< ಯೆಹೆಜ್ಕೇಲನು 29 >

1 ಹತ್ತನೆಯ ವರ್ಷದ, ಹತ್ತನೆಯ ತಿಂಗಳಿನ ಹನ್ನೆರಡನೆಯ ದಿನದಲ್ಲಿ ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು,
בַּשָּׁנָה הָעֲשִׂירִית בָּעֲשִׂרִי בִּשְׁנֵים עָשָׂר לַחֹדֶשׁ הָיָה דְבַר־יְהוָה אֵלַי לֵאמֹֽר׃
2 “ನರಪುತ್ರನೇ, ನೀನು ಐಗುಪ್ತದ ಅರಸನಾದ ಫರೋಹನ ಕಡೆಗೆ ಮುಖಮಾಡಿ ಅವನ ವಿಷಯದಲ್ಲಿಯೂ, ಐಗುಪ್ತ್ಯರೆಲ್ಲರ ವಿಷಯದಲ್ಲಿಯೂ ಹೀಗೆ ಪ್ರವಾದಿಸು.
בֶּן־אָדָם שִׂים פָּנֶיךָ עַל־פַּרְעֹה מֶלֶךְ מִצְרָיִם וְהִנָּבֵא עָלָיו וְעַל־מִצְרַיִם כֻּלָּֽהּ׃
3 “ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ಐಗುಪ್ತದ ಅರಸನಾದ ಫರೋಹನೇ, ನಿನ್ನ ನದಿಗಳ ಮಧ್ಯದಲ್ಲಿ ಮಲಗಿಕೊಂಡು, ‘ಈ ನದಿ ನನ್ನದೇ, ನನಗಾಗಿಯೇ ಅದನ್ನು ಮಾಡಿಕೊಂಡಿದ್ದೇನೆ’ ಎಂದು ಹೇಳಿಕೊಳ್ಳುವ ದೊಡ್ಡ ಮೊಸಳೆಯೇ, ಇಗೋ, ನಾನು ನಿನ್ನ ವಿರುದ್ಧವಾಗಿದ್ದೇನೆ.
דַּבֵּר וְאָמַרְתָּ כֹּֽה־אָמַר ׀ אֲדֹנָי יְהוִה הִנְנִי עָלֶיךָ פַּרְעֹה מֶֽלֶךְ־מִצְרַיִם הַתַּנִּים הַגָּדוֹל הָרֹבֵץ בְּתוֹךְ יְאֹרָיו אֲשֶׁר אָמַר לִי יְאֹרִי וַאֲנִי עֲשִׂיתִֽנִי׃
4 “ನಾನು ನಿನ್ನ ದವಡೆಗಳಿಗೆ ಗಾಳ ಹಾಕಿ, ನಿನ್ನ ನದಿಗಳ ಮೀನುಗಳನ್ನು ನಿನ್ನ ಬೆನ್ನು ಚಿಪ್ಪುಗಳಿಗೆ ಅಂಟಿಕೊಳ್ಳುವಂತೆ ಮಾಡಿ, ಆ ಮೀನುಗಳ ಸಹಿತ ನಿನ್ನನ್ನು ನೈಲ್ ನದಿಯ ಮಧ್ಯದೊಳಗಿಂದ ಹೊರಗೆ ಎಳೆದು ಹಾಕುವೆನು.
וְנָתַתִּי חחיים חַחִים בִּלְחָיֶיךָ וְהִדְבַּקְתִּי דְגַת־יְאֹרֶיךָ בְּקַשְׂקְשֹׂתֶיךָ וְהַעֲלִיתִיךָ מִתּוֹךְ יְאֹרֶיךָ וְאֵת כָּל־דְּגַת יְאֹרֶיךָ בְּקַשְׂקְשֹׂתֶיךָ תִּדְבָּֽק׃
5 ನಿನ್ನನ್ನೂ, ನಿನ್ನ ನದಿಯ ಎಲ್ಲಾ ಮೀನುಗಳನ್ನೂ ಅರಣ್ಯದ ಪಾಲು ಮಾಡುವೆನು; ನೀನು ಬಯಲುಗಳ ಮೇಲೆ ಬಿದ್ದಿರುವಿ; ನಿನ್ನನ್ನು ಯಾರೂ ಹೂಣಿಡುವುದೂ ಇಲ್ಲ, ಸೇರಿಸುವುದೂ ಇಲ್ಲ; ನಾನು ನಿನ್ನನ್ನು ಭೂಜಂತುಗಳಿಗೂ, ಆಕಾಶದ ಪಕ್ಷಿಗಳಿಗೂ ಆಹಾರ ಮಾಡಿದ್ದೇನೆ.
וּנְטַשְׁתִּיךָ הַמִּדְבָּרָה אוֹתְךָ וְאֵת כָּל־דְּגַת יְאֹרֶיךָ עַל־פְּנֵי הַשָּׂדֶה תִּפּוֹל לֹא תֵאָסֵף וְלֹא תִקָּבֵץ לְחַיַּת הָאָרֶץ וּלְעוֹף הַשָּׁמַיִם נְתַתִּיךָ לְאָכְלָֽה׃
6 ಆಗ ಐಗುಪ್ತದ ಸಕಲ ನಿವಾಸಿಗಳು ನಾನೇ ಯೆಹೋವನು ಎಂದು ತಿಳಿಯವರು. ಅವರು ಇಸ್ರಾಯೇಲ್ ವಂಶದವರಿಗೆ ದಂಟಿನ ಊರುಗೋಲಾಗಿದ್ದರು.
וְיָֽדְעוּ כָּל־יֹשְׁבֵי מִצְרַיִם כִּי אֲנִי יְהוָה יַעַן הֱיוֹתָם מִשְׁעֶנֶת קָנֶה לְבֵית יִשְׂרָאֵֽל׃
7 ಇಸ್ರಾಯೇಲರು ನಿನ್ನ ಮೇಲೆ ಕೈಯಿಡಲು, ನೀನು ಮುರಿದು ಅವರೆಲ್ಲರ ಹೆಗಲನ್ನು ಚುಚ್ಚಿದೆ; ಅವರು ನಿನ್ನ ಮೇಲೆ ಆತುಕೊಳ್ಳುವಾಗ, ನೀನು ಅವರನ್ನು ಒಡೆದು, ಅವರ ಕಾಲುಗಳಿಗೆ ಮತ್ತು ನಡುವಿಗೆ ನಡುಕವನ್ನು ಉಂಟುಮಾಡಿದೆ.
בְּתָפְשָׂם בְּךָ בכפך בַכַּף תֵּרוֹץ וּבָקַעְתָּ לָהֶם כָּל־כָּתֵף וּבְהִֽשָּׁעֲנָם עָלֶיךָ תִּשָּׁבֵר וְהַעֲמַדְתָּ לָהֶם כָּל־מָתְנָֽיִם׃
8 “ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ಇಗೋ, ನಾನು ನಿನ್ನ ಮೇಲೆ ಖಡ್ಗವನ್ನು ಬರಮಾಡಿ, ಜನರನ್ನೂ, ಪಶುಗಳನ್ನೂ ನಿನ್ನೊಳಗಿಂದ ನಿರ್ಮೂಲ ಮಾಡುವೆನು.
לָכֵן כֹּה אָמַר אֲדֹנָי יְהוִה הִנְנִי מֵבִיא עָלַיִךְ חָרֶב וְהִכְרַתִּי מִמֵּךְ אָדָם וּבְהֵמָֽה׃
9 ಈ ನದಿಯು ನನ್ನದೇ, ನಾನೇ ಅದನ್ನು ನಿರ್ಮಿಸಿದವನೆಂದು ಅಂದುಕೊಂಡ ಕಾರಣ ಐಗುಪ್ತ ದೇಶವು ಹಾಳಾಗುವುದು. ಆಗ ನಾನೇ ಯೆಹೋವನು’ ಎಂದು ಅವರಿಗೆ ಗೊತ್ತಾಗುವುದು.
וְהָיְתָה אֶֽרֶץ־מִצְרַיִם לִשְׁמָמָה וְחָרְבָּה וְיָדְעוּ כִּֽי־אֲנִי יְהוָה יַעַן אָמַר יְאֹר לִי וַאֲנִי עָשִֽׂיתִי׃
10 ೧೦ ‘ಇಗೋ, ನಾನು ನಿನಗೂ, ನಿನ್ನ ನದಿಗೂ ವಿರುದ್ಧವಾಗಿ ಐಗುಪ್ತ ದೇಶವನ್ನು ಮಿಗ್ದೋಲಿನಿಂದ ಸೆವೇನಿಯ ತನಕ, ಹೌದು, ಕೂಷಿನ ಮೇರೆಯವರೆಗೂ ತೀರಾ ಹಾಳು ಮಾಡುವೆನು.
לָכֵן הִנְנִי אֵלֶיךָ וְאֶל־יְאֹרֶיךָ וְנָתַתִּי אֶת־אֶרֶץ מִצְרַיִם לְחָרְבוֹת חֹרֶב שְׁמָמָה מִמִּגְדֹּל סְוֵנֵה וְעַד־גְּבוּל כּֽוּשׁ׃
11 ೧೧ “‘ಯಾವ ಮನುಷ್ಯನ ಪಾದವೂ ಅದರಲ್ಲಿ ಹಾದುಹೋಗುವುದಿಲ್ಲ; ಯಾವ ಪಶುವಿನ ಪಾದವೂ ಅದರಲ್ಲಿ ದಾಟಿಹೋಗುವುದಿಲ್ಲ; ನಲ್ವತ್ತು ವರ್ಷ ನಿರ್ಜನವಾಗಿರುವುದು.
לֹא תַעֲבָר־בָּהּ רֶגֶל אָדָם וְרֶגֶל בְּהֵמָה לֹא תַעֲבָר־בָּהּ וְלֹא תֵשֵׁב אַרְבָּעִים שָׁנָֽה׃
12 ೧೨ ಹಾಳು ಬಿದ್ದಿರುವ ದೇಶಗಳ ಮಧ್ಯದಲ್ಲಿ ಐಗುಪ್ತ ದೇಶವನ್ನೂ ಹಾಳುಮಾಡುವೆನು; ಪಾಳುಬಿದ್ದಿರುವ ಪಟ್ಟಣಗಳೊಳಗೆ ಅದರ ಪಟ್ಟಣಗಳನ್ನೂ ಪಾಳುಬೀಳಿಸುವೆನು; ನಲ್ವತ್ತು ವರ್ಷ ಹಾಗೆಯೇ ಇರುವುದು; ನಾನು ಐಗುಪ್ತ್ಯರನ್ನು ಜನಾಂಗಗಳಲ್ಲಿ ಚದುರಿಸಿ, ದೇಶದೇಶಗಳಲ್ಲಿ ಚದುರಿಸುವೆನು.’”
וְנָתַתִּי אֶת־אֶרֶץ מִצְרַיִם שְׁמָמָה בְּתוֹךְ ׀ אֲרָצוֹת נְשַׁמּוֹת וְעָרֶיהָ בְּתוֹךְ עָרִים מָֽחֳרָבוֹת תִּֽהְיֶיןָ שְׁמָמָה אַרְבָּעִים שָׁנָה וַהֲפִצֹתִי אֶת־מִצְרַיִם בַּגּוֹיִם וְֽזֵרִיתִים בָּאֲרָצֽוֹת׃
13 ೧೩ “ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ನಲ್ವತ್ತು ವರ್ಷಗಳ ಮೇಲೆ ನಾನು ಐಗುಪ್ತ್ಯರನ್ನು ಅವರು ಚದುರಿ ಹೋಗಿದ್ದ ಜನಾಂಗಗಳೊಳಗಿಂದ ಅವರನ್ನು ಒಟ್ಟುಗೂಡಿಸುವೆನು.
כִּי כֹּה אָמַר אֲדֹנָי יְהוִה מִקֵּץ אַרְבָּעִים שָׁנָה אֲקַבֵּץ אֶת־מִצְרַיִם מִן־הָעַמִּים אֲשֶׁר־נָפֹצוּ שָֽׁמָּה׃
14 ೧೪ ಐಗುಪ್ತದ ದುರವಸ್ಥೆಯನ್ನು ತಪ್ಪಿಸಿ, ಅವರ ಜನ್ಮ ಭೂಮಿಯಾದ ಪತ್ರೋಸ್ ದೇಶಕ್ಕೆ ಪುನಃ ಬರಮಾಡುವೆನು; ಅಲ್ಲೇ ಅವರು ಕನಿಷ್ಠ ರಾಜ್ಯದವರಾಗಿರುವರು.
וְשַׁבְתִּי אֶת־שְׁבוּת מִצְרַיִם וַהֲשִׁבֹתִי אֹתָם אֶרֶץ פַּתְרוֹס עַל־אֶרֶץ מְכֽוּרָתָם וְהָיוּ שָׁם מַמְלָכָה שְׁפָלָֽה׃
15 ೧೫ ಆ ರಾಜ್ಯವು ಸಮಸ್ತ ರಾಜ್ಯಗಳಲ್ಲಿ ಕನಿಷ್ಠವೆನಿಸಿಕೊಳ್ಳುವುದು; ಮಿಕ್ಕ ಜನಾಂಗಗಳಿಗಿಂತ ತಾನು ದೊಡ್ಡದೆಂದು ಅದು ಇನ್ನು ತಲೆಯೆತ್ತದು; ಅದು ಜನಾಂಗಗಳ ಮೇಲೆ ಇನ್ನು ದೊರೆತನ ಮಾಡಲಾರದಂತೆ ನಾನು ಅದನ್ನು ಕ್ಷೀಣ ಸ್ಥಿತಿಗೆ ತರುವೆನು.
מִן־הַמַּמְלָכוֹת תִּהְיֶה שְׁפָלָה וְלֹֽא־תִתְנַשֵּׂא עוֹד עַל־הַגּוֹיִם וְהִמְעַטְתִּים לְבִלְתִּי רְדוֹת בַּגּוֹיִֽם׃
16 ೧೬ ಐಗುಪ್ತವು ಇನ್ನು ಇಸ್ರಾಯೇಲ್ ವಂಶದವರ ಭರವಸೆಯಾಗದೆ, ಅದರ ಕಡೆಗೆ ಕಣ್ಣೆತ್ತುವ ದೇವದ್ರೋಹದ ನೆನಪು ಇಸ್ರಾಯೇಲರಲ್ಲಿ ಐಗುಪ್ತದಿಂದ ಇನ್ನು ಹುಟ್ಟುವುದಿಲ್ಲ. ನಾನೇ ಯೆಹೋವನು’” ಎಂದು ಅವರಿಗೆ ತಿಳಿಯುವುದು.
וְלֹא יִֽהְיֶה־עוֹד לְבֵית יִשְׂרָאֵל לְמִבְטָח מַזְכִּיר עָוֺן בִּפְנוֹתָם אַחֲרֵיהֶם וְיָדְעוּ כִּי אֲנִי אֲדֹנָי יְהוִֽה׃
17 ೧೭ ಇಪ್ಪತ್ತೇಳನೆಯ ವರ್ಷದ, ಮೊದಲನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು,
וַיְהִי בְּעֶשְׂרִים וָשֶׁבַע שָׁנָה בָּֽרִאשׁוֹן בְּאֶחָד לַחֹדֶשׁ הָיָה דְבַר־יְהוָה אֵלַי לֵאמֹֽר׃
18 ೧೮ “ನರಪುತ್ರನೇ, ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ತೂರಿಗೆ ಮುತ್ತಿಗೆ ಹಾಕಿ, ತನ್ನ ಸೈನಿಕರಿಂದ ಅತಿ ಕ್ರೂರವಾಗಿ ಸೇವೆಯನ್ನು ಮಾಡಿಸಿದ್ದಾನೆ; ಪ್ರತಿಯೊಬ್ಬನ ತಲೆ ಬೋಳಾಗಿದೆ, ಪ್ರತಿಯೊಬ್ಬನ ಹೆಗಲು ಸುಲಿದು ಹೋಗಿದೆ. ಆದರೂ ಆ ಮುತ್ತಿಗೆಯಲ್ಲಿ ಅವನು ಪಟ್ಟ ಶ್ರಮಕ್ಕೆ ಅವನಿಗಾಗಲಿ, ಅವನ ಸೈನಿಕರಿಗಾಗಲಿ ತೂರಿನಿಂದ ಪ್ರತಿಫಲವೇನೂ ಸಿಕ್ಕಲಿಲ್ಲ.”
בֶּן־אָדָם נְבוּכַדְרֶאצַּר מֶֽלֶךְ־בָּבֶל הֶעֱבִיד אֶת־חֵילוֹ עֲבֹדָה גְדֹלָה אֶל־צֹר כָּל־רֹאשׁ מֻקְרָח וְכָל־כָּתֵף מְרוּטָה וְשָׂכָר לֹא־הָיָה לוֹ וּלְחֵילוֹ מִצֹּר עַל־הָעֲבֹדָה אֲשֶׁר־עָבַד עָלֶֽיהָ׃
19 ೧೯ ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಇಗೋ, ನಾನು ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನಿಗೆ ಐಗುಪ್ತ ದೇಶವನ್ನು ಕೊಡುತ್ತೇನೆ; ಅವನು ಅದರ ಜನಸಮೂಹವನ್ನೂ, ಅದರ ಕೊಳ್ಳೆಯನ್ನೂ, ಅದರ ಸುಲಿಗೆಯನ್ನೂ ಸೂರೆಮಾಡುವನು; ಇದೇ ಅವನ ಸೈನ್ಯಕ್ಕೆ ಸಿಕ್ಕುವ ಪ್ರತಿಫಲವಾಗುವುದು.
לָכֵן כֹּה אָמַר אֲדֹנָי יְהוִה הִנְנִי נֹתֵן לִנְבוּכַדְרֶאצַּר מֶֽלֶךְ־בָּבֶל אֶת־אֶרֶץ מִצְרָיִם וְנָשָׂא הֲמֹנָהּ וְשָׁלַל שְׁלָלָהּ וּבָזַז בִּזָּהּ וְהָיְתָה שָׂכָר לְחֵילֽוֹ׃
20 ೨೦ ಅವನು ಸೈನ್ಯ ಸಮೇತನಾಗಿ ನನಗೋಸ್ಕರ ಸೇವೆ ಮಾಡಿದ್ದರಿಂದ ಅವನು ಪಟ್ಟ ಶ್ರಮಕ್ಕೆ ಪ್ರತಿಫಲವಾಗಿ ನಾನು ಐಗುಪ್ತ ದೇಶವನ್ನು ಅವನಿಗೆ ಕೊಟ್ಟಿದ್ದೇನೆ” ಇದು ಕರ್ತನಾದ ಯೆಹೋವನ ನುಡಿ.
פְּעֻלָּתוֹ אֲשֶׁר־עָבַד בָּהּ נָתַתִּי לוֹ אֶת־אֶרֶץ מִצְרָיִם אֲשֶׁר עָשׂוּ לִי נְאֻם אֲדֹנָי יְהוִֽה׃
21 ೨೧ “ಆ ದಿನದಲ್ಲಿ ನಾನು ಇಸ್ರಾಯೇಲ್ ವಂಶಕ್ಕೆ ಕೊಂಬನ್ನು ಮೊಳೆಯಿಸಿ, ಆ ವಂಶದವರ ಮಧ್ಯದಲ್ಲಿ ನಿನ್ನ ಬಾಯಿಯನ್ನು ತೆರೆಯುವಂತೆ ಮಾಡುವೆನು; ನಾನೇ ಯೆಹೋವನು ಎಂದು ಅವರಿಗೆ ನಿಶ್ಚಯವಾಗುವುದು.”
בַּיּוֹם הַהוּא אַצְמִיחַ קֶרֶן לְבֵית יִשְׂרָאֵל וּלְךָ אֶתֵּן פִּתְחֽוֹן־פֶּה בְּתוֹכָם וְיָדְעוּ כִּי־אֲנִי יְהוָֽה׃

< ಯೆಹೆಜ್ಕೇಲನು 29 >