< ಯೆಹೆಜ್ಕೇಲನು 34 >

1 ಯೆಹೋವನು ಈ ಮಾತನ್ನು ನನಗೆ ದಯಪಾಲಿಸಿದನು,
וַיְהִ֥י דְבַר־יְהוָ֖ה אֵלַ֥י לֵאמֹֽר׃
2 “ನರಪುತ್ರನೇ, ಇಸ್ರಾಯೇಲಿನ ಮಂದೆಯ ಕುರುಬರಿಗೆ ಈ ಪ್ರವಾದನೆಯನ್ನು ನುಡಿ, ಪ್ರವಾದಿಸಿ ಹೀಗೆ ನುಡಿ, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ಅಯ್ಯೋ, ಸ್ವಂತ ಹೊಟ್ಟೆಯನ್ನು ತುಂಬಿಸಿಕೊಳ್ಳುವ ಇಸ್ರಾಯೇಲಿನ ಕುರುಬರ ಗತಿಯನ್ನು ಏನು ಹೇಳಲಿ! ಕುರಿಗಳನ್ನು ಮೇಯಿಸುವುದು ಕುರುಬರ ಧರ್ಮವಲ್ಲವೋ?
בֶּן־אָדָ֕ם הִנָּבֵ֖א עַל־רוֹעֵ֣י יִשְׂרָאֵ֑ל הִנָּבֵ֣א וְאָמַרְתָּ֩ אֲלֵיהֶ֨ם לָרֹעִ֜ים כֹּ֥ה אָמַ֣ר ׀ אֲדֹנָ֣י יְהוִ֗ה ה֤וֹי רֹעֵֽי־יִשְׂרָאֵל֙ אֲשֶׁ֤ר הָיוּ֙ רֹעִ֣ים אוֹתָ֔ם הֲל֣וֹא הַצֹּ֔אן יִרְע֖וּ הָרֹעִֽים׃
3 ನೀವು ಕೊಬ್ಬಿನ ಮಾಂಸವನ್ನು ತಿನ್ನುತ್ತೀರಿ, ಉಣ್ಣೆಯ ಬಟ್ಟೆಯನ್ನು ಹಾಕುತ್ತೀರಿ, ಕೊಬ್ಬಿದ ಕುರಿಗಳನ್ನು ಕೊಲ್ಲುತ್ತೀರಿ; ಆದರೆ ಕುರಿಗಳನ್ನು ಮೇಯಿಸುವುದಿಲ್ಲ.
אֶת־הַחֵ֤לֶב תֹּאכֵ֙לוּ֙ וְאֶת־הַצֶּ֣מֶר תִּלְבָּ֔שׁוּ הַבְּרִיאָ֖ה תִּזְבָּ֑חוּ הַצֹּ֖אן לֹ֥א תִרְעֽוּ׃
4 ನೀವು ದುರ್ಬಲವಾದವುಗಳನ್ನು ಬಲಗೊಳಿಸುವುದಿಲ್ಲ, ರೋಗದವುಗಳನ್ನು ಸ್ವಸ್ಥಮಾಡುವುದಿಲ್ಲ, ಮುರಿದ ಅಂಗಗಳನ್ನು ಕಟ್ಟುವುದಿಲ್ಲ, ಕಳೆದು ಹೋದವುಗಳನ್ನು ಹುಡುಕುವುದಿಲ್ಲ, ಓಡಿಸಿದನ್ನು ನೀವು ಹಿಂದಕ್ಕೆ ತರುವುದಿಲ್ಲ, ಆದರೆ ಬಲಾತ್ಕಾರದಿಂದ ಮತ್ತು ಕ್ರೂರತನದಿಂದ ಅವುಗಳ ಮೇಲೆ ದೊರೆತನ ಮಾಡುತ್ತೀರಿ.
אֶֽת־הַנַּחְלוֹת֩ לֹ֨א חִזַּקְתֶּ֜ם וְאֶת־הַחוֹלָ֣ה לֹֽא־רִפֵּאתֶ֗ם וְלַנִּשְׁבֶּ֙רֶת֙ לֹ֣א חֲבַשְׁתֶּ֔ם וְאֶת־הַנִּדַּ֙חַת֙ לֹ֣א הֲשֵׁבֹתֶ֔ם וְאֶת־הָאֹבֶ֖דֶת לֹ֣א בִקַּשְׁתֶּ֑ם וּבְחָזְקָ֛ה רְדִיתֶ֥ם אֹתָ֖ם וּבְפָֽרֶךְ׃
5 ಕುರುಬರು ಇಲ್ಲವಾದುದರಿಂದ ಅವು ಚದುರಿ ಹೋದವು; ಚದುರಿ ಹೋಗಿ, ಕಾಡಿನ ಸಕಲ ಮೃಗಗಳಿಗೆ ತುತ್ತಾದವು.
וַתְּפוּצֶ֖ינָה מִבְּלִ֣י רֹעֶ֑ה וַתִּהְיֶ֧ינָה לְאָכְלָ֛ה לְכָל־חַיַּ֥ת הַשָּׂדֶ֖ה וַתְּפוּצֶֽינָה׃
6 ನನ್ನ ಕುರಿಗಳು ಪರ್ವತಗಳ ಮೇಲೆಯೂ, ಎತ್ತರವಾದ ಪ್ರತಿಯೊಂದು ಬೆಟ್ಟದ ಮೇಲೆಯೂ ಅಲೆದಾಡುತ್ತಿವೆ; ಹೌದು, ನನ್ನ ಮಂದೆಯು ಭೂಮಂಡಲದಲ್ಲೆಲ್ಲಾ ಚದುರಿಹೋಗಿದೆ; ಯಾರೂ ಅವುಗಳ ಹಿಂದೆ ಹೋಗಿ ಹುಡುಕಲಿಲ್ಲ.
יִשְׁגּ֤וּ צֹאנִי֙ בְּכָל־הֶ֣הָרִ֔ים וְעַ֖ל כָּל־גִּבְעָ֣ה רָמָ֑ה וְעַ֨ל כָּל־פְּנֵ֤י הָאָ֙רֶץ֙ נָפֹ֣צוּ צֹאנִ֔י וְאֵ֥ין דּוֹרֵ֖שׁ וְאֵ֥ין מְבַקֵּֽשׁ׃
7 “‘ಆದುದರಿಂದ ಕುರುಬರೇ, ಯೆಹೋವನ ಮಾತನ್ನು ಕೇಳಿರಿ,
לָכֵ֣ן רֹעִ֔ים שִׁמְע֖וּ אֶת־דְּבַ֥ר יְהוָֽה׃
8 ಕರ್ತನಾದ ಯೆಹೋವನು ಇಂತೆನ್ನುತ್ತಾನೆ “ಅಯ್ಯೋ, ನನ್ನ ಮಂದೆಯು ಕೊಳ್ಳೆಯಾದವು, ಕಾಡಿನ ಸಕಲ ಮೃಗಗಳಿಗೆ ತುತ್ತಾದವು, ಕುರುಬನಿಲ್ಲದೆ ಬಯಲಿನ ಮೃಗಗಳಿಗೆಲ್ಲಾ ಆಹಾರವಾಯಿತು, ನನ್ನ ಕುರುಬರು ನನ್ನ ಕುರಿಗಳನ್ನು ಹುಡುಕಲಿಲ್ಲ, ಅವರು ಸ್ವಂತ ಹೊಟ್ಟೆಯನ್ನು ತುಂಬಿಸಿಕೊಂಡರೇ ಹೊರತು ನನ್ನ ಕುರಿಗಳ ಹೊಟ್ಟೆಯನ್ನು ನೋಡಲೇ ಇಲ್ಲ.”
חַי־אָ֜נִי נְאֻ֣ם ׀ אֲדֹנָ֣י יְהוִ֗ה אִם־לֹ֣א יַ֣עַן הֱיֽוֹת־צֹאנִ֣י ׀ לָבַ֡ז וַתִּֽהְיֶינָה֩ צֹאנִ֨י לְאָכְלָ֜ה לְכָל־חַיַּ֤ת הַשָּׂדֶה֙ מֵאֵ֣ין רֹעֶ֔ה וְלֹֽא־דָרְשׁ֥וּ רֹעַ֖י אֶת־צֹאנִ֑י וַיִּרְע֤וּ הָֽרֹעִים֙ אוֹתָ֔ם וְאֶת־צֹאנִ֖י לֹ֥א רָעֽוּ׃ ס
9 “‘ಆದಕಾರಣ, ಕುರುಬರೇ, ಯೆಹೋವನ ವಾಕ್ಯವನ್ನು ಕೇಳಿರಿ,
לָכֵן֙ הָֽרֹעִ֔ים שִׁמְע֖וּ דְּבַר־יְהוָֽה׃
10 ೧೦ ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಆಹಾ, ನನ್ನ ಜೀವದಾಣೆ, ನಾನು ಕುರುಬರಿಗೆ ವಿರುದ್ಧವಾಗಿದ್ದೇನೆ; ಅವರು ನನ್ನ ಕುರಿಗಳ ಲೆಕ್ಕವನ್ನು ನನಗೆ ಒಪ್ಪಿಸಬೇಕು; ನನ್ನ ಕುರಿಗಳನ್ನು ಮೇಯಿಸುವ ಕೆಲಸದಿಂದ ಅವರನ್ನು ತೆಗೆದುಬಿಡುವೆನು; ಆ ಕುರುಬರು ಇನ್ನು ಸ್ವಂತ ಹೊಟ್ಟೆಯನ್ನು ತುಂಬಿಸಿಕೊಳ್ಳುವುದಿಲ್ಲ; ನನ್ನ ಕುರಿಗಳು ಆಹಾರವಾಗಿ, ಅವರ ಬಾಯಿಗೆ ಬೀಳದಂತೆ ಅವುಗಳನ್ನು ರಕ್ಷಿಸುವೆನು.”
כֹּה־אָמַ֞ר אֲדֹנָ֣י יְהוִ֗ה הִנְנִ֨י אֶֽל־הָרֹעִ֜ים וְֽדָרַשְׁתִּ֧י אֶת־צֹאנִ֣י מִיָּדָ֗ם וְהִשְׁבַּתִּים֙ מֵרְע֣וֹת צֹ֔אן וְלֹא־יִרְע֥וּ ע֛וֹד הָרֹעִ֖ים אוֹתָ֑ם וְהִצַּלְתִּ֤י צֹאנִי֙ מִפִּיהֶ֔ם וְלֹֽא־תִהְיֶ֥יןָ לָהֶ֖ם לְאָכְלָֽה׃ ס
11 ೧೧ “‘ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಆಹಾ, ನಾನೇ ನನ್ನ ಕುರಿಗಳನ್ನು ಹಿಂಬಾಲಿಸಿ ಹುಡುಕುವೆನು.
כִּ֛י כֹּ֥ה אָמַ֖ר אֲדֹנָ֣י יְהוִ֑ה הִנְנִי־אָ֕נִי וְדָרַשְׁתִּ֥י אֶת־צֹאנִ֖י וּבִקַּרְתִּֽים׃
12 ೧೨ ಮಂದೆಯ ಕುರುಬನು ಸುತ್ತುಮುತ್ತಲು ಚದುರಿ ಹೋದ ತನ್ನ ಕುರಿಗಳನ್ನು ಹುಡುಕುವ ಹಾಗೆ, ನಾನು ನನ್ನ ಕುರಿಗಳನ್ನು ಹುಡುಕುವೆನು; ಕಾರ್ಮುಗಿಲಿನ ದುರ್ದಿನದಲ್ಲಿ ಚದುರಿಹೋದ ಎಲ್ಲಾ ಸ್ಥಳಗಳಿಂದ ಅವುಗಳನ್ನು ರಕ್ಷಿಸುವೆನು.
כְּבַקָּרַת֩ רֹעֶ֨ה עֶדְר֜וֹ בְּיוֹם־הֱיוֹת֤וֹ בְתוֹךְ־צֹאנוֹ֙ נִפְרָשׁ֔וֹת כֵּ֖ן אֲבַקֵּ֣ר אֶת־צֹאנִ֑י וְהִצַּלְתִּ֣י אֶתְהֶ֗ם מִכָּל־הַמְּקוֹמֹת֙ אֲשֶׁ֣ר נָפֹ֣צוּ שָׁ֔ם בְּי֥וֹם עָנָ֖ן וַעֲרָפֶֽל׃
13 ೧೩ “‘“ಜನಾಂಗಗಳ ವಶದಿಂದ ಅವುಗಳನ್ನು ತಪ್ಪಿಸಿ ದೇಶಗಳಿಂದ ಒಟ್ಟುಗೂಡಿಸಿ, ಸ್ವದೇಶಕ್ಕೆ ಬರಮಾಡಿ, ಇಸ್ರಾಯೇಲಿನ ಪರ್ವತಗಳ ಮೇಲೆಯೂ, ಹಳ್ಳಗಳ ಬಳಿಯಲ್ಲಿಯೂ, ದೇಶದ ಎಲ್ಲಾ ಪ್ರದೇಶಗಳಲ್ಲಿಯೂ ಮೇಯಿಸುವೆನು.
וְהוֹצֵאתִ֣ים מִן־הָעַמִּ֗ים וְקִבַּצְתִּים֙ מִן־הָ֣אֲרָצ֔וֹת וַהֲבִיאֹתִ֖ים אֶל־אַדְמָתָ֑ם וּרְעִיתִים֙ אֶל־הָרֵ֣י יִשְׂרָאֵ֔ל בָּאֲפִיקִ֕ים וּבְכֹ֖ל מוֹשְׁבֵ֥י הָאָֽרֶץ׃
14 ೧೪ ಅವುಗಳನ್ನು ಒಳ್ಳೆಯ ಮೇವಿನಿಂದ ಮೇಯಿಸುವೆನು; ಅವುಗಳ ಹುಲ್ಲುಗಾವಲು ಇಸ್ರಾಯೇಲಿನ ಎತ್ತರವಾದ ಬೆಟ್ಟಗಳಲ್ಲಿರುವುದು; ಅವು ಒಳ್ಳೆಯ ಮಂದೆಯಲ್ಲಿ ಮಲಗಿ; ಇಸ್ರಾಯೇಲಿನ ಪರ್ವತಗಳಲ್ಲಿ ಪುಷ್ಟಿಯುಳ್ಳ ಮೇವನ್ನು ಮೇಯುವವು.
בְּמִרְעֶה־טּוֹב֙ אֶרְעֶ֣ה אֹתָ֔ם וּבְהָרֵ֥י מְרֽוֹם־יִשְׂרָאֵ֖ל יִהְיֶ֣ה נְוֵהֶ֑ם שָׁ֤ם תִּרְבַּ֙צְנָה֙ בְּנָ֣וֶה טּ֔וֹב וּמִרְעֶ֥ה שָׁמֵ֛ן תִּרְעֶ֖ינָה אֶל־הָרֵ֥י יִשְׂרָאֵֽל׃
15 ೧೫ ನಾನೇ ನನ್ನ ಕುರಿಗಳನ್ನು ಮೇಯಿಸಿ, ಹಾಯಾಗಿ ಮಲಗುವಂತೆ ಮಾಡುವೆನು” ಇದು ಕರ್ತನಾದ ಯೆಹೋವನ ನುಡಿ.
אֲנִ֨י אֶרְעֶ֤ה צֹאנִי֙ וַאֲנִ֣י אַרְבִּיצֵ֔ם נְאֻ֖ם אֲדֹנָ֥י יְהוִֽה׃
16 ೧೬ “ತಪ್ಪಿಸಿಕೊಂಡದ್ದನ್ನು ಹುಡುಕುವೆನು, ಓಡಿಸಿದ್ದನ್ನು ಮಂದೆಗೆ ಸೇರಿಸುವೆನು, ದುರ್ಬಲವಾದದ್ದನ್ನು ಬಲಗೊಳಿಸುವೆನು, ಮುರಿದ ಅಂಗವನ್ನು ಕಟ್ಟುವೆನು; ಬಲಿತ ಕೊಬ್ಬಿದ ಕುರಿಗಳನ್ನು ಸಂಹರಿಸುವೆನು; ನಾನೇ ಅವುಗಳಿಗೆ ನ್ಯಾಯದಂಡನೆ ಎಂಬ ಮೇವನ್ನು ತಿನ್ನಿಸುವೆನು.”
אֶת־הָאֹבֶ֤דֶת אֲבַקֵּשׁ֙ וְאֶת־הַנִּדַּ֣חַת אָשִׁ֔יב וְלַנִּשְׁבֶּ֣רֶת אֶחֱבֹ֔שׁ וְאֶת־הַחוֹלָ֖ה אֲחַזֵּ֑ק וְאֶת־הַשְּׁמֵנָ֧ה וְאֶת־הַחֲזָקָ֛ה אַשְׁמִ֖יד אֶרְעֶ֥נָּה בְמִשְׁפָּֽט׃
17 ೧೭ “‘ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನನ್ನ ಹಿಂಡೇ, ಇಗೋ, ನಾನು ನಿಮ್ಮಲ್ಲಿನ ಕುರಿಮೇಕೆಗಳಿಗೂ, ಟಗರುಹೋತಗಳಿಗೂ ಮಧ್ಯವರ್ತಿಯಾಗಿ ನ್ಯಾಯ ತೀರಿಸುವೆನು.
וְאַתֵּ֣נָה צֹאנִ֔י כֹּ֥ה אָמַ֖ר אֲדֹנָ֣י יְהוִ֑ה הִנְנִ֤י שֹׁפֵט֙ בֵּֽין־שֶׂ֣ה לָשֶׂ֔ה לָאֵילִ֖ים וְלָעַתּוּדִֽים׃
18 ೧೮ (ಟಗರುಹೋತಗಳೇ, ) ಒಳ್ಳೆಯ ಮೇವನ್ನು ನೀವು ಮೇದುಬಿಟ್ಟು ಉಳಿದ ಮೇವನ್ನು ತುಳಿದು ಕಾಲಕಸ ಮಾಡಿದ್ದು ಅಲ್ಪಕಾರ್ಯವೋ? ತಿಳಿನೀರನ್ನು ಕುಡಿದುಬಿಟ್ಟು, ಉಳಿದದ್ದನ್ನು ಕಾಲಿನಿಂದ ಕಲಕಿ ಹೊಲಸು ಮಾಡಿದ್ದು ಸಣ್ಣ ಕೆಲಸವೋ?
הַמְעַ֣ט מִכֶּ֗ם הַמִּרְעֶ֤ה הַטּוֹב֙ תִּרְע֔וּ וְיֶ֙תֶר֙ מִרְעֵיכֶ֔ם תִּרְמְס֖וּ בְּרַגְלֵיכֶ֑ם וּמִשְׁקַע־מַ֣יִם תִּשְׁתּ֔וּ וְאֵת֙ הַנּ֣וֹתָרִ֔ים בְּרַגְלֵיכֶ֖ם תִּרְפֹּשֽׂוּן׃
19 ೧೯ ನೀವು ತುಳಿದು ಕಾಲಕಸ ಮಾಡಿದ್ದನ್ನು ನನ್ನ ಕುರಿಗಳು ಮೇಯಬೇಕಾಯಿತು; ನೀವು ಕಾಲಿನಿಂದ ಕಲಕಿ ಹೊಲಸು ಮಾಡಿದ್ದನ್ನು ಅವು ಕುಡಿಯಬೇಕಾಯಿತು.”
וְצֹאנִ֑י מִרְמַ֤ס רַגְלֵיכֶם֙ תִּרְעֶ֔ינָה וּמִרְפַּ֥שׂ רַגְלֵיכֶ֖ם תִּשְׁתֶּֽינָה׃ ס
20 ೨೦ “‘ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಇಗೋ, ನಾನೇ ಕೊಬ್ಬಿದ ಟಗರುಹೋತಗಳಿಗೂ, ಬಡ ಕುರಿಮೇಕೆಗಳಿಗೂ ನ್ಯಾಯತೀರಿಸುತ್ತೇನೆ.
לָכֵ֗ן כֹּ֥ה אָמַ֛ר אֲדֹנָ֥י יְהוִ֖ה אֲלֵיהֶ֑ם הִנְנִי־אָ֕נִי וְשָֽׁפַטְתִּי֙ בֵּֽין־שֶׂ֣ה בִרְיָ֔ה וּבֵ֥ין שֶׂ֖ה רָזָֽה׃
21 ೨೧ ಏಕೆಂದರೆ (ಟಗರುಹೋತಗಳೇ, ) ನೀವು ಕುರಿಮೇಕೆಗಳನ್ನು ಪಕ್ಕೆಯಿಂದಲೂ, ಹೆಗಲಿನಿಂದಲೂ ನೂಕುತ್ತಾ, ದುರ್ಬಲವಾದವುಗಳನ್ನು ಕೊಂಬುಗಳಿಂದ ಹಾಯುತ್ತಾ, ನನ್ನ ಹಿಂಡನ್ನು ಚದುರಿಸಿಬಿಟ್ಟಿರಿ.
יַ֗עַן בְּצַ֤ד וּבְכָתֵף֙ תֶּהְדֹּ֔פוּ וּבְקַרְנֵיכֶ֥ם תְּנַגְּח֖וּ כָּל־הַנַּחְל֑וֹת עַ֣ד אֲשֶׁ֧ר הֲפִיצוֹתֶ֛ם אוֹתָ֖נָה אֶל־הַחֽוּצָה׃
22 ೨೨ ಆದಕಾರಣ ನನ್ನ ಹಿಂಡು ಇನ್ನೆಂದಿಗೂ ಕೊಳ್ಳೆಯಾಗದಂತೆ ನಾನು ಅದನ್ನು ರಕ್ಷಿಸಿ, ಟಗರುಹೋತಗಳಿಗೂ, ಕುರಿಮೇಕೆಗಳಿಗೂ ನ್ಯಾಯತೀರಿಸುವೆನು.”
וְהוֹשַׁעְתִּ֣י לְצֹאנִ֔י וְלֹֽא־תִהְיֶ֥ינָה ע֖וֹד לָבַ֑ז וְשָׁ֣פַטְתִּ֔י בֵּ֥ין שֶׂ֖ה לָשֶֽׂה׃
23 ೨೩ “‘ನನ್ನ ಹಿಂಡನ್ನು ಕಾಯಲಿಕ್ಕೆ ಒಬ್ಬನೇ ಕುರುಬನನ್ನು ನೇಮಿಸುವೆನು; ನನ್ನ ಸೇವಕನಾದ ದಾವೀದನೆಂಬ ಆ ಕುರುಬನು ಅದನ್ನು ಮೇಯಿಸುವನು; ಹೌದು, ಅದರ ಕುರುಬನಾಗಿ ಅದನ್ನು ಮೇಯಿಸುತ್ತಾ ಬರುವನು.
וַהֲקִמֹתִ֨י עֲלֵיהֶ֜ם רֹעֶ֤ה אֶחָד֙ וְרָעָ֣ה אֶתְהֶ֔ן אֵ֖ת עַבְדִּ֣י דָוִ֑יד ה֚וּא יִרְעֶ֣ה אֹתָ֔ם וְהֽוּא־יִהְיֶ֥ה לָהֶ֖ן לְרֹעֶֽה׃
24 ೨೪ ಯೆಹೋವನಾದ ನಾನು ನನ್ನ ಜನರ ದೇವರಾಗಿರುವೆನು; ನನ್ನ ಸೇವಕನಾದ ದಾವೀದನು ಅವರನ್ನಾಳುವ ಅರಸನಾಗಿರುವನು; ಯೆಹೋವನಾದ ನಾನೇ ಇದನ್ನು ನುಡಿದಿದ್ದೇನೆ.
וַאֲנִ֣י יְהוָ֗ה אֶהְיֶ֤ה לָהֶם֙ לֵֽאלֹהִ֔ים וְעַבְדִּ֥י דָוִ֖ד נָשִׂ֣יא בְתוֹכָ֑ם אֲנִ֥י יְהוָ֖ה דִּבַּֽרְתִּי׃
25 ೨೫ “‘ನಾನು ಅವರೊಂದಿಗೆ ಸಮಾಧಾನದ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು; ದುಷ್ಟಮೃಗಗಳು ದೇಶದಲ್ಲಿ ಇನ್ನಿರದಂತೆ ಮಾಡುವೆನು; ನನ್ನ ಜನರು ಕಾಡಿನಲ್ಲಿ ನಿರ್ಭಯವಾಗಿ ವಾಸಿಸುವರು, ಅರಣ್ಯದಲ್ಲಿ ಹಾಯಾಗಿ ನಿದ್ರಿಸುವರು.
וְכָרַתִּ֤י לָהֶם֙ בְּרִ֣ית שָׁל֔וֹם וְהִשְׁבַּתִּ֥י חַיָּֽה־רָעָ֖ה מִן־הָאָ֑רֶץ וְיָשְׁב֤וּ בַמִּדְבָּר֙ לָבֶ֔טַח וְיָשְׁנ֖וּ בַּיְּעָרִֽים׃
26 ೨೬ ನಾನು ಅವರನ್ನೂ, ನನ್ನ ಪರ್ವತದ ಸುತ್ತಣ ಪ್ರದೇಶಗಳನ್ನೂ ಆಶೀರ್ವದಿಸಿ ಸುಖಪಡಿಸುವೆನು; ಕಾಲಕ್ಕೆ ಸರಿಯಾಗಿ ಮಳೆಯನ್ನು ಸುರಿಸುವೆನು; ದಿವ್ಯಾಶೀರ್ವಾದದ ಮಳೆಯು ಆಗುವುದು.
וְנָתַתִּ֥י אוֹתָ֛ם וּסְבִיב֥וֹת גִּבְעָתִ֖י בְּרָכָ֑ה וְהוֹרַדְתִּ֤י הַגֶּ֙שֶׁם֙ בְּעִתּ֔וֹ גִּשְׁמֵ֥י בְרָכָ֖ה יִֽהְיֽוּ׃
27 ೨೭ ತೋಟದ ಮರಗಳು ಹಣ್ಣುಬಿಡುವುದು; ಹೊಲಗಳು ಒಳ್ಳೆಯ ಬೆಳೆಯನ್ನು ಕೊಡುವುದು; ಜನರು ಸ್ವದೇಶದಲ್ಲಿ ನೆಮ್ಮದಿಯಾಗಿರುವರು; ಅವರ ಮೇಲೆ ಹೇರಿದ ನೊಗದ ಬಂಧನಗಳನ್ನು ಮುರಿದು ಹಾಕಿ, ಅವರನ್ನು ದಾಸರಾಗಿ ಮಾಡಿಕೊಂಡವರ ಅಧೀನದಿಂದ ಬಿಡಿಸಿದಾಗ ನಾನೇ ಯೆಹೋವನು ಎಂದು ಅವರಿಗೆ ದೃಢವಾಗುವುದು.
וְנָתַן֩ עֵ֨ץ הַשָּׂדֶ֜ה אֶת־פִּרְי֗וֹ וְהָאָ֙רֶץ֙ תִּתֵּ֣ן יְבוּלָ֔הּ וְהָי֥וּ עַל־אַדְמָתָ֖ם לָבֶ֑טַח וְֽיָדְע֞וּ כִּי־אֲנִ֣י יְהוָ֗ה בְּשִׁבְרִי֙ אֶת־מֹט֣וֹת עֻלָּ֔ם וְהִ֨צַּלְתִּ֔ים מִיַּ֖ד הָעֹבְדִ֥ים בָּהֶֽם׃
28 ೨೮ “‘ಅಂದಿನಿಂದ ಅವರನ್ನು ಅನ್ಯಜನರು ಸೂರೆಮಾಡುವುದಿಲ್ಲ, ಕಾಡು ಮೃಗಗಳು ಅವರನ್ನು ತಿನ್ನುವುದಿಲ್ಲ; ಅವರು ಯಾರಿಗೂ ಹೆದರದೆ ನೆಮ್ಮದಿಯಾಗಿ ವಾಸಿಸುವರು.
וְלֹא־יִהְי֨וּ ע֥וֹד בַּז֙ לַגּוֹיִ֔ם וְחַיַּ֥ת הָאָ֖רֶץ לֹ֣א תֹאכְלֵ֑ם וְיָשְׁב֥וּ לָבֶ֖טַח וְאֵ֥ין מַחֲרִֽיד׃
29 ೨೯ ನಾನು ಅವರಿಗಾಗಿ ಪ್ರಸಿದ್ಧ ಫಲವೃಕ್ಷಗಳನ್ನು ಬೆಳೆಯಿಸುವೆನು, ಕ್ಷಾಮವು ಅವರ ದೇಶವನ್ನು ಇನ್ನು ಹಾಳುಮಾಡುವುದಿಲ್ಲ, ಅವರು ಅನ್ಯಜನರ ತಿರಸ್ಕಾರಕ್ಕೆ ಗುರಿಯಾಗುವುದಿಲ್ಲ.
וַהֲקִמֹתִ֥י לָהֶ֛ם מַטָּ֖ע לְשֵׁ֑ם וְלֹֽא־יִהְי֨וּ ע֜וֹד אֲסֻפֵ֤י רָעָב֙ בָּאָ֔רֶץ וְלֹֽא־יִשְׂא֥וּ ע֖וֹד כְּלִמַּ֥ת הַגּוֹיִֽם׃
30 ೩೦ “‘ಆಗ ಅವರು ತಮ್ಮ ದೇವರಾದ ಯೆಹೋವನೆಂಬ ನಾನು ತಮ್ಮೊಂದಿಗೆ ಇದ್ದೇನೆಂತಲೂ, ಇಸ್ರಾಯೇಲ್ ವಂಶದವರಾದ ತಾವು ತನ್ನ ಜನರಾಗಿದ್ದೇವೆಂತಲೂ ತಿಳಿದುಕೊಳ್ಳುವರು’” ಇದು ಕರ್ತನಾದ ಯೆಹೋವನ ನುಡಿ.
וְיָדְע֗וּ כִּ֣י אֲנִ֧י יְהוָ֛ה אֱלֹהֵיהֶ֖ם אִתָּ֑ם וְהֵ֗מָּה עַמִּי֙ בֵּ֣ית יִשְׂרָאֵ֔ל נְאֻ֖ם אֲדֹנָ֥י יְהוִֽה׃
31 ೩೧ “ನೀವು ನನ್ನ ಕುರಿಗಳು, ನನ್ನ ಮೇವಿನ ಮಂದೆಯ ಕುರಿಗಳು; ನರಪ್ರಾಣಿಗಳಾದ ನಿಮಗೆ ನಾನು ದೇವರು ಎಂದು ಕರ್ತನಾದ ಯೆಹೋವನು ಅನ್ನುತ್ತಾನೆ.”
וְאַתֵּ֥ן צֹאנִ֛י צֹ֥אן מַרְעִיתִ֖י אָדָ֣ם אַתֶּ֑ם אֲנִי֙ אֱלֹ֣הֵיכֶ֔ם נְאֻ֖ם אֲדֹנָ֥י יְהוִֽה׃ פ

< ಯೆಹೆಜ್ಕೇಲನು 34 >