< ಯೆಹೆಜ್ಕೇಲನು 25 >
1 ೧ ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು,
En des HEEREN woord geschiedde tot mij, zeggende:
2 ೨ “ನರಪುತ್ರನೇ, ನೀನು ಅಮ್ಮೋನಿಗೆ ವಿರುದ್ಧವಾಗಿ, ಅದರ ವಿಷಯದಲ್ಲಿ ದೈವಸಂಕಲ್ಪವನ್ನು ಪ್ರವಾದಿಸುತ್ತಾ ಅದಕ್ಕೆ ಹೀಗೆ ನುಡಿ,
Mensenkind! zet uw aangezicht tegen de kinderen Ammons, en profeteer tegen dezelve;
3 ೩ ‘ಕರ್ತನಾದ ಯೆಹೋವನ ಮಾತನ್ನು ಕೇಳು’ ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ಅಮ್ಮೋನೇ, ನನ್ನ ಪವಿತ್ರಾಲಯವು ಅಪವಿತ್ರವಾದದ್ದನ್ನು, ಇಸ್ರಾಯೇಲ್ ದೇಶವು ಹಾಳುಬಿದ್ದದನ್ನು, ಯೆಹೂದ ವಂಶದವರು ಸೆರೆಹೋದದ್ದನ್ನು ನೀನು ನೋಡಿ, “ಅಹಾ!” ಎಂದು ಹಿಗ್ಗಿಕೊಂಡೆ.
En zeg tot de kinderen Ammons: Hoort des Heeren HEEREN woord: Alzo zegt de Heere HEERE: Omdat gij gezegd hebt: Heah! over Mijn heiligdom, als het ontheiligd werd, en over het land Israels, als het verwoest werd, en over het huis van Juda, als zij in gevangenis gingen;
4 ೪ ಆದುದರಿಂದ ಇಗೋ, ನಾನು ನಿನ್ನನ್ನು ಮೂಡಣದವರಿಗೆ ಬಾಧ್ಯವಾಗಿ ವಶಪಡಿಸುವೆನು; ಅವರು ನಿನ್ನಲ್ಲಿ ತಮ್ಮ ಗುಡಾರಗಳನ್ನು ಹಾಕಿ ಪಾಳೆಯಮಾಡಿಕೊಳ್ಳುವರು; ನಿನ್ನ ಹಣ್ಣನ್ನು ತಿಂದು, ನಿನ್ನ ಹಾಲನ್ನು ಕುಡಿದುಬಿಡುವರು.
Daarom, ziet, Ik zal u aan die van het oosten overgeven tot een bezitting, dat zij hun burgen in u zetten, en hun woningen in u stellen, die zullen uw vruchten eten, en die zullen uw melk drinken.
5 ೫ ನಾನು ರಬ್ಬಾ ಪಟ್ಟಣವನ್ನು ಒಂಟೆಗಳಿಗೆ ಲಾಯವನ್ನಾಗಿಯೂ, ಅಮ್ಮೋನ್ ಸೀಮೆಯನ್ನು ಹಿಂಡುಗಳಿಗೆ ತಂಗುವ ಸ್ಥಳವನ್ನಾಗಿಯೂ ಮಾಡುವೆನು. ನಾನೇ ಯೆಹೋವನು ಎಂದು ನಿಮಗೆ ಗೊತ್ತಾಗುವುದು.’”
En Ik zal Rabba tot een kemelstal maken, en de kinderen Ammons tot een schaapskooi; en gij zult weten, dat Ik de HEERE ben.
6 ೬ ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನೀನು ಚಪ್ಪಾಳೆ ಹೊಡೆದು, ಕಾಲಿನಿಂದ ನೆಲವನ್ನು ಬಡಿದು, ಇಸ್ರಾಯೇಲ್ ದೇಶವನ್ನು ಮನಃಪೂರ್ವಕವಾಗಿ ತಿರಸ್ಕರಿಸಿ, ಅದರ ಗತಿಗೆ ಹಿಗ್ಗಿಕೊಂಡೆ.
Want alzo zegt de Heere HEERE: Omdat gij met de hand geklapt, en met den voet gestampt hebt, en van harte verblijd zijt geweest in al uw plundering, over het land Israels;
7 ೭ ಆದುದರಿಂದ ಇಗೋ, ನಾನು ನಿನ್ನ ಮೇಲೆ ಕೈಯೆತ್ತಿ ನಿನ್ನನ್ನು ಸುಲಿಗೆಗಾಗಿ ಮ್ಲೇಚ್ಛರಿಗೆ ವಶಪಡಿಸಿ, ಜನಾಂಗಗಳೊಳಗಿಂದ ಕಿತ್ತುಬಿಟ್ಟು, ದೇಶಗಳೊಳಗಿಂದ ನಿನ್ನ ಹೆಸರನ್ನು ಅಳಿಸಿ, ನಿನ್ನನ್ನು ಹಾಳುಮಾಡುವೆನು; ಆಗ ನಾನೇ ಯೆಹೋವನು ಎಂದು ನಿನಗೆ ಗೊತ್ತಾಗುವುದು.”
Daarom, ziet, Ik zal Mijn hand tegen u uitstrekken, en u den heidenen ten buit geven, en zal u uit de volken uitroeien, en u uit de landen verdoen; Ik zal u verdelgen; en gij zult weten, dat Ik de HEERE ben.
8 ೮ ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಆಹಾ, ಯೆಹೂದ ವಂಶವು ಎಲ್ಲಾ ಜನಾಂಗಗಳ ಹಾಗೆಯೇ ಇದೆ, ವಿಶೇಷವೇನು? ಎಂದು ಮೋವಾಬೂ ಮತ್ತು ಸೇಯೀರೂ ಅಂದುಕೊಂಡಿದೆ.
Alzo zegt de Heere HEERE: Omdat Moab en Seir zeggen: Ziet, het huis van Juda is gelijk al de heidenen;
9 ೯ ಆದುದರಿಂದ, ಇಗೋ, ದೇಶಭೂಷಣಗಳಾದ ಮೋವಾಬಿನ ಗಡಿಯ ಪಟ್ಟಣಗಳು, ಅಂದರೆ ಬೇತ್ ಯೆಷೀಮೋತ್, ಬಾಳ್ ಮೆಯೋನ್, ಕಿರ್ಯಾಥಯಿಮ್ ಎಂಬ ಪಟ್ಟಣಗಳು ಇರುವ ಕಡೆಯಲ್ಲಿ ನಾನು ಮೋವಾಬಿನ ಮೇರೆಯನ್ನು ಒಡೆದುಬಿಡುವೆನು.
Daarom, ziet, Ik zal de zijde van Moab openen, van de steden af, van zijn steden, die van zijn grenzen af zijn, het sieraad des lands, Beth-Jesimoth, Baal-Meon, en tot Kiriathaim toe;
10 ೧೦ ಆ ಸೀಮೆಯನ್ನಲ್ಲದೆ, ಅಮ್ಮೋನನ್ನೂ ಮೂಡಣದವರಿಗೆ ಬಾಧ್ಯವಾಗಿ ಕೊಟ್ಟು, ಅಮ್ಮೋನ್ಯರು ಜನಾಂಗಗಳೊಳಗೆ ನಿರ್ನಾಮವಾಗಬೇಕೆಂಬ ನನ್ನ ಸಂಕಲ್ಪವನ್ನು ನೆರವೇರಿಸುವೆನು.
Voor die van het oosten, met het land der kinderen Ammons, hetwelk Ik ter bezitting zal overgeven; opdat der kinderen Ammons onder de heidenen niet meer gedacht worde.
11 ೧೧ ಮೋವಾಬ್ಯರಿಗೂ ದಂಡನೆಗಳನ್ನು ವಿಧಿಸಿ ತೀರಿಸುವೆನು. ಆಗ ನಾನೇ ಯೆಹೋವನು ಎಂದು ಅವರಿಗೆ ಗೊತ್ತಾಗುವುದು.”
Ik zal ook in Moab gerichten oefenen; en zij zullen weten, dat Ik de HEERE ben.
12 ೧೨ ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಎದೋಮು ಯೆಹೂದ ವಂಶಕ್ಕೆ ಪ್ರತಿಕಾರಮಾಡಿದೆ; ಮುಯ್ಯಿಗೆ ಮುಯ್ಯಿ ತೀರಿಸಿ ಮಹಾಪರಾಧವನ್ನು ನಡೆಸಿದೆ.”
Alzo zegt de Heere HEERE: Omdat Edom met enkel wraakgierigheid gehandeld heeft tegen het huis van Juda; en zij zich zeer schuldig gemaakt hebben, dat zij zich aan hen gewroken hebben:
13 ೧೩ ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನಾನು ಎದೋಮಿನ ಮೇಲೆ ಕೈಯೆತ್ತಿ, ಅದರೊಳಗಿಂದ ಜನರನ್ನೂ ಮತ್ತು ಪಶುಗಳನ್ನೂ ನಿರ್ಮೂಲಮಾಡಿ, ತೇಮಾನಿನಿಂದ ದೆದಾನಿನವರೆಗೂ ಅದನ್ನು ಹಾಳುಮಾಡಿ, ಪ್ರಜೆಗಳನ್ನು ಖಡ್ಗಕ್ಕೆ ಸಿಕ್ಕಿಸುವೆನು.
Daarom, alzo zegt de Heere HEERE: Ik zal ook Mijn hand uitstrekken tegen Edom, en Ik zal mens en beest uit haar uitroeien; en zal haar tot een woestheid stellen van Theman af; en zij zullen tot Dedan toe door het zwaard vallen.
14 ೧೪ ನಾನು ಎದೋಮಿಗೆ ನನ್ನ ಜನರಾದ ಇಸ್ರಾಯೇಲರ ಕೈಯಿಂದ ಮುಯ್ಯಿ ತೀರಿಸುವೆನು; ಅವರು ನನ್ನ ಕೋಪರೋಷಗಳಿಗೆ ತಕ್ಕ ಹಾಗೆ ಅದಕ್ಕೆ ಮಾಡುವರು; ನನ್ನ ಪ್ರತಿಕಾರವು ಎದೋಮಿನ ಅನುಭವಕ್ಕೆ ಬರುವುದು” ಇದು ಕರ್ತನಾದ ಯೆಹೋವನ ನುಡಿ.
En Ik zal Mijn wraak doen aan Edom, door de hand van Mijn volk Israel; en zij zullen tegen Edom naar Mijn toorn en naar Mijn grimmigheid handelen; alzo zullen zij Mijn wraak gewaar worden, spreekt de Heere HEERE.
15 ೧೫ ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಫಿಲಿಷ್ಟಿಯರು ಯೆಹೂದಕ್ಕೆ ಪ್ರತಿಕಾರಮಾಡಿದ್ದಾರೆ; ಹೌದು, ಮುಯ್ಯಿಗೆಮುಯ್ಯಿ ತೀರಿಸುತ್ತಾ ಅದನ್ನು ಮನಃಪೂರ್ವಕವಾಗಿ ತಿರಸ್ಕರಿಸಿ ದೀರ್ಘದ್ವೇಷದಿಂದ ಹಾಳುಮಾಡಿದ್ದಾರೆ.”
Alzo zegt de Heere HEERE: Omdat de Filistijnen door wraak gehandeld hebben, en van harte wraak geoefend hebben door plundering, om te vernielen door een eeuwige vijandschap;
16 ೧೬ ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಇಗೋ, ನಾನು ಫಿಲಿಷ್ಟಿಯರ ಮೇಲೆ ಕೈಯೆತ್ತುವೆನು; ಕೆರೇತಿಯರನ್ನು ಕತ್ತರಿಸಿಬಿಟ್ಟು, ಸಮುದ್ರತೀರದಲ್ಲಿನ ಜನಶೇಷವನ್ನು ನಿಶ್ಶೇಷಮಾಡುವೆನು.
Daarom, alzo zegt de Heere HEERE: Ziet, Ik strek Mijn hand uit tegen de Filistijnen, en zal de Cherethieten uitroeien, en het overblijfsel van de zeehaven verdoen.
17 ೧೭ ಅವರೆಲ್ಲರನ್ನು ಬಲವಾಗಿ ಖಂಡಿಸಿ ಮುಯ್ಯಿಗೆಮುಯ್ಯಿ ತೀರಿಸುವೆನು; ಹೀಗೆ ಪ್ರತಿಕಾರಮಾಡುವುದರಿಂದ ನಾನೇ ಯೆಹೋವನು ಎಂದು ಅವರಿಗೆ ಗೊತ್ತಾಗುವುದು.”
En Ik zal grote wraak met grimmige straffingen onder hen doen; en zij zullen weten, dat Ik de HEERE ben, als Ik Mijn wraak aan hen gedaan zal hebben.