< ಯೆಹೆಜ್ಕೇಲನು 24 >
1 ೧ ಒಂಭತ್ತನೆಯ ವರ್ಷದ, ಹತ್ತನೆಯ ತಿಂಗಳಿನ, ಹತ್ತನೆಯ ದಿನದಲ್ಲಿ ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು,
Sürgünlüyümüzün doqquzuncu ilində, onuncu ayın onuncu günü mənə Rəbbin bu sözü nazil oldu:
2 ೨ “ನರಪುತ್ರನೇ, ಈ ದಿನದ, ಇದೇ ದಿನದ ಹೆಸರನ್ನು ಬರೆದುಕೋ; ಇದೇ ದಿನದಲ್ಲಿ ಬಾಬೆಲಿನ ಅರಸನು ಯೆರೂಸಲೇಮಿಗೆ ಮುತ್ತಿಗೆ ಹಾಕಿದ್ದಾನೆ.
«Ey bəşər oğlu, bu günün, məhz bu günün tarixini qeyd elə. Çünki Babil padşahı məhz bu gün Yerusəlimi mühasirəyə aldı.
3 ೩ “ಈ ದಂಗೆಕೋರ ಮನೆತನದವರಿಗೆ ದೃಷ್ಟಾಂತವನ್ನು ತಿಳಿಸಿ ಹೀಗೆ ಹೇಳು, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ಹಂಡೆಯನ್ನು ಒಲೆಯ ಮೇಲಿಡು, ಮೇಲಿಡು, ಅದರಲ್ಲಿ ನೀರನ್ನು ಹೊಯ್ಯಿ;
Bu üsyankar xalqa bir məsəl danışıb söylə ki, Xudavənd Rəbb belə deyir: “Qazanı oda qoy, oda qoy, İçinə su doldur.
4 ೪ ಮಾಂಸದ ತುಂಡುಗಳನ್ನು ಅಂದರೆ ತೊಡೆ, ಹೆಗಲು ಮೊದಲಾದ ಒಳ್ಳೆಯ ತುಂಡುಗಳನ್ನೆಲ್ಲಾ ಅದರಲ್ಲಿ ಒಟ್ಟಿಗೆ ಹಾಕು, ಉತ್ತಮವಾದ ಎಲುಬುಗಳನ್ನು ಅದರಲ್ಲಿ ತುಂಬಿಸು.
Ətin parçalarını, ən yaxşı parçalarını, Budu və döşü oraya yığ. Onu seçilmiş sümüklərlə doldur.
5 ೫ ಹಿಂಡಿನಲ್ಲಿ ಶ್ರೇಷ್ಠವಾದದನ್ನು ತೆಗೆದುಕೋ; ಹಂಡೆಯ ತಳದಲ್ಲಿ ಎಲುಬುಗಳನ್ನು ರಾಶಿಯಾಗಿ ಒಟ್ಟು; ಚೆನ್ನಾಗಿ ಕುದಿಸು; ಹೌದು, ಎಲುಬುಗಳು ಅದರಲ್ಲಿ ಬೇಯಿಸು.’”
Sürüdən ən yaxşı heyvanları götür, Qazanın altına isə odun yığ. Qoy içindəki su qaynasın ki, Qazandakı sümükləri də bişsin”.
6 ೬ ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಆಹಾ, ರಕ್ತಮಯವಾದ ಪಟ್ಟಣವೇ ನಿನಗೆ ಧಿಕ್ಕಾರ, ಒಳಗೆ ಕಿಲುಬು ಹಿಡಿದಿರುವ, ಕಿಲುಬು ಬಿಟ್ಟುಹೋಗದಿರುವ ಹಂಡೆ! ಅದರಿಂದ ಮಾಂಸದ ತುಂಡುಗಳನ್ನು ಸಿಕ್ಕಿ ಸಿಕ್ಕಿದ ಹಾಗೆ ತೆಗೆದುಬಿಡು, ಅದಕ್ಕಾಗಿ ಚೀಟುಗಳನ್ನು ಹಾಕಬೇಡ.
Buna görə də Xudavənd Rəbb belə deyir: “Qan tökən şəhərin vay halına! Ora pas tutmuşdur, Öz pasından təmizlənməmiş qazana bənzəyir. Püşk atmadan əti parça-parça qazandan çıxarın.
7 ೭ “ಯೆರುಸಲೇಮ್ ನಗರ ಸುರಿಸಿದ ರಕ್ತವು ಅದರ ಮಧ್ಯದಲ್ಲಿದೆ; ಅದು ಅದನ್ನು ಬಂಡೆಯ ತುದಿಯಲ್ಲಿ ಇಟ್ಟಿದ್ದಾರೆ. ಧೂಳು ಮುಚ್ಚುವ ಹಾಗೆ ನೆಲದ ಮೇಲೆ ಚೆಲ್ಲಲಿಲ್ಲ.
Çünki onun tökdüyü qan hələ içindədir. Qanı tozla örtmək üçün hətta yerə də tökmədi, Düz çılpaq qayanın üstünə axıtdı.
8 ೮ ಮುಯ್ಯಿಗೆ ಮುಯ್ಯಿ ತೀರಿಸುವುದಕ್ಕೆ, ರೋಷವನ್ನೆಬ್ಬಿಸುವ ಹಾಗೆ, ನಾನು ಅದರ ರಕ್ತಾಪರಾಧವನ್ನು ಮುಚ್ಚಿ ಬಿಡದಂತೆ ಅದನ್ನು ಬಂಡೆಯ ತುದಿಯ ಮೇಲೆ ಇಟ್ಟಿದ್ದೇನೆ.”
Mən də qəzəbi alovlandıraraq Qisas alınsın deyə Onun qanını çılpaq bir qayanın Üstünə tökdüm ki, örtülməsin”.
9 ೯ ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಆಹಾ, ರಕ್ತಾಪರಾಧವುಳ್ಳ ಆ ಪಟ್ಟಣಕ್ಕೆ ಕಷ್ಟ! ನಾನೇ ಬೆಂಕಿಯನ್ನು ರಾಶಿಯಾಗಿ ಹೆಚ್ಚಿಸುವೆನು.
Buna görə də Xudavənd Rəbb belə deyir: “Qan tökən şəhərin vay halına! Mən də odun qalağını böyüdəcəyəm.
10 ೧೦ ಬಹಳ ಸೌದೆ ಹಾಕಿ, ಬೆಂಕಿಯನ್ನು ಹೆಚ್ಚಿಸಿ, ಮಾಂಸವನ್ನು ಬೇಯಿಸು, ಸಾರು ಮಂದವಾಗಿರಲಿ, ಎಲುಬುಗಳು ಬೆಂದು ಹೋಗಲಿ.
Odunları yığ, odu alovlandır, Əti yaxşı bişir, Ədviyyatını qat, Sümüklər də yansın.
11 ೧೧ “ಆ ಮೇಲೆ ಹಂಡೆಯು ಕಾದು ತಾಮ್ರವು ಕೆಂಪಾಗಿ, ಒಳಗಿನ ಕಲ್ಮಷವು ಕರಗಿ, ಕಿಲುಬು ಇಲ್ಲವಾಗುವಂತೆ ಅದನ್ನು ಬರಿದುಮಾಡಿ ಕೆಂಡಗಳ ಮೇಲೆ ಇಡು.
Onun közləri üstünə Qazanı boş qoy ki, qızsın, Misi yansın, İçindəki murdarlığı getsin, Pası ərisin.
12 ೧೨ ಅದರ ಕಲ್ಮಷವು ನನ್ನಲ್ಲಿ ಕೇವಲ ಪ್ರಯಾಸವನ್ನೂ, ಆಯಾಸವನ್ನೂ ಉಂಟುಮಾಡಿದೆ; ಆದರೂ ಅದಕ್ಕೆ ಹತ್ತಿದ ಕಿಲುಬು ಹೋಗಲಿಲ್ಲ, ಬೆಂಕಿಯಿಂದಲೂ ನೀಗಲಿಲ್ಲ.
Bütün zəhmət hədər getdi, Qalın pası ərimək bilmir, Pası odla da çıxmır.
13 ೧೩ “ಅಂತೆಯೇ ನಿನ್ನ ದುಷ್ಕರ್ಮವು ಅಸಹ್ಯವಾಗಿರುವುದರಿಂದಲೂ, ನಾನು ನಿನ್ನನ್ನು ಎಷ್ಟು ಶುದ್ಧಿಮಾಡಿದರೂ ನೀನು ಶುದ್ಧಿಯಾಗದೆ ಹೋದದ್ದರಿಂದಲೂ ನಾನು ನನ್ನ ರೋಷವನ್ನು ನಿನ್ನಲ್ಲಿ ತೀರಿಸಿ ಶಾಂತನಾಗುವವರೆಗೂ ನೀನು ನಿನ್ನ ಕೊಳೆಯನ್ನು ಇನ್ನು ಕಳೆದುಕೊಳ್ಳದೆ, ಶುದ್ಧಿಯಾಗದೆ ಇರುವಿ.”
Etdiyin pozğunluq səni murdarladı, Səni təmizləmək istədim, Amma sən təmizlənmək istəmədin. Sənə qarşı qəzəbim yatana qədər Öz murdarlığından təmizlənməyəcəksən.
14 ೧೪ ಯೆಹೋವನಾದ ನಾನೇ ಇದನ್ನು ನುಡಿದಿದ್ದೇನೆ, “ಇದು ನಡೆಯುವುದು ನಿಶ್ಚಯ, ನಾನು ನೆರವೇರಿಸುವೆನು; ಹಿಂದೆಗೆಯೆನು, ಕ್ಷಮಿಸೆನು, ಕರುಣಿಸೆನು; ನಿನ್ನ ದುರ್ಮಾರ್ಗ, ದುಷ್ಕೃತ್ಯಗಳಿಗೆ ಸರಿಯಾಗಿ ನಿನಗೆ ನ್ಯಾಯತೀರ್ಪು ಆಗುವುದು” ಇದು ಕರ್ತನಾದ ಯೆಹೋವನ ನುಡಿ.
Mən Rəbb bunu söylədim, Vaxt çatdı ki, yerinə yetirim. Çəkinməyəcəyəm, acımayacağam, Peşman olmayacağam. Adətlərinə və əməllərinə görə cəzalanacaqsan” Xudavənd Rəbb belə deyir».
15 ೧೫ ಯೆಹೋವನು ಇನ್ನೊಂದು ವಾಕ್ಯವನ್ನು ನನಗೆ ದಯಪಾಲಿಸಿದನು,
Mənə Rəbbin bu sözü nazil oldu:
16 ೧೬ “ನರಪುತ್ರನೇ, ಇಗೋ, ಒಂದೇ ಏಟಿನಿಂದ ನಾನು ನಿನಗೆ ನೇತ್ರಾನಂದವಾಗಿರುವವಳನ್ನು ನಿನ್ನಿಂದ ತೆಗೆದುಬಿಡುವೆನು, ಆದರೂ ನೀನು ಗೋಳಾಡಬೇಡ, ಅಳಬೇಡ, ನಿನ್ನ ಕಣ್ಣೀರು ಸುರಿಯದಿರಲಿ.
«Ey bəşər oğlu, gözündə çox qiymətli olan bir nəfəri bir zərbə ilə əlindən alacağam. Amma sən yas tutma, ağlayıb göz yaşı tökmə.
17 ೧೭ ಸದ್ದಿಲ್ಲದೆ ಮೊರೆಯಿಡು, ವಿಯೋಗ ದುಃಖವನ್ನು ತೋರಿಸಬೇಡ, ರುಮಾಲನ್ನು ಸುತ್ತಿಕೊಂಡಿರು, ಕೆರಗಳನ್ನು ಮೆಟ್ಟಿಕೊಂಡಿರು, ಬಾಯನ್ನು ಬಟ್ಟೆಯಿಂದ ಮುಚ್ಚಿಕೊಳ್ಳಬೇಡ, ಗಾರಿಗೆಯನ್ನು ತಿನ್ನಬೇಡ.”
İçin-için ağla, ölülər üçün yas tutma. Çalmanı başına qoyub çarığını ayağına gey. Üzünün alt hissəsini örtmə, yas tutanların çörəyini yemə».
18 ೧೮ ಹೀಗೆ ಆಜ್ಞೆಯಾಗಲು ನಾನು ಪ್ರಾತಃಕಾಲದಲ್ಲಿ ಜನರೊಂದಿಗೆ ಮಾತನಾಡಿದನು, ಸಾಯಂಕಾಲಕ್ಕೆ ನನ್ನ ಪತ್ನಿಯು ತೀರಿಹೋದಳು; ಮಾರನೆಯ ಬೆಳಿಗ್ಗೆ ನನಗೆ ಅಪ್ಪಣೆಯಾದಂತೆ ಮಾಡಿದೆನು.
Mən səhər xalqa bu sözləri söylədim. Axşamüstü arvadım öldü. Ertəsi gün səhər mənə əmr olunanı etdim.
19 ೧೯ ಆಗ ಜನರು, “ನೀನು ಹೀಗೆ ಮಾಡುವುದರಿಂದ ಪ್ರಯೋಜನವೇನೆಂದು ತಿಳಿಸುವುದಿಲ್ಲವೇ?” ಎಂದು ನನ್ನನ್ನು ಕೇಳಲು,
Xalq mənə dedi: «Etdiyin bu şeylərin bizə nə dəxli var? Bizə bildirməzsən?»
20 ೨೦ ನಾನು ಅವರಿಗೆ ಹೀಗೆ ಹೇಳಿದೆನು, “ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದ್ದಾನೆ.
Mən onlara dedim: «Mənə Rəbbin bu sözü nazil oldu:
21 ೨೧ ಇಸ್ರಾಯೇಲ್ ವಂಶದವರಿಗೆ ಹೀಗೆ ಸಾರು, ‘ಇಗೋ, ನಿಮಗೆ ಮುಖ್ಯಬಲವೂ ನೇತ್ರಾನಂದವೂ ಪ್ರಾಣಪ್ರಿಯವೂ ಆದ ನನ್ನ ಪವಿತ್ರಾಲಯವನ್ನು ನಾನು ಅಪವಿತ್ರಪಡಿಸುವೆನು, ನೀವು ಬಿಟ್ಟು ಬಂದಿರುವ ನಿಮ್ಮ ಗಂಡು ಮತ್ತು ಹೆಣ್ಣು ಮಕ್ಕಳು ಖಡ್ಗಕ್ಕೆ ತುತ್ತಾಗುವರು, ಎಂಬುದಾಗಿ ಸೇನಾದೀಶ್ವರನಾದ ಯೆಹೋವನು ನುಡಿದಿದ್ದಾರೆ
İsrail nəslinə söylə ki, Xudavənd Rəbb belə deyir: “Öyündüyünüz güc mənbəyinizi, gözünüzdə ən qiymətli olan şeyi, ürəyinizin arzusu olan Müqəddəs məkanımın murdarlanmasına izin verəcəyəm. Arxada qoyduğunuz oğullarınız və qızlarınız qılıncdan keçiriləcək.
22 ೨೨ ನಾನು ಮಾಡಿದಂತೆ ಆಗ ನೀವೂ ಮಾಡುವಿರಿ, ಅಂದರೆ ಬಟ್ಟೆಯಿಂದ ಬಾಯನ್ನು ಮುಚ್ಚಿಕೊಳ್ಳದೆ, ಮನುಷ್ಯರ ರೊಟ್ಟಿಯನ್ನು ತಿನ್ನದೆ ಇರುವಿರಿ,
Mən nə etdimsə, siz də elə edəcəksiniz: üzünüzün alt hissəsini örtməyəcəksiniz, yas tutanların çörəyini yeməyəcəksiniz.
23 ೨೩ ರುಮಾಲುಗಳು ನಿಮ್ಮ ತಲೆಯ ಮೇಲೆಯೂ, ಕೆರಗಳು ನಿಮ್ಮ ಪಾದಗಳ ಅಡಿಯಲ್ಲಿಯೂ ಇರುವವು; ನೀವು ಗೋಳಾಡುವುದಿಲ್ಲ, ಅಳುವುದಿಲ್ಲ; ನಿಮ್ಮ ಅಧರ್ಮದಿಂದ ಕ್ಷೀಣವಾಗಿ ಹೋಗುವಿರಿ, ಒಬ್ಬರ ಸಂಗಡಲೊಬ್ಬರು ನರಳುವಿರಿ.
Çalmanız başınızda, çarığınız ayağınızda olacaq. Yas tutmayacaq, ağlamayacaqsınız, ancaq təqsirlərinizin içində əriyib yox olacaq, baş-başa verib inləyəcəksiniz.
24 ೨೪ ಹೀಗೆ ಯೆಹೆಜ್ಕೇಲನು ನಿಮಗೆ ಮುಂಗುರುತಾಗಿರುವನು; ಅವನು ಮಾಡಿದಂತೆಯೇ ಎಲ್ಲವನ್ನು ನೀವು ಮಾಡುವಿರಿ; ಇದು ಸಂಭವಿಸುವಾಗ ನಾನೇ ಕರ್ತನಾದ ಯೆಹೋವನು ಎಂದು ನಿಮಗೆ ಗೊತ್ತಾಗುವುದು.’”
Yezekel sizə bir əlamət olacaq: o nə edəcəksə, siz də onu edəcəksiniz. Bu hadisələr olanda biləcəksiniz ki, Xudavənd Rəbb Mənəm”.
25 ೨೫ “ನರಪುತ್ರನೇ, ಅವರ ಬಲಾಧಾರವೂ, ಅವರ ನೇತ್ರಾನಂದಕರವಾದ ಆಲಯವನ್ನು, ಅವರು ಆಶಿಸುವುದನ್ನೂ, ಅವರ ಗಂಡು ಮತ್ತು ಹೆಣ್ಣು ಮಕ್ಕಳನ್ನೂ ಅವರ ಬಲದಿಂದ ತೆಗೆದು ಹಾಕುವ ದಿನದಲ್ಲಿ,
Sən ey bəşər oğlu, qalalarını, sevinc və izzətlərini, gözlərində qiymətli olan şeyi, ürəklərinin arzusunu, oğulları ilə qızlarını onlardan aldığım vaxt –
26 ೨೬ ಆ ದಿನದಲ್ಲಿ ತಪ್ಪಿಸಿಕೊಂಡವನು ನಿನ್ನ ಬಳಿಗೆ ಬಂದು ನಡೆದ ಸಂಗತಿಯನ್ನು ನಿನಗೆ ತಿಳಿಸುವನು.
o gün fəlakətdən qaçıb qurtulan bir nəfər gəlib sənə bu xəbəri bildirəcək.
27 ೨೭ ಆ ದಿನದಲ್ಲಿ ತಪ್ಪಿಸಿಕೊಂಡವನ ಕಡೆಗೆ ನಿನ್ನ ಬಾಯಿ ತೆರೆದಿರುವುದು. ನೀನು ಇನ್ನು ಮೂಕನಾಗಿರದೆ ಮಾತನಾಡುವೆ ಮತ್ತು ಅವರಿಗೆ ಗುರುತಾಗಿರುವೆ. ನಾನೇ ಯೆಹೋವನು” ಎಂದು ಅವರಿಗೆ ಗೊತ್ತಾಗುವುದು.
O gün bu qaçağın yanında dilin açılacaq, onunla danışacaq, artıq dinməz qalmayacaqsan. Beləcə onlar üçün bir əlamət olacaqsan. Onda biləcəklər ki, Rəbb Mənəm».