< ಯೆಹೆಜ್ಕೇಲನು 5 >
1 ೧ “ನರಪುತ್ರನೇ, ಹದವಾದ ಖಡ್ಗವನ್ನು ತೆಗೆದುಕೊಂಡು, ಕ್ಷೌರಿಕನ ಕತ್ತಿಯನ್ನಾಗಿ ಉಪಯೋಗಿಸಿ ನಿನ್ನ ತಲೆಯನ್ನೂ, ಗಡ್ಡವನ್ನೂ ಬೋಳಿಸಿಬಿಟ್ಟು, ತಕ್ಕಡಿಯನ್ನು ತಂದು ಅದರಿಂದ ತೂಗಿ ಆ ಕೂದಲನ್ನು ಭಾಗ ಮಾಡು.
「人子,你拿一把快刀,當理髮的剃刀用,剃去你的頭髮和鬍鬚,然後拿一個天平,分開那些鬚髮。
2 ೨ ಮುತ್ತಿಗೆಯ ದಿನಗಳು ಮುಗಿದ ಕೂಡಲೆ ಕೂದಲನ್ನು ಮೂರು ಭಾಗ ಮಾಡಿ, ಪಟ್ಟಣದ ಮಧ್ಯದೊಳಗೆ ಬೆಂಕಿಯಲ್ಲಿ ಸುಡು; ಇನ್ನೊಂದು ಭಾಗವನ್ನು ತೆಗೆದುಕೊಂಡು ಪಟ್ಟಣದ ಸುತ್ತಲು ಖಡ್ಗದಿಂದ ಕಡಿ; ಮತ್ತೊಂದು ಭಾಗವನ್ನು ಗಾಳಿಗೆ ತೂರಿಬಿಡು; ಈ ಪ್ರಕಾರ ನಾನು ನನ್ನ ಜನರ ಹಿಂದೆ ಕತ್ತಿಯನ್ನು ಬೀಸುವೆನು.
等被困的日子一滿,把三分之一在城內用火燒掉;再拿三分之一在城四周用劍擊砍;其他三分之一,要揚在風中,我要拔出劍來追趕他們。
3 ೩ ಆಗ ಕಡೆಯ ಭಾಗದಲ್ಲಿ ಉಳಿಸಿಕೊಂಡ ಕೆಲವು ಕೂದಲನ್ನು ನಿನ್ನ ಮೇಲಂಗಿಯ ಅಂಚಿನಲ್ಲಿ ಕಟ್ಟು.
但你要從鬍鬚中取出幾根來,繫在你的衣服邊上,
4 ೪ ಆಮೇಲೆ ಇವುಗಳಲ್ಲಿ ಕೆಲವನ್ನು ಆರಿಸಿ ಬೆಂಕಿಯೊಳಗೆ ಹಾಕಿ ಸುಡು; ಅವುಗಳಿಂದ ಬೆಂಕಿಯು ಹೊರಟು ಇಸ್ರಾಯೇಲ್ ವಂಶವನ್ನೆಲ್ಲಾ ವ್ಯಾಪಿಸುವುದು.”
再從其中取出幾根投入火中,讓火燒掉;然後你向以色列全家說:
5 ೫ ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಇದು ಯೆರೂಸಲೇಮ್; ಪಟ್ಟಣವನ್ನು ನಾನು ಜನಾಂಗಗಳ ಮಧ್ಯದಲ್ಲಿ ಸ್ಥಾಪಿಸಿದ್ದೇನೆ, ಅದರ ಸುತ್ತಲು ನಾನಾ ದೇಶಗಳಿವೆ.
吾主上主這樣說:這就是耶路撒冷! 我將她安置在萬民之中,使萬國環繞著她;
6 ೬ ಅದು ನನ್ನ ನಿಯಮನಿಷ್ಠೆಗಳಿಗೆ ಒಳಪಡದೆ ಜನಾಂಗಗಳಿಗಿಂತಲೂ, ಸುತ್ತಲಿನ ದೇಶಗಳವರಿಗಿಂತಲೂ ಹೆಚ್ಚು ಅಧರ್ಮವನ್ನು ನಡೆಸಿದೆ; ಅದರ ನಿವಾಸಿಗಳು ನನ್ನ ನಿಯಮಗಳನ್ನು ಅನುಸರಿಸದೆ ನನ್ನ ವಿಧಿಗಳನ್ನು ನಿರಾಕರಿಸಿದ್ದಾರೆ.”
但是她違背了我的法令,作惡甚於異民,違背我的法律甚於環繞她的列國,因為她們輕視了我的法令,沒有照我的法律行事。
7 ೭ ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನೀವು ನನ್ನ ನಿಯಮಗಳನ್ನು ಅನುಸರಿಸದೆ, ನನ್ನ ವಿಧಿಗಳನ್ನು ಕೈಕೊಳ್ಳದೆ, ನಿಮ್ಮ ಸುತ್ತಲಿನ ಜನಾಂಗಗಳ ಧರ್ಮವಿಧಿಗಳನ್ನು ಆಚರಿಸಿ, ಆ ಜನಾಂಗಗಳಿಗಿಂತ ಹೆಚ್ಚು ದಂಗೆಕೋರರಾಗಿ ವರ್ತಿಸಿದ್ದೀರಿ.
為此,吾主上主這樣說:因為你們比環繞你們的異民更為叛逆,沒有照我的法律行事;沒有遵行我的法令,也沒有按照環繞你們異民的法律行事;
8 ೮ ಆದುದರಿಂದ ಯೆರೂಸಲೇಮೇ, ಇಗೋ, ನಾನೇ ನಿನಗೆ ವಿರುದ್ಧವಾಗಿದ್ದೇನೆ. ಜನಾಂಗಗಳ ಕಣ್ಣೆದುರಿಗೆ ನಿನ್ನ ಜನರನ್ನು ದಂಡಿಸುವೆನು ಇದು ಕರ್ತನಾದ ಯೆಹೋವನ ನುಡಿ.
因此吾主上主這樣說:看,我要親自對付你;在你中間,在異民眼前實行懲罰。
9 ೯ ನೀನು ಬಹಳ ಅಸಹ್ಯಕಾರ್ಯಗಳನ್ನು ನಡಿಸಿದ್ದರಿಂದ ನಾನು ಈವರೆಗೂ ಇನ್ನು ಮುಂದೆಯೂ ಮಾಡದಂಥ ದಂಡನೆಯನ್ನು ಈಗ ನಿನಗೆ ಮಾಡುವೆನು.
為了你的一切醜惡,我要對你實習未曾實行過的,將來也不會實行的事;
10 ೧೦ ಹೀಗಿರಲು, ನಿನ್ನಲ್ಲಿ ತಂದೆಗಳು ಮಕ್ಕಳನ್ನು, ಮಕ್ಕಳು ತಂದೆಗಳನ್ನು ತಿನ್ನುವರು; ನಾನು ನಿನ್ನನ್ನು ದಂಡಿಸಿ ನಿನ್ನಲ್ಲಿ ಉಳಿದ ಸಮಸ್ತರನ್ನು ಎಲ್ಲಾ ಕಡೆಯ ಗಾಳಿಗೂ ತೂರುವೆನು.”
在你境內,為父的要吃自己的兒子,為子的要吃自己的父親。我必如此在你境內實行懲罰,且把遺民分散到四方。
11 ೧೧ ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನನ್ನ ಜೀವದಾಣೆ, ನೀನು ನಿನ್ನ ಹೇರಳವಾದ ಹೇಯ ವಿಗ್ರಹಗಳಿಂದಲೂ, ಅಸಹ್ಯ ವಸ್ತುಗಳಿಂದಲೂ ನನ್ನ ಪವಿತ್ರಾಲಯವನ್ನು ಹೊಲಸು ಮಾಡಿದ್ದರಿಂದ ಖಂಡಿತವಾಗಿ ನಾನು ನಿನ್ನನ್ನು ಕುಂದಿಸುವೆನು, ನಾನು ನಿನಗೆ ಕರುಣೆ ತೋರಿಸೆನು, ಕಟಾಕ್ಷಿಸೆನು.
為此我指著我的生命起誓說:──吾主上主的斷語──因為你用你的一切可憎和可惡之物玷污了我的聖所,我必將你剷除,我的眼決不憐視,一點也不憐惜。
12 ೧೨ ನಿನ್ನಲ್ಲಿನ ಮೂರನೆಯ ಒಂದು ಭಾಗದವರು ವ್ಯಾಧಿಯಿಂದ ಸಾಯುವರು, ನಿನ್ನ ಮಧ್ಯದಲ್ಲಿ ಕ್ಷಾಮದಿಂದ ನಾಶವಾಗುವರು; ಇನ್ನೊಂದು ಭಾಗದವರು ನಿನ್ನ ಸುತ್ತಲೂ ಖಡ್ಗದಿಂದ ಹತರಾಗುವರು; ಮತ್ತೊಂದು ಭಾಗದವರನ್ನು ನಾನು ಎಲ್ಲಾ ಕಡೆಯ ಗಾಳಿಗೂ ತೂರಿ ಅವರ ಹಿಂದೆ ಕತ್ತಿಯನ್ನು ಬೀಸುವೆನು.
你三分之一的人民要在你境內死於瘟疫,亡於饑荒;另三分之一,在你四周各地喪身刀下;其他三分之一,我要分散到各地。我且拔出劍來追趕他們。
13 ೧೩ “ಹೀಗೆ ನನ್ನ ಸಿಟ್ಟನ್ನು ತೀರಿಸಿಕೊಳ್ಳುವೆನು, ನನ್ನ ರೋಷವನ್ನು ಅವರ ಮೇಲೆ ಸುರಿದು ಶಾಂತನಾಗುವೆನು; ರೋಷದಿಂದ ಮಾತನಾಡಿದವನು ಯೆಹೋವನಾದ ನಾನೇ ಎಂಬುದು ನನ್ನ ಕೋಪವನ್ನು ಅವರ ಮೇಲೆ ಹೊಯ್ದುಬಿಟ್ಟ ಬಳಿಕ ಅವರಿಗೆ ಗೊತ್ತಾಗುವುದು.
這樣,我的忿怒纔可以發洩,我的怒火在他們身上纔會平息,得到了報復;當我的憤怒在他們身上發洩時,他們要承認我,上主,在妒火中講了話。
14 ೧೪ ಹಾದುಹೋಗುವವರೆಲ್ಲರ ಕಣ್ಣೆದುರಿಗೆ ನಾನು ನಿನ್ನನ್ನು ಹಾಳುಮಾಡಿ, ಸುತ್ತಲಿನ ಜನಾಂಗಗಳ ನಿಂದೆಗೆ ಗುರಿ ಮಾಡುವೆನು.
我要使你成為荒野,使你在環繞你的異民前,和所有的過客前,成為辱罵的對象。
15 ೧೫ “ನಾನು ಕೋಪದಿಂದಲೂ, ರೋಷದಿಂದಲೂ, ಕಠಿಣವಾದ ಖಂಡನೆಯಿಂದಲೂ, ನಿನಗೆ ಮಾಡುವ ದಂಡನೆಗಳು ಸುತ್ತಲಿನ ಜನಾಂಗಗಳ ದೂಷಣೆಗೂ, ಪರಿಹಾಸ್ಯಗಳಿಗೂ, ಬುದ್ಧಿವಾದಗಳಿಗೂ ಆಸ್ಪದವಾಗುವವು; ಇದು ಯೆಹೋವನಾದ ನನ್ನ ನುಡಿ.
當我大發憤怒,以嚴厲的懲罰在你身上施行裁判時,你就成為環繞你的異民凌辱、恥笑、警戒和警駭的對象:這是我上主說的。
16 ೧೬ ಆಗ ನಾನು ನಿನ್ನನ್ನು ಹಾಳುಮಾಡಲಿಕ್ಕೆ ಕ್ಷಾಮವೆಂಬ ನಾಶಕರವಾದ ತೀಕ್ಷ್ಣ ಬಾಣಗಳನ್ನು ನಿನ್ನ ಮೇಲೆ ಬಿಡುವೆನು; ನಿನ್ನನ್ನು ಬರದಿಂದ ಬಹಳವಾಗಿ ಬಾಧಿಸಿ ನಿನ್ನ ಆಹಾರ ಸರಬರಾಜನ್ನು ನಿಲ್ಲಿಸುವೆನು.
當我向你們射出饑荒的毒箭──射出毀滅的箭,毀滅你們時──我必使饑荒在你們境內更加嚴重,斷絕你們的糧源。
17 ೧೭ ನಾನು ಕಳುಹಿಸುವ ಕ್ಷಾಮದಿಂದಲೂ, ದುಷ್ಟಮೃಗಗಳಿಂದಲೂ ನಿನಗೆ ಪುತ್ರಶೋಕವು ಉಂಟಾಗುವುದು; ವ್ಯಾಧಿಯೂ, ರಕ್ತ ಪ್ರವಾಹವೂ ನಿನ್ನಲ್ಲಿ ವ್ಯಾಪಿಸುವವು; ನಿನ್ನನ್ನು ಖಡ್ಗಕ್ಕೆ ತುತ್ತು ಮಾಡುವೆನು” ಇದು ಯೆಹೋವನಾದ ನನ್ನ ನುಡಿ.
我必使饑荒和猛獸危害你們,掠去你們的子女,並使瘟疫和血案在你境內盛行,還有刀兵來打擊你:這是我上主說的。」