< ಯೆಹೆಜ್ಕೇಲನು 36 >

1 “ನರಪುತ್ರನೇ, ನೀನು ಇಸ್ರಾಯೇಲಿನ ಪರ್ವತಗಳಿಗೆ ಈ ಪ್ರವಾದನೆಯನ್ನು ನುಡಿ, ‘ಇಸ್ರಾಯೇಲಿನ ಪರ್ವತಗಳೇ, ಯೆಹೋವನ ವಾಕ್ಯವನ್ನು ಕೇಳಿರಿ.
“Onipa ba, hyɛ nkɔm kyerɛ Israel mmepɔw na ka se: ‘Israel mmepɔw, muntie Awurade asɛm.
2 ದೇವರಾದ ಯೆಹೋವನು ಹೀಗೆ ಹೇಳುತ್ತಾನೆ, ಶತ್ರುವು ನಿಮ್ಮನ್ನು ನೋಡಿ, “ಆಹಾ!” ಎನ್ನುತ್ತಾ, ಈ ಪುರಾತನ ದುರ್ಗಗಳು ನಮ್ಮ ವಶವಾಗಿವೆ’” ಎಂದು ಹೇಳುವರು.
Sɛɛ na Otumfo Awurade se: Sɛɛ na ɔtamfo no ka faa wo ho, “Aaa! Tete sorɔnsorɔmmea no abɛyɛ yɛn dea.”’
3 ಈ ಪ್ರವಾದನೆಯನ್ನು ನುಡಿಯಬೇಕೆಂದು ಕರ್ತನಾದ ಯೆಹೋವನ ಅಪ್ಪಣೆಯಾಯಿತು, “‘ಅಯ್ಯೋ, ಎಲ್ಲಾ ಕಡೆಯೂ ತುಳಿಯಲ್ಪಟ್ಟು ಹಾಳಾದ ನೀವು ಜನಾಂಗಗಳಲ್ಲಿ ಉಳಿದವರ ವಶವಾಗಿದ್ದು, ಹರಟೆಗಾರರ ಬಾಯಿಗೆ ಬಿದ್ದು, ಜನರ ದೂಷಣೆಗೆ ಗುರಿಯಾಗಿದ್ದೀರಿ.
Ɛno nti, hyɛ nkɔm na ka se, ‘Sɛɛ na Otumfo Awurade se: Esiane sɛ wɔasɛe mo na wɔataataa mo wɔ afa nyinaa, na ɛno nti mobɛyɛɛ aman a aka no agyapade ne nnipa no ahohora nsɛnka ne atwetwesi,
4 ಆದಕಾರಣ ಇಸ್ರಾಯೇಲಿನ ಪರ್ವತಗಳೇ, ಕರ್ತನಾದ ಯೆಹೋವನ ವಾಕ್ಯವನ್ನು ಕೇಳಿರಿ, ಬೆಟ್ಟಗಳಿಗೂ, ಗುಡ್ಡಗಳಿಗೂ, ತೊರೆತಗ್ಗುಗಳಿಗೂ, ಹಾಳುಪ್ರದೇಶಗಳಿಗೂ, ಸುತ್ತಣ ಜನಾಂಗಗಳಲ್ಲಿ ಉಳಿದವರು ಕೊಳ್ಳೆಹೊಡೆದು ಅಣಕಿಸುವ ಹಾಳು ಪಟ್ಟಣಗಳಿಗೂ,
ɛno nti, Israel mmepɔw, muntie Otumfo Awurade asɛm: Sɛɛ na Otumfo Awurade ka kyerɛ mmepɔw ne nkoko, nsubon ne abon, nnwiriwii a ada mpan ne nea ayɛ amamfo, nkurow amamfo a wɔadwiriw agu na aman no nkae a atwa wɔn ho ahyia no di wɔn ho fɛw.
5 ದೇವರಾದ ಯೆಹೋವನಾದ ಕರ್ತನು ಹೀಗೆ ನುಡಿಯುತ್ತಾನೆ, ಆಹಾ, ನನ್ನ ದೇಶವನ್ನು ತಮ್ಮ ಸ್ವಾಸ್ತ್ಯಮಾಡಿಕೊಂಡು ಪೂರ್ಣಹೃದಯದಿಂದ ಆನಂದಪಟ್ಟವರೂ, ಅದನ್ನು ಮನಃಪೂರ್ವಕವಾಗಿ ತಿರಸ್ಕರಿಸಿ ಸೂರೆಗೆ ತಳ್ಳಿಬಿಟ್ಟವರೂ ಆದ ಎದೋಮಿನವರೆಲ್ಲರನ್ನೂ, ಇತರ ಜನಾಂಗಗಳಲ್ಲಿ ಉಳಿದವರನ್ನೂ ನಾನು ರೋಷದ ಬೆಂಕಿಯಿಂದ ಉರಿಯುತ್ತಾ ಶಪಿಸಿದ್ದೇನೆ.’
Sɛɛ na Otumfo Awurade se: Mifi anem a emu yɛ den mu akasa atia amanaman a aka no ne Edom nyinaa, efisɛ wɔde fɛwdi ne adwemmɔne ayɛ me man wɔn agyapade, sɛnea wobetumi afom ne didibea.’
6 ಹೀಗಿರಲು ಇಸ್ರಾಯೇಲ್ ದೇಶದ ವಿಷಯವಾದ ಈ ಪ್ರವಾದನೆಯನ್ನು ಅದರ ಬೆಟ್ಟಗಳಿಗೆ, ಗುಡ್ಡಗಳಿಗೆ, ತೊರೆತಗ್ಗುಗಳಿಗೆ ನುಡಿಯಬೇಕೆಂದು ಅಪ್ಪಣೆಯಾಗಿದೆ. ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ಆಹಾ! ನಾನು ಕೋಪೋದ್ರೇಕದಿಂದಲೂ, ರೋಷಾವೇಶದಿಂದಲೂ ಮಾತನಾಡಿದ್ದೇನೆ, ನೀವು ಅನ್ಯಜನಾಂಗಗಳಿಂದ ಅವಮಾನವನ್ನು ಅನುಭವಿಸಿದ್ದೀರಿ!’
Ɛno nti, hyɛ nkɔm a ɛfa Israel asase ho, na ka kyerɛ mmepɔw ne nkoko, subon ne abon se, ‘Sɛɛ na Otumfo Awurade se: Mede ninkutwe mu anibere kasa, efisɛ amanaman no abu wo animtiaa.
7 ಆದಕಾರಣ ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ನಿಮ್ಮ ಸುತ್ತಣ ಆ ಅನ್ಯಜನಾಂಗಗಳೇ ತಮ್ಮ ಮೇಲೆ ಬಿದ್ದ ಅವಮಾನವನ್ನು ಅನುಭವಿಸುವುದು ಖಂಡಿತ ಎಂದು ಕೈಯೆತ್ತಿ ಪ್ರಮಾಣಮಾಡಿದ್ದೇನೆ.
Enti sɛɛ na Otumfo Awurade se: Mema me nsa so ka ntam sɛ amanaman a atwa wo ho ahyia no nso, wobebu wɔn animtiaa.
8 ಇಸ್ರಾಯೇಲಿನ ಪರ್ವತಗಳೇ, ನಿಮ್ಮ ಗಿಡಗಳ ಕೊಂಬೆಗಳನ್ನು ಹರಡಿಕೊಂಡು, ನನ್ನ ಜನರಾದ ಇಸ್ರಾಯೇಲರಿಗೆ ಫಲಕೊಡುವವು. ಏಕೆಂದರೆ ಅವರ ಬರುವಿಕೆಯು ಸಮೀಪವಾಗಿದೆ.
“‘Nanso mo, Israel mmepɔw, mubenya mman, asow aba ama me nkurɔfo Israelfo, efisɛ ɛrenkyɛ wɔbɛba fie.
9 ಇಗೋ, ನಾನು ನಿಮ್ಮ ಪಕ್ಷದವನು; ನಿಮ್ಮ ಕಡೆಗೆ ತಿರುಗಿಕೊಳ್ಳುತ್ತೇನೆ ಮತ್ತು ನೀವು ಉತ್ತು, ಬಿತ್ತುವಿರಿ.
Mo ho hia me na mehu mo mmɔbɔ; wobefuntum mo na wɔadua mo so aba,
10 ೧೦ ನಿಮ್ಮಲ್ಲಿ ಬಹು ಜನರು ಅಂದರೆ ಇಸ್ರಾಯೇಲ್ ವಂಶದವರೆಲ್ಲರೂ ವಾಸಿಸುವಂತೆ ಮಾಡುವೆನು; ಪಟ್ಟಣಗಳು ಜನಭರಿತವಾಗುವವು, ಹಾಳು ನಿವೇಶನಗಳಲ್ಲಿ ಕಟ್ಟಡಗಳು ಏಳುವವು.
na mɛma wo so nnipa adɔɔso, Israelfi nyinaa mpo, nnipa bɛtena wo nkurow no so bio, na wobesisi nnwiriwii no nso.
11 ೧೧ ನಿಮ್ಮಲ್ಲಿ ಬಹು ಜನರನ್ನೂ, ಪಶುಗಳನ್ನೂ ವೃದ್ಧಿಗೊಳಿಸುವೆನು; ಅವು ಹೆಚ್ಚಿ ಅಭಿವೃದ್ಧಿಯಾಗುವವು; ಮೊದಲಿನಂತೆ ನಿಮ್ಮಲ್ಲಿ ನಿವಾಸಿಗಳನ್ನು ತುಂಬಿಸಿ, ಮೊದಲಿಗಿಂತ ನಿಮ್ಮನ್ನು ಉತ್ತಮ ಸ್ಥಿತಿಗೆ ತರುವೆನು; ನಾನೇ ಯೆಹೋವನು ಎಂದು ನಿಮಗೆ ದೃಢವಾಗುವುದು.
Mɛma mmarima ne mmoa adɔɔso wɔ mo so na wɔbɛwowo na wɔadodɔ, mɛma nnipa atena wo mu te sɛ kan no na wɔbɛma woadi yiye asen kan no. Na afei mubehu sɛ mene Awurade no.
12 ೧೨ ಬೆಟ್ಟದ ಸೀಮೆಯೇ, ನಾನು ನಿನ್ನಲ್ಲಿ ಜನ ಸಂಚಾರವನ್ನು ಉಂಟುಮಾಡುವೆನು; ನನ್ನ ಜನರಾದ ಇಸ್ರಾಯೇಲರೇ, ನಿನ್ನಲ್ಲಿ ಸಂಚರಿಸುತ್ತಾ ನಿನ್ನನ್ನು ಸ್ವತ್ತಾಗಿ ಅನುಭವಿಸುವರು; ನೀನು ಇನ್ನು ಅವರಿಗೆ ಪುತ್ರ ಶೋಕವನ್ನು ಕೊಡುವುದಿಲ್ಲ.’”
Mɛma nkurɔfo, me nkurɔfo Israelfo, anantew wo so. Wɔbɛfa wo na wobɛyɛ wɔn agyapade na woremma wonni mmakɔm bio.
13 ೧೩ ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನೀನು ನರಭಕ್ಷಕನಾಗಿ ನಿನ್ನ ಪ್ರಜೆಗೆ ಪುತ್ರಶೋಕವನ್ನು ಕೊಟ್ಟಿದ್ದೀ” ಎಂದು ನಿನ್ನನ್ನು ಬಯ್ಯುತ್ತಾರೆ.
“‘Sɛɛ na Otumfo Awurade se: Esiane sɛ nkurɔfo ka kyerɛ wo se, “Wukum nnipa we na woma wo man no hwere nʼadehye,”
14 ೧೪ “ಇನ್ನು ಮುಂದೆ ನೀನು ನರಭಕ್ಷಕನಾಗುವುದಿಲ್ಲ, ನಿನ್ನ ಪ್ರಜೆಗೆ ಇನ್ನು ಪುತ್ರಶೋಕವನ್ನು ಕೊಡುವುದಿಲ್ಲ.
ɛno nti worenkum nnipa nwe bio na woremma wo man nhwere nʼadehye bio, Otumfo Awurade asɛm ni.
15 ೧೫ ಮ್ಲೇಚ್ಛರ ಧಿಕ್ಕಾರವನ್ನು ಇನ್ನು ನಿನ್ನ ಕಿವಿಗೆ ಬೀಳಿಸೆನು; ನೀನು ಜನಾಂಗಗಳಿಂದ ಇನ್ನು ಅವಮಾನವನ್ನು ಅನುಭವಿಸದಿರುವಿ; ನಿನ್ನ ಪ್ರಜೆಯು ಮುಗ್ಗರಿಸುವುದಕ್ಕೆ ಇನ್ನು ನೀನು ಕಾರಣನಾಗುವುದಿಲ್ಲ” ಇದು ಕರ್ತನಾದ ಯೆಹೋವನ ನುಡಿ.
Meremma wonte amanaman no fɛwdi bio, na worenhu nkurɔfo no animtiaabu bio, na wo man nso renhwe ase bio, Otumfo Awurade asɛm ni.’”
16 ೧೬ ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು,
Awurade asɛm baa me nkyɛn se,
17 ೧೭ “ನರಪುತ್ರನೇ, ಇಸ್ರಾಯೇಲ್ ವಂಶದವರು ಸ್ವದೇಶದಲ್ಲಿ ವಾಸಿಸುತ್ತಿದ್ದಾಗ ತಮ್ಮ ದುರ್ಮಾರ್ಗ, ದುರಾಚಾರಗಳಿಂದ ಅದನ್ನು ಅಶುದ್ಧಗೊಳಿಸಿದರು; ಅವರ ನಡತೆಯು ಮುಟ್ಟಿನ ಅಶುದ್ಧತ್ವದ ಹಾಗಿತ್ತು.
“Onipa ba, bere a Israelfo te wɔn ankasa asase so no, wɔde wɔn abrabɔ ne wɔn nneyɛe guu asase no ho fi. Na wɔn abrabɔ te sɛ ɔbea ɔsram-sram afide wɔ mʼani so.
18 ೧೮ ಅವರು ದೇಶದ ಮೇಲೆ ರಕ್ತವನ್ನು ಸುರಿಸಿ, ತಮ್ಮ ವಿಗ್ರಹಗಳಿಂದ ಅದನ್ನು ಅಶುದ್ಧಪಡಿಸಿದ ಕಾರಣ ನಾನು ಅವರ ಮೇಲೆ ನನ್ನ ರೋಷಾಗ್ನಿಯನ್ನು ಸುರಿಸಿದೆನು.
Enti mihwiee mʼabufuwhyew guu wɔn so, efisɛ wɔahwie mogya agu asase no so na wɔde wɔn abosom agu hɔ fi.
19 ೧೯ ಜನಾಂಗಗಳೊಳಗೆ ಅವರನ್ನು ಚದರಿಸಿ, ದೇಶಗಳಿಗೆ ತೂರಿಬಿಟ್ಟು, ಅವರ ದುರ್ಮಾರ್ಗ, ದುರಾಚಾರಗಳಿಗೆ ಸರಿಯಾಗಿ ನ್ಯಾಯತೀರಿಸಿದೆನು.
Mebɔɔ wɔn ahwete wɔ amanaman mu, na wɔhwete faa amanaman mu; migyinaa wɔn abrabɔ ne wɔn nneyɛe so buu wɔn atɛn.
20 ೨೦ ಅವರು ಆ ಜನಾಂಗಗಳೊಳಗೆ ಸೇರಿಕೊಂಡ ಮೇಲೆ, ‘ಇವರು ಯೆಹೋವನ ಪ್ರಜೆಗಳು, ಆತನ ದೇಶದಿಂದ ಭ್ರಷ್ಟರಾಗಿ ಬಂದಿದ್ದಾರೆ’ ಎಂದು ಅವರಿಗೆ ಹೇಳಿ, ನನ್ನ ಪರಿಶುದ್ಧ ಹೆಸರನ್ನು ಅಪವಿತ್ರ ಮಾಡುವರು.
Na baabiara a wɔkɔɔ wɔ amanaman mu no, woguu me din kronkron ho fi, efisɛ wɔka faa wɔn ho se, ‘Eyinom yɛ Awurade nkurɔfo, nanso na ɛsɛ sɛ wofi nʼasase so.’
21 ೨೧ ಆದರೆ ಇಸ್ರಾಯೇಲಿನ ವಂಶದವರು ಜನಾಂಗಗಳೊಳಗೆ ಸೇರಿ, ಅಲ್ಲಿ ಅಪಕೀರ್ತಿಗೆ ಗುರಿಮಾಡಿದ ನನ್ನ ಪರಿಶುದ್ಧ ನಾಮವನ್ನು ಕುರಿತು ಮನಮರುಗಿದೆನು.”
Me din kronkron ho hia me, nea Israelfi guu ho fi wɔ amanaman a wɔkɔɔ so mu no.
22 ೨೨ ಆದಕಾರಣ ನೀನು ಇಸ್ರಾಯೇಲ್ ವಂಶದವರಿಗೆ ಹೀಗೆ ನುಡಿ, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಇಸ್ರಾಯೇಲ್ ವಂಶದವರೇ, ನಿಮ್ಮ ನಿಮಿತ್ತವಲ್ಲ, ನೀವು ಜನಾಂಗಗಳೊಳಗೆ ಸೇರಿ ಅಪಕೀರ್ತಿಗೆ ಗುರಿಮಾಡಿದ ನನ್ನ ಪರಿಶುದ್ಧನಾಮದ ನಿಮಿತ್ತವೇ ಈ ರಕ್ಷಣ ಕಾರ್ಯವನ್ನು ಮಾಡುತ್ತೇನೆ.
“Ɛno nti, ka kyerɛ Israelfi se, ‘Sɛɛ na Otumfo Awurade se: Israelfi, ɛnyɛ mo nti na merebɛyɛ saa nneɛma yi, na mmom me din kronkron no nti, nea muguu ho fi wɔ amanaman a mokɔɔ so mu no.
23 ೨೩ ಜನಾಂಗಗಳಲ್ಲಿ ಅಪಕೀರ್ತಿಗೆ ಗುರಿಯಾದ, ಅಂದರೆ ನೀವು ಜನಾಂಗಗಳ ನಡುವೆ ಅಪಕೀರ್ತಿಗೆ ಗುರಿಮಾಡಿದ ನನ್ನ ಘನವುಳ್ಳ ನಾಮದ ಗೌರವವನ್ನು ನಾನು ಕಾಪಾಡಿಕೊಳ್ಳುವೆನು; ಹೀಗೆ ನಾನು ಅವುಗಳ ಕಣ್ಣೆದುರಿಗೆ ನಿಮ್ಮ ರಕ್ಷಣೆಯ ಮೂಲಕ ನನ್ನ ಗೌರವವನ್ನು ಕಾಪಾಡಿಕೊಳ್ಳುವಾಗ ನಾನೇ ಯೆಹೋವನು ಎಂದು ಅವರಿಗೆ ತಿಳಿಯುವುದು” ಇದು ಕರ್ತನಾದ ಯೆಹೋವನ ನುಡಿ.
Mɛda me din kɛseyɛ no kronkronyɛ a moagu ho fi wɔ amanaman mu no adi, din a moagu ho fi wɔ wɔn mu no. Sɛ mefa wo so da me ho adi sɛ ɔkronkronni ma wohu a, afei amanaman no behu sɛ mene Awurade no, Otumfo Awurade asɛm ni.
24 ೨೪ “ನಾನು ನಿಮ್ಮನ್ನು ಜನಾಂಗಗಳೊಳಗಿಂದ ಬಿಡಿಸಿ, ಸಕಲ ದೇಶಗಳಿಂದ ಒಟ್ಟುಗೂಡಿಸಿ ಸ್ವದೇಶಕ್ಕೆ ಬರಮಾಡುವೆನು.
“‘Na meyi mo afi amanaman no mu, mɛboaboa mo ano afi nsase no nyinaa so de mo asan aba mo ankasa asase so.
25 ೨೫ ಆಮೇಲೆ ನಾನು ನಿಮ್ಮ ಮೇಲೆ ಶುದ್ಧವಾದ ನೀರನ್ನು ಪ್ರೋಕ್ಷಿಸಲು ನೀವು ನಿರ್ಮಲರಾಗುವಿರಿ; ನಿಮ್ಮ ಸಮಸ್ತ ವಿಗ್ರಹಗಳಿಂದಲೂ, ಸಕಲ ವಿಧವಾದ ಹೊಲಸಿನಿಂದಲೂ ನಿಮ್ಮನ್ನು ಶುದ್ಧಿಮಾಡುವೆನು.
Mede nsu kurunnyenn bɛpete mo so na mo ho atew: Mɛtew mo ho afi nkekae ne mo ahoni nyinaa ho.
26 ೨೬ ನಾನು ನಿಮಗೆ ಹೊಸ ಮನಸ್ಸನ್ನು ಕೊಟ್ಟು, ನಿಮ್ಮಲ್ಲಿ ನೂತನ ಸ್ವಭಾವವನ್ನು ಹುಟ್ಟಿಸುವೆನು; ಕಲ್ಲಾದ ಹೃದಯವನ್ನು ನಿಮ್ಮೊಳಗಿಂದ ತೆಗೆದು, ಮೃದುವಾದ ಹೃದಯವನ್ನು ನಿಮಗೆ ದಯಪಾಲಿಸುವೆನು.
Mɛma mo koma foforo na mede honhom foforo ahyɛ mo mu. Meyi koma a ɛte sɛ ɔbo no afi mo mu na mama mo koma foforo a ɛyɛ ɔhonam.
27 ೨೭ ನನ್ನ ಆತ್ಮವನ್ನು ನಿಮ್ಮಲ್ಲಿ ನೆಲಸಿರುವಂತೆ ಅನುಗ್ರಹಿಸಿ, ನೀವು ನನ್ನ ನಿಯಮಗಳನ್ನು ಅನುಸರಿಸುವ ಹಾಗೆ ಮಾಡುವೆನು. ನೀವು ನನ್ನ ವಿಧಿಗಳನ್ನು ಕೈಕೊಂಡು ಆಚರಿಸುವಿರಿ.
Na mede me Honhom bɛhyɛ mo mu na mama moadi mʼahyɛde so na moahwɛ adi me mmara so.
28 ೨೮ ನಾನು ನಿಮ್ಮ ಪೂರ್ವಿಕರಿಗೆ ಅನುಗ್ರಹಿಸಿದ ದೇಶದಲ್ಲಿ ನೀವು ವಾಸಿಸುವಿರಿ. ನೀವು ನನಗೆ ಪ್ರಜೆಯಾಗಿರುವಿರಿ, ನಾನು ನಿಮಗೆ ದೇವರಾಗಿರುವೆನು.
Mobɛtena asase a mede maa mo agyanom no so. Mobɛyɛ me nkurɔfo na mayɛ mo Nyankopɔn.
29 ೨೯ ನಾನು ನಿಮ್ಮನ್ನು ನಿಮ್ಮ ಎಲ್ಲಾ ಅಶುದ್ಧತ್ವಗಳಿಂದಲೂ ರಕ್ಷಿಸಿ, ಬೆಳೆ ಬೆಳೆಯಲೆಂದು ಅಪ್ಪಣೆಕೊಟ್ಟು, ಅದನ್ನು ವೃದ್ಧಿಗೊಳಿಸುವೆನು; ನಿಮಗೆ ಕ್ಷಾಮವನ್ನು ಇನ್ನು ಬರಮಾಡುವುದಿಲ್ಲ.
Mɛprapra mo ho fi nyinaa. Mɛma aduan aba ama abu so na meremma ɔkɔm mma mo so.
30 ೩೦ ನೀವು ಕ್ಷಾಮ ದೇಶದವರೆಂದು ಜನಾಂಗಗಳು ಇನ್ನು ನಿಮ್ಮನ್ನು ನಿಂದಿಸದಂತೆ, ನಾನು ಮರದ ಹಣ್ಣನ್ನೂ, ಹೊಲದ ಬೆಳೆಯನ್ನೂ ಹೆಚ್ಚಿಸುವೆನು.
Mɛma nnua so aba ayɛ bebree na mfuw nso abɔ nnɔbae sɛnea ɔkɔm nti mo anim rengu ase bio wɔ amanaman no mu.
31 ೩೧ ಆಗ ನೀವು ನಿಮ್ಮ ದುರ್ಮಾರ್ಗ, ದುರಾಚಾರಗಳನ್ನು ಜ್ಞಾಪಕಕ್ಕೆ ತಂದುಕೊಂಡು, ನಿಮ್ಮ ಅಪರಾಧಗಳ ಮತ್ತು ಅಸಹ್ಯಕಾರ್ಯಗಳ ನಿಮಿತ್ತ ನಿಮಗೆ ನೀವೇ ಹೇಸಿಕೊಳ್ಳುವಿರಿ.”
Afei mobɛkae mo akwammɔne ne mo amumɔyɛ, na mo bɔne ne akyiwade nti, mo ho bɛyɛ mo nwini.
32 ೩೨ ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನಾನು ಈ ರಕ್ಷಣ ಕಾರ್ಯವನ್ನು ಮಾಡುವುದು ನಿಮ್ಮ ನಿಮಿತ್ತವಲ್ಲ ಎಂಬುದು ನಿಮಗೆ ತಿಳಿದಿರಲಿ; ಇಸ್ರಾಯೇಲ್ ವಂಶದವರೇ, ನಿಮ್ಮ ದುರ್ಮಾರ್ಗಗಳಿಗೆ ಲಜ್ಜೆಗೊಳ್ಳಿರಿ, ನಾಚಿಕೆಪಡಿರಿ.”
Mepɛ sɛ muhu sɛ ɛnyɛ mo nti na mereyɛ eyi, Otumfo Awurade asɛm ni. Momfɛre na momma mo ani nwu wɔ mo abrabɔ ho Israelfi!
33 ೩೩ ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನಾನು ನಿಮ್ಮನ್ನು ನಿಮ್ಮ ಅಪರಾಧಗಳಿಂದೆಲ್ಲಾ ಶುದ್ಧಿ ಮಾಡುವ ದಿನದಲ್ಲಿ, ಪಟ್ಟಣಗಳನ್ನು ನಿವಾಸಿಗಳಿಂದ ತುಂಬಿಸುವೆನು, ಹಾಳು ನಿವೇಶನಗಳಲ್ಲಿ ಕಟ್ಟಡಗಳು ಏಳುವವು.
“‘Sɛɛ na Otumfo Awurade se: Da a mɛtew mo ho afi mo bɔne ho no, mɛma nnipa atena mo nkurow so bio na wobesisi nnwiriwii no bio.
34 ೩೪ ಹಾದು ಹೋಗುವವರೆಲ್ಲರ ಕಣ್ಣೆದುರಿಗೆ ಹಾಳುಬಿದ್ದು ಭೂಮಿಯನ್ನು ಉಳುವರು.
Asase a ada mpan no, wobedua so nneɛma na ɛrenna hɔ kwa sɛnea na ɛte wɔ wɔn a na wotwa mu fa hɔ no ani so no.
35 ೩೫ ಆಗ ಜನರು, ‘ಹಾಳಾಗಿದ್ದ ಈ ದೇಶವು ಏದೆನ್ ಉದ್ಯಾನದಂತೆ ಕಂಗೊಳಿಸುತ್ತದೆ; ಬಿದ್ದುಹೋಗಿ ಹಾಳಾದ ಪಟ್ಟಣಗಳು ಕೋಟೆಕೊತ್ತಲಗಳಿಂದ ಕೂಡಿ, ಜನಭರಿತವಾಗಿದೆ’ ಎಂದು ಹೇಳುವರು.
Wɔbɛka se, “Saa asase a ada mpan yi ayɛ sɛ Eden turo, nkuropɔn a na adan nnwiriwii, ayɛ amamfo na asɛe yi, wɔabɔ ho ban na nnipa abɛtenatena mu.”
36 ೩೬ ಯೆಹೋವನಾದ ನಾನೇ ಬಿದ್ದುಹೋದದ್ದನ್ನು ಕಟ್ಟಿ, ಹಾಳಾದದ್ದನ್ನು ಬೆಳೆಯಿಸಿದ್ದೇನೆ ಎಂಬುದು ನಿಮ್ಮ ಸುತ್ತಲು ಉಳಿದ ಜನಾಂಗಗಳಿಗೆ ಗೊತ್ತಾಗುವುದು. ಯೆಹೋವನಾದ ನಾನೇ ನುಡಿದಿದ್ದೇನೆ, ನಾನೇ ಇದನ್ನು ಮಾಡುತ್ತೇನೆ.”
Afei aman a aka a atwa mo ho ahyia no behu sɛ me Awurade makyekyere nea na asɛe na madua wɔ nea na ada mpan so, me Awurade na maka na mɛyɛ.’
37 ೩೭ ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನಾನು ಇನ್ನೊಂದು ವಿಷಯದಲ್ಲಿ ಇಸ್ರಾಯೇಲ್ ವಂಶದವರ ವಿಜ್ಞಾಪನೆಯನ್ನು ಲಾಲಿಸಿ ನೆರವೇರಿಸುವೆನು; ಅಂದರೆ ಅವರ ಜನಸಂಖ್ಯೆಯನ್ನು ಹಿಂಡಿನೋಪಾದಿಯಲ್ಲಿ ಹೆಚ್ಚಿಸುವೆನು.
“Sɛɛ na Otumfo Awurade se: Metie Israelfi abisade na mayɛ eyi ama wɔn; Mɛma wɔn nkurɔfo adɔɔso sɛ nguan,
38 ೩೮ ಮೀಸಲಾದ ಮಂದೆಯಂತೆ, ಹಬ್ಬಗಳಲ್ಲಿ ಯೆರೂಸಲೇಮಿಗೆ ಬಂದು ಸೇರುವ ಹಿಂಡಿನ ಹಾಗೆಯೂ ಇರುವರು. ಆದಕಾರಣ ಮನುಷ್ಯರು ಹಾಳು ಪಟ್ಟಣಗಳಲ್ಲಿ ಹಿಂಡುಹಿಂಡಾಗಿ ತುಂಬಿಕೊಳ್ಳುವರು. ಆಗ ನಾನೇ ಯೆಹೋವನು ಎಂದು ಅವರಿಗೆ ತಿಳಿಯುವುದು.”
wɔbɛdɔɔso sɛ nguankuw a wɔde wɔn kɔ Yerusalem sɛ afɔrebɔde wɔ nʼafahyɛnna. Saa ara na nnipa dodow bɛhyɛ nkuropɔn a adwiriw no so ma. Afei wobehu sɛ mene Awurade no.”

< ಯೆಹೆಜ್ಕೇಲನು 36 >