< ಯೆಹೆಜ್ಕೇಲನು 31 >
1 ೧ ಹನ್ನೊಂದನೆಯ ವರ್ಷದ, ಮೂರನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು,
So hende det i det ellevte året, den fyrste dagen i den tridje månaden, at Herrens ord kom til meg; han sagde:
2 ೨ “ನರಪುತ್ರನೇ, ನೀನು ಐಗುಪ್ತದ ಅರಸನಾದ ಫರೋಹನಿಗೂ ಮತ್ತು ಅವನ ಅಸಂಖ್ಯಾತವಾದ ಪ್ರಜೆಗೂ ಹೀಗೆ ನುಡಿ, ನಿನ್ನ ದೊಡ್ಡಸ್ತಿಕೆಯಲ್ಲಿ ನಿನಗೆ ಸರಿಸಮಾನರು ಯಾರು?
Menneskjeson! Seg med Farao, egyptarkongen, og hans ståkande mengd: Kven likjest du på i di storvyrda?
3 ೩ ಆಹಾ, ಅಸ್ಸೀರಿಯವು ಲೆಬನೋನಿನ ಸುಂದರವಾದ ಕೊಂಬೆಗಳುಳ್ಳ ದೇವದಾರು ಆಗಿದೆ; ಅದರ ನೆರಳು ದಟ್ಟವಾಗಿದೆ, ಅದರ ಎತ್ತರವು ಬಹಳ, ಅದರ ತುದಿಯು ದಟ್ಟವಾದ ಕೊಂಬೆಗಳ ಮಧ್ಯದಲ್ಲಿತ್ತು.
Sjå, Assur var eit cedertre på Libanon med fagre greiner, ein skuggerik skog og høg på vokster, millom skyerne var hans kruna.
4 ೪ ಅದನ್ನು ಜಲಪ್ರವಾಹಗಳು ಬೆಳೆಯಿಸಿದವು, ಮಹಾನದಿಯು ವೃದ್ಧಿಗೊಳಿಸಿತು, ನದಿಗಳು ಅಲ್ಲಿನ ಉದ್ಯಾನವನ್ನು ಸುತ್ತಿಕೊಂಡಿದ್ದವು, ಭೂಮಿಯ ಎಲ್ಲಾ ಮರಗಳಿಗೂ ನದಿಯು ತನ್ನ ಕಾಲುವೆಗಳನ್ನು ನೀಡಿತ್ತು.
Vatnet gjorde honom stor, vatsdjupet gjorde honom høg. Med åerne sine gjekk det kringum hans plantehage og sende vatsveiterne sine burtåt alle trei på marki.
5 ೫ ಆದುದರಿಂದ ಆ ವೃಕ್ಷವು ಅಡವಿಯ ಎಲ್ಲಾ ಮರಗಳಿಗಿಂತಲೂ ಎತ್ತರವಾಗಿತ್ತು; ಅದರ ಕೊಂಬೆಗಳು ಹಬ್ಬಿದ್ದುದರಿಂದ ಮತ್ತು ಹೆಚ್ಚಿನ ನೀರಾವರಿಯಿದ್ದ ಕಾರಣ ಅದರ ಕೊಂಬೆಗಳು ಅಧಿಕವಾದವು. ಕೊಂಬೆಗಳು ಉದ್ದವಾಗಿ ಚಾಚಿಕೊಂಡಿದ್ದವು.
Difor vart han høgre på vokster enn alle trei på marki. Og mange var hans greiner og lange hans kvister, av all den vatningi, når han rette deim ut i veret.
6 ೬ ಅದರ ಕೊಂಬೆಗಳಲ್ಲಿ ಆಕಾಶದ ಎಲ್ಲಾ ಪಕ್ಷಿಗಳು ತಮ್ಮ ಗೂಡುಗಳನ್ನು ಮಾಡಿದವು; ಸಮಸ್ತ ಭೂಜಂತುಗಳು ಅದರ ಕೊಂಬೆಗಳ ಕೆಳಗೆ ಇದ್ದುಕೊಂಡು ಮರಿಗಳಿಗೆ ಜನ್ಮ ಕೊಟ್ಟವು. ಮಹಾಜನಾಂಗಗಳೆಲ್ಲಾ ಅದರ ನೆರಳಿನಲ್ಲಿ ವಾಸಮಾಡಿದವು.
På kvistarne hans laga dei seg reir, alle himmelens fuglar, under greinerne hans fødde alle dyr på marki sine ungar, og hans skugge gav livd åt alle dei mange folkeslagi som budde der.
7 ೭ ಹೀಗೆ ಅದು ತನ್ನ ದೊಡ್ಡಸ್ತಿಕೆಯಲ್ಲಿ ತನ್ನ ನೀಳವಾದ ಕೊಂಬೆಗಳಿಂದ ಕಂಗೊಳಿಸುತ್ತಿತ್ತು. ಏಕೆಂದರೆ ಅದರ ಬೇರು ಸಾಕಷ್ಟು ನೀರಿನ ಆಸರೆ ಪಡೆದಿತ್ತು.
Og han var fager i sin vyrdelege storleik med sine lange greiner, for innmed roti hans var det nøgdi av vatn.
8 ೮ ದೇವರ ಉದ್ಯಾನವನದಲ್ಲಿನ ದೇವದಾರುಗಳು ಅದನ್ನು ಮರೆಮಾಡಲಿಲ್ಲ; ತುರಾಯಿ ಮರಗಳು ಅದರ ಕೊಂಬೆಗಳಿಗೆ ಸಮವಾಗಲಿಲ್ಲ; ಆಲದ ಮರಗಳು ಅದರ ಕೊಂಬೆಗಳಷ್ಟು ದಪ್ಪವಾಗಿರಲಿಲ್ಲ; ದೇವರ ವನದಲ್ಲಿನ ಯಾವ ಮರವೂ ಅದರಷ್ಟು ರಮಣೀಯವಾಗಿರಲಿಲ್ಲ.
Inkje var cedertre i Guds hage hans jamlike; cypressor kunde ikkje liknast med hans kvister, og løntre var ikkje som hans greiner; det beid ikkje tre i Guds hage jamfagert med honom.
9 ೯ ನಾನು ಅದನ್ನು ಅದರ ಕೊಂಬೆಗಳ ಸಮೂಹದಿಂದ ಸುಂದರಗೊಳಿಸಿದೆನು; ದೇವರ ಉದ್ಯಾನವಾದ ಏದೆನಿನ ಸಕಲ ವೃಕ್ಷಗಳೂ ಅದರ ಮೇಲೆ ಅಸೂಯೆಪಡುತ್ತಿದ್ದವು.”
Eg hadde prydt honom med greiner i mengd, og dei ovunda honom alle Eden-trei som var i Guds hage.
10 ೧೦ ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಆ ವೃಕ್ಷವು ಬಹಳ ಎತ್ತರವಾಗಿ ಬೆಳೆದು, ತನ್ನ ತುದಿ ಮೋಡಗಳನ್ನು ಮುಟ್ಟುವಷ್ಟು ನೀಳವಾದ ವಿಷಯವಾಗಿ ಉಬ್ಬಿಕೊಂಡಿತ್ತು.
Difor, so segjer Herren, Herren: Sidan han er vorten so høg på vokster og hev tøygt kruna si upp imillom skyerne, og hjarta hans ovmodar seg av denne store høgdi,
11 ೧೧ ಆದುದರಿಂದ ನಾನು ಅದನ್ನು ಜನಾಂಗಗಳಲ್ಲಿ ಮಹಾ ಬಲಿಷ್ಠನಾದವನ ಕೈಗೆ ಕೊಟ್ಟುಬಿಟ್ಟಿದ್ದೇನೆ. ಅವನು ಅದರ ಕೆಟ್ಟತನಕ್ಕೆ ತಕ್ಕಂತೆ ಅದನ್ನು ದಂಡಿಸುತ್ತಾನೆ. ನಾನು ಅದರ ದುಷ್ಟತ್ವದ ನಿಮಿತ್ತ ತಳ್ಳಿಹಾಕಿದ್ದೇನೆ.
so gjev eg honom i henderne på ein hovding yver folki; med honom fær han å gjera; det er for gudløysa hans eg hev drive honom ut.
12 ೧೨ “ಜನಾಂಗಗಳಲ್ಲಿ ಭಯಂಕರವಾದ ಅನ್ಯರು ಅದನ್ನು ಕಡಿದುಹಾಕಿ ಬಿಟ್ಟಿದ್ದಾರೆ. ಅದರ ರೆಂಬೆಗಳು ಗುಡ್ಡಗಳಲ್ಲಿಯೂ, ಎಲ್ಲಾ ಹಳ್ಳಕೊಳ್ಳಗಳಲ್ಲಿಯೂ ಬಿದ್ದಿವೆ; ಅದರ ಕೊಂಬೆಗಳು ದೇಶದ ಎಲ್ಲಾ ಹಳ್ಳಗಳ ಹತ್ತಿರ ಮುರಿದುಹಾಕಲ್ಪಟ್ಟಿವೆ; ಲೋಕದ ಸಮಸ್ತ ಜನಾಂಗಗಳು ಅದರ ನೆರಳಿನಿಂದ ದೂರ ಸರಿದು ಅದನ್ನು ಬಿಟ್ಟುಬಿಟ್ಟಿದೆ.
Og framande, valdsmennerne millom folki, hev hogge honom ned og late honom liggja. På fjelli og i kvar ein dal fall hans kvister, og greinerne hans ligg sundbrotne nedi kvart eit gil i landet. Og alle folk på jord er stigne ned utor skuggen hans som gav deim livd, og hev late honom liggja.
13 ೧೩ ಅದರ ಬುಡದ ಮೇಲೆ ಎಲ್ಲಾ ಆಕಾಶದ ಪಕ್ಷಿಗಳು ಕುಳಿತುಕೊಳ್ಳುವವು; ಅದರ ಕೊಂಬೆಗಳಲ್ಲಿ ಸಮಸ್ತ ಭೂಜಂತುಗಳು ಇರುವವು.
På den falne stomnen hans held alle himmelens fuglar til, og yver greinerne hans fer kvart dyr i skog
14 ೧೪ “ನೀರಾವರಿಯ ಯಾವ ಮರಗಳೂ ತಮ್ಮ ಎತ್ತರವನ್ನು ಹೆಚ್ಚಿಸಿಕೊಂಡು, ತಮ್ಮ ತುದಿಯನ್ನು ಮೋಡಗಳಿಗೆ ತಗುಲಿಸದೆ, ನೀರನ್ನು ಹೀರುತ್ತಲೇ ಇರುವ ದೊಡ್ಡದೊಡ್ಡ ಮರಗಳು ಎತ್ತರವಾಗಿ ಚಾಚಿಕೊಳ್ಳದೆ ಇರಲೆಂದು ಹೀಗಾಯಿತು. ಅವೆಲ್ಲಾ ಮರಣದ ಪಾಲಾಗುವುವು, ಅಧೋಲೋಕವೇ ಅವುಗಳಿಗೆ ಗತಿಯಾಗುವುದು; ಪಾತಾಳಕ್ಕೆ ಇಳಿದು ಹೋದ ನರಜನ್ಮದವರೊಂದಿಗೆ ಒಂದೇ ಗುಂಪಾಗಿ ಸೇರುವವು.”
- for at ikkje noko velvatna tre skal ovmoda seg av sin vokster og tøygja kruna si upp imillom skyerne, og dei velduge av deim, dei som syg vatn i mengd, ikkje skal standa der høgreiste. For alle er dei gjevne dauden i vald, so dei lyt fara ned til nedheimen, midt imillom mannsborni, til deim som er stigne ned i gravi.
15 ೧೫ ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಆ ವೃಕ್ಷವು ಪಾತಾಳಕ್ಕೆ ಇಳಿದು ಹೋದ ದಿನದಲ್ಲಿ ನಾನು ದುಃಖವನ್ನು ಹುಟ್ಟಿಸುವೆನು. ಅದರ ವಿಯೋಗಕ್ಕಾಗಿ ನಾನು ಮಹಾ ನದಿಯನ್ನು ಮರೆಮಾಡಿ, ನದಿಗಳನ್ನು ತಡೆದುಬಿಟ್ಟೆನು, ಜಲಪ್ರವಾಹವು ನಿಂತುಹೋಯಿತು; ಅದಕ್ಕಾಗಿ ಲೆಬನೋನು ಗೋಳಿಡುವಂತೆ ಮಾಡಿದೆನು, ಭೂಮಿಯ ಸಕಲ ವೃಕ್ಷಗಳು ಆ ದುಃಖಕ್ಕೆ ಕುಗ್ಗಿಹೋದವು. (Sheol )
So segjer Herren, Herren: Den dagen han for ned til helheimen, let eg syrgja på honom; vatsdjupet breidde eg yver for hans skuld, og åerne derifrå stemde eg, og dei store vatn laut stana. Og eg klædde Libanon i svart for hans skuld, og kvart tre på marki ormegtast for hans skuld. (Sheol )
16 ೧೬ ನಾನು ಅದನ್ನು ಪ್ರೇತಗಳ ಜೊತೆಗೆ ಸೇರಿಸಬೇಕೆಂದು ಪಾತಾಳಕ್ಕೆ ತಳ್ಳಿಬಿಟ್ಟಾಗ, ಅದು ಬಿದ್ದ ಶಬ್ದಕ್ಕೆ ಸಕಲ ಜನಾಂಗಗಳು ನಡುಗಿದವು ಮತ್ತು ಅಧೋಲೋಕದ ಪಾಲಾದ ಏದೆನಿನ ಎಲ್ಲಾ ಮರಗಳು, ಲೆಬನೋನಿನ ಉತ್ತಮೋತ್ತಮವಾದ ವೃಕ್ಷಗಳು, ಅಂತು ನೀರಾವರಿಯ ಸಕಲ ವನಸ್ಪತಿಗಳೂ ಅಲ್ಲಿ ಸಂತೈಸಿಕೊಂಡವು. (Sheol )
Med dunen av hans fall fekk eg folkeslag til å skjelva, då eg støypte honom ned i helheimen med deim som fer ned i gravi. Då huggast dei i nedheimen, alle Eden-trei, dei likaste og beste på Libanon, alle som drikk vatn. (Sheol )
17 ೧೭ ಇದಲ್ಲದೆ ಅದಕ್ಕೆ ತೋಳಿನ ಬಲವಾಗಿ ಜನಾಂಗಗಳ ಮಧ್ಯದಲ್ಲಿ ಅದರ ನೆರಳನ್ನು ಆಶ್ರಯಿಸಿದವರು ಅದರೊಂದಿಗೆ ಪಾತಾಳಕ್ಕೆ ಇಳಿದು, ಖಡ್ಗದಿಂದ ಹತರಾದವರ ಜೊತೆಗೆ ಸೇರಿದರು. (Sheol )
Dei og for ned i helheimen til deim som var slegne i hel med sverd. For dei hadde vore hans arm medan dei sat i livd i hans skugge midt imillom folki. (Sheol )
18 ೧೮ “ಇಂಥಾ ವೈಭವದಿಂದಲೂ, ಮಹಿಮೆಯಿಂದಲೂ ಕೂಡಿದ ನೀನು ಏದೆನಿನ ವೃಕ್ಷಗಳಲ್ಲಿ ಯಾವುದಕ್ಕಿಂತ ಕಡಿಮೆಯಾಗಿರುವೆ? ಆದರೂ ನೀನು ಏದೆನಿನ ವೃಕ್ಷಗಳೊಂದಿಗೆ ಅಧೋಲೋಕಕ್ಕೆ ತಳ್ಳಲ್ಪಟ್ಟು, ಸುನ್ನತಿಹೀನರ ನಡುವೆ ಖಡ್ಗದಿಂದ ಹತರಾದವರ ಸಂಗಡ ಮಲಗುವಿ. ಫರೋಹನೂ, ಅವನ ಎಲ್ಲಾ ಪ್ರಜೆಗಳೂ ಇದೇ ಗತಿಯನ್ನು ಹೊಂದುವರು ಎಂಬುದು ಕರ್ತನಾದ ಯೆಹೋವನ ನುಡಿ.”
Kven likjest du soleis på i herlegdom og storvyrda ibland Eden-trei? - So skal du då verta støypt med Eden-trei ned i nedheimen; midt imillom u-umskorne skal du liggja med deim som er slegne i hel med sverd. Dette er Farao og heile hans ståkande mengd, segjer Herren, Herren.