< ಯೆಹೆಜ್ಕೇಲನು 7 >
1 ೧ ಇದಲ್ಲದೆ ಯೆಹೋವನು ಈ ಮಾತನ್ನು ನನಗೆ ದಯಪಾಲಿಸಿದನು,
Moreover the word of the Lord came to me, saying, Also, you, son of man, say,
2 ೨ “ನರಪುತ್ರನೇ, ಕರ್ತನಾದ ಯೆಹೋವನು ಇಸ್ರಾಯೇಲ್ ದೇಶಕ್ಕೆ ಹೀಗೆ ನುಡಿಯುತ್ತಾನೆ, ‘ಪ್ರಳಯವು, ಪೂರ್ಣ ಪ್ರಳಯವು ದೇಶದ ಚತುರ್ದಿಕ್ಕಿನಲ್ಲಿಯೂ ಸಂಭವಿಸಿದೆ.’
Thus says the Lord; An end is come to the land of Israel, the end is come on the four corners of the land.
3 ೩ ಈಗಲೇ ನಿನಗೆ ಅಂತ್ಯವು ಬಂದಿದೆ; ನಾನು ನನ್ನ ಕೋಪವನ್ನು ನಿನ್ನ ಮೇಲೆ ಬರಮಾಡಿ, ನಿನ್ನ ನಡತೆಗೆ ತಕ್ಕಂತೆ ನ್ಯಾಯತೀರಿಸಿ ನಿನ್ನ ಸಮಸ್ತ ಅಸಹ್ಯಕಾರ್ಯಗಳ ಫಲವನ್ನು ನಿನಗೆ ತಿನ್ನಿಸುವೆನು.
The end is come on you,
4 ೪ ನಿನ್ನನ್ನು ಕಟಾಕ್ಷಿಸುವುದಿಲ್ಲ, ಉಳಿಸುವುದಿಲ್ಲ; ನಿನ್ನ ದುರ್ಮಾರ್ಗದ ಫಲವನ್ನು ನಿನಗೆ ತಿನ್ನಿಸುವೆನು; ನಿನ್ನ ಅಸಹ್ಯಕಾರ್ಯಗಳು ನಿನ್ನ ಅನುಭವಕ್ಕೆ ಬರುವವು; ಆಗ ನಾನೇ ಯೆಹೋವನು ಎಂದು ನಿನಗೆ ಗೊತ್ತಾಗುವುದು.”
the inhabitant of the land: the time is come, the day has drawn near, not with tumult, nor with pangs.
5 ೫ ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಕೇಡು, ಎಂದೂ ಕಾಣದ ಕೇಡು, ಇಗೋ ಬಂದಿತು!
Now I will pour out my anger upon you near at hand, and I will accomplish my wrath on you: and I will judge you for your ways, and recompense upon you all your abominations.
6 ೬ ಅಂತ್ಯವು ಬಂತು, ಅಂತ್ಯವು ಬಂದುಬಿಟ್ಟಿತು, ನಿನ್ನನ್ನು ಚಚ್ಚುವುದಕ್ಕೆ ಎಚ್ಚರಗೊಂಡಿದೆ, ಇಗೋ, ಬಂದೇ ಬಂತು!
Mine eye shall not spare, nor will I have any mercy: for I will recompense your ways upon you, and your abominations shall be in the midst of you; and you shall know that I am the Lord that strike [you].
7 ೭ ದೇಶ ನಿವಾಸಿಯೇ, ನಿನ್ನ ಗತಿ ಮುಗಿಯಿತು. ಸಮಯ ಬಂದಿತು, ದಿನ ಸಮೀಪಿಸಿತು; ಬೆಟ್ಟಗಳ ಮೇಲೆ ಕೇಳಿಸುವ ಧ್ವನಿಯು ಉತ್ಸಾಹ ಧ್ವನಿಯಲ್ಲ, ಅದು ಕಳವಳವೇ.
Now the end [is come] to you, and I will send [judgement] upon you: and I will take vengeance on your ways, and will recompense all your abominations upon you.
8 ೮ ಇನ್ನು ಸ್ವಲ್ಪ ಕಾಲದೊಳಗೆ ನಾನು ನಿನ್ನ ಮೇಲೆ ನನ್ನ ರೋಷಾಗ್ನಿಯನ್ನು ಸುರಿದು, ನನ್ನ ಕೋಪವನ್ನು ತೀರಿಸಿಕೊಂಡು, ನಿನ್ನ ನಡತೆಗೆ ತಕ್ಕ ದಂಡನೆಯನ್ನು ವಿಧಿಸಿ, ನಿನ್ನ ಅಸಹ್ಯಕಾರ್ಯಗಳ ಫಲವನ್ನೆಲ್ಲಾ ನಿನಗೆ ತಿನ್ನಿಸುವೆನು.
Mine eye shall not spare, nor will I have any mercy: for I will recompense your way upon you, and your abominations shall be in the midst of you; and you shall know that I am the Lord.
9 ೯ ನಿನ್ನನ್ನು ಕಟಾಕ್ಷಿಸುವುದಿಲ್ಲ, ಉಳಿಸುವುದಿಲ್ಲ, ನಿನ್ನ ದುರ್ಮಾರ್ಗಗಳಿಗೆ ತಕ್ಕ ಗತಿಯನ್ನು ಬರಮಾಡುವೆನು, ಆಗ ನಿನ್ನ ಅಸಹ್ಯಕಾರ್ಯಗಳು ನಿನ್ನ ಅನುಭವಕ್ಕೆ ಬರುವವು; ಯೆಹೋವನಾದ ನಾನು ದಂಡಿಸುವವನು ಎಂಬುದು ನಿನಗೆ ಗೊತ್ತಾಗುವುದು.
For thus says the Lord; Behold, the end is come.
10 ೧೦ “ಆಹಾ, ದಂಡನೆಯ ದಿನವು, ಇಗೋ ಬಂತು! ನಿನಗೆ ದುರ್ಗತಿಯು ಅಂಕುರಿಸಿದೆ, ಕೋಲು ಹೂಬಿಟ್ಟಿದೆ, ಹೆಮ್ಮೆಯು ಚಿಗುರಿದೆ.
Behold, the day of the Lord! although the rod has blossomed,
11 ೧೧ ಹಿಂಸೆಯು ಬೆಳೆದು ಕೆಡುಕಿನ ಕೋಲಾಗಿದೆ; ನಿನ್ನವರಲ್ಲಿ ಯಾರೂ ಉಳಿಯುವುದಿಲ್ಲ, ಆ ಜನಸಮೂಹದಲ್ಲಿಯೂ, ಅವರ ಆಸ್ತಿಯಲ್ಲಿಯೂ ಏನೂ ಉಳಿಯುವುದಿಲ್ಲ, ಅವರಲ್ಲಿ ಯಾವ ಶ್ರೇಷ್ಠತೆಯೂ ನಿಲ್ಲುವುದಿಲ್ಲ.
pride has sprung up, and will break the staff of the wicked one, and [that] not with tumult, nor with haste.
12 ೧೨ ಸಮಯ ಬಂದಿದೆ, ದಿನ ಸಮೀಪಿಸಿತು; ಕೊಂಡುಕೊಳ್ಳುವವನು ಹರ್ಷಿಸದಿರಲಿ, ಮಾರುವವನು ದುಃಖಿಸದಿರಲಿ; ರೋಷಾಗ್ನಿಯು ಆ ಸಮೂಹದವರೆಲ್ಲರ ಮೇಲೆ ಹತ್ತಿದೆ.
The time is come, behold the day: let not the buyer rejoice, and let not the seller mourn.
13 ೧೩ ಮಾರಿದವನು ಎಷ್ಟು ವರ್ಷ ಬದುಕಿದರೂ ಮಾರಿದ ಸೊತ್ತು ಅವನ ವಶಕ್ಕೆ ತಿರುಗಿಬಾರದು; ಉಂಟಾದ ದಿವ್ಯದರ್ಶನವು ಸಮೂಹದವರಿಗೆಲ್ಲಾ ಸಂಬಂಧಿಸಿದೆ, ಯಾರೂ ಹಿಂದಿರುಗುವುದಿಲ್ಲ. ಯಾರೂ ತಮ್ಮ ಅಧರ್ಮದಿಂದ ತಮ್ಮ ಜೀವವನ್ನು ಉಳಿಸಿಕೊಳ್ಳುವುದಿಲ್ಲ.
For the buyer shall never again return to the seller, neither shall a man cleave with the eye [of hope] to his life.
14 ೧೪ ಅವರು ಕೊಂಬನ್ನೂದಿ ಎಲ್ಲವನ್ನೂ ಸಿದ್ಧ ಮಾಡಿದರೂ ಯಾರೂ ಯುದ್ಧಕ್ಕೆ ಹೊರಡುವುದಿಲ್ಲ; ನನ್ನ ರೋಷಾಗ್ನಿಯು ಆ ಸಮೂಹದವರೆಲ್ಲರ ಮೇಲೆ ಹತ್ತಿದೆ.
Sound you the trumpet, and pass sentence on all together.
15 ೧೫ ಊರ ಹೊರಗೆ ಖಡ್ಗ, ಊರೊಳಗೆ ವ್ಯಾಧಿ ಮತ್ತು ಕ್ಷಾಮಗಳು; ಹೊರಗಿರುವವರು ಖಡ್ಗದಿಂದ ಸಾಯುವರು, ಒಳಗಿರುವವರು ವ್ಯಾಧಿ ಕ್ಷಾಮಗಳಿಗೆ ತುತ್ತಾಗುವರು.
[There shall be] war with the sword without, and famine and pestilence within: he that is in the field shall die by the sword; and famine and pestilence shall destroy them that are in the city.
16 ೧೬ ಅವರಲ್ಲಿ ಪಲಾಯನ ಮಾಡಿದವರು ತಪ್ಪಿಸಿಕೊಂಡು, ತಮ್ಮ ಅಧರ್ಮದಲ್ಲಿಯೇ ಇದ್ದು, ಡೊಂಗರಗಳಲ್ಲಿನ ಪಾರಿವಾಳಗಳಂತೆ ಬೆಟ್ಟಗಳ ಮೇಲೆ ಗೋಳಾಡುತ್ತಿರುವರು.
But they that escape of them shall be delivered, and shall be upon the mountains: and I will kill all [the rest], every one for his iniquities.
17 ೧೭ ಎಲ್ಲರ ಕೈಗಳು ಜೋಲುಬಿದ್ದಿರುವುವು, ಎಲ್ಲರ ಮೊಣಕಾಲುಗಳು ನೀರಿನಂತೆ ಅದರುವುವು.
All hands shall be completely weakened, and all thighs shall be defiled with moisture.
18 ೧೮ ಅವರು ಗೋಣಿತಟ್ಟನ್ನು ಸುತ್ತಿಕೊಳ್ಳುವರು, ದಿಗಿಲು ಅವರನ್ನು ಮುಚ್ಚಿಬಿಡುವುದು; ಎಲ್ಲರ ಮುಖದಲ್ಲಿಯೂ ನಾಚಿಕೆ ಕಾಣುವುದು, ಎಲ್ಲರೂ ತಲೆ ಬೋಳಿಸಿಕೊಂಡು ಇರುವರು.
And they shall gird themselves with sackcloth, and amazement shall cover them; and shame shall be upon them, [even] upon every face, and baldness upon every head.
19 ೧೯ ಅವರು ತಮ್ಮ ಬೆಳ್ಳಿಯನ್ನು ಬೀದಿಗಳಲ್ಲಿ ಬಿಸಾಡುವರು, ಅವರ ಬಂಗಾರವು ಅಶುದ್ಧ ಪದಾರ್ಥದಂತಿರುವುದು; ಯೆಹೋವನು ತನ್ನ ರೋಷವನ್ನು ತೀರಿಸುವ ದಿನದಲ್ಲಿ ಅವರ ಬೆಳ್ಳಿಬಂಗಾರವು ಅವರನ್ನು ರಕ್ಷಿಸಲಾರದು; ಅವರ ಇಷ್ಟಾರ್ಥ ನೆರವೇರುವುದಿಲ್ಲ, ಅವರ ಹೊಟ್ಟೆ ತುಂಬುವುದಿಲ್ಲ; ಏಕೆಂದರೆ ಅವರ ಆಸ್ತಿಯು ಅವರಿಗೆ ಪಾಪಕಾರಿ ವಿಘ್ನವಾಗಿದೆ.
Their silver shall be cast forth in the streets, and their gold shall be despised: their souls shall not be satisfied, and their bellies shall not be filled: for it was the punishment of their iniquities.
20 ೨೦ ಅವರ ಆಭರಣಗಳ ಚಂದವು ಅವರ ಗರ್ವಕ್ಕೆ ಆಸ್ಪದವಾಯಿತು; ಇದಲ್ಲದೆ ಹೇಯವೂ, ಅಸಹ್ಯವೂ ಆದ ತಮ್ಮ ದೇವತೆಗಳ ಪ್ರತಿಮೆಗಳನ್ನು ಬೆಳ್ಳಿಬಂಗಾರದಿಂದ ರೂಪಿಸುತ್ತಿದ್ದರು; ಆದಕಾರಣ ಅದನ್ನು ಅವರಿಗೆ ಅಶುದ್ಧ ಪದಾರ್ಥವನ್ನಾಗಿ ಮಾಡಿದೆನು.
[As for] their choice ornaments, they employed them for pride, and they made of them images of their abominations: therefore have I made them uncleanness to them.
21 ೨೧ ಅನ್ಯರ ಕೈಯಿಂದ ಕೊಳ್ಳೆಹೊಡೆಯಿಸಿ ಲೋಕದ ಅತಿ ದುಷ್ಟರಿಂದ ಸೂರೆಮಾಡಿಸುವೆನು; ಅವರು ಅದನ್ನು ಹೊಲೆಗೊಳಿಸುವರು.
And I will deliver them into the hands of strangers to make them a prey, and to the pests of the earth for a spoil; and they shall profane them.
22 ೨೨ ನಾನು ಅವರ ಕಡೆಯಿಂದ ನನ್ನ ಮುಖವನ್ನು ತಿರುಗಿಸಲು, ನನ್ನ ಪ್ರಿಯ ಮಂದಿರವನ್ನು ಹೊಲೆಗೆಡಿಸುವರು; ಕಳ್ಳರು ಅದರಲ್ಲಿ ನುಗ್ಗಿ ಅದನ್ನು ಹೊಲಸುಮಾಡುವರು.
And I will turn away my face from them, and they shall defile my charge, and shall go in to them unguardedly, and profane them.
23 ೨೩ ಒಂದು ಸರಪಣಿಯನ್ನು ಮಾಡು; ಏಕೆಂದರೆ ದೇಶವು ನರಹತ್ಯಭರಿತವಾಗಿದೆ, ಪಟ್ಟಣವು ಹಿಂಸೆಯಿಂದ ತುಂಬಿಹೋಗಿದೆ.
And they shall work uncleanness: because the land is full of strange nations, and the city is full of iniquity.
24 ೨೪ ಹೀಗಿರಲು ನಾನು ಅತಿ ದುಷ್ಟ ಜನಾಂಗಗಳನ್ನು ಬರಮಾಡುವೆನು, ಅವು ನನ್ನ ಜನರ ಮನೆಗಳನ್ನು ವಶಮಾಡಿಕೊಳ್ಳುವುದು; ನಾನು ಬಲಿಷ್ಠರ ಸೊಕ್ಕನ್ನು ಅಡಗಿಸುವೆನು, ಅವರ ಪವಿತ್ರ ಸ್ಥಾನಗಳು ಹೊಲೆಗೆಡುವವು.
And I will turn back the boasting of their strength; and their holy things shall be defiled.
25 ೨೫ ಸಂಕಟ ಸಂಭವಿಸುವುದು; ಅವರು ಸಮಾಧಾನವನ್ನು ಹುಡುಕಿದರೂ ಸ್ವಲ್ಪವೂ ಸಿಕ್ಕುವುದಿಲ್ಲ.
And [though] propitiation shall come, and [one] shall seek peace, yet there shall be none.
26 ೨೬ ಕೇಡಿನ ಮೇಲೆ ಕೇಡು, ಸುದ್ದಿಯ ಮೇಲೆ ಸುದ್ದಿ ಬರುವುದು; ‘ದಿವ್ಯದರ್ಶನವಾಯಿತೇ?’ ಎಂದು ಪ್ರವಾದಿಯನ್ನು ಕೇಳುತ್ತಲೇ ಇರುವರು; ಯಾಜಕರಲ್ಲಿ ಧರ್ಮೋಪದೇಶವು ಅಡಗಿಹೋಗುವುದು, ಹಿರಿಯರಲ್ಲಿ ಸಲಹೆ, ಸಮಾಲೋಚನೆಯು ಇಲ್ಲವಾಗುವುದು.
There shall be woe upon woe, and there shall be message upon message; and a vision shall be sought from a prophet; but the law shall perish from the priest, and counsel from the elders.
27 ೨೭ ಅರಸನು ದುಃಖಿಸುವನು, ಭಯವು ಪ್ರಭುವನ್ನು ಮುಸುಕುವುದು, ಸಾಧಾರಣಜನರ ಕೈಗಳು ತತ್ತರಿಸುವವು; ನಾನು ಅವರ ದುರ್ನಡತೆಗೆ ತಕ್ಕ ಪ್ರತಿಕಾರವನ್ನು ಮಾಡಿ, ಅವರ ದುಷ್ಟ ಕಾರ್ಯಗಳಿಗೆ ಸರಿಯಾಗಿ ದಂಡನೆಯನ್ನು ವಿಧಿಸುವೆನು; ಆಗ ನಾನೇ ಯೆಹೋವನು ಎಂದು ಅವರಿಗೆ ಗೊತ್ತಾಗುವುದು.”
The prince shall clothe himself with desolation, and the hands of the people of the land shall be made feeble: I will do to them according to their ways, and according to their judgements will I punish them; and they shall know that I am the Lord.