< ಯೆಹೆಜ್ಕೇಲನು 27 >
1 ೧ ಯೆಹೋವನು ಇನ್ನೊಂದು ವಾಕ್ಯವನ್ನು ನನಗೆ ದಯಪಾಲಿಸಿದನು,
१यहोवा का यह वचन मेरे पास पहुँचा:
2 ೨ “ನರಪುತ್ರನೇ, ನೀನು ತೂರಿನ ವಿಷಯದಲ್ಲಿ ಶೋಕ ಗೀತೆಯನ್ನೆತ್ತು, ಅದಕ್ಕೆ ಹೀಗೆ ನುಡಿ,
२“हे मनुष्य के सन्तान, सोर के विषय एक विलाप का गीत बनाकर उससे यह कह,
3 ೩ ‘ಸಮುದ್ರ ದ್ವಾರದಲ್ಲಿ ವಾಸಿಸುತ್ತಾ, ಜನಾಂಗಗಳಿಗಾಗಿ ಅನೇಕ ದ್ವೀಪಗಳೊಂದಿಗೆ ವ್ಯಾಪಾರ ಮಾಡುವ ನಗರಿಯೇ!’ ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ತೂರೇ, ‘ನಾನು ಪರಿಪೂರ್ಣ ಸುಂದರಿಯಾಗಿದ್ದೇನೆ’ ಎಂದು ನೀನು ಅಂದುಕೊಂಡಿದ್ದೀ!
३हे समुद्र के प्रवेश-द्वार पर रहनेवाली, हे बहुत से द्वीपों के लिये देश-देश के लोगों के साथ व्यापार करनेवाली, परमेश्वर यहोवा यह कहता है: हे सोर तूने कहा है कि मैं सर्वांग सुन्दर हूँ।
4 ೪ ನಿನ್ನ ನೆಲೆಯು ಸಮುದ್ರದ ಮಧ್ಯವೇ; ನಿನ್ನನ್ನು ಕಟ್ಟಿದವರು ನಿನ್ನ ಸೌಂದರ್ಯವನ್ನು ಪರಿಪೂರ್ಣಗೊಳಿಸಿದರು.
४तेरी सीमा समुद्र के बीच हैं; तेरे बनानेवाले ने तुझे सर्वांग सुन्दर बनाया।
5 ೫ ಸೆನೀರಿನ ತುರಾಯಿ ಮರದಿಂದ ನಿನ್ನ ಹಲಗೆಗಳನ್ನು ಮಾಡುವುದಕ್ಕೆ ಮತ್ತು ನಿನ್ನ ಸ್ತಂಭವನ್ನು ರಚಿಸುವುದಕ್ಕೆ ಲೆಬನೋನಿನಿಂದ ದೇವದಾರು ಮರವನ್ನು ತಂದರು.
५तेरी सब पटरियाँ सनीर पर्वत के सनोवर की लकड़ी की बनी हैं; तेरे मस्तूल के लिये लबानोन के देवदार लिए गए हैं।
6 ೬ ನಿನ್ನ ಹುಟ್ಟುಗೋಲನ್ನು ಬಾಷಾನಿನ ಓಕ್ ಮರದಿಂದ ಮಾಡಿ, ಕಿತ್ತೀಮ್ ದ್ವೀಪದ ಹಲಿಗೆಯಿಂದ ನಿನ್ನ ಹಡಗಿನ ಮೇಲ್ಮಾಳಿಗೆಯನ್ನು ಕಟ್ಟಿ, ಅದನ್ನು ದಂತದಿಂದ ಕೆತ್ತಿದ್ದಾರೆ.
६तेरे डाँड़ बाशान के बांजवृक्षों के बने; तेरे जहाजों का पटाव कित्तियों के द्वीपों से लाए हुए सीधे सनोवर की हाथी दाँत जड़ी हुई लकड़ी का बना।
7 ೭ ನಿನ್ನ ಹಾಯಿಯು ನಿನಗೆ ಧ್ವಜವಾಗಲೆಂದು ಅದನ್ನು ಐಗುಪ್ತದ ಕಸೂತಿಯ ನಾರು ಬಟ್ಟೆಯಿಂದ ಮಾಡಿದರು. ನಿನ್ನ ಮೇಲ್ಕಟ್ಟನ್ನು ಎಲೀಷ ಕರಾವಳಿಯ ಧೂಮ್ರ ರಕ್ತವರ್ಣಗಳಿಂದ ಚಿತ್ರಿತವಾಗಿದೆ.
७तेरे जहाजों के पाल मिस्र से लाए हुए बूटेदार सन के कपड़े के बने कि तेरे लिये झण्डे का काम दें; तेरी चाँदनी एलीशा के द्वीपों से लाए हुए नीले और बैंगनी रंग के कपड़ों की बनी।
8 ೮ ಚೀದೋನಿನ, ಅರ್ವಾದಿನ ನಿವಾಸಿಗಳು ನಿನಗೆ ಹುಟ್ಟು ಹಾಕುವರು; ತೂರೇ, ನಿನ್ನಲ್ಲಿನ ವಿವೇಕಿಗಳು ನಿನ್ನ ನಾವಿಕರು.
८तेरे खेनेवाले सीदोन और अर्वद के रहनेवाले थे; हे सोर, तेरे ही बीच के बुद्धिमान लोग तेरे माँझी थे।
9 ೯ ನಿನ್ನಲ್ಲಿ ಸೇರಿಕೊಂಡಿದ್ದ ಗೇಬಾಲಿನ ಹಿರಿಯರೂ ಮತ್ತು ಜಾಣರೂ ನಿನ್ನ ಬಿರುಕುಗಳನ್ನು ಮುಚ್ಚಿದ್ದಾರೆ. ಸಮುದ್ರದ ಸಕಲ ನಾವೆಗಳ ಮತ್ತು ನಾವಿಕರ ಸಮೇತ ನಿನ್ನ ಬಳಿಯಲ್ಲಿದ್ದು, ನಿನಗೆ ಸರಕುಗಳನ್ನು ತಂದೊಪ್ಪಿಸಿದ್ದಾರೆ.
९तेरे कारीगर जोड़ाई करनेवाले गबल नगर के पुरनिये और बुद्धिमान लोग थे; तुझ में व्यापार करने के लिये मल्लाहों समेत समुद्र पर के सब जहाज तुझ में आ गए थे।
10 ೧೦ ಪಾರಸಿಯರೂ, ಲೂದ್ಯರೂ, ಪೂಟ್ಯರೂ ನಿನ್ನ ಸೈನ್ಯಾಧಿಕಾರಿಗಳಾಗಿ ನಿನ್ನ ಸೈನ್ಯದಲ್ಲಿದ್ದರು. ಗುರಾಣಿಯನ್ನು ಮತ್ತು ಶಿರಸ್ತ್ರಾಣವನ್ನು ನಿನ್ನಲ್ಲಿ ತೂಗಿಸಿದರು. ಇವರು ನಿನಗೆ ಮಹತ್ತನ್ನು ಕೊಟ್ಟರು!
१०तेरी सेना में फारसी, लूदी, और पूती लोग भरती हुए थे; उन्होंने तुझ में ढाल, और टोपी टाँगी; और उन्हीं के कारण तेरा प्रताप बढ़ा था।
11 ೧೧ ಅರ್ವಾದಿನವರೂ ಮತ್ತು ಹೆಲೆಕರು ನಿನ್ನ ಸೈನಿಕರ ಸಂಗಡ ನಿನ್ನ ಗೋಡೆಗಳ ಸುತ್ತಲೂ ನಿಂತಿದ್ದರು. ಗಮ್ಮಾದ್ಯರು ನಿನ್ನ ಕೊತ್ತಲುಗಳಲ್ಲಿ ಕಾವಲಾಗಿದ್ದರು. ಎಲ್ಲರೂ ತಮ್ಮ ಗುರಾಣಿಗಳನ್ನು ಸುತ್ತಮುತ್ತಲು ನಿನ್ನ ಗೋಡೆಗಳ ಮೇಲೆ ನೇತುಹಾಕಿ, ನಿನ್ನ ಸೌಂದರ್ಯವನ್ನು ಪರಿಪೂರ್ಣಗೊಳಿಸಿದರು!
११तेरी शहरपनाह पर तेरी सेना के साथ अर्वद के लोग चारों ओर थे, और तेरे गुम्मटों में गम्मद नगर के निवासी खड़े थे; उन्होंने अपनी ढालें तेरी चारों ओर की शहरपनाह पर टाँगी थी; तेरी सुन्दरता उनके द्वारा पूरी हुई थी।
12 ೧೨ “ಅಪಾರವಾದ ಬಗೆಬಗೆಯ ಆಸ್ತಿಯು ನಿನಗೆ ಬೇಕಾಗಿದ್ದರಿಂದ ತಾರ್ಷೀಷಿನವರು ನಿನ್ನ ಕಡೆಯ ವರ್ತಕರಾಗಿ ಬೆಳ್ಳಿ, ಕಬ್ಬಿಣ, ತವರ ಮತ್ತು ಸೀಸಗಳನ್ನು ಒದಗಿಸುತ್ತಿದ್ದರು.
१२“अपनी सब प्रकार की सम्पत्ति की बहुतायत के कारण तर्शीशी लोग तेरे व्यापारी थे; उन्होंने चाँदी, लोहा, राँगा और सीसा देकर तेरा माल मोल लिया।
13 ೧೩ ಯಾವಾನ್, ತೂಬಲ್, ಮೆಷೆಕ್ ಇವರು ನಿನ್ನ ವರ್ತಕರಾಗಿದ್ದರು. ಗುಲಾಮರನ್ನೂ ಮತ್ತು ತಾಮ್ರದ ಪಾತ್ರೆಗಳನ್ನೂ ನಿನಗೆ ಸರಬರಾಜು ಮಾಡುತ್ತಿದ್ದರು.
१३यावान, तूबल, और मेशेक के लोग तेरे माल के बदले दास-दासी और पीतल के पात्र तुझ से व्यापार करते थे।
14 ೧೪ “ತೋಗರ್ಮ ವಂಶದವರು ಕುದುರೆಗಳಿಂದಲೂ, ಕುದುರೆ ಸವಾರಿಗಳಿಂದಲೂ, ಹೇಸರಗತ್ತೆಗಳಿಂದಲೂ ನಿನ್ನ ಸಂತೆಗಳಲ್ಲಿ ವ್ಯಾಪಾರ ನಡೆಸಿದರು.
१४तोगर्मा के घराने के लोगों ने तेरी सम्पत्ति लेकर घोड़े, सवारी के घोड़े और खच्चर दिए।
15 ೧೫ ದೇದಾನಿನವರು ನಿನ್ನ ವರ್ತಕರಾಗಿದ್ದರು; ಅನೇಕ ದ್ವೀಪಗಳು ನಿನ್ನ ಕೈಕೆಳಗೆ ವ್ಯಾಪಾರವನ್ನು ನಡೆಸಿದವು; ಅವರು ದಂತ ಕೊಂಬು ಮತ್ತು, ಕಪ್ಪುಮರಗಳನ್ನೂ ನಿನಗೆ ಕಪ್ಪವಾಗಿ ಸಲ್ಲಿಸುತ್ತಿದ್ದರು.
१५ददानी तेरे व्यापारी थे; बहुत से द्वीप तेरे हाट बने थे; वे तेरे पास हाथी दाँत की सींग और आबनूस की लकड़ी व्यापार में लाते थे।
16 ೧೬ “ನಿನ್ನ ಕೈಕೆಲಸದ ವಸ್ತುಗಳು ಅಪಾರವಾಗಿದ್ದುದರಿಂದ ಅರಾಮಿನವರೂ ನಿನ್ನವರಾಗಿ ವ್ಯಾಪಾರಮಾಡಿ, ಕೆಂಪರಲು, ರಕ್ತಾಂಬರ, ಕಸೂತಿಯ ವಸ್ತ್ರ, ನಾರುಬಟ್ಟೆ, ಹವಳ, ಮಾಣಿಕ್ಯ ಮೊದಲಾದ ಸರಕುಗಳನ್ನು ನಿನಗೆ ತಂದು ಸುರಿದರು.
१६तेरी बहुत कारीगरी के कारण अराम तेरा व्यापारी था; मरकत, बैंगनी रंग का और बूटेदार वस्त्र, सन, मूगा, और लालड़ी देकर वे तेरा माल लेते थे।
17 ೧೭ “ಯೆಹೂದ್ಯರೂ, ಇಸ್ರಾಯೇಲ್ ದೇಶದವರೂ ನಿನ್ನ ಕಡೆಯ ವರ್ತಕರಾಗಿ ಮಿನ್ನೀಥಿನ ಗೋದಿಯಿಂದಲೂ, ಖಂಡಸಕ್ಕರೆ, ಜೇನು, ಎಣ್ಣೆ ಮತ್ತು ಸುಗಂಧತೈಲದಿಂದಲೂ ನಿನ್ನೊಂದಿಗೆ ವ್ಯಾಪಾರ ನಡೆಸಿದರು.
१७यहूदा और इस्राएल भी तेरे व्यापारी थे; उन्होंने मिन्नीत का गेहूँ, पन्नग, और मधु, तेल, और बलसान देकर तेरा माल लिया।
18 ೧೮ “ನಿನ್ನ ಕೈಕೆಲಸದ ವಸ್ತುಗಳು ನಿನ್ನಲ್ಲಿ ಅಪಾರವಾಗಿದ್ದುದರಿಂದಲೂ, ಅಪರಿಮಿತವಾದ ಬಗೆಬಗೆಯ ಆಸ್ತಿಯೂ ನಿನಗೆ ಬೇಕಾಗಿದ್ದುದರಿಂದಲೂ ದಮಸ್ಕದವರೂ ನಿನ್ನ ಪರವಾಗಿ ವ್ಯಾಪಾರಮಾಡಿ, ಹೆಲ್ಬೋನಿನ ದ್ರಾಕ್ಷಾರಸವನ್ನೂ ಹಾಗು ಚಾಹರಿನ ಉಣ್ಣೆಯನ್ನೂ ನಿನ್ನಲ್ಲಿ ತುಂಬಿಸುತ್ತಿದ್ದರು.
१८तुझ में बहुत कारीगरी हुई और सब प्रकार का धन इकट्ठा हुआ, इससे दमिश्क तेरा व्यापारी हुआ; तेरे पास हेलबोन का दाखमधु और उजला ऊन पहुँचाया गया।
19 ೧೯ “ದಾನಿನವರೂ ಮತ್ತು ಯಾವಾನಿನವರೂ ಊಜಾಲಿನಿಂದ ನಾನಾ ಸರಕುಗಳನ್ನು ತಂದು ನಿನಗೆ ಒಪ್ಪಿಸಿದರು. ಕಬ್ಬಿಣ, ಬಜೆ, ಲವಂಗ, ಚಕ್ಕೆ ಇವುಗಳು ನಿನಗೆ ಆಮದಾಗುತ್ತಿದ್ದವು.
१९दान और यावान ने तेरे माल के बदले में सूत दिया; और उनके कारण फौलाद, तज और अगर में भी तेरा व्यापार हुआ।
20 ೨೦ ದೇದಾನಿನವರು ರಥಗಳ ಸವಾರಿಗಳಿಗೆ ತಕ್ಕ ಒಳ್ಳೆಯ ಬಟ್ಟೆಗಳಿಂದ ನಿನ್ನ ಸಂಗಡ ವ್ಯಾಪಾರ ಮಾಡುತ್ತಿದ್ದರು.
२०सवारी के चार-जामे के लिये ददान तेरा व्यापारी हुआ।
21 ೨೧ ಅರಬರು ಮತ್ತು ಕೇದಾರಿನ ಪ್ರಧಾನರೂ ನಿನ್ನ ಕೈಕೆಳಗಿನ ವರ್ತಕರಾಗಿದ್ದರು; ಕುರಿಮರಿಗಳಿಂದಲೂ, ಟಗರುಗಳಿಂದಲೂ, ಹೋತಗಳಿಂದಲೂ ನಿನ್ನೊಡನೆ ವ್ಯಾಪಾರ ಮಾಡಿದ್ದರು.
२१अरब और केदार के सब प्रधान तेरे व्यापारी ठहरे; उन्होंने मेम्ने, मेढ़े, और बकरे लाकर तेरे साथ लेन-देन किया।
22 ೨೨ “ಶೆಬದವರೂ ಮತ್ತು ರಗ್ಮದವರೂ ನಿನ್ನ ಕಡೆಯ ವರ್ತಕರಾಗಿ, ಎಲ್ಲಾ ಶ್ರೇಷ್ಠವಾದ ಸುಗಂಧದ್ರವ್ಯದಿಂದಲೂ, ಅಮೂಲ್ಯವಾದ ರತ್ನಗಳಿಂದಲೂ, ಚಿನ್ನದಿಂದಲೂ ನಿನ್ನೊಡನೆ ವ್ಯಾಪಾರ ಮಾಡಿದರು.
२२शेबा और रामाह के व्यापारी तेरे व्यापारी ठहरे; उन्होंने उत्तम-उत्तम जाति का सब भाँति का मसाला, सर्व भाँति के मणि, और सोना देकर तेरा माल लिया।
23 ೨೩ ಹಾರಾನ್, ಕನ್ನೆ, ಎದೆನ್ ಸ್ಥಳಗಳವರೂ, ಶೆಬ, ಅಶ್ಶೂರ್ ಕಿಲ್ಮದ್ ಪ್ರಾಂತ್ಯಗಳವರೂ ನಿನ್ನ ವರ್ತಕರಾಗಿದ್ದರು.
२३हारान, कन्ने, एदेन, शेबा के व्यापारी, और अश्शूर और कलमद, ये सब तेरे व्यापारी ठहरे।
24 ೨೪ ಅವರು ನಿನ್ನ ವ್ಯಾಪಾರಿಗಳಾಗಿ, ಉತ್ತಮ ಕಸೂತಿಯ ಧೂಮ್ರ ವರ್ಣದ ನಿಲುವಂಗಿ ಮೊದಲಾದ ಸರಕುಗಳನ್ನೂ, ಹಗ್ಗಗಳಿಂದ ಬಲವಾಗಿ ಬಿಗಿದ ವಿಚಿತ್ರ ವಸ್ತ್ರಗಳ ಪೆಟ್ಟಿಗೆಗಳನ್ನೂ ತಂದರು.
२४इन्होंने उत्तम-उत्तम वस्तुएँ अर्थात् ओढ़ने के नीले और बूटेदार वस्त्र और डोरियों से बंधी और देवदार की बनी हुई चित्र विचित्र कपड़ों की पेटियाँ लाकर तेरे साथ लेन-देन किया।
25 ೨೫ ತಾರ್ಷೀಷಿನ ಹಡಗಿನ ಪ್ರಯಾಣಿಕರು ನಿನ್ನನ್ನು ನಿನ್ನ ಮಾರುಕಟ್ಟೆಯಲ್ಲಿ ಹೊಗಳುವರು. ನೀನು ಸಮುದ್ರ ಮಧ್ಯದಲ್ಲಿ ಬಹಳ ಘನವುಳ್ಳವಳಾದೆ.
२५तर्शीश के जहाज तेरे व्यापार के माल के ढोनेवाले हुए। “उनके द्वारा तू समुद्र के बीच रहकर बहुत धनवान और प्रतापी हो गई थी।
26 ೨೬ ಹುಟ್ಟುಹಾಕುವವರು ನಿನ್ನನ್ನು ಮಹಾ ತರಂಗಗಳಿಗೆ ಸಿಕ್ಕಿಸಿದ್ದಾರೆ; ಮೂಡಣ ಗಾಳಿಯು ನಿನ್ನನ್ನು ಸಾಗರದ ಮಧ್ಯದಲ್ಲಿ ಒಡೆದುಬಿಟ್ಟಿದೆ.
२६तेरे खिवैयों ने तुझे गहरे जल में पहुँचा दिया है, और पुरवाई ने तुझे समुद्र के बीच तोड़ दिया है।
27 ೨೭ ನಿನ್ನ ಆಸ್ತಿಯು, ನಿನ್ನ ವಸ್ತುಗಳು, ನಿನ್ನ ಸರಕುಗಳು, ನಿನ್ನ ನಾವಿಕರು, ನಿನ್ನ ಅಂಬಿಗರು, ನಿನ್ನ ಒಡಕುಗಳನ್ನು ಭದ್ರಪಡಿಸುವವರು, ನಿನ್ನ ವ್ಯಾಪಾರಿಗಳು, ನಿನ್ನಲ್ಲಿನ ಸಮಸ್ತ ಸೈನಿಕರು, ಅಂತು ನಿನ್ನೊಳಗೆ ಸೇರಿಕೊಂಡಿರುವ ನಿನ್ನ ಸಿಬ್ಬಂದಿಯೆಲ್ಲವೂ ನಿನ್ನ ನಾಶದ ದಿನದಲ್ಲಿ ಸಮುದ್ರದೊಳಗೆ ಮುಳುಗಿ ಹೋಗುವರು.
२७जिस दिन तू डूबेगी, उसी दिन तेरा धन-सम्पत्ति, व्यापार का माल, मल्लाह, माँझी, जुड़ाई का काम करनेवाले, व्यापारी लोग, और तुझ में जितने सिपाही हैं, और तेरी सारी भीड़-भाड़ समुद्र के बीच गिर जाएगी।
28 ೨೮ ನಿನ್ನ ನಾವಿಕರ ಕೂಗಾಟಕ್ಕೆ ಸಮೀಪದ ಪ್ರದೇಶಗಳು ನಡುಗುವುವು.
२८तेरे माँझियों की चिल्लाहट के शब्द के मारे तेरे आस-पास के स्थान काँप उठेंगे।
29 ೨೯ ಹುಟ್ಟುಹಾಕುವವರೆಲ್ಲರೂ, ಅಂಬಿಗರೂ, ಸಮುದ್ರದ ಸಕಲ ನಾವಿಕರೂ ತಮ್ಮ ತಮ್ಮ ಹಡಗುಗಳಿಂದ ಇಳಿದು ನೆಲದ ಮೇಲೆ ನಿಂತುಕೊಳ್ಳುವರು.
२९सब खेनेवाले और मल्लाह, और समुद्र में जितने माँझी रहते हैं, वे अपने-अपने जहाज पर से उतरेंगे,
30 ೩೦ ನಿನ್ನ ನಿಮಿತ್ತ ದುಃಖದಿಂದ ಅರಚಿ, ತಲೆಗೆ ಧೂಳೆರಚಿಕೊಂಡು, ಬೂದಿಯಲ್ಲಿ ಬಿದ್ದು ಹೊರಳಾಡಿ,
३०और वे भूमि पर खड़े होकर तेरे विषय में ऊँचे शब्द से बिलख-बिलख कर रोएँगे। वे अपने-अपने सिर पर धूलि उड़ाकर राख में लोटेंगे;
31 ೩೧ ನಿನಗಾಗಿ ತಲೆ ಬೋಳಿಸಿಕೊಂಡು, ಗೋಣಿತಟ್ಟನ್ನು ಸುತ್ತಿಕೊಂಡು, ಮನೋವ್ಯಥೆಯಿಂದ ಗೋಳಾಡಿ, ನಿನಗೋಸ್ಕರ ಬಿಕ್ಕಿಬಿಕ್ಕಿ ಅಳುವರು.
३१और तेरे शोक में अपने सिर मुँण्डवा देंगे, और कमर में टाट बाँधकर अपने मन के कड़े दुःख के साथ तेरे विषय में रोएँगे और छाती पीटेंगे।
32 ೩೨ ಅವರು ರೋದನ ಮಾಡುತ್ತಾ ನಿನ್ನ ವಿಷಯವಾಗಿ ಶೋಕ ಗೀತವನ್ನೆತ್ತಿ ಹೀಗೆ ಪ್ರಲಾಪಿಸುವರು, ‘ಸಮುದ್ರದ ನಡುವೆ ಹಾಳಾಗಿರುವ ತೂರಿಗೆ ಯಾವ ಪಟ್ಟಣ ಸಮಾನವಾಗಿದೆ?’
३२वे विलाप करते हुए तेरे विषय में विलाप का यह गीत बनाकर गाएँगे, ‘सोर जो अब समुद्र के बीच चुपचाप पड़ी है, उसके तुल्य कौन नगरी है?
33 ೩೩ ನಿನ್ನ ಸರಕುಗಳು ಸಮುದ್ರಗಳನ್ನು ದಾಟಿ ಹರಡಿಕೊಂಡವು, ಅವುಗಳಿಂದ ಅನೇಕ ಜನಾಂಗಗಳನ್ನು ತೃಪ್ತಿಪಡಿಸಿದಿ; ನಿನ್ನ ಅಪಾರವಾದ ಐಶ್ವರ್ಯದಿಂದಲೂ, ವ್ಯಾಪಾರದ ವಸ್ತುಗಳಿಂದಲೂ ಭೂರಾಜರನ್ನು ಸಮೃದ್ಧಿಪಡಿಸಿದಿ.
३३जब तेरा माल समुद्र पर से निकलता था, तब बहुत सी जातियों के लोग तृप्त होते थे; तेरे धन और व्यापार के माल की बहुतायत से पृथ्वी के राजा धनी होते थे।
34 ೩೪ ಈಗಲಾದರೋ ನೀನು ಸಮುದ್ರದಿಂದ ಹಾಳಾದೆ, ನಿನ್ನ ಸರಕುಗಳೂ, ನಿನ್ನಲ್ಲಿ ಸೇರಿಕೊಂಡಿದ್ದ ಸಕಲ ಜನರೂ ಅಗಾಧಜಲದಲ್ಲಿ ಮುಳುಗಿ ಹೋದರು.
३४जिस समय तू अथाह जल में लहरों से टूटी, उस समय तेरे व्यापार का माल, और तेरे सब निवासी भी तेरे भीतर रहकर नाश हो गए।
35 ೩೫ ಕರಾವಳಿಯ ಸಮಸ್ತ ನಿವಾಸಿಗಳು ನಿನ್ನ ಸ್ಥಿತಿಗೆ ಬೆಚ್ಚಿ ವಿಸ್ಮಯರಾಗಿದ್ದಾರೆ; ಅರಸರು ಭಯಪಟ್ಟಿದ್ದಾರೆ. ಅರಸರು ನಡುಗಿ ಭೀತಿಗೊಂಡಿದ್ದಾರೆ.
३५समुद्र-तटीय देशों के सब रहनेवाले तेरे कारण विस्मित हुए; और उनके सब राजाओं के रोएँ खड़े हो गए, और उनके मुँह उदास देख पड़े हैं।
36 ೩೬ ಜನಾಂಗಗಳ ವರ್ತಕರು ನಿನ್ನನ್ನು ನೋಡಿ, ಸಿಳ್ಳು ಹಾಕುತ್ತಾರೆ; ನೀನು ಸಂಪೂರ್ಣ ಧ್ವಂಸವಾಗಿ ಇನ್ನೆಂದಿಗೂ ಇಲ್ಲದಂತಾಗಿರುವೆ.”
३६देश-देश के व्यापारी तेरे विरुद्ध ताना मार रहे हैं; तू भय का कारण हो गई है और फिर स्थिर न रह सकेगी।’”