್ತಿದ್ದೀರೋ? ಇಸ್ರಾಯೇಲ್ ವಂಶದವರೇ, ನಾನು ನಿಮ್ಮಂಥವರಿಗೆ ದೈವೋತ್ತರವನ್ನು ದಯಪಾಲಿಸಬಹುದೋ? ನನ್ನ ಜೀವದಾಣೆ, ನಿಮಗೆ ದೈವೋತ್ತರವನ್ನು ದಯಪಾಲಿಸುವುದಿಲ್ಲ” ಇದು ಕರ್ತನಾದ ಯೆಹೋವನ ನುಡಿ.
너희가 또 너희 아들로 화제를 삼아 예물로 드려 오늘날까지 우상들로 스스로 더럽히느냐 이스라엘 족속아 너희가 내게 묻기를 내가 용납하겠느냐 나 주 여호와가 말하노라 내가 나의 삶을 두고 맹세하노니 너희가 내게 묻기를 내가 용납지 아니하리라
32 ೩೨ “ನಾವು ಜನಾಂಗಗಳಂತೆ, ಅನ್ಯದೇಶಗಳವರಂತೆ ಮರಕಲ್ಲುಗಳ ಬೊಂಬೆಗಳನ್ನು ಭಜಿಸುವೆವು ಎಂದು ನಿಮ್ಮ ಮನಸ್ಸಿನಲ್ಲಿ ಹುಟ್ಟುವ ಯೋಚನೆಯು ಖಂಡಿತ ನೆರವೇರುವುದಿಲ್ಲ.”
너희가 스스로 이르기를 우리가 이방인 곧 열국 족속 같이 되어서 목석을 숭배하리라 하거니와 너희 마음에 품은 것을 결코 이루지 못하리라
33 ೩೩ ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನನ್ನ ಜೀವದಾಣೆ, ನಾನು ಶಿಕ್ಷಾಹಸ್ತವನ್ನೆತ್ತಿ, ಭುಜಪರಾಕ್ರಮವನ್ನು ತೋರಿಸಿ, ರೋಷಾಗ್ನಿಯನ್ನು ಸುರಿಸುತ್ತಾ ನಿಮ್ಮ ಮೇಲೆ ದೊರೆತನ ಮಾಡುವೆನು.
나 주 여호와가 말하노라 내가 나의 삶을 두고 맹세하노니 내가 능한 손과 편 팔로 분노를 쏟아 너희를 단정코 다스릴지라
34 ೩೪ ಹೌದು, ನಾನು ಶಿಕ್ಷಾಹಸ್ತವನ್ನೆತ್ತಿ ಭುಜಪರಾಕ್ರಮವನ್ನು ತೋರಿಸಿ, ರೋಷಾಗ್ನಿಯನ್ನು ಸುರಿಸುತ್ತಾ ನಿಮ್ಮನ್ನು ಜನಾಂಗಗಳೊಳಗಿಂದ ಪಾರುಮಾಡಿ ನೀವು ಚದರಿಹೋಗಿರುವ ದೇಶಗಳಿಂದ ನಿಮ್ಮನ್ನು ಕೂಡಿಸುವೆನು.
능한 손과 편 팔로 분노를 쏟아 너희를 열국 중에서 나오게 하며 너희의 흩어진 열방 중에서 모아내고
35 ೩೫ ಜನಾಂಗಗಳ ಮಧ್ಯದ ಅರಣ್ಯಕ್ಕೆ ಕರೆ ತಂದು ಅಲ್ಲೇ ಮುಖಾಮುಖಿಯಾಗಿ ನಿಮ್ಮೊಂದಿಗೆ ವಾದಿಸುವೆನು.
너희를 인도하여 열국 광야에 이르러 거기서 너희를 대면하여 국문하되
36 ೩೬ ನಾನು ಐಗುಪ್ತದ ಅರಣ್ಯದಲ್ಲಿ ನಿಮ್ಮ ಪೂರ್ವಿಕರ ಸಂಗಡ ವಾದಿಸಿದಂತೆ, ನಿಮ್ಮ ಸಂಗಡಲೂ ವಾದಿಸುವೆನು” ಇದು ಕರ್ತನಾದ ಯೆಹೋವನ ನುಡಿ.
내가 애굽 땅 광야에서 너희 열조를 국문한 것 같이 너희를 국문하리라 나 주 여호와의 말이니라
37 ೩೭ “ನಾನು ನಿಮ್ಮನ್ನು ಲೆಕ್ಕಿಸುವಂತೆ, ದಂಡನೆಯ ಕೋಲಿನ ಕೆಳಗೆ ಹೋಗುವಂತೆ ಮಾಡಿ, ಒಡಂಬಡಿಕೆಯ ಕಟ್ಟಿನಿಂದ ಬಂಧಿಸುವೆನು.
내가 너희를 막대기 아래로 지나게 하며 언약의 줄로 매려니와
38 ೩೮ ನನಗೆ ತಿರುಗಿ ಬಿದ್ದು ದ್ರೋಹಿಗಳಾದವರನ್ನು ನಿಮ್ಮೊಳಗಿಂದ ಕಳುಹಿಸಿ ಬಿಡುವೆನು; ಅವರು ಪ್ರವಾಸಿಗಳಾಗಿದ್ದ ದೇಶದಿಂದ ನಾನು ಅವರನ್ನು ಪಾರು ಮಾಡಿದರೂ, ಅವರು ಇಸ್ರಾಯೇಲ್ ದೇಶಕ್ಕೆ ಸೇರುವುದೇ ಇಲ್ಲ; ನಾನೇ ಯೆಹೋವನು” ಎಂದು ನಿಮಗೆ ಗೊತ್ತಾಗುವುದು.
너희 가운데서 패역한 자와 내게 범죄한 자를 모두 제하여 버릴지라 그들을 그 우거하던 땅에서는 나오게 하여도 이스라엘 땅에는 들어가지 못하게 하리니 너희가 나를 여호와인 줄 알리라
39 ೩೯ ಇಸ್ರಾಯೇಲ್ ವಂಶದವರೇ, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಹೋಗಿರಿ, ನಿಮ್ಮ ವಿಗ್ರಹಗಳನ್ನು ಸೇವಿಸಿಕೊಳ್ಳಿರಿ; ಇನ್ನು ಮುಂದೆ ನನ್ನ ಮಾತನ್ನು ಕೇಳಿಯೇ ಕೇಳುವಿರಿ, ಇನ್ನು ಮೇಲಾದರೂ ನನ್ನ ಪರಿಶುದ್ಧ ನಾಮವನ್ನು ನಿಮ್ಮ ಬಲಿಗಳಿಂದಲೂ, ವಿಗ್ರಹಗಳಿಂದಲೂ ನೀವು ಅಪಕೀರ್ತಿಗೆ ಗುರಿಮಾಡುವುದೇ ಇಲ್ಲ.”
나 주 여호와가 말하노라 이스라엘 족속아 너희가 내 말을 듣지 아니하려거든 가서 각각 그 우상을 섬기고 이 후에도 그리하려무나마는 다시는 너희 예물과 너희 우상들로 내 거룩한 이름을 더럽히지 말지니라
40 ೪೦ ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ದೇಶದಲ್ಲಿ ಇಸ್ರಾಯೇಲ್ ವಂಶದವರೆಲ್ಲರೂ ನನ್ನ ಪರಿಶುದ್ಧವಾದ ಬೆಟ್ಟದಲ್ಲಿ, ಇಸ್ರಾಯೇಲಿನ ಪರ್ವತಾಗ್ರದಲ್ಲಿ ನನ್ನನ್ನು ಸೇವಿಸುವರು; ಅಲ್ಲೇ ಅವರಿಗೆ ಪ್ರಸನ್ನನಾಗುವೆನು, ಅಲ್ಲೇ ನಿಮ್ಮ ಕಾಣಿಕೆಗಳನ್ನೂ, ಉತ್ತಮ ನೈವೇದ್ಯಗಳನ್ನೂ, ಮೀಸಲಾದ ಎಲ್ಲವನ್ನೂ ಬರಮಾಡಿಕೊಳ್ಳುವೆನು.
나 주 여호와가 말하노라 이스라엘 온 족속이 그 땅에 있어서 내 거룩한 산 곧 이스라엘의 높은 산에서 다 나를 섬기리니 거기서 내가 그들을 기쁘게 받을지라 거기서 너희 예물과 너희 천신하는 첫 열매와 너희 모든 성물을 요구하리라
41 ೪೧ ನಾನು ನಿಮ್ಮನ್ನು ಜನಾಂಗಗಳೊಳಗಿಂದ ಪಾರುಮಾಡಿ, ನೀವು ಚದರಿಹೋಗಿರುವ ದೇಶಗಳಿಂದ ತಂದು ಕೂಡಿಸುವಾಗ ನಿಮ್ಮ ಸುಗಂಧಹೋಮವನ್ನು ಅಂಗೀಕರಿಸಿ, ನಿಮಗೆ ಪ್ರಸನ್ನನಾಗುವೆನು; ಸಕಲ ಜನಾಂಗಗಳೆದುರಿಗೆ ನಿಮ್ಮ ರಕ್ಷಣೆಯ ಮೂಲಕ ನನ್ನ ಗೌರವವನ್ನು ಕಾಪಾಡಿಕೊಳ್ಳುವೆನು.
내가 너희를 인도하여 열국 중에서 나오게 하고 너희의 흩어진 열방 중에서 모아 낼 때에 내가 너희를 향기로 받고 내가 또 너희로 말미암아 내 거룩함을 열국의 목전에서 나타낼 것이며
42 ೪೨ ನಾನು ಪ್ರಮಾಣಮಾಡಿ, ನಿಮ್ಮ ಪೂರ್ವಿಕರಿಗೆ ಯಾವ ದೇಶವನ್ನು ಕೊಟ್ಟೆನೋ, ಆ ಇಸ್ರಾಯೇಲ್ ದೇಶಕ್ಕೆ ನಿಮ್ಮನ್ನು ಬರಮಾಡುವಾಗ ನಾನೇ ಯೆಹೋವನು ಎಂದು ನಿಮಗೆ ಗೊತ್ತಾಗುವುದು.
내가 너희 열조에게 주기로 맹세한 땅 곧 이스라엘 땅으로 너희를 인도하여 들일 때에 너희가 나를 여호와인줄 알고
43 ೪೩ ನೀವು ನಿಮ್ಮನ್ನು ಹೊಲಸು ಮಾಡಿಕೊಂಡಿರುವ ನಿಮ್ಮ ನಡತೆಯನ್ನೂ, ನಿಮ್ಮ ಎಲ್ಲಾ ಕಾರ್ಯಗಳನ್ನೂ ಅಲ್ಲಿ ಜ್ಞಾಪಕಕ್ಕೆ ತಂದುಕೊಂಡು, ನೀವು ನಡೆಸಿರುವ ಸಕಲ ದುಷ್ಕೃತ್ಯಗಳ ನಿಮಿತ್ತ ನಿಮ್ಮನ್ನು ನೋಡಿ ನೀವೇ ಅಸಹ್ಯಪಡುವಿರಿ.
거기서 너희의 길과 스스로 더럽힌 모든 행위를 기억하고 이미 행한 모든 악을 인하여 스스로 미워하리라
44 ೪೪ ಇಸ್ರಾಯೇಲ್ ವಂಶದವರೇ, ನಿಮ್ಮ ದುರ್ನಡತೆಗೂ, ದುಷ್ಕೃತ್ಯಗಳಿಗೂ ತಕ್ಕ ಹಾಗೆ ನಾನು ನಿಮ್ಮನ್ನು ದಂಡಿಸದೆ, ನನ್ನ ಹೆಸರಿನ ನಿಮಿತ್ತವೇ ನಾನು ನಿಮ್ಮನ್ನು ಸಹಿಸಿಕೊಂಡಿರುವಾಗ ನಾನೇ ಯೆಹೋವನು ಎಂದು ನಿಮಗೆ ಗೊತ್ತಾಗುವುದು” ಇದು ಕರ್ತನಾದ ಯೆಹೋವನ ನುಡಿ.
이스라엘 족속아 내가 너희의 악한 길과 더러운 행위대로 하지 아니하고 내 이름을 위하여 행한 후에야 너희가 나를 여호와인 줄 알리라 나 주 여호와의 말이니라 하셨다 하라
45 ೪೫ ಆ ಮೇಲೆ ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು,
여호와의 말씀이 또 내게 임하여 가라사대
46 ೪೬ “ನರಪುತ್ರನೇ, ನೀನು ದಕ್ಷಿಣಾಭಿಮುಖನಾಗಿ ಆ ಕಡೆಗೆ ಮಾತನಾಡುತ್ತಾ ದಕ್ಷಿಣ ಸೀಮೆಯ ವನದ ಪ್ರಸ್ತಾಪವನ್ನೆತ್ತಿ,
인자야 너는 얼굴을 남으로 향하라 남으로 향하여 소리내어 남방들의 삼림을 쳐서 예언하라
47 ೪೭ ಆ ವನಕ್ಕೆ ಹೀಗೆ ಪ್ರವಾದಿಸು, ಯೆಹೋವನ ಮಾತನ್ನು ಕೇಳು, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ಆಹಾ, ನಾನು ನಿನ್ನೊಳಗೆ ಬೆಂಕಿಯನ್ನು ಹೊತ್ತಿಸುವೆನು, ಅದು ನಿನ್ನಲ್ಲಿನ ಎಲ್ಲಾ ಹಸಿರು ಮರಗಳನ್ನೂ, ಒಣಮರಗಳನ್ನೂ ನುಂಗಿ ಬಿಡುವುದು; ಧಗಧಗಿಸುವ ಉರಿಯು ಆರದೆ ದಕ್ಷಿಣದಿಂದ ಉತ್ತರದವರೆಗೆ ಎಲ್ಲರ ಮುಖಗಳು ಸುಟ್ಟು ಹೋಗುವವು.
남방 삼림에게 이르기를 여호와의 말씀을 들을지어다 주 여호와의 말씀에 내가 너의 가운데 불을 일으켜 모든 푸른 나무와 모든 마른 나무를 멸하리니 맹렬한 불꽃이 꺼지지 아니하고 남에서 북까지 모든 얼굴이 그슬릴지라
48 ೪೮ ಅದನ್ನು ಹೊತ್ತಿಸಿದವನು ಯೆಹೋವನಾದ ನಾನೇ ಎಂಬುದು ಸಕಲ ನರಪ್ರಾಣಿಗಳಿಗೂ ಗೋಚರವಾಗುವುದು; ಅದು ಆರಿಹೋಗದು.’
무릇 혈기 있는자는 나 여호와가 그 불을 일으킨 줄을 알리니 그것이 꺼지지 아니하리라 하셨다 하라 하시기로
49 ೪೯ “ಆಗ ನಾನು, ‘ಅಯ್ಯೋ, ಕರ್ತನಾದ ಯೆಹೋವನೇ, ಇವನು ಒಗಟುಗಾರನಲ್ಲವೇ?’ ಎಂದು ಈ ಜನರು ನನ್ನ ವಿಷಯವಾಗಿ ಅಂದುಕೊಳ್ಳುತ್ತಾರೆ” ಎಂಬುದಾಗಿ ಅರಿಕೆಮಾಡಿದೆನು.
내가 가로되 오호라 주 여호와여 그들이 나를 가리켜 말하기를 그는 비유로 말하는 자가 아니냐 하나이다 하니라