< ಯೆಹೆಜ್ಕೇಲನು 26 >
1 ೧ ಹನ್ನೊಂದನೆಯ ವರ್ಷದ, ತಿಂಗಳಿನ ಮೊದಲನೆಯ ದಿನದಲ್ಲಿ ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು,
১বাবিলে আমাদের বন্দিত্বের সময়ে সেই একাদশ বছরে, মাসের প্রথম দিনের, সদাপ্রভুর এই বাক্য আমার কাছে এল এবং বলল,
2 ೨ “ನರಪುತ್ರನೇ, ತೂರು, ಯೆರೂಸಲೇಮಿನ ವಿಷಯವಾಗಿ, ಅಹಾ!, ಜನಾಂಗಗಳಿಗೆ ಅಡ್ಡಿಯಾಗಿದ್ದ ಬಾಗಿಲು ಮುರಿದುಹೋಗಿದೆ! ಅದು ನನ್ನ ಕಡೆಗೆ ತಿರುಗಿಕೊಂಡಿದೆ, ಯೆರೂಸಲೇಮು ಹಾಳಾದ ಕಾರಣ ನಾನು ತುಂಬಿಕೊಳ್ಳುವೆನು ಎಂದು” ಅಂದುಕೊಳ್ಳುವೆನು.
২“মানুষের সন্তান, যিরূশালেমের বিষয়ে সোর বলেছে, ‘হায়! লোকদের দরজা ভেঙে গেল! সে আমার দিকে ফিরেছে; আমি পূর্ণা হব, যেমন সে উচ্ছিন্ন হয়েছে!’
3 ೩ ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಇಗೋ, ತೂರ್ ದೇಶವೇ, ನಾನು ನಿನಗೆ ವಿರುದ್ಧವಾಗಿದ್ದೇನೆ; ಸಮುದ್ರವು ತನ್ನ ತೆರೆಗಳನ್ನು ಎಬ್ಬಿಸುವಂತೆ ನಾನು ಅನೇಕ ಜನಾಂಗಗಳನ್ನು ನಿನ್ನ ಮೇಲೆ ಎಬ್ಬಿಸುವೆನು.
৩এই জন্য প্রভু সদাপ্রভু এই কথা বলেন, ‘হে সোর, দেখ, আমি তোমার বিরুদ্ধে এবং সমুদ্র যেমন তরঙ্গ ওঠায়, তেমনি তোমার বিরুদ্ধে আমি অনেক জাতিকে ওঠাব।
4 ೪ ಅವು ತೂರಿನ ಪೌಳಿಗೋಡೆಯನ್ನು ಉರುಳಿಸಿ, ಅದರ ಕೋಟೆ ಕೊತ್ತಲುಗಳನ್ನು ಕೆಡವಿ ಹಾಕುವವು; ನಾನು ಅದರ ಧೂಳನ್ನು ಒರೆಸಿ, ಅದನ್ನು ಬೋಳು ಬಂಡೆಯಂತೆ ಮಾಡುವೆನು.
৪তারা সোরের পাঁচিল ধ্বংস করবে, তার উচ্চ দুর্গ সব ভেঙে ফেলবে। আমি তার ধূলো তা থেকে দূর করে ফেলব ও তাকে উন্মুক্ত পাথর করব।
5 ೫ ಅದು ಸಮುದ್ರದ ಮಧ್ಯದಲ್ಲಿ ಬಲೆಗಳನ್ನು ಹಾಕುವ ಸ್ಥಳವಾಗಿರುವುದು. ನಾನೇ ಇದನ್ನು ನುಡಿದಿದ್ದೇನೆ ಎಂದು ಕರ್ತನಾದ ಯೆಹೋವನು ಅನ್ನುತ್ತಾನೆ, ‘ಅದು ಜನಾಂಗಗಳಿಗೆ ಸೂರೆಯಾಗುವುದು.’
৫সে সমুদ্রের মধ্যে জাল পাতার জায়গা হবে, কারণ আমিই এটা বললাম!’ এটা প্রভু সদাপ্রভু বলেন এবং সে জাতিদের লুটের জিনিস হবে।
6 ೬ ಬಯಲು ಭೂಮಿಯಲ್ಲಿನ ಅದರ ಕುಮಾರ್ತೆಯರು ಖಡ್ಗದಿಂದ ಹತರಾಗುವರು. ಆಗ ನಾನೇ ಯೆಹೋವನು” ಎಂದು ಎಲ್ಲರಿಗೂ ಗೊತ್ತಾಗುವುದು.
৬এলাকায় তার যে মেয়েরা আছে, তারা তরোয়ালে বধ হবে এবং তারা জানবে যে, আমিই সদাপ্রভু!
7 ೭ ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಇಗೋ, ರಾಜಾಧಿರಾಜನೂ, ಬಾಬೆಲಿನ ಅರಸನೂ ಆದ ನೆಬೂಕದ್ನೆಚ್ಚರನನ್ನು ಅಶ್ವಗಳ ಸಂಗಡಲೂ, ರಥಗಳ ಸಂಗಡಲೂ, ರಾಹುತರ ಸಂಗಡಲೂ, ಬಹುಜನರ ಸಂಗಡಲೂ ಕೂಡಿದವನಾಗಿ ನಾನು ಪೂರ್ವದಿಂದ ತೂರಿನ ಮೇಲೆ ಬರಮಾಡುವೆನು.
৭কারণ প্রভু সদাপ্রভু এই কথা বলেন, দেখ, আমি উত্তরদিক থেকে ঘোড়া, রথ ও অশ্বারোহীদের এবং জনসমাজের ও অনেক সৈন্যের সঙ্গে রাজাধিরাজ বাবিল-রাজ নবূখদনিত্সরকে এনে সোরে উপস্থিত করবে।
8 ೮ ಅವನು ಬಯಲು ಭೂಮಿಯಲ್ಲಿನ ನಿನ್ನ ಕುಮಾರ್ತೆಯರನ್ನು ಖಡ್ಗದಿಂದ ಹತಿಸಿ, ನಿನಗೆ ವಿರುದ್ಧವಾಗಿ ಒಡ್ಡುಕಟ್ಟಿ, ದಿಬ್ಬವನ್ನು ಹಾಕುವನು.
৮সে দেশের প্রধান অংশে তোমার মেয়েদেরকে তরোয়ালের আঘাতে হত্যা করবে, তোমার বিরুদ্ধে অবরোধের দেয়াল তুলবে। সে অবরোধের দেয়াল তোমার বিরুদ্ধে তৈরী করবে এবং তোমার বিরুদ্ধে ঢাল তুলবে।
9 ೯ ಗುರಾಣಿ ಹಿಡಿದಿರುವವರನ್ನು ಕಳುಹಿಸಿ, ತನ್ನ ಯುದ್ಧ ಯಂತ್ರಗಳಿಂದ ನಿನ್ನ ಪೌಳಿಗೋಡೆಯನ್ನು ಹೊಡೆಯಿಸಿ, ತನ್ನ ಆಯುಧಗಳಿಂದ ನಿನ್ನ ಕೋಟೆ ಕೊತ್ತಲಗಳನ್ನು ಒಡೆದು ಬಿಡುವನು.
৯আর সে তোমার দেয়ালে সংঘাত করবে ও নিজের তীক্ষ্ণ অস্ত্র দ্বারা তোমার উচ্চগৃহ সব ভেঙে ফেলব।
10 ೧೦ ಅವನ ಲೆಕ್ಕವಿಲ್ಲದ ಕುದುರೆಗಳಿಂದ ಏಳುವ ಧೂಳಿನಿಂದ ನಿನ್ನನ್ನು ಮುಸುಕುವನು; ಒಡಕು ಬಿದ್ದ ಕೋಟೆಯೊಳಗೆ ಶತ್ರುವು ನುಗ್ಗುವ ಪ್ರಕಾರ ಅವನು ನಿನ್ನ ಬಾಗಿಲುಗಳೊಳಗೆ ನುಗ್ಗುವಾಗ ರಾಹುತ, ಗಾಡಿ, ರಥ ಇವುಗಳ ಶಬ್ದಕ್ಕೆ ನಿನ್ನ ಗೋಡೆಗಳು ಕದಲುವವು.
১০সে তার ঘোড়াদের বাহুল্যের জন্য তাদের ধূলো তোমাকে ঢেকে ফেলবে; সে যখন শহরে প্রবেশের মতো তোমার দরজা সবের ভিতর যাবে, তখন ঘোড়াদের, চাকার ও রথের শব্দে তোমার দেয়াল কাঁপবে।
11 ೧೧ ಅವನು ತನ್ನ ಕುದುರೆಗಳ ಗೊರಸುಗಳಿಂದ ನಿನ್ನ ಬೀದಿಗಳನ್ನು ತುಳಿಸಿ, ಖಡ್ಗದಿಂದ ನಿನ್ನ ಜನರನ್ನು ಸಂಹರಿಸಿ, ನಿನ್ನ ಬಲವಾದ ಕಲ್ಲು ಕಂಬಗಳನ್ನು ಕೆಡವಿ ಹಾಕುವನು.
১১সে নিজের ঘোড়াদের খুরে তোমার সমস্ত পথ দলিত করবে, তরোয়ালের দ্বারা তোমার লোকদেরকে হত্যা করবে ও তোমার শক্তিশালী পাথরের স্তম্ভ সব পড়ে যাবে।
12 ೧೨ ಅವನ ಸೈನಿಕರು ನಿನ್ನ ಆಸ್ತಿಯನ್ನು ಸುಲಿದುಕೊಂಡು, ನಿನ್ನ ಸರಕುಗಳನ್ನು ಕೊಳ್ಳೆಹೊಡೆದು, ನಿನ್ನ ಗೋಡೆಗಳನ್ನು ಉರುಳಿಸಿ, ನಿನ್ನ ರಮ್ಯವಾದ ಮನೆಗಳನ್ನು ಕೆಡವಿ, ನಿನ್ನ ಕಲ್ಲುಗಳನ್ನೂ, ಮರಗಳನ್ನೂ, ಮಣ್ಣುಗಳನ್ನೂ ಸಮುದ್ರದಲ್ಲಿ ಹಾಕುವರು.
১২ওরা তোমার সম্পত্তি লুট করবে, তোমার বাণিজ্যের জিনিস লুট করবে, তোমার দেয়াল ভেঙে ফেলবে ও তোমার ঐশ্বর্য্যশালী বাড়ি সব ধ্বংস করবে এবং তারা তোমার পাথর, কাঠ ও ধূলো জলের মধ্যে নিক্ষেপ করবে।
13 ೧೩ ನಾನು ನಿನ್ನ ಸಂಗೀತಗಳ ಧ್ವನಿಯನ್ನು ನಿಲ್ಲಿಸಿಬಿಡುವೆನು; ನಿನ್ನ ಕಿನ್ನರಿಗಳ ನುಡಿಯು ಇನ್ನು ಕೇಳಿಸದು.
১৩আর আমি তোমার গানের শব্দ থামাব এবং তোমার বীণাধ্বনি আর শোনা যাবে না।
14 ೧೪ ನಾನು ನಿನ್ನನ್ನು ಬೋಳು ಬಂಡೆಯನ್ನಾಗಿ ಮಾಡುವೆನು; ನೀನು ಬಲೆಗಳನ್ನು ಹಾಕುವ ಸ್ಥಳವಾಗುವಿ; ನಿನ್ನ ಮೇಲೆ ಇನ್ನು ಕಟ್ಟಡವನ್ನು ಕಟ್ಟುವುದಿಲ್ಲ; ಯೆಹೋವನಾದ ನಾನೇ ಅಪ್ಪಣೆ ಕೊಟ್ಟಿದ್ದೇನೆ” ಇದು ಕರ್ತನಾದ ಯೆಹೋವನ ನುಡಿ.
১৪আর আমি তোমাকে শুকনো পাথর করব; তুমি জাল বিস্তার করার জায়গা হবে; তুমি আর তৈরী হবে না; কারণ আমি সদাপ্রভু এটা বললাম,” এটা প্রভু সদাপ্রভু বলেন।
15 ೧೫ ಕರ್ತನಾದ ಯೆಹೋವನು ತೂರಿಗೆ ಹೀಗೆ ಹೇಳುತ್ತಾನೆ, “ನಿನ್ನ ಪತನದ ಶಬ್ದಕ್ಕೂ, ಗಾಯಪಟ್ಟವರು ಕೂಗುವಾಗಲೂ, ನಿನ್ನ ಮಧ್ಯದಲ್ಲಿ ಕೊಲೆಯಾಗುವಾಗಲೂ ದ್ವೀಪಗಳು ಅದರುವುದಿಲ್ಲವೇ?
১৫“প্রভু সদাপ্রভু সোরকে এই কথা বলেন, তোমার পতনের শব্দে, তোমার মধ্যে আহতদের কোঁকা নিতে ও ভয়ানক নরহত্যায় উপকূল সব কি কাঁপবে না?
16 ೧೬ ಆಗ ಸಮುದ್ರದ ಸುತ್ತುಮುತ್ತಲಿನ ಸಕಲ ಅರಸರು ತಮ್ಮ ಸಿಂಹಾಸನದಿಂದ ಇಳಿದು, ನಿಲುವಂಗಿಗಳನ್ನು ತೆಗೆದುಹಾಕಿ, ವಿಚಿತ್ರವಾಗಿ ಹೊಲೆದ ತಮ್ಮ ಕಸೂತಿಯ ಬಟ್ಟೆಯನ್ನು ಕಿತ್ತುಹಾಕಿ, ತತ್ತರವನ್ನೇ ಹೊದ್ದುಕೊಂಡು, ನೆಲದ ಮೇಲೆ ಕುಳಿತು, ಕ್ಷಣ ಕ್ಷಣಕ್ಕೂ ನಡುಗುತ್ತಾ, ನಿನ್ನ ವಿಷಯವಾಗಿ ಆಶ್ಚರ್ಯಪಡುವರು.
১৬তখন সমুদ্রের অধ্যক্ষরা সবাই নিজেদের সিংহাসন থেকে না মরে, নিজেদের পোশাক ত্যাগ করবে, রঙিন পোশাক সব খুলে ফেলবে; তারা ভয় পরিধান করবে; তারা মাটিতে বসবে, সবদিন ভীত থাকবে ও তোমার বিষয়ে আতঙ্কিত হবে।
17 ೧೭ ಇವರು ನಿನ್ನ ವಿಷಯದಲ್ಲಿ ಗೋಳಾಟವನ್ನೆತಿ, ನಾವಿಕರ ನಿವಾಸವೇ, ಹೆಸರುವಾಸಿಯ ಪುರಿಯೇ, ಸಮುದ್ರದಿಂದ ಬಲಗೊಂಡ ನಗರಿಯೇ, ನೀನು ಎಷ್ಟೋ ಹಾಳಾದಿ! ಸಮುದ್ರದ ಸಂಚಾರಿಗಳಿಗೆಲ್ಲಾ ಭಯಾಸ್ಪದರಾಗಿದ್ದ ನಿನ್ನ ನಿವಾಸಿಗಳು ಎಷ್ಟೋ ಹಾಳಾದವು!
১৭আর তারা তোমার বিষয়ে বিলাপ করে তোমাকে বলবে, হে সমুদ্রে উত্পন্ন স্থাননিবাসিনী তুমি কিভাবে বিনষ্ট হলে। সেই বিখ্যাতা পুরী যা অনেক শক্তিশালী ছিল তা এখন সমুদ্রে! এবং তুমি, তার সমস্ত অধিবাসীর উপর তাদের ভয়ার্হতা অর্পণ করত।
18 ೧೮ ಈ ನಿನ್ನ ಪತನದ ದಿನದಲ್ಲಿ ಕರಾವಳಿಯು ನಡುಗುತ್ತದೆ; ನೀನು ಇಲ್ಲವಾದದ್ದಕ್ಕೆ ಸಮುದ್ರ ದ್ವೀಪಗಳು ಗಾಬರಿಯಾಗುವವು.”
১৮এখন তোমার পতনের দিনের উপকূল সব কাঁপছে, তোমার চলে যাওয়াতে সমুদ্রে অবস্থিত দ্বীপ সব আতঙ্কগ্রস্থ হয়েছে।
19 ೧೯ ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನಾನು ನಿನ್ನನ್ನು ಹಾಳು ಊರನ್ನಾಗಿ ಮಾಡಿ, ನಿರ್ಜನ ಪಟ್ಟಣಗಳ ಗತಿಗೆ ತಂದು, ನೀನು ಜಲರಾಶಿಯಲ್ಲಿ ಮುಳುಗಿ ಹೋಗುವಂತೆ ನಿನ್ನ ಮೇಲೆ ಮಹಾಸಾಗರವನ್ನು ಬರಮಾಡುವೆನು.
১৯কারণ প্রভু সদাপ্রভু এই কথা বলেন, যখন আমি নিবাসিহীন শহরের মতো তোমাকে উচ্ছিন্ন শহর করব, যখন আমি তোমার উপরে সমুদ্র ওঠাব ও বিশাল জলরাশি তোমাকে ঢেকে ফেলবে,
20 ೨೦ “ಪುರಾತನ ಕಾಲದಲ್ಲಿ ಹಾಳಾದ ಪಟ್ಟಣಗಳಂತೆ ನಿನ್ನನ್ನು ಅಧೋಲೋಕಕ್ಕೆ ತಳ್ಳಿ, ಪಾತಾಳಕ್ಕೆ ಇಳಿದ ಪೂರ್ವಕಾಲದವರೊಂದಿಗೆ ವಾಸಿಸುವಂತೆ ಮಾಡುವೆನು; ಹೌದು, ನೀನು ನಿನ್ನ ಮಹಿಮೆಯನ್ನು ಜೀವಲೋಕದಲ್ಲಿ ನೆಲೆಗೊಳಿಸದೆ, ನಿರ್ಜನವಾಗುವಂತೆ ನಿನ್ನನ್ನು ಪಾತಾಳಕ್ಕೆ ಇಳಿದವರ ಸಹವಾಸದಲ್ಲಿ ಸೇರಿಸುವೆನು.
২০তখন আমি তোমাকে গর্তগামীদের সঙ্গে প্রাচীন দিনের র লোকেদের কাছে নামাব এবং নিচে পৃথিবীতে, চিরোৎসন্ন জায়গায়, গর্তগামী সবার সঙ্গে বাস করাব, তাতে তুমি আর বসতিস্থান হবে না; কিন্তু জীবিতদের দেশে আমি শোভা স্থাপন করব।
21 ೨೧ ನಿನ್ನನ್ನು ತೀರಾ ಧ್ವಂಸಮಾಡುವೆನು; ನೀನು ಇಲ್ಲವಾಗುವಿ; ಎಷ್ಟು ಹುಡುಕಿದರೂ ನೀನು ಎಂದಿಗೂ ಸಿಕ್ಕುವುದಿಲ್ಲ” ಇದು ಕರ್ತನಾದ ಯೆಹೋವನ ನುಡಿ.
২১আমি তোমাকে বিপর্যয়ের জায়গা করব, তুমি আর থাকবে না; লোকেরা তোমার খোঁজ করলেও আর কখনও তোমাকে পাবে না,” এটা সদাপ্রভু বলেন।