< ಯೆಹೆಜ್ಕೇಲನು 38 >
1 ೧ ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು,
Opět stalo se slovo Hospodinovo ke mně, řkoucí:
2 ೨ “ನರಪುತ್ರನೇ, ರೋಷಿನವರನ್ನೂ, ಮೆಷೆಕಿನವರನ್ನೂ, ತೂಬಲಿನವರನ್ನೂ ಆಳುವ ಮಾಗೋಗ್ ದೇಶದ ದೊರೆಯಾದ ಗೋಗನ ಕಡೆಗೆ ಮುಖಮಾಡಿ ಅವನಿಗೆ ಈ ಪ್ರವಾದನೆಯನ್ನು ನುಡಿ,
Synu člověčí, obrať tvář svou proti Gogovi, země Magog, knížeti a hlavě v Mešech a Tubal, a prorokuj proti němu,
3 ೩ ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ರೋಷ್, ಮೆಷೆಕ್, ತೂಬಲ್ ಜನಾಂಗಗಳ ಪ್ರಭುವಾದ ಗೋಗನೇ, ನಾನು ನಿನಗೆ ವಿರುದ್ಧವಾಗಿದ್ದೇನೆ.
A rci: Takto praví Panovník Hospodin: Aj, já budu proti tobě, Gogu, kníže a hlavo v Mešech a Tubal.
4 ೪ ನಾನು ನಿನ್ನನ್ನು ಹಿಂದಕ್ಕೆ ತಿರುಗಿಸಿ, ನಿನ್ನ ದವಡೆಗಳಲ್ಲಿ ಕೊಕ್ಕೆಗಳನ್ನು ಹಾಕಿ, ನಿನ್ನ ಎಲ್ಲಾ ಸೈನ್ಯವನ್ನೂ, ಕುದರೆಗಳನ್ನೂ ಮತ್ತು ಕುದರೆ ಸವಾರರನ್ನೂ ಮುಂದೆ ತರುವೆನು. ಇವರೆಲ್ಲರೂ ನಾನಾ ತರವಾದ ಆಯುಧಗಳನ್ನು ತೊಟ್ಟಿರುವರು, ಇವರೊಂದಿಗೆ ಖೇಡ್ಯ ಮತ್ತು ಗುರಾಣಿಗಳುಳ್ಳ ಮಹಾಸಮೂಹವನ್ನು ತರುವೆನು. ಇವರೆಲ್ಲರೂ ಖಡ್ಗವನ್ನು ಹಿಡಿದಿರುವರು.
A odvedu tě zpět, dada udice do čelistí tvých, když tě vyvedu i všecko vojsko tvé, koně i jezdce, všecky oblečené v celou zbroj, zástup veliký s pavézami a štíty, všecky ty, kteříž užívají meče:
5 ೫ ಅವರೊಂದಿಗೆ ಪಾರಸಿಯರು, ಕೂಷ್ಯರು, ಪೂಟ್ಯರು ಇವರೆಲ್ಲರೊಂದಿಗೆ ಗುರಾಣಿ ಮತ್ತು ಶಿರಸ್ತ್ರಾಣಗಳು ಇದ್ದವು.
Perské, Mouřeníny i Putské s nimi, všecky ty s štíty a lebkami,
6 ೬ ಉತ್ತರದಿಕ್ಕಿನ ಕಟ್ಟಕಡೆಯಿಂದ ಬಂದ ಗೋಮೆರ್ ಮತ್ತು ಸೈನ್ಯದವರನ್ನೂ, ತೋಗರ್ಮದವರನ್ನು ಮತ್ತು ಅನೇಕ ಜನರನ್ನು ನಿನ್ನೊಂದಿಗೆ ಬರಮಾಡುವೆನು.
Gomera i všecky houfy jeho, dům Togarmy od stran půlnočních, i všecky houfy jeho, národy mnohé s tebou.
7 ೭ “‘ಸಿದ್ಧವಾಗಿರು! ನಿನ್ನಲ್ಲಿ ಕೂಡಿಬಂದಿರುವ ಎಲ್ಲಾ ತಂಡಗಳೊಡನೆ ನಿನ್ನನ್ನು ಸಿದ್ಧಮಾಡಿಕೋ; ನೀನು ಅವರ ದಂಡ ನಾಯಕನಾಗಿರು.
Budiž hotov, a připrav se, ty i všecko shromáždění tvé, těch, kteříž se k tobě sebrali, a buď strážcím jejich.
8 ೮ ಬಹಳ ದಿನಗಳಾದ ಮೇಲೆ ನಾನು ನಿನ್ನನ್ನು ಕರೆಯುತ್ತೇನೆ; ಕೆಲವು ವರ್ಷಗಳ ನಂತರ ಖಡ್ಗದಿಂದ ಉಳಿದುಕೊಂಡ ದೇಶಕ್ಕೂ, ಯಾವಾಗಲೂ ಹಾಳಾಗಿದ್ದ ಇಸ್ರಾಯೇಲಿನ ಪರ್ವತಗಳ ಮೇಲೆಯೂ, ಜನಾಂಗಗಳೊಳಗಿಂದ ಕೂಡಿಸಲ್ಪಟ್ಟು ಎಲ್ಲರೂ ಭದ್ರವಾಗಿ ವಾಸಿಸುವವರ ಬಳಿಗೆ ನೀನು ಬರುವಿ.
Po mnohých dnech navštíven budeš, v potomních letech přitáhneš na lid vysvobozený od meče, a shromážděný z národů mnohých na hory Izraelské, kteréž byly pustinou ustavičně, když oni z národů jsouce vyvedeni, budou bydliti bezpečně všickni.
9 ೯ ನೀನು ಮೇಲೇರಿ ಬಿರುಗಾಳಿಯಂತೆ ಹೊರಟು ಬರುವೆ. ನಿನ್ನ ಎಲ್ಲಾ ದಂಡುಗಳೂ ಅನೇಕ ಜನರ ಸಹಿತವಾಗಿ ಕಾರ್ಮುಗಿಲಿನಂತೆ ದೇಶವನ್ನು ಮುಚ್ಚಿಬಿಡುವುದು.’”
V tom přitáhneš a přijdeš jako bouře, budeš jako oblak přikrývající zemi, ty i všickni houfové tvoji, i národové mnozí s tebou.
10 ೧೦ ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಆಗ ನಿನ್ನ ಮನಸ್ಸಿನಲ್ಲಿ ಆಲೋಚನೆಗಳು ಹುಟ್ಟುವವು ಮತ್ತು ನೀನು ಕೆಟ್ಟ ಯೋಚನೆಯನ್ನು ಮಾಡುವಿ.
Takto praví Panovník Hospodin: I stane se v ten den, že vstoupí mnohé věci na srdce tvé, a budeš mysliti myšlení zlé.
11 ೧೧ ಆಗ ನೀನು, ‘ಆಹಾ, ನಾನು ಪೌಳಿಗೋಡೆಯಿಲ್ಲದ ಹಳ್ಳಿಗಳಿಂದ ತುಂಬಿದ ದೇಶವನ್ನು ನುಗ್ಗಿ, ಅಗುಳಿ, ಬಾಗಿಲು, ಗೋಡೆಗಳಿಲ್ಲದೆ ನೆಮ್ಮದಿಯಿಂದ ನಿರ್ಭಯವಾಗಿರುವವರ ಮೇಲೆ ಬೀಳುವೆನು’ ಅಂದುಕೊಂಡೆ.
A díš: Potáhnu na zemi, v níž jsou vsi, přitáhnu na ty, jenž pokoje užívají, bydlíce bezpečně, na všecky, kteříž bydlejí beze všech zdí, a nemají žádné závory ani bran,
12 ೧೨ ಸುಲಿಗೆಯನ್ನು, ಕೊಳ್ಳೆಯನ್ನು ಹೊಡೆಯಬೇಕೆಂತಲೂ, ನಿರ್ಜನವಾಗಿದ್ದು ಜನಭರಿತವಾದ ಪ್ರದೇಶಗಳ ಮೇಲೆ ಕೈಮಾಡಬೇಕೆಂತಲೂ ಜನಾಂಗಗಳೊಳಗಿಂದ ಕೂಡಿಸಲ್ಪಟ್ಟ ಧನ ಕನಕ ಮೊದಲಾದ ಸೊತ್ತನ್ನು ಸಂಗ್ರಹಿಸಿಕೊಂಡು, ಭೂಮಿಯ ಮಧ್ಯದಲ್ಲಿ ವಾಸಿಸುವವರನ್ನು ಹತಿಸಬೇಕೆಂತಲೂ ಕುತಂತ್ರವನ್ನು ಕಲ್ಪಿಸುವಿ.
Abych vzebral kořisti, a rozchvátal loupeže, obraceje ruku svou proti pouštěm již osazeným, a proti lidu zase shromážděnému z národů, zacházejícímu s dobytkem a jměním, bydlejícím u prostřed země.
13 ೧೩ ಶೆಬದವರೂ, ದೆದಾನಿನವರೂ, ತಾರ್ಷೀಷಿನ ವರ್ತಕರೂ, ಅದರ ಸಿಂಹಪ್ರಾಯರೆಲ್ಲರೂ ನಿನ್ನನ್ನು ನೋಡಿ, ‘ನೀನು ಸೂರೆಮಾಡಲಿಕ್ಕೆ ಬಂದಿಯೋ? ಕೊಳ್ಳೆಹೊಡೆದು ಬೆಳ್ಳಿಬಂಗಾರವನ್ನು ದೋಚಿಕೊಂಡು, ಧನ ಕನಕ ಮುಂತಾದ ಸೊತ್ತನ್ನು ಅಪಹರಿಸಿ, ಅಪಾರವಾದ ಆಸ್ತಿಯನ್ನು ಸುಲಿದುಕೊಂಡು ಹೋಗಲು ನಿನ್ನ ತಂಡವನ್ನು ಕೂಡಿಸಿಕೊಂಡು ಬಂದೆಯಾ?’” ಎಂದು ಕೇಳುವರು.
Sába a Dedan, a kupci mořští, i všecka lvíčata jeho řeknou tobě: K rozebrání-liž kořistí ty se béřeš? K rozchvátání-li loupeže shromáždil jsi množství své, abys bral stříbro a zlato, abys nabral dobytka i zboží, a nashromáždil loupeže veliké?
14 ೧೪ ಹೀಗಿರಲು, “ನರಪುತ್ರನೇ, ನೀನು ಗೋಗನಿಗೆ ಈ ಪ್ರವಾದನೆಯನ್ನು ನುಡಿ, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ನನ್ನ ಜನರಾದ ಇಸ್ರಾಯೇಲರು ನೆಮ್ಮದಿಯಾಗಿ ವಾಸಿಸುವ ಕಾಲದಲ್ಲಿ ಆ ನೆಮ್ಮದಿಯು ನಿನಗೆ ಗೊತ್ತಾಗುವುದು.
Protož synu člověčí, prorokuj a rci Gogovi: Takto praví Panovník Hospodin: Zdaliž toho dne, když bude lid můj Izraelský bydliti bezpečně, nezvíš,
15 ೧೫ ನೀನು ನಿನ್ನ ಸ್ಥಳವನ್ನು ಬಿಟ್ಟು, ಅಶ್ವಬಲದ ಮಹಾಸೈನ್ಯವಾಗಿ ಗುಂಪು ಕೂಡಿದ ಅನೇಕ ಜನಾಂಗಗಳೊಡನೆ ಉತ್ತರದಿಕ್ಕಿನ ಕಟ್ಟಕಡೆಯಿಂದ ಬರುವಿ.
Kdyžto přitáhnouce z místa svého od stran půlnočních, ty i národové mnozí s tebou, sedíce na koních všickni, shromáždění veliké a vojsko znamenité,
16 ೧೬ ನನ್ನ ಜನರಾದ ಇಸ್ರಾಯೇಲರ ಮೇಲೆ ಬಿದ್ದು, ಕಾರ್ಮುಗಿಲಿನಂತೆ ದೇಶವನ್ನು ಮುಚ್ಚಿಬಿಡುವಿ; ಗೋಗನೇ, ಜನಾಂಗಗಳ ಕಣ್ಣೆದುರಿಗೆ ನಿನ್ನ ನಾಶದಿಂದ ನನ್ನ ಗೌರವವನ್ನು ಕಾಪಾಡಿಕೊಂಡು ನಾನೇ ಯೆಹೋವನೆಂದು ಜನಾಂಗಗಳಿಗೆ ಗೋಚರವಾಗುವಂತೆ ನಾನು ನಿನ್ನನ್ನು ಕಾಲಾನುಕಾಲಕ್ಕೆ ನನ್ನ ದೇಶದ ಮೇಲೆ ಬೀಳಮಾಡುವೆನು.’”
Potáhneš na lid můj Izraelský jako oblak, abys přikryl tu zemi? V potomních dnech stane se, že tě přivedu na zemi svou, aby mne poznali národové, když posvěcen budu v tobě před očima jejich, ó Gogu.
17 ೧೭ ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನನ್ನ ಸೇವಕರಾದ ಇಸ್ರಾಯೇಲಿನ ಪ್ರವಾದಿಗಳು ಪುರಾತನ ಕಾಲದಲ್ಲಿ ಬಹು ವರ್ಷ ಪ್ರವಾದಿಸುತ್ತಾ, ನಾನು ಒಬ್ಬನನ್ನು ಇಸ್ರಾಯೇಲರ ಮೇಲೆ ಬೀಳ ಮಾಡುವೆನು” ಎಂದು ಮುಂತಿಳಿಸಿದಂತೆ; ನಾನು ಅವರ ಮೂಲಕ ಮುಂತಿಳಿಸಿದವನು ನೀನೇ ಅಲ್ಲವೇ.
Takto praví Panovník Hospodin: Zdaliž ty nejsi ten, o kterémž jsem mluvil za dnů starodávních skrze služebníky své, proroky Izraelské, kteříž prorokovali za těch dnů a let, že tě přivedu na ně?
18 ೧೮ ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಗೋಗನು ಇಸ್ರಾಯೇಲ್ ದೇಶದ ಮೇಲೆ ಬೀಳುವ ದಿನದಲ್ಲಿ ನಾನು ಸಿಟ್ಟಿನಿಂದ ಬುಸುಗುಟ್ಟುವೆನು.
A však stane se v ten den, v den, v kterýž přitáhne Gog na zemi Izraelskou, praví Panovník Hospodin, že povstane prchlivost má s hněvem mým,
19 ೧೯ ನಾನು ರೋಷದಿಂದ ಮತ್ತು ಕೋಪದಿಂದ ಉರಿಯುತ್ತಾ ಹೀಗೆ ನುಡಿದಿದ್ದೇನೆ, ‘ಆಹಾ, ಆ ದಿನದಲ್ಲಿ ಇಸ್ರಾಯೇಲ್ ದೇಶದೊಳಗೆ ಮಹಾಕಂಪನವಾಗುವುದು ಖಂಡಿತ.
A v rozhorlení svém, v ohni prchlivosti své mluviti budu. Jistě že v ten den bude pohnutí veliké v zemi Izraelské,
20 ೨೦ ಆಗ ಸಮುದ್ರದ ಮೀನುಗಳು, ಆಕಾಶದ ಪಕ್ಷಿಗಳು, ಕಾಡುಮೃಗಳು ನೆಲದಲ್ಲಿ ಹರಿದಾಡುವ ಕ್ರಿಮಿಕೀಟಗಳು, ಭೂಮಂಡಲದ ಸಕಲ ಮನುಷ್ಯರೂ ನನ್ನೆದುರಿಗೆ ನಡುಗುವವು; ಪರ್ವತಗಳು ಉರುಳಿಹೋಗುವವು, ಝರಿಗಳು ಕವಚಿಗೊಳ್ಳುವವು, ಎಲ್ಲಾ ಗೋಡೆಗಳು ನೆಲಸಮವಾಗುವವು.’”
Tak že se pohnou před tváří mou ryby mořské i ptactvo nebeské, a zvěř polní i všeliký zeměplaz plazící se po zemi, i všickni lidé, kteříž jsou na svrchku země. I rozválejí se hory, a padnou výsosti, i každá zed na zem upadne.
21 ೨೧ ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಖಡ್ಗವು ನನ್ನ ಪರ್ವತಗಳಲ್ಲೆಲ್ಲಾ ಗೋಗನನ್ನು ಸಂಹರಿಸಲಿ ಎಂದು ಅಪ್ಪಣೆಕೊಡುವೆನು; ಪ್ರತಿಯೊಬ್ಬ ಮನುಷ್ಯನ ಕತ್ತಿಯೂ ಅವನ ಸಹೋದರನಿಗೆ ವಿರುದ್ಧವಾಗಿರುವುದು.
Nebo zavolám proti němu po všech horách mých meče, praví Panovník Hospodin; meč každého proti bratru jeho bude.
22 ೨೨ ನಾನು ಗೋಗನ ಸಂಗಡ ವ್ಯಾಜ್ಯಮಾಡುತ್ತಾ ಅವನನ್ನು ವ್ಯಾಧಿಗೂ, ಸಾವಿಗೂ ಗುರಿಮಾಡಿ, ನಾನು ಅವನ ಮೇಲೆಯೂ, ಅವನ ದಂಡುಗಳ ಮೇಲೆಯೂ, ಅವನೊಂದಿಗಿರುವ ಅನೇಕ ಜನಾಂಗಗಳ ಮೇಲೆಯೂ ವಿಪರೀತ ಮಳೆ, ದೊಡ್ಡ ಆನೆಕಲ್ಲು, ಬೆಂಕಿ, ಗಂಧಕ, ಇವುಗಳನ್ನು ಸುರಿಸುವೆನು.
A vykonám při něm soud morem a krve prolitím a přívalem rozvodnilým, a kamením krupobití velikého, ohněm a sirou dštíti budu na něj i na houfy jeho, a na národy mnohé, kteříž jsou s ním.
23 ೨೩ ಹೀಗೆ ನಾನು ನನ್ನ ಮಹಿಮೆಯನ್ನು ತೋರ್ಪಡಿಸಿ, ನನ್ನ ಗೌರವವನ್ನು ಕಾಪಾಡಿಕೊಂಡು, ಅನೇಕ ಜನಾಂಗಗಳು ನಾನೇ ಯೆಹೋವನು ಎಂದು ತಿಳಿದುಕೊಳ್ಳುವಂತೆ ಅವುಗಳ ಕಣ್ಣೆದುರಿಗೆ ವ್ಯಕ್ತವಾಗುವೆನು.”
A tak zveleben, a posvěcen, a v známost uveden budu před očima národů mnohých, a zvědí, že já jsem Hospodin.