< ಯೆಹೆಜ್ಕೇಲನು 30 >
1 ೧ ಯೆಹೋವನು ಇನ್ನೊಂದು ವಾಕ್ಯವನ್ನು ನನಗೆ ದಯಪಾಲಿಸಿದನು,
主の言葉がわたしに臨んだ、
2 ೨ “ನರಪುತ್ರನೇ, ನೀನು ಈ ಪ್ರವಾದನೆಯನ್ನು ಹೇಳು, ‘ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ಅರಚಿಕೊಳ್ಳಿರಿ! ಅಯ್ಯೋ ದುರ್ದಿನವೇ!
「人の子よ、預言して言え、主なる神はこう言われる、嘆け、その日はわざわいだ。
3 ೩ ದಿನವು ಹತ್ತಿರವಾಯಿತು! ಹೌದು, ಯೆಹೋವನ ದಿನವು, ಕಾರ್ಮುಗಿಲಿನ ದಿನವು ಸಮೀಪಿಸಿತು; ಅದು ಜನಾಂಗಗಳಿಗೆ ನ್ಯಾಯತೀರಿಸುವ ಕಾಲವಾಗಿರುವುದು.
その日は近い、主の日は近い。これは雲の日、異邦人の滅びの時である。
4 ೪ ಖಡ್ಗವು ಐಗುಪ್ತದ ಮೇಲೆ ಬೀಳುವುದು; ಅಲ್ಲಿನ ಪ್ರಜೆಗಳು ಹತರಾಗಲು ಕೂಷಿನಲ್ಲಿಯೂ ಸಂಕಟವಾಗುವುದು; ಐಗುಪ್ತದ ಜನಸಮೂಹವು ಒಯ್ಯಲ್ಪಡುವುದು, ಅದರ ಅಸ್ತಿವಾರವು ಮುರಿದು ಹಾಳಾಗುವುದು.
つるぎがエジプトに臨む。エジプトで殺される者の倒れる時、エチオピヤには苦しみがあり、その財宝は奪い去られ、その基は破られる。
5 ೫ “‘ಕೂಷ್ಯರು, ಪೂಟ್ಯರು, ಲೂದ್ಯರು, ಬಗೆಬಗೆಯ ಸಕಲ ವಿದೇಶೀಯರು, ಕೂಬ್ಯರು, ಒಡಂಬಡಿಕೆ ಮಾಡಿಕೊಂಡ ಮಿತ್ರ ರಾಜ್ಯದವರೂ ಐಗುಪ್ತ್ಯರೊಂದಿಗೆ ಖಡ್ಗದಿಂದ ಹತರಾಗುವರು.’”
エチオピヤ、プテ、ルデ、アラビヤ、リビヤおよび同盟国の人々は、彼らと共につるぎに倒れる。
6 ೬ ಯೆಹೋವನು ಇಂತೆನ್ನುತ್ತಾನೆ, “ಐಗುಪ್ತಕ್ಕೆ ಆಧಾರವಾದವರು ಬೀಳುವರು, ಅದರ ಶಕ್ತಿಯ ಅಹಂಕಾರವು ಇಳಿದು ಹೋಗುವುದು; ಅಲ್ಲಿನ ಜನರು ಮಿಗ್ದೋಲಿನಿಂದ ಸೆವೇನೆಯವರೆಗೆ ಖಡ್ಗದಿಂದ ಹತರಾಗುವರು” ಇದು ಕರ್ತನಾದ ಯೆಹೋವನ ನುಡಿ.
主はこう言われる、エジプトを助ける者は倒れ、その誇る力はうせる。ミグドルからスエネまで、人々はつるぎによってそのうちに倒れると主なる神が言われる。
7 ೭ ಹಾಳಾಗಿರುವ ದೇಶಗಳೊಳಗೆ ಆ ದೇಶವೂ ಹಾಳಾಗಿರುವುದು, ಪಾಳುಬಿದ್ದಿರುವ ಪಟ್ಟಣಗಳೊಳಗೆ ಅದರ ಪಟ್ಟಣಗಳೂ ಪಾಳು ಬಿದ್ದಿರುವವು.
それは荒れて、荒れはてた国々のうちにあり、その町々は荒れた町々のうちにある。
8 ೮ “‘ನಾನು ಐಗುಪ್ತಕ್ಕೆ ಬೆಂಕಿ ಹಚ್ಚಿ ಅದರ ಸಹಾಯಕರನ್ನೆಲ್ಲಾ ನಾಶಮಾಡಿದ ಮೇಲೆ ನಾನೇ ಯೆಹೋವನು’ ಎಂದು ಅವರಿಗೆ ಗೊತ್ತಾಗುವುದು.
わたしがエジプトに火を送り、これを助ける者が皆滅びる時、彼らはわたしが主であることを知る。
9 ೯ ‘ಆ ದಿನದಲ್ಲಿ ದೂತರು ನನ್ನ ಸನ್ನಿಧಾನದಿಂದ ಹೊರಟು ಹಡಗುಗಳಲ್ಲಿ ಪ್ರಯಾಣಮಾಡಿ, ನಿಶ್ಚಿಂತರಾದ ಕೂಷ್ಯರನ್ನು ಹೆದರಿಸುವರು; ಐಗುಪ್ತದ ನಾಶದ ದಿನದಲ್ಲಿ ಆದ ಹಾಗೆ ಕೂಷ್ಯರಿಗೂ ಸಂಕಟವು ಉಂಟಾಗುವುದು; ಇಗೋ, ಆ ದಿನ ಬಂತು!’”
その日、早足の使者がわたしから出て、何事も知らぬエチオピヤびとを恐れさせる。そしてかのエジプトの滅びの日に、彼らに苦しみが来る。見よ、これはかならず来る。
10 ೧೦ ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನಾನು ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಕೈಯಿಂದ ಐಗುಪ್ತದ ಅಸಂಖ್ಯಾತ ಪ್ರಜೆಯನ್ನು ಕೊನೆಗಾಣಿಸುವೆನು.
主なる神はこう言われる、わたしはバビロンの王ネブカデレザルの手によってエジプトの富を滅ぼす。
11 ೧೧ ಆ ದೇಶವನ್ನು ನಾಶಪಡಿಸಲಿಕ್ಕೆ ಅವನನ್ನು ಅತಿಭಯಂಕರ ಜನಾಂಗದವರಾದ ಅವನ ಸೈನಿಕರೊಡನೆ ಬರಮಾಡುವೆನು; ಅವರು ಐಗುಪ್ತದ ಮೇಲೆ ಕತ್ತಿ ಹಿರಿದು ದೇಶವನ್ನು ಹತರಾದವರಿಂದ ತುಂಬಿಸುವರು.
彼と彼に従うその民、すなわち国民のうちの最も恐るべき者がきて、その地を滅ぼす。彼らはつるぎを抜いて、エジプトを攻め、殺した者を国に満たす。
12 ೧೨ ನಾನು ನದಿಗಳನ್ನು ಒಣಗಿಸಿ ದೇಶವನ್ನು ದುಷ್ಟರ ಕೈಗೆ ಮಾರಿಬಿಡುವೆನು. ಹೌದು, ದೇಶವನ್ನೂ, ಅದರಲ್ಲಿನ ಸಮಸ್ತವನ್ನೂ ಅನ್ಯರ ಕೈಯಿಂದ ಹಾಳುಮಾಡಿಸುವೆನು. ಯೆಹೋವನಾದ ನಾನೇ ಇದನ್ನು ನುಡಿದಿದ್ದೇನೆ.”
わたしはナイル川をからし、その国を悪しき者の手に売り、異邦人の手によって国とその中のものとを荒す。主なるわたしはこれを言った。
13 ೧೩ ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನಾನು ನೋಫಿನ ವಿಗ್ರಹಗಳನ್ನೆಲ್ಲ ಒಡೆದು ಕೊನೆಗಾಣಿಸುವೆನು; ಐಗುಪ್ತ ದೇಶದಲ್ಲಿ ಇನ್ನು ಯಾವ ಅರಸನೂ ಇರಲಾರನು; ನಾನು ಆ ದೇಶಕ್ಕೆ ಭಯವನ್ನು ಉಂಟುಮಾಡುವೆನು.
主なる神はこう言われる、わたしは偶像をこわし、メンピスで偶像を滅ぼす。エジプトの国には、もはや君たる者がなくなる。わたしはエジプトの国に恐れを与える。
14 ೧೪ ನಾನು ಪತ್ರೋಸನ್ನು ಹಾಳುಮಾಡಿ, ಚೋವನಿಗೆ ಬೆಂಕಿಯಿಡುವೆನು. ನೋಪುರವನ್ನು ದಂಡಿಸಿ,
わたしはパテロスを荒し、ゾアンに火を放ち、テーベにさばきをおこない、
15 ೧೫ “ಐಗುಪ್ತಕ್ಕೆ ರಕ್ಷಣೆಯ ಕೋಟೆಯಾದ ಸೀನಿನ ಮೇಲೆ ನನ್ನ ರೋಷಾಗ್ನಿಯನ್ನು ಸುರಿಸಿ, ನೋಪುರದ ನಿವಾಸಿಗಳನ್ನೆಲ್ಲಾ ಕತ್ತರಿಸಿ ಬಿಡುವೆನು.
わたしの怒りを、エジプトの要害であるペルシゥムに注ぎ、テーベの群衆を断ち、
16 ೧೬ ನಾನು ಐಗುಪ್ತಕ್ಕೆ ಕಿಚ್ಚನ್ನು ಹತ್ತಿಸಲು ಸೀನು ಪ್ರಾಣ ಸಂಕಟಪಡುವುದು; ನೋಪುರವು ಭಂಗಕ್ಕೆ ಈಡಾಗುವುದು; ನೋಫಿನ ಮೇಲೆ ವೈರಿಗಳು ಮಧ್ಯಾಹ್ನದಲ್ಲೇ ಬೀಳುವರು.
エジプトに火を下す。ペルシゥムはいたく苦しみ、テーベは打ち破られ、その城壁は破壊され、
17 ೧೭ “ಓನಿನ ಮತ್ತು ಪೀಬೆಸೆತಿನ ಯುವಕರು ಖಡ್ಗದಿಂದ ಹತರಾಗುವರು; ಅಲ್ಲಿನ ನಿವಾಸಿಗಳು ಸೆರೆಯಾಗಿ ಹೋಗುವರು.
オンとピベセテの若者はつるぎに倒れ、女たちは捕え移される。
18 ೧೮ ಐಗುಪ್ತವು ಹೊರಿಸಿದ ನೊಗಗಳನ್ನು ನಾನು ತಹಪನೇಸಿನಲ್ಲಿ ಮುರಿಯುವಾಗ, ಅಲ್ಲಿ ಹೊತ್ತು ಮೂಡದು. ಅದರ ಶಕ್ತಿಯ ಅಹಂಕಾರವು ಅಡಗಿ ಹೋಗುವುದು, ಕಾರ್ಮುಗಿಲು ಅದನ್ನು ಆವರಿಸುವುದು, ಅದರ ಯುವತಿಯರು ಸೆರೆಗೆ ಒಯ್ಯಲ್ಪಡುವರು.
わたしがエジプトの支配を砕く時、テパネスでは日は暗くなり、その誇る力は絶え、雲はこれをおおい、その娘たちは捕え移される。
19 ೧೯ ಹೀಗೆ ನಾನು ಐಗುಪ್ತ್ಯರಿಗೆ ದಂಡನೆಗಳನ್ನು ವಿಧಿಸಿ ತೀರಿಸುವಾಗ ನಾನೇ ಯೆಹೋವನು” ಎಂದು ಅವರಿಗೆ ಗೊತ್ತಾಗುವುದು.
このようにわたしはエジプトにさばきを行う。そのとき彼らはわたしが主であることを知る」。
20 ೨೦ ಹನ್ನೊಂದನೆಯ ವರ್ಷದ, ಮೊದಲನೆಯ ತಿಂಗಳಿನ ಏಳನೆಯ ದಿನದಲ್ಲಿ ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು,
第十一年の一月七日に主の言葉がわたしに臨んだ、
21 ೨೧ “ನರಪುತ್ರನೇ, ನಾನು ಐಗುಪ್ತದ ಅರಸನಾದ ಫರೋಹನ ಕೈಯನ್ನು ಮುರಿದುಬಿಟ್ಟಿದ್ದೇನೆ; ಇಗೋ, ಅದನ್ನು ಯಾರೂ ಕಟ್ಟಲಿಲ್ಲ, ಔಷಧ ಹಚ್ಚಲಿಲ್ಲ, ಅದು ಖಡ್ಗ ಹಿಡಿಯುವಷ್ಟು ಬಲಗೊಳ್ಳುವಂತೆ ಯಾರೂ ಬಟ್ಟೆ ಸುತ್ತಿ, ಅದನ್ನು ಬಿಗಿಸಲಿಲ್ಲ.”
「人の子よ、わたしはエジプトの王パロの腕を折った。見よ、これは包まれず、いやされず、ほうたいをも施されない。それは強くなって、つるぎを執ることができない。
22 ೨೨ ಆದುದರಿಂದ ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನಾನು ಐಗುಪ್ತದ ಅರಸನಾದ ಫರೋಹನಿಗೆ ವಿರುದ್ಧವಾಗಿ ಅವನ ಕೈಗಳನ್ನು, ಅಂದರೆ ಸರಿಯಾಗಿರುವುದನ್ನೂ, ಮುರಿದದ್ದನ್ನೂ ತೀರಾ ಮುರಿದು ಬಿಟ್ಟು, ಖಡ್ಗವು ಅವನ ಕೈಯೊಳಗಿಂದ ಬೀಳುವಂತೆ ಮಾಡುವೆನು.
それゆえ、主なる神はこう言われる、見よ、わたしはエジプトの王パロを攻め、その強い腕と、折れた腕とを共に折り、その手からつるぎを落させる。
23 ೨೩ “ಐಗುಪ್ತ್ಯರನ್ನು ಜನಾಂಗಗಳಲ್ಲಿ ಚದುರಿಸಿ ದೇಶದೇಶಗಳಿಗೆ ಚದುರಿಸಿ ಬಿಡುವೆನು.
わたしはエジプトびとを、もろもろの国民の中に散らし、国々に散らす。
24 ೨೪ ನಾನು ಬಾಬೆಲಿನ ಅರಸನ ಕೈಗಳನ್ನು ಬಲಪಡಿಸಿ ನನ್ನ ಖಡ್ಗವನ್ನು ಅವನ ಕೈಗೆ ಕೊಟ್ಟು ಫರೋಹನ ಕೈಗಳನ್ನು ಮುರಿಸಲು, ಗಾಯದಿಂದ ಪ್ರಾಣ ಸಂಕಟಪಡುವವನಂತೆ ಫರೋಹನು ಆ ಅರಸನ ಮುಂದೆ ನರಳಾಡುವನು.
わたしはバビロンの王の腕を強くし、わたしのつるぎを、その手に与える。しかしわたしはパロの腕を折るゆえ、彼は深手を負った者のように、彼の前にうめく。
25 ೨೫ ನಾನು ಬಾಬೆಲಿನ ಅರಸನ ಕೈಗಳನ್ನು ಬಲಪಡಿಸುವೆನು; ಫರೋಹನ ಕೈಗಳಾದರೋ ಜೋಲುಬೀಳುವವು; ನಾನು ನನ್ನ ಖಡ್ಗವನ್ನು ಬಾಬೆಲಿನ ಅರಸನಿಗೆ ಕೊಡಲು ಅವನು ಅದನ್ನು ಐಗುಪ್ತ ದೇಶದ ಮೇಲೆ ಎತ್ತುವನು. ಆಗ ನಾನೇ ಯೆಹೋವನು” ಎಂದು ಎಲ್ಲರಿಗೂ ಗೊತ್ತಾಗುವುದು.
わたしがバビロンの王の腕を強くし、パロの腕がたれる時、彼らはわたしが主であることを知る。わたしがわたしのつるぎを、バビロンの王に授け、これをエジプトの国に向かって伸べさせ、
26 ೨೬ “ನಾನು ಐಗುಪ್ತ್ಯರನ್ನು ಜನಾಂಗಗಳಲ್ಲಿ ಚದುರಿಸಿ ದೇಶದೇಶಗಳಿಗೆ ಚದುರಿಸಿ ಬಿಡುವಾಗ ನಾನೇ ಯೆಹೋವನು ಎಂದು ಅವರಿಗೆ ತಿಳಿದು ಬರುವುದು.”
わたしがエジプトびとを、もろもろの国民の中に散らし、国々に散らす時、彼らはわたしが主であることを知る」。