< ಯೆಹೆಜ್ಕೇಲನು 33 >
1 ೧ ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು,
Og Herrens ord kom til mig, og det lød så:
2 ೨ “ನರಪುತ್ರನೇ, ನಿನ್ನ ಜನರನ್ನು ಸಂಬೋಧಿಸಿ, ಅವರಿಗೆ ಹೀಗೆ ನುಡಿ, ‘ನಾನು ದೇಶದ ಮೇಲೆ ಖಡ್ಗವನ್ನು ಬೀಳಮಾಡುವಾಗ, ಆ ದೇಶದವರು ತಮ್ಮಲ್ಲಿ ಒಬ್ಬ ಮನುಷ್ಯನನ್ನು ಆರಿಸಿ, ತಮಗೆ ಕಾವಲುಗಾರನನ್ನಾಗಿ ನೇಮಿಸಿಕೊಳ್ಳಲಿ.
Menneskesønn! Tal til ditt folks barn og si til dem: Når jeg lar sverdet komme over et land, og landets folk tar en mann av sin midte og setter ham til vekter for sig,
3 ೩ ಅವರು ದೇಶದ ಮೇಲೆ ಬೀಳುವ ಖಡ್ಗವನ್ನು ನೋಡಿದ ಕೂಡಲೆ, ಕೊಂಬನ್ನು ಊದಿ ಸ್ವಜನರನ್ನು ಎಚ್ಚರಿಸಲಿ.
og han ser sverdet komme over landet og støter i basunen og advarer folket,
4 ೪ ಕೊಂಬಿನ ಧ್ವನಿಯನ್ನು ಕೇಳಿದ ಯಾರೇ ಆಗಲಿ ಎಚ್ಚರಗೊಳ್ಳದೆ, ಖಡ್ಗಕ್ಕೆ ಸಿಕ್ಕಿ ನಾಶವಾದರೆ, ತನ್ನ ಮರಣಕ್ಕೆ ತಾನೇ ಹೊಣೆಯಾಗುವನು.
men den som hører basunens lyd, ikke lar sig advare, og sverdet kommer og tar ham bort, da skal hans blod komme over hans eget hode;
5 ೫ ಏಕೆಂದರೆ ಅವನು ಕೊಂಬಿನ ಧ್ವನಿಯನ್ನು ಕೇಳಿಯೂ ಎಚ್ಚರಗೊಳ್ಳಲಿಲ್ಲ; ತನ್ನ ಮರಣಕ್ಕೆ ತಾನೇ ಕಾರಣನಾಗುವನು; ಎಚ್ಚರಗೊಂಡಿದ್ದರೆ ತನ್ನ ಪ್ರಾಣವನ್ನು ಉಳಿಸಿಕೊಳ್ಳುತ್ತಿದ್ದನು.
han hørte basunens lyd, men lot sig ikke advare, hans blod skal komme over ham selv; men hadde han latt sig advare, så hadde han berget sitt liv.
6 ೬ ಆದರೆ ಕಾವಲುಗಾರನು ಬೀಳುವ ಖಡ್ಗವನ್ನು ನೋಡಿಯೂ, ಕೊಂಬನ್ನೂದದೆ, ಸ್ವಜನರನ್ನು ಎಚ್ಚರಿಸದೆ ಇದ್ದರೆ, ಖಡ್ಗವು ಬಿದ್ದು ಆ ಜನರೊಳಗೆ ಯಾರನ್ನೇ ಆಗಲಿ ನಾಶಮಾಡಿದರೆ, ತನ್ನ ಅಧರ್ಮದಲ್ಲೇ ನಾಶಗೊಂಡ ಆ ಮನುಷ್ಯನ ಮರಣಕ್ಕೆ ಕಾವಲುಗಾರನನ್ನೇ ಹೊಣೆಮಾಡುವೆನು.’
Men når vekteren ser sverdet komme og ikke støter i basunen, og folket ikke blir advart, og sverdet kommer og tar bort nogen av dem, da blir han tatt bort for sin misgjernings skyld, men hans blod vil jeg kreve av vekterens hånd.
7 ೭ “ಆದುದರಿಂದ ನರಪುತ್ರನೇ, ನಾನು ನಿನ್ನನ್ನು ಇಸ್ರಾಯೇಲ್ ವಂಶದವರಿಗೆ ಕಾವಲುಗಾರನನ್ನಾಗಿ ನೇಮಿಸಿದ್ದೇನೆ; ನೀನು ನನ್ನ ಬಾಯಿಂದ ಹೊರಡುವ ಮಾತನ್ನು ಕೇಳಿ, ನನ್ನ ದೂತನಾಗಿ ಅವರನ್ನು ಎಚ್ಚರಿಸು.
Og du menneskesønn! Til vekter har jeg satt dig for Israels hus, og når du hører et ord av min munn, skal du advare dem fra mig.
8 ೮ ನಾನು ದುಷ್ಟನಿಗೆ ದುಷ್ಟನೇ, ‘ನೀನು ಖಂಡಿತವಾಗಿ ಸಾಯುವೆ’ ಎಂದು ಹೇಳುವಾಗ, ನೀನು ಆ ದುಷ್ಟನನ್ನು ತನ್ನ ದುರ್ಮಾರ್ಗದಿಂದ ತಪ್ಪಿಸಿ, ಅವನನ್ನು ಎಚ್ಚರಗೊಳಿಸದೆ ಹೋದರೆ, ಅವನು ತನ್ನ ಅಪರಾಧದಿಂದಲೇ ಸಾಯಬೇಕಾಗುವುದು; ಅವನ ಮರಣಕ್ಕೆ ಹೊಣೆಯಾದ ನಿನಗೆ ನಾನು ಮುಯ್ಯಿತೀರಿಸುವೆನು.
Når jeg sier til den ugudelige: Du ugudelige, du skal visselig dø, og du ikke taler og advarer den ugudelige for hans ferd, da skal han, den ugudelige, dø for sin misgjernings skyld, men hans blod vil jeg kreve av din hånd.
9 ೯ ಆದರೆ ನೀನು ದುಷ್ಟನನ್ನು ದುರ್ಮಾರ್ಗದಿಂದ ತಪ್ಪಿಸಲು, ಅವನನ್ನು ಎಚ್ಚರಿಸಿದರೂ ಅವನು ಅದನ್ನು ಬಿಡದೆ ಹೋದರೆ ತನ್ನ ಅಪರಾಧದಲ್ಲೇ ಸಾಯುವನು; ನೀನೋ ನಿನ್ನ ಪ್ರಾಣವನ್ನು ಉಳಿಸಿಕೊಳ್ಳುವಿ.
Men når du har advart den ugudelige for hans ferd, at han skal vende om fra den, men han ikke vender om fra sin ferd, da skal han dø for sin misgjernings skyld, men du har reddet din sjel.
10 ೧೦ “ನರಪುತ್ರನೇ, ಇಸ್ರಾಯೇಲ್ ವಂಶದವರಿಗೆ ಹೀಗೆ ನುಡಿ, ‘ಅಯ್ಯೋ, ನಮ್ಮ ದ್ರೋಹಗಳ ಮತ್ತು ಪಾಪಗಳ ಭಾರವು ನಮ್ಮ ಮೇಲೆ ಬಿದ್ದಿದೆ; ಅವುಗಳಿಂದ ಕ್ಷೀಣವಾಗಿ ಹೋಗುತ್ತಿದ್ದೇವೆ; ನಾವು ಹೇಗೆ ಬದುಕುವೆವು? ಅಂದುಕೊಳ್ಳುತ್ತೀರಲ್ಲಾ.
Og du menneskesønn! Si til Israels hus: Således sier I: Våre overtredelser og synder tynger på oss, og for deres skyld visner vi bort; hvorledes kan vi da leve?
11 ೧೧ ನನ್ನ ಜೀವದಾಣೆ, ದುಷ್ಟನ ಸಾವಿನಲ್ಲಿ ನನಗೆ ಸ್ವಲ್ಪವೂ ಸಂತೋಷವಿಲ್ಲ; ಅವನು ತನ್ನ ದುರ್ಮಾರ್ಗವನ್ನು ಬಿಟ್ಟುಬಿಡಲಿ; ಇಸ್ರಾಯೇಲಿನ ಮನೆತನದವರೇ ನೀವು ಏಕೆ ಸಾಯಬೇಕು?’” ಇದು ಕರ್ತನಾದ ಯೆಹೋವನ ನುಡಿ.
Si til dem: Så sant jeg lever, sier Herren, Israels Gud, jeg har ikke behag i den ugudeliges død, men i at den ugudelige vender om fra sin ferd og lever. Vend om, vend om fra eders onde veier! Hvorfor vil I dø, Israels hus?
12 ೧೨ ನರಪುತ್ರನೇ, ನಿನ್ನ ಜನರಿಗೆ ಹೀಗೆ ಹೇಳು, “ನೀತಿವಂತನು ದ್ರೋಹಮಾಡಿದ್ದಲ್ಲಿ ಅವನ ನೀತಿಯು ಅವನನ್ನು ಉದ್ಧರಿಸುವುದಿಲ್ಲ; ದುಷ್ಟನು ತನ್ನ ದುಷ್ಟತನವನ್ನು ಬಿಟ್ಟಲ್ಲಿ, ಅವನ ಪಾಪವು ಅವನನ್ನು ಬೀಳಿಸುವುದಿಲ್ಲ; ನೀತಿವಂತನು ಪಾಪಮಾಡಿದಲ್ಲಿ ಅವನ ನೀತಿಯು ಅವನನ್ನು ಬದುಕಿಸುವುದಿಲ್ಲ.
Og du menneskesønn! Si til ditt folks barn: Den rettferdiges rettferdighet skal ikke frelse ham på den dag han synder, og den ugudelige skal ikke omkomme for sin ugudelighets skyld på den dag han vender om fra sin ugudelighet, og den rettferdige skal ikke kunne leve ved sin rettferdighet på den dag han synder.
13 ೧೩ ನಾನು ನೀತಿವಂತನಿಗೆ, ‘ನೀನು ಖಂಡಿತವಾಗಿ ಬದುಕುವಿ’ ಎಂದು ಹೇಳುವಾಗ, ಅವನು ತನ್ನ ನೀತಿಯ ಮೇಲೆ ಭರವಸವಿಟ್ಟು ಪಾಪ ಮಾಡಿದರೆ, ಅವನು ಮಾಡಿದ ಯಾವ ಸುಕೃತ್ಯವೂ ಅವನ ಲೆಕ್ಕಕ್ಕೆ ಸೇರಿಸಲ್ಪಡುವುದಿಲ್ಲ; ಅವನು ಮಾಡುವ ಪಾಪದಿಂದಲೇ ಅವನು ಸಾಯುವನು.
Når jeg sier om den rettferdige: Han skal visselig leve, og han setter sin lit til sin rettferdighet og gjør urett, da skal ingen av hans rettferdige gjerninger tilregnes ham, men for den uretts skyld som han har gjort, for den skal han dø.
14 ೧೪ ನಾನು ದುಷ್ಟನಿಗೆ, ‘ನೀನು ಖಂಡಿತವಾಗಿ ಸಾಯುವಿ’ ಎಂದು ಹೇಳಲು ಅವನು ತನ್ನ ಪಾಪವನ್ನು ಬಿಟ್ಟು ನೀತಿನ್ಯಾಯಗಳನ್ನು ನಡೆಸಿದರೆ,
Og når jeg sier til den ugudelige: Du skal visselig dø, og han vender om fra sin synd og gjør rett og rettferdighet,
15 ೧೫ ಆ ದುಷ್ಟನು ತನ್ನ ಒತ್ತೆಯನ್ನು ಬಿಗಿಹಿಡಿಯದೆ, ದೋಚಿಕೊಂಡದ್ದನ್ನು ಹಿಂದಕ್ಕೆ ಕೊಟ್ಟು, ಅನ್ಯಾಯವನ್ನು ಮಾಡದೆ, ಜೀವಾಧಾರವಾದ ವಿಧಿಗಳನ್ನು ಅನುಸರಿಸಿ, ಸಕಲ ದುಷ್ಕರ್ಮಗಳಿಗೂ ದೂರನಾದರೆ ಸಾಯುವುದಿಲ್ಲ. ಖಂಡಿತವಾಗಿ ಬದುಕುವನು.
så han, den ugudelige, gir pant tilbake, godtgjør det han har røvet, følger livets bud, så han ikke gjør urett, da skal han visselig leve, han skal ikke dø.
16 ೧೬ ಅವನು ಮಾಡಿದ ಯಾವ ಪಾಪವೂ ಅವನ ಲೆಕ್ಕಕ್ಕೆ ಸೇರಿಸಲ್ಪಡುವುದಿಲ್ಲ; ನೀತಿನ್ಯಾಯಗಳನ್ನು ನಡೆಸುತ್ತಿದ್ದುದರಿಂದ ನಿಶ್ಚಯವಾಗಿ ಬದುಕುವನು.
Ingen av de synder som han har gjort, skal tilregnes ham; rett og rettferdighet har han gjort, han skal visselig leve.
17 ೧೭ ಆದರೆ ನಿನ್ನ ಜನರು ಕರ್ತನ ಮಾರ್ಗವು ಸಮವಲ್ಲವೆಂದು ಹೇಳುತ್ತಿದ್ದಾರೆ, ಆದರೆ ಅವರ ಮಾರ್ಗವೇ ಸಮವಿಲ್ಲ.
Og ditt folks barn sier: Herrens vei er ikke rett. Men det er deres vei som ikke er rett.
18 ೧೮ ನೀತಿವಂತನು ತನ್ನ ನೀತಿಯನ್ನು ಬಿಟ್ಟು ಅಧರ್ಮಮಾಡಿದರೆ ಆ ಅಧರ್ಮದಿಂದಲೇ ಸಾಯುವನು.
Når den rettferdige vender om fra sin rettferdighet og gjør urett, så skal han dø.
19 ೧೯ ದುಷ್ಟನು ತನ್ನ ದುಷ್ಟತನವನ್ನು ಬಿಟ್ಟು, ನೀತಿನ್ಯಾಯಗಳನ್ನು ನಡೆಸಿದರೆ ಅವುಗಳಿಂದ ಬದುಕುವನು.
Og når den ugudelige vender om fra sin ugudelighet og gjør rett og rettferdighet, så skal han leve.
20 ೨೦ ಆದರೆ ನೀವು, ‘ಯೆಹೋವನ ಮಾರ್ಗವು ಸಮವಲ್ಲ’ ಎಂದು ಹೇಳುತ್ತಿದ್ದೀರಿ; ಇಸ್ರಾಯೇಲ್ ವಂಶದವರೇ, ನಿಮ್ಮ ನಿಮ್ಮ ನಡತೆಗೆ ತಕ್ಕ ಹಾಗೆ ನಾನು ನಿಮಗೆ ತೀರ್ಪುಮಾಡುವೆನು.”
Og enda sier I: Herrens vei er ikke rett. Jeg vil dømme eder, Israels hus, hver efter hans ferd.
21 ೨೧ ನಾವು ಸೆರೆಯಾದ ಹನ್ನೆರಡನೆಯ ವರ್ಷದ, ಹತ್ತನೆಯ ತಿಂಗಳಿನ ಐದನೆಯ ದಿನದಲ್ಲಿ, ಯೆರೂಸಲೇಮಿನಿಂದ ತಪ್ಪಿಸಿಕೊಂಡವನೊಬ್ಬನು ನನ್ನ ಬಳಿಗೆ ಬಂದು, “ಪಟ್ಟಣವು ಶತ್ರುವಶವಾಯಿತು” ಎಂದು ಹೇಳಿದನು.
I det tolvte år efterat vi var bortført, i den tiende måned, på den femte dag i måneden, kom det nogen flyktninger fra Jerusalem til mig og sa: Staden er inntatt.
22 ೨೨ ಅವನು ಬರುವುದಕ್ಕಿಂತ ಮೊದಲೇ, ಸಾಯಂಕಾಲದಲ್ಲಿ ನಾನು ಯೆಹೋವನ ಹಸ್ತಸ್ಪರ್ಶದಿಂದ ಪರವಶನಾಗಿರಲು, ಯೆಹೋವನು ತಪ್ಪಿಸಿಕೊಂಡವನು ಬೆಳಿಗ್ಗೆ ನನ್ನ ಬಳಿಗೆ ಬರುವ ತನಕ ನನ್ನ ಬಾಯಿ ತೆರೆಯಲ್ಪಟ್ಟಿತ್ತು; ಹೌದು, ನನ್ನ ಬಾಯಿ ತೆರೆದಿತ್ತು, ನಾನು ಮೂಕನಾಗಿರಲಿಲ್ಲ.
Og Herrens hånd var kommet over mig om aftenen, før flyktningene kom, og han oplot min munn, innen de kom til mig om morgenen; min munn blev oplatt, og jeg var ikke lenger målløs.
23 ೨೩ ಆಗ ಯೆಹೋವನು ನನಗೆ ಈ ವಾಕ್ಯವನ್ನು ದಯಪಾಲಿಸಿದನು,
Og Herrens ord kom til mig, og det lød så:
24 ೨೪ “ನರಪುತ್ರನೇ, ಇಸ್ರಾಯೇಲ್ ಸೀಮೆಯ ಹಾಳು ಪ್ರದೇಶಗಳಲ್ಲಿ ವಾಸಿಸುವವರು ‘ಅಬ್ರಹಾಮನು ಒಂಟಿಗನಾಗಿದ್ದರೂ ಈ ದೇಶವು ಅವನಿಗೆ ಸ್ವತ್ತಾಗಿ ಸಿಕ್ಕಿತಲ್ಲಾ; ಅದು ಬಹು ಜನರಾದ ನಮಗೆ ಸ್ವತ್ತಾಗಿ ಸಿಕ್ಕಿದ್ದು ಬಹು ದೊಡ್ಡದು?’” ಎಂದು ಅಂದುಕೊಳ್ಳುತ್ತಿದ್ದಾರೆ.
Menneskesønn! De som bor iblandt grushaugene der borte i Israels land, sier så: Abraham var bare en, og han fikk landet i eie; vi er mange, vi har fått landet til eiendom.
25 ೨೫ ಆದುದರಿಂದ ನೀನು ಅವರಿಗೆ ಹೀಗೆ ನುಡಿ, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ರಕ್ತದಿಂದ ಕೂಡಿದ ಮಾಂಸವನ್ನು ತಿನ್ನುತ್ತೀರಲ್ಲವೇ? ವಿಗ್ರಹಗಳ ಕಡೆಗೆ ನಿಮ್ಮ ಕಣ್ಣೆತ್ತಿ ನೋಡುತ್ತೀರಿ ಜನರ ರಕ್ತವನ್ನು ಚೆಲ್ಲುತ್ತೀರಿ; ನಿಮ್ಮಂಥವರು ದೇಶವನ್ನು ಸ್ವಾಧೀನಪಡಿಸಿಕೊಳ್ಳಬಹುದೋ?
Si derfor til dem: Så sier Herren, Israels Gud: I eter kjøtt med blodet i og løfter eders øine til eders motbydelige avguder og utøser blod - og I skulde eie landet?
26 ೨೬ ನೀವು ನಿಮ್ಮ ಕತ್ತಿಯ ಮೇಲೆ ನಿಂತು ಅಸಹ್ಯವಾದ ಕೆಲಸಗಳಲ್ಲಿ ನಿರತರಾಗಿದ್ದೀರಿ, ದುರಾಚಾರ ನಡೆಸುತ್ತೀರಿ, ನಿಮ್ಮಲ್ಲಿ ಪ್ರತಿಯೊಬ್ಬನು ತನ್ನ ನೆರೆಯವನ ಹೆಂಡತಿಯನ್ನು ಮಾನಭಂಗ ಪಡಿಸುತ್ತಾನೆ; ನಿಮ್ಮಂಥವರು ದೇಶವನ್ನು ಸ್ವಾಧೀನಪಡಿಸಿಕೊಳ್ಳಬಹುದೋ?”
I trosser på eders sverd, I gjør det som vederstyggelig er, og krenker hverandres hustruer - og I skulde eie landet?
27 ೨೭ ಅವರಿಗೆ ಹೀಗೆ ನುಡಿ, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನನ್ನ ಜೀವದಾಣೆ, ಹಾಳು ಪ್ರದೇಶಗಳಲ್ಲಿರುವವರನ್ನು ಖಡ್ಗವು ಹತಿಸುವುದು; ಬಯಲಿನಲ್ಲಿರುವವರನ್ನು ನಾನು ಮೃಗಗಳಿಗೆ ತುತ್ತುಮಾಡುವೆನು; ಗುಹೆ ದುರ್ಗಗಳಲ್ಲಿರುವವರನ್ನು ವ್ಯಾಧಿಯು ಸಾಯಿಸುವುದು.
Så skal du si til dem: Så sier Herren, Israels Gud: Så sant jeg lever, de som bor blandt grushaugene, skal visselig falle for sverdet, og den som er på marken, ham gir jeg til føde for de ville dyr, og de som er i fjellborgene og i hulene, skal dø av pest.
28 ೨೮ ನಾನು ದೇಶವನ್ನು ಹಾಳುಮಾಡುವೆನು, ಅದರ ಶಕ್ತಿಯ ಅಹಂಕಾರವು ಇಳಿದು ಹೋಗುವುದು; ಇಸ್ರಾಯೇಲಿನ ಪರ್ವತಗಳು ಹಾಳಾಗಿರುವುದರಿಂದ ಯಾರೂ ಅಲ್ಲಿ ಹಾದು ಹೋಗುವುದಿಲ್ಲ.
Jeg vil gjøre landet til en ørken, en ødemark, og det skal være ute med dets stolte makt, og fjellene i Israel skal ligge øde, så ingen ferdes der.
29 ೨೯ ಅವರು ನಡೆಸಿದ ಬಹು ದುರಾಚಾರಗಳ ನಿಮಿತ್ತ ನಾನು ದೇಶವನ್ನು ಹಾಳುಮಾಡಿದಾಗ ನಾನೇ ಯೆಹೋವನು” ಎಂದು ಅವರಿಗೆ ದೃಢವಾಗುವುದು.
Og de skal kjenne at jeg er Herren, når jeg gjør landet til en ørken, en ødemark, for alle de vederstyggelige tings skyld som de har gjort.
30 ೩೦ ನರಪುತ್ರನೇ, “ನಿನ್ನ ಜನರು ಗೋಡೆಗಳ ನೆರಳಿನಲ್ಲಿಯೂ, ಮನೆಯ ಬಾಗಿಲುಗಳಲ್ಲಿಯೂ ನಿನ್ನ ಪ್ರಸ್ತಾಪವನ್ನೆತ್ತಿ ಪರಸ್ಪರವಾಗಿ ಒಬ್ಬರಿಗೊಬ್ಬರು, ‘ಯೆಹೋವನ ಬಾಯಿಂದ ಹೊರಟ ಮಾತೇನು ಕೇಳೋಣ ಬನ್ನಿರಿ’ ಎಂದು ಹೇಳಿಕೊಳ್ಳುತ್ತಿದ್ದಾರೆ.
Og du menneskesønn! Ditt folks barn taler sammen om dig ved veggene og i husdørene, og alle sier de til hverandre: Kom og hør hvad det er for et ord som utgår fra Herren!
31 ೩೧ ಶ್ರದ್ಧೆ ಇರುವ ನನ್ನ ಭಕ್ತರಂತೆ ಅವರು ನಿನ್ನ ಬಳಿಗೆ ಬಂದು, ನಿನ್ನ ಮುಂದೆ ಕುಳಿತುಕೊಂಡು ನಿನ್ನ ಮಾತುಗಳನ್ನು ಕೇಳುತ್ತಾರೆ, ಆದರೆ ಕೈಗೊಳ್ಳುವುದಿಲ್ಲ; ಬಾಯಿಂದ ಬಹುಪ್ರೀತಿಯನ್ನು ತೋರಿಸುತ್ತಾರೆ. ಅವರ ಮನಸ್ಸೋ ತಾವು ದೋಚಿಕೊಂಡದರ ಮೇಲೆ ಇರುತ್ತದೆ.
Så kommer de til dig i store skarer, og de setter sig foran dig som mitt folk og hører dine ord, men de gjør ikke efter dem; for det som er efter deres smak, det gjør de, og til vinning står deres hu.
32 ೩೨ ಇಗೋ, ನಿನ್ನ ಮಾತು ಅವರ ಎಣಿಕೆಯಲ್ಲಿ ಒಬ್ಬ ಸಂಗೀತಗಾರನು ವಾದ್ಯವನ್ನು ಜಾಣತನದಿಂದ ಬಾರಿಸಿ, ಮಧುರ ಸ್ವರದಿಂದ ಹಾಡುವ ಪ್ರೇಮಗೀತೆಗೆ ಸಮಾನವಾಗಿದೆ; ನಿನ್ನ ಮಾತುಗಳನ್ನು ಕೇಳುತ್ತಾರೆ, ಆದರೆ ಕೈಗೊಳ್ಳುವುದಿಲ್ಲ.
Og se, du er for dem som en yndig sang, som en som har en vakker røst og spiller fagert; de hører dine ord, men gjør ikke efter dem.
33 ೩೩ ನೀನು ಮುಂತಿಳಿಸಿದ್ದು ಸಂಭವಿಸುವಾಗ, ತಮ್ಮ ಮಧ್ಯದಲ್ಲಿ ಪ್ರವಾದಿಯು ಇದ್ದಾನೆ ಎಂದು ಅವರಿಗೆ ತಿಳಿಯುವುದು.”
Men når det kommer - og komme skal det - da skal de kjenne at en profet har vært iblandt dem.