< ಯೆಹೆಜ್ಕೇಲನು 3 >
1 ೧ ಆತನು ನನಗೆ, “ನರಪುತ್ರನೇ, ನಿನಗೆ ಸಿಕ್ಕಿದ ಈ ಸುರುಳಿಯನ್ನು ತಿನ್ನು; ಅನಂತರ ನೀನು ಹೋಗಿ (ಇದರಲ್ಲಿನ ಸಂಗತಿಗಳನ್ನು) ಇಸ್ರಾಯೇಲ್ ವಂಶದವರಿಗೆ ಸಾರು” ಎಂದು ಅಪ್ಪಣೆಕೊಟ್ಟನು.
Tedy řekl mi: Synu člověčí, což před tebou jest, sněz, sněz knihu tuto, a jdi, mluv k domu Izraelskému.
2 ೨ ನಾನು ಬಾಯಿ ತೆರೆದೆ, ಆತನು ಆ ಸುರುಳಿಯನ್ನು ನನಗೆ ತಿನ್ನಿಸಿದನು.
I otevřel jsem ústa svá, a dal mi snísti knihu tu,
3 ೩ ಆಗ ಆತನು ನನಗೆ, “ನರಪುತ್ರನೇ, ನಾನು ಕೊಡುವ ಈ ಸುರುಳಿಯನ್ನು ತಿಂದು ಹೊಟ್ಟೆ ತುಂಬಿಸಿಕೋ” ಎಂದು ಹೇಳಲು ಅದನ್ನು ತಿಂದುಬಿಟ್ಟೆನು; ಅದು ನನ್ನ ಬಾಯಿಯಲ್ಲಿ ಜೇನಿನಂತೆ ಸಿಹಿಯಾಗಿತ್ತು.
Řka ke mně: Synu člověčí, nakrm břicho své, a střeva svá naplň knihou touto, kteroužť dávám. I snědl jsem, a byla v ústech mých jako med sladká.
4 ೪ ಆಮೇಲೆ ಆತನು ನನಗೆ ಹೀಗೆಂದನು, “ನರಪುತ್ರನೇ, ನೀನು ಇಸ್ರಾಯೇಲ್ ವಂಶದವರ ಬಳಿಗೆ ಹೋಗಿ ನಾನು ತಿಳಿಸುವ ಮಾತುಗಳನ್ನು ಅವರಿಗೆ ಹೇಳು.
Za tím řekl mi: Synu člověčí, jdiž k domu Izraelskému, a mluv k nim slovy mými.
5 ೫ ನಾನು ನಿನ್ನನ್ನು ಇಸ್ರಾಯೇಲ್ ವಂಶದವರ ಬಳಿಗೆ ಕಳುಹಿಸುತ್ತೇನೆಯೇ ಹೊರತು ಕಷ್ಟಕರವಾದ ಅನ್ಯಭಾಷೆಯ ಜನರ ಬಳಿಗೆ ಕಳುಹಿಸುವುದಿಲ್ಲ.
Nebo nebudeš poslán k lidu hluboké řeči a nesnadného jazyka, ale k domu Izraelskému.
6 ೬ ಹೌದು, ನಿನಗೆ ಅರ್ಥವಾಗದ ಕಷ್ಟಕರವಾದ ಅನ್ಯಭಾಷೆಯನ್ನಾಡುವ ನಾನಾ ಜನಾಂಗಗಳ ಬಳಿಗೆ ನಿನ್ನನು ಕಳುಹಿಸುವುದಿಲ್ಲ. ಇಂಥವರ ಕಡೆಗೆ ನಾನು ನಿನ್ನನ್ನು ಕಳುಹಿಸಿದ ಪಕ್ಷದಲ್ಲಿ ಅವರಾದರೂ ನಿಶ್ಚಯವಾಗಿ ನಿನ್ನ ಮಾತಿಗೆ ಕಿವಿಗೊಡುತ್ತಿದ್ದರು.
Ne k národům mnohým hluboké řeči a nesnadného jazyka, jejichž bys slovům nerozuměl, ješto, kdybych tě k nim poslal, uposlechli by tebe.
7 ೭ ಇಸ್ರಾಯೇಲ್ ವಂಶದವರೋ ನಿನಗೆ ಕಿವಿಗೊಡಲು ಸಿದ್ಧರಿಲ್ಲ; ನನಗೂ ಕಿವಿಗೊಡಲು ಸಿದ್ಧರಿಲ್ಲ; ಅವರೆಲ್ಲರೂ ನಾಚಿಕೆಗೆಟ್ಟವರೂ, ಹಟಮಾರಿಗಳು ಆಗಿದ್ದಾರೆ.
Ale dům Izraelský nebudou tě chtíti poslouchati, poněvadž nechtí poslouchati mne; nebo všecken dům Izraelský jest tvrdočelný a zatvrdilého srdce.
8 ೮ ಇಗೋ, ನಾನು ಅವರ ಕಠಿಣ ಹೃದಯಕ್ಕೆ ವಿರುದ್ಧವಾಗಿ ನಿನ್ನ ಹೃದಯವನ್ನು ಕಠಿಣಪಡಿಸಿದ್ದೇನೆ; ಅವರ ಹಣೆಗೆ ಪ್ರತಿಯಾಗಿ ನಿನ್ನ ಹಣೆಯನ್ನು ಗಟ್ಟಿಮಾಡಿದ್ದೇನೆ.
Ale učinil jsem tvář tvou tvrdou proti tváři jejich, a čelo tvé tvrdé proti čelu jejich.
9 ೯ ನಿನ್ನ ನಿರ್ಧಾರವನ್ನು ಕಗ್ಗಲ್ಲಿಗಿಂತ ಗಟ್ಟಿಯಾದ ವಜ್ರದಂತೆ ಮಾಡಿದ್ದೇನೆ; ಅವರು ತಿರುಗಿ ಬೀಳುವ ಮನೆತನದವರು, ಅವರಿಗೆ ಭಯಪಡಬೇಡ; ಅವರ ಬಿರುನೋಟಕ್ಕೆ ಹೆದರದಿರು.”
Jako kámen přetvrdý, pevnější než skálu učinil jsem čelo tvé; nebojž se jich, aniž se strachuj tváři jejich, proto že dům zpurný jsou.
10 ೧೦ ಇದಲ್ಲದೆ ಆತನು ನನಗೆ ಹೀಗೆ ಹೇಳಿದನು, “ನರಪುತ್ರನೇ, ನಾನು ನಿನಗೆ ಹೇಳುವ ಮಾತುಗಳನ್ನೆಲ್ಲಾ ಕಿವಿಯಿಂದ ಕೇಳಿ ಹೃದಯದಲ್ಲಿಟ್ಟುಕೋ.
I řekl ke mně: Synu člověčí, všecka slova má, kterážť mluviti budu, přijmi v srdce své, a ušima svýma slyš.
11 ೧೧ ಸೆರೆಯಾಗಿರುವ ನಿನ್ನ ಸ್ವಂತ ಜನರ ಬಳಿಗೆ ಹೋಗಿ ಅವರು ಕೇಳಿದರೂ, ಕೇಳದೆ ಹೋದರೂ ಅವರನ್ನು ಉದ್ದೇಶಿಸಿ, ‘ಕರ್ತನಾದ ಯೆಹೋವನು ಇಂತೆನ್ನುತ್ತಾನೆ’ ಎಂದು ಅವರಿಗೆ ಸಾರು.”
A jdi k zajatým, k synům lidu svého, a mluv k nim, a rci jim: Takto praví Panovník Hospodin, již oni slyšte neb nechte.
12 ೧೨ ಆಮೇಲೆ ದೇವರಾತ್ಮವು ನನ್ನನ್ನು ಎತ್ತಿಕೊಂಡು ಹೋಗಲಾಗಿ, “ಮಹಿಮೆಯುಳ್ಳ ಯೆಹೋವನಿಗೆ ಆತನ ವಾಸಸ್ಥಾನದಲ್ಲಿ ಸ್ತೋತ್ರವಾಗಲಿ” ಎಂಬ ಮಹಾಶಬ್ದವು ನನ್ನ ಹಿಂದೆ ಕೇಳಿಸಿತು.
Tehdy odnesl mne Duch, a slyšel jsem za sebou hlas hřmotu velikého: Požehnaná sláva Hospodinova z místa svého.
13 ೧೩ ಜೀವಿಗಳ ರೆಕ್ಕೆಗಳು ಒಂದಕ್ಕೊಂದು ಬಡಿಯುವ ಸಪ್ಪಳ, ಅವುಗಳ ಪಕ್ಕದಲ್ಲಿ ಗರಗರನೆ ತಿರುಗುವ ಚಕ್ರಗಳ ಸದ್ದು, ಹೀಗೆ ಭೂಕಂಪದಂಥ ಮಹಾಶಬ್ದವು ನನ್ನ ಕಿವಿಗೆ ಬಿತ್ತು.
A hlas křídel těch zvířat, kteráž se vespolek dotýkala, a hlas kol naproti nim, a hlas hřmotu velikého.
14 ೧೪ ದೇವರಾತ್ಮವು ನನ್ನನ್ನು ಎತ್ತಿಕೊಂಡು ಹೋಯಿತು. ನಾನು ಚಿಂತೆಯಿಂದ ಮನಸ್ತಾಪಪಡುತ್ತಾ ಹೋದೆನು. ಆದರೆ ಯೆಹೋವನ ಕೈ ನನ್ನ ಮೇಲೆ ಬಲವಾಗಿತ್ತು.
Duch pak odnesl mne, a vzal mne, a odšel jsem truchliv, v hněvě ducha svého, ale ruka Hospodinova nade mnou silnější byla.
15 ೧೫ ಆಗ ಸೆರೆಯಾಗಿ ಒಯ್ಯಲ್ಪಟ್ಟು ಕೆಬಾರ್ ನದಿಯ ಹತ್ತಿರ ತೇಲ್ ಆಬೀಬಿನಲ್ಲಿ ವಾಸವಾಗಿದ್ದವರ ಬಳಿಗೆ ಬಂದು, ಅವರು ಕುಳಿತುಕೊಂಡಿದ್ದ ಸ್ಥಳದಲ್ಲಿಯೇ ಕುಳಿತುಕೊಂಡೆನು; ಏಳು ದಿನಗಳವರೆಗೂ ಅಲ್ಲೇ ಅವರ ಮಧ್ಯದಲ್ಲಿ ಸ್ತಬ್ಧನಾಗಿ ಉಳಿದುಬಿಟ್ಟೆನು.
I přišel jsem k zajatým do Telabib, bydlícím při řece Chebar, a seděl jsem, kdež oni bydlili. Seděl jsem, pravím, sedm dní u prostřed nich s užasnutím.
16 ೧೬ ಏಳು ದಿನಗಳಾದ ಮೇಲೆ ಯೆಹೋವನು ಈ ಮಾತನ್ನು ನನಗೆ ದಯಪಾಲಿಸಿದನು,
I stalo se po dokonání sedmi dnů, že se stalo slovo Hospodinovo ke mně, řkoucí:
17 ೧೭ “ನರಪುತ್ರನೇ, ನಾನು ನಿನ್ನನ್ನು ಇಸ್ರಾಯೇಲ್ ವಂಶದವರ ಮೇಲೆ ಕಾವಲುಗಾರನನ್ನಾಗಿ ನೇಮಿಸಿದ್ದೇನೆ. ಹೀಗಿರಲು ನನ್ನ ಬಾಯಿಂದ ಹೊರಡುವ ಮಾತನ್ನು ಕೇಳಿ, ನನ್ನ ಪರವಾಗಿ ಅವರನ್ನು ಎಚ್ಚರಿಸು.
Synu člověčí, strážným jsem tě postavil nad domem Izraelským, abys slyše slovo z úst mých, napomínal jich ode mne.
18 ೧೮ ನಾನು ದುಷ್ಟನಿಗೆ, ‘ನೀನು ಖಂಡಿತವಾಗಿ ಸಾಯುವೆ’ ಎಂದು ನುಡಿಯುವಾಗ ನೀನು ಅವನನ್ನು ಎಚ್ಚರಿಸದೆಯೂ, ಅವನು ತನ್ನ ಕೆಟ್ಟಮಾರ್ಗವನ್ನು ಬಿಟ್ಟು ತನ್ನ ಪ್ರಾಣವನ್ನು ಉಳಿಸಿಕೊಳ್ಳುವಂತೆ ಅವನಿಗೆ ಬುದ್ಧಿಹೇಳದೆಯೂ ಇದ್ದರೆ ಆ ದುಷ್ಟನು ತನ್ನ ಅಪರಾಧದಿಂದ ಸಾಯಬೇಕಾಗುವುದು; ಅವನ ಮರಣಕ್ಕೆ ನೀನು ಹೊಣೆಯಾಗುವೆ.
Když bych já řekl bezbožnému: Smrtí umřeš, a nenapomenul bys ho, ani nemluvil, abys ho odvedl od cesty jeho bezbožné, proto abys ho při životu zachoval: ten bezbožný pro nepravost svou umře, ale krve jeho z ruky tvé vyhledám.
19 ೧೯ ನೀನು ದುಷ್ಟನನ್ನು ಎಚ್ಚರಿಸಿದರೂ, ಅವನು ತನ್ನ ದುಷ್ಟತನವನ್ನೂ, ಕೆಟ್ಟಮಾರ್ಗವನ್ನೂ ಬಿಡದೆಹೋದರೆ ತನ್ನ ಅಪರಾಧದಿಂದಲೇ ಸಾಯುವನು; ನೀನೋ ನಿನ್ನ ಪ್ರಾಣವನ್ನು ಉಳಿಸಿಕೊಂಡಿರುವಿ.
Paklibys ty napomenul bezbožného, a neodvrátil by se od bezbožnosti své, a od cesty své bezbožné, onť pro nepravost svou umře, ale ty duši svou vysvobodíš.
20 ೨೦ ಇದಲ್ಲದೆ ನೀತಿವಂತನು ತನ್ನ ನೀತಿಯನ್ನು ಬಿಟ್ಟು ಅನ್ಯಾಯಮಾಡುವವನಾದರೆ, ಆಗ ನಾನು ಅವನ ಮುಂದೆ ಅಡಚಣೆಯನ್ನು ಒಡ್ಡುವೆನು, ಎಡವಿದರೆ ಅವನು ಸಾಯುವನು; ನೀನು ಅವನನ್ನು ಎಚ್ಚರಿಸದೆ ಹೋದಕಾರಣ ಅವನು ತನ್ನ ಪಾಪದಿಂದ ಸಾಯಬೇಕಾಯಿತು. ಅವನು ಮಾಡಿದ ಒಳ್ಳೆಕಾರ್ಯಗಳು ಲೆಕ್ಕಕ್ಕೆ ಬರುವುದಿಲ್ಲ. ಆದರೆ ಅವನ ಮರಣಕ್ಕೆ ನೀನು ಹೊಣೆಯಾಗುವೆ.
Odvrátil-li by se pak spravedlivý od spravedlnosti své, a činil by nepravost, a já bych položil urážku před něj, a tak by umřel, ty pak bys ho nenapomenul: pro hříchť svůj umře, aniž na pamět přijde která spravedlnost jeho, kterouž činil, ale krve jeho z ruky tvé vyhledám.
21 ೨೧ ನೀನು ನೀತಿವಂತನನ್ನು ಪಾಪ ಮಾಡದಂತೆ ಎಚ್ಚರಿಸಿದ ಮೇಲೆ ಅವನು ಪಾಪಮಾಡದೆ ಎಚ್ಚರಗೊಂಡ ಕಾರಣ ಜೀವದಿಂದ ಉಳಿಯುವನು; ನೀನೂ ನಿನ್ನ ಪ್ರಾಣವನ್ನು ಉಳಿಸಿಕೊಳ್ಳುವೆ.”
Pakli bys ty napomenul spravedlivého, aby nehřešil spravedlivý, a on by nehřešil, jistě že bude živ; nebo napomenut byl. Ty také duši svou vysvobodíš.
22 ೨೨ ಅದೇ ಸ್ಥಳದಲ್ಲಿ ನಾನು ಯೆಹೋವನ ಹಸ್ತಸ್ಪರ್ಶದಿಂದ ಪರವಶನಾಗಿರಲು ಆತನು ನನಗೆ, “ನೀನು ಎದ್ದು, ಬಯಲು ಸೀಮೆಗೆ ಹೊರಡು, ಅಲ್ಲಿ ನಾನು ನಿನ್ನೊಂದಿಗೆ ಮಾತನಾಡುವೆನು” ಎಂದು ಹೇಳಿದನು.
I byla tam nade mnou ruka Hospodinova, kterýžto řekl mi: Vstaň, jdi do tohoto údolí, a tam mluviti budu s tebou.
23 ೨೩ ನಾನು ಎದ್ದು ಬಯಲು ಸೀಮೆಗೆ ಹೊರಟುಹೋದೆನು. ಯೆಹೋವನ ಮಹಿಮೆಯು ಅಲ್ಲಿ ನಿಂತಿತ್ತು. ಅದು ಕೆಬಾರ್ ನದಿಯ ಹತ್ತಿರ ನಾನು ನೋಡಿದ ಮಹಿಮೆಯ ಪ್ರಕಾರವಾಗಿತ್ತು. ಅದನ್ನು ಕಂಡು ಅಡ್ಡಬಿದ್ದೆನು.
A tak vstav, šel jsem do toho údolí, a aj, sláva Hospodinova stála tam, jako sláva, kterouž jsem viděl u řeky Chebar. I padl jsem na tvář svou.
24 ೨೪ ದೇವರಾತ್ಮವು ನನ್ನೊಳಗೆ ಪ್ರವೇಶಿಸಿ, ನಾನು ಎದ್ದು ನಿಂತುಕೊಳ್ಳುವಂತೆ ಮಾಡಿದ ಮೇಲೆ ಆತನು ನನಗೆ ಹೀಗೆ ಹೇಳಿದನು, “ನೀನು ಹೋಗಿ ನಿನ್ನ ಮನೆಯೊಳಗೆ ಅಡಗಿಕೋ.
Tehdy vstoupil do mne Duch, a postaviv mne na nohy, mluvil ke mně, a řekl mi: Jdiž, zavři se v domě svém.
25 ೨೫ ನರಪುತ್ರನೇ, ಇಗೋ, ನಿನ್ನ ಸ್ವಜನರು ನಿನ್ನನ್ನು ಬಂಧಿಸಿ ಕಟ್ಟುವರು, ನೀನು ಹೊರಗೆ ಸಂಚರಿಸಲು ಆಗುವುದಿಲ್ಲ.
Nebo na tě, synu člověčí, aj, dadí na tě provazy, a sváží tě jimi, a nebudeš moci vyjíti mezi ně.
26 ೨೬ ಇದಲ್ಲದೆ ನಿನ್ನ ನಾಲಿಗೆಯು ಸೇದಿ ಹೋಗಿ ನೀನು ಮೂಕನಾಗಿರುವಂತೆ ಮಾಡುವೆನು; ನೀನು ಅವರನ್ನು ಖಂಡಿಸಲಾರೆ; ಅವರು ತಿರುಗಿ ಬೀಳುವ ಮನೆತನದವರಾಗಿದ್ದಾರೆ.
A já učiním, aby jazyk tvůj přilnul k dásním tvým, a abys oněměl, a nebyl jim mužem domlouvajícím, protože dům zpurný jsou.
27 ೨೭ ನಾನು ನಿನ್ನೊಡನೆ ಮತ್ತೆ ಮಾತನಾಡುವಾಗ ನಾನು ನಿನ್ನ ಬಾಯಿಯನ್ನು ಬಿಚ್ಚುವೆನು; ಆಗ ನೀನು ಅವರಿಗೆ, ‘ಕರ್ತನಾದ ಯೆಹೋವನು ಇಂತೆನ್ನುತ್ತಾನೆ’ ಎಂದು ಹೇಳಬೇಕು; ಕೇಳುವವನು ಕೇಳಲಿ, ಕೇಳದವನು ಕೇಳದೇ ಇರಲಿ; ಅವರು ತಿರುಗಿ ಬೀಳುವ ವಂಶದವರೇ.”
Ale když mluviti budu s tebou, otevru ústa tvá, a díš jim: Takto praví Panovník Hospodin: Kdo slyšeti chce, nechť slyší, a kdo nechce, nechť nechá, že dům zpurný jsou.