< ಯೆಹೆಜ್ಕೇಲನು 37 >

1 ನಾನು ಯೆಹೋವನ ಹಸ್ತಸ್ಪರ್ಶದಿಂದ ಪರವಶನಾಗಲು, ಆತನು ತನ್ನ ಆತ್ಮದ ಮೂಲಕ ನನ್ನನ್ನು ಒಯ್ದು ಎಲುಬುಗಳಿಂದ ತುಂಬಿದ್ದ ಒಂದು ಕಣಿವೆಯಲ್ಲಿ ಇಳಿಸಿದನು.
Rəbbin əli üzərimdə idi. Rəbb Öz Ruhu ilə məni bayıra çıxarıb vadinin ortasına qoydu. Vadi sümüklərlə dolu idi.
2 ನಾನು ಆ ಎಲುಬುಗಳ ಮಧ್ಯೆ ಕಣಿವೆಯನ್ನು ದಾಟಿ ಬರುವಂತೆ ಮಾಡಿದನು. ಇಗೋ! ಕಣಿವೆಯಲ್ಲಿ ಒಣಗಿ ಹೋದ ಎಲುಬುಗಳು ಲೆಕ್ಕವಿಲ್ಲದಷ್ಟು ಬಿದ್ದಿದ್ದವು.
O məni onların üstündə gəzdirib hər tərəfə apardı. Gördüm ki, vadinin üstündə saysız-hesabsız sümük var. Onlar bərk qurumuşdu.
3 ಆತನು ನನಗೆ “ನರಪುತ್ರನೆ, ಈ ಎಲುಬುಗಳಿಗೆ ಜೀವವು ಬರಬಹುದೋ?” ಎಂದು ಕೇಳಲು ನಾನು, “ಕರ್ತನಾದ ಯೆಹೋವನೇ, ನೀನೇ ಬಲ್ಲೆ” ಎಂದು ಉತ್ತರಕೊಟ್ಟೆನು.
Rəbb mənə dedi: «Ey bəşər oğlu, bu sümüklər dirilə bilərmi?» Mən cavab verdim: «Ey Xudavənd Rəbb, bunu Sən bilirsən».
4 ಆಗ ಆತನು ನನಗೆ ಹೀಗೆ ಅಪ್ಪಣೆಮಾಡಿದನು, “ನೀನು ಈ ಎಲುಬುಗಳ ಮೇಲೆ ಪ್ರವಾದಿಸಿ, ಹೀಗೆ ನುಡಿ, ‘ಒಣಗಿದ ಎಲುಬುಗಳೇ, ಯೆಹೋವನ ವಾಕ್ಯವನ್ನು ಕೇಳಿರಿ’.
O mənə dedi: «Bu sümüklər üçün peyğəmbərlik edib onlara söylə ki, ey quru sümüklər, Rəbbin sözünü eşidin.
5 ಕರ್ತನಾದ ಯೆಹೋವನು ನಿಮಗೆ ಹೀಗೆ ಹೇಳುತ್ತಾನೆ, ‘ಇಗೋ, ನಾನು ನಿಮ್ಮೊಳಗೆ ಶ್ವಾಸವನ್ನು ಊದುವೆನು; ನೀವು ಬದುಕುವಿರಿ.
Xudavənd Rəbb bu sümüklərə belə deyir: “Mən sizin daxilinizə ruh qoyacağam və siz diriləcəksiniz.
6 ನಾನು ನಿಮ್ಮ ಮೇಲೆ ನರಗಳನ್ನು ಹಬ್ಬಿಸಿ, ಮಾಂಸವನ್ನು ತಂದು, ಚರ್ಮವನ್ನು ಹೊದಿಸಿ, ನಿಮ್ಮಲ್ಲಿ ಶ್ವಾಸವನ್ನು ತುಂಬುವೆನು; ಆಗ ನೀವು ಬದುಕಿ ನಾನೇ ಯೆಹೋವನು ಎಂದು ತಿಳಿದುಕೊಳ್ಳುವಿರಿ.’”
Üstünüzə vətərlər qoyacaq, ət bitirəcək, sizi dəri ilə örtəcəyəm, daxilinizə ruh qoyacağam və siz diriləcəksiniz. Onda biləcəksiniz ki, Rəbb Mənəm”».
7 ನನಗೆ ಅಪ್ಪಣೆಯಾದಂತೆ ನಾನು ಆ ಪ್ರವಾದನೆಯನ್ನು ನುಡಿಯುತ್ತಿರಲು, ಅಲ್ಲಿ ಟಕಟಕ ಶಬ್ದವಾಯಿತು, ಇಗೋ, ಅದು ಕದಲುತ್ತಿತ್ತು. ಎಲುಬುಗಳೆಲ್ಲಾ ಒಂದುಗೂಡಿ ಎಲುಬಿಗೆ ಎಲುಬು ಜೋಡಣೆಯಾದವು.
Mənə əmr olunduğu kimi peyğəmbərlik etdim. Mən peyğəmbərlik edərkən bir gurultu qopdu, bir taqqıltı eşidildi. Sümüklər yaxınlaşdı, sümük sümüyə bitişdi.
8 ನಾನು ನೋಡುತ್ತಿರುವಾಗ ಏನಾಶ್ಚರ್ಯ ಆಹಾ, ಅವುಗಳ ಮೇಲೆ ನರಗಳು ಹಬ್ಬಿಕೊಂಡವು, ಮಾಂಸವು ಹರಡಿಕೊಂಡಿತು, ಚರ್ಮವು ಮೇಲ್ಹೊದಿಕೆಯಾಯಿತು, ಶ್ವಾಸ ಮಾತ್ರ ಇರಲಿಲ್ಲ.
Mən baxıb gördüm ki, onların üstünə vətərlər gəldi, ət bitdi, bunları isə dəri örtdü. Ancaq onlarda nəfəs yox idi.
9 ಆಗ ಆತನು ನನಗೆ, “ನರಪುತ್ರನೇ, ನೀನು ಶ್ವಾಸಕ್ಕೆ ನುಡಿ, ‘ಓ ಶ್ವಾಸವೇ,’ ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ನೀನು ಚತುರ್ದಿಕ್ಕುಗಳಿಂದ ಬೀಸಿ, ಈ ಹತಶರೀರಗಳು ಬದುಕುವಂತೆ ಅವುಗಳ ಮೇಲೆ ಊದು.’”
Rəbb mənə dedi: «Ey bəşər oğlu, nəfəs üçün peyğəmbərlik et, peyğəmbərlik edib nəfəsə söylə ki, Xudavənd Rəbb belə deyir: “Ey nəfəs, küləyin əsdiyi dörd səmtdən gəl, bu öldürülən adamların üzərinə üfür ki, dirilsinlər”».
10 ೧೦ ನನಗೆ ಕೊಟ್ಟ ಅಪ್ಪಣೆಯಂತೆ ನಾನು ನುಡಿದು, ಶ್ವಾಸ ಊದಿದೆ. ಇಗೋ, ಉಸಿರು ಅವುಗಳಲ್ಲಿ ಬಂದಿತು, ಅವು ಬದುಕಿದವು, ಕಾಲೂರಿ ನಿಂತವು, ಅತ್ಯಂತ ಮಹಾ ಸೈನ್ಯವಾದವು.
Mənə əmr olunduğu kimi peyğəmbərlik etdim. Nəfəs onların daxilinə girdi və onlar dirilib ayaq üstə qalxdı. Çox böyük bir kütlə yarandı.
11 ೧೧ ಆಮೇಲೆ ಆತನು ನನಗೆ ಹೀಗೆ ಹೇಳಿದನು, “ನರಪುತ್ರನೇ, ಈ ಎಲುಬುಗಳು ಇಸ್ರಾಯೇಲಿನ ಮನೆತನಗಳೇ; ಇಗೋ, ಆ ಮನೆತನದವರು, ‘ಅಯ್ಯೋ, ನಮ್ಮ ಎಲುಬುಗಳು ಒಣಗಿಹೋದವು, ನಮ್ಮ ನಿರೀಕ್ಷೆಯು ಹಾಳಾಯಿತು; ನಾವು ಸಂಪೂರ್ಣವಾಗಿ ನಾಶವಾದೆವು’” ಅಂದುಕೊಳ್ಳುತ್ತಿದ್ದಾರೆ.
Rəbb mənə dedi: «Ey bəşər oğlu, bu sümüklər bütün İsrail nəslinin rəmzidir. Onlar belə deyir: “Sümüklərimiz qurudu, ümidimiz yox oldu, işimiz bitdi”.
12 ೧೨ ಆದಕಾರಣ ನೀನು ಈ ಪ್ರವಾದನೆಯನ್ನು ಅವರಿಗೆ ನುಡಿ, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನನ್ನ ಜನರೇ, ನೋಡಿರಿ, ನಾನು ನಿಮ್ಮ ಸಮಾಧಿಗಳನ್ನು ತೆರೆದು, ಅವುಗಳೊಳಗಿಂದ ನಿಮ್ಮನ್ನು ಎಬ್ಬಿಸಿ, ಇಸ್ರಾಯೇಲ್ ದೇಶಕ್ಕೆ ನಿಮ್ಮನ್ನು ತರುವೆನು.
Buna görə də peyğəmbərlik edib onlara söylə ki, Xudavənd Rəbb belə deyir: “Ey xalqım, Mən qəbirlərinizi açıb sizi oradan çıxaracaq və İsrail torpağına gətirəcəyəm.
13 ೧೩ ನನ್ನ ಜನರೇ, ನಾನು ನಿಮ್ಮ ಸಮಾಧಿಗಳನ್ನು ತೆರೆದು, ಅವುಗಳೊಳಗಿಂದ ನಿಮ್ಮನ್ನು ಎಬ್ಬಿಸಿದಾಗ ನಾನೇ ಯೆಹೋವನು ಎಂದು ನಿಮಗೆ ದೃಢವಾಗುವುದು.
Ey xalqım, Mən qəbirlərinizi açanda, sizi qəbirlərinizdən çıxaranda biləcəksiniz ki, Rəbb Mənəm.
14 ೧೪ ನಾನು ನನ್ನ ಶ್ವಾಸವನ್ನು ನಿಮ್ಮಲ್ಲಿ ಊದಿ, ನಿಮ್ಮನ್ನು ಬದುಕಿಸಿ, ನಿಮ್ಮ ದೇಶದಲ್ಲಿ ನೆಲೆಗೊಳಿಸುವೆನು; ಆಗ ಯೆಹೋವನಾದ ನಾನೇ ಇದನ್ನು ನುಡಿದು, ನಡೆಸಿದ್ದೇನೆ ಎಂದು ತಿಳಿದುಕೊಳ್ಳುವಿರಿ” ಇದು ಯೆಹೋವನ ಸಂಕಲ್ಪ.
Mən daxilinizə Öz Ruhumu qoyacağam və siz diriləcəksiniz. Sizi öz torpağınıza yerləşdirəcəyəm. Onda biləcəksiniz ki, Mən Rəbb bunu söylədim və hökmən yerinə yetirəcəyəm” Rəbb belə bəyan edir».
15 ೧೫ ಯೆಹೋವನು ಇನ್ನೊಂದು ವಾಕ್ಯವನ್ನು ನನಗೆ ದಯಪಾಲಿಸಿದನು,
Mənə Rəbbin bu sözü nazil oldu:
16 ೧೬ “ನರಪುತ್ರನೇ, ನೀನು ಒಂದು ಕೋಲನ್ನು ತೆಗೆದುಕೊಂಡು, ಅದರಲ್ಲಿ ಯೆಹೂದದ್ದು ಮತ್ತು ಯೆಹೂದಕ್ಕೆ ಸೇರಿದ ಇಸ್ರಾಯೇಲರದು ಎಂದು ಬರೆದು, ಇನ್ನೊಂದು ಕೋಲನ್ನು ತೆಗೆದುಕೊಂಡು ಅದರಲ್ಲಿ ಯೋಸೇಫಿನದು, ಎಫ್ರಾಯೀಮಿನದು, ಯೋಸೇಫಿಗೆ ಸೇರಿದ ಎಲ್ಲಾ ಇಸ್ರಾಯೇಲರದು ಎಂದು ಬರೆ.
«Sən ey bəşər oğlu, əlinə bir əsa götür və onun üstünə “Yəhuda və müttəfiqləri olan İsrail övladları” sözlərini yaz. Sonra başqa bir əsa götür və onun üstünə “Yusif və müttəfiqləri olan bütün İsrail nəsli” sözlərini yaz. Bu, Efrayimin əsasıdır.
17 ೧೭ ಆ ಮೇಲೆ ಅವು ನಿನ್ನ ಕೈಯಲ್ಲಿ ಒಂದಾಗುವಂತೆ ಅವೆರಡನ್ನೂ ಒಂದಕ್ಕೊಂದು ಉದ್ದವಾಗಿ ಸೇರಿಸಿ ಹಿಡಿ.
Bu əsaları bir-birinin üstünə qoyaraq öz əlində birləşdir. Elə et ki, əlində bir əsa olsun.
18 ೧೮ “ನಿನ್ನ ಜನರು, ‘ಇದೇನು? ನಮಗೆ ತಿಳಿಸುವುದಿಲ್ಲವೋ’ ಎಂದು ನಿನ್ನನ್ನು ಕೇಳುವಾಗ ನೀನು ಅವರಿಗೆ,
Əgər sənin xalqına mənsub olanlar “Etdiklərinin mənası nədir, bizə bildirməzsən?” deyə soruşsa,
19 ೧೯ ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ಇಗೋ, ಎಫ್ರಾಯೀಮು ಹಿಡಿದಿರುವ ದಂಡವನ್ನು ಅಂದರೆ ಯೋಸೇಫಿನ ಮತ್ತು ಯೋಸೇಫಿಗೆ ಸೇರಿದ ಇಸ್ರಾಯೇಲ್ ಕುಲಗಳ ಕೋಲನ್ನು ನಾನು ತೆಗೆದು, ಯೆಹೂದದ ಕೋಲಿಗೆ ಉದ್ದವಾಗಿ ಸೇರಿಸಿ, ಅವೆರಡನ್ನು ನನ್ನ ಕೈಯಲ್ಲಿ ಒಂದೇ ಕೋಲನ್ನಾಗಿ ಹಿಡಿಯುವೆನು ಎಂದು ಹೇಳು.
onlara söylə ki, Xudavənd Rəbb belə deyir: “Efrayimin əlindəki əsanı – Yusif və onun müttəfiqləri olan İsrail qəbilələrinin əsasını götürərək Yəhudanın əsası ilə birləşdirib bir əsa edəcəyəm. Onlar əlimdə bir olacaq.
20 ೨೦ ಹೇಳುವಾಗ ನೀನು ಹೆಸರು ಬರೆದಿರುವ ಕೋಲುಗಳು ಅವರ ಕಣ್ಣೆದುರಿಗೆ ನಿನ್ನ ಕೈಯಲ್ಲಿರಲಿ.’”
Üstünə yazı yazdığın əsaları onların görə biləcəyi şəkildə əlində tut.
21 ೨೧ ಇದನ್ನೂ ಅವರಿಗೆ ನುಡಿ, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಇಗೋ, ಇಸ್ರಾಯೇಲರು ವಶವಾಗಿರುವ ಜನಾಂಗಗಳೊಳಗಿಂದ ನಾನು ಅವರನ್ನು ಉದ್ಧರಿಸಿ, ಎಲ್ಲಾ ಕಡೆಯಿಂದಲೂ ಒಟ್ಟಗೂಡಿಸಿ, ಸ್ವದೇಶಕ್ಕೆ ಕರೆದು ತರುವೆನು.
Sonra onlara söylə ki, Xudavənd Rəbb belə deyir: İsrail övladlarını yanlarına getdikləri millətlərin arasından götürəcək, onları hər yerdən toplayıb öz torpaqlarına qaytaracağam.
22 ೨೨ ಅಲ್ಲಿ ಇಸ್ರಾಯೇಲಿನ ಪರ್ವತಗಳ ಮೇಲೆ ಒಂದೇ ಜನಾಂಗವನ್ನಾಗಿ ಮಾಡುವೆನು. ಒಬ್ಬನೇ ಅವರೆಲ್ಲರಿಗೂ ರಾಜನಾಗಿರುವನು. ಅವರು ಇನ್ನೆಂದಿಗೂ ಎರಡು ಜನಾಂಗದವರಾಗಿಯೂ, ಭಿನ್ನರಾಜ್ಯದವರಾಗಿಯೂ ಇರುವುದಿಲ್ಲ.
Onları ölkədə, İsrail dağları üzərində vahid bir millət edəcəyəm. Hamısının vahid padşahı olacaq. Daha iki ayrı millət olmayacaq, iki padşahlığa bölünməyəcəklər.
23 ೨೩ ತಮ್ಮ ವಿಗ್ರಹಗಳಿಂದಾಗಲಿ, ಅಸಹ್ಯವಸ್ತುಗಳಿಂದಾಗಲಿ, ಯಾವ ದುರಾಚಾರದಿಂದಲೇ ಆಗಲಿ ತಮ್ಮನ್ನು ಇನ್ನು ಮುಂದೆ ಅಶುದ್ಧ ಮಾಡಿಕೊಳ್ಳುವುದಿಲ್ಲ. ಅವರು ಪಾಪಮಾಡಿ ಸಿಕ್ಕಿಬಿದ್ದ ದೇವದ್ರೋಹದಿಂದ ನಾನು ಅವರನ್ನು ಉದ್ಧರಿಸಿ ಶುದ್ಧೀಕರಿಸುವೆನು. ಅವರು ನನಗೆ ಪ್ರಜೆಯಾಗಿರುವರು, ನಾನು ಅವರಿಗೆ ದೇವರಾಗಿರುವೆನು.
Artıq bütləri, iyrənc şeyləri və üsyanları ilə özlərini murdar etməyəcəklər. Onları yaşadıqları və içində günah etdikləri yerlərdən qurtarıb pak edəcəyəm. Onlar Mənim xalqım, Mən də onların Allahı olacağam.
24 ೨೪ “ನನ್ನ ಸೇವಕನಾದ ದಾವೀದನು ಅವರಿಗೆ ರಾಜನಾಗಿರುವನು; ಅವರೆಲ್ಲರಿಗೂ ಒಬ್ಬನೇ ಪಾಲಕನಿರುವನು ಮತ್ತು ಅವರು ನನ್ನ ನಿಯಮಗಳನ್ನು ಅನುಸರಿಸಿ ನನ್ನ ವಿಧಿಗಳನ್ನು ಕೈಕೊಂಡು ಆಚರಿಸುವರು.
Qulum Davud onların padşahı olacaq, onların hamısına vahid çoban olacaq. Onlar Mənim hökmlərimə görə rəftar edəcək, qaydalarımı saxlayıb yerinə yetirəcək.
25 ೨೫ ನನ್ನ ಸೇವಕನಾದ ಯಾಕೋಬನಿಗೆ ನಾನು ದಯಪಾಲಿಸಿದ ದೇಶದಲ್ಲಿ ಅವರು ವಾಸಿಸುವರು; ಹೌದು, ನಿಮ್ಮ ಪೂರ್ವಿಕರು ವಾಸಿಸಿದ ದೇಶದಲ್ಲಿ ಅವರೂ ಮತ್ತು ಅವರ ಸಂತಾನದವರೂ ತಲತಲಾಂತರವಾಗಿ ವಾಸಿಸುವರು. ನನ್ನ ಸೇವಕನಾದ ದಾವೀದನು ಅವರಿಗೆ ಸದಾ ಅರಸನಾಗಿರುವನು.
Qulum Yaquba verdiyim, atalarının yaşadıqları ölkədə yaşayacaqlar, özləri, oğulları və nəvələri əbədi olaraq orada yaşayacaq. Qulum Davud da əbədi olaraq onların rəhbəri olacaq.
26 ೨೬ ನಾನು ಅವರೊಂದಿಗೆ ಸಮಾಧಾನದ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು; ಅದು ಶಾಶ್ವತವಾಗಿರುವುದು. ನಾನು ಅವರನ್ನು ನೆಲೆಗೊಳಿಸಿ, ವೃದ್ಧಿಮಾಡಿ, ನನ್ನ ಪವಿತ್ರಾಲಯವನ್ನು ಅವರ ನಡುವೆ ಯುಗಯುಗಾಂತರಕ್ಕೂ ನಿಲ್ಲಿಸುವೆನು.
Mən onlarla sülh əhdi bağlayacağam. Bu onlarla əbədi bir əhd olacaq. Onları orada yerləşdirəcək və saylarını çoxaldacağam. Müqəddəs məkanımı əbədi olaraq onların arasında quracağam.
27 ೨೭ ಹೌದು, ನನ್ನ ವಾಸಸ್ಥಾನವು ಅವರ ಮಧ್ಯದಲ್ಲಿರುವುದು; ನಾನು ಅವರಿಗೆ ದೇವರಾಗಿರುವೆನು. ಅವರು ನನಗೆ ಪ್ರಜೆಯಾಗಿರುವರು.
Mənim məskənim onların arasında olacaq. Mən onların Allahı, onlar da Mənim xalqım olacaq.
28 ೨೮ ನನ್ನ ಪವಿತ್ರಾಲಯವು ಅವರ ಮಧ್ಯೆ ಶಾಶ್ವತವಾಗಿರುವಾಗ ಯೆಹೋವನಾದ ನಾನೇ ಇಸ್ರಾಯೇಲರನ್ನು ಪರಿಶುದ್ಧಗೊಳಿಸಿದೆನೆಂದು ಅನ್ಯಜನಾಂಗದವರು ತಿಳಿದುಕೊಳ್ಳುವರು.”
Müqəddəs məkanım əbədi olaraq onların arasında yerləşəndə millətlər biləcək ki, İsraili təqdis edən Mən Rəbbəm”».

< ಯೆಹೆಜ್ಕೇಲನು 37 >