< ಯೆಹೆಜ್ಕೇಲನು 21 >
1 ೧ ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು,
上主的話傳給我說:「
2 ೨ “ನರಪುತ್ರನೇ, ನೀನು ಯೆರೂಸಲೇಮಿನ ಅಭಿಮುಖನಾಗಿ ಅಲ್ಲಿನ ಪವಿತ್ರ ಸ್ಥಾನಗಳ ಕಡೆಗೆ ಮಾತನಾಡುತ್ತಾ ಇಸ್ರಾಯೇಲ್ ದೇಶ ಕುರಿತು ಪ್ರವಾದಿಸಿ,
人子,你轉面向耶路撒冷,發言攻斥聖所,講預言攻斥以色列地域,
3 ೩ ಇಸ್ರಾಯೇಲ್ ದೇಶಕ್ಕೆ ಹೀಗೆ ಸಾರಿ ಹೇಳು, ‘ಯೆಹೋವನು ಇಂತೆನ್ನುತ್ತಾನೆ, ಆಹಾ, ನಾನು ನಿನಗೆ ವಿರುದ್ಧವಾಗಿದ್ದೇನೆ, ನನ್ನ ಖಡ್ಗವನ್ನು ಒರೆಯಿಂದ ಹಿರಿದು, ನಿನ್ನಲ್ಲಿನ ಶಿಷ್ಟರನ್ನೂ, ದುಷ್ಟರನ್ನೂ ಸಂಹರಿಸಿ ಬಿಡುವೆನು.
向以色列地域說:吾主上主這樣說:看,我要攻擊你,我要拔劍出鞘,剷除你境內的義人和惡人,
4 ೪ ನಾನು ನಿನ್ನಲ್ಲಿನ ಶಿಷ್ಟರನ್ನೂ, ದುಷ್ಟರನ್ನೂ ಸಂಹರಿಸಬೇಕೆಂದಿರುವುದರಿಂದ ನನ್ನ ಖಡ್ಗವು ಒರೆಯಿಂದ ಹೊರಟು ದಕ್ಷಿಣದಿಂದ ಉತ್ತರದವರೆಗೆ ಸಕಲ ನರಪ್ರಾಣಿಗಳ ಮೇಲೆ ಬೀಳುವುದು.
因為我要剷除你境內的義人和惡人,為此,我的劍從鞘內抽出,攻擊由南至北一切有血肉的人;
5 ೫ ಆಗ ಯೆಹೋವನಾದ ನಾನೇ ನನ್ನ ಖಡ್ಗವನ್ನು ಒರೆಯಿಂದ ಹಿರಿದಿದ್ದೇನೆ’ ಎಂಬುದು ಎಲ್ಲಾ ನರಮನುಷ್ಯರಿಗೂ ಗೊತ್ತಾಗುವುದು; ಅದು ಪುನಃ ಒರೆಗೆ ಸೇರದು.”
這樣,凡有血肉的人都知道:是我,上主拔劍出鞘,決不再放回。
6 ೬ “ನರಪುತ್ರನೇ, ಮೊರೆಯಿಡು; ಸೊಂಟಮುರಿದಷ್ಟು ದುಃಖದಿಂದ ಜನರ ಮುಂದೆ ನರಳಾಡು.
人子,你應哀歎! 應在他們眼前傷心痛苦哀歎。
7 ೭ ‘ಏಕೆ ನರಳಾಡುತ್ತೀ?’ ಎಂದು ಅವರು ನಿನ್ನನ್ನು ಕೇಳಲು ನೀನು ಅವರಿಗೆ, ‘ಕೆಟ್ಟ ವಾರ್ತೆಯ ನಿಮಿತ್ತ ನರಳುತ್ತೇನೆ; ಇಗೋ, ವಿಪತ್ತು ಬಂತು; ಎಲ್ಲರ ಹೃದಯವು ಕರಗಿ ನೀರಾಗುವುದು; ಎಲ್ಲರ ಕೈ ಜೋಲು ಬೀಳುವುದು, ಎಲ್ಲರ ಮನಸ್ಸು ಕುಂದುವುದು, ಎಲ್ಲರ ಮೊಣಕಾಲು ನೀರಿನಂತೆ ಚಂಚಲವಾಗುವುದು; ಇಗೋ, ಬಂದಿತು, ಬಂದಾಯಿತು’ ಇದು ಕರ್ತನಾದ ಯೆಹೋವನ ನುಡಿ ಎಂದು ಉತ್ತರಕೊಡು.”
假使有人問你說:你為什麼哀歎﹖你就說:是為了一個凶信,當這事來到,所有的心靈必要沮喪,手臂必要無力,精神必要頹唐,膝蓋必要軟弱如水。看,災禍來到時,必將如此──吾主上主的斷語。」
8 ೮ ಆ ಮೇಲೆ ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು,
上主的話傳給我說:「
9 ೯ “ನರಪುತ್ರನೇ, ಕರ್ತನು ಇಂತೆನ್ನುತ್ತಾನೆ ಎಂಬುದಾಗಿ ನುಡಿದು ಹೀಗೆ ಸಾರು, ‘ಆಹಾ, ಖಡ್ಗ, ಸಾಣೆ ಹಿಡಿದ ಖಡ್ಗ, ಮಸೆದ ಖಡ್ಗ!
人子,講預言罷! 吾主這樣說:你要說:有一把劍:是一把磨快而擦亮的劍。
10 ೧೦ ಸಂಹರಿಸುವಂತೆ ಸಾಣೆ ಹಿಡಿದಿದೆ, ಮಿಂಚುವಂತೆ ಮಸೆದಿದೆ; ನಮ್ಮ ಕುಮಾರನ ರಾಜದಂಡವು ಉಳಿದ ಎಲ್ಲಾ ದಂಡಗಳನ್ನು ತಿರಸ್ಕರಿಸುತ್ತದಲ್ಲಾ ಎಂಬುದಾಗಿ ನಾವು ಸಂಭ್ರಮಪಡಬಹುದೇ?
磨快了,是為大屠殺;擦亮了,是為閃爍發光。
11 ೧೧ ಖಡ್ಗವು ಕೈಗೆ ಸಿಗುವಂತೆ ಮಸೆದು ಸಿದ್ಧವಾಗಿದೆ, ಘಾತಕನ ಕೈಗೆ ಈಡಾಗುವ ಹಾಗೆ ಸಾಣೆಹಿಡಿದಿದೆ, ಮಸೆದಿದೆ.
把它拿去擦亮,好握在掌中;這把磨快的劍,這把擦亮的劍,是為交在屠殺者的手中。
12 ೧೨ ನರಪುತ್ರನೇ, ಕೂಗಿಕೋ, ಗೋಳಾಡು! ಖಡ್ಗವು ನನ್ನ ಜನರ ಮೇಲೆಯೂ ಇಸ್ರಾಯೇಲಿನ ಪ್ರಭುಗಳೆಲ್ಲರ ಮೇಲೆಯೂ ಬಿದ್ದಿದೆ; ಆ ಪ್ರಭುಗಳು ನನ್ನ ಜನರೊಂದಿಗೆ ಖಡ್ಗಕ್ಕೆ ತುತ್ತಾಗಿದ್ದಾರೆ; ತೊಡೆಯನ್ನು ಬಡಿದುಕೋ.’”
人子,你要哀號痛哭,因為劍擊在我百姓身上,砍在以色列的一切首領身上。他們同我的百姓都喪身刀下。為此你應擊股示哀,
13 ೧೩ ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಶೋಧನೆಯು ಸಂಭವಿಸಿತು; ತಿರಸ್ಕರಿಸುತ್ತಿದ್ದ ರಾಜದಂಡವೇ ನಾಶವಾದರೆ ಗತಿಯೇನು?
因為已試過一次,這要怎麼辦﹖它連權杖都輕視了,以致不叫它存在──吾主上主的斷語──
14 ೧೪ ನರಪುತ್ರನೇ, ನೀನು ದೈವೋಕ್ತಿಯನ್ನು ಸಾರಿ ಚಪ್ಪಾಳೆ ಹೊಡಿ; ಖಡ್ಗವು ಎರಡರಷ್ಟು, ಮೂರರಷ್ಟು ಸಂಹರಿಸಲಿ! ಪ್ರಜೆಯನ್ನು ಹತಿಸುವ ಖಡ್ಗ! ಸುತ್ತಲು ಬೀಸಿ, ಅಧಿಪತಿಯನ್ನು ಹತಿಸುವ ಖಡ್ಗ!
人子,你講預言,且鼓掌罷! 那劍將是雙刃的,是屠殺的劍;那把大屠殺的劍向他們揮起,
15 ೧೫ ಅವರ ಹೃದಯವು ನೀರಾಗಿ ಬಹಳ ಜನರು ಎಡವಿ ಬೀಳುವಂತೆ ಸಂಹರಿಸುವ ಖಡ್ಗವನ್ನು ಅವರ ಪುರದ್ವಾರಗಳಿಗೆಲ್ಲಾ ತಂದಿದ್ದೇನೆ. ಆಹಾ, ಮಿಂಚಿನಂತೆ ಮಿಂಚುತ್ತದೆ, ವಧೆಗಾಗಿ ಹಂತವಾಗಿ ಸಿದ್ಧವಾಗಿದೆ!
叫他們膽顫心驚,死亡的人加多。我將屠殺的劍尖指向他們所有的門戶上:劍擦亮了,是為閃爍;磨快了,是為屠殺。
16 ೧೬ ಖಡ್ಗವೇ, ಏಕಾಗ್ರವಾಗಿ ಬಲಕ್ಕೆ ಹೋಗು, ಸಿದ್ಧವಾಗಿ ಎಡಕ್ಕೆ ಸಾಗು, ನಿನ್ನ ಖಡ್ಗದ ಮೊನೆಯಿದ್ದ ಕಡೆಗೇ ಹೊರಡು.
你的刀鋒無論轉向何方,或向左,或向右,都應是鋒利的。
17 ೧೭ ನಾನು ಚಪ್ಪಾಳೆ ಹೊಡೆದು ನನ್ನ ರೋಷವನ್ನು ತೀರಿಸಿಕೊಳ್ಳುವೆನು. ಕರ್ತನಾದ ನಾನೇ ಇದನ್ನು ನುಡಿದಿದ್ದೇನೆ.”
我也要親自鼓掌,以平息我的憤怒:這是我上主說的。」
18 ೧೮ ಯೆಹೋವನು ನನಗೆ ಮತ್ತೊಂದು ವಾಕ್ಯವನ್ನು ದಯಪಾಲಿಸಿದನು,
上主的話傳給我說:「
19 ೧೯ “ನರಪುತ್ರನೇ, ಬಾಬೆಲಿನ ಅರಸನ ಖಡ್ಗವು ಬರುವುದಕ್ಕೆ ಎರಡು ದಾರಿಗಳ ನಕ್ಷೆಯನ್ನು ಬರೆ; ಅವೆರಡು ಒಂದೇ ದೇಶದಿಂದ ಹೊರಟ ಹಾಗಿರಲಿ; ಒಂದೊಂದು ಪಟ್ಟಣಕ್ಕೆ ಹೋಗುವ ದಾರಿಯ ಮೊದಲಲ್ಲಿ ಕೈಮರವನ್ನು ಚಿತ್ರಿಸು.
人子,你應劃出兩條路,叫巴比倫王的劍沿路而來。這兩條路應由一地出發;又劃出一隻手,置於通往城市的道路起點。
20 ೨೦ ಅಮ್ಮೋನ್ಯರ ರಬ್ಬಾ ಎಂಬ ಪಟ್ಟಣಕ್ಕೂ, ಯೆಹೂದದೊಳಗೆ ಕೋಟೆ ಕೊತ್ತಲಗಳಿಂದ ಕೂಡಿದ ಯೆರೂಸಲೇಮಿಗೂ ಖಡ್ಗವು ಬರುವುದಕ್ಕೆ ದಾರಿಗಳನ್ನು ಮಾಡು.
你所劃的路,一條使劍至阿孟子民的辣巴特;一條使劍至猶大的堅城耶路撒冷。
21 ೨೧ “ಮಾರ್ಗವು ಕವಲೊಡೆಯುವ ಸ್ಥಳದಲ್ಲಿ, ಎರಡು ದಾರಿಗಳ ಮೊದಲಲ್ಲಿ ಬಾಬೆಲಿನ ಅರಸನು ಶಕುನ ನೋಡುವುದಕ್ಕೆ ನಿಂತಿದ್ದಾನೆ; ಬಾಣಗಳನ್ನು ಕಲಕಿ, ವಿಗ್ರಹಗಳನ್ನು ಪ್ರಶ್ನೆಕೇಳಿ, ಕಾಳಿಜವನ್ನು ಪರೀಕ್ಷಿಸಿದ್ದಾನೆ.
因為巴比倫王站在岔路上,在兩條路口上占卜、搖籤、求問「忒辣芬,」窺察牲肝。
22 ೨೨ ಯೆರೂಸಲೇಮಿನ ಗುರುತಿನ ಬಾಣವು ಅವನ ಬಲಗೈಗೆ ಸಿಕ್ಕಿದೆ; ಅಲ್ಲಿ ಅವನು ಚಿತ್ತವನ್ನು ಭೇದಿಸುವ ಆಯುಧಗಳನ್ನು ನಿಲ್ಲಿಸಿ, ಬಾಯಿದೆರೆದು ಸಂಹಾರ ಧ್ವನಿಗೈದು ಕೂಗಿ! ಬಾಗಿಲುಗಳ ಎದುರಾಗಿ ಚಿತ್ತ ಭೇದಕ ಯಂತ್ರಗಳನ್ನು ನಿಲ್ಲಿಸಿ, ಒಡ್ಡು ಕಟ್ಟಬೇಕೆಂದು ಅದರಿಂದ ಸೂಚನೆಯಾಯಿತು.
在他右手中出現了指向耶路撒冷的籤,他便下令屠殺,吶喊衝鋒,架起攻城門機,堆起高台,建造雲梯。
23 ೨೩ ಪುರನಿವಾಸಿಗಳು ತಾವು ಆ ಅರಸನಿಂದ ಮಾಡಿಸಿಕೊಂಡ ಪ್ರಮಾಣಗಳಲ್ಲಿ ಭರವಸವಿಟ್ಟು, ಈ ಶಕುನವು ಸುಳ್ಳೆಂದು ಭಾವಿಸುವರು; ಆದರೆ ಅವನು ಅವರ ಅಧರ್ಮವನ್ನು ಬಯಲಿಗೆ ತರಲು ಅವನ ಕೈಗೆ ಸಿಕ್ಕಿಬೀಳುವರು.”
可是在曾經發過誓願的以色列子民看來,那籤是假的。但他卻想起了他們的罪過,為使他們俯首就擒。
24 ೨೪ ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನಿಮ್ಮ ಅಪರಾಧಗಳು ಬಯಲಿಗೆ ಬಂದು, ನಿಮ್ಮ ಪಾಪಗಳು ನಿಮ್ಮ ಕಾರ್ಯಗಳಲ್ಲೆಲ್ಲಾ ತಲೆದೋರಿ, ನೀವು ನಿಮ್ಮ ಅಧರ್ಮವನ್ನು ನನ್ನ ಜ್ಞಾಪಕಕ್ಕೆ ತಂದು, ಪಾಪಿಗಳಾಗಿ ನನ್ನ ನೆನಪಿಗೆ ತಂದಿರುವಿರಿ. ಆದುದರಿಂದ ಶತ್ರುವಿನ ಕೈಗೆ ಸಿಕ್ಕಿ ಬೀಳುವಿರಿ.
為此吾主上主這樣說:因為你們顯露了你們的過犯,在你們的行為上,現出你們的惡行,使我想起了你們的罪惡;你們既然使我想起你們的罪惡,你們必在他們手中俯首就擒。
25 ೨೫ ಇಸ್ರಾಯೇಲಿನ ದೊರೆಯೇ, ದುಷ್ಟನೇ, ಭ್ರಷ್ಟನೇ! ನಿನಗೆ ಸಮಯವು ಹತ್ತಿರವಾಗಿದೆ; ಇದೇ ನಿನ್ನ ಅಪರಾಧದ ಕಡೆಗಾಲ.”
你這無恥而萬惡的以色列首領,你的日子到了,犯罪的時候完了。
26 ೨೬ ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಮುಂಡಾಸವನ್ನು ಕಿತ್ತುಬಿಡು! ಕಿರೀಟವನ್ನು ತೆಗೆದುಹಾಕು! ಅದು ಹಾಗೆಯೇ ಇರುವುದಿಲ್ಲ; ತಗ್ಗಿಸಲ್ಪಟ್ಟವನನ್ನು ಹೆಚ್ಚಿಸಿ, ಹೆಚ್ಚಿಸಲ್ಪಟ್ಟವನನ್ನು ತಗ್ಗಿಸುವೆನು.
吾主上主這樣說:取下頭巾,摘去冠冕,一切都要轉變:卑下的要高陞,崇高的要降低。
27 ೨೭ ಧ್ವಂಸ, ನಾನು ಧ್ವಂಸ ಮಾಡುವೆನು; ರಾಜ್ಯಕ್ಕೆ ಬಾಧ್ಯನು ಬರುವುದರೊಳಗೆ ಒಂದೂ ಇದ್ದಂತೆ ಇರದು; ಅವನಿಗೆ ರಾಜ್ಯವನ್ನು ವಹಿಸುವೆನು.”
我必要使他的國澈底滅亡,再也不能存在,直到那掌權者來到,我再交給他。」「
28 ೨೮ ನರಪುತ್ರನೇ, ನೀನು ದೈವಸಂಕಲ್ಪವನ್ನು ಪ್ರಕಟಿಸುತ್ತಾ ಹೀಗೆ ನುಡಿ, “ಅಮ್ಮೋನ್ಯರ ವಿಷಯದಲ್ಲಿಯೂ ಮತ್ತು ಅವರು ಮಾಡುವ ದೂಷಣೆಯ ವಿಷಯದಲ್ಲಿಯೂ ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ಆಹಾ, ಖಡ್ಗ, ಸಂಹರಿಸುವುದಕ್ಕೆ ಹಿರಿದಿದೆ, ಮಿಂಚುವಂತೆ ಚೆನ್ನಾಗಿ ಮಸೆದಿದೆ.
人子,你應講預言說,吾主上主這樣攻斥阿孟子民和他們的侮辱說:你要說:有一把劍,拔出是為屠殺,磨快是為毀滅,擦亮是為閃爍──
29 ೨೯ ಅಮ್ಮೋನೇ, ಪ್ರವಾದಿಗಳೆಂದು ಹೇಳಿಕೊಳ್ಳುತ್ತಿರುವ ನಿನ್ನವರು ದರ್ಶನವನ್ನು ನೋಡಿದೆವು ಎಂದು ಸುಳ್ಳು ಸುಳ್ಳಾಗಿ ಶಕುನ ಹೇಳುತ್ತಿದ್ದಾರೆ. ಸಮಯವು ಹತ್ತಿರವಾಗಿ, ಅಪರಾಧದ ಕಡೆಗಾಲವು ಸಂಭವಿಸಿ, ಹತರಾಗಿ ಬಿದ್ದಿರುವ ದುಷ್ಟರ ಗತಿಯನ್ನು ನೋಡು! ಜೋಯಿಸರನ್ನು ನಂಬಿದ ನೀನೂ ಆ ದುಷ್ಟರ ಕತ್ತುಗಳ ಮೇಲೆ ಒರಗಿ ಬೀಳುವೆ.
那時人所給予你的,是虛假的異像,欺騙的占卜──是為砍在作惡犯罪者的脖子上,他們的日子到了,犯罪的時候完了。
30 ೩೦ “‘ಕತ್ತಿಯನ್ನು ಒರೆಗೆ ಸೇರಿಸು. ನಿನ್ನ ಸೃಷ್ಟಿಯಾದ ಸ್ಥಳದಲ್ಲಿ, ನಿನ್ನ ಜನ್ಮಭೂಮಿಯಲ್ಲಿ ನಿನಗೆ ನ್ಯಾಯ ತೀರಿಸುವೆನು.
把劍插入鞘內,我要在你受造之地,在你生長之地裁判你。
31 ೩೧ ನಿನ್ನ ಮೇಲೆ ನನ್ನ ಕೋಪವನ್ನು ಸುರಿಸಿ, ರೋಷಾಗ್ನಿಯನ್ನು ಊದಿ, ನಿನ್ನನ್ನು ಮೃಗಪ್ರಾಯರೂ, ಹಾಳುಮಾಡುವುದರಲ್ಲಿ ಗಟ್ಟಿಗರೂ ಆದವರ ಕೈಗೆ ಸಿಕ್ಕಿಸುವೆನು.
我要在你身上發洩我的怒氣,在你身上點起我的怒火,將你交在善於破壞的野蠻人手中。
32 ೩೨ ನೀನು ಅಗ್ನಿಗೆ ಆಹುತಿಯಾಗುವಿ; ನಿನ್ನ ರಕ್ತವು ದೇಶದ ಮಧ್ಯದಲ್ಲೆಲ್ಲಾ ಇರುವುದು; ನೀನು ಇನ್ನು ಜ್ಞಾಪಕಕ್ಕೆ ಬರುವುದಿಲ್ಲ’ ಯೆಹೋವನಾದ ನಾನೇ ಇದನ್ನು ನುಡಿದಿದ್ದೇನೆ.”
你要成為烈火的燃料;你的血要傾流在國中,以後再沒有人記念你,因為我上主說了。」