< ಯೆಹೆಜ್ಕೇಲನು 34 >
1 ೧ ಯೆಹೋವನು ಈ ಮಾತನ್ನು ನನಗೆ ದಯಪಾಲಿಸಿದನು,
Og Herrens ord kom til mig, og det lød så:
2 ೨ “ನರಪುತ್ರನೇ, ಇಸ್ರಾಯೇಲಿನ ಮಂದೆಯ ಕುರುಬರಿಗೆ ಈ ಪ್ರವಾದನೆಯನ್ನು ನುಡಿ, ಪ್ರವಾದಿಸಿ ಹೀಗೆ ನುಡಿ, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ಅಯ್ಯೋ, ಸ್ವಂತ ಹೊಟ್ಟೆಯನ್ನು ತುಂಬಿಸಿಕೊಳ್ಳುವ ಇಸ್ರಾಯೇಲಿನ ಕುರುಬರ ಗತಿಯನ್ನು ಏನು ಹೇಳಲಿ! ಕುರಿಗಳನ್ನು ಮೇಯಿಸುವುದು ಕುರುಬರ ಧರ್ಮವಲ್ಲವೋ?
Menneskesønn! Spå mot Israels hyrder, spå og si til dem, til hyrdene: Sa sier Herren, Israels Gud: Ve Israels hyrder, som røkter sig selv! Er det ikke hjorden hyrdene skal røkte?
3 ೩ ನೀವು ಕೊಬ್ಬಿನ ಮಾಂಸವನ್ನು ತಿನ್ನುತ್ತೀರಿ, ಉಣ್ಣೆಯ ಬಟ್ಟೆಯನ್ನು ಹಾಕುತ್ತೀರಿ, ಕೊಬ್ಬಿದ ಕುರಿಗಳನ್ನು ಕೊಲ್ಲುತ್ತೀರಿ; ಆದರೆ ಕುರಿಗಳನ್ನು ಮೇಯಿಸುವುದಿಲ್ಲ.
Fettet eter I, og med ullen klær I eder, det fete slakter I; hjorden røkter I ikke.
4 ೪ ನೀವು ದುರ್ಬಲವಾದವುಗಳನ್ನು ಬಲಗೊಳಿಸುವುದಿಲ್ಲ, ರೋಗದವುಗಳನ್ನು ಸ್ವಸ್ಥಮಾಡುವುದಿಲ್ಲ, ಮುರಿದ ಅಂಗಗಳನ್ನು ಕಟ್ಟುವುದಿಲ್ಲ, ಕಳೆದು ಹೋದವುಗಳನ್ನು ಹುಡುಕುವುದಿಲ್ಲ, ಓಡಿಸಿದನ್ನು ನೀವು ಹಿಂದಕ್ಕೆ ತರುವುದಿಲ್ಲ, ಆದರೆ ಬಲಾತ್ಕಾರದಿಂದ ಮತ್ತು ಕ್ರೂರತನದಿಂದ ಅವುಗಳ ಮೇಲೆ ದೊರೆತನ ಮಾಡುತ್ತೀರಿ.
Det svake har I ikke styrket, og det syke har I ikke lægt, og det sønderbrutte har I ikke forbundet, og det bortdrevne har I ikke ført tilbake, og det fortapte har I ikke opsøkt, men med vold og med hårdhet har I hersket over dem.
5 ೫ ಕುರುಬರು ಇಲ್ಲವಾದುದರಿಂದ ಅವು ಚದುರಿ ಹೋದವು; ಚದುರಿ ಹೋಗಿ, ಕಾಡಿನ ಸಕಲ ಮೃಗಗಳಿಗೆ ತುತ್ತಾದವು.
Og således blev de adspredt, fordi de ingen hyrde hadde; de blev til føde for alle markens ville dyr og blev adspredt.
6 ೬ ನನ್ನ ಕುರಿಗಳು ಪರ್ವತಗಳ ಮೇಲೆಯೂ, ಎತ್ತರವಾದ ಪ್ರತಿಯೊಂದು ಬೆಟ್ಟದ ಮೇಲೆಯೂ ಅಲೆದಾಡುತ್ತಿವೆ; ಹೌದು, ನನ್ನ ಮಂದೆಯು ಭೂಮಂಡಲದಲ್ಲೆಲ್ಲಾ ಚದುರಿಹೋಗಿದೆ; ಯಾರೂ ಅವುಗಳ ಹಿಂದೆ ಹೋಗಿ ಹುಡುಕಲಿಲ್ಲ.
Min hjord farer vill på alle fjell og på hver høi bakke, og over hele landet er min hjord spredt; det er ingen som spør, og ingen som leter efter den.
7 ೭ “‘ಆದುದರಿಂದ ಕುರುಬರೇ, ಯೆಹೋವನ ಮಾತನ್ನು ಕೇಳಿರಿ,
Hør derfor Herrens ord, I hyrder!
8 ೮ ಕರ್ತನಾದ ಯೆಹೋವನು ಇಂತೆನ್ನುತ್ತಾನೆ “ಅಯ್ಯೋ, ನನ್ನ ಮಂದೆಯು ಕೊಳ್ಳೆಯಾದವು, ಕಾಡಿನ ಸಕಲ ಮೃಗಗಳಿಗೆ ತುತ್ತಾದವು, ಕುರುಬನಿಲ್ಲದೆ ಬಯಲಿನ ಮೃಗಗಳಿಗೆಲ್ಲಾ ಆಹಾರವಾಯಿತು, ನನ್ನ ಕುರುಬರು ನನ್ನ ಕುರಿಗಳನ್ನು ಹುಡುಕಲಿಲ್ಲ, ಅವರು ಸ್ವಂತ ಹೊಟ್ಟೆಯನ್ನು ತುಂಬಿಸಿಕೊಂಡರೇ ಹೊರತು ನನ್ನ ಕುರಿಗಳ ಹೊಟ್ಟೆಯನ್ನು ನೋಡಲೇ ಇಲ್ಲ.”
Så sant jeg lever, sier Herren, Israels Gud, sannelig, siden min hjord er blitt til rov, og den er blitt til føde for alle markens ville dyr, fordi den var uten hyrde, og mine hyrder ikke spurte efter min hjord, men hyrdene røktet sig selv og ikke røktet min hjord -
9 ೯ “‘ಆದಕಾರಣ, ಕುರುಬರೇ, ಯೆಹೋವನ ವಾಕ್ಯವನ್ನು ಕೇಳಿರಿ,
derfor, I hyrder, hør Herrens ord!
10 ೧೦ ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಆಹಾ, ನನ್ನ ಜೀವದಾಣೆ, ನಾನು ಕುರುಬರಿಗೆ ವಿರುದ್ಧವಾಗಿದ್ದೇನೆ; ಅವರು ನನ್ನ ಕುರಿಗಳ ಲೆಕ್ಕವನ್ನು ನನಗೆ ಒಪ್ಪಿಸಬೇಕು; ನನ್ನ ಕುರಿಗಳನ್ನು ಮೇಯಿಸುವ ಕೆಲಸದಿಂದ ಅವರನ್ನು ತೆಗೆದುಬಿಡುವೆನು; ಆ ಕುರುಬರು ಇನ್ನು ಸ್ವಂತ ಹೊಟ್ಟೆಯನ್ನು ತುಂಬಿಸಿಕೊಳ್ಳುವುದಿಲ್ಲ; ನನ್ನ ಕುರಿಗಳು ಆಹಾರವಾಗಿ, ಅವರ ಬಾಯಿಗೆ ಬೀಳದಂತೆ ಅವುಗಳನ್ನು ರಕ್ಷಿಸುವೆನು.”
Så sier Herren, Israels Gud: Se, jeg kommer over hyrdene og vil kreve min hjord av deres hånd og la dem ophøre med å røkte hjorden, så hyrdene ikke mere skal røkte sig selv, og jeg vil redde min hjord av deres munn, så den ikke skal være til føde for dem.
11 ೧೧ “‘ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಆಹಾ, ನಾನೇ ನನ್ನ ಕುರಿಗಳನ್ನು ಹಿಂಬಾಲಿಸಿ ಹುಡುಕುವೆನು.
For så sier Herren, Israels Gud: Se, jeg kommer og vil spørre efter min hjord og se til den.
12 ೧೨ ಮಂದೆಯ ಕುರುಬನು ಸುತ್ತುಮುತ್ತಲು ಚದುರಿ ಹೋದ ತನ್ನ ಕುರಿಗಳನ್ನು ಹುಡುಕುವ ಹಾಗೆ, ನಾನು ನನ್ನ ಕುರಿಗಳನ್ನು ಹುಡುಕುವೆನು; ಕಾರ್ಮುಗಿಲಿನ ದುರ್ದಿನದಲ್ಲಿ ಚದುರಿಹೋದ ಎಲ್ಲಾ ಸ್ಥಳಗಳಿಂದ ಅವುಗಳನ್ನು ರಕ್ಷಿಸುವೆನು.
Likesom en hyrde ser til sin hjord på den dag han er iblandt sine adspredte får, således vil jeg se til mine får og redde dem fra alle de steder hvor de er adspredt på en dag med skyer og skodde.
13 ೧೩ “‘“ಜನಾಂಗಗಳ ವಶದಿಂದ ಅವುಗಳನ್ನು ತಪ್ಪಿಸಿ ದೇಶಗಳಿಂದ ಒಟ್ಟುಗೂಡಿಸಿ, ಸ್ವದೇಶಕ್ಕೆ ಬರಮಾಡಿ, ಇಸ್ರಾಯೇಲಿನ ಪರ್ವತಗಳ ಮೇಲೆಯೂ, ಹಳ್ಳಗಳ ಬಳಿಯಲ್ಲಿಯೂ, ದೇಶದ ಎಲ್ಲಾ ಪ್ರದೇಶಗಳಲ್ಲಿಯೂ ಮೇಯಿಸುವೆನು.
Og jeg vil føre dem ut fra folkene og samle dem fra landene og føre dem til deres eget land, og jeg vil røkte dem på Israels fjell, i dalene og på alle de steder i landet hvor de bor.
14 ೧೪ ಅವುಗಳನ್ನು ಒಳ್ಳೆಯ ಮೇವಿನಿಂದ ಮೇಯಿಸುವೆನು; ಅವುಗಳ ಹುಲ್ಲುಗಾವಲು ಇಸ್ರಾಯೇಲಿನ ಎತ್ತರವಾದ ಬೆಟ್ಟಗಳಲ್ಲಿರುವುದು; ಅವು ಒಳ್ಳೆಯ ಮಂದೆಯಲ್ಲಿ ಮಲಗಿ; ಇಸ್ರಾಯೇಲಿನ ಪರ್ವತಗಳಲ್ಲಿ ಪುಷ್ಟಿಯುಳ್ಳ ಮೇವನ್ನು ಮೇಯುವವು.
På en god beitemark vil jeg la dem beite, på Israels høie fjell skal deres havnegang være; der skal de hvile på en god havnegang, og på en fet beitemark skal de beite på Israels fjell.
15 ೧೫ ನಾನೇ ನನ್ನ ಕುರಿಗಳನ್ನು ಮೇಯಿಸಿ, ಹಾಯಾಗಿ ಮಲಗುವಂತೆ ಮಾಡುವೆನು” ಇದು ಕರ್ತನಾದ ಯೆಹೋವನ ನುಡಿ.
Jeg vil selv fø min hjord og selv la den hvile, sier Herren, Israels Gud.
16 ೧೬ “ತಪ್ಪಿಸಿಕೊಂಡದ್ದನ್ನು ಹುಡುಕುವೆನು, ಓಡಿಸಿದ್ದನ್ನು ಮಂದೆಗೆ ಸೇರಿಸುವೆನು, ದುರ್ಬಲವಾದದ್ದನ್ನು ಬಲಗೊಳಿಸುವೆನು, ಮುರಿದ ಅಂಗವನ್ನು ಕಟ್ಟುವೆನು; ಬಲಿತ ಕೊಬ್ಬಿದ ಕುರಿಗಳನ್ನು ಸಂಹರಿಸುವೆನು; ನಾನೇ ಅವುಗಳಿಗೆ ನ್ಯಾಯದಂಡನೆ ಎಂಬ ಮೇವನ್ನು ತಿನ್ನಿಸುವೆನು.”
Det fortapte vil jeg opsøke, og det bortdrevne vil jeg føre tilbake, og det sønderbrutte vil jeg forbinde, og det syke vil jeg styrke. Men det fete og det sterke vil jeg ødelegge; jeg vil røkte det efter hvad rett er.
17 ೧೭ “‘ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನನ್ನ ಹಿಂಡೇ, ಇಗೋ, ನಾನು ನಿಮ್ಮಲ್ಲಿನ ಕುರಿಮೇಕೆಗಳಿಗೂ, ಟಗರುಹೋತಗಳಿಗೂ ಮಧ್ಯವರ್ತಿಯಾಗಿ ನ್ಯಾಯ ತೀರಿಸುವೆನು.
Og I, min hjord, så sier Herren, Israels Gud: Se, jeg dømmer mellem får og får, mellem værer og bukker.
18 ೧೮ (ಟಗರುಹೋತಗಳೇ, ) ಒಳ್ಳೆಯ ಮೇವನ್ನು ನೀವು ಮೇದುಬಿಟ್ಟು ಉಳಿದ ಮೇವನ್ನು ತುಳಿದು ಕಾಲಕಸ ಮಾಡಿದ್ದು ಅಲ್ಪಕಾರ್ಯವೋ? ತಿಳಿನೀರನ್ನು ಕುಡಿದುಬಿಟ್ಟು, ಉಳಿದದ್ದನ್ನು ಕಾಲಿನಿಂದ ಕಲಕಿ ಹೊಲಸು ಮಾಡಿದ್ದು ಸಣ್ಣ ಕೆಲಸವೋ?
Er det ikke nok med at I får beite den beste beitemark, siden I trår ned resten av eders beitemark med eders føtter? Er det ikke nok at I får drikke det klare vann, siden I gjør resten grumset med eders føtter?
19 ೧೯ ನೀವು ತುಳಿದು ಕಾಲಕಸ ಮಾಡಿದ್ದನ್ನು ನನ್ನ ಕುರಿಗಳು ಮೇಯಬೇಕಾಯಿತು; ನೀವು ಕಾಲಿನಿಂದ ಕಲಕಿ ಹೊಲಸು ಮಾಡಿದ್ದನ್ನು ಅವು ಕುಡಿಯಬೇಕಾಯಿತು.”
Og min hjord - skal den ete det som er trådt ned av eders føtter, og drikke det som er gjort grumset av eders føtter?
20 ೨೦ “‘ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಇಗೋ, ನಾನೇ ಕೊಬ್ಬಿದ ಟಗರುಹೋತಗಳಿಗೂ, ಬಡ ಕುರಿಮೇಕೆಗಳಿಗೂ ನ್ಯಾಯತೀರಿಸುತ್ತೇನೆ.
Derfor sier Herren, Israels Gud, så til dem: Se, jeg kommer og vil dømme mellem de fete får og de magre får.
21 ೨೧ ಏಕೆಂದರೆ (ಟಗರುಹೋತಗಳೇ, ) ನೀವು ಕುರಿಮೇಕೆಗಳನ್ನು ಪಕ್ಕೆಯಿಂದಲೂ, ಹೆಗಲಿನಿಂದಲೂ ನೂಕುತ್ತಾ, ದುರ್ಬಲವಾದವುಗಳನ್ನು ಕೊಂಬುಗಳಿಂದ ಹಾಯುತ್ತಾ, ನನ್ನ ಹಿಂಡನ್ನು ಚದುರಿಸಿಬಿಟ್ಟಿರಿ.
Fordi I støter alle de svake bort med side og bog og stanger dem med eders horn, til I får adspredt dem og drevet dem utenfor,
22 ೨೨ ಆದಕಾರಣ ನನ್ನ ಹಿಂಡು ಇನ್ನೆಂದಿಗೂ ಕೊಳ್ಳೆಯಾಗದಂತೆ ನಾನು ಅದನ್ನು ರಕ್ಷಿಸಿ, ಟಗರುಹೋತಗಳಿಗೂ, ಕುರಿಮೇಕೆಗಳಿಗೂ ನ್ಯಾಯತೀರಿಸುವೆನು.”
så vil jeg frelse min hjord, og de skal ikke mere være til rov, og jeg vil dømme mellem får og får.
23 ೨೩ “‘ನನ್ನ ಹಿಂಡನ್ನು ಕಾಯಲಿಕ್ಕೆ ಒಬ್ಬನೇ ಕುರುಬನನ್ನು ನೇಮಿಸುವೆನು; ನನ್ನ ಸೇವಕನಾದ ದಾವೀದನೆಂಬ ಆ ಕುರುಬನು ಅದನ್ನು ಮೇಯಿಸುವನು; ಹೌದು, ಅದರ ಕುರುಬನಾಗಿ ಅದನ್ನು ಮೇಯಿಸುತ್ತಾ ಬರುವನು.
Og jeg vil opreise én hyrde over dem, og han skal røkte dem - min tjener David; han skal røkte dem, han skal være deres hyrde.
24 ೨೪ ಯೆಹೋವನಾದ ನಾನು ನನ್ನ ಜನರ ದೇವರಾಗಿರುವೆನು; ನನ್ನ ಸೇವಕನಾದ ದಾವೀದನು ಅವರನ್ನಾಳುವ ಅರಸನಾಗಿರುವನು; ಯೆಹೋವನಾದ ನಾನೇ ಇದನ್ನು ನುಡಿದಿದ್ದೇನೆ.
Og jeg, Herren, vil være deres Gud, og min tjener David skal være fyrste blandt dem; jeg, Herren, har talt.
25 ೨೫ “‘ನಾನು ಅವರೊಂದಿಗೆ ಸಮಾಧಾನದ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು; ದುಷ್ಟಮೃಗಗಳು ದೇಶದಲ್ಲಿ ಇನ್ನಿರದಂತೆ ಮಾಡುವೆನು; ನನ್ನ ಜನರು ಕಾಡಿನಲ್ಲಿ ನಿರ್ಭಯವಾಗಿ ವಾಸಿಸುವರು, ಅರಣ್ಯದಲ್ಲಿ ಹಾಯಾಗಿ ನಿದ್ರಿಸುವರು.
Og jeg vil gjøre en fredspakt med dem og utrydde ville dyr av landet, og de skal bo trygt i ørkenen og sove i skogene.
26 ೨೬ ನಾನು ಅವರನ್ನೂ, ನನ್ನ ಪರ್ವತದ ಸುತ್ತಣ ಪ್ರದೇಶಗಳನ್ನೂ ಆಶೀರ್ವದಿಸಿ ಸುಖಪಡಿಸುವೆನು; ಕಾಲಕ್ಕೆ ಸರಿಯಾಗಿ ಮಳೆಯನ್ನು ಸುರಿಸುವೆನು; ದಿವ್ಯಾಶೀರ್ವಾದದ ಮಳೆಯು ಆಗುವುದು.
Og jeg vil gjøre dem og landet omkring min haug til en velsignelse; jeg vil sende regn i rette tid; velsignelses regnstrømmer skal det være.
27 ೨೭ ತೋಟದ ಮರಗಳು ಹಣ್ಣುಬಿಡುವುದು; ಹೊಲಗಳು ಒಳ್ಳೆಯ ಬೆಳೆಯನ್ನು ಕೊಡುವುದು; ಜನರು ಸ್ವದೇಶದಲ್ಲಿ ನೆಮ್ಮದಿಯಾಗಿರುವರು; ಅವರ ಮೇಲೆ ಹೇರಿದ ನೊಗದ ಬಂಧನಗಳನ್ನು ಮುರಿದು ಹಾಕಿ, ಅವರನ್ನು ದಾಸರಾಗಿ ಮಾಡಿಕೊಂಡವರ ಅಧೀನದಿಂದ ಬಿಡಿಸಿದಾಗ ನಾನೇ ಯೆಹೋವನು ಎಂದು ಅವರಿಗೆ ದೃಢವಾಗುವುದು.
Markens trær skal gi sin frukt, og jorden skal gi sin grøde, og de skal bo trygt i sitt land, og de skal kjenne at jeg er Herren, når jeg bryter stengene på deres åk og frir dem av deres hånd som holdt dem i trældom.
28 ೨೮ “‘ಅಂದಿನಿಂದ ಅವರನ್ನು ಅನ್ಯಜನರು ಸೂರೆಮಾಡುವುದಿಲ್ಲ, ಕಾಡು ಮೃಗಗಳು ಅವರನ್ನು ತಿನ್ನುವುದಿಲ್ಲ; ಅವರು ಯಾರಿಗೂ ಹೆದರದೆ ನೆಮ್ಮದಿಯಾಗಿ ವಾಸಿಸುವರು.
Og de skal ikke mere være et rov for folkene, og jordens ville dyr skal ikke fortære dem; de skal bo trygt, og ingen skal skremme dem.
29 ೨೯ ನಾನು ಅವರಿಗಾಗಿ ಪ್ರಸಿದ್ಧ ಫಲವೃಕ್ಷಗಳನ್ನು ಬೆಳೆಯಿಸುವೆನು, ಕ್ಷಾಮವು ಅವರ ದೇಶವನ್ನು ಇನ್ನು ಹಾಳುಮಾಡುವುದಿಲ್ಲ, ಅವರು ಅನ್ಯಜನರ ತಿರಸ್ಕಾರಕ್ಕೆ ಗುರಿಯಾಗುವುದಿಲ್ಲ.
Og jeg vil la en plantning vokse op for dem, som skal bli dem til navnkundighet, og de skal ikke mere bli bortrevet av hunger i landet og ikke mere bære folkenes hån.
30 ೩೦ “‘ಆಗ ಅವರು ತಮ್ಮ ದೇವರಾದ ಯೆಹೋವನೆಂಬ ನಾನು ತಮ್ಮೊಂದಿಗೆ ಇದ್ದೇನೆಂತಲೂ, ಇಸ್ರಾಯೇಲ್ ವಂಶದವರಾದ ತಾವು ತನ್ನ ಜನರಾಗಿದ್ದೇವೆಂತಲೂ ತಿಳಿದುಕೊಳ್ಳುವರು’” ಇದು ಕರ್ತನಾದ ಯೆಹೋವನ ನುಡಿ.
Og de skal kjenne at jeg, Herren deres Gud, er med dem, og at de, Israels hus, er mitt folk, sier Herren, Israels Gud.
31 ೩೧ “ನೀವು ನನ್ನ ಕುರಿಗಳು, ನನ್ನ ಮೇವಿನ ಮಂದೆಯ ಕುರಿಗಳು; ನರಪ್ರಾಣಿಗಳಾದ ನಿಮಗೆ ನಾನು ದೇವರು ಎಂದು ಕರ್ತನಾದ ಯೆಹೋವನು ಅನ್ನುತ್ತಾನೆ.”
Og I, min hjord, den hjord jeg før, I er mennesker; jeg er eders Gud, sier Herren, Israels Gud.