< ಯೆಹೆಜ್ಕೇಲನು 40 >

1 ನಾವು ಸೆರೆಯಾದ ಇಪ್ಪತ್ತೈದನೆಯ ವರ್ಷದ, ಮೊದಲನೆಯ ತಿಂಗಳಿನ, ಹತ್ತನೆಯ ದಿನದಲ್ಲಿ, ಪಟ್ಟಣವು ಹಾಳಾದ ಮೇಲೆ ಹದಿನಾಲ್ಕನೆಯ ವರ್ಷದ ಆ ದಿನದಲ್ಲೇ ಯೆಹೋವನ ಹಸ್ತಸ್ಪರ್ಶದಿಂದ ನಾನು ಪರವಶನಾಗಲು, ಆತನು ನನ್ನನ್ನು ಅಲ್ಲಿಗೆ ಬರಮಾಡಿದನು.
В двадцать пятом году по переселении нашем, в начале года, в десятый день месяца, в четырнадцатом году по разрушении города, в тот самый день была на мне рука Господа, и Он повел меня туда.
2 ಯೆಹೋವನು ನನ್ನನ್ನು ಇಸ್ರಾಯೇಲ್ ದೇಶಕ್ಕೆ ತಂದು, ಅತ್ಯುನ್ನತ ಪರ್ವತದ ಮೇಲೆ ಇಳಿಸಿದನೆಂದು ದೇವರ ದರ್ಶನದಲ್ಲಿ ನನಗೆ ಕಂಡುಬಂದಿತು. ದಕ್ಷಿಣದ ಕಡೆ ಆ ಪರ್ವತದ ಮೇಲೆ ಪಟ್ಟಣದಂತಿರುವ ಕಟ್ಟಡಗಳು ಕಾಣಿಸಿತು.
В видениях Божиих привел Он меня в землю Израилеву и поставил меня на весьма высокой горе, и на ней, с южной стороны, были как бы городские здания;
3 ಆಮೇಲೆ ಆತನು ನನ್ನನ್ನು ಅಲ್ಲಿಗೆ ತಂದಾಗ, ಇಗೋ, ತಾಮ್ರದಂತೆ ಹೊಳೆಯುವ ಒಬ್ಬ ಪುರುಷನು ನಾರಿನ ನೂಲನ್ನು, ಅಳತೆಯ ಕೋಲನ್ನೂ ಕೈಯಲ್ಲಿ ಹಿಡಿದುಕೊಂಡು ಬಾಗಿಲಲ್ಲೇ ನಿಂತುಕೊಂಡಿದ್ದನು.
и привел меня туда. И вот муж, которого вид как бы вид блестящей меди, и льняная вервь в руке его и трость измерения, и стоял он у ворот.
4 ಆ ಪುರುಷನು ನನಗೆ, “ನರಪುತ್ರನೇ, ನೀನು ಕಣ್ಣಿಟ್ಟು ನೋಡು, ಕಿವಿಗೊಟ್ಟು ಕೇಳು; ನಾನು ನಿನಗೆ ತೋರಿಸುವುದನ್ನೆಲ್ಲಾ ಮನಸ್ಸಿಟ್ಟು ತಿಳಿದುಕೋ. ನಾನು ನಿನಗೆ ತೋರಿಸುವುದನ್ನು ನೀನು ನೋಡಬೇಕೆಂದೇ ಇಲ್ಲಿಗೆ ಬರಮಾಡಿದ್ದೇನೆ. ನೀನು ನೋಡುವುದನ್ನೆಲ್ಲಾ ಇಸ್ರಾಯೇಲ್ ವಂಶದವರಿಗೆ ಪ್ರಕಟಿಸು” ಎಂದು ಹೇಳಿದನು.
И сказал мне этот муж: “сын человеческий! смотри глазами твоими и слушай ушами твоими, и прилагай сердце твое ко всему, что я буду показывать тебе, ибо ты для того и приведен сюда, чтоб я показал тебе это; все, что увидишь, возвести дому Израилеву”.
5 ಇಗೋ, ಒಂದು ಗೋಡೆಯು ಆ ಕಟ್ಟಡವನ್ನು ಸುತ್ತಿಕೊಂಡಿತ್ತು. ಆ ಪುರುಷನ ಕೈಯಲ್ಲಿ ಆರು ಮೊಳ ಉದ್ದದ ಅಳತೆ ಕೋಲು ಇತ್ತು. (ಉದ್ದಮೊಳ ಅಂದರೆ ಮೊಳದ ಮೇಲೆ ಒಂದು ಹಿಡಿ ಉದ್ದ); ಅವನು ಆ ಗೋಡೆಯ ಅಗಲವನ್ನು ಅಳತೆ ಮಾಡಿದಾಗ ಅದರ ಅಗಲವೂ ಮತ್ತು ಎತ್ತರವೂ ಒಂದೇ ಕೋಲಾಗಿತ್ತು.
И вот, вне храма стена со всех сторон его, и в руке того мужа трость измерения в шесть локтей, считая каждый локоть в локоть с ладонью; и намерил он в этом здании одну трость толщины и одну трость вышины.
6 ಆಮೇಲೆ ಅವನು ಪೂರ್ವದಿಕ್ಕಿನ ಹೆಬ್ಬಾಗಿಲಿಗೆ ಬಂದು, ಮೆಟ್ಟಿಲುಗಳನ್ನು ಹತ್ತಿ, ಹೊಸ್ತಿಲಿನ ಅಗಲವನ್ನು ಅಳೆದನು. ಅದು ಒಂದೇ ಕೋಲು ಅಗಲವಾಗಿತ್ತು. ಅಗಲವಾದ ಹೊಸ್ತಿಲಿನ ಬಾಗಿಲೂ ಅಲ್ಲಿ ಇತ್ತು.
Потом пошел к воротам, обращенным лицом к востоку, и взошел по ступеням их, и нашел меры в одном пороге ворот одну трость ширины и в другом пороге одну трость ширины.
7 ಅಲ್ಲಿ ಗೋಡೆಯಲ್ಲಿದ್ದ ಒಂದೊಂದು ಕೋಣೆಯು ಒಂದು ಕೋಲು ಉದ್ದವಾಗಿಯೂ, ಒಂದು ಕೋಲು ಅಗಲವಾಗಿಯೂ ಇತ್ತು. ದೇವಸ್ಥಾನಕ್ಕೆ ಎದುರಾಗಿರುವ ಹೆಬ್ಬಾಗಿಲ ಕೈಸಾಲೆಯ ಹೊಸ್ತಿಲಿನ ಅಗಲವು ಒಂದು ಕೋಲು. ಆ ಗೋಡೆಕೋಣೆಗಳು ಒಂದಕ್ಕೊಂದು ಐದೈದು ಮೊಳ ದೂರವಾಗಿದ್ದವು; ದೇವಸ್ಥಾನಕ್ಕೆ ಎದುರಾಗಿರುವ ಹೆಬ್ಬಾಗಿಲ ಕೈಸಾಲೆಯ ಹೊಸ್ತಿಲಿನ ಅಗಲವು ಒಂದು ಕೋಲು.
И в каждой боковой комнате одна трость длины и одна трость ширины, а между комнатами пять локтей, и в пороге ворот у притвора ворот внутри одна же трость.
8 ಆಮೇಲೆ ಅವನು ಹೆಬ್ಬಾಗಿಲ ಕೈಸಾಲೆಯ ಅಗಲವನ್ನು ಅಳೆದನು. ಅದು ಒಂದು ಕೋಲು ಉದ್ದವಾಗಿತ್ತು.
И смерил он в притворе ворот внутри одну трость,
9 ಆಮೇಲೆ ಅವನು ಹೆಬ್ಬಾಗಿಲ ಕೈಸಾಲೆಯನ್ನು ಎಂಟು ಮೊಳವೆಂದೂ; ಅದರ ಕಂಬಗಳನ್ನು ಎರಡು ಮೊಳವೆಂದೂ ಅಳೆದನು. ಹೆಬ್ಬಾಗಿಲಿನ ಕೈಸಾಲೆಯು ದೇವಸ್ಥಾನಕ್ಕೆ ಎದುರಾಗಿತ್ತು.
а в притворе у ворот намерил восемь локтей и два локтя в столбах. Этот притвор у ворот со стороны храма.
10 ೧೦ ಪೂರ್ವದಿಕ್ಕಿನ ಹೆಬ್ಬಾಗಿಲಿನ ಎರಡು ಪಕ್ಕಗಳಲ್ಲಿ ಮೂರು ಗೋಡೆಕೋಣೆಗಳಿದ್ದವು. ಆ ಮೂರಕ್ಕೂ ಒಂದೇ ಅಳತೆ ಇತ್ತು. ಎರಡು ಪಕ್ಕಗಳಲ್ಲಿನ ಕಂಬಗಳೂ ಒಂದೇ ಅಳತೆಯಾಗಿದ್ದವು.
Боковых комнат у восточных ворот три - с одной стороны и три - с другой; одна мера во всех трех и одна мера в столбах с той и другой стороны.
11 ೧೧ ಅನಂತರ ಅವನು ಹೆಬ್ಬಾಗಿಲ ದ್ವಾರದ ಅಗಲ ಹತ್ತು ಮೊಳವೆಂದೂ ಉದ್ದ ಹದಿಮೂರು ಮೊಳವೆಂದೂ ಅಳೆದನು.
Ширины в отверстии ворот он намерил десять локтей, а длины ворот тринадцать локтей.
12 ೧೨ ಎರಡು ಪಕ್ಕಗಳಲ್ಲಿನ ಗೋಡೆಕೋಣೆಗಳ ಮುಂದೆ ಒಂದೊಂದು ಮೊಳ ಅವಕಾಶ; ಎರಡು ಕಡೆಯ ಗೋಡೆಕೋಣೆಗಳ ಅಗಲವು ಮೂರು ಮೊಳ.
А перед комнатами выступ в один локоть, и в один же локоть с другой стороны выступ; эти комнаты с одной стороны имели шесть локтей и шесть же локтей с другой стороны.
13 ೧೩ ಅವನು ಒಂದು ಕಡೆಯ ಗೋಡೆಕೋಣೆಗಳ ಮಾಳಿಗೆಯ ಹೊರಗಡೆಯಿಂದ ಇನ್ನೊಂದು ಕಡೆಯ ಗೋಡೆಕೋಣೆಗಳ ಮಾಳಿಗೆಯ ಹೊರಗಡೆ ಅಂದರೆ ಒಂದು ಕೋಣೆಯ ಬಾಗಿಲಿಂದ ಇನ್ನೊಂದು ಕೋಣೆಯ ಬಾಗಿಲಿಗೆ ಹೆಬ್ಬಾಗಿಲಿನ ಅಗಲವನ್ನು ಅಳೆಯಲು ಇಪ್ಪತ್ತೈದು ಮೊಳವಾಗಿತ್ತು.
Потом намерил он в воротах от крыши одной комнаты до крыши другой двадцать пять локтей ширины; дверь была против двери.
14 ೧೪ ಅಂಗಳದಲ್ಲಿನ ಕಂಬಗಳನ್ನು ಅಳತೆ ಮಾಡಲು ಅರವತ್ತು ಮೊಳವಿದ್ದವು; ಅದನ್ನು ಹೆಬ್ಬಾಗಿಲಿನ ಸುತ್ತುಮುತ್ತಲಿರುವ ಕಂಬದವರೆಗೂ ಅಳೆದನು.
А в столбах он насчитал шестьдесят локтей, в каждом столбе около двора и у ворот,
15 ೧೫ ಪ್ರವೇಶದ ಬಾಗಿಲಿನ ಮುಂದುಗಡೆಯಿಂದ ಒಳ ಬಾಗಿಲಿನ ದ್ವಾರದ ಅಂಗಳದವರೆಗೂ ಐವತ್ತು ಮೊಳ ಉದ್ದವಾಗಿತ್ತು.
и от передней стороны входа в ворота до передней стороны внутренних ворот пятьдесят локтей.
16 ೧೬ ಗೋಡೆ ಕೋಣೆಗಳಲ್ಲಿಯೂ ಒಳ ಎರಡು ಕಡೆಯ ನಿಲುವು ಕಂಬಗಳಲ್ಲಿಯೂ, ಕೈಸಾಲೆಗಳಲ್ಲಿಯೂ ಸಹ ಒಳಗಡೆ ಸುತ್ತಲೂ ಇಕ್ಕಟಾದ ಕಿಟಕಿಗಳಿದ್ದವು. ಒಂದೊಂದು ಗೋಡೆಯ ಮೇಲೆ ಖರ್ಜೂರ ಮರಗಳ ಚಿತ್ರಗಳಿದ್ದವು.
Решетчатые окна были и в боковых комнатах и в столбах их, внутрь ворот кругом, также и в притворах окна были кругом на внутреннюю сторону, и на столбах - пальмы.
17 ೧೭ ಆ ಮೇಲೆ ಅವನು ನನ್ನನ್ನು ಹೊರಗಿನ ಅಂಗಳಕ್ಕೆ ಕರೆದು ತಂದನು; ಇಗೋ, ಕೋಣೆಗಳೂ ಅಂಗಳದ ಸುತ್ತಲೂ ಕಲ್ಲುಹಾಸಿದ ನೆಲವೂ ಕಾಣಿಸಿದವು; ಕಲ್ಲುಹಾಸಿದ ನೆಲದ ಮೇಲೆ ಒಟ್ಟಾಗಿ ಮೂವತ್ತು ಕೊಠಡಿಗಳಿದ್ದವು.
И привел он меня на внешний двор, и вот там комнаты, и каменный помост кругом двора был сделан; тридцать комнат на том помосте.
18 ೧೮ ಆ ಕೆಳಗಣ ಕಲ್ಲುಹಾಸಿದ ನೆಲವೂ ಹೆಬ್ಬಾಗಿಲುಗಳ ಎರಡು ಪಕ್ಕಗಳವರೆಗೂ ಹಾಸಲ್ಪಟಿತ್ತು. ಅದರ ಅಗಲವೂ ಬಾಗಿಲುಗಳ ಉದ್ದಕ್ಕೆ ಸಮನಾಗಿತ್ತು. ಇದು ಕೆಳಗಿನ ಕಲ್ಲುಹಾಸಿದ ನೆಲವಾಗಿತ್ತು.
И помост этот был по бокам ворот, соответственно длине ворот; этот помост был ниже.
19 ೧೯ ಅವನು ಪೂರ್ವಕ್ಕೂ, ಉತ್ತರಕ್ಕೂ ಕೆಳಗಣ ಹೆಬ್ಬಾಗಿಲಿನ ಒಳಗಡೆಯಿಂದ ಒಳಗಣ ಅಂಗಳದ ಹೊರಗಡೆಯ ತನಕ ಅಳೆಯಲು, ಅದು ನೂರು ಮೊಳವಿತ್ತು.
И намерил он в ширину от нижних ворот до внешнего края внутреннего двора сто локтей, к востоку и к северу.
20 ೨೦ ಇದಲ್ಲದೆ ಹೊರಗಣ ಅಂಗಳದ ಉತ್ತರದ ಹೆಬ್ಬಾಗಿಲಿನ ಅಗಲವನ್ನೂ ಮತ್ತು ಉದ್ದವನ್ನೂ ಅಳೆದನು.
Он измерил также длину и ширину ворот внешнего двора, обращенных лицом к северу,
21 ೨೧ ಅದರೊಳಗೆ ಎರಡು ಕಡೆ ಮೂರು ಗೋಡೆಕೋಣೆಗಳಿದ್ದವು; ಅಲ್ಲಿನ ಕಂಬಗಳೂ ಕೈಸಾಲೆಯೂ ಮೊದಲನೆಯ ಹೆಬ್ಬಾಗಿಲಿನ ಅಳತೆಯಂತಿದ್ದವು. ಆ ಹೆಬ್ಬಾಗಿಲಿನ ಉದ್ದವೂ ಐವತ್ತು ಮೊಳ, ಅಗಲವೂ ಇಪ್ಪತ್ತೈದು ಮೊಳವಾಗಿತ್ತು.
и боковые комнаты при них, три с одной стороны и три с другой; и столбы их, и выступы их были такой же меры, как у прежних ворот: длина их пятьдесят локтей, а ширина двадцать пять локтей.
22 ೨೨ ಅಲ್ಲಿನ ಕಿಟಕಿಗಳೂ, ಕೈಸಾಲೆಯೂ, ಚಿತ್ರಿತವಾಗಿದ್ದ ಖರ್ಜೂರ ಮರಗಳೂ ಮೂಡಣ ಹೆಬ್ಬಾಗಿಲಿನ ಕಡೆಗೆ ಅಭಿಮುಖವಾಗಿದ್ದವು. ಅವರು ಏಳು ಮೆಟ್ಟಿಲುಗಳನ್ನು ಹತ್ತಿ, ಅಲ್ಲಿಗೆ ಸೇರುತ್ತಿದ್ದರು. ಕೈಸಾಲೆಯು ಅದರ ಒಳಗಡೆಯಿತ್ತು.
И окна их, и выступы их, и пальмы их - той же меры, как у ворот, обращенных лицом к востоку; и входят к ним семью ступенями, и перед ними выступы.
23 ೨೩ ಹೊರಗಣ ಅಂಗಳದ ಉತ್ತರ ಮತ್ತು ಪೂರ್ವಕ್ಕಿರುವ ಹೆಬ್ಬಾಗಿಲುಗಳಿಗೆ ಎದುರಾಗಿ ಒಳಗಣ ಹೆಬ್ಬಾಗಿಲುಗಳು ಇದ್ದವು; ಒಂದು ಬಾಗಿಲಿನಿಂದ ಎದುರು ಬಾಗಿಲಿಗೆ ನೂರು ಮೊಳ ಅಳತೆ ಮಾಡಿದನು.
И во внутренний двор есть ворота против ворот северных и восточных; и намерил он от ворот до ворот сто локтей.
24 ೨೪ ಆ ಮೇಲೆ ಅವನು ನನ್ನನ್ನು ದಕ್ಷಿಣಕ್ಕೆ ಕರೆ ತಂದನು. ಇಗೋ, ಅಲ್ಲಿಯೂ ಒಂದು ಹೆಬ್ಬಾಗಿಲು ಇತ್ತು; ಅವನು ಅಲ್ಲಿನ ಕಂಬಗಳನ್ನೂ, ಕೈಸಾಲೆಯನ್ನೂ ಈ ಅಳತೆಯ ಪ್ರಕಾರವೇ ಅಳೆದನು.
И повел меня на юг, и вот там ворота южные; и намерил он в столбах и выступах такую же меру.
25 ೨೫ ಅದರ ಕೈಸಾಲೆಗಳಲ್ಲಿಯೂ ಸುತ್ತಲೂ ಕಿಟಕಿಗಳೇ ಇದ್ದವು; ಅದರ ಉದ್ದವೂ ಐವತ್ತು ಮೊಳ ಮತ್ತು ಅಗಲವೂ ಇಪ್ಪತ್ತೈದು ಮೊಳವಾಗಿತ್ತು.
И окна в них и в преддвериях их такие же, как те окна: длины пятьдесят локтей, а ширины двадцать пять локтей.
26 ೨೬ ಅಲ್ಲಿ ಹತ್ತುವುದಕ್ಕೆ ಏಳು ಮೆಟ್ಟಿಲುಗಳಿದ್ದವು. ಕೈಸಾಲೆಯ ಎರಡು ಪಕ್ಕದ ಕಂಬಗಳಲ್ಲಿ ಖರ್ಜೂರ ಮರಗಳ ಚಿತ್ರಗಳಿದ್ದವು.
Подъем к ним - в семь ступеней, и преддверия перед ними; и пальмовые украшения - одно с той стороны и одно с другой на столбах их.
27 ೨೭ ಒಳಗಿನ ಅಂಗಳದಲ್ಲಿ ದಕ್ಷಿಣದ ಕಡೆಗೆ ಹೆಬ್ಬಾಗಿಲಿತ್ತು; ದಕ್ಷಿಣದ ಒಂದು ಬಾಗಿಲಿಂದ ಮತ್ತೊಂದು ಬಾಗಿಲಿಗೆ ನೂರು ಮೊಳ ಅಳೆದನು.
И во внутренний двор были южные ворота; и намерил он от ворот до ворот южных сто локтей.
28 ೨೮ ಆಮೇಲೆ ಅವನು ನನ್ನನ್ನು ದಕ್ಷಿಣ ಬಾಗಿಲಿನ ಮಾರ್ಗವಾಗಿ ಒಳಗಣ ಅಂಗಳಕ್ಕೆ ಕರೆದು ತಂದನು. ಅವನು ಆ ದಕ್ಷಿಣ ಹೆಬ್ಬಾಗಿಲನ್ನೂ, ಅಲ್ಲಿನ ಗೋಡೆಕೋಣೆ, ಕಂಬ, ಕೈಸಾಲೆ ಇವುಗಳನ್ನೂ ಅಳೆಯಲು, ಅದರ ಅಳತೆಗಳೆಲ್ಲ ಸಮನಾಗಿದ್ದವು.
И привел он меня через южные ворота во внутренний двор; и намерил в южных воротах ту же меру.
29 ೨೯ ಅದರಲ್ಲಿಯೂ, ಅದರ ಕೈಸಾಲೆಯಲ್ಲಿಯೂ ಕಿಟಕಿಗಳು ಎಲ್ಲಾ ಕಡೆಯಿದ್ದವು; ಹೆಬ್ಬಾಗಿಲಿನ ಉದ್ದ ಐವತ್ತು ಮೊಳ ಮತ್ತು ಅಗಲ ಇಪ್ಪತ್ತೈದು ಮೊಳವಾಗಿತ್ತು.
И боковые комнаты их, и столбы их, и притворы их - той же меры, и окна в них в притворах их были кругом; всего в длину пятьдесят локтей, а в ширину двадцать пять локтей.
30 ೩೦ ಸುತ್ತುಮುತ್ತಲಿನ ಕೈಸಾಲೆಗಳ ಉದ್ದ ಇಪ್ಪತ್ತೈದು ಮೊಳ ಮತ್ತು ಅಗಲ ಐದು ಮೊಳವಾಗಿತ್ತು.
Притворы были кругом длиною в двадцать пять локтей, а шириною в пять локтей.
31 ೩೧ ಆ ಹೆಬ್ಬಾಗಿಲ ಕೈಸಾಲೆಯು ಹೊರಗಣ ಅಂಗಳಕ್ಕೆ ಅಭಿಮುಖವಾಗಿತ್ತು. ಅದರ ಕಂಬಗಳಲ್ಲಿ ಖರ್ಜೂರ ಮರಗಳು ಚಿತ್ರಿತವಾಗಿದ್ದವು. ಅಲ್ಲಿ ಹತ್ತುವುದಕ್ಕೆ ಎಂಟು ಮೆಟ್ಟಿಲುಗಳಿದ್ದವು.
И притворы были у них на внешний двор, и пальмы были на столбах их; подъем к ним - в восемь ступеней.
32 ೩೨ ಅವನು ನನ್ನನ್ನು ಒಳಗಣ ಅಂಗಳದ ಪೂರ್ವಕ್ಕೆ ಕರೆದು ತಂದು, ಅಲ್ಲಿನ ಹೆಬ್ಬಾಗಿಲನ್ನೂ ಅಳೆಯಲು, ಅದರ ಅಳತೆಗಳೆಲ್ಲಾ ಒಂದೇ ಆಗಿ ಕಂಡುಬಂದವು.
И повел меня восточными воротами на внутренний двор; и намерил в этих воротах ту же меру.
33 ೩೩ ಅದರಲ್ಲಿಯೂ ಮತ್ತು ಅದರ ಕೈಸಾಲೆಯಲ್ಲಿಯೂ ಎಲ್ಲಾ ಕಡೆ ಕಿಟಕಿಗಳಿದ್ದವು; ಆ ಹೆಬ್ಬಾಗಿಲಿನ ಉದ್ದ ಐವತ್ತು ಮೊಳ ಮತ್ತು ಅಗಲ ಇಪ್ಪತ್ತೈದು ಮೊಳವಾಗಿತ್ತು.
И боковые комнаты их, и столбы их, и притворы их были той же меры; и окна в них и притворах их были кругом; длина пятьдесят локтей, а ширина двадцать пять локтей.
34 ೩೪ ಅದರ ಕೈಸಾಲೆಯು ಹೊರಗಿನ ಅಂಗಳಕ್ಕೆ ಅಭಿಮುಖವಾಗಿತ್ತು; ಕೈಸಾಲೆಯ ಎದುರುಬದುರಿನ ಕಂಬಗಳಲ್ಲಿ ಖರ್ಜೂರ ಮರಗಳು ಚಿತ್ರಿತವಾಗಿದ್ದವು; ಅಲ್ಲಿ ಹತ್ತುವುದಕ್ಕೆ ಎಂಟು ಮೆಟ್ಟಿಲುಗಳಿದ್ದವು.
Притворы у них были на внешний двор, и пальмы на столбах их с той и другой стороны; подъем к ним - в восемь ступеней.
35 ೩೫ ಆ ಮೇಲೆ ಅವನು ನನ್ನನ್ನು ಉತ್ತರದ ಬಾಗಿಲಿಗೆ ಕರೆದು ತಂದನು. ಅದರ ಗೋಡೆಕೋಣೆ, ಕಂಬ, ಕೈಸಾಲೆ ಇವುಗಳನ್ನೂ ಆ ಅಳತೆಯ ಪ್ರಕಾರವೇ ಅಳೆದನು.
Потом привел меня к северным воротам, и намерил в них ту же меру.
36 ೩೬ ಅಲ್ಲಿನ ಕೋಣೆಗಳ, ಕಂಬಗಳ, ಕೈಸಾಲೆಗಳ ಎಲ್ಲಾ ಕಡೆಗಳಲ್ಲಿಯೂ ಕಿಟಕಿಗಳಿದ್ದವು; ಅದರ ಉದ್ದ ಐವತ್ತು ಮೊಳ ಮತ್ತು ಅಗಲ ಇಪ್ಪತ್ತೈದು ಮೊಳವಾಗಿತ್ತು.
Боковые комнаты при них, столбы их и притворы их, и окна в них были кругом; всего в длину пятьдесят локтей, и в ширину двадцать пять локтей.
37 ೩೭ ಅದರ ಕಂಬಗಳು, ಕೈಸಾಲೆಗಳು ಹೊರಗಣ ಅಂಗಳಕ್ಕೆ ಅಭಿಮುಖವಾಗಿದ್ದವು; ಆ ಎದುರುಬದುರಿನ ಕಂಬಗಳಲ್ಲಿ ಖರ್ಜೂರ ಮರಗಳು ಚಿತ್ರಿತವಾಗಿದ್ದವು; ಅಲ್ಲಿ ಹತ್ತುವುದಕ್ಕೆ ಎಂಟು ಮೆಟ್ಟಿಲುಗಳಿದ್ದವು.
Притворы у них были на внешний двор, и пальмы на столбах их с той и с другой стороны; подъем к ним - в восемь ступеней.
38 ೩೮ ಹೆಬ್ಬಾಗಿಲ ಕಂಬಗಳ ಪಕ್ಕದಲ್ಲಿ ಒಂದು ಕೋಣೆಯೂ, ಅದರ ದ್ವಾರವೂ ಕಾಣಿಸಿದವು. ಆ ಕೋಣೆಯೊಳಗೆ ಸರ್ವಾಂಗಹೋಮ ಪಶುಗಳ ಮಾಂಸವನ್ನು ತೊಳೆಯುತ್ತಿದ್ದರು.
Была также комната, со входом в нее, у столбов ворот: там омывают жертвы всесожжения.
39 ೩೯ ಹೆಬ್ಬಾಗಿಲಿನ ಕೈಸಾಲೆಯಲ್ಲಿ ಎರಡು ಕಡೆಯಲ್ಲಿಯೂ ಎರಡೆರಡು ಪೀಠಗಳಿದ್ದವು; ಅವುಗಳ ಮೇಲೆ ಸರ್ವಾಂಗಹೋಮ ಪಶು, ದೋಷಪರಿಹಾರಕ ಯಜ್ಞ ಪಶು, ಪ್ರಾಯಶ್ಚಿತ್ತಯಜ್ಞ ಪಶು ಇವುಗಳನ್ನು ವಧಿಸುತ್ತಿದ್ದರು.
А в притворе у ворот два стола с одной стороны и два с другой стороны, чтобы заколать на них жертвы всесожжения и жертвы за грех и жертвы за преступление.
40 ೪೦ ಉತ್ತರದ ಹೆಬ್ಬಾಗಿಲಿನ ಪ್ರವೇಶ ಸ್ಥಾನದ ಮೆಟ್ಟಿಲುಗಳ ಹತ್ತಿರ ಎರಡು ಪೀಠಗಳು ಇದ್ದವು.
И у наружного бока при входе в отверстие северных ворот были два стола, и у другого бока, подле притвора у ворот, два стола.
41 ೪೧ ಹೆಬ್ಬಾಗಿಲಿನ ಎರಡು ಪಕ್ಕಗಳಲ್ಲಿ ನಾಲ್ಕು ನಾಲ್ಕು ಪೀಠಗಳು, ಒಟ್ಟಿಗೆ ಯಜ್ಞಪಶುಗಳನ್ನು ವಧಿಸುವ ಎಂಟು ಪೀಠಗಳಿದ್ದವು.
Четыре стола с одной стороны и четыре стола с другой стороны, по бокам ворот: всего восемь столов, на которых заколают жертвы.
42 ೪೨ ಇದಲ್ಲದೆ ಸರ್ವಾಂಗಹೋಮಕ್ಕಾಗಿ ಉಪಯುಕ್ತವಾದ ಕೆತ್ತಿದ ಕಲ್ಲಿನ ನಾಲ್ಕು ಪೀಠಗಳಿದ್ದವು. ಅವುಗಳ ಅಗಲ ಒಂದುವರೆ ಮೊಳ, ಉದ್ದ ಒಂದುವರೆ ಮೊಳ, ಎತ್ತರ ಒಂದುವರೆ ಮೊಳವಾಗಿತ್ತು. ಅವುಗಳ ಮೇಲೆ ಸರ್ವಾಂಗಹೋಮ ಪಶುಗಳನ್ನು ವಧಿಸುವ ಉಪಕರಣಗಳನ್ನು ಇಡುತ್ತಿದ್ದರು.
И четыре стола для приготовления всесожжения были из тесаных камней, длиною в полтора локтя, и шириною в полтора локтя, а вышиною в один локоть; на них кладут орудия для заклания жертвы всесожжения и других жертв.
43 ೪೩ ಒಳಗೆ, ಸುತ್ತಲು ಕೈ ಅಗಲದಷ್ಟು ಕೊಂಡಿಗಳು ಜಡಿಯಲ್ಪಟ್ಟಿದ್ದವು. ನೈವೇದ್ಯ ಮಾಂಸವು ಪೀಠಗಳ ಮೇಲಿತ್ತು.
И крюки в одну ладонь приделаны были к стенам здания кругом, а на столах клали жертвенное мясо.
44 ೪೪ ಆ ಮೇಲೆ ಅವನು ನನ್ನನ್ನು ಒಳಗಣ ಅಂಗಳಕ್ಕೆ ಕರೆ ತಂದನು. ಇಗೋ, ಅಲ್ಲಿ ಎರಡು ಕೋಣೆಗಳು ಕಾಣಿಸಿದವು. ಉತ್ತರದ ಹೆಬ್ಬಾಗಿಲ ಪಕ್ಕದಲ್ಲಿ ಒಂದು ಕೋಣೆಯು ದಕ್ಷಿಣಕ್ಕೆ ಅಭಿಮುಖವಾಗಿತ್ತು; ಒಂದು ಕೋಣೆಯು ಉತ್ತರಕ್ಕೂ, ಇನ್ನೊಂದು ಕೋಣೆಯು ದಕ್ಷಿಣಕ್ಕೂ ಇತ್ತು.
Снаружи внутренних ворот были комнаты для певцов; на внутреннем дворе, сбоку северных ворот, одна обращена лицом к югу, а другая, сбоку южных ворот, обращена лицом к северу.
45 ೪೫ ಆಗ ಅವನು ನನಗೆ, “ದಕ್ಷಿಣಕ್ಕೆ ಅಭಿಮುಖವಾಗಿರುವ ಈ ಕೋಣೆಯು ದೇವಾಲಯದ ಮೇಲ್ವಿಚಾರಣೆಯನ್ನು ನಡೆಸುವ ಯಾಜಕರಿಗೆ ನೇಮಕವಾಗಿದೆ.
И сказал он мне: “эта комната, которая лицом к югу, для священников, бодрствующих на страже храма;
46 ೪೬ ಉತ್ತರಕ್ಕೆ ಅಭಿಮುಖವಾಗಿರುವ ಆ ಕೋಣೆಯು ಯಜ್ಞವೇದಿಯ ಕಾರ್ಯದರ್ಶಿಗಳಾದ ಯಾಜಕರಿಗೆ ನೇಮಕವಾಗಿದೆ. ಚಾದೋಕನ ಸಂತತಿಯವರಾದ ಇವರು ಲೇವಿಯ ಕುಲದವರಲ್ಲಿ ಯೆಹೋವನ ಸನ್ನಿಧಿ ಸೇವಕರಾಗಿದ್ದಾರೆ” ಎಂದು ಹೇಳಿದನು.
а комната, которая лицом к северу, для священников, бодрствующих на страже жертвенника: это сыны Садока, которые одни из сынов Левия приближаются к Господу, чтобы служить Ему”.
47 ೪೭ ಆ ಮೇಲೆ ಅವನು ಅಂಗಳವನ್ನು ಅಳೆಯಲು, ಅದು ನೂರು ಮೊಳ ಉದ್ದವಾಗಿಯೂ, ನೂರು ಮೊಳ ಅಗಲವಾಗಿಯೂ ಚಚ್ಚೌಕವಾಗಿತ್ತು. ಯಜ್ಞವೇದಿಯು ದೇವಸ್ಥಾನದ ಮುಂದೆ ಇತ್ತು.
И намерил он во дворе сто локтей длины и сто локтей ширины: он был четырехугольный; а перед храмом стоял жертвенник.
48 ೪೮ ಕೂಡಲೆ ಅವನು ನನ್ನನ್ನು ದೇವಸ್ಥಾನದ ದ್ವಾರಮಂಟಪಕ್ಕೆ ಕರೆ ತಂದನು. ಅದನ್ನು ಅಳೆಯಲು, ಅದರ ಎದುರುಬದುರಿನ ಕಂಬಗಳ ಅಗಲ ಐದೈದು ಮೊಳ, ಬಾಗಿಲಿನ ಎರಡು ಪಕ್ಕದ ಗೋಡೆಗಳ ಅಗಲ ಮೂರು ಮೂರು ಮೊಳವಾಗಿತ್ತು.
И привел он меня к притвору храма, и намерил в столбах притвора пять локтей с одной стороны и пять локтей с другой; а в воротах три локтя ширины с одной стороны и три локтя с другой.
49 ೪೯ ದ್ವಾರಮಂಟಪದ ಉದ್ದ ಇಪ್ಪತ್ತು ಮೊಳ, ಅಗಲ ಹನ್ನೊಂದು ಮೊಳ ಇದ್ದವು. ಹತ್ತು ಮೆಟ್ಟಿಲುಗಳನ್ನು ಹತ್ತಿ, ಅಲ್ಲಿಗೆ ಸೇರುತ್ತಿದ್ದರು. ಎರಡು ಕಡೆಯ ಕಂಬಗಳ ಪಕ್ಕದಲ್ಲಿ ಒಂದೊಂದು ಉಪಸ್ತಂಭವು ಇತ್ತು.
Длина притвора - в двадцать локтей, а ширина - в одиннадцать локтей, и всходят в него по десяти ступеням; и были подпоры у столбов, одна с одной стороны, а другая с другой.

< ಯೆಹೆಜ್ಕೇಲನು 40 >