< ಯೆಹೆಜ್ಕೇಲನು 35 >
1 ೧ ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು,
Neno la Bwana likanijia kusema:
2 ೨ “ನರಪುತ್ರನೇ, ನೀನು ಸೇಯೀರ್ ಬೆಟ್ಟದ ಸೀಮೆಯ ವಿರುದ್ಧವಾಗಿ ಅದಕ್ಕೆ ಈ ಪ್ರವಾದನೆಯನ್ನು ನುಡಿ,
“Mwanadamu, elekeza uso wako juu ya mlima Seiri, utabiri dhidi yake
3 ೩ ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ಸೇಯೀರ್ ಬೆಟ್ಟವೇ, ಇಗೋ, ನಾನು ನಿನಗೆ ವಿರುದ್ಧವಾಗಿದ್ದೇನೆ; ನಾನು ನಿನ್ನ ಸೀಮೆಯ ಮೇಲೆ ಕೈಯೆತ್ತಿ ಅದನ್ನು ಹಾಳು ಮಾಡುವೆನು.
na useme: ‘Hili ndilo Bwana Mwenyezi asemalo: Mimi ni kinyume nawe, ee mlima Seiri, nami nitanyoosha mkono wangu dhidi yako na kukufanya ukiwa na usiyekaliwa na watu wala kulimika.
4 ೪ ನಾನು ನಿನ್ನ ಪಟ್ಟಣಗಳನ್ನು ನಾಶಪಡಿಸಲು ನೀನು ಹಾಳಾಗುವಿ; ಆಗ ನಾನೇ ಯೆಹೋವನು ಎಂದು ತಿಳಿದುಕೊಳ್ಳುವಿ.
Nitaifanya miji yako kuwa magofu nawe utakuwa ukiwa. Ndipo utakapojua kuwa Mimi ndimi Bwana.
5 ೫ “‘ನೀನು ಇಸ್ರಾಯೇಲರ ಮೇಲೆ ದೀರ್ಘ ದ್ವೇಷವಿಟ್ಟು, ಅವರ ಅಪರಾಧದ ಕಡೆಯ ಕಾಲದಲ್ಲಿ ಆಪತ್ತು ಸಂಭವಿಸಿದಾಗ, ಅವರನ್ನು ಕತ್ತಿಯ ಬಾಯಿಗೆ ಗುರಿಮಾಡಿದೆ.
“‘Kwa sababu ulificha moyoni uadui wa siku nyingi nawe ukawatoa Waisraeli wauawe kwa upanga wakati wa maafa yao, wakati adhabu yake ilipofikia kilele chake,
6 ೬ ಆದುದರಿಂದ ನನ್ನ ಜೀವದಾಣೆ, ನಾನು ನಿನ್ನನ್ನು ರಕ್ತಮಯವಾಗಿ ಮಾಡುವೆನು, ರಕ್ತದ ಕೋಡಿಯು ನಿನ್ನನ್ನು ಬೆನ್ನಟ್ಟುವುದು; ನೀನು ರಕ್ತ ಸುರಿಸುವುದಕ್ಕೆ ಹೇಸದೆ ಹೋದಕಾರಣ ರಕ್ತಪ್ರವಾಹವೇ ನಿನ್ನ ಬೆನ್ನಹತ್ತುವುದು’” ಇದು ಕರ್ತನಾದ ಯೆಹೋವನ ನುಡಿ.
kwa hiyo hakika kama niishivyo, asema Bwana Mwenyezi, nitakutia katika umwagaji damu nao utakufuatia. Kwa kuwa hakuchukia kumwaga damu, kumwaga damu kutakufuatia.
7 ೭ “ಸೇಯೀರ್ ಬೆಟ್ಟವೇ, ನಾನು ನಿನ್ನ ಸೀಮೆಯನ್ನು ಹಾಳುಮಾಡಿ, ಅದರೊಳಗೆ ಹೋಗುವವರನ್ನೂ, ಬರುವವರನ್ನೂ ಕಡಿದುಹಾಕುವೆನು.
Nitaufanya Mlima Seiri ukiwa na usiokaliwa na watu wala kulimika na kuukatilia mbali na wote wanaokuja na wanaokwenda.
8 ೮ ಅದರ ಪರ್ವತಗಳನ್ನು ನಿನ್ನವರ ಹೆಣಗಳಿಂದ ತುಂಬಿಸುವೆನು; ಖಡ್ಗದಿಂದ ಹತರಾದವರು ನಿನ್ನ ಗುಡ್ಡಗಳಲ್ಲಿ, ಕಣಿವೆಗಳಲ್ಲಿ, ಹಳ್ಳಗಳಲ್ಲಿ ಬಿದ್ದುಹೋಗುವರು.
Nitaijaza milima yenu kwa watu wake waliouawa, wale waliouawa kwa upanga wataanguka juu ya vilima vyako na katika mabonde yako na katika makorongo yako yote.
9 ೯ ನಾನು ನಿನ್ನನ್ನು ನಿತ್ಯನಾಶನಕ್ಕೆ ಗುರಿಮಾಡುವೆನು; ನಿನ್ನ ಪಟ್ಟಣಗಳು ನಿರ್ಜನವಾಗುವವು; ಆಗ ನಾನೇ ಯೆಹೋವನು ಎಂದು ನೀನು ತಿಳಿದುಕೊಳ್ಳುವೆ.”
Nitakufanya ukiwa milele, watu hawataishi katika miji yako. Ndipo utakapojua kuwa Mimi ndimi Bwana.
10 ೧೦ ನೀನು, “ಈ ಎರಡು ಜನಾಂಗಗಳೂ ಈ ಎರಡು ದೇಶಗಳೂ ನನ್ನ ವಶವಾಗುವವು” ಎಂದೂ ಹೇಳಿದ್ದರಿಂದ, ನಾವು ಅವುಗಳನ್ನು ವಶಮಾಡಿಕೊಳ್ಳುತ್ತೇವೆ ಎಂದು ಅಂದುಕೊಂಡು, ಅಲ್ಲಿ ನನ್ನ ಸಾನ್ನಿಧ್ಯವನ್ನು ಅಲಕ್ಷ್ಯಮಾಡಿದ್ದರಿಂದ,
“‘Kwa sababu umesema, “Mataifa haya mawili na nchi hizi zitakuwa zetu nasi tutazimiliki,” ingawa hata mimi Bwana nilikuwa huko,
11 ೧೧ “ನನ್ನ ಜೀವದಾಣೆ, ನೀನು ನನ್ನ ಜನರನ್ನು ದ್ವೇಷಿಸಿ, ಅವರ ಮೇಲಿಟ್ಟ ಕೋಪಕ್ಕೂ, ಹೊಟ್ಟೆಕಿಚ್ಚಿಗೂ ನಾನು ನಿನ್ನ ವಿರುದ್ಧವಾಗಿ ನ್ಯಾಯ ತೀರಿಸಿದ ಮೇಲೆ, ನಾನು ಅವರ ಮಧ್ಯದಲ್ಲಿ ನನ್ನನ್ನು ತಿಳಿಯಪಡಿಸುತ್ತೇನೆ.
kwa hiyo hakika kama niishivyo, asema Bwana Mwenyezi, nitakutenda kwa kadiri ya hasira na wivu uliouonyesha katika chuki yako juu yao nami nitafanya nijulikane miongoni mwao wakati nitakapokuhukumu.
12 ೧೨ ಆಗ ನಾನೇ ಯೆಹೋವನು ಎಂದು ನೀನು ತಿಳಿದುಕೊಳ್ಳುವೆ. ನೀನು ಇಸ್ರಾಯೇಲಿನ ಪರ್ವತಗಳನ್ನು ನೋಡಿ, ಆಹಾ, ಹಾಳಾದವು! ನಮಗೆ ತುತ್ತಾಗಿವೆ ಎಂದು ಮಾಡಿದ ದೂಷಣೆಗಳು ಯೆಹೋವನಾದ ನನ್ನ ಕಿವಿಗೆ ಬಿದ್ದಿವೆ ಎಂಬುದು ನಿನಗೆ ಗೊತ್ತಾಗುವುದು.
Ndipo utakapojua kuwa Mimi Bwana nimesikia mambo yote ya dharau uliyosema dhidi ya milima ya Israeli. Ulisema, “Wamefanyika ukiwa na kutiwa mikononi mwetu tuwararue.”
13 ೧೩ ನಿನ್ನವರು ಬಾಯಿ ತೆರೆದು, ನನ್ನ ವಿರುದ್ಧವಾಗಿ ಆಡಿದ ಮಾತುಗಳನ್ನು ಕೇಳಿದ್ದೇನೆ.”
Ulijigamba dhidi yangu na kusema maneno dhidi yangu bila kujizuia, nami nikayasikia.
14 ೧೪ ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನಾನು ನಿನ್ನನ್ನು ಹಾಳುಮಾಡಿ, ಲೋಕವನ್ನೆಲ್ಲಾ ಸಂತೋಷಪಡಿಸುವೆನು.
Hili ndilo Bwana Mwenyezi asemalo: Wakati dunia yote inashangilia nitakufanya ukiwa.
15 ೧೫ ಇಸ್ರಾಯೇಲರ ಸ್ವತ್ತಿನ ನಾಶಕ್ಕೆ ನೀನು ಹೇಗೆ ಸಂತೋಷಪಟ್ಟೆಯೋ ಹಾಗೆಯೇ, ನಿನ್ನ ನಾಶಕ್ಕೆ ಲೋಕವೆಲ್ಲಾ ಸಂತೋಷಪಡುವಂತೆ ಮಾಡುವೆನು; ಸೇಯೀರ್ ಬೆಟ್ಟವೇ, ನೀನು ಹಾಳಾಗುವಿ; ಹೌದು, ಎದೋಮ್ ಸೀಮೆಯೆಲ್ಲಾ ಸಂಪೂರ್ಣವಾಗಿ ಹಾಳಾಗುವುದು, ಆಗ ನಾನೇ ಯೆಹೋವನು ಎಂದು ನಿಮಗೆ ತಿಳಿಯುವುದು.”
Kwa sababu ulishangilia wakati urithi wa nyumba ya Israeli ulipofanyika ukiwa, hivyo ndivyo nitakavyokutendea. Utakuwa ukiwa, ee mlima Seiri, wewe na Edomu yote. Kisha ndipo watajua kuwa Mimi ndimi Bwana.’”