< ಯೆಹೆಜ್ಕೇಲನು 6 >
1 ೧ ಯೆಹೋವನು ಈ ಮಾತನ್ನು ನನಗೆ ದಯಪಾಲಿಸಿದನು,
Minulle tuli tämä Herran sana:
2 ೨ “ನರಪುತ್ರನೇ, ಇಸ್ರಾಯೇಲಿನ ಬೆಟ್ಟಗಳಿಗೆ ಅಭಿಮುಖನಾಗಿ ನಿಂತು, ಅವುಗಳನ್ನು ಕುರಿತು ಪ್ರವಾದಿಸು.
"Ihmislapsi, käännä kasvosi Israelin vuoria kohti ja ennusta niitä vastaan
3 ೩ ‘ಇಸ್ರಾಯೇಲಿನ ಬೆಟ್ಟಗಳೇ, ಕರ್ತನಾದ ಯೆಹೋವನ ಈ ಮಾತನ್ನು ಕೇಳಿರಿ; ಕರ್ತನಾದ ಯೆಹೋವನು ಬೆಟ್ಟಗುಡ್ಡಗಳಿಗೂ, ತೊರೆತಗ್ಗುಗಳಿಗೂ ಹೀಗೆ ಹೇಳುತ್ತಾನೆ: ಇಗೋ, ನಾನೇ ನಿಮ್ಮ ಮೇಲೆ ಖಡ್ಗವನ್ನು ಬರಮಾಡಿ ನಿಮ್ಮ ಪೂಜಾಸ್ಥಳಗಳನ್ನು ನಾಶಪಡಿಸುವೆನು.
ja sano: Israelin vuoret, kuulkaa Herran, Herran sana. Näin sanoo Herra, Herra vuorille ja kukkuloille, puronotkoille ja laaksoille: Katso, minä annan miekan tulla teidän ylitsenne ja hävitän teidän uhrikukkulanne.
4 ೪ “‘ನಿಮ್ಮ ಯಜ್ಞವೇದಿಗಳು ಹಾಳಾಗುವವು, ನಿಮ್ಮ ಸೂರ್ಯಸ್ತಂಭಗಳು ಒಡೆಯಲ್ಪಡುವವು, ನಿಮ್ಮವರು ನಿಮ್ಮ ವಿಗ್ರಹಗಳ ಮುಂದೆ ಹತರಾಗಿ ಬೀಳುವಂತೆ ಮಾಡುವೆನು.
Teidän alttarinne jäävät autioiksi, auringonpatsaanne murskataan, ja teidän surmattujenne minä annan kaatua teidän kivijumalainne eteen.
5 ೫ ನಾನು ಇಸ್ರಾಯೇಲರ ಶವಗಳನ್ನು ಅವರ ವಿಗ್ರಹಗಳ ಮುಂದೆ ಬಿಸಾಡಿ ನಿಮ್ಮ ಯಜ್ಞವೇದಿಗಳ ಸುತ್ತಲೂ ನಿಮ್ಮ ಎಲುಬುಗಳನ್ನು ಬಿಸಾಡಿಬಿಡುವೆನು.
Minä panen israelilaisten ruumiit heidän kivijumalainsa eteen ja hajotan heidän luunsa heidän alttariensa ympärille.
6 ೬ “‘ನೀವು ವಾಸಿಸುವ ದೇಶದಲ್ಲೆಲ್ಲಾ ಊರುಗಳು ಹಾಳಾಗುವುದರಿಂದಲೂ, ಪೂಜಾ ಸ್ಥಳಗಳು ಪಾಳುಬೀಳುವುದರಿಂದಲೂ ನಿಮ್ಮ ಯಜ್ಞವೇದಿಗಳು ಹಾಳಾಗುವವು; ನಿಮ್ಮ ವಿಗ್ರಹಗಳು ಒಡೆಯಲ್ಪಟ್ಟು ಇಲ್ಲವಾಗುವವು, ನಿಮ್ಮ ಸೂರ್ಯಸ್ತಂಭಗಳು ಕಡಿಯಲ್ಪಡುವುವು.
Kaikilla teidän asuinpaikoillanne tulevat kaupungit raunioiksi ja uhrikukkulat autioiksi; niin jäävät teidän alttarinne raunioiksi ja autioiksi, teidän kivijumalanne murskataan ja hävitetään, teidän auringonpatsaanne särjetään, ja teidän tekeleenne pyyhkäistään pois,
7 ೭ ನೀವು ರೂಪಿಸಿದ ವಿಗ್ರಹಗಳು ಅಳಿದುಹೋಗುವುವು; ಹತರಾದವರು ನಿಮ್ಮ ಮಧ್ಯದಲ್ಲಿ ಬೀಳುವರು; ಆಗ ನಾನೇ ಯೆಹೋವನು ಎಂದು ನಿಮಗೆ ಗೊತ್ತಾಗುವುದು.
surmattuja kaatuu teidän keskellänne, ja te tulette tietämään, että minä olen Herra.
8 ೮ “‘ಆದರೂ ನಾನು ಜನಶೇಷವನ್ನು ಉಳಿಸುವೆನು; ಹೇಗೆಂದರೆ ನೀವು ಅನ್ಯದೇಶಗಳಿಗೆ ಚದರಿಹೋಗುವಾಗ ನಿಮ್ಮಲ್ಲಿ ಕೆಲವರು ಆ ಜನಾಂಗಗಳ ಮಧ್ಯೆ ಕತ್ತಿಗೆ ತಪ್ಪಿಸಿಕೊಳ್ಳುವರು.
Mutta minä jätän jäännöksen: teillä on oleva miekasta pelastuneita pakanain seassa, kun teidät on hajotettu niiden maihin;
9 ೯ ಹೀಗೆ ತಪ್ಪಿಸಿಕೊಂಡು ಸೆರೆಗೆ ಒಯ್ಯಲ್ಪಟ್ಟು ಜನಾಂಗಗಳ ಮಧ್ಯೆ ವಾಸಿಸುವ ನಿಮ್ಮವರು ನನ್ನನ್ನು ಸ್ಮರಿಸಿಕೊಳ್ಳುವರು. ನಿಮ್ಮವರು ಅನ್ಯದೇವತೆಗಳಲ್ಲಿನ ಮೋಹದಿಂದ ನನ್ನನ್ನು ತೊರೆದು ತಮ್ಮ ಹೃದಯವನ್ನೂ, ತಮ್ಮ ವಿಗ್ರಹಗಳ ಮೇಲಣ ಕಾಮದಿಂದ ದೇವದ್ರೋಹಮಾಡಿದ ತಮ್ಮ ಕಣ್ಣುಗಳನ್ನೂ ಭಂಗಪಡಿಸಿದವನು ನಾನೇ ಎಂಬುದಾಗಿ ನನ್ನನ್ನು ಜ್ಞಾಪಕಮಾಡಿಕೊಂಡು, ತಾವು ಬಹಳ ಅಸಹ್ಯಕಾರ್ಯಗಳನ್ನು ನಡೆಸಿ ಕೆಟ್ಟತನವನ್ನು ಮಾಡಿದ್ದೇವೆಂದು ತಮ್ಮ ಬಗ್ಗೆ ತಾವೇ ಅಸಹ್ಯಪಡುವರು.
ja ne teistä, jotka pelastuvat, muistavat minut pakanain seassa, mihin ovat vangeiksi viedyt, sillä minä särjen heidän haureellisen sydämensä, joka poikkesi minusta pois, ja heidän silmänsä, jotka haureellisina kulkivat heidän kivijumalainsa jäljessä. Ja heitä kyllästyttää oma itsensä pahain töitten tähden, joita he ovat tehneet, kaikkien heidän kauhistustensa tähden.
10 ೧೦ ನಾನೇ ಯೆಹೋವನು ಎಂದು ಅವರಿಗೆ ಗೊತ್ತಾಗುವುದು; ಈ ಕೇಡನ್ನು ಅವರಿಗೆ ಮಾಡುವೆನು ಎಂದು ನಾನು ಹೇಳಿದ್ದು ಬರೀ ಮಾತಲ್ಲ.’”
Ja he tulevat tietämään, että minä olen Herra; en ole turhaan puhunut, että minä tuotan teille tämän onnettomuuden.
11 ೧೧ ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನೀನು ಚಪ್ಪಾಳೆಹೊಡೆದು ನೆಲವನ್ನು ಒದ್ದು ಹೀಗೆ ಹೇಳು, ‘ಆಹಾ, ಇಸ್ರಾಯೇಲ್ ವಂಶದವರ ಅಸಹ್ಯವಾದ ಕೆಟ್ಟಕೆಲಸಗಳೆಷ್ಟು! ಅವರು ಖಡ್ಗ, ಕ್ಷಾಮ, ವ್ಯಾಧಿಗಳಿಂದ ಸತ್ತೇ ಸಾಯುವರು.
Näin sanoo Herra, Herra: Paukuta käsiäsi ja polje jalkaasi ja sano: 'voi!' kaikista Israelin heimon häijyistä kauhistuksista, heidän, jotka kaatuvat miekkaan, nälkään ja ruttoon.
12 ೧೨ ದೂರದಲ್ಲಿರುವವನು ವ್ಯಾಧಿಯಿಂದ ಸಾಯುವನು, ಹತ್ತಿರದಲ್ಲಿರುವವನು ಖಡ್ಗದಿಂದ ಸಾಯುವನು, ತಪ್ಪಿಸಿಕೊಂಡು ಉಳಿದವನು ಕ್ಷಾಮದಿಂದ ಸಾಯುವನು; ಅಂತು ನಾನು ಅವರ ಮೇಲೆ ಇಟ್ಟಿರುವ ರೋಷವನ್ನು ತೀರಿಸಿಬಿಡುವೆನು.
Kaukainen kuolee ruttoon, läheinen kaatuu miekkaan, jäljellejäänyt ja säilynyt kuolee nälkään, ja minä panen vihani täytäntöön heissä.
13 ೧೩ ಆ ವಂಶದವರು ಎತ್ತರವಾದ ಎಲ್ಲಾ ಗುಡ್ಡಗಳ ಮೇಲೂ, ಎಲ್ಲಾ ಬೆಟ್ಟಗಳ ತುದಿಗಳಲ್ಲಿಯೂ, ಸೊಂಪಾದ ಎಲ್ಲಾ ಮರಗಳ ಕೆಳಗೂ ತಮ್ಮ ಸಮಸ್ತ ವಿಗ್ರಹಗಳಿಗೆ ಸುಗಂಧಹೋಮ ಮಾಡುತ್ತಿದ್ದ ದಟ್ಟವಾದ ಎಲ್ಲಾ ಏಲಾ ಮರಗಳ ಕೆಳಗೂ ಹತರಾಗಿ ತಮ್ಮ ಯಜ್ಞವೇದಿಗಳ ಸುತ್ತಲೂ ತಮ್ಮ ವಿಗ್ರಹಗಳ ನಡುವೆ ಬಿದ್ದಿರುವಾಗ ನಾನೇ ಯೆಹೋವನು ಎಂದು ಗೊತ್ತಾಗುವುದು.
Ja te tulette tietämään, että minä olen Herra, kun heitä on surmattuina heidän kivijumalainsa keskellä, heidän alttariensa ympärillä, jokaisella korkealla kukkulalla, kaikilla vuorten huipuilla, jokaisen viheriän puun alla ja jokaisen tuuhean tammen alla, missä paikassa vain he ovat tarinneet suloista tuoksua kaikille kivijumalillensa.
14 ೧೪ ನಾನು ಅವರ ಮೇಲೆ ಕೈಯೆತ್ತಿ ಅವರು ವಾಸವಾಗಿರುವ ದೇಶವನ್ನೆಲ್ಲಾ ಅರಣ್ಯದಿಂದ ದಿಬ್ಲದವರೆಗೂ ಹಾಳುಪಾಳುಮಾಡುವೆನು; ನಾನೇ ಯೆಹೋವನು ಎಂದು ಅವರಿಗೆ ಗೊತ್ತಾಗುವುದು.’”
Ja minä ojennan käteni heitä vastaan ja teen maan autiommaksi ja hävitetymmäksi, kuin on Diblatan erämaa, kaikilla heidän asuinpaikoillansa; ja he tulevat tietämään, että minä olen Herra."