< ಯೆಹೆಜ್ಕೇಲನು 43 >
1 ೧ ಆಮೇಲೆ ಆತನು ನನ್ನನ್ನು ಪೂರ್ವದಿಕ್ಕಿಗೆ ಅಭಿಮುಖವಾಗಿದ್ದ ಬಾಗಿಲಿಗೆ ಕರೆದುಕೊಂಡು ಹೋದನು.
Na ɔbarima no de me baa apuei fam pon no ano,
2 ೨ ಇಗೋ! ಇಸ್ರಾಯೇಲಿನ ದೇವರ ಮಹಿಮೆಯು ಪೂರ್ವದಿಕ್ಕಿನ ಮಾರ್ಗವಾಗಿ ಬಂದಿತ್ತು ಮತ್ತು ಆತನ ಧ್ವನಿಯು ಜಲಪ್ರವಾಹದ ಘೋಷದಂತಿತ್ತು; ಆತನ ಮಹಿಮೆಯಿಂದ ಭೂಮಿಯು ಪ್ರಕಾಶಿಸುತ್ತಿತ್ತು.
na mihuu Israel Nyankopɔn anuonyam sɛ apue wɔ apuei fam reba. Na ne nne te sɛ asuten a ɛreworo, na asase no so hyerɛnee wɔ nʼanuonyam no mu.
3 ೩ ನಾನು ಕಂಡು ದರ್ಶನವೂ, ಆತನು ಪಟ್ಟಣವನ್ನು ಹಾಳುಮಾಡಲು ಬಂದಾಗ ನೋಡಿದ ದರ್ಶನದ ಹಾಗೂ, ಕೆಬಾರ್ ನದಿಯ ಹತ್ತಿರ ನನಗಾದ ದರ್ಶನದ ಹಾಗೂ ಇತ್ತು. ಆಗ ನಾನು ಬೋರಲು ಬಿದ್ದೆನು.
Anisoadehu a minyaa no te sɛnea minyaa no bere a ɔba bɛsɛee kuropɔn no ne nea minyaa wɔ Asubɔnten Kebar ho no, na mede mʼanim butuw fam.
4 ೪ ಆಗ ಯೆಹೋವನ ಮಹಿಮೆಯು ಪೂರ್ವದಿಕ್ಕಿಗೆ ಅಭಿಮುಖವಾಗಿದ್ದ ಬಾಗಿಲಿನ ಮಾರ್ಗವಾಗಿ ಆಲಯವನ್ನು ಪ್ರವೇಶಿಸಿತು.
Awurade anuonyam faa ɔpon a ani kyerɛ apuei fam no mu hyɛn asɔredan no mu.
5 ೫ ದೇವರಾತ್ಮವು ನನ್ನನ್ನು ಎತ್ತಿಕೊಂಡು ಒಳಗಿನ ಅಂಗಳಕ್ಕೆ ಕರೆದು ತಂದಿತು. ಆಗ ಯೆಹೋವನ ಮಹಿಮೆಯು ಆಲಯವನ್ನು ತುಂಬಿಕೊಂಡಿತು.
Na honhom no pagyaw me de me baa mfimfini adiwo hɔ na Awurade anuonyam hyɛɛ asɔredan no ma.
6 ೬ ಆಗ ಆಲಯದೊಳಗಿಂದ ನನ್ನ ಸಂಗಡ ಮಾತನಾಡುವವನ ಶಬ್ದವನ್ನು ಕೇಳಿದೆನು. ಆ ಪುರುಷನು ನನ್ನ ಪಕ್ಕದಲ್ಲಿ ನಿಂತಿದ್ದನು.
Bere a ɔbarima no gyina me ho no, metee sɛ obi rekasa fi asɔredan no mu kyerɛ me.
7 ೭ ಮಾತನಾಡುವಾತನು ನನಗೆ ಹೀಗೆ ಹೇಳಿದನು, “ನರಪುತ್ರನೇ, ಇದು ನನ್ನ ಸಿಂಹಾಸನ, ನನ್ನ ಪಾದ ಪೀಠ, ಇಲ್ಲಿ ನಾನು ಇಸ್ರಾಯೇಲರ ಮಧ್ಯದಲ್ಲಿ ಸದಾ ವಾಸಿಸುವೆನು. ಇಸ್ರಾಯೇಲ್ ವಂಶದವರಾಗಲಿ, ಅವರ ಅರಸರಾಗಲಿ ತಮ್ಮ ದೇವದ್ರೋಹದಿಂದಲೂ, ಗತಿಸಿದ ಅರಸರ ಶವಗಳಿಂದಲೂ ನನ್ನ ಪರಿಶುದ್ಧ ನಾಮವನ್ನು ಅಪವಿತ್ರ ಮಾಡುವುದಿಲ್ಲ.
Ɔkae se, “Onipa ba, ɛha ne mʼahengua sibea ne mʼanan ntiaso. Ɛha na mɛtena wɔ Israelfo mu afebɔɔ. Israelfi rengu me din ho fi bio da; wɔn anaa wɔn ahemfo remfa wɔn aguamammɔ ne ahemfo no ahoni a nkwa nni mu a wɔwowɔ wɔn sorɔnsorɔmmea no ngu me din ho fi.
8 ೮ ನನ್ನ ಹೊಸ್ತಿಲುಗಳ ಪಕ್ಕದಲ್ಲಿ ತಮ್ಮ ಹೊಸ್ತಿಲುಗಳನ್ನು ಹಾಕಿಕೊಂಡು ನನ್ನ ಮನೆಗೂ, ತಮ್ಮ ಮನೆಗೂ ಒಂದೇ ಗೋಡೆಯಾಗುವಂತೆ ಮಾಡಿಕೊಳ್ಳುವುದರಿಂದ ಇನ್ನು ಮೇಲೆ ನನ್ನ ಪವಿತ್ರ ನಾಮವನ್ನು ಅಪವಿತ್ರ ಮಾಡುವುದಿಲ್ಲ. ತಾವು ನಡೆಸಿದ ದುರಾಚಾರಗಳಿಂದ ನನ್ನ ಪವಿತ್ರ ನಾಮವನ್ನು ಅಪವಿತ್ರ ಮಾಡಿದರು. ಆದಕಾರಣ ನಾನು ಕೋಪಗೊಂಡು ಅವರನ್ನು ನಾಶಮಾಡಿದೆನು.
Bere a wɔmaa wɔn abobow ano bɛnee me, na wɔn apongua nso bɛnee me de a na ɔfasu na etwa yɛn ntam no, wɔde wɔn akyiwadeyɛ guu me din kronkron ho fi. Ɛno nti mesɛee wɔn wɔ mʼabufuw mu.
9 ೯ ಈಗಲಾದರೂ ತಮ್ಮ ದೇವದ್ರೋಹವನ್ನು ಮತ್ತು ಅರಸರ ಶವಗಳನ್ನು ನನ್ನಿಂದ ದೂರ ಮಾಡಲಿ. ಆಗ ನಾನು ಅದರ ಮಧ್ಯದಲ್ಲಿ ಸದಾ ವಾಸಿಸುವೆನು.”
Afei ma wonnyi wɔn aguamammɔ ne ahemfo no ahoni a wonni nkwa no mfi mʼani so, na mɛtena wɔn mu afebɔɔ.
10 ೧೦ “ನರಪುತ್ರನೇ, ಇಸ್ರಾಯೇಲ್ ವಂಶದವರು ತಮ್ಮ ಅಪರಾಧಗಳ ನಿಮಿತ್ತ ನಾಚಿಕೆಪಡುವಂತೆ ಆಲಯವನ್ನು ಅವರಿಗೆ ತೋರಿಸು ಮತ್ತು ಅವರು ಅದನ್ನು ಅಳತೆ ಮಾಡಲಿ.
“Onipa ba, kyerɛkyerɛ Israelfo sɛnea asɔredan no te na wɔn ani nwu wɔ wɔn bɔne ho. Ma wonsusuw ne so a enni no ho mfoni ho,
11 ೧೧ ತಾವು ನಡೆಸಿದ ದುಷ್ಕೃತ್ಯಗಳಿಗೆಲ್ಲಾ ನಾಚಿಕೆಪಟ್ಟರೆ, ನೀನು ಆಲಯದ ರೂಪವನ್ನೂ, ವ್ಯವಸ್ಥೆಯನ್ನೂ ಅದರ ಆಗಮನ ಮತ್ತು ನಿರ್ಗಮನಗಳನ್ನೂ ಮತ್ತು ಅದರ ಎಲ್ಲಾ ಕಟ್ಟಳೆಗಳನ್ನೂ, ಸಕಲ ರಚನಾವಿಧಾನಗಳನ್ನೂ, ಸಮಸ್ತ ವಿಧಿಗಳನ್ನೂ, ಸರ್ವ ನಿರ್ಮಾಣ ರೀತಿಗಳನ್ನೂ ಅವರಿಗೆ ತಿಳಿಸು. ಅವರು ಅದರ ಪೂರ್ಣಕ್ರಮವನ್ನೂ, ಎಲ್ಲಾ ವಿಧಿಗಳನ್ನೂ ಅನುಸರಿಸಿ ಕೈಕೊಳ್ಳುವಂತೆ ಅವರ ಕಣ್ಣೆದುರಿಗೆ ಬರೆ.
na sɛ wɔn ani wu nea wɔayɛ ho a, twa asɔredan no mfoni kyerɛ wɔn; ne ntotoe, apon a wɔfa mu pue ne nea wɔfa kɔ mu, ne mfoni nyinaa, ho akwankyerɛ nyinaa ne mmara. Kyerɛw saa nneɛma yi wɔ wɔn anim na wɔadi me ntotoe ne ne si no mfoni no so.
12 ೧೨ “ಇದೇ ಆ ಆಲಯದ ನಿಯಮವಾಗಿದೆ. ಆ ಪರ್ವತದ ಮೇಲೆಯೂ ಮತ್ತು ಅದರ ಸುತ್ತುಮುತ್ತಲಿನ ಪ್ರದೇಶವೆಲ್ಲಾ ಅತಿ ಪರಿಶುದ್ಧವಾಗಿರಬೇಕು. ಇಗೋ, ಆ ಆಲಯದ ನಿಯಮವು ಇದೇ.
“Asɔredan no ho mmara ni: Asase a ɛda ho wɔ bepɔw no so nyinaa yɛ kronkron. Sɛɛ na asɔredan no ho mmara te.
13 ೧೩ “ಯಜ್ಞವೇದಿಯ ಅಳತೆಗಳು ಮೊಳದ ಪ್ರಕಾರ ಹೀಗಿರಬೇಕು. (ಉದ್ದ ಮೊಳ ಅಂದರೆ ಮೊಳದ ಮೇಲೆ ಒಂದು ಹಿಡಿ ಉದ್ದ) ಕೆಳಭಾಗದ ಎತ್ತರ ಒಂದು ಮೊಳ, ಮೇಲಿನ ಅಂಚಿನ ಅಗಲ ಸುತ್ತಲೂ ಒಂದು ಮೊಳ, ಅಂಚಿನ ತುದಿಯಲ್ಲಿ ಸುತ್ತಣ ದಿಂಡಿನ ಅಗಲವು ಒಂದು ಗೇಣು; ಇದೇ ಯಜ್ಞವೇದಿಯ ಪೀಠ.
“Afɔremuka no nsusuwii na edidi so yi. Ne suka mu dɔ yɛ ɔnammɔn ne fa na ne trɛw nso saa ara, na anoano hiɛ a etwa ho hyia no nso trɛw bɛyɛ nsateaa akron. Na eyi nso ne afɔremuka no tenten:
14 ೧೪ ನೆಲದ ಮೇಲೆ ಅಂದರೆ ಕೆಳಭಾಗದ ಮೇಲೆ ಕೆಳಗಿನ ಅಂತಸ್ತಿನ ಎತ್ತರ ಎರಡು ಮೊಳ, ಅದರ ಮೇಲಣ ಅಂಚಿನ ಅಗಲ ಒಂದು ಮೊಳ; ಆ ಚಿಕ್ಕ ಅಂತಸ್ತಿನ ಮೇಲೆ ದೊಡ್ಡ ಅಂತಸ್ತಿನ ಎತ್ತರ ನಾಲ್ಕು ಮೊಳ, ಮೇಲಣ ಅಂಚಿನ ಅಗಲವು ಒಂದು ಮೊಳ.
Efi ne nnyinaso a esi suka no so kɔ ne soro yɛ anammɔn abiɛsa, na mu piw nso yɛ ɔnammɔn ne fa, na apa ketewa no ne apa kɛse no ntam yɛ anammɔn asia na apa no mu piw nso yɛ ɔnammɔn ne fa.
15 ೧೫ ಯಜ್ಞವೇದಿಯ ಅಂತಸ್ತಿನ ಎತ್ತರವು ನಾಲ್ಕು ಮೊಳ; ಆ ಯಜ್ಞವೇದಿಯ ಮೇಲ್ಗಡೆಯಲ್ಲಿ ನಾಲ್ಕು ಕೊಂಬುಗಳು ಇರಬೇಕು.
Afɔremuka no wusiw tokuru no sorokɔ yɛ anammɔn asia a mmɛn anan a ano hwɛ soro tuatua ho.
16 ೧೬ ಯಜ್ಞವೇದಿ ಹನ್ನೆರಡು ಮೊಳ ಉದ್ದವೂ, ಹನ್ನೆರಡು ಮೊಳ ಅಗಲವೂ ಮತ್ತು ಚಚ್ಚೌಕವಾಗಿರಬೇಕು.
Afɔremuka wusiw tokuru no yɛ ahinanan, na ɔfa biara yɛ anammɔn dunwɔtwe.
17 ೧೭ ದೊಡ್ಡ ಅಂತಸ್ತು ಹದಿನಾಲ್ಕು ಮೊಳ ಉದ್ದವಾಗಿಯೂ, ಹದಿನಾಲ್ಕು ಮೊಳ ಅಗಲವಾಗಿಯೂ, ನಾಲ್ಕು ಕಡೆಗಳಲ್ಲಿ ಸಮವಾಗಿರಬೇಕು. ಸುತ್ತಣ ದಿಂಡಿನ ಅಗಲವು ಅರ್ಧ ಮೊಳ, ಕೆಳಭಾಗದ ಸುತ್ತಣ ಅಂಚಿನ ಅಗಲವು ಒಂದು ಮೊಳವಾಗಿಯೂ ಇರಬೇಕು. ಅದರ ಮೆಟ್ಟಲುಗಳು ಪೂರ್ವದಿಕ್ಕಿಗೆ ಅಭಿಮುಖವಾಗಿರಬೇಕು.”
Afɔremuka no apa a ɛwɔ soro no nso yɛ ahinanan a afanan no mu biara yɛ anammɔn aduonu baako, na kaa a ɛyɛ nsateaa akron da apa no ano na suka a atwa ho ahyia yɛ ɔnammɔn ne fa. Atrapoe a ɛkɔ afɔremuka no so no ani hwɛ apuei fam.”
18 ೧೮ ಆಗ ಆ ಪುರುಷನು ನನಗೆ ಹೀಗೆ ಹೇಳಿದನು, “ನರಪುತ್ರನೇ, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ಸರ್ವಾಂಗಹೋಮಕ್ಕೂ, ರಕ್ತವೆರಚುವ ಸಂಸ್ಕಾರಕ್ಕೂ ಯಜ್ಞವೇದಿಯನ್ನು ನಿರ್ಮಿಸುವಾಗ ಈ ವಿಧಿಗಳನ್ನು ಕೈಗೊಳ್ಳಬೇಕು.
Ɔka kyerɛɛ me se, “Onipa ba, sɛɛ na Otumfo Awurade se: Eyinom na ɛbɛyɛ nhyehyɛe a wɔbɛfa so abɔ ɔhyew afɔre ne ɔkwan a, sɛ wosi afɔremuka no wie a wɔbɛfa so de mogya apete ho:
19 ೧೯ ಲೇವಿಯರೂ, ಚಾದೋಕನ ಸಂತಾನದವರೂ, ನನ್ನ ಸನ್ನಿಧಿಸೇವಕರೂ ಆದ ಯಾಜಕರಿಗೆ ನೀನು ಒಂದು ಹೋರಿಯನ್ನು ದೋಷ ಪರಿಹಾರಕಯಜ್ಞಕ್ಕಾಗಿ ಕೊಡು ಇದು ಕರ್ತನಾದ ಯೆಹೋವನ ನುಡಿ.
Ɛsɛ sɛ wode nantwi ba ma asɔfo a wɔyɛ Lewifo na wofi Sadok abusua mu na wɔba mʼanim bɛsom me no sɛ bɔne afɔrebɔde, Otumfo Awurade asɛm ni.
20 ೨೦ ಆಮೇಲೆ ಅದರ ರಕ್ತದಲ್ಲಿ ಸ್ವಲ್ಪವನ್ನು ನೀನು ತೆಗೆದುಕೊಂಡು ಯಜ್ಞವೇದಿಯ ನಾಲ್ಕು ಕೊಂಬುಗಳಿಗೂ, ದೊಡ್ಡ ಅಂತಸ್ತಿನ ನಾಲ್ಕು ಮೂಲೆಗಳಿಗೂ, ಸುತ್ತಣ ದಿಂಡಿಗೂ ಹಚ್ಚಿ, ಯಜ್ಞವೇದಿಯ ದೋಷವನ್ನು ಪರಿಹರಿಸಿ ಅದನ್ನು ಶುದ್ಧಿಮಾಡು.
Ɛsɛ sɛ wofa nantwi ba no mogya no bi na wode keka afɔremuka mmɛn anan no ho. Wode bi bɛkeka apa a ɛwɔ soro no ntwɔtwɔw so ne anoano kaa a atwa ho ahyia no ho na wɔanam so atew afɔremuka no ho de ayɛ mpata nso.
21 ೨೧ ಮತ್ತು ದೋಷ ಪರಿಹಾರಕಯಜ್ಞಕ್ಕಾಗಿ ವಧಿಸಲ್ಪಟ್ಟ ಹೋರಿಯನ್ನು ನೀನು ಒಪ್ಪಿಸಲು ನೇಮಿಸಲ್ಪಟ್ಟವನು, ಪವಿತ್ರಾಲಯದ ಹೊರಗೆ ಆಲಯಕ್ಕೆ ಸಂಬಂಧಪಟ್ಟ ಗೊತ್ತಾದ ಸ್ಥಳದಲ್ಲಿ ಅದನ್ನು ಸುಡಬೇಕು.
Ɛsɛ sɛ wofa bɔne afɔrebɔde nantwi no na wokɔhyew no wɔ asɔredan no ho faako a wɔayi ato hɔ, wɔ kronkronbea no akyi.
22 ೨೨ “ಎರಡನೆಯ ದಿನದಲ್ಲಿ ನೀನು ಪೂರ್ಣಾಂಗವಾದ ಹೋತವನ್ನು ದೋಷ ಪರಿಹಾರಕಯಜ್ಞಕ್ಕಾಗಿ ಅರ್ಪಿಸು. ಹೋರಿಯಿಂದ ಯಜ್ಞವೇದಿಯನ್ನು ಶುದ್ಧಿಮಾಡಿದಂತೆ ಹೋತದಿಂದಲೂ ಶುದ್ಧಿಮಾಡಬೇಕು
“Da a ɛto so abien no, ɛsɛ sɛ wode ɔpapo a onni dɛm ma sɛ bɔne afɔrebɔde, na ɛsɛ sɛ wodwira afɔremuka no ho sɛnea wɔde nantwi no yɛe no.
23 ೨೩ ನೀನು ಯಜ್ಞವೇದಿಯ ಶುದ್ಧೀಕರಣದ ಕಾರ್ಯವನ್ನು ಮುಗಿಸಿದ ಮೇಲೆ, ದೋಷವಿಲ್ಲದ ಪೂರ್ಣಾಂಗವಾದ ಹೋರಿಯನ್ನೂ ಹಿಂಡಿನಿಂದಲೂ ಮತ್ತು ಪೂರ್ಣಾಂಗವಾದ ಟಗರನ್ನೂ ಮಂದೆಯೊಳಗಿಂದಲೂ ತಂದು ಅರ್ಪಿಸಬೇಕು.
Sɛ wowie ho dwira a, ɛsɛ sɛ wode nantwi ba ne adwennini a wofi buw no mu a wonni dɛm bɛbɔ afɔre.
24 ೨೪ ನೀನು ಅವುಗಳನ್ನು ಯೆಹೋವನಿಗೆ ಸಮರ್ಪಿಸಬೇಕು, ಯಾಜಕರು ಅವುಗಳ ಮೇಲೆ ಉಪ್ಪನ್ನು ಹಾಕಿ, ಯೆಹೋವನಿಗಾಗಿ ಸರ್ವಾಂಗಹೋಮವನ್ನು ಅರ್ಪಿಸಬೇಕು.
Ɛsɛ sɛ wode wɔn ba Awurade anim, na asɔfo de nkyene pete wɔn so na wɔde bɔ ɔhyew afɔre ma Awurade.
25 ೨೫ “ಏಳು ದಿನಗಳ ತನಕ ನೀನು ಪ್ರತಿ ದಿನವೂ ದೋಷಪರಿಹಾರ ಬಲಿಗಾಗಿ ಒಂದೊಂದು ಹೋತವನ್ನು ಸಿದ್ಧಮಾಡಬೇಕು. ಯಾಜಕರು ಸಹ ದೋಷವಿಲ್ಲದ ಪೂರ್ಣಾಂಗವಾದ ಹೋರಿಯನ್ನೂ ಹಿಂಡಿನಿಂದಲೂ ಮತ್ತು ಪೂರ್ಣಾಂಗವಾದ ಟಗರನ್ನೂ ಮಂದೆಯೊಳಗಿಂದಲೂ ಸಿದ್ಧಮಾಡಬೇಕು.
“Ɛsɛ sɛ wode ɔpapo ba sɛ bɔne afɔrebɔde nnanson; afei ɛsɛ sɛ wode nantwi ba ne adwennini a wofi buw mu na wonni dɛm nso ba.
26 ೨೬ ಹೀಗೆ ಏಳು ದಿನ ಯಜ್ಞವೇದಿಯ ದೋಷವನ್ನು ಪರಿಹರಿಸುತ್ತಾ ಅದನ್ನು ಶುದ್ಧಿ ಮಾಡಿ ಪ್ರತಿಷ್ಠಿಸಬೇಕು.
Wɔbɛyɛ mpata ama afɔremuka no nnanson de atew ho; sɛɛ na wɔbɛyɛ de asi hɔ ama dwumadi no.
27 ೨೭ ಏಳು ದಿನಗಳ ಕಾರ್ಯವನ್ನು ಮುಗಿಸಿದ ಬಳಿಕ, ಎಂಟನೆಯ ದಿನದಿಂದ ಯಾಜಕರು ಯಜ್ಞವೇದಿಯ ಮೇಲೆ ನಿಮ್ಮ ಪಕ್ಷವಾಗಿ ಸರ್ವಾಂಗಹೋಮಗಳನ್ನೂ ಸಮಾಧಾನಯಜ್ಞಗಳನ್ನೂ ಮಾಡಬೇಕು. ಆಗ ನಾನು ನಿಮ್ಮನ್ನು ಅಂಗೀಕರಿಸುವೆನು” ಇದು ಕರ್ತನಾದ ಯೆಹೋವನ ನುಡಿ.
Saa nna yi akyi, efi da a ɛto so awotwe de rekɔ no, ɛsɛ sɛ asɔfo no de mo hyew afɔrebɔde ne asomdwoe afɔrebɔde no ba afɔremuka no so. Afei megye mo ato mu, Otumfo Awurade asɛm ni.”