< ಯೆಹೆಜ್ಕೇಲನು 23 >
1 ೧ ಯೆಹೋವನು ಮತ್ತೊಂದು ವಾಕ್ಯವನ್ನು ನನಗೆ ದಯಪಾಲಿಸಿದನು,
여호와의 말씀이 또 내게 임하여 가라사대
2 ೨ “ನರಪುತ್ರನೇ, ಒಬ್ಬ ತಾಯಿಯ ಮಕ್ಕಳಾದ ಇಬ್ಬರು ಹೆಂಗಸರಿದ್ದರು.
인자야 두 여인이 있었으니 한 어미의 딸이라
3 ೩ ಅವರು ಐಗುಪ್ತದಲ್ಲಿ ವ್ಯಭಿಚಾರ ಮಾಡುತ್ತಿದ್ದರು. ಬಾಲ್ಯದಲ್ಲೇ ವ್ಯಭಿಚಾರ ಮಾಡಿದ್ದರಿಂದ ಅವರ ಸ್ತನಗಳು ಹಿಸುಕಲ್ಪಟ್ಟವು. ಎಳೆಯ ತೊಟ್ಟುಗಳು ನಸುಕಲ್ಪಟ್ಟವು.
그들이 애굽에서 행음하되 어렸을 때에 행음하여 그들의 유방이 눌리며 그 처녀의 가슴이 어루만진 바 되었었나니
4 ೪ ಅವರ ಹೆಸರುಗಳೇನೆಂದರೆ: ಹಿರಿಯವಳ ಹೆಸರು ಒಹೊಲ ಮತ್ತು ಕಿರಿಯವಳ ಹೆಸರು ಒಹೊಲೀಬ. ಅವರು ನನ್ನವರಾಗಿ ಗಂಡು ಮತ್ತು ಹೆಣ್ಣು ಮಕ್ಕಳನ್ನು ಹೆತ್ತರು. ಒಹೊಲ ಸಮಾರ್ಯವನ್ನೂ, ಒಹೊಲೀಬ ಯೆರೂಸಲೇಮನ್ನೂ ಸೂಚಿಸತಕ್ಕ ಹೆಸರುಗಳಾಗಿವೆ.
그 이름이 형은 오홀라요 아우는 오홀리바라 그들이 내게 속하여 자녀를 낳았나니 그 이름으로 말하면 오홀라는 사마리아요 오홀리바는 예루살렘이니라
5 ೫ “ಒಹೊಲಳು ನನ್ನ ವಶವಾಗಿರುವಾಗಲೇ, ವ್ಯಭಿಚಾರ ಮಾಡಿದಳು. ಅವಳು ತನ್ನ ಪ್ರಿಯರನ್ನು, ತನ್ನ ನೆರೆಯವರಾದ ಅಶ್ಶೂರ್ಯರನ್ನು,
오홀라가 내게 속하였을 때에 행음하여 그 연애하는 자 곧 그 이웃 앗수르 사람을 사모하였나니
6 ೬ ಅವರೆಲ್ಲರೂ ನೇರಳೆ ಬಣ್ಣದಿಂದ ಹೊದಿಸಲ್ಪಟ್ಟ ಯೋಧರೂ, ಅಧಿಕಾರಸ್ಥರೂ, ಅಪೇಕ್ಷಿಸತಕ್ಕ ಎಲ್ಲಾ ಯುವಕರೂ, ಕುದರೆಗಳ ಮೇಲೆ ಸವಾರಿಮಾಡುವ ರಾಹುತರೂ ಆಗಿರುವವರನ್ನು ಮೋಹಿಸಿದಳು.
그들은 다 자색 옷을 입은 방백과 감독이요 준수한 소년, 말 타는 자들이라
7 ೭ ಅವರಿಗೆ ತನ್ನನ್ನು ವ್ಯಭಿಚಾರಿಣಿಯಾಗಿ ಒಪ್ಪಿಸಿದಳು; ಅವರೆಲ್ಲರೂ ಅಶ್ಶೂರ್ಯರಲ್ಲಿ ಉತ್ತಮೋತ್ತಮರು; ಅವಳು ಯಾರನ್ನು ಮೋಹಿಸಿದಳೋ ಅವರ ವಿಗ್ರಹಗಳಿಂದ ತನ್ನನ್ನು ಅಪವಿತ್ರಪಡಿಸಿಕೊಂಡಳು.
그가 앗수르 중에 잘 생긴 그 모든 자들과 행음하고 누구를 연애하든지 그들의 모든 우상으로 스스로 더럽혔으며
8 ೮ ಅವಳು ಐಗುಪ್ತದಲ್ಲಿ ವಾಸಿಸುವ ದಿನದವರೆಗೂ ತನ್ನ ವ್ಯಭಿಚಾರವನ್ನು ಬಿಡಲಿಲ್ಲ; ಅವಳ ಬಾಲ್ಯದಲ್ಲಿಯೇ ಅಲ್ಲಿನವರು ಅವಳೊಂದಿಗೆ ಮಲಗಿ, ಅವಳ ಎಳೆಯ ತೊಟ್ಟುಗಳನ್ನು ಒತ್ತಿ, ಅವಳ ಸಂಗಡ ವ್ಯಭಿಚಾರಿಕೆಯನ್ನು ಹೆಚ್ಚೆಚ್ಚಾಗಿ ನಡೆಸಿದರು.
그가 젊었을 때에 애굽사람과 동침하매 그 처녀의 가슴이 어루만진바 되며 그 몸에 음란을 쏟음을 당한바 되었더니 그가 그 때부터 행음함을 마지 아니하였느니라
9 ೯ “ಆದಕಾರಣ ನಾನು ಅವಳನ್ನು ಅವಳ ಪ್ರಿಯರ ಕೈಗೆ ಅಂದರೆ ಅವಳು ಮೋಹಿಸಿದ ಅಶ್ಶೂರ್ಯರ ಕೈಗೆ ಒಪ್ಪಿಸಿದೆನು.
그러므로 내가 그를 그 정든 자 곧 그 연애하는 앗수르 사람의 손에 붙였더니
10 ೧೦ ಇವರು ಅವಳ ಬೆತ್ತಲೆತನವನ್ನು ಬಯಲು ಪಡಿಸಿದರು ಮತ್ತು ಅವಳ ಗಂಡು, ಹೆಣ್ಣು ಮಕ್ಕಳನ್ನು ಎತ್ತಿಕೊಂಡು ಹೋಗಿ ಅವರನ್ನು ಖಡ್ಗದಿಂದ ಸಂಹರಿಸಿದರು. ನ್ಯಾಯತೀರ್ಪು ಮಾಡುವಾಗ ಹೆಂಗಸರಲ್ಲಿ ಅವಳಿಗೆ ಕೆಟ್ಟ ಹೆಸರು ಬಂದಿತು.”
그들이 그 하체를 드러내고 그 자녀를 빼앗으며 칼로 그를 죽여 그 누명을 여자에게 드러내었나니 이는 그들이 그에게 심문을 행함이니라
11 ೧೧ “ಅವಳ ತಂಗಿಯಾದ ಒಹೊಲೀಬಳು ಇದನ್ನು ನೋಡಿದಾಗ ಅವಳಿಗಿಂತ ಅಧಿಕವಾಗಿ ಮೋಹಗೊಂಡು, ಅಕ್ಕನ ವ್ಯಭಿಚಾರಕ್ಕಿಂತ ಹೆಚ್ಚಾದ ವ್ಯಭಿಚಾರವನ್ನು ನಡೆಸಿ, ಅವಳನ್ನು ಮೀರುವಷ್ಟು ಕೆಟ್ಟವಳಾದಳು.
그 아우 오홀리바가 이것을 보고도 그 형보다 음욕을 더하며 그 형의 간음함보다 그 간음이 더 심하므로 그 형보다 더 부패하여 졌느니라
12 ೧೨ ಇವಳು ತನ್ನ ನೆರೆಯವರಾದ ಅಶ್ಶೂರ್ಯರನ್ನೂ, ನಾಯಕರನ್ನೂ, ಅಧಿಕಾರಿಗಳನ್ನು ವಿಚಿತ್ರವಾಗಿ ಉಡುಪು ಧರಿಸಿ ಕುದರೆಗಳ ಮೇಲೆ ಸವಾರಿಮಾಡುವ ರಾಹುತರನ್ನು, ಸುಂದರವಾದ ಯುವಕರನ್ನು ಮೋಹಿಸಿದಳು.
그가 그 이웃 앗수르 사람을 연애하였나니 그들은 화려한 의복을 입은 방백과 감독이요 말타는 자들과 준수한 소년이었느니라
13 ೧೩ ಇವಳೂ ಅಪವಿತ್ರಳಾಗಿ ಹೋದದ್ದನ್ನು ನೋಡಿದೆನು. ಅವರಿಬ್ಬರು ಒಂದೇ ಮಾರ್ಗವನ್ನು ಹಿಡಿದವರು.
그 두 여인이 한 길로 행하므로 그도 더러워졌음을 내가 보았노라
14 ೧೪ “ಇವಳು ತನ್ನ ವ್ಯಭಿಚಾರವನ್ನು ಇನ್ನೂ ಹೆಚ್ಚಿಸಿದಳು; ಗೋಡೆಯ ಮೇಲೆ ಚಿತ್ರಿಸಲ್ಪಟ್ಟ ಕಸ್ದೀಯರ ಪುರುಷರನ್ನು ನೋಡಿದಳು.
그가 음행을 더하였음은 붉은 것으로 벽에 그린 사람의 형상 곧 갈대아 사람의 형상을 보았음이니
15 ೧೫ ಅವರು ಸೊಂಟಕ್ಕೆ ನಡುಕಟ್ಟನ್ನು ಕಟ್ಟಿ, ತಲೆಗೆ ರುಮಾಲನ್ನು ಧರಿಸಿ, ನೋಟಕ್ಕೆ ಸರದಾರರಂತಿದ್ದ ತಮ್ಮ ಸ್ವದೇಶವಾದ ಕಸ್ದೀಯಕ್ಕೆ ಸೇರಿದ ಬಾಬೆಲಿನ ಪುತ್ರರ ಹಾಗಿರುವ ಆಕಾರಗಳು ಗೋಡೆಯಲ್ಲಿ ಕಿರುಮಂಜಿಯಿಂದ ಚಿತ್ರಿಸಿರುವುದನ್ನು ನೋಡಿದ ಕೂಡಲೆ,
그 형상은 허리를 띠로 동이고 머리를 긴 수건으로 쌌으며 용모는 다 존귀한 자 곧 그 고토 갈대아 바벨론 사람 같은 것이라
16 ೧೬ ಇವಳು ಮೋಹಗೊಂಡು, ಕಸ್ದೀಯ ದೇಶಕ್ಕೆ ದೂತರನ್ನು ಕಳುಹಿಸಿದಳು.
그가 보고 곧 연애하여 사자를 갈대아 그들에게로 보내매
17 ೧೭ ಆಗ ಬಾಬೆಲಿನವರು ಇವಳ ಪ್ರೀತಿಯ ಮಂಚವನ್ನೇರಿ ತಮ್ಮ ವ್ಯಭಿಚಾರಿಕೆಯಿಂದ ಇವಳನ್ನು ಕೆಡಿಸಿದರು; ಇವಳು ಅವರಿಂದ ಅಪವಿತ್ರವಾಗಲು, ಅವಳಿಗೆ ಈ ಬಗ್ಗೆ ಜಿಗುಪ್ಸೆಯಾಯಿತು.
바벨론 사람이 나아와 연애하는 침상에 올라 음란으로 그를 더럽히매 그가 더럽힘을 입은 후에 그들을 싫어하는 마음이 생겼느니라
18 ೧೮ ಹೀಗೆ ಇವಳು ವ್ಯಭಿಚಾರವನ್ನು ಮಾಡಿ, ತನ್ನ ಬೆತ್ತಲೆತನವನ್ನು ಬಯಲುಪಡಿಸಿಕೊಂಡಾಗ, ತನ್ನ ಪ್ರೀತಿಯು ಮೊದಲು ಇವಳ ಅಕ್ಕನಿಂದ ಅಗಲಿದ ಹಾಗೆ ಇವಳಿಂದಲೂ ಅಗಲಿತು.
그가 이와 같이 그 음행을 나타내며 그 하체를 드러내므로 내 마음이 그 형을 싫어한 것 같이 그를 싫어하였으나
19 ೧೯ ಆದರೂ ಇವಳು ತಾನು ಐಗುಪ್ತ ದೇಶದಲ್ಲಿ ವ್ಯಭಿಚಾರಿಯಾಗಿದ್ದ ತನ್ನ ಎಳೆಯ ಪ್ರಾಯವನ್ನು ಜ್ಞಾಪಕಮಾಡಿಕೊಂಡು, ತನ್ನ ವ್ಯಭಿಚಾರವನ್ನು ಇನ್ನೂ ಹೆಚ್ಚಿಸಿದಳು.
그가 그 음행을 더하여 그 젊었을 때 곧 애굽 땅에서 음행하던 때를 생각하고
20 ೨೦ ಕತ್ತೆಗಳಂತೆ ಬೆದೆಯುಳ್ಳವರೂ, ಕುದುರೆಗಳಂತೆ ದಾಟುವವರೂ ಆದ ಕಸ್ದೀಯ ವೀರರನ್ನು ಮೋಹಿಸಿದಳು.
그 하체는 나귀 같고 그 정수는 말 같은 음란한 간부를 연애하였도다
21 ೨೧ ಹೀಗೆ ಐಗುಪ್ತ್ಯರಿಂದ ನಿನ್ನ ಯೌವನದ ಸ್ತನಗಳ ತೊಟ್ಟುಗಳನ್ನು ಬತ್ತಿಸಿಕೊಂಡ, ನಿನ್ನ ಯೌವನದ ದುಷ್ಕರ್ಮವನ್ನು ನೆನಪಿಗೆ ತಂದುಕೋ.”
네가 젊었을 때에 행음하여 애굽 사람에게 네 가슴과 유방이 어루만진바 되었던 것을 오히려 생각하도다
22 ೨೨ ಆದುದರಿಂದ ಒಹೊಲೀಬಳೇ, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಆಹಾ, ಯಾರಿಂದ ನಿನ್ನ ಆಶೆ ತೊಲಗಿತೋ, ಆ ನಿನ್ನ ಪ್ರಿಯನನ್ನು ನಾನು ನಿನ್ನ ವಿರುದ್ಧವಾಗಿ ಎಬ್ಬಿಸುತ್ತೇನೆ. ನಾನು ಅವರನ್ನು ಪ್ರತಿಯೊಂದು ಕಡೆಯಲ್ಲಿಯೂ ನಿನ್ನ ವಿರುದ್ಧವಾಗಿ ತರುತ್ತೇನೆ.
그러므로 오홀리바야 나 주 여호와가 말하노라 내가 너의 연애하다가 싫어하던 자들을 격동시켜서 그들로 사방에서 와서 너를 치게 하리니
23 ೨೩ ಬಾಬಿಲೋನಿನವರು, ಎಲ್ಲಾ ಕಸ್ದೀಯರು, ಪೆಕೋದಿನವರು, ಷೋಯದವರು, ಕೋಯದವರು ಮತ್ತು ಎಲ್ಲಾ ಅಶ್ಶೂರ್ಯರೆಲ್ಲರೊಂದಿಗೂ ಅವರೆಲ್ಲಾ ಅಪೇಕ್ಷಿಸುವಂತಹ ಯೌವನಸ್ಥರೂ, ಸೈನ್ಯಾಧಿಪತಿಗಳೂ, ಅಧಿಕಾರಸ್ಥರೂ, ಯುದ್ಧವೀರರು, ಖ್ಯಾತಿ ಹೊಂದಿದವರೂ, ಎಲ್ಲರೂ ಕುದರೆಗಳ ಮೇಲೆ ಬೀಳುವಂತೆ ಮಾಡುವೆನು.
그들은 바벨론 사람과 갈대아 모든 무리 브곳과 소아와 고아 사람과 또 그와 함께 한 모든 앗수르 사람 곧 준수한 소년이며 다 방백과 감독이며 귀인과 유명한 자, 다 말 타는 자들이라
24 ೨೪ ಅವರು ರಥಗಳ ಸಂಗಡವಾಗಿಯೂ, ಬಂಡಿಗಳ ಸಂಗಡ ಜನಗಳ ಸಮೂಹದ ಸಂಗಡ, ಬಲವುಳ್ಳವರಾಗಿ ನಿನ್ನ ವಿರುದ್ಧವಾಗಿ ಬರುವರು; ಸುತ್ತಲೂ ಗುರಾಣಿಗಳನ್ನೂ, ಶಿರಸ್ತ್ರಾಣವನ್ನೂ, ಹಿಡಿದು ನಿನಗೆ ವಿರುದ್ಧವಾಗಿರುವೆನು. ಇದಲ್ಲದೆ ನಾನು ಅವರಿಗೆ ನ್ಯಾಯ ತೀರಿಸುವ ಅಧಿಕಾರವನ್ನು ಕೊಡುವೆನು. ಅವರು ತಮ್ಮ ನ್ಯಾಯಾನುಸಾರವಾಗಿ ನ್ಯಾಯತೀರಿಸುವರು.
그들이 병기와 병거와 수레와 크고 작은 방패를 이끌고 투구 쓴 군대를 거느리고 치러 와서 너를 에워쌀지라 내가 심문권을 그들에게 맡긴즉 그들이 그 심문권대로 너를 심문하리라
25 ೨೫ ನಾನು ನನ್ನ ರೋಷವನ್ನು ನಿನ್ನ ಮೇಲೆ ಸುರಿಯಲು, ಅವರು ನಿನ್ನಲ್ಲಿ ಕೋಪವನ್ನು ತೀರಿಸಿಕೊಳ್ಳುವರು; ನಿನ್ನ ಮೂಗು, ಕಿವಿಗಳನ್ನು ಕತ್ತರಿಸಿಬಿಡುವರು; ನಿನ್ನಲ್ಲಿ ಉಳಿದವರು ಖಡ್ಗಕ್ಕೆ ತುತ್ತಾಗುವುರು; ನಿನ್ನ ಗಂಡು ಮತ್ತು ಹೆಣ್ಣು ಮಕ್ಕಳನ್ನು ಅಪಹರಿಸುವರು; ನಿನ್ನ ಜನಶೇಷವು ಅಗ್ನಿಗೆ ಆಹುತಿಯಾಗುವುದು.
내가 너를 향하여 투기를 발하리니 그들이 분노로 네게 행하여 네 코와 귀를 깎아버리고 남은 자를 칼로 엎드러뜨리며 네 자녀를 빼앗고 그 남은 자를 불에 사르며
26 ೨೬ ನಿನ್ನ ವಸ್ತ್ರಗಳನ್ನು ತೆಗೆದುಹಾಕಿ, ನಿನ್ನ ಸುಂದರ ಒಡವೆಗಳನ್ನು ಕಸಿದುಕೊಳ್ಳುವರು.
또 네 옷을 벗기며 네 장식품을 빼앗을지라
27 ೨೭ ಹೀಗೆ ನಾನು ನಿನ್ನ ದುಷ್ಕರ್ಮವನ್ನು, ನೀನು ಐಗುಪ್ತದಲ್ಲಿ ಇದ್ದಂದಿನಿಂದ ನಡೆದು ಬಂದ ನಿನ್ನ ವ್ಯಭಿಚಾರವನ್ನೂ ನಿನ್ನಿಂದ ತೊಲಗಿಸುವೆನು; ಆ ಮೇಲೆ ನೀನು ಅವರ ಕಡೆಗೆ ಇನ್ನು ಕಣ್ಣೆತ್ತದೆ, ಐಗುಪ್ತವನ್ನು ಜ್ಞಾಪಕಕ್ಕೆ ತಾರದೆ ಇರುವಿ.”
이와 같이 내가 네 음란과 애굽 땅에서부터 음행하던 것을 그치게 하여 너로 그들을 향하여 눈을 들지도 못하게 하며 다시는 애굽을 기억하지도 못하게 하리라
28 ೨೮ ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಇಗೋ, ನೀನು ಯಾರನ್ನು ಹಗೆಮಾಡುತ್ತೀಯೋ, ನಿನ್ನ ಆಶೆಯು ಯಾರಿಂದ ಹಿಂದಿರುಗಿತೋ ಅವರ ಕೈಗೆ ನಿನ್ನನ್ನು ನಾನು ಒಪ್ಪಿಸಲು,
나 주 여호와가 말하노라 내가 너의 미워하는 자와 네 마음에 싫어하는 자의 손에 너를 붙이리니
29 ೨೯ ಅವರು ನಿನ್ನಲ್ಲಿ ಹಗೆ ತೀರಿಸಿಕೊಂಡು, ನೀನು ದುಡಿದದ್ದನ್ನೆಲ್ಲಾ ಅಪಹರಿಸಿ, ನಿನ್ನನ್ನು ಬರಿದುಮಾಡಿ ಬಿಡುವರು; ಹೀಗೆ ನಾಚಿಕೆಗೀಡಾದ ನಿನ್ನ ವ್ಯಭಿಚಾರವು, ಹೌದು, ನಿನ್ನ ದುಷ್ಕರ್ಮವು ಮತ್ತು ವ್ಯಭಿಚಾರವೂ ಬಯಲಿಗೆ ಬರುವುದು.
그들이 미워하는 마음으로 네게 행하여 네 모든 수고한 것을 빼앗고 너를 벌거벗겨 적신으로 두어서 네 음행의 벗은 몸 곧 네 음란하며 음행하던 것을 드러낼 것이라
30 ೩೦ “ಈ ವಿಪತ್ತುಗಳು ನಿನಗೆ ಸಂಭವಿಸುವುದಕ್ಕೆ, ನೀನು ಜನಾಂಗಗಳನ್ನು ಮೋಹಿಸಿ, ಅವರ ವಿಗ್ರಹಗಳಿಂದ ನಿನ್ನನ್ನು ಅಪವಿತ್ರ ಮಾಡಿಕೊಂಡದ್ದೇ ಕಾರಣ.
네가 이같이 당할 것은 네가 음란히 이방을 좇고 그 우상들로 더럽혔음이로다
31 ೩೧ ನೀನು, ನಿನ್ನ ಅಕ್ಕನ ಮಾರ್ಗದಲ್ಲಿ ನಡೆದುಕೊಂಡಿದ್ದರಿಂದ ಅವಳು ಕುಡಿದ ಪಾತ್ರೆಯನ್ನೇ ನಿನ್ನ ಕೈಗೆ ಕೊಡುವೆನು.”
네가 네 형의 길로 행하였은즉 내가 그의 잔을 네 손에 주리라
32 ೩೨ ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಉದ್ದವೂ, ಅಗಲವೂ, ಬಹಳ ತುಂಬುವ, ನಿನ್ನ ಅಕ್ಕನ ಪಾತ್ರೆಯಲ್ಲಿ ನೀನು ಕುಡಿದು, ಹಾಸ್ಯಕ್ಕೂ, ಕುಚೋದ್ಯಕ್ಕೂ ಗುರಿಯಾಗುವಿ.
나 주 여호와가 말하노라 깊고 크고 가득히 담긴 네 형의 잔을 네가 마시고 비소와 조롱을 당하리라
33 ೩೩ ಸಮಾರ್ಯಳೆಂಬ ನಿನ್ನ ಅಕ್ಕನು ಕುಡಿದ ಪಾತ್ರೆಯಿಂದಲೇ ವಿಸ್ಮಯವೂ, ನಾಶವೂ ಆಗುವುದು. ನೀನು ಅಮಲಿನಿಂದಲೂ, ದುಃಖದಿಂದಲೂ ತುಂಬಿರುವೆ.
네가 네 형 사마리아의 잔 곧 놀람과 패망의 잔에 넘치게 취하고 근심할지라
34 ೩೪ “ನೀನು ಅದರಲ್ಲಿ ಒಂದು ತೊಟ್ಟನ್ನೂ ಉಳಿಸದೆ ಕುಡಿಯುವಿ. ಅದನ್ನು ಬೋಕಿಗಳ ಹಾಗೆ ಒಡೆದುಹಾಕುವೆ ಮತ್ತು ನಿನ್ನ ಸ್ತನಗಳನ್ನು ಕಿತ್ತುಕೊಳ್ಳುವಿ. ಏಕೆಂದರೆ ನಾನೇ ಅದನ್ನು ಹೇಳಿದ್ದೇನೆ” ಎಂಬುದು ಕರ್ತನಾದ ಯೆಹೋವನ ನುಡಿ.
네가 그 잔을 다 기울여 마시고 그 깨어진 조각을 씹으며 네 유방을 꼬집을 것은 내가 이렇게 말하였음이니라 나 주 여호와의 말이니라
35 ೩೫ ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನೀನು ನನ್ನನ್ನು ಬೆನ್ನಿನ ಹಿಂದೆ ಮರೆಮಾಡಿ, ಮರೆತುಬಿಟ್ಟಿದ್ದರಿಂದ ನಿನ್ನ ದುಷ್ಕರ್ಮದ ಮತ್ತು ವ್ಯಭಿಚಾರದ ಫಲವನ್ನು ನೀನೇ ಅನುಭವಿಸಬೇಕು.”
그러므로 나 주 여호와가 말하노라 네가 나를 잊었고 또 나를 네 등 뒤에 버렸은즉 너는 네 음란과 네 음행의 죄를 담당할지니라 하시니라
36 ೩೬ ಯೆಹೋವನು ನನಗೆ ಹೀಗೆ ಹೇಳಿದನು, “ನರಪುತ್ರನೇ, ಒಹೊಲಳಿಗೂ, ಒಹೊಲೀಬಳಿಗೂ ನ್ಯಾಯತೀರುಸುವೆಯೋ? ಅವರ ದುರಾಚಾರಗಳನ್ನು ಅವರಿಗೆ ತಿಳಿಸು.
여호와께서 또 내게 이르시되 인자야 네가 오홀라와 오홀리바를 국문하려느냐 그러면 그 가증한 일을 그들에게 고하라
37 ೩೭ ಅವರು ವ್ಯಭಿಚಾರ ಮಾಡಿದ್ದಾರೆ, ಅವರ ಕೈ ರಕ್ತಮಯವಾಗಿದೆ, ತಮ್ಮ ವಿಗ್ರಹಗಳಿಂದ ವ್ಯಭಿಚಾರಮಾಡಿದ್ದಾರೆ, ತಮ್ಮ ಗಂಡು ಮಕ್ಕಳನ್ನು ಆ ವಿಗ್ರಹಗಳಿಗೆ ಬದಲಾಗಿ ಆಹುತಿಕೊಟ್ಟಿದ್ದಾರೆ.
그들이 행음하였으며 피를 손에 묻혔으며 또 그 우상과 행음하며 내게 낳아준 자식들을 우상을 위하여 화제로 살랐으며
38 ೩೮ ಇದನ್ನು ಮಾಡಿದ ದಿನದಲ್ಲೇ ನನ್ನ ಪವಿತ್ರಾಲಯವನ್ನು ಅಪವಿತ್ರ ಪಡಿಸಿ, ನಾನು ನೇಮಿಸಿದ ಸಬ್ಬತ್ ದಿನವನ್ನು ಅಪವಿತ್ರ ಮಾಡಿದ್ದಾರೆ.
이외에도 그들이 내게 행한 것이 있나니 당일에 내 성소를 더럽히며 내 안식일을 범하였도다
39 ೩೯ ತಮ್ಮ ಮಕ್ಕಳನ್ನು ಕೊಂದು, ತಮ್ಮ ವಿಗ್ರಹಗಳಿಗೆ ಅರ್ಪಿಸಿದ ದಿನದಲ್ಲೇ ನನ್ನ ಪವಿತ್ರಾಲಯವನ್ನು ಸೇರಿ ಅಪವಿತ್ರ ಮಾಡಿದರು; ಇಗೋ, ನನ್ನ ಮಂದಿರದ ಒಳಗೆ ಇದನ್ನು ನಡೆಸಿದ್ದಾರೆ.
그들이 자녀를 죽여 그 우상에게 드린 당일에 내 성소에 들어와서 더럽혔으되 그들이 내 성전 가운데서 그렇게 행하였으며
40 ೪೦ “ದೂತನನ್ನು ಕಳುಹಿಸಿ, ಪುರುಷರನ್ನು ದೂರದಿಂದ ಕರೆಯಿಸಿಕೊಂಡರು; ಇಗೋ, ಅವರು ಬಂದರು; ಎಲೈ ಹೆಂಗಸೇ, ಅವರಿಗಾಗಿ ನೀನು ಸ್ನಾನಮಾಡಿ ಕಣ್ಣಿಗೆ ಕಾಡಿಗೆ ಹಚ್ಚಿ, ನಿನ್ನನ್ನು ಆಭರಣಗಳಿಂದ ಶೃಂಗರಿಸಿಕೊಂಡೆ.
또 사자를 원방에 보내어 사람을 불러오게 하고 그들이 오매 그들을 위하여 목욕하며 눈썹을 그리며 스스로 단장하고
41 ೪೧ ವೈಭವದ ಮಂಚದ ಮೇಲೆ ಕುಳಿತುಕೊಂಡೆ. ಅವರ ಮುಂದೆ ಔತಣಕ್ಕೆ ಸಿದ್ಧವಾಗಿದ್ದ ಮೇಜಿನ ಮೇಲೆ ನನ್ನ ಧೂಪತೈಲಗಳನ್ನು ಇಟ್ಟಿರುವೆ.
화려한 자리에 앉아 앞에 상을 베풀고 내 향과 기름을 그 위에 놓고
42 ೪೨ “ಅಲ್ಲಿ ವಿನೋದ ಪ್ರಿಯರ ದೊಡ್ಡ ಗುಂಪಿನ ಶಬ್ದವು ಇತ್ತು. ಮರುಭೂಮಿಯಿಂದ ಕುಡುಕರನ್ನೂ ಕರೆಯಿಸಿಕೊಂಡು ಅವರು ನಾಡಿನ ಜನರೊಂದಿಗೆ ಸೇರಿ, ನಿನ್ನ ಕೈಗೆ ಕಡಗವನ್ನು ತೊಡಿಸಿ, ತಲೆಗೆ ಸುಂದರ ಕಿರೀಟವನ್ನಿಟ್ಟರು.
그 무리와 편히 지껄이고 즐겼으며 또 광야에서 잡류와 술취한 사람을 청하여 오매 그들이 팔쇠를 그 손목에 끼우고 아름다운 면류관을 그 머리에 씌웠도다
43 ೪೩ ಆಗ ನಾನು, ‘ಆಹಾ, ಕಳೆಗುಂದಿದವಳಿಗೆ ಇನ್ನೂ ವ್ಯಭಿಚಾರವೇ! ಇವರು ಅವಳೊಂದಿಗೆ, ಅವಳು ಇವರೊಂದಿಗೆ ವ್ಯಭಿಚಾರ ಮಾಡುತ್ತಾರಲ್ಲಾ’ ಅಂದುಕೊಂಡೆನು.
내가 음행으로 쇠한 여인을 가리켜 말하노라 그가 그래도 그들과 피차 행음하는도다
44 ೪೪ ವ್ಯಭಿಚಾರಿಯನ್ನು ಸೇರುವ ಹಾಗೆ ಈ ಜನರು ಅವಳನ್ನು ಸೇರಿದರು; ಹೌದು, ಕೆಟ್ಟ ಹೆಂಗಸರಾದ ಒಹೊಲಳನ್ನೂ ಮತ್ತು ಒಹೊಲೀಬಳನ್ನೂ ಸೇರಿದರು.
그들이 그에게 나아오기를 기생에게 나아옴 같이 음란한 여인 오홀라와 오홀리바에게 나아왔은즉
45 ೪೫ ನೀತಿಯುಳ್ಳ ಮನುಷ್ಯರು ಅವರಿಗೆ ನ್ಯಾಯತೀರಿಸಿ, ವ್ಯಭಿಚಾರಿಣಿಯರಿಗೂ, ರಕ್ತಸುರಿಸುವ ಹೆಂಗಸರಿಗೂ ತಕ್ಕ ದಂಡನೆಯನ್ನು ವಿಧಿಸುವರು; ಅವರು ವ್ಯಭಿಚಾರಿಣಿಯರು, ಅವರ ಕೈ ರಕ್ತಮಯವಾಗಿದೆ.”
의인이 음부를 심문함 같이 심문하며 피를 흘린 여인을 심문함 같이 심문하리니 그들은 음부요 또 피가 그 손에 묻었음이니라
46 ೪೬ ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನಾನು ಈ ಹೆಂಗಸರ ವಿರುದ್ಧವಾಗಿ ಸಭೆಯನ್ನು ಸೇರಿಸಿ, ಇವರನ್ನು ಸೂರೆಗೆ ಸಿಕ್ಕಿಸಿ, ಎಲ್ಲರಿಗೂ ಭಯಾಸ್ಪದವಾಗುವಂತೆ ಮಾಡುವೆನು.
나 주 여호와가 말하노라 내가 군대를 거느리고 와서 치게 하여 그들로 학대와 약탈을 당하게 하리니
47 ೪೭ ಸಭೆಯವರು ಇವರ ಮೇಲೆ ಕಲ್ಲೆಸೆದು, ಕತ್ತಿಗಳಿಂದ ಇವರನ್ನು ಸಂಹರಿಸಿ, ಇವರ ಗಂಡು ಮತ್ತು ಹೆಣ್ಣು ಮಕ್ಕಳನ್ನು ಕೊಂದು, ಇವರ ಮನೆಗಳನ್ನು ಬೆಂಕಿಯಿಂದ ಸುಟ್ಟುಬಿಡುವರು.
그 군대가 그들을 돌로 치며 칼로 죽이고 그 자녀도 죽이며 그 집들을 불사르리라
48 ೪೮ “ಹೀಗೆ ನಾನು ದೇಶದೊಳಗಿಂದ ದುಷ್ಕರ್ಮವನ್ನು ತೊಲಗಿಸುವೆನು; ಇದರಿಂದ ಸಮಸ್ತ ಸ್ತ್ರೀಯರಿಗೂ ನಿಮ್ಮ ದುಷ್ಕರ್ಮವನ್ನು ಅನುಸರಿಸಬಾರದೆಂದು ಬುದ್ಧಿ ಬರುವುದು.
이와 같이 내가 이 땅에서 음란을 그치게 한즉 모든 여인이 경성하여 너희 음행을 본받지 아니하리라
49 ೪೯ ನಿಮ್ಮ ದುಷ್ಕರ್ಮದ ಫಲವನ್ನು ನಿಮಗೇ ತಿನ್ನಿಸುವರು; ನಿಮ್ಮ ವಿಗ್ರಹಗಳಿಂದಾದ ನಿಮ್ಮ ಪಾಪವನ್ನು ನೀವು ಅನುಭವಿಸುವಿರಿ. ನಾನೇ ಕರ್ತನಾದ ಯೆಹೋವನು” ಎಂದು ತಿಳಿದುಕೊಳ್ಳುವಿರಿ.
그들이 너희 음란으로 너희에게 보응한즉 너희가 모든 우상을 위하던 죄를 담당할지라 너희가 나를 주 여호와인 줄 알리라 하시니라