< ಯೆಹೆಜ್ಕೇಲನು 46 >
1 ೧ ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ವಾರದೊಳಗೆ ಕೆಲಸ ಮಾಡುವ ಆರು ದಿನಗಳಲ್ಲಿ ಒಳಗಿನ ಅಂಗಳದ ಪೂರ್ವದಿಕ್ಕಿನ ಹೆಬ್ಬಾಗಿಲನ್ನು ಮುಚ್ಚಿರಬೇಕು. ಅದನ್ನು ಸಬ್ಬತ್ ದಿನದಲ್ಲಿಯೂ, ಅಮಾವಾಸ್ಯೆಯಲ್ಲಿಯೂ ತೆರೆದಿರಬೇಕು.
Chúa Giê-hô-va phán như vầy: Cổng của hành lang trong, ngó về phía đông, sẽ đóng luôn trong sáu ngày làm việc; nhưng ngày sa-bát thì sẽ mở, và ngày trăng mới cũng sẽ mở.
2 ೨ ರಾಜನು ಹೊರಗಿನ ಕೈಸಾಲೆಯ ಮಾರ್ಗವಾಗಿ ಆ ಹೆಬ್ಬಾಗಿಲನ್ನು ಪ್ರವೇಶಿಸಿ, ಬಾಗಿಲಿನ ಕಂಬದ ಪಕ್ಕದಲ್ಲಿ ನಿಂತುಕೊಂಡು, ತಾನು ಒಪ್ಪಿಸಿದ ಸರ್ವಾಂಗಹೋಮ ಪಶುವನ್ನೂ, ಸಮಾಧಾನ ಯಜ್ಞ ಪಶುಗಳನ್ನೂ ಯಾಜಕರು ಅರ್ಪಿಸುತ್ತಿರುವಾಗ ಬಾಗಿಲಿನ ಹೊಸ್ತಿಲಿನಲ್ಲಿ ಅಡ್ಡಬೀಳಲಿ, ಆ ಮೇಲೆ ಹೊರಟು ಹೋಗಲಿ. ಅ ದಿನ ಸಂಜೆಯ ತನಕ ಬಾಗಿಲನ್ನು ಮುಚ್ಚಬಾರದು.
Vua sẽ đến nơi đó do cổng nhà ngoài, và đứng gần trụ cổng trong khi các thầy tế lễ sắm của lễ thiêu và của lễ thù ân. Vua sẽ lạy trên ngạch hiên cửa, rồi, bước ra, và cửa sẽ không đóng lại trước khi chiều tối.
3 ೩ ಸಬ್ಬತ್ ದಿನಗಳಲ್ಲಿಯೂ, ಅಮಾವಾಸ್ಯೆಗಳಲ್ಲಿಯೂ ದೇಶದ ಜನರು ಆ ಹೆಬ್ಬಾಗಿಲಿನ ದ್ವಾರದ ಮುಂದೆ ಯೆಹೋವನ ಸಮ್ಮುಖವಾಗಿ ಅಡ್ಡಬೀಳಲಿ.
Những ngày sa-bát và ngày trăng mới, dân sự của đất sẽ thờ lạy trước mặt Đức Giê-hô-va nơi lối vào hiên cửa ấy.
4 ೪ ಸಬ್ಬತ್ ದಿನದಲ್ಲಿ ಅರಸನು ಯೆಹೋವನಿಗೆ ಪೂರ್ಣಾಂಗವಾದ ಒಂದು ಟಗರನ್ನೂ ಸರ್ವಾಂಗಹೋಮವಾಗಿ ಅರ್ಪಿಸತಕ್ಕದ್ದು.
Của lễ thiêu mà vua sẽ dâng cho Đức Giê-hô-va nơi ngày sa-bát là sáu con chiên con không tì vít và một con chiên đực không tì vít.
5 ೫ ಟಗರಿನೊಡನೆ ಮೂವತ್ತು ಸೇರು ಗೋದಿಹಿಟ್ಟನ್ನೂ, ಕುರಿಗಳೊಡನೆ ಕೈಯಲಾದಷ್ಟು ಗೋದಿಹಿಟ್ಟನ್ನೂ, ಮೂವತ್ತು ಸೇರು ಗೋದಿಹಿಟ್ಟಿಗೆ ಆರಾರು ಸೇರಿನಂತೆ ಎಣ್ಣೆಯನ್ನೂ ಧಾನ್ಯನೈವೇದ್ಯಕ್ಕಾಗಿ ಕೊಡಲಿ.
Của lễ chay sẽ là một ê-pha theo con chiên đực, còn về các chiên con thì vua muốn dâng chi tùy sức, và mỗi ê-pha đèo một hin dầu.
6 ೬ ಅಮಾವಾಸ್ಯೆಯಲ್ಲಿ ಅವನು ಪೂರ್ಣಾಂಗವಾದ ಒಂದು ಹೋರಿಯನ್ನೂ, ಆರು ಕುರಿಗಳನ್ನೂ, ಒಂದು ಟಗರನ್ನೂ ಒಪ್ಪಿಸತಕ್ಕದ್ದು. ಅವು ಪೂರ್ಣಾಂಗವಾಗಿಯೇ ಇರಬೇಕು.
Ngày trăng mới, vua sẽ sắm một con bò đực tơ không tì vít, sáu con chiên con và một con chiên đực cũng phải cho không tì vít.
7 ೭ ಮತ್ತು ಹೋರಿಯೊಡನೆ ಮೂವತ್ತು ಸೇರು, ಟಗರಿನೊಡನೆ ಮೂವತ್ತು ಸೇರು, ಕುರಿಗಳೊಡನೆ ಕೈಲಾದ್ದಷ್ಟು ಸೇರು ಗೋದಿಹಿಟ್ಟನ್ನೂ, ಮೂವತ್ತು ಸೇರಿಗೆ ಆರಾರು ಸೇರಿನಂತೆ ಎಣ್ಣೆಯನ್ನೂ ಧಾನ್ಯನೈವೇದ್ಯಕ್ಕಾಗಿ ಒದಗಿಸಬೇಕು.
Về của lễ chay, vua sẽ sắm một ê-pha theo con bò đực, một ê-pha theo con chiên đực, còn về các chiên con thì vua dâng chi tùy sức, và mỗi ê-pha đèo một hin dầu.
8 ೮ “ಅರಸನು ಪ್ರವೇಶ ಮಾಡುವಾಗ ಹೆಬ್ಬಾಗಿಲಿನ ಕೈಸಾಲೆಯ ಮಾರ್ಗವಾಗಿ ಒಳಗೆ ಬಂದು, ಅದೇ ಮಾರ್ಗವಾಗಿ ಹೊರಗೆ ಹೋಗಬೇಕು.
Khi vua vào, thì do đường thuộc về nhà ngoài của cổng mà qua, và cũng sẽ ra theo đường ấy.
9 ೯ ದೇಶದ ಜನರಾದರೋ ಹಬ್ಬಗಳಲ್ಲಿ ಯೆಹೋವನ ಸಮ್ಮುಖದಲ್ಲಿ ಕಾಣಿಸಿಕೊಳ್ಳುವಾಗ ಉತ್ತರ ಬಾಗಿಲಿನಿಂದ ಆರಾಧಿಸುವುದಕ್ಕೆ ಪ್ರವೇಶಿಸಿದವನು ದಕ್ಷಿಣ ಬಾಗಿಲಿಂದ ಹೊರಗೆ ಹೋಗಬೇಕು. ದಕ್ಷಿಣದ ಬಾಗಿಲಿನಿಂದ ಪ್ರವೇಶಿಸಿದವನು ಉತ್ತರ ಬಾಗಿಲಿನಿಂದ ಹೊರಗೆ ಹೋಗಬೇಕು. ತಾನು ಪ್ರವೇಶಿಸಿದ ಬಾಗಿಲಿನಿಂದ ಹಿಂದಿರುಗದೆ ಅದಕ್ಕೆ ಎದುರಾಗಿರುವ ಬಾಗಿಲಿಂದ ಹೊರಗೆ ಹೋಗಬೇಕು.
Khi dân sự của đất vào đặng chầu trước mặt Đức Giê-hô-va nơi k” lễ, thì hễ kẻ nào vào bởi đường cổng phía bắc mà thờ lạy, sẽ ra bởi đường cổng phía nam; còn kẻ nào vào bởi đường cổng phía nam, sẽ ra bởi đường cổng phía bắc: không được trở ra bởi đường cổng mà mình đã vào, nhưng phải ra thẳng trước mặt mình.
10 ೧೦ ಜನರು ಪ್ರವೇಶಿಸುವಾಗ ಅರಸನು ಅವರ ಮಧ್ಯದಲ್ಲಿ ಒಳಗೆ ಪ್ರವೇಶಿಸಲಿ. ಅವರು ಹೊರಗೆ ಹೋಗುವಾಗ ಅವರೂ ಹೊರಗೆ ಹೋಗಲಿ.
vua sẽ vào cùng với dân sự một lúc; và khi ai nấy ra thì chính vua cũng ra.
11 ೧೧ ಅರಸನು ಉತ್ಸವಗಳಲ್ಲಿಯೂ, ಹಬ್ಬಗಳಲ್ಲಿಯೂ ಹೋರಿಯೊಡನೆ ಮೂವತ್ತು ಸೇರು, ಟಗರಿನೊಡನೆ ಮೂವತ್ತು ಸೇರು, ಕುರಿಗಳೊಡನೆ ಕೈಲಾದ್ದಷ್ಟು ಸೇರು ಗೋದಿಹಿಟ್ಟನ್ನೂ, ಮೂವತ್ತು ಸೇರಿಗೆ ಆರಾರು ಸೇರಿನಂತೆ ಎಣ್ಣೆಯನ್ನೂ, ಧಾನ್ಯನೈವೇದ್ಯಕ್ಕಾಗಿ ಒದಗಿಸಬೇಕು.
Trong các k” lễ và các ngày lễ trọng thể, của lễ chay sẽ là một ê-pha theo con bò đực, một ê-pha theo con chiên đực, và về các chiên con thì vua muốn dâng chi tùy sức, mỗi một ê-pha đèo một hin dầu.
12 ೧೨ ಅರಸನು ಸ್ವಂತ ಇಚ್ಛೆಯಿಂದ ಕಾಣಿಕೆಯನ್ನಾಗಲಿ, ಸರ್ವಾಂಗಹೋಮವನ್ನಾಗಲಿ, ಸಮಾಧಾನ ಯಜ್ಞಗಳನ್ನಾಗಲಿ ಯೆಹೋವನಿಗೆ ಸಮರ್ಪಿಸುವಾಗ ಅವನಿಗಾಗಿ ಪೂರ್ವದಿಕ್ಕಿನ ಹೆಬ್ಬಾಗಿಲನ್ನು ತೆರೆಯಬೇಕು. ಅವನು ಸಬ್ಬತ್ ದಿನದಲ್ಲಿ ಸಮರ್ಪಿಸುವಂತೆ ಸರ್ವಾಂಗಹೋಮ ಪಶುವನ್ನೂ, ಸಮಾಧಾನ ಯಜ್ಞಪಶುಗಳನ್ನೂ ಸಮರ್ಪಿಸಿ ಹೊರಡಲಿ. ಹೊರಟ ಮೇಲೆ ಬಾಗಿಲನ್ನು ಮುಚ್ಚಬೇಕು.
Khi vua sắm cho Đức Giê-hô-va một của lễ lạc hiến (của lễ thiêu hoặc của lễ thù ân), thì sẽ mở cổng hướng đông cho người, và người khá sắm của lễ thiêu mình và những của lễ thù ân mình như người sắm các của lễ ấy trong ngày sa-bát; đoạn người trở lui, và khi đã ra rồi khá đóng cổng lại.
13 ೧೩ “ನೀನು ಪೂರ್ಣಾಂಗವಾದ ವರ್ಷದ ಕುರಿಯನ್ನು ಯೆಹೋವನಿಗೆ ಸರ್ವಾಂಗಹೋಮವಾಗಿ ಪ್ರತಿ ದಿನ ಅರ್ಪಿಸಬೇಕು. ಪ್ರತಿ ದಿನ ಬೆಳಿಗ್ಗೆ ಅದನ್ನು ಅರ್ಪಿಸತಕ್ಕದ್ದು.
Mỗi ngày ngươi khá sắm cho Đức Giê-hô-va một con chiên con giáp năm, không tì vít, vào mỗi buổi mai.
14 ೧೪ ಅದರೊಂದಿಗೆ ಪ್ರತಿ ದಿನ ಬೆಳಗ್ಗೆ ಧಾನ್ಯ ನೈವೇದ್ಯವಾಗಿ ಐದು ಸೇರು ಗೋದಿಹಿಟ್ಟನ್ನೂ, ಅದನ್ನು ಕಲಸುವುದಕ್ಕೆ ಎರಡು ಸೇರು ಎಣ್ಣೆಯನ್ನೂ ನೀನು ಸಮರ್ಪಿಸಬೇಕು. ಇವುಗಳನ್ನು ಪ್ರತಿನಿತ್ಯವೂ ಯೆಹೋವನಿಗೆ ಧಾನ್ಯನೈವೇದ್ಯವಾಗಿ ಅರ್ಪಿಸತಕ್ಕದ್ದು. ಇದು ಶಾಶ್ವತ ನಿಯಮವಾಗಿದೆ.
Mỗi buổi mai ngươi khá sắm theo chiên con một phần sáu ê-pha với một phần ba hin dầu để hòa bột, là của lễ chay. Của lễ chay dâng cho Đức Giê-hô-va hằng ngày theo lệ luật đời đời.
15 ೧೫ ಯಾಜಕರು ಕುರಿಯನ್ನೂ, ಧಾನ್ಯನೈವೇದ್ಯವನ್ನೂ, ಎಣ್ಣೆಯನ್ನೂ ನಿತ್ಯ ಸರ್ವಾಂಗಹೋಮವಾಗಿ ಪ್ರತಿ ದಿನ ಬೆಳಗ್ಗೆ ಸಮರ್ಪಿಸಬೇಕು.”
Hết thảy những buổi mai, người ta sẽ sắm chiên con, của lễ chay, và dầu, làm của lễ thiêu mãi mãi.
16 ೧೬ ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಅರಸನು ತನ್ನ ಮಕ್ಕಳಲ್ಲಿ ಒಬ್ಬನಿಗೆ ದಾನ ಕೊಟ್ಟರೆ, ಅದು ತಂದೆಯ ಸ್ವಾಸ್ತ್ಯವಾದ ಕಾರಣ, ಮಕ್ಕಳಿಗೆ ಹಕ್ಕು ಬರುವುದು, ಅದು ಬಾಧ್ಯವಾಗಿ ಸಿಕ್ಕಿದ ಸ್ವಾಸ್ತ್ಯವೇ.
Chúa Giê-hô-va phán như vầy: Khi vua lấy vật chi mà ban cho một trong các con trai mình, thì vật ấy sẽ thuộc về các con trai người làm gia tài; ấy là thuộc về chúng nó bởi quyền ăn gia tài.
17 ೧೭ ಆದರೆ ಅರಸನು ತನ್ನ ಭೂಮಿಯ ಒಂದು ಭಾಗವನ್ನು ತನ್ನ ಸೇವಕರಲ್ಲಿ ಒಬ್ಬನಿಗೆ ದಾನ ಮಾಡಿದರೆ, ಬಿಡುಗಡೆಯ ವರ್ಷದವರೆಗೆ ಅದು ಅವನ ಅಧೀನವಾಗಿರುವುದು; ಆ ಮೇಲೆ ಅದು ಪುನಃ ಅರಸನ ವಶವಾಗುವುದು; ಆದರೆ ಅರಸನು ತನ್ನ ಮಕ್ಕಳಿಗೆ ಕೊಟ್ಟ ಸ್ವತ್ತು ಅವರಿಗೇ ಸೇರುವುದು.
Nhưng nếu vua lấy vật chi của sản nghiệp mình mà ban cho một trong các đầy tớ mình, thì vật ấy sẽ thuộc về kẻ đầy tớ cho đến năm phóng mọi; rồi thì vật ấy trở về vua. Cơ nghiệp của vua thì phải thuộc về các con trai người.
18 ೧೮ ಇದಲ್ಲದೆ ಅರಸನು ಪ್ರಜೆಗಳ ಪಿತ್ರಾರ್ಜಿತ ಭೂಮಿಯನ್ನು ಸ್ವಾಧೀನ ಮಾಡಿಕೊಂಡು ಅವರ ಬಾಧ್ಯತೆಯನ್ನು ತಪ್ಪಿಸಬಾರದು. ಸ್ವಂತ ಭೂಮಿಯನ್ನೇ ವಿಭಾಗಿಸಿ ತನ್ನ ಮಕ್ಕಳಿಗೆ ಪಾಲುಕೊಡಲಿ. ಇಲ್ಲವಾದರೆ ನನ್ನ ಪ್ರಜೆಯಲ್ಲಿ ಪ್ರತಿಯೊಬ್ಬನೂ ತನ್ನ ತನ್ನ ಭೂಸ್ಥಿತಿಯನ್ನು ಕಳೆದುಕೊಂಡು ದಿಕ್ಕಾಪಾಲಾಗಿ ಹೋಗುವನು.
Vua chớ lấy chi hết về gia tài của dân, mà đuổi chúng nó khỏi cơ nghiệp chúng nó; vua sẽ lấy của riêng mình mà ban cho các con trai mình làm cơ nghiệp, hầu cho dân ta ai nấy không bị tan lạc khỏi cơ nghiệp mình.
19 ೧೯ “ಬಳಿಕ ಆ ಪುರುಷನು ನನ್ನನ್ನು ಹೆಬ್ಬಾಗಿಲ ಪಕ್ಕದಲ್ಲಿನ ಪ್ರವೇಶದ ಮಾರ್ಗವಾಗಿ ಉತ್ತರಕ್ಕೆ ಅಭಿಮುಖವಾಗಿಯೂ, ಯಾಜಕರಿಗೆ ನೇಮಕವಾಗಿಯೂ ಇರುವ ಪರಿಶುದ್ಧವಾದ ಕೋಣೆಗಳಿಗೆ ಬರಮಾಡಿದನು. ಇಗೋ, ಅವುಗಳ ಹಿಂದೆ ಪಶ್ಚಿಮದ ಕಡೆಗೆ ಒಂದು ಸ್ಥಳವಿತ್ತು.”
Rồi đó, người dẫn ta do lối vào kề bên cổng, mà dắt ta vào các phòng thánh của các thầy tế lễ, hướng về phía bắc; và nầy, có một chỗ ở trong nơi sâu, về phía tây.
20 ೨೦ ಆಗ ಅವನು ನನಗೆ, “ಯಾಜಕರು ಅಪರಾಧ ಬಲಿಯನ್ನೂ, ಪ್ರಾಯಶ್ಚಿತ್ತಯಜ್ಞ ಬಲಿಯನ್ನೂ, ಬೇಯಿಸಿದ ಧಾನ್ಯನೈವೇದ್ಯವನ್ನು ಸುಡುವುದಕ್ಕೆ ಏರ್ಪಡಿಸಿರುವ ಪರಿಶುದ್ಧ ಸ್ಥಳವು ಇದೆ” ಎಂದು ಹೇಳಿದನು.
Người bảo ta rằng: Đó là nơi các thầy tế lễ nấu những của lễ chuộc tội và chuộc sự mắc lỗi, và hấp những của lễ chay, hầu cho không đem ra nơi hành lang ngoài để cho dân nên thánh.
21 ೨೧ ತರುವಾಯ ಅವನು ನನ್ನನ್ನು ಹೊರಗಿನ ಅಂಗಳಕ್ಕೆ ಬರಮಾಡಿ, ಅಲ್ಲಿನ ನಾಲ್ಕು ಮೂಲೆಗಳ ಮಾರ್ಗವಾಗಿ ಕರೆದುಕೊಂಡು ಹೋದನು. ಇಗೋ, ಅಂಗಳದ ಒಂದೊಂದು ಮೂಲೆಯಲ್ಲಿ ಒಂದೊಂದು ಒಳ ಅಂಗಳವು ಕಾಣಿಸಿತು.
Đoạn người đem ta ra nơi hành lang ngoài, và đem ta qua gần bốn góc hành lang; nầy, mỗi góc hành lang có một cái sân.
22 ೨೨ ಹೌದು, ಅಂಗಳದ ನಾಲ್ಕು ಮೂಲೆಗಳಲ್ಲಿಯೂ ನಲ್ವತ್ತು ಮೊಳ ಉದ್ದದ, ಮೂವತ್ತು ಮೊಳ ಅಗಲದ ಪ್ರತ್ಯೇಕವಾದ ಅಂಗಳಗಳು ಇದ್ದವು; ಮೂಲೆಗಳಲ್ಲಿನ ಆ ನಾಲ್ಕು ಅಂಗಳಗಳು ಒಂದೇ ಅಳತೆಯಾಗಿದ್ದವು.
Nơi bốn góc hành lang có những sân bao lấy, dài bốn mươi cu-đê và rộng ba mươi cu-đê; hết thảy bốn sân đều dài rộng bằng nhau trong cả bốn góc.
23 ೨೩ ಅವುಗಳೊಳಗೆ ಸುತ್ತಲು, ಅಂದರೆ ಆ ನಾಲ್ಕು ಅಂಗಳಗಳ ಸುತ್ತು ಮುತ್ತಲು ಕಲ್ಲಿನ ಸಾಲುಗಳು ಚಾಚಿಕೊಂಡಿತು. ಆ ಸಾಲುಗಳ ಕೆಳಗೆ ಒಲೆಗಳು ಸುತ್ತಲೂ ಇದ್ದವು.
Có một cái tường bao lấy bốn cái sân ấy, và chung quanh dưới chân tường có những chỗ để nấu.
24 ೨೪ ಆಗ ಅವನು ನನಗೆ, “ಇವು ದೇವಾಲಯದ ಸೇವಕರು. ಯಜ್ಞಪಶುಗಳನ್ನು ತಂದ ಜನರಿಗೋಸ್ಕರ ಅವುಗಳ ಮಾಂಸವನ್ನು ಬೇಯಿಸಿದ ಪಾಕಶಾಲೆಗಳು” ಎಂದು ಹೇಳಿದನು.
Người bảo ta rằng: Đây là những nhà bếp, là nơi những kẻ làm việc trong nhà nấu thịt tế của dân sự.