< ಯೆಹೆಜ್ಕೇಲನು 39 >
1 ೧ ಈಗ, “ನರಪುತ್ರನೇ, ನೀನು ಗೋಗನಿಗೆ ವಿರುದ್ಧವಾಗಿ ಈ ಪ್ರವಾದನೆಯನ್ನು ನುಡಿ, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ರೋಷ್, ಮೆಷೆಕ್, ತೂಬಲ್ ಜನಾಂಗಗಳ ಪ್ರಭುವಾದ ಗೋಗನೇ, ಆಹಾ! ನಾನು ನಿನ್ನ ವಿರುದ್ಧವಾಗಿದ್ದೇನೆ.
Ja sinä, ihmisen poika, ennusta Gogia vastaan ja sano: näin sanoo Herra, Herra: katso, minä tulen sinun kimppuus, Gog, sinä joka olet Mesekin ja Tubalin ylimmäinen päämies;
2 ೨ ನಾನು ನಿನ್ನನ್ನು ಪರಿವರ್ತಿಸಿ, ಮುಂದುವರಿಸಿ ಉತ್ತರದಿಕ್ಕಿನ ಕಟ್ಟಕಡೆಯಿಂದ ಬರಮಾಡಿ, ಇಸ್ರಾಯೇಲಿನ ಪರ್ವತಗಳ ಮೇಲೆ ನುಗ್ಗಿಸಿ,
Ja tahdon sinun palauttaa ja houkutella ulos, ja noudan sinun pohjan ääristä, ja annan sinun tulla Israelin vuorille:
3 ೩ ನಾನು ನಿನ್ನ ಎಡಗೈಯಲ್ಲಿರುವ ಬಿಲ್ಲನ್ನು ಹೊಡೆದು ಹಾಕಿ, ನಿನ್ನ ಬಲಗೈಯಲ್ಲಿರುವ ಬಾಣಗಳನ್ನು ಬೀಳುವಂತೆ ಮಾಡುವೆನು.
Ja lyön joutsen pois sinun vasemmasta kädestäs ja heitän sinun nuoles oikiasta kädestäs.
4 ೪ ನೀನೂ, ನಿನ್ನ ಎಲ್ಲಾ ಸೈನ್ಯದಳಗಳೂ ಮತ್ತು ನಿನ್ನೊಂದಿಗಿರುವ ನಿನ್ನ ಜನರೂ ಇಸ್ರಾಯೇಲಿನ ಪರ್ವತಗಳಲ್ಲಿ ಬೀಳುವಿರಿ; ನಾನು ನಿಮ್ಮನ್ನು ಹದ್ದುಗಳಿಗೂ, ಪಕ್ಷಿಗಳಿಗೂ ಕಾಡಿನ ಮೃಗಗಳಿಗೂ, ಬಯಲಿನ ಭೂಜಂತುಗಳಿಗೂ ಆಹಾರವಾಗುವಂತೆ ನಾನು ನಿನ್ನನ್ನು ಕೊಡುವೆನು.
Israelin vuorilla pitää sinun kaatuman, kaiken sinun joukkos kanssa ja sen väen kanssa, joka sinun tykönäs on. Minä annan sinun linnuille, kusta ikänä he lentävät, ja eläimille ruaksi.
5 ೫ ನೀನು ತೆರೆದ ಬಯಲಿನಲ್ಲಿ ಬೀಳುವಿ. ಏಕೆಂದರೆ ನಾನೇ ಅಪ್ಪಣೆ ಕೊಟ್ಟಿದ್ದೇನೆ’ ಎಂದು ಕರ್ತನಾದ ಯೆಹೋವನ ನುಡಿಯುತ್ತಾನೆ.
Sinun pitää lankeeman kedolla; sillä minä Herra, Herra olen sen sanonut.
6 ೬ ನಾನು ಮಾಗೋಗ್ ದೇಶದ ಮೇಲೂ, ಕರಾವಳಿಯ ಸೀಮೆಗಳಲ್ಲಿ ನಿರ್ಭಯವಾಗಿ ವಾಸಿಸುವವರ ಮೇಲೂ ಬೆಂಕಿಯನ್ನು ಕಳುಹಿಸುವೆನು. ಆಗ ನಾನೇ ಯೆಹೋವನು ಎಂದು ಅವರಿಗೆ ತಿಳಿಯುವುದು.
Ja minä heitän tulen Magogin päälle ja niiden päälle, jotka luodoissa surutoinna asuvat; ja heidän pitää ymmärtämän minun olevan Herran.
7 ೭ “ನಾನು ನನ್ನ ಪವಿತ್ರ ನಾಮವನ್ನು ನನ್ನ ಜನರಾದ ಇಸ್ರಾಯೇಲರ ಮಧ್ಯದಲ್ಲಿ ವ್ಯಕ್ತಗೊಳಿಸುವೆನು. ಅದನ್ನು ಇನ್ನು ಮುಂದೆ ಅಪಕೀರ್ತಿಗೆ ಗುರಿಯಾಗದ ಹಾಗೆ ಮಾಡುತ್ತೇನೆ. ನಾನೇ ಯೆಹೋವ, ಇಸ್ರಾಯೇಲಿನ ಸದಮಲಸ್ವಾಮಿ ಎಂದು ಅನ್ಯ ಜನಾಂಗಗಳಿಗೆ ಗೊತ್ತಾಗುವುದು.”
Ja minä tahdon tehdä minun pyhän nimeni tiettäväksi minun kansani Israelin seassa, ja en tahdo enään antaa minun pyhää nimeäni häväistä; vaan pakanain pitää ymmärtämän minun olevan Herran Israelin pyhän.
8 ೮ ಕರ್ತನಾದ ಯೆಹೋವನು ಇಂತೆನ್ನುತ್ತಾನೆ. “ಇಗೋ! ಇದು ಬಂತು, ಇದು ಸಂಭವಿಸಿತು; ನಾನು ಮುಂತಿಳಿಸಿದ ದಿನವು ಇದೇ.
Katso, jos se on parhaallaansa tullut ja tapahtunut, sanoo Herra, Herra: se on se päivä, josta minä olen puhunut.
9 ೯ “ಇಸ್ರಾಯೇಲಿನ ಪಟ್ಟಣಗಳ ನಿವಾಸಿಗಳು ಬಯಲಿಗೆ ಬಂದು ಶತ್ರುವಿನ ಆಯುಧಗಳಿಗೆ ಬೆಂಕಿಯಿಟ್ಟು ಸುಟ್ಟುಬಿಡುವರು. ಹೌದು, ಖೇಡ್ಯ, ಗುರಾಣಿ, ಬಿಲ್ಲು, ಬಾಣ, ದೊಣ್ಣೆ, ಈಟಿ ಇವುಗಳನ್ನು ಏಳು ವರ್ಷಗಳ ತನಕ ಸುಡುತ್ತಲೇ ಬರುವರು.
Ja Israelin kaupunkien asuvaisten pitää lähtemän ulos, ja tekemän valkian, ja polttaman sota-aseet, kaikellaiset kilvet, nuolet, seipäät ja kanget; jotka kestävät palaa seitsemän ajastaikaa.
10 ೧೦ ಅದಕ್ಕಾಗಿ ಅವರು ಕಾಡಿನಿಂದ ಸೌದೆಯನ್ನು ತರಬೇಕಾಗುವುದಿಲ್ಲ, ವನದಲ್ಲಿ ಮರವನ್ನು ಕಡಿಯಬೇಕಾಗುವುದಿಲ್ಲ; ಆಯುಧಗಳನ್ನೇ ಸೌದೆಯನ್ನಾಗಿ ಉರಿಸುವರು; ತಮ್ಮನ್ನು ಸೂರೆಮಾಡಿದವರನ್ನು ತಾವು ಸೂರೆಮಾಡುವರು, ತಮ್ಮನ್ನು ಕೊಳ್ಳೆಹೊಡೆದವರನ್ನು ತಾವು ಕೊಳ್ಳೆಹೊಡೆಯುವರು” ಇದು ಕರ್ತನಾದ ಯೆಹೋವನ ನುಡಿ.
Niin ettei tarvita hakea puita kedolta, eli pidä metsästä hakattaman; sillä he polttavat sota-aseita; ja pitää ryöstämän niitä, joilta he ovat ryöstetyt, ja raateleman niitä, joilta he olivat raadellut, sanoo Herra, Herra.
11 ೧೧ “ಆ ದಿನದಲ್ಲಿ ಗೋಗನಿಗೆ ನಾನು ಇಸ್ರಾಯೇಲಿನ ಸಮಾಧಿಗಳಲ್ಲಿ ಸ್ಥಳವನ್ನು ಏರ್ಪಡಿಸುವೆನು; ಲವಣ ಸಮುದ್ರದ ಪೂರ್ವದಿಕ್ಕಿನಲ್ಲಿ ಪ್ರಯಾಣಿಕರ ಮಾರ್ಗವಾದ ಕಣಿವೆಯೇ. ಅಲ್ಲಿ ಪ್ರಯಾಣ ಮಾಡಲು ಆಗುವುದಿಲ್ಲ; ಅಲ್ಲೇ ಗೋಗನನ್ನೂ ಮತ್ತು ಅವನ ಸಮೂಹವೆಲ್ಲವನ್ನೂ ಸಮಾಧಿ ಮಾಡುವರು; ಅ ಕಣಿವೆಯನ್ನು ‘ಗೋಗನ ಸಮೂಹದ ಕಣಿವೆ’ ಎಂದು ಕರೆಯುವರು.
Ja sen pitää silloin tapahtuman, että minä annan Gogille paikan hautaamiseksi Israelissa, sen laakson, josta meren tykö itään päin mennään, niin että ne, jotka siitä menevät ohitse, pitää sieramensa tukitseman; ja heidän pitää Gogin joukkoinensa siihen hautaaman, ja se pitää kutsuttaman Gogin joukon laaksoksi.
12 ೧೨ ಇಸ್ರಾಯೇಲರು ದೇಶವನ್ನು ಶುದ್ಧಿಮಾಡುವುದಕ್ಕಾಗಿ ಏಳು ತಿಂಗಳು ಅವರನ್ನು ಸಮಾಧಿ ಮಾಡುತ್ತಲೇ ಇರುವರು.
Mutta Israelin huoneen pitää heitä hautaaman, että maa sen kautta pitää puhdistettaman koko seitsemän kuukautta.
13 ೧೩ ಹೌದು, ದೇಶದ ಸಕಲ ಪ್ರಜೆಗಳು ಅವರನ್ನು ಸಮಾಧಿ ಮಾಡುವರು. ಹೀಗೆ ನಾನು ಮಹಿಮೆಯನ್ನು ಹೊಂದುವ ದಿನವು ನನ್ನ ಜನರಿಗೆ ಸ್ಮರಣೆಯ ದಿನವಾಗಿರುವುದು” ಇದು ಕರ್ತನಾದ ಯೆಹೋವನ ನುಡಿ.
Ja kaikella maakunnan kansalla pitää tekemistä oleman heidän hautaamisessansa, ja pitää saaman siitä kuuluisan nimen; että minä sinä päivänä kunnoitetuksi tulen, sanoo Herra, Herra.
14 ೧೪ ತರುವಾಯ ಅವರು ದೇಶವನ್ನು ಶುದ್ಧಿ ಮಾಡುವುದಕ್ಕೆ ತಕ್ಕವರನ್ನು ಆರಿಸಿ, ದೇಶದಲ್ಲಿ ತಿರುಗುತ್ತಾ ನೆಲದ ಮೇಲೆ ಉಳಿದಿರುವವರನ್ನು ಸಮಾಧಿ ಮಾಡುವುದಕ್ಕೆ ಯಾವಾಗಲೂ ದೇಶವನ್ನು ಹಾದುಹೋಗುವ ಮನುಷ್ಯರನ್ನೇ ನೇಮಿಸುವರು ಮತ್ತು ಏಳು ತಿಂಗಳಾದ ಮೇಲೆ ಇವರು ಈ ಹುಡುಕುವ ಕೆಲಸದಲ್ಲಿ ತೊಡಗುವರು.
Ja heidän pitää asettaman miehiä käymään joka päivä maata ympäri, ja heidän kanssansa kuolleiden hautain kaivajat, hautaaman jääneitä maan päällä, että se puhdistettaisiin; seitsemän kuukauden perästä pitää heidän rupeeman sitä tutkistelemaan.
15 ೧೫ ಪ್ರಯಾಣಿಕರಲ್ಲಿ ಯಾರೇ ಆಗಲಿ ಪ್ರಯಾಣ ಮಾಡುತ್ತಿರುವಾಗ ಮನುಷ್ಯನ ಎಲುಬನ್ನು ನೋಡಿದರೆ, ಅಲ್ಲಿ ಒಂದು ಗುರುತನ್ನು ನಿಲ್ಲಿಸುವರು; ಸಮಾಧಿ ಮಾಡುವವರು ಗೋಗನ ಸಮೂಹದ ಕಣಿವೆಯಲ್ಲಿ ಅದನ್ನು ಸಮಾಧಿ ಮಾಡುವ ತನಕ ಆ ಗುರುತು ಹಾಗೆಯೇ ನಿಂತಿರುವುದು.
Ja ne, jotka maata käyvät ympäri ja jossakussa paikassa ihmisen luut näkevät, heidän pitää siihen merkin paneman; siihenasti kuin haudankaivajat ne myös Gogin joukon laaksoon hautaavat.
16 ೧೬ ಆ ಪಟ್ಟಣಕ್ಕೆ ‘ಹಮೇನ್’ “ಸಮೂಹಪುರ” ಎಂದು ಹೆಸರಾಗುವುದು. ಹೀಗೆ ಅವರು ದೇಶವನ್ನು ಶುದ್ಧಿಮಾಡುವರು.
Kaupunki myös pitää siellä kutsuttaman Hamonaksi: niin pitää heidän maan perkaaman.
17 ೧೭ ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನರಪುತ್ರನೇ, ಎಲ್ಲಾ ಬಗೆಯ ಪಕ್ಷಿಗಳಿಗೂ, ಸಮಸ್ತ ಭೂಜಂತುಗಳಿಗೂ ಹೀಗೆ ನುಡಿ, ‘ನೀವು ಕೂಡಿಬನ್ನಿರಿ; ನಾನು ಇಸ್ರಾಯೇಲಿನ ಪರ್ವತಗಳ ಮೇಲೆ ನಿಮಗಾಗಿ ಅರ್ಪಿಸುವ ಮಹಾಯಜ್ಞಕ್ಕೆ ಎಲ್ಲಾ ಕಡೆಯಿಂದಲೂ ನೆರೆದು ಬಂದು, ಮಾಂಸವನ್ನು ತಿಂದು, ರಕ್ತವನ್ನು ಕುಡಿಯಿರಿ.
Nyt sinä ihmisen poika, näin sanoo Herra, Herra: sano kaikille linnuille, kusta ikänä he lentävät, ja kaikille eläimille kedolla: kokoontukaat ja tulkaat tänne, tulkaat kokoon joka paikasta ympäriltä minun teurasuhrilleni, jonka minä teille teurastan suureksi teurasuhriksi Israelin vuorilla, ja syökäät lihaa, ja juokaat verta.
18 ೧೮ ಟಗರುಗಳ, ಕುರಿಗಳ, ಹೋತಗಳ, ಹೋರಿಗಳ ಅಂತು ಬಾಷಾನಿನ ಕೊಬ್ಬಿದ ಪಶುಗಳ ರಕ್ತವನ್ನು ಕುಡಿಯುವಿರಿ. ನೀವು ಬಲಿಷ್ಠರ ಮತ್ತು ಭೂಪತಿಗಳ ಮಾಂಸವನ್ನು ತಿನ್ನುವಿರಿ.
Teidän pitää syömän väkeväin lihaa, ja juoman maan päämiesten verta; oinaisten, karitsain, kauristen, härkäin, jotka kaikki lihavat ja hyvin syötetyt ovat.
19 ೧೯ ನಾನು ನಿಮಗೋಸ್ಕರ ಅರ್ಪಿಸುವ ಯಜ್ಞಪಶುಗಳ ಮಾಂಸವನ್ನು ಹೊಟ್ಟೆತುಂಬಾ ತಿನ್ನುವಿರಿ, ರಕ್ತವನ್ನು ಅಮಲೇರುವವರೆಗೂ ಕುಡಿಯುವಿರಿ.
Ja teidän pitää syömän lihavuutta, niin että te ravituksi tulette, ja juoman verta, niin että te juovuksiin tulette, siitä teurasuhrista, jonka minä teille teurastan.
20 ೨೦ ನಾನು ಸಿದ್ಧಪಡಿಸುವ ಆ ಔತಣದಲ್ಲಿ ಕುದುರೆ, ರಾಹುತ, ಶೂರ ಸಕಲ ವಿಧವಾದ ಸೈನಿಕರನ್ನು ಬೇಕಾದಷ್ಟು ಭಕ್ಷಿಸುವಿರಿ’” ಇದು ಕರ್ತನಾದ ಯೆಹೋವನ ನುಡಿ.
Ravitkaat teitänne minun pöydälläni hevosista ja ratsastajista, väkevistä ja kaikkinaisesta sotaväestä, sanoo Herra, Herra.
21 ೨೧ “ನಂತರ ನಾನು ಜನಾಂಗಗಳ ನಡುವೆ ನನ್ನ ಮಹಿಮೆಯನ್ನು ಸ್ಥಾಪಿಸಲು, ಆ ಸೈನಿಕರ ಮೇಲೆ ಕೈಮಾಡಿ, ನ್ಯಾಯದಂಡನೆ ನಡೆಸಿದವನು ನಾನೇ ಎಂಬುದು ಆ ಜನಾಂಗಗಳಿಗೆಲ್ಲಾ ತಿಳಿಯುವುದು.
Ja minä annan minun kunniani tulla pakanain sekaan, niin että kaikki pakanat pitää näkemän minun tuomioni, jonka minä olen tehnyt, ja minun käteni, jonka minä olen pannut heidän päällensä.
22 ೨೨ ಹೀಗೆ ಇಸ್ರಾಯೇಲ್ ವಂಶದವರು ನಾನೇ ಅವರ ದೇವರಾದ ಯೆಹೋವನೆಂದು ಅಂದಿನಿಂದ ಯಾವಾಗಲೂ ತಿಳಿದುಕೊಳ್ಳುವರು.
Ja Israelin huoneen pitää ymmärtämän, että minä Herra olen heidän Jumalansa, siitä päivästä ja aina edemmä.
23 ೨೩ “ಇದಲ್ಲದೆ, ಇಸ್ರಾಯೇಲರು ತಮ್ಮ ಅಧರ್ಮದ ನಿಮಿತ್ತವೇ ಸೆರೆಯಾಗಿ ಹೋದರೆಂತಲೂ, ಅವರು ನನಗೆ ದ್ರೋಹಮಾಡಿದ್ದರಿಂದ ನಾನು ಅವರಿಗೆ ವಿಮುಖನಾಗಿ ಅವರೆಲ್ಲರೂ ಖಡ್ಗದಿಂದ ಹತರಾಗುವಂತೆ ಅವರನ್ನು ಶತ್ರುಗಳ ವಶ ಮಾಡಿದೆನೆಂತಲೂ ಜನಾಂಗಗಳಿಗೆ ಗೊತ್ತಾಗುವುದು.
Niin myös kaikkein pakanain pitää ymmärtämän Israelin huoneen pahain tekoinsa tähden viedyksi pois, sentähden että he minua vastaan rikkoneet ovat; ja minä peitin kasvoni heidän edestänsä, ja annoin heitä vihollistensa käsiin, niin että heidän kaikkein piti miekan kautta lankeeman.
24 ೨೪ ಅವರ ಪಾಪಕ್ಕೂ, ದುರಾಚಾರಗಳಿಗೂ ತಕ್ಕಂತೆ ನಾನು ಅವರನ್ನು ದಂಡಿಸಿ ನನ್ನ ಮುಖವನ್ನು ಅವರಿಗೆ ಮರೆಮಾಡಿದ್ದೇನೆ.”
Niinkuin heidän saastaisuutensa ja pahat tekonsa ansainneet olivat, tein minä heille, ja peitin minun kasvoni heidän edestänsä.
25 ೨೫ ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನನ್ನ ಪವಿತ್ರನಾಮಕ್ಕೆ ಇನ್ನು ಅಪಕೀರ್ತಿ ಬಾರದಂತೆ ನಾನು ಈಗ ಅನುಕಂಪವುಳ್ಳವನಾಗಿ ಯಾಕೋಬ್ಯರ ದುರಾವಸ್ಥೆಯನ್ನು ತಪ್ಪಿಸಿ, ಇಸ್ರಾಯೇಲ್ ವಂಶದವರಿಗೆಲ್ಲಾ ಕೃಪೆ ತೋರಿಸುವೆನು.
Sentähden näin sanoo Herra, Herra: nyt minä tahdon pelastaa Jakobin vangit, ja armahtaa koko Israelin huonetta, ja kiivoitella minun pyhän nimeni tähden.
26 ೨೬ ನಾನು ನನ್ನ ಜನರನ್ನು ದೇವದ್ರೋಹಿಗಳಾದ ಅನ್ಯಜನಾಂಗಗಳ ವಶದಿಂದ ತಪ್ಪಿಸಿ, ಆ ಶತ್ರುಗಳ ದೇಶಗಳಿಂದ ಒಟ್ಟುಗೂಡಿಸಿ, ಅನೇಕ ಜನಾಂಗಗಳ ಕಣ್ಣೆದುರಿಗೆ ಅವರ ರಕ್ಷಣೆಯ ಮೂಲಕ ನನ್ನ ಗೌರವವನ್ನು ಕಾಪಾಡಿಕೊಳ್ಳುವೆನು.
Mutta heidän pitää kantaman häväistyksensä ja rikoksensa, joilla he ovat rikkoneet minua vastaan, koska he surutoinna maallansa asuvat, niin ettei kenkään heitä peljätä.
27 ೨೭ ನಾನು ಅವರನ್ನು ಜನರೊಳಗಿಂದ ತಂದ ಮೇಲೆ ಅವರ ಶತ್ರುಗಳ ದೇಶದೊಳಗಿಂದ ಅವರನ್ನು ಕೂಡಿಸಿ, ಅನೇಕ ಜನಾಂಗಗಳ ಮುಂದೆ ಅವರಲ್ಲಿ ಪರಿಶುದ್ಧನಾಗುವೆನು.
Ja minä olen heidät kansoista jälleen kotia tuonut, ja koonnut heitä vihollistensa maalta, ja olen heissä pyhitetyksi tullut monien pakanain silmäin edessä.
28 ೨೮ “ನಾನು ಅವರನ್ನು ಅನ್ಯಜನಾಂಗಗಳೊಳಗೆ ಸೆರೆಹೋಗುವಂತೆ ಮಾಡಿದ ಮೇಲೆ ಅವರನ್ನು ಒಟ್ಟುಗೂಡಿಸಿ, ಸ್ವದೇಶಕ್ಕೆ ಬರಮಾಡಿದುದರಿಂದ ನಾನೇ ಅವರ ದೇವರಾದ ಯೆಹೋವನು ಎಂದು ದೃಢಮಾಡಿಕೊಳ್ಳುವರು. ಅವರಲ್ಲಿ ಯಾರನ್ನೂ ದೇಶದಲ್ಲಿ ವಾಸಿಸುವುದಕ್ಕೆ ಬಿಡುವುದಿಲ್ಲ.
Ja niin pitää heidän ymmärtämän, että minä Herra olen heidän Jumalansa, joka olen antanut viedä heitä pois pakanain sekaan, ja antanut taas koota heitä maallensa, ja en antanut yhtäkään heistä sinne jäädä.
29 ೨೯ ಇನ್ನೆಂದಿಗೂ ನಾನು ನನ್ನ ಮುಖವನ್ನು ಮರೆಮಾಡುವುದಿಲ್ಲ. ಇಸ್ರಾಯೇಲ್ ವಂಶದ ಮೇಲೆ ನನ್ನ ಆತ್ಮವನ್ನು ಸುರಿಸಿದ್ದೇನೆ” ಇದು ಕರ್ತನಾದ ಯೆಹೋವನ ನುಡಿ.
Ja en minä enään tahdo peittää minun kasvojani heidän edestänsä; sillä minä olen vuodattanut minun henkeni Israelin huoneen päälle, sanoo Herra, Herra.