< ಯೆಹೆಜ್ಕೇಲನು 31 >

1 ಹನ್ನೊಂದನೆಯ ವರ್ಷದ, ಮೂರನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು,
फिर ग्यारहवें बरस के तीसरे महीने की पहली तारीख़ को, ख़ुदावन्द का कलाम मुझ पर नाज़िल हुआ:
2 “ನರಪುತ್ರನೇ, ನೀನು ಐಗುಪ್ತದ ಅರಸನಾದ ಫರೋಹನಿಗೂ ಮತ್ತು ಅವನ ಅಸಂಖ್ಯಾತವಾದ ಪ್ರಜೆಗೂ ಹೀಗೆ ನುಡಿ, ನಿನ್ನ ದೊಡ್ಡಸ್ತಿಕೆಯಲ್ಲಿ ನಿನಗೆ ಸರಿಸಮಾನರು ಯಾರು?
कि 'ऐ आदमज़ाद शाह — ए — मिस्र फ़िर'औन और उसके लोगों से कह, तुम अपनी बुजु़र्गी में किसकी तरह हो?
3 ಆಹಾ, ಅಸ್ಸೀರಿಯವು ಲೆಬನೋನಿನ ಸುಂದರವಾದ ಕೊಂಬೆಗಳುಳ್ಳ ದೇವದಾರು ಆಗಿದೆ; ಅದರ ನೆರಳು ದಟ್ಟವಾಗಿದೆ, ಅದರ ಎತ್ತರವು ಬಹಳ, ಅದರ ತುದಿಯು ದಟ್ಟವಾದ ಕೊಂಬೆಗಳ ಮಧ್ಯದಲ್ಲಿತ್ತು.
देख असूर लुबनान का बुलन्द देवदार था, जिसकी डालियाँ ख़ूबसूरत थीं, और पत्तियों की कसरत से वह ख़ूब सायादार था और उसका क़द बुलन्द था, और उसकी चोटी घनी शाख़ों के बीच थी।
4 ಅದನ್ನು ಜಲಪ್ರವಾಹಗಳು ಬೆಳೆಯಿಸಿದವು, ಮಹಾನದಿಯು ವೃದ್ಧಿಗೊಳಿಸಿತು, ನದಿಗಳು ಅಲ್ಲಿನ ಉದ್ಯಾನವನ್ನು ಸುತ್ತಿಕೊಂಡಿದ್ದವು, ಭೂಮಿಯ ಎಲ್ಲಾ ಮರಗಳಿಗೂ ನದಿಯು ತನ್ನ ಕಾಲುವೆಗಳನ್ನು ನೀಡಿತ್ತು.
पानी ने उसकी परवरिश की, गहराव ने उसे बढ़ाया, उसकी नहरें चारों तरफ़ जारी थीं, और उसने अपनी नालियों को मैदान के सब दरख़्तों तक पहुँचाया।
5 ಆದುದರಿಂದ ಆ ವೃಕ್ಷವು ಅಡವಿಯ ಎಲ್ಲಾ ಮರಗಳಿಗಿಂತಲೂ ಎತ್ತರವಾಗಿತ್ತು; ಅದರ ಕೊಂಬೆಗಳು ಹಬ್ಬಿದ್ದುದರಿಂದ ಮತ್ತು ಹೆಚ್ಚಿನ ನೀರಾವರಿಯಿದ್ದ ಕಾರಣ ಅದರ ಕೊಂಬೆಗಳು ಅಧಿಕವಾದವು. ಕೊಂಬೆಗಳು ಉದ್ದವಾಗಿ ಚಾಚಿಕೊಂಡಿದ್ದವು.
इसलिए पानी की कसरत से उसका क़द मैदान के सब दरख़्तों से बुलन्द हुआ, और जब वह लहलहाने लगा, तो उसकी शाख़ें फ़िरावान और उसकी डालियाँ दराज़ हुई।
6 ಅದರ ಕೊಂಬೆಗಳಲ್ಲಿ ಆಕಾಶದ ಎಲ್ಲಾ ಪಕ್ಷಿಗಳು ತಮ್ಮ ಗೂಡುಗಳನ್ನು ಮಾಡಿದವು; ಸಮಸ್ತ ಭೂಜಂತುಗಳು ಅದರ ಕೊಂಬೆಗಳ ಕೆಳಗೆ ಇದ್ದುಕೊಂಡು ಮರಿಗಳಿಗೆ ಜನ್ಮ ಕೊಟ್ಟವು. ಮಹಾಜನಾಂಗಗಳೆಲ್ಲಾ ಅದರ ನೆರಳಿನಲ್ಲಿ ವಾಸಮಾಡಿದವು.
हवा के सब परिन्दे उसकी शाख़ों पर अपने घोंसले बनाते थे, और उसकी डालियों के नीचे सब दश्ती हैवान बच्चे देते थे, और सब बड़ी बड़ी क़ौमें उसके साये में बसती थीं।
7 ಹೀಗೆ ಅದು ತನ್ನ ದೊಡ್ಡಸ್ತಿಕೆಯಲ್ಲಿ ತನ್ನ ನೀಳವಾದ ಕೊಂಬೆಗಳಿಂದ ಕಂಗೊಳಿಸುತ್ತಿತ್ತು. ಏಕೆಂದರೆ ಅದರ ಬೇರು ಸಾಕಷ್ಟು ನೀರಿನ ಆಸರೆ ಪಡೆದಿತ್ತು.
यूँ वह अपनी बुजु़र्गी में अपनी डलियों की दराज़ी की वजह से ख़ुशनुमा था, क्यूँकि उसकी जड़ों के पास पानी की कसरत थी।
8 ದೇವರ ಉದ್ಯಾನವನದಲ್ಲಿನ ದೇವದಾರುಗಳು ಅದನ್ನು ಮರೆಮಾಡಲಿಲ್ಲ; ತುರಾಯಿ ಮರಗಳು ಅದರ ಕೊಂಬೆಗಳಿಗೆ ಸಮವಾಗಲಿಲ್ಲ; ಆಲದ ಮರಗಳು ಅದರ ಕೊಂಬೆಗಳಷ್ಟು ದಪ್ಪವಾಗಿರಲಿಲ್ಲ; ದೇವರ ವನದಲ್ಲಿನ ಯಾವ ಮರವೂ ಅದರಷ್ಟು ರಮಣೀಯವಾಗಿರಲಿಲ್ಲ.
ख़ुदा के बाग़ के देवदार उसे छिपा न सके, सरो उसकी शाख़ों और चिनार उसकी डालियों के बराबर न थे और ख़ुदा के बाग़ का कोई दरख़्त ख़ूबसूरती में उसकी तरह न था।
9 ನಾನು ಅದನ್ನು ಅದರ ಕೊಂಬೆಗಳ ಸಮೂಹದಿಂದ ಸುಂದರಗೊಳಿಸಿದೆನು; ದೇವರ ಉದ್ಯಾನವಾದ ಏದೆನಿನ ಸಕಲ ವೃಕ್ಷಗಳೂ ಅದರ ಮೇಲೆ ಅಸೂಯೆಪಡುತ್ತಿದ್ದವು.”
मैंने उसकी डालियों की फ़िरावानी से उसे हुस्न बख़्शा, यहाँ तक कि अदन के सब दरख़्तों को जो ख़ुदा के बाग़ में थे उस पर रश्क आता था।
10 ೧೦ ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಆ ವೃಕ್ಷವು ಬಹಳ ಎತ್ತರವಾಗಿ ಬೆಳೆದು, ತನ್ನ ತುದಿ ಮೋಡಗಳನ್ನು ಮುಟ್ಟುವಷ್ಟು ನೀಳವಾದ ವಿಷಯವಾಗಿ ಉಬ್ಬಿಕೊಂಡಿತ್ತು.
इसलिए ख़ुदावन्द ख़ुदा यूँ फ़रमाता है: कि चूँकि उसने आपको बुलन्द और अपनी चोटी को घनी शाख़ों के बीच ऊँचा किया, और उसके दिल में उसकी बूलन्दी पर गु़रूर समाया।
11 ೧೧ ಆದುದರಿಂದ ನಾನು ಅದನ್ನು ಜನಾಂಗಗಳಲ್ಲಿ ಮಹಾ ಬಲಿಷ್ಠನಾದವನ ಕೈಗೆ ಕೊಟ್ಟುಬಿಟ್ಟಿದ್ದೇನೆ. ಅವನು ಅದರ ಕೆಟ್ಟತನಕ್ಕೆ ತಕ್ಕಂತೆ ಅದನ್ನು ದಂಡಿಸುತ್ತಾನೆ. ನಾನು ಅದರ ದುಷ್ಟತ್ವದ ನಿಮಿತ್ತ ತಳ್ಳಿಹಾಕಿದ್ದೇನೆ.
इसलिए मैं उसको क़ौमों में से एक उहदे दार के हवाले कर दूँगा, यक़ीनन वह उसका फ़ैसला करेगा, मैंने उसे उसकी शरारत की वजह से निकाल दिया।
12 ೧೨ “ಜನಾಂಗಗಳಲ್ಲಿ ಭಯಂಕರವಾದ ಅನ್ಯರು ಅದನ್ನು ಕಡಿದುಹಾಕಿ ಬಿಟ್ಟಿದ್ದಾರೆ. ಅದರ ರೆಂಬೆಗಳು ಗುಡ್ಡಗಳಲ್ಲಿಯೂ, ಎಲ್ಲಾ ಹಳ್ಳಕೊಳ್ಳಗಳಲ್ಲಿಯೂ ಬಿದ್ದಿವೆ; ಅದರ ಕೊಂಬೆಗಳು ದೇಶದ ಎಲ್ಲಾ ಹಳ್ಳಗಳ ಹತ್ತಿರ ಮುರಿದುಹಾಕಲ್ಪಟ್ಟಿವೆ; ಲೋಕದ ಸಮಸ್ತ ಜನಾಂಗಗಳು ಅದರ ನೆರಳಿನಿಂದ ದೂರ ಸರಿದು ಅದನ್ನು ಬಿಟ್ಟುಬಿಟ್ಟಿದೆ.
और अजनबी लोग जो क़ौमों में से हैबतनाक हैं, उसे काट डालेंगे और फेंक देंगे पहाड़ों और सब वादियों पर उसकी शाख़ें गिर पड़ेगी, और ज़मीन की सब नहरों के आस — पास उसकी डालियाँ तोड़ी जाएँगी, और इस ज़मीन के सब लोग उसके साये से निकल जाएँगे और उसे छोड़ देंगे।
13 ೧೩ ಅದರ ಬುಡದ ಮೇಲೆ ಎಲ್ಲಾ ಆಕಾಶದ ಪಕ್ಷಿಗಳು ಕುಳಿತುಕೊಳ್ಳುವವು; ಅದರ ಕೊಂಬೆಗಳಲ್ಲಿ ಸಮಸ್ತ ಭೂಜಂತುಗಳು ಇರುವವು.
हवा के सब परिन्दे उसके टूटे तने में बसेंगे, और तमाम दश्ती जानवर उसकी शाख़ों पर होंगे।
14 ೧೪ “ನೀರಾವರಿಯ ಯಾವ ಮರಗಳೂ ತಮ್ಮ ಎತ್ತರವನ್ನು ಹೆಚ್ಚಿಸಿಕೊಂಡು, ತಮ್ಮ ತುದಿಯನ್ನು ಮೋಡಗಳಿಗೆ ತಗುಲಿಸದೆ, ನೀರನ್ನು ಹೀರುತ್ತಲೇ ಇರುವ ದೊಡ್ಡದೊಡ್ಡ ಮರಗಳು ಎತ್ತರವಾಗಿ ಚಾಚಿಕೊಳ್ಳದೆ ಇರಲೆಂದು ಹೀಗಾಯಿತು. ಅವೆಲ್ಲಾ ಮರಣದ ಪಾಲಾಗುವುವು, ಅಧೋಲೋಕವೇ ಅವುಗಳಿಗೆ ಗತಿಯಾಗುವುದು; ಪಾತಾಳಕ್ಕೆ ಇಳಿದು ಹೋದ ನರಜನ್ಮದವರೊಂದಿಗೆ ಒಂದೇ ಗುಂಪಾಗಿ ಸೇರುವವು.”
ताकि लब — ए — आब के सब बलूतों के दरख़्तों में से कोई अपनी बुलन्दी पर मग़रूर न हो, और अपनी चोटी घनी शाख़ों के बीच ऊँची न करे, और उनमें से बड़े बड़े और पानी जज़्ब करने वाले सीधे खड़े न हों, क्यूँकि वह सबके सब मौत के हवाले किए जाएँगे, या'नी ज़मीन के तह में बनी आदम के बीच जो पाताल में उतरते हैं।
15 ೧೫ ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಆ ವೃಕ್ಷವು ಪಾತಾಳಕ್ಕೆ ಇಳಿದು ಹೋದ ದಿನದಲ್ಲಿ ನಾನು ದುಃಖವನ್ನು ಹುಟ್ಟಿಸುವೆನು. ಅದರ ವಿಯೋಗಕ್ಕಾಗಿ ನಾನು ಮಹಾ ನದಿಯನ್ನು ಮರೆಮಾಡಿ, ನದಿಗಳನ್ನು ತಡೆದುಬಿಟ್ಟೆನು, ಜಲಪ್ರವಾಹವು ನಿಂತುಹೋಯಿತು; ಅದಕ್ಕಾಗಿ ಲೆಬನೋನು ಗೋಳಿಡುವಂತೆ ಮಾಡಿದೆನು, ಭೂಮಿಯ ಸಕಲ ವೃಕ್ಷಗಳು ಆ ದುಃಖಕ್ಕೆ ಕುಗ್ಗಿಹೋದವು. (Sheol h7585)
ख़ुदावन्द ख़ुदा यूँ फ़रमाता है: कि जिस रोज़ वह पाताल में उतरे मैं मातम कराऊँगा, मैं उसकी वजह से गहराव को छिपा दूँगा और उसकी नहरों को रोक दूँगा और बड़े सैलाब थम जाएँगे; हाँ, मैं लुबनान को उसके लिए सियाह पोश कराऊँगा, और उसके लिए मैदान के सब दरख़्त ग़शी में आएँगे। (Sheol h7585)
16 ೧೬ ನಾನು ಅದನ್ನು ಪ್ರೇತಗಳ ಜೊತೆಗೆ ಸೇರಿಸಬೇಕೆಂದು ಪಾತಾಳಕ್ಕೆ ತಳ್ಳಿಬಿಟ್ಟಾಗ, ಅದು ಬಿದ್ದ ಶಬ್ದಕ್ಕೆ ಸಕಲ ಜನಾಂಗಗಳು ನಡುಗಿದವು ಮತ್ತು ಅಧೋಲೋಕದ ಪಾಲಾದ ಏದೆನಿನ ಎಲ್ಲಾ ಮರಗಳು, ಲೆಬನೋನಿನ ಉತ್ತಮೋತ್ತಮವಾದ ವೃಕ್ಷಗಳು, ಅಂತು ನೀರಾವರಿಯ ಸಕಲ ವನಸ್ಪತಿಗಳೂ ಅಲ್ಲಿ ಸಂತೈಸಿಕೊಂಡವು. (Sheol h7585)
जिस वक़्त मैं उसे उन सब के साथ जो गढ़े में गिरते हैं, पाताल में डालूँगा, तो उसके गिरने के शोर से तमाम क़ौम लरज़ाँ होंगी; और अदन के सब दरख़्त, लुबनान के चीदा और नफ़ीस, वह सब जो पानी जज़्ब करते हैं ज़मीन के तह में तसल्ली पाएँगे। (Sheol h7585)
17 ೧೭ ಇದಲ್ಲದೆ ಅದಕ್ಕೆ ತೋಳಿನ ಬಲವಾಗಿ ಜನಾಂಗಗಳ ಮಧ್ಯದಲ್ಲಿ ಅದರ ನೆರಳನ್ನು ಆಶ್ರಯಿಸಿದವರು ಅದರೊಂದಿಗೆ ಪಾತಾಳಕ್ಕೆ ಇಳಿದು, ಖಡ್ಗದಿಂದ ಹತರಾದವರ ಜೊತೆಗೆ ಸೇರಿದರು. (Sheol h7585)
वह भी उसके साथ उन तक, जो तलवार से मारे गए, पाताल में उतर जाएँगे और वह भी जो उसके बाज़ू थे, और क़ौमों के बीच उसके साये में बसते थे वहीं होंगे। (Sheol h7585)
18 ೧೮ “ಇಂಥಾ ವೈಭವದಿಂದಲೂ, ಮಹಿಮೆಯಿಂದಲೂ ಕೂಡಿದ ನೀನು ಏದೆನಿನ ವೃಕ್ಷಗಳಲ್ಲಿ ಯಾವುದಕ್ಕಿಂತ ಕಡಿಮೆಯಾಗಿರುವೆ? ಆದರೂ ನೀನು ಏದೆನಿನ ವೃಕ್ಷಗಳೊಂದಿಗೆ ಅಧೋಲೋಕಕ್ಕೆ ತಳ್ಳಲ್ಪಟ್ಟು, ಸುನ್ನತಿಹೀನರ ನಡುವೆ ಖಡ್ಗದಿಂದ ಹತರಾದವರ ಸಂಗಡ ಮಲಗುವಿ. ಫರೋಹನೂ, ಅವನ ಎಲ್ಲಾ ಪ್ರಜೆಗಳೂ ಇದೇ ಗತಿಯನ್ನು ಹೊಂದುವರು ಎಂಬುದು ಕರ್ತನಾದ ಯೆಹೋವನ ನುಡಿ.”
“तू शान — ओ — शौकत में अदन के दरख़्तों में से किसकी तरह है? लेकिन तू अदन के दरख़्तों के साथ ज़मीन के तह में डाला जाएगा, तू उनके साथ जो तलवार से क़त्ल हुए, नामख़्तूनों के बीच पड़ा रहेगा; यही फ़िर'औन और उसके सब लोग हैं, ख़ुदावन्द ख़ुदा फ़रमाता है।”

< ಯೆಹೆಜ್ಕೇಲನು 31 >