< ಯೆಹೆಜ್ಕೇಲನು 3 >

1 ಆತನು ನನಗೆ, “ನರಪುತ್ರನೇ, ನಿನಗೆ ಸಿಕ್ಕಿದ ಈ ಸುರುಳಿಯನ್ನು ತಿನ್ನು; ಅನಂತರ ನೀನು ಹೋಗಿ (ಇದರಲ್ಲಿನ ಸಂಗತಿಗಳನ್ನು) ಇಸ್ರಾಯೇಲ್ ವಂಶದವರಿಗೆ ಸಾರು” ಎಂದು ಅಪ್ಪಣೆಕೊಟ್ಟನು.
God El fahk, “Mwet sukawil moul la, kangla book limlim se inge, na kom som kaskas nu sin mwet Israel.”
2 ನಾನು ಬಾಯಿ ತೆರೆದೆ, ಆತನು ಆ ಸುರುಳಿಯನ್ನು ನನಗೆ ತಿನ್ನಿಸಿದನು.
Ouinge nga mangelik, ac El ase book limlim sac ngan kangla.
3 ಆಗ ಆತನು ನನಗೆ, “ನರಪುತ್ರನೇ, ನಾನು ಕೊಡುವ ಈ ಸುರುಳಿಯನ್ನು ತಿಂದು ಹೊಟ್ಟೆ ತುಂಬಿಸಿಕೋ” ಎಂದು ಹೇಳಲು ಅದನ್ನು ತಿಂದುಬಿಟ್ಟೆನು; ಅದು ನನ್ನ ಬಾಯಿಯಲ್ಲಿ ಜೇನಿನಂತೆ ಸಿಹಿಯಾಗಿತ್ತು.
El fahk, “Mwet sukawil, kangla book limlim se nga sot nu sum uh, ac nwakla insiom kac.” Na nga kangla, ac emwem kac uh oana honey.
4 ಆಮೇಲೆ ಆತನು ನನಗೆ ಹೀಗೆಂದನು, “ನರಪುತ್ರನೇ, ನೀನು ಇಸ್ರಾಯೇಲ್ ವಂಶದವರ ಬಳಿಗೆ ಹೋಗಿ ನಾನು ತಿಳಿಸುವ ಮಾತುಗಳನ್ನು ಅವರಿಗೆ ಹೇಳು.
Na God El fahk, “Mwet sukawil, fahla nu yurin mwet Israel ac fahk nu selos ma nukewa nga supwekom in fahk nu selos uh.
5 ನಾನು ನಿನ್ನನ್ನು ಇಸ್ರಾಯೇಲ್ ವಂಶದವರ ಬಳಿಗೆ ಕಳುಹಿಸುತ್ತೇನೆಯೇ ಹೊರತು ಕಷ್ಟಕರವಾದ ಅನ್ಯಭಾಷೆಯ ಜನರ ಬಳಿಗೆ ಕಳುಹಿಸುವುದಿಲ್ಲ.
Nga tia supwekom nu ke sie mutunfacl su kom tia kalem ke kas lalos, a nu yurin mwet na Israel.
6 ಹೌದು, ನಿನಗೆ ಅರ್ಥವಾಗದ ಕಷ್ಟಕರವಾದ ಅನ್ಯಭಾಷೆಯನ್ನಾಡುವ ನಾನಾ ಜನಾಂಗಗಳ ಬಳಿಗೆ ನಿನ್ನನು ಕಳುಹಿಸುವುದಿಲ್ಲ. ಇಂಥವರ ಕಡೆಗೆ ನಾನು ನಿನ್ನನ್ನು ಕಳುಹಿಸಿದ ಪಕ್ಷದಲ್ಲಿ ಅವರಾದರೂ ನಿಶ್ಚಯವಾಗಿ ನಿನ್ನ ಮಾತಿಗೆ ಕಿವಿಗೊಡುತ್ತಿದ್ದರು.
Nga funu supwekom nu in kutu mutunfacl lulap su orekmakin kas upa ma kom tia kalem kac, elos lukun lohng kom.
7 ಇಸ್ರಾಯೇಲ್ ವಂಶದವರೋ ನಿನಗೆ ಕಿವಿಗೊಡಲು ಸಿದ್ಧರಿಲ್ಲ; ನನಗೂ ಕಿವಿಗೊಡಲು ಸಿದ್ಧರಿಲ್ಲ; ಅವರೆಲ್ಲರೂ ನಾಚಿಕೆಗೆಟ್ಟವರೂ, ಹಟಮಾರಿಗಳು ಆಗಿದ್ದಾರೆ.
A funu mwet Israel, wangin sie selos ac lungse in lohng kom. Finne nga, elos tia pac lohngyu. Elos nukewa mwet likkeke ac lungse alein.
8 ಇಗೋ, ನಾನು ಅವರ ಕಠಿಣ ಹೃದಯಕ್ಕೆ ವಿರುದ್ಧವಾಗಿ ನಿನ್ನ ಹೃದಯವನ್ನು ಕಠಿಣಪಡಿಸಿದ್ದೇನೆ; ಅವರ ಹಣೆಗೆ ಪ್ರತಿಯಾಗಿ ನಿನ್ನ ಹಣೆಯನ್ನು ಗಟ್ಟಿಮಾಡಿದ್ದೇನೆ.
Inge nga ac oru kom in likkeke ac ku oana elos.
9 ನಿನ್ನ ನಿರ್ಧಾರವನ್ನು ಕಗ್ಗಲ್ಲಿಗಿಂತ ಗಟ್ಟಿಯಾದ ವಜ್ರದಂತೆ ಮಾಡಿದ್ದೇನೆ; ಅವರು ತಿರುಗಿ ಬೀಳುವ ಮನೆತನದವರು, ಅವರಿಗೆ ಭಯಪಡಬೇಡ; ಅವರ ಬಿರುನೋಟಕ್ಕೆ ಹೆದರದಿರು.”
Nga ac oru kom in ku oana sie eot, ac keke oana sie diamond. Nimet sangeng sin mwet orek alein ingo.”
10 ೧೦ ಇದಲ್ಲದೆ ಆತನು ನನಗೆ ಹೀಗೆ ಹೇಳಿದನು, “ನರಪುತ್ರನೇ, ನಾನು ನಿನಗೆ ಹೇಳುವ ಮಾತುಗಳನ್ನೆಲ್ಲಾ ಕಿವಿಯಿಂದ ಕೇಳಿ ಹೃದಯದಲ್ಲಿಟ್ಟುಕೋ.
God El sifilpa fahk, “Mwet sukawil, sang insiom in porongo ac esam ma nukewa nga fahk nu sum uh.
11 ೧೧ ಸೆರೆಯಾಗಿರುವ ನಿನ್ನ ಸ್ವಂತ ಜನರ ಬಳಿಗೆ ಹೋಗಿ ಅವರು ಕೇಳಿದರೂ, ಕೇಳದೆ ಹೋದರೂ ಅವರನ್ನು ಉದ್ದೇಶಿಸಿ, ‘ಕರ್ತನಾದ ಯೆಹೋವನು ಇಂತೆನ್ನುತ್ತಾನೆ’ ಎಂದು ಅವರಿಗೆ ಸಾರು.”
Na kom som nu yurin mwet srahm su muta in sruoh, ac fahk nu selos ma nga, LEUM GOD Fulatlana, fahk nu selos, lah elos ac lohng kom ku tia.”
12 ೧೨ ಆಮೇಲೆ ದೇವರಾತ್ಮವು ನನ್ನನ್ನು ಎತ್ತಿಕೊಂಡು ಹೋಗಲಾಗಿ, “ಮಹಿಮೆಯುಳ್ಳ ಯೆಹೋವನಿಗೆ ಆತನ ವಾಸಸ್ಥಾನದಲ್ಲಿ ಸ್ತೋತ್ರವಾಗಲಿ” ಎಂಬ ಮಹಾಶಬ್ದವು ನನ್ನ ಹಿಂದೆ ಕೇಳಿಸಿತು.
Na ngun lun God srukyuyak, ac nga lohng sie pusra tukuk su fahk, “Kaksakin wolana lun LEUM GOD inkusrao lucng.”
13 ೧೩ ಜೀವಿಗಳ ರೆಕ್ಕೆಗಳು ಒಂದಕ್ಕೊಂದು ಬಡಿಯುವ ಸಪ್ಪಳ, ಅವುಗಳ ಪಕ್ಕದಲ್ಲಿ ಗರಗರನೆ ತಿರುಗುವ ಚಕ್ರಗಳ ಸದ್ದು, ಹೀಗೆ ಭೂಕಂಪದಂಥ ಮಹಾಶಬ್ದವು ನನ್ನ ಕಿವಿಗೆ ಬಿತ್ತು.
Nga lohng pusren posohksok lun ma orekla moul uh tukeni pikpik yen engyeng uh, ac kusen wheel uh su yohk pusra oana pusren kusrusr lulap.
14 ೧೪ ದೇವರಾತ್ಮವು ನನ್ನನ್ನು ಎತ್ತಿಕೊಂಡು ಹೋಯಿತು. ನಾನು ಚಿಂತೆಯಿಂದ ಮನಸ್ತಾಪಪಡುತ್ತಾ ಹೋದೆನು. ಆದರೆ ಯೆಹೋವನ ಕೈ ನನ್ನ ಮೇಲೆ ಬಲವಾಗಿತ್ತು.
Ac ku lulap lun LEUM GOD tuku nu fuk, ac ke ngun lal usyula nga pulakin inse toasr ac kasrkusrak.
15 ೧೫ ಆಗ ಸೆರೆಯಾಗಿ ಒಯ್ಯಲ್ಪಟ್ಟು ಕೆಬಾರ್ ನದಿಯ ಹತ್ತಿರ ತೇಲ್ ಆಬೀಬಿನಲ್ಲಿ ವಾಸವಾಗಿದ್ದವರ ಬಳಿಗೆ ಬಂದು, ಅವರು ಕುಳಿತುಕೊಂಡಿದ್ದ ಸ್ಥಳದಲ್ಲಿಯೇ ಕುಳಿತುಕೊಂಡೆನು; ಏಳು ದಿನಗಳವರೆಗೂ ಅಲ್ಲೇ ಅವರ ಮಧ್ಯದಲ್ಲಿ ಸ್ತಬ್ಧನಾಗಿ ಉಳಿದುಬಿಟ್ಟೆನು.
Na nga tuku nu Tel Abib sisken Infacl Chebar, yen ma mwet sruoh elos muta we. Nga muta we len itkosr, ac wela ke ma nga tuh liye ac lohng.
16 ೧೬ ಏಳು ದಿನಗಳಾದ ಮೇಲೆ ಯೆಹೋವನು ಈ ಮಾತನ್ನು ನನಗೆ ದಯಪಾಲಿಸಿದನು,
Tukun len itkosr, LEUM GOD El kaskas nu sik
17 ೧೭ “ನರಪುತ್ರನೇ, ನಾನು ನಿನ್ನನ್ನು ಇಸ್ರಾಯೇಲ್ ವಂಶದವರ ಮೇಲೆ ಕಾವಲುಗಾರನನ್ನಾಗಿ ನೇಮಿಸಿದ್ದೇನೆ. ಹೀಗಿರಲು ನನ್ನ ಬಾಯಿಂದ ಹೊರಡುವ ಮಾತನ್ನು ಕೇಳಿ, ನನ್ನ ಪರವಾಗಿ ಅವರನ್ನು ಎಚ್ಚರಿಸು.
ac fahk, “Mwet sukawil, nga orekomla in sie mwet san nu sin mutanfahl Israel, ac kom fah fahkang nu selos kas in sensenkakunulos ke kas ma nga ac sot nu sum.
18 ೧೮ ನಾನು ದುಷ್ಟನಿಗೆ, ‘ನೀನು ಖಂಡಿತವಾಗಿ ಸಾಯುವೆ’ ಎಂದು ನುಡಿಯುವಾಗ ನೀನು ಅವನನ್ನು ಎಚ್ಚರಿಸದೆಯೂ, ಅವನು ತನ್ನ ಕೆಟ್ಟಮಾರ್ಗವನ್ನು ಬಿಟ್ಟು ತನ್ನ ಪ್ರಾಣವನ್ನು ಉಳಿಸಿಕೊಳ್ಳುವಂತೆ ಅವನಿಗೆ ಬುದ್ಧಿಹೇಳದೆಯೂ ಇದ್ದರೆ ಆ ದುಷ್ಟನು ತನ್ನ ಅಪರಾಧದಿಂದ ಸಾಯಬೇಕಾಗುವುದು; ಅವನ ಮರಣಕ್ಕೆ ನೀನು ಹೊಣೆಯಾಗುವೆ.
Nga fin akkalemye lah mwet koluk uh ac misa, ac kom tia fahkang nu selos in aolla moul lalos tuh elos in moul, na elos ac misa ke ma koluk lalos, tusruk nga ac filiya mwatan misa lalos fom.
19 ೧೯ ನೀನು ದುಷ್ಟನನ್ನು ಎಚ್ಚರಿಸಿದರೂ, ಅವನು ತನ್ನ ದುಷ್ಟತನವನ್ನೂ, ಕೆಟ್ಟಮಾರ್ಗವನ್ನೂ ಬಿಡದೆಹೋದರೆ ತನ್ನ ಅಪರಾಧದಿಂದಲೇ ಸಾಯುವನು; ನೀನೋ ನಿನ್ನ ಪ್ರಾಣವನ್ನು ಉಳಿಸಿಕೊಂಡಿರುವಿ.
A kom fin sang kas in kai nu sin mwet koluk, ac elos tiana forla liki, na elos ac misa ke orekma koluk lalos, na kom ac moul.
20 ೨೦ ಇದಲ್ಲದೆ ನೀತಿವಂತನು ತನ್ನ ನೀತಿಯನ್ನು ಬಿಟ್ಟು ಅನ್ಯಾಯಮಾಡುವವನಾದರೆ, ಆಗ ನಾನು ಅವನ ಮುಂದೆ ಅಡಚಣೆಯನ್ನು ಒಡ್ಡುವೆನು, ಎಡವಿದರೆ ಅವನು ಸಾಯುವನು; ನೀನು ಅವನನ್ನು ಎಚ್ಚರಿಸದೆ ಹೋದಕಾರಣ ಅವನು ತನ್ನ ಪಾಪದಿಂದ ಸಾಯಬೇಕಾಯಿತು. ಅವನು ಮಾಡಿದ ಒಳ್ಳೆಕಾರ್ಯಗಳು ಲೆಕ್ಕಕ್ಕೆ ಬರುವುದಿಲ್ಲ. ಆದರೆ ಅವನ ಮರಣಕ್ಕೆ ನೀನು ಹೊಣೆಯಾಗುವೆ.
“Ac fin mwet suwoswos uh mutawauk in oru ma koluk, na nga fuhlelosi in muta ke moul fosrnga, elos ac misa ke ma koluk lalos ke sripen kom tia sensenkakunulos. Nga fah tia esam ma wo elos oru meet ah, ac kom ac fah eis mwatan misa lalos.
21 ೨೧ ನೀನು ನೀತಿವಂತನನ್ನು ಪಾಪ ಮಾಡದಂತೆ ಎಚ್ಚರಿಸಿದ ಮೇಲೆ ಅವನು ಪಾಪಮಾಡದೆ ಎಚ್ಚರಗೊಂಡ ಕಾರಣ ಜೀವದಿಂದ ಉಳಿಯುವನು; ನೀನೂ ನಿನ್ನ ಪ್ರಾಣವನ್ನು ಉಳಿಸಿಕೊಳ್ಳುವೆ.”
A kom fin sensenkakin mwet wo in tia oru ma koluk, ac elos lohng kom ac tia oru ma koluk, elos ac moul, ac kom ac oayapa moul.”
22 ೨೨ ಅದೇ ಸ್ಥಳದಲ್ಲಿ ನಾನು ಯೆಹೋವನ ಹಸ್ತಸ್ಪರ್ಶದಿಂದ ಪರವಶನಾಗಿರಲು ಆತನು ನನಗೆ, “ನೀನು ಎದ್ದು, ಬಯಲು ಸೀಮೆಗೆ ಹೊರಡು, ಅಲ್ಲಿ ನಾನು ನಿನ್ನೊಂದಿಗೆ ಮಾತನಾಡುವೆನು” ಎಂದು ಹೇಳಿದನು.
Nga pulakin ku lun LEUM GOD oan fuk, ac nga lohng ke El fahk nu sik, “Tukakek ac tufokla nu infahlfal uh. Nga fah sramsram nu sum we.”
23 ೨೩ ನಾನು ಎದ್ದು ಬಯಲು ಸೀಮೆಗೆ ಹೊರಟುಹೋದೆನು. ಯೆಹೋವನ ಮಹಿಮೆಯು ಅಲ್ಲಿ ನಿಂತಿತ್ತು. ಅದು ಕೆಬಾರ್ ನದಿಯ ಹತ್ತಿರ ನಾನು ನೋಡಿದ ಮಹಿಮೆಯ ಪ್ರಕಾರವಾಗಿತ್ತು. ಅದನ್ನು ಕಂಡು ಅಡ್ಡಬಿದ್ದೆನು.
Ouinge nga som nu infahlfal uh, ac nga liye wolana lun LEUM GOD oana ke nga tuh liye sisken Infacl Chebar. Na nga faksufi nu infohk uh.
24 ೨೪ ದೇವರಾತ್ಮವು ನನ್ನೊಳಗೆ ಪ್ರವೇಶಿಸಿ, ನಾನು ಎದ್ದು ನಿಂತುಕೊಳ್ಳುವಂತೆ ಮಾಡಿದ ಮೇಲೆ ಆತನು ನನಗೆ ಹೀಗೆ ಹೇಳಿದನು, “ನೀನು ಹೋಗಿ ನಿನ್ನ ಮನೆಯೊಳಗೆ ಅಡಗಿಕೋ.
Ngun lun God ilyak nu in nga ac tulokinyuyak. Ac LEUM GOD El fahk nu sik, “Fahla, utyak nu in lohm sum an, ac kaliya.
25 ೨೫ ನರಪುತ್ರನೇ, ಇಗೋ, ನಿನ್ನ ಸ್ವಜನರು ನಿನ್ನನ್ನು ಬಂಧಿಸಿ ಕಟ್ಟುವರು, ನೀನು ಹೊರಗೆ ಸಂಚರಿಸಲು ಆಗುವುದಿಲ್ಲ.
Mwet sukwil, kom ac fah kapriyuki ke sucl, ac kom ac tia ku in illa nu in wulil uh.
26 ೨೬ ಇದಲ್ಲದೆ ನಿನ್ನ ನಾಲಿಗೆಯು ಸೇದಿ ಹೋಗಿ ನೀನು ಮೂಕನಾಗಿರುವಂತೆ ಮಾಡುವೆನು; ನೀನು ಅವರನ್ನು ಖಂಡಿಸಲಾರೆ; ಅವರು ತಿರುಗಿ ಬೀಳುವ ಮನೆತನದವರಾಗಿದ್ದಾರೆ.
Nga fah oru tuh loum in ulla, kom in tia ku in fahk kas in sensenkakin nu sin mwet alein inge.
27 ೨೭ ನಾನು ನಿನ್ನೊಡನೆ ಮತ್ತೆ ಮಾತನಾಡುವಾಗ ನಾನು ನಿನ್ನ ಬಾಯಿಯನ್ನು ಬಿಚ್ಚುವೆನು; ಆಗ ನೀನು ಅವರಿಗೆ, ‘ಕರ್ತನಾದ ಯೆಹೋವನು ಇಂತೆನ್ನುತ್ತಾನೆ’ ಎಂದು ಹೇಳಬೇಕು; ಕೇಳುವವನು ಕೇಳಲಿ, ಕೇಳದವನು ಕೇಳದೇ ಇರಲಿ; ಅವರು ತಿರುಗಿ ಬೀಳುವ ವಂಶದವರೇ.”
Na ke nga ac sifilpa kaskas nu sum ac sifil oru kom in ku in kaskas, kom fah fahkang nu selos ma nga, LEUM GOD Fulatlana, fahk uh. Kutu selos ac porongekom, ac kutu ac pilesrekom, mweyen elos sie mutanfahl alein.”

< ಯೆಹೆಜ್ಕೇಲನು 3 >