< ಯೆಹೆಜ್ಕೇಲನು 23 >

1 ಯೆಹೋವನು ಮತ್ತೊಂದು ವಾಕ್ಯವನ್ನು ನನಗೆ ದಯಪಾಲಿಸಿದನು,
上主的話傳給我說:「
2 “ನರಪುತ್ರನೇ, ಒಬ್ಬ ತಾಯಿಯ ಮಕ್ಕಳಾದ ಇಬ್ಬರು ಹೆಂಗಸರಿದ್ದರು.
人子,有兩個女人,同是一母的女兒,
3 ಅವರು ಐಗುಪ್ತದಲ್ಲಿ ವ್ಯಭಿಚಾರ ಮಾಡುತ್ತಿದ್ದರು. ಬಾಲ್ಯದಲ್ಲೇ ವ್ಯಭಿಚಾರ ಮಾಡಿದ್ದರಿಂದ ಅವರ ಸ್ತನಗಳು ಹಿಸುಕಲ್ಪಟ್ಟವು. ಎಳೆಯ ತೊಟ್ಟುಗಳು ನಸುಕಲ್ಪಟ್ಟವು.
她們在埃及行過淫,年輕時當過娼,在那裏有人撫弄過她們的乳房,在那裏有人糟蹋了她們的童身。
4 ಅವರ ಹೆಸರುಗಳೇನೆಂದರೆ: ಹಿರಿಯವಳ ಹೆಸರು ಒಹೊಲ ಮತ್ತು ಕಿರಿಯವಳ ಹೆಸರು ಒಹೊಲೀಬ. ಅವರು ನನ್ನವರಾಗಿ ಗಂಡು ಮತ್ತು ಹೆಣ್ಣು ಮಕ್ಕಳನ್ನು ಹೆತ್ತರು. ಒಹೊಲ ಸಮಾರ್ಯವನ್ನೂ, ಒಹೊಲೀಬ ಯೆರೂಸಲೇಮನ್ನೂ ಸೂಚಿಸತಕ್ಕ ಹೆಸರುಗಳಾಗಿವೆ.
她們的名字,大的叫敖曷拉,她妹妹叫敖曷里巴。她們本來屬於我,也給我生了子女。至於她們的名字:敖曷拉是指撒瑪黎雅,敖曷里巴是指耶路撒冷。
5 “ಒಹೊಲಳು ನನ್ನ ವಶವಾಗಿರುವಾಗಲೇ, ವ್ಯಭಿಚಾರ ಮಾಡಿದಳು. ಅವಳು ತನ್ನ ಪ್ರಿಯರನ್ನು, ತನ್ನ ನೆರೆಯವರಾದ ಅಶ್ಶೂರ್ಯರನ್ನು,
敖曷拉屬我時,已行邪淫,戀愛了她的情人,鄰邦亞述人,
6 ಅವರೆಲ್ಲರೂ ನೇರಳೆ ಬಣ್ಣದಿಂದ ಹೊದಿಸಲ್ಪಟ್ಟ ಯೋಧರೂ, ಅಧಿಕಾರಸ್ಥರೂ, ಅಪೇಕ್ಷಿಸತಕ್ಕ ಎಲ್ಲಾ ಯುವಕರೂ, ಕುದರೆಗಳ ಮೇಲೆ ಸವಾರಿಮಾಡುವ ರಾಹುತರೂ ಆಗಿರುವವರನ್ನು ಮೋಹಿಸಿದಳು.
即那穿紫紅衣服的將領和公卿,全是英俊的青年,善於騎馬的騎士。
7 ಅವರಿಗೆ ತನ್ನನ್ನು ವ್ಯಭಿಚಾರಿಣಿಯಾಗಿ ಒಪ್ಪಿಸಿದಳು; ಅವರೆಲ್ಲರೂ ಅಶ್ಶೂರ್ಯರಲ್ಲಿ ಉತ್ತಮೋತ್ತಮರು; ಅವಳು ಯಾರನ್ನು ಮೋಹಿಸಿದಳೋ ಅವರ ವಿಗ್ರಹಗಳಿಂದ ತನ್ನನ್ನು ಅಪವಿತ್ರಪಡಿಸಿಕೊಂಡಳು.
於是她與所有的亞述青年行淫,並為她所戀愛的情人及其偶像所玷污。
8 ಅವಳು ಐಗುಪ್ತದಲ್ಲಿ ವಾಸಿಸುವ ದಿನದವರೆಗೂ ತನ್ನ ವ್ಯಭಿಚಾರವನ್ನು ಬಿಡಲಿಲ್ಲ; ಅವಳ ಬಾಲ್ಯದಲ್ಲಿಯೇ ಅಲ್ಲಿನವರು ಅವಳೊಂದಿಗೆ ಮಲಗಿ, ಅವಳ ಎಳೆಯ ತೊಟ್ಟುಗಳನ್ನು ಒತ್ತಿ, ಅವಳ ಸಂಗಡ ವ್ಯಭಿಚಾರಿಕೆಯನ್ನು ಹೆಚ್ಚೆಚ್ಚಾಗಿ ನಡೆಸಿದರು.
但她仍沒有放棄埃及的淫蕩,因為他們在她青年時曾同她共寢過,糟蹋過她的童身,在她身上發洩過淫慾。
9 “ಆದಕಾರಣ ನಾನು ಅವಳನ್ನು ಅವಳ ಪ್ರಿಯರ ಕೈಗೆ ಅಂದರೆ ಅವಳು ಮೋಹಿಸಿದ ಅಶ್ಶೂರ್ಯರ ಕೈಗೆ ಒಪ್ಪಿಸಿದೆನು.
為此我把她交在她情人手中,即她所熱戀的亞述人手中。
10 ೧೦ ಇವರು ಅವಳ ಬೆತ್ತಲೆತನವನ್ನು ಬಯಲು ಪಡಿಸಿದರು ಮತ್ತು ಅವಳ ಗಂಡು, ಹೆಣ್ಣು ಮಕ್ಕಳನ್ನು ಎತ್ತಿಕೊಂಡು ಹೋಗಿ ಅವರನ್ನು ಖಡ್ಗದಿಂದ ಸಂಹರಿಸಿದರು. ನ್ಯಾಯತೀರ್ಪು ಮಾಡುವಾಗ ಹೆಂಗಸರಲ್ಲಿ ಅವಳಿಗೆ ಕೆಟ್ಟ ಹೆಸರು ಬಂದಿತು.”
他們必要揭露她的私處,擄去她的子女,用刀把她殺死:如此,因所加於她身上的懲罰,她成了婦女的警戒。
11 ೧೧ “ಅವಳ ತಂಗಿಯಾದ ಒಹೊಲೀಬಳು ಇದನ್ನು ನೋಡಿದಾಗ ಅವಳಿಗಿಂತ ಅಧಿಕವಾಗಿ ಮೋಹಗೊಂಡು, ಅಕ್ಕನ ವ್ಯಭಿಚಾರಕ್ಕಿಂತ ಹೆಚ್ಚಾದ ವ್ಯಭಿಚಾರವನ್ನು ನಡೆಸಿ, ಅವಳನ್ನು ಮೀರುವಷ್ಟು ಕೆಟ್ಟವಳಾದಳು.
她妹妹敖曷里巴雖看見了這一切,但她的情慾更甚於她姐姐,她的淫亂也遠超過她姐姐的淫亂。
12 ೧೨ ಇವಳು ತನ್ನ ನೆರೆಯವರಾದ ಅಶ್ಶೂರ್ಯರನ್ನೂ, ನಾಯಕರನ್ನೂ, ಅಧಿಕಾರಿಗಳನ್ನು ವಿಚಿತ್ರವಾಗಿ ಉಡುಪು ಧರಿಸಿ ಕುದರೆಗಳ ಮೇಲೆ ಸವಾರಿಮಾಡುವ ರಾಹುತರನ್ನು, ಸುಂದರವಾದ ಯುವಕರನ್ನು ಮೋಹಿಸಿದಳು.
她也戀愛那些身為將領公卿的鄰邦亞述子民,他們都是衣著華美,善於騎馬的騎士,而且都是英俊的青年。
13 ೧೩ ಇವಳೂ ಅಪವಿತ್ರಳಾಗಿ ಹೋದದ್ದನ್ನು ನೋಡಿದೆನು. ಅವರಿಬ್ಬರು ಒಂದೇ ಮಾರ್ಗವನ್ನು ಹಿಡಿದವರು.
我也見了她受玷污,她們兩的行徑完全一樣。
14 ೧೪ “ಇವಳು ತನ್ನ ವ್ಯಭಿಚಾರವನ್ನು ಇನ್ನೂ ಹೆಚ್ಚಿಸಿದಳು; ಗೋಡೆಯ ಮೇಲೆ ಚಿತ್ರಿಸಲ್ಪಟ್ಟ ಕಸ್ದೀಯರ ಪುರುಷರನ್ನು ನೋಡಿದಳು.
她的淫行有增無減。當她看見繪畫在牆上的人──用丹青繪畫的加色丁人像,
15 ೧೫ ಅವರು ಸೊಂಟಕ್ಕೆ ನಡುಕಟ್ಟನ್ನು ಕಟ್ಟಿ, ತಲೆಗೆ ರುಮಾಲನ್ನು ಧರಿಸಿ, ನೋಟಕ್ಕೆ ಸರದಾರರಂತಿದ್ದ ತಮ್ಮ ಸ್ವದೇಶವಾದ ಕಸ್ದೀಯಕ್ಕೆ ಸೇರಿದ ಬಾಬೆಲಿನ ಪುತ್ರರ ಹಾಗಿರುವ ಆಕಾರಗಳು ಗೋಡೆಯಲ್ಲಿ ಕಿರುಮಂಜಿಯಿಂದ ಚಿತ್ರಿಸಿರುವುದನ್ನು ನೋಡಿದ ಕೂಡಲೆ,
腰間束著佩帶,頭上纏著突出的頭巾,都有軍官的模樣,相似巴比倫人,加色丁即是他們的出生地──
16 ೧೬ ಇವಳು ಮೋಹಗೊಂಡು, ಕಸ್ದೀಯ ದೇಶಕ್ಕೆ ದೂತರನ್ನು ಕಳುಹಿಸಿದಳು.
她的眼一看見,就愛上了他們,遣派使者往加色丁,到他們那裏去。
17 ೧೭ ಆಗ ಬಾಬೆಲಿನವರು ಇವಳ ಪ್ರೀತಿಯ ಮಂಚವನ್ನೇರಿ ತಮ್ಮ ವ್ಯಭಿಚಾರಿಕೆಯಿಂದ ಇವಳನ್ನು ಕೆಡಿಸಿದರು; ಇವಳು ಅವರಿಂದ ಅಪವಿತ್ರವಾಗಲು, ಅವಳಿಗೆ ಈ ಬಗ್ಗೆ ಜಿಗುಪ್ಸೆಯಾಯಿತು.
巴比倫人一來到她那裏,登上愛情的床,行了淫,玷污了她;她所玷污之後,遂即厭棄了他們。
18 ೧೮ ಹೀಗೆ ಇವಳು ವ್ಯಭಿಚಾರವನ್ನು ಮಾಡಿ, ತನ್ನ ಬೆತ್ತಲೆತನವನ್ನು ಬಯಲುಪಡಿಸಿಕೊಂಡಾಗ, ತನ್ನ ಪ್ರೀತಿಯು ಮೊದಲು ಇವಳ ಅಕ್ಕನಿಂದ ಅಗಲಿದ ಹಾಗೆ ಇವಳಿಂದಲೂ ಅಗಲಿತು.
她既暴露了自己的淫行,揭開了自己的私處,因此我也厭棄她,如同厭棄她姐姐一樣。
19 ೧೯ ಆದರೂ ಇವಳು ತಾನು ಐಗುಪ್ತ ದೇಶದಲ್ಲಿ ವ್ಯಭಿಚಾರಿಯಾಗಿದ್ದ ತನ್ನ ಎಳೆಯ ಪ್ರಾಯವನ್ನು ಜ್ಞಾಪಕಮಾಡಿಕೊಂಡು, ತನ್ನ ವ್ಯಭಿಚಾರವನ್ನು ಇನ್ನೂ ಹೆಚ್ಚಿಸಿದಳು.
她又想念年輕時在埃及行淫的日子,遂增強了她的淫慾。
20 ೨೦ ಕತ್ತೆಗಳಂತೆ ಬೆದೆಯುಳ್ಳವರೂ, ಕುದುರೆಗಳಂತೆ ದಾಟುವವರೂ ಆದ ಕಸ್ದೀಯ ವೀರರನ್ನು ಮೋಹಿಸಿದಳು.
她仍戀愛體壯似驢,精足似馬的情人。
21 ೨೧ ಹೀಗೆ ಐಗುಪ್ತ್ಯರಿಂದ ನಿನ್ನ ಯೌವನದ ಸ್ತನಗಳ ತೊಟ್ಟುಗಳನ್ನು ಬತ್ತಿಸಿಕೊಂಡ, ನಿನ್ನ ಯೌವನದ ದುಷ್ಕರ್ಮವನ್ನು ನೆನಪಿಗೆ ತಂದುಕೋ.”
於是你渴望你年輕時的淫行,那時埃及人曾撫摸過你的胸懷,撫弄過你青春的乳房。
22 ೨೨ ಆದುದರಿಂದ ಒಹೊಲೀಬಳೇ, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಆಹಾ, ಯಾರಿಂದ ನಿನ್ನ ಆಶೆ ತೊಲಗಿತೋ, ಆ ನಿನ್ನ ಪ್ರಿಯನನ್ನು ನಾನು ನಿನ್ನ ವಿರುದ್ಧವಾಗಿ ಎಬ್ಬಿಸುತ್ತೇನೆ. ನಾನು ಅವರನ್ನು ಪ್ರತಿಯೊಂದು ಕಡೆಯಲ್ಲಿಯೂ ನಿನ್ನ ವಿರುದ್ಧವಾಗಿ ತರುತ್ತೇನೆ.
因此,敖曷里巴! 吾主上主這樣說:看,我要鼓動你所厭棄的情人來攻擊你,引他們從四周來攻擊你,
23 ೨೩ ಬಾಬಿಲೋನಿನವರು, ಎಲ್ಲಾ ಕಸ್ದೀಯರು, ಪೆಕೋದಿನವರು, ಷೋಯದವರು, ಕೋಯದವರು ಮತ್ತು ಎಲ್ಲಾ ಅಶ್ಶೂರ್ಯರೆಲ್ಲರೊಂದಿಗೂ ಅವರೆಲ್ಲಾ ಅಪೇಕ್ಷಿಸುವಂತಹ ಯೌವನಸ್ಥರೂ, ಸೈನ್ಯಾಧಿಪತಿಗಳೂ, ಅಧಿಕಾರಸ್ಥರೂ, ಯುದ್ಧವೀರರು, ಖ್ಯಾತಿ ಹೊಂದಿದವರೂ, ಎಲ್ಲರೂ ಕುದರೆಗಳ ಮೇಲೆ ಬೀಳುವಂತೆ ಮಾಡುವೆನು.
即巴比倫人和一切加色丁人,培科得、芍亞和科亞,以及一切同他們聯合的亞述人,英俊的青年,一切長官和公卿、軍官和將領,一切善於騎馬的人。
24 ೨೪ ಅವರು ರಥಗಳ ಸಂಗಡವಾಗಿಯೂ, ಬಂಡಿಗಳ ಸಂಗಡ ಜನಗಳ ಸಮೂಹದ ಸಂಗಡ, ಬಲವುಳ್ಳವರಾಗಿ ನಿನ್ನ ವಿರುದ್ಧವಾಗಿ ಬರುವರು; ಸುತ್ತಲೂ ಗುರಾಣಿಗಳನ್ನೂ, ಶಿರಸ್ತ್ರಾಣವನ್ನೂ, ಹಿಡಿದು ನಿನಗೆ ವಿರುದ್ಧವಾಗಿರುವೆನು. ಇದಲ್ಲದೆ ನಾನು ಅವರಿಗೆ ನ್ಯಾಯ ತೀರಿಸುವ ಅಧಿಕಾರವನ್ನು ಕೊಡುವೆನು. ಅವರು ತಮ್ಮ ನ್ಯಾಯಾನುಸಾರವಾಗಿ ನ್ಯಾಯತೀರಿಸುವರು.
他們率領大軍、車輛和輜重車,大隊士卒,都佩著甲、盾和盔,由四周攻擊你。我讓他們處罰你,照他們的法律判決你。
25 ೨೫ ನಾನು ನನ್ನ ರೋಷವನ್ನು ನಿನ್ನ ಮೇಲೆ ಸುರಿಯಲು, ಅವರು ನಿನ್ನಲ್ಲಿ ಕೋಪವನ್ನು ತೀರಿಸಿಕೊಳ್ಳುವರು; ನಿನ್ನ ಮೂಗು, ಕಿವಿಗಳನ್ನು ಕತ್ತರಿಸಿಬಿಡುವರು; ನಿನ್ನಲ್ಲಿ ಉಳಿದವರು ಖಡ್ಗಕ್ಕೆ ತುತ್ತಾಗುವುರು; ನಿನ್ನ ಗಂಡು ಮತ್ತು ಹೆಣ್ಣು ಮಕ್ಕಳನ್ನು ಅಪಹರಿಸುವರು; ನಿನ್ನ ಜನಶೇಷವು ಅಗ್ನಿಗೆ ಆಹುತಿಯಾಗುವುದು.
如此,我要在你身上發洩我的妒火,讓他們以憤怒待你,割去你的鼻子和耳朵;其餘的都死於刀下;他們還要擄去你的子女,餘下的都為火燒死。
26 ೨೬ ನಿನ್ನ ವಸ್ತ್ರಗಳನ್ನು ತೆಗೆದುಹಾಕಿ, ನಿನ್ನ ಸುಂದರ ಒಡವೆಗಳನ್ನು ಕಸಿದುಕೊಳ್ಳುವರು.
他們還要剝光你的衣服,奪去你的裝飾品。
27 ೨೭ ಹೀಗೆ ನಾನು ನಿನ್ನ ದುಷ್ಕರ್ಮವನ್ನು, ನೀನು ಐಗುಪ್ತದಲ್ಲಿ ಇದ್ದಂದಿನಿಂದ ನಡೆದು ಬಂದ ನಿನ್ನ ವ್ಯಭಿಚಾರವನ್ನೂ ನಿನ್ನಿಂದ ತೊಲಗಿಸುವೆನು; ಆ ಮೇಲೆ ನೀನು ಅವರ ಕಡೆಗೆ ಇನ್ನು ಕಣ್ಣೆತ್ತದೆ, ಐಗುಪ್ತವನ್ನು ಜ್ಞಾಪಕಕ್ಕೆ ತಾರದೆ ಇರುವಿ.”
這樣,我才消除你心中的淫蕩,和由埃及地開始的淫行,使你再不敢舉目看他們,再不想念埃及。
28 ೨೮ ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಇಗೋ, ನೀನು ಯಾರನ್ನು ಹಗೆಮಾಡುತ್ತೀಯೋ, ನಿನ್ನ ಆಶೆಯು ಯಾರಿಂದ ಹಿಂದಿರುಗಿತೋ ಅವರ ಕೈಗೆ ನಿನ್ನನ್ನು ನಾನು ಒಪ್ಪಿಸಲು,
因為吾主上主這樣說:看,我要將你交在你所惱恨的人手中,和你所厭惡的人手中。
29 ೨೯ ಅವರು ನಿನ್ನಲ್ಲಿ ಹಗೆ ತೀರಿಸಿಕೊಂಡು, ನೀನು ದುಡಿದದ್ದನ್ನೆಲ್ಲಾ ಅಪಹರಿಸಿ, ನಿನ್ನನ್ನು ಬರಿದುಮಾಡಿ ಬಿಡುವರು; ಹೀಗೆ ನಾಚಿಕೆಗೀಡಾದ ನಿನ್ನ ವ್ಯಭಿಚಾರವು, ಹೌದು, ನಿನ್ನ ದುಷ್ಕರ್ಮವು ಮತ್ತು ವ್ಯಭಿಚಾರವೂ ಬಯಲಿಗೆ ಬರುವುದು.
他們要以惱恨對待你,奪去你的一切財物,赤身露體的拋棄你:因此你放蕩的私處,好色和淫亂都要暴露出來。
30 ೩೦ “ಈ ವಿಪತ್ತುಗಳು ನಿನಗೆ ಸಂಭವಿಸುವುದಕ್ಕೆ, ನೀನು ಜನಾಂಗಗಳನ್ನು ಮೋಹಿಸಿ, ಅವರ ವಿಗ್ರಹಗಳಿಂದ ನಿನ್ನನ್ನು ಅಪವಿತ್ರ ಮಾಡಿಕೊಂಡದ್ದೇ ಕಾರಣ.
他們這樣對待你,是因為你同異民行了淫,受了他們偶像的玷污。
31 ೩೧ ನೀನು, ನಿನ್ನ ಅಕ್ಕನ ಮಾರ್ಗದಲ್ಲಿ ನಡೆದುಕೊಂಡಿದ್ದರಿಂದ ಅವಳು ಕುಡಿದ ಪಾತ್ರೆಯನ್ನೇ ನಿನ್ನ ಕೈಗೆ ಕೊಡುವೆನು.”
你既然走了你姐姐的路,我也要把她的苦爵放在你手中。
32 ೩೨ ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಉದ್ದವೂ, ಅಗಲವೂ, ಬಹಳ ತುಂಬುವ, ನಿನ್ನ ಅಕ್ಕನ ಪಾತ್ರೆಯಲ್ಲಿ ನೀನು ಕುಡಿದು, ಹಾಸ್ಯಕ್ಕೂ, ಕುಚೋದ್ಯಕ್ಕೂ ಗುರಿಯಾಗುವಿ.
吾主上主這樣說:你要喝你姐姐又深又大,容量又多的苦爵,你要成為恥笑和辱罵的對象,
33 ೩೩ ಸಮಾರ್ಯಳೆಂಬ ನಿನ್ನ ಅಕ್ಕನು ಕುಡಿದ ಪಾತ್ರೆಯಿಂದಲೇ ವಿಸ್ಮಯವೂ, ನಾಶವೂ ಆಗುವುದು. ನೀನು ಅಮಲಿನಿಂದಲೂ, ದುಃಖದಿಂದಲೂ ತುಂಬಿರುವೆ.
你要酩酊大醉,滿懷憂愁。你姐姐撒瑪黎雅的爵是驚惶和毀滅的爵,
34 ೩೪ “ನೀನು ಅದರಲ್ಲಿ ಒಂದು ತೊಟ್ಟನ್ನೂ ಉಳಿಸದೆ ಕುಡಿಯುವಿ. ಅದನ್ನು ಬೋಕಿಗಳ ಹಾಗೆ ಒಡೆದುಹಾಕುವೆ ಮತ್ತು ನಿನ್ನ ಸ್ತನಗಳನ್ನು ಕಿತ್ತುಕೊಳ್ಳುವಿ. ಏಕೆಂದರೆ ನಾನೇ ಅದನ್ನು ಹೇಳಿದ್ದೇನೆ” ಎಂಬುದು ಕರ್ತನಾದ ಯೆಹೋವನ ನುಡಿ.
你必要喝,且要喝盡,連渣滓也要吞下;你還要抓破你自己的乳房:這是我所說的──吾主上主的斷語──
35 ೩೫ ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನೀನು ನನ್ನನ್ನು ಬೆನ್ನಿನ ಹಿಂದೆ ಮರೆಮಾಡಿ, ಮರೆತುಬಿಟ್ಟಿದ್ದರಿಂದ ನಿನ್ನ ದುಷ್ಕರ್ಮದ ಮತ್ತು ವ್ಯಭಿಚಾರದ ಫಲವನ್ನು ನೀನೇ ಅನುಭವಿಸಬೇಕು.”
為此吾主上主這樣說:因為你忘了我,把我拋在背後,你也要親自承擔你好色和淫亂的懲罰。」
36 ೩೬ ಯೆಹೋವನು ನನಗೆ ಹೀಗೆ ಹೇಳಿದನು, “ನರಪುತ್ರನೇ, ಒಹೊಲಳಿಗೂ, ಒಹೊಲೀಬಳಿಗೂ ನ್ಯಾಯತೀರುಸುವೆಯೋ? ಅವರ ದುರಾಚಾರಗಳನ್ನು ಅವರಿಗೆ ತಿಳಿಸು.
上主對我說:「人子,你要審判敖曷拉和敖曷里巴,向她們說明她們的醜惡:
37 ೩೭ ಅವರು ವ್ಯಭಿಚಾರ ಮಾಡಿದ್ದಾರೆ, ಅವರ ಕೈ ರಕ್ತಮಯವಾಗಿದೆ, ತಮ್ಮ ವಿಗ್ರಹಗಳಿಂದ ವ್ಯಭಿಚಾರಮಾಡಿದ್ದಾರೆ, ತಮ್ಮ ಗಂಡು ಮಕ್ಕಳನ್ನು ಆ ವಿಗ್ರಹಗಳಿಗೆ ಬದಲಾಗಿ ಆಹುತಿಕೊಟ್ಟಿದ್ದಾರೆ.
她們犯了姦淫,手上帶著殺人的血,同偶像犯了姦淫,還焚化了她們給我所生的子女,祭祀偶像。
38 ೩೮ ಇದನ್ನು ಮಾಡಿದ ದಿನದಲ್ಲೇ ನನ್ನ ಪವಿತ್ರಾಲಯವನ್ನು ಅಪವಿತ್ರ ಪಡಿಸಿ, ನಾನು ನೇಮಿಸಿದ ಸಬ್ಬತ್ ದಿನವನ್ನು ಅಪವಿತ್ರ ಮಾಡಿದ್ದಾರೆ.
此外,她們還對我行了這事:在那一天她們還玷污了我的聖所,褻瀆了我的安息日,
39 ೩೯ ತಮ್ಮ ಮಕ್ಕಳನ್ನು ಕೊಂದು, ತಮ್ಮ ವಿಗ್ರಹಗಳಿಗೆ ಅರ್ಪಿಸಿದ ದಿನದಲ್ಲೇ ನನ್ನ ಪವಿತ್ರಾಲಯವನ್ನು ಸೇರಿ ಅಪವಿತ್ರ ಮಾಡಿದರು; ಇಗೋ, ನನ್ನ ಮಂದಿರದ ಒಳಗೆ ಇದನ್ನು ನಡೆಸಿದ್ದಾರೆ.
因為當她們給她們的偶像祭殺自己的子女時,同一天也進了我的聖所,加以褻瀆。的確,她們在我聖殿中這樣行了。
40 ೪೦ “ದೂತನನ್ನು ಕಳುಹಿಸಿ, ಪುರುಷರನ್ನು ದೂರದಿಂದ ಕರೆಯಿಸಿಕೊಂಡರು; ಇಗೋ, ಅವರು ಬಂದರು; ಎಲೈ ಹೆಂಗಸೇ, ಅವರಿಗಾಗಿ ನೀನು ಸ್ನಾನಮಾಡಿ ಕಣ್ಣಿಗೆ ಕಾಡಿಗೆ ಹಚ್ಚಿ, ನಿನ್ನನ್ನು ಆಭರಣಗಳಿಂದ ಶೃಂಗರಿಸಿಕೊಂಡೆ.
並且他們還想從遠方召人來,便遣使者到他們那裏。看,他們果然來了,你就為了他們而沐浴,畫眼,佩戴珠寶。
41 ೪೧ ವೈಭವದ ಮಂಚದ ಮೇಲೆ ಕುಳಿತುಕೊಂಡೆ. ಅವರ ಮುಂದೆ ಔತಣಕ್ಕೆ ಸಿದ್ಧವಾಗಿದ್ದ ಮೇಜಿನ ಮೇಲೆ ನನ್ನ ಧೂಪತೈಲಗಳನ್ನು ಇಟ್ಟಿರುವೆ.
以後你坐在華麗的床上,床前安放桌子,上面擺上本來獻給我的香和油。
42 ೪೨ “ಅಲ್ಲಿ ವಿನೋದ ಪ್ರಿಯರ ದೊಡ್ಡ ಗುಂಪಿನ ಶಬ್ದವು ಇತ್ತು. ಮರುಭೂಮಿಯಿಂದ ಕುಡುಕರನ್ನೂ ಕರೆಯಿಸಿಕೊಂಡು ಅವರು ನಾಡಿನ ಜನರೊಂದಿಗೆ ಸೇರಿ, ನಿನ್ನ ಕೈಗೆ ಕಡಗವನ್ನು ತೊಡಿಸಿ, ತಲೆಗೆ ಸುಂದರ ಕಿರೀಟವನ್ನಿಟ್ಟರು.
在她那裏可以聽到曠野來的群眾的歡樂嘈雜聲,他們在她們姐妹的腕上帶上鐲子,在她們頭上戴上花冠。
43 ೪೩ ಆಗ ನಾನು, ‘ಆಹಾ, ಕಳೆಗುಂದಿದವಳಿಗೆ ಇನ್ನೂ ವ್ಯಭಿಚಾರವೇ! ಇವರು ಅವಳೊಂದಿಗೆ, ಅವಳು ಇವರೊಂದಿಗೆ ವ್ಯಭಿಚಾರ ಮಾಡುತ್ತಾರಲ್ಲಾ’ ಅಂದುಕೊಂಡೆನು.
那時我就關於這老淫婦說:現今她當然又要去行淫。
44 ೪೪ ವ್ಯಭಿಚಾರಿಯನ್ನು ಸೇರುವ ಹಾಗೆ ಈ ಜನರು ಅವಳನ್ನು ಸೇರಿದರು; ಹೌದು, ಕೆಟ್ಟ ಹೆಂಗಸರಾದ ಒಹೊಲಳನ್ನೂ ಮತ್ತು ಒಹೊಲೀಬಳನ್ನೂ ಸೇರಿದರು.
的確,人都到她們那裏,就如到娼妓那裏,也照樣到淫婦敖曷拉和敖曷里巴那裏。
45 ೪೫ ನೀತಿಯುಳ್ಳ ಮನುಷ್ಯರು ಅವರಿಗೆ ನ್ಯಾಯತೀರಿಸಿ, ವ್ಯಭಿಚಾರಿಣಿಯರಿಗೂ, ರಕ್ತಸುರಿಸುವ ಹೆಂಗಸರಿಗೂ ತಕ್ಕ ದಂಡನೆಯನ್ನು ವಿಧಿಸುವರು; ಅವರು ವ್ಯಭಿಚಾರಿಣಿಯರು, ಅವರ ಕೈ ರಕ್ತಮಯವಾಗಿದೆ.”
但正義的人必要裁判她們,如裁判姦婦和流血的人,因為她們是姦婦,血還在她們手上。
46 ೪೬ ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನಾನು ಈ ಹೆಂಗಸರ ವಿರುದ್ಧವಾಗಿ ಸಭೆಯನ್ನು ಸೇರಿಸಿ, ಇವರನ್ನು ಸೂರೆಗೆ ಸಿಕ್ಕಿಸಿ, ಎಲ್ಲರಿಗೂ ಭಯಾಸ್ಪದವಾಗುವಂತೆ ಮಾಡುವೆನು.
因為吾主上主這樣說:我要使許多人來攻擊她們,叫她們飽受虐待並遭受搶掠。
47 ೪೭ ಸಭೆಯವರು ಇವರ ಮೇಲೆ ಕಲ್ಲೆಸೆದು, ಕತ್ತಿಗಳಿಂದ ಇವರನ್ನು ಸಂಹರಿಸಿ, ಇವರ ಗಂಡು ಮತ್ತು ಹೆಣ್ಣು ಮಕ್ಕಳನ್ನು ಕೊಂದು, ಇವರ ಮನೆಗಳನ್ನು ಬೆಂಕಿಯಿಂದ ಸುಟ್ಟುಬಿಡುವರು.
這群人要用石頭砸死她們,用刀砍碎她們,屠殺她們的子女,火燒她們的房屋。
48 ೪೮ “ಹೀಗೆ ನಾನು ದೇಶದೊಳಗಿಂದ ದುಷ್ಕರ್ಮವನ್ನು ತೊಲಗಿಸುವೆನು; ಇದರಿಂದ ಸಮಸ್ತ ಸ್ತ್ರೀಯರಿಗೂ ನಿಮ್ಮ ದುಷ್ಕರ್ಮವನ್ನು ಅನುಸರಿಸಬಾರದೆಂದು ಬುದ್ಧಿ ಬರುವುದು.
如此,我要把淫亂由此地剷除,使所有的婦女受到警戒,不敢效法你們的淫行。
49 ೪೯ ನಿಮ್ಮ ದುಷ್ಕರ್ಮದ ಫಲವನ್ನು ನಿಮಗೇ ತಿನ್ನಿಸುವರು; ನಿಮ್ಮ ವಿಗ್ರಹಗಳಿಂದಾದ ನಿಮ್ಮ ಪಾಪವನ್ನು ನೀವು ಅನುಭವಿಸುವಿರಿ. ನಾನೇ ಕರ್ತನಾದ ಯೆಹೋವನು” ಎಂದು ತಿಳಿದುಕೊಳ್ಳುವಿರಿ.
我要使你們的淫行歸在你們身上。承擔敬拜偶像的罪罰:如此,你們纔承認我是上主。

< ಯೆಹೆಜ್ಕೇಲನು 23 >