< ಯೆಹೆಜ್ಕೇಲನು 35 >

1 ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು,
Awurade asɛm baa me nkyɛn sɛ:
2 “ನರಪುತ್ರನೇ, ನೀನು ಸೇಯೀರ್ ಬೆಟ್ಟದ ಸೀಮೆಯ ವಿರುದ್ಧವಾಗಿ ಅದಕ್ಕೆ ಈ ಪ್ರವಾದನೆಯನ್ನು ನುಡಿ,
“Onipa ba, fa wʼani kyerɛ Bepɔ Seir; hyɛ nkɔm tia no
3 ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ಸೇಯೀರ್ ಬೆಟ್ಟವೇ, ಇಗೋ, ನಾನು ನಿನಗೆ ವಿರುದ್ಧವಾಗಿದ್ದೇನೆ; ನಾನು ನಿನ್ನ ಸೀಮೆಯ ಮೇಲೆ ಕೈಯೆತ್ತಿ ಅದನ್ನು ಹಾಳು ಮಾಡುವೆನು.
na ka sɛ, ‘Yei ne deɛ Otumfoɔ Awurade seɛ: Me ne wo anya, Bepɔ Seir, na mɛtene me basa atia wo, na mɛma woada mpan.
4 ನಾನು ನಿನ್ನ ಪಟ್ಟಣಗಳನ್ನು ನಾಶಪಡಿಸಲು ನೀನು ಹಾಳಾಗುವಿ; ಆಗ ನಾನೇ ಯೆಹೋವನು ಎಂದು ತಿಳಿದುಕೊಳ್ಳುವಿ.
Mɛdane wo nkuro ama ayɛ mmubuiɛ na wobɛda mpan. Afei wobɛhunu sɛ mene Awurade no.
5 “‘ನೀನು ಇಸ್ರಾಯೇಲರ ಮೇಲೆ ದೀರ್ಘ ದ್ವೇಷವಿಟ್ಟು, ಅವರ ಅಪರಾಧದ ಕಡೆಯ ಕಾಲದಲ್ಲಿ ಆಪತ್ತು ಸಂಭವಿಸಿದಾಗ, ಅವರನ್ನು ಕತ್ತಿಯ ಬಾಯಿಗೆ ಗುರಿಮಾಡಿದೆ.
“‘Esiane sɛ wode tete nitan hyɛɛ wo mu na woyii Israelfoɔ maa akofena wɔ wɔn amanehunu mu, ɛberɛ a wɔn asotwe duruu ne mpɔnpɔnsoɔ no
6 ಆದುದರಿಂದ ನನ್ನ ಜೀವದಾಣೆ, ನಾನು ನಿನ್ನನ್ನು ರಕ್ತಮಯವಾಗಿ ಮಾಡುವೆನು, ರಕ್ತದ ಕೋಡಿಯು ನಿನ್ನನ್ನು ಬೆನ್ನಟ್ಟುವುದು; ನೀನು ರಕ್ತ ಸುರಿಸುವುದಕ್ಕೆ ಹೇಸದೆ ಹೋದಕಾರಣ ರಕ್ತಪ್ರವಾಹವೇ ನಿನ್ನ ಬೆನ್ನಹತ್ತುವುದು’” ಇದು ಕರ್ತನಾದ ಯೆಹೋವನ ನುಡಿ.
enti, sɛ mete ase yi deɛ, Otumfoɔ Awurade asɛm nie, mede wo bɛma mogyahwieguo na ɛbɛdi wʼakyi. Esiane sɛ woansuro mogyahwieguo no enti, mogyahwiegu bɛtaa wo.
7 “ಸೇಯೀರ್ ಬೆಟ್ಟವೇ, ನಾನು ನಿನ್ನ ಸೀಮೆಯನ್ನು ಹಾಳುಮಾಡಿ, ಅದರೊಳಗೆ ಹೋಗುವವರನ್ನೂ, ಬರುವವರನ್ನೂ ಕಡಿದುಹಾಕುವೆನು.
Mɛma bepɔ Seir ada mpan, na mayi wɔn a wɔdi so akɔneaba no afiri hɔ.
8 ಅದರ ಪರ್ವತಗಳನ್ನು ನಿನ್ನವರ ಹೆಣಗಳಿಂದ ತುಂಬಿಸುವೆನು; ಖಡ್ಗದಿಂದ ಹತರಾದವರು ನಿನ್ನ ಗುಡ್ಡಗಳಲ್ಲಿ, ಕಣಿವೆಗಳಲ್ಲಿ, ಹಳ್ಳಗಳಲ್ಲಿ ಬಿದ್ದುಹೋಗುವರು.
Mede atɔfoɔ bɛhyɛ wo mmepɔ so ma; wɔn a wɔbɛtotɔ akofena ano bɛhwehwe ase wɔ wo nkokoɔ so, mmɔnhwa mu ne wo subɔnhwa mu.
9 ನಾನು ನಿನ್ನನ್ನು ನಿತ್ಯನಾಶನಕ್ಕೆ ಗುರಿಮಾಡುವೆನು; ನಿನ್ನ ಪಟ್ಟಣಗಳು ನಿರ್ಜನವಾಗುವವು; ಆಗ ನಾನೇ ಯೆಹೋವನು ಎಂದು ನೀನು ತಿಳಿದುಕೊಳ್ಳುವೆ.”
Mɛma wada mpan afebɔɔ, na obiara rentena wo nkuro so. Afei, wobɛhunu sɛ mene Awurade no.
10 ೧೦ ನೀನು, “ಈ ಎರಡು ಜನಾಂಗಗಳೂ ಈ ಎರಡು ದೇಶಗಳೂ ನನ್ನ ವಶವಾಗುವವು” ಎಂದೂ ಹೇಳಿದ್ದರಿಂದ, ನಾವು ಅವುಗಳನ್ನು ವಶಮಾಡಿಕೊಳ್ಳುತ್ತೇವೆ ಎಂದು ಅಂದುಕೊಂಡು, ಅಲ್ಲಿ ನನ್ನ ಸಾನ್ನಿಧ್ಯವನ್ನು ಅಲಕ್ಷ್ಯಮಾಡಿದ್ದರಿಂದ,
“‘Woaka sɛ, “Saa aman mmienu ne nsase yi bɛyɛ yɛn dea na yɛbɛfa,” wɔ ɛberɛ a me Awurade mete hɔ,
11 ೧೧ “ನನ್ನ ಜೀವದಾಣೆ, ನೀನು ನನ್ನ ಜನರನ್ನು ದ್ವೇಷಿಸಿ, ಅವರ ಮೇಲಿಟ್ಟ ಕೋಪಕ್ಕೂ, ಹೊಟ್ಟೆಕಿಚ್ಚಿಗೂ ನಾನು ನಿನ್ನ ವಿರುದ್ಧವಾಗಿ ನ್ಯಾಯ ತೀರಿಸಿದ ಮೇಲೆ, ನಾನು ಅವರ ಮಧ್ಯದಲ್ಲಿ ನನ್ನನ್ನು ತಿಳಿಯಪಡಿಸುತ್ತೇನೆ.
enti, sɛ mete ase yi, Otumfoɔ Awurade asɛm nie, me ne wo bɛdi no sɛdeɛ abufuo ne ninkunu a wodaa no adi wɔ ɔtan a wotanee wɔn no mu no teɛ, na mɛda me ho adi wɔ wɔn mu, ɛberɛ a mɛbu wo atɛn.
12 ೧೨ ಆಗ ನಾನೇ ಯೆಹೋವನು ಎಂದು ನೀನು ತಿಳಿದುಕೊಳ್ಳುವೆ. ನೀನು ಇಸ್ರಾಯೇಲಿನ ಪರ್ವತಗಳನ್ನು ನೋಡಿ, ಆಹಾ, ಹಾಳಾದವು! ನಮಗೆ ತುತ್ತಾಗಿವೆ ಎಂದು ಮಾಡಿದ ದೂಷಣೆಗಳು ಯೆಹೋವನಾದ ನನ್ನ ಕಿವಿಗೆ ಬಿದ್ದಿವೆ ಎಂಬುದು ನಿನಗೆ ಗೊತ್ತಾಗುವುದು.
Afei, wobɛhunu sɛ me Awurade, mate animtiabuo nsɛm a woaka atia Israel mmepɔ. Wokaa sɛ, “Wɔama ada mpan na wɔadane ama yɛn sɛ yɛmfa.”
13 ೧೩ ನಿನ್ನವರು ಬಾಯಿ ತೆರೆದು, ನನ್ನ ವಿರುದ್ಧವಾಗಿ ಆಡಿದ ಮಾತುಗಳನ್ನು ಕೇಳಿದ್ದೇನೆ.”
Mohoahoaa mo ho tiaa me na mokasa tiaa me a moanto sɛbe, na meteeɛ.
14 ೧೪ ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನಾನು ನಿನ್ನನ್ನು ಹಾಳುಮಾಡಿ, ಲೋಕವನ್ನೆಲ್ಲಾ ಸಂತೋಷಪಡಿಸುವೆನು.
Yei ne deɛ Otumfoɔ Awurade seɛ: Ɛberɛ a ewiase nyinaa redi ahurisie no, mɛma woada mpan.
15 ೧೫ ಇಸ್ರಾಯೇಲರ ಸ್ವತ್ತಿನ ನಾಶಕ್ಕೆ ನೀನು ಹೇಗೆ ಸಂತೋಷಪಟ್ಟೆಯೋ ಹಾಗೆಯೇ, ನಿನ್ನ ನಾಶಕ್ಕೆ ಲೋಕವೆಲ್ಲಾ ಸಂತೋಷಪಡುವಂತೆ ಮಾಡುವೆನು; ಸೇಯೀರ್ ಬೆಟ್ಟವೇ, ನೀನು ಹಾಳಾಗುವಿ; ಹೌದು, ಎದೋಮ್ ಸೀಮೆಯೆಲ್ಲಾ ಸಂಪೂರ್ಣವಾಗಿ ಹಾಳಾಗುವುದು, ಆಗ ನಾನೇ ಯೆಹೋವನು ಎಂದು ನಿಮಗೆ ತಿಳಿಯುವುದು.”
Sɛdeɛ wodii ahurisie ɛberɛ a Israel efie agyapadeɛ daa mpan no, saa ɛkwan no na mede wo bɛfa so. Wobɛda mpan, Bepɔ Seir, wo ne Edom nyinaa. Afei wɔbɛhunu sɛ mene Awurade no.’”

< ಯೆಹೆಜ್ಕೇಲನು 35 >