< ಯೆಹೆಜ್ಕೇಲನು 1 >

1 ಕೆಬಾರ್ ನದಿಯ ಹತ್ತಿರ ಸೆರೆಯಾಗಿ ವಾಸಿಸುತ್ತಿದ್ದ ಯೆಹೂದ್ಯರ ಮಧ್ಯದಲ್ಲಿ ನಾನು ವಾಸಿಸುತ್ತಿದ್ದಾಗ, ಮೂವತ್ತನೆಯ ವರ್ಷದ, ನಾಲ್ಕನೆಯ ತಿಂಗಳಿನ ಐದನೆಯ ದಿನದಲ್ಲಿ ಆಕಾಶವು ತೆರೆಯಲ್ಪಟ್ಟಿತು, ನಾನು ದೇವ ದರ್ಶನಗಳನ್ನು ಕಂಡೆನು.
וַיְהִ֣י ׀ בִּשְׁלֹשִׁ֣ים שָׁנָ֗ה בָּֽרְבִיעִי֙ בַּחֲמִשָּׁ֣ה לַחֹ֔דֶשׁ וַאֲנִ֥י בְתֽוֹךְ־הַגּוֹלָ֖ה עַל־נְהַר־כְּבָ֑ר נִפְתְּחוּ֙ הַשָּׁמַ֔יִם וָאֶרְאֶ֖ה מַרְא֥וֹת אֱלֹהִֽים׃
2 ಅರಸನಾದ ಯೆಹೋಯಾಖೀನನು ಸೆರೆಯಾದ ಐದನೆಯ ವರ್ಷದ ನಾಲ್ಕನೆಯ ತಿಂಗಳಿನ ಐದನೆಯ ದಿನದಲ್ಲಿ,
בַּחֲמִשָּׁ֖ה לַחֹ֑דֶשׁ הִ֚יא הַשָּׁנָ֣ה הַחֲמִישִׁ֔ית לְגָל֖וּת הַמֶּ֥לֶךְ יוֹיָכִֽין׃
3 ಯೆಹೋವನ ವಾಕ್ಯವು ಕಸ್ದೀಯ ದೇಶದೊಳಗೆ ಕೆಬಾರ್ ನದಿಯ ಹತ್ತಿರ ಬೂಜಿಯ ಮಗನೂ, ಯಾಜಕನೂ ಆದ ಯೆಹೆಜ್ಕೇಲನಿಗೆ ಸ್ಪಷ್ಟವಾಗಿ ಕೇಳಿಸಿತು; ಅಲ್ಲಿ ಯೆಹೋವನ ಹಸ್ತಸ್ಪರ್ಶದಿಂದ ಅವನು ಪರವಶನಾದನು.
הָיֹ֣ה הָיָ֣ה דְבַר־יְ֠הוָה אֶל־יְחֶזְקֵ֨אל בֶּן־בּוּזִ֧י הַכֹּהֵ֛ן בְּאֶ֥רֶץ כַּשְׂדִּ֖ים עַל־נְהַר־כְּבָ֑ר וַתְּהִ֥י עָלָ֛יו שָׁ֖ם יַד־יְהוָֽה׃
4 ಆಗ ನಾನು ನೋಡಲಾಗಿ; ಇಗೋ, ಉತ್ತರ ದಿಕ್ಕಿನಿಂದ ಬಿರುಗಾಳಿಯು ಬೀಸಿತು, ಎಡೆಬಿಡದೆ ಝಗಝಗಿಸುವ ಜ್ವಾಲೆಯುಳ್ಳ ಮಹಾಮೇಘವು ಕಾಣಿಸಿತು. ಅದರ ಸುತ್ತಲೂ ಮಿಂಚು ಹೊಳೆಯಿತು, ಅದರ ನಡುವೆ, ಆ ಜ್ವಾಲೆಯ ಮಧ್ಯೆ, ಸುವರ್ಣದಂಥ ಕಾಂತಿಯು ಉಂಟಾಯಿತು.
וָאֵ֡רֶא וְהִנֵּה֩ ר֨וּחַ סְעָרָ֜ה בָּאָ֣ה מִן־הַצָּפ֗וֹן עָנָ֤ן גָּדוֹל֙ וְאֵ֣שׁ מִתְלַקַּ֔חַת וְנֹ֥גַֽהּ ל֖וֹ סָבִ֑יב וּמִ֨תּוֹכָ֔הּ כְּעֵ֥ין הַחַשְׁמַ֖ל מִתּ֥וֹךְ הָאֵֽשׁ׃
5 ಅದರ ಮಧ್ಯದೊಳಗಿಂದ ನಾಲ್ಕು ಜೀವಿಗಳ ಆಕಾರಗಳು ಕಂಡುಬಂದವು; ಅವುಗಳ ರೂಪವು ಮನುಷ್ಯನ ರೂಪದಂತಿತ್ತು.
וּמִ֨תּוֹכָ֔הּ דְּמ֖וּת אַרְבַּ֣ע חַיּ֑וֹת וְזֶה֙ מַרְאֵֽיהֶ֔ן דְּמ֥וּת אָדָ֖ם לָהֵֽנָּה׃
6 ಒಂದೊಂದಕ್ಕೆ ನಾಲ್ಕು ನಾಲ್ಕು ಮುಖಗಳೂ ಮತ್ತು ನಾಲ್ಕು ನಾಲ್ಕು ರೆಕ್ಕೆಗಳೂ ಇದ್ದವು.
וְאַרְבָּעָ֥ה פָנִ֖ים לְאֶחָ֑ת וְאַרְבַּ֥ע כְּנָפַ֖יִם לְאַחַ֥ת לָהֶֽם׃
7 ಅವುಗಳ ಕಾಲುಗಳು ನೆಟ್ಟಗಿದ್ದು; ಹೆಜ್ಜೆಗಳು ಕರುವಿನ ಗೊರಸಿನಂತಿದ್ದವು. ಅವುಗಳು ಬೆಳಗಿದ ತಾಮ್ರದ ಹಾಗೆ ಹೊಳೆಯುತ್ತಿದ್ದವು.
וְרַגְלֵיהֶ֖ם רֶ֣גֶל יְשָׁרָ֑ה וְכַ֣ף רַגְלֵיהֶ֗ם כְּכַף֙ רֶ֣גֶל עֵ֔גֶל וְנֹ֣צְצִ֔ים כְּעֵ֖ין נְחֹ֥שֶׁת קָלָֽל׃
8 ಒಂದೊಂದು ಜೀವಿಯ ನಾಲ್ಕು ಪಾರ್ಶ್ವಗಳಲ್ಲಿನ ರೆಕ್ಕೆಗಳ ಕೆಳಗೆ ಮನುಷ್ಯನ ಹಸ್ತದಂಥ ಹಸ್ತಗಳಿದ್ದವು; ಆ ನಾಲ್ಕು ಜೀವಿಗಳ ಮುಖಗಳೂ, ರೆಕ್ಕೆಗಳೂ ಹೇಗಿದ್ದವೆಂದರೆ,
וִידֵ֣י אָדָ֗ם מִתַּ֙חַת֙ כַּנְפֵיהֶ֔ם עַ֖ל אַרְבַּ֣עַת רִבְעֵיהֶ֑ם וּפְנֵיהֶ֥ם וְכַנְפֵיהֶ֖ם לְאַרְבַּעְתָּֽם׃
9 ರೆಕ್ಕೆಗಳು ಒಂದಕ್ಕೊಂದು ತಗಲುತ್ತಿದ್ದವು; ಆ ಜೀವಿಗಳು ಮುಂದೆ ಹೋಗುವಾಗ ತಿರುಗಿಕೊಳ್ಳದೆ ನೇರ ಮುಖವಾಗಿಯೇ ಹೋಗುತ್ತಿದ್ದವು.
חֹֽבְרֹ֛ת אִשָּׁ֥ה אֶל־אֲחוֹתָ֖הּ כַּנְפֵיהֶ֑ם לֹא־יִסַּ֣בּוּ בְלֶכְתָּ֔ן אִ֛ישׁ אֶל־עֵ֥בֶר פָּנָ֖יו יֵלֵֽכוּ׃
10 ೧೦ ಅವುಗಳ ಮುಖಗಳು ಹೀಗಿದ್ದವು: ಒಂದೊಂದರ ಮುಂದಿನ ಮುಖವು ಮನುಷ್ಯನ ಮುಖದಂತಿತ್ತು, ಬಲಗಡೆಯ ಮುಖವು ಸಿಂಹದ ಮುಖದಂತಿತ್ತು, ಎಡಗಡೆಯ ಮುಖವು ಹೋರಿಯ ಮುಖದಂತಿತ್ತು, ಹಿಂದಿನ ಮುಖವು ಗರುಡಪಕ್ಷಿಯ ಮುಖದಂತಿತ್ತು.
וּדְמ֣וּת פְּנֵיהֶם֮ פְּנֵ֣י אָדָם֒ וּפְנֵ֨י אַרְיֵ֤ה אֶל־הַיָּמִין֙ לְאַרְבַּעְתָּ֔ם וּפְנֵי־שׁ֥וֹר מֵֽהַשְּׂמֹ֖אול לְאַרְבַּעְתָּ֑ן וּפְנֵי־נֶ֖שֶׁר לְאַרְבַּעְתָּֽן׃
11 ೧೧ ಅವುಗಳ ರೆಕ್ಕೆಗಳು ಮೇಲಕ್ಕೆ ಚಾಚಲ್ಪಟ್ಟಿದ್ದವು; ರೆಕ್ಕೆಗಳೂ ಮೇಲ್ಗಡೆ ಪ್ರತ್ಯೇಕಪ್ರತ್ಯೇಕವಾಗಿದ್ದವು; ಒಂದೊಂದು ಜೀವಿಯ ಎರಡು ರೆಕ್ಕೆಗಳು ಪಕ್ಕದ ಜೀವಿಗಳ ರೆಕ್ಕೆಗಳಿಗೆ ತಗಲುತ್ತಿದ್ದವು, ಇನ್ನೆರಡು ರೆಕ್ಕೆಗಳು ದೇಹವನ್ನು ಮುಚ್ಚಿಕೊಂಡಿದ್ದವು.
וּפְנֵיהֶ֕ם וְכַנְפֵיהֶ֥ם פְּרֻד֖וֹת מִלְמָ֑עְלָה לְאִ֗ישׁ שְׁ֚תַּיִם חֹבְר֣וֹת אִ֔ישׁ וּשְׁתַּ֣יִם מְכַסּ֔וֹת אֵ֖ת גְּוִיֹתֵיהֶֽנָה׃
12 ೧೨ ಆ ಜೀವಿಗಳೆಲ್ಲಾ ನೇರ ಮುಖವಾಗಿಯೇ ಹೋಗುತ್ತಿದ್ದವು, ದೇವರಾತ್ಮವು ಸಾಗಿಸಿದ ಕಡೆಗೇ ಸಾಗಿದವು; ಹಿಂತಿರುಗಿನೋಡದೆ ಮುಂದೆ ಹೋದವು.
וְאִ֛ישׁ אֶל־עֵ֥בֶר פָּנָ֖יו יֵלֵ֑כוּ אֶ֣ל אֲשֶׁר֩ יִֽהְיֶה־שָׁ֨מָּה הָר֤וּחַ לָלֶ֙כֶת֙ יֵלֵ֔כוּ לֹ֥א יִסַּ֖בּוּ בְּלֶכְתָּֽן׃
13 ೧೩ ಆ ಜೀವಿಗಳ ಮಧ್ಯದಲ್ಲಿ ಅದ್ಭುತಕಾಂತಿಯೊಂದು ಉರಿಯುವ ಕೆಂಡಗಳೋ, ಪಂಜುಗಳೋ ಎಂಬಂತೆ ಕಾಣಿಸಿತು; ಅದು ಜೀವಿಗಳ ನಡುವೆ ಓಲಾಡುತ್ತಿತ್ತು; ಆ ಉರಿಯು ತೇಜೋಮಯವಾಗಿತ್ತು, ಅದರೊಳಗಿಂದ ಮಿಂಚುಗಳು ಹೊರಡುತ್ತಿದ್ದವು.
וּדְמ֨וּת הַחַיּ֜וֹת מַרְאֵיהֶ֣ם כְּגַחֲלֵי־אֵ֗שׁ בֹּֽעֲרוֹת֙ כְּמַרְאֵ֣ה הַלַּפִּדִ֔ים הִ֕יא מִתְהַלֶּ֖כֶת בֵּ֣ין הַחַיּ֑וֹת וְנֹ֣גַהּ לָאֵ֔שׁ וּמִן־הָאֵ֖שׁ יוֹצֵ֥א בָרָֽק׃
14 ೧೪ ಆ ಜೀವಿಗಳು ಮಿಂಚಿನಂತೆ ಮುಂದಕ್ಕೂ, ಹಿಂದಕ್ಕೂ ವೇಗವಾಗಿ ಚಲಿಸುತ್ತಿದ್ದವು.
וְהַחַיּ֖וֹת רָצ֣וֹא וָשׁ֑וֹב כְּמַרְאֵ֖ה הַבָּזָֽק׃
15 ೧೫ ಇಗೋ, ನಾನು ಆ ಜೀವಿಗಳನ್ನು ನೋಡುತ್ತಿರಲಾಗಿ ಒಂದೊಂದು ಕಡೆಯಲ್ಲಿಯೂ ಜೀವಿಗಳ ಪಕ್ಕದಲ್ಲಿ ಭೂಮಿಯ ಮೇಲೆ ಒಂದು ಚಕ್ರವು ಕಾಣಿಸಿತು.
וָאֵ֖רֶא הַחַיּ֑וֹת וְהִנֵּה֩ אוֹפַ֨ן אֶחָ֥ד בָּאָ֛רֶץ אֵ֥צֶל הַחַיּ֖וֹת לְאַרְבַּ֥עַת פָּנָֽיו׃
16 ೧೬ ಆ ಚಕ್ರಗಳ ವರ್ಣವೂ, ರಚನೆಯೂ ಹೇಗಿದ್ದವೆಂದರೆ, ಅವುಗಳ ವರ್ಣವು ಪೀತರತ್ನದ ಹಾಗೆ ಥಳಥಳಿಸುತ್ತಿತ್ತು. ಒಂದು ಚಕ್ರದೊಳಗೆ ಇನ್ನೊಂದು ಚಕ್ರವು ಅಡ್ಡವಾಗಿ ರಚಿಸಿದಂತಿತ್ತು; ಆ ನಾಲ್ಕು ಚಕ್ರಗಳು ಒಂದೇ ಮಾದರಿಯಾಗಿದ್ದವು.
מַרְאֵ֨ה הָאוֹפַנִּ֤ים וּמַעֲשֵׂיהֶם֙ כְּעֵ֣ין תַּרְשִׁ֔ישׁ וּדְמ֥וּת אֶחָ֖ד לְאַרְבַּעְתָּ֑ן וּמַרְאֵיהֶם֙ וּמַ֣עֲשֵׂיהֶ֔ם כַּאֲשֶׁ֛ר יִהְיֶ֥ה הָאוֹפַ֖ן בְּת֥וֹךְ הָאוֹפָֽן׃
17 ೧೭ ಅವು ಚಲಿಸುವಾಗ ನಾಲ್ಕು ಕಡೆಗಳಲ್ಲಿ ಯಾವ ಕಡೆಗಾದರೂ ತಿರುಗುತ್ತಿದ್ದವು; ಓರೆಯಾಗಿ ತಿರುಗುತ್ತಿರಲಿಲ್ಲ.
עַל־אַרְבַּ֥עַת רִבְעֵיהֶ֖ן בְּלֶכְתָּ֣ם יֵלֵ֑כוּ לֹ֥א יִסַּ֖בּוּ בְּלֶכְתָּֽן׃
18 ೧೮ ಗಾಲಿಗಳ ಸುತ್ತಣ ಭಾಗಗಳು ಎತ್ತರವಾಗಿಯೂ, ಭಯಂಕರವಾಗಿಯೂ ಇದ್ದವು; ಈ ಭಾಗಗಳ ಎಲ್ಲಾ ಕಡೆಯಲ್ಲಿಯೂ ತುಂಬಾ ಕಣ್ಣುಗಳಿದ್ದವು;
וְגַ֨בֵּיהֶ֔ן וְגֹ֥בַהּ לָהֶ֖ם וְיִרְאָ֣ה לָהֶ֑ם וְגַבֹּתָ֗ם מְלֵאֹ֥ת עֵינַ֛יִם סָבִ֖יב לְאַרְבַּעְתָּֽן׃
19 ೧೯ ಜೀವಿಗಳು ಮುಂದೆ ಹೋಗುವಾಗ ಚಕ್ರಗಳೂ ಅವುಗಳ ಪಕ್ಕದಲ್ಲಿ ಮುಂದೆ ಹೋಗುತ್ತಿದ್ದವು; ಆ ಜೀವಿಗಳು ಭೂಮಿಯಿಂದ ಮೇಲಕ್ಕೇಳುವಾಗ ಚಕ್ರಗಳೂ ಮೇಲೆ ಏಳುತ್ತಿದ್ದವು;
וּבְלֶ֙כֶת֙ הַֽחַיּ֔וֹת יֵלְכ֥וּ הָאוֹפַנִּ֖ים אֶצְלָ֑ם וּבְהִנָּשֵׂ֤א הַֽחַיּוֹת֙ מֵעַ֣ל הָאָ֔רֶץ יִנָּשְׂא֖וּ הָאוֹפַנִּֽים׃
20 ೨೦ ದೇವರಾತ್ಮವು ಸಾಗಿಸಿದ ಕಡೆಗೇ ಸಾಗಿದವು; ಜೀವಿಗಳ ಒಳಗಿನ ಆತ್ಮವು ಚಕ್ರಗಳಲ್ಲಿ ಇದ್ದ ಕಾರಣ ಚಕ್ರಗಳು ಅವುಗಳ ಪಕ್ಕದಲ್ಲಿ ಏಳುತ್ತಿದ್ದವು.
עַ֣ל אֲשֶׁר֩ יִֽהְיֶה־שָּׁ֨ם הָר֤וּחַ לָלֶ֙כֶת֙ יֵלֵ֔כוּ שָׁ֥מָּה הָר֖וּחַ לָלֶ֑כֶת וְהָאוֹפַנִּ֗ים יִנָּשְׂאוּ֙ לְעֻמָּתָ֔ם כִּ֛י ר֥וּחַ הַחַיָּ֖ה בָּאוֹפַנִּֽים׃
21 ೨೧ ಅವು ಮುಂದೆ ಹೋಗುವಾಗ ಇವೂ ಮುಂದೆ ಹೋಗುತ್ತಿದ್ದವು, ಅವು ನಿಂತು ಹೋಗುವಾಗ ಇವೂ ನಿಂತುಹೋಗುತ್ತಿದ್ದವು, ಅವು ನೆಲದಿಂದ ಮೇಲಕ್ಕೆ ಏಳುವಾಗ ಚಕ್ರಗಳೂ ಅವುಗಳ ಪಕ್ಕದಲ್ಲಿ ಏಳುತ್ತಿದ್ದವು; ಏಕೆಂದರೆ ಜೀವಿಗಳ ಆತ್ಮವು ಚಕ್ರಗಳಲ್ಲಿಯೂ ಇತ್ತು.
בְּלֶכְתָּ֣ם יֵלֵ֔כוּ וּבְעָמְדָ֖ם יַֽעֲמֹ֑דוּ וּֽבְהִנָּשְׂאָ֞ם מֵעַ֣ל הָאָ֗רֶץ יִנָּשְׂא֤וּ הָאֽוֹפַנִּים֙ לְעֻמָּתָ֔ם כִּ֛י ר֥וּחַ הַחַיָּ֖ה בָּאוֹפַנִּֽים׃
22 ೨೨ ಭೀಕರವಾದ ಮಂಜುಗಡ್ಡೆಯಂತೆ ಥಳಥಳಿಸುವ ಒಂದು ರೀತಿಯ ಗಗನಮಂಡಲ ಆ ಜೀವಿಗಳ ತಲೆಯ ಮೇಲ್ಗಡೆ ಹರಡಿತ್ತು.
וּדְמ֞וּת עַל־רָאשֵׁ֤י הַחַיָּה֙ רָקִ֔יעַ כְּעֵ֖ין הַקֶּ֣רַח הַנּוֹרָ֑א נָט֥וּי עַל־רָאשֵׁיהֶ֖ם מִלְמָֽעְלָה׃
23 ೨೩ ಅದರ ಕೆಳಗೆ ಜೀವಿಗಳ ರೆಕ್ಕೆಗಳು ನೇರವಾಗಿ ಚಾಚಲ್ಪಟ್ಟು ಒಂದಕ್ಕೊಂದು ತಗಲುತ್ತಿದ್ದವು; ಇದಲ್ಲದೆ ಒಂದೊಂದು ಜೀವಿಗೆ ದೇಹವನ್ನು ಮುಚ್ಚಿಕೊಳ್ಳುವ ಎರಡೆರಡು ರೆಕ್ಕೆಗಳಿದ್ದವು.
וְתַ֙חַת֙ הָרָקִ֔יעַ כַּנְפֵיהֶ֣ם יְשָׁר֔וֹת אִשָּׁ֖ה אֶל־אֲחוֹתָ֑הּ לְאִ֗ישׁ שְׁתַּ֤יִם מְכַסּוֹת֙ לָהֵ֔נָּה וּלְאִ֗ישׁ שְׁתַּ֤יִם מְכַסּוֹת֙ לָהֵ֔נָּה אֵ֖ת גְּוִיֹּתֵיהֶֽם׃
24 ೨೪ ಅವು ಮುಂದೆ ಹೋಗುವಾಗ ಅವುಗಳ ರೆಕ್ಕೆಗಳ ಶಬ್ದವು ಜಲಪ್ರವಾಹದ ಘೋಷದಂತೆ ಸರ್ವಶಕ್ತನ ಧ್ವನಿಯಂತೆ, ಆರ್ಭಟಿಸುವ ಸೈನ್ಯದ ಕೋಲಾಹಲದಂತೆ ನನಗೆ ಕೇಳಿಸಿತು; ಅವು ನಿಂತಾಗ ರೆಕ್ಕೆಗಳನ್ನು ಮುದುರಿಕೊಳ್ಳುತ್ತಿದ್ದವು.
וָאֶשְׁמַ֣ע אֶת־ק֣וֹל כַּנְפֵיהֶ֡ם כְּקוֹל֩ מַ֨יִם רַבִּ֤ים כְּקוֹל־שַׁדַּי֙ בְּלֶכְתָּ֔ם ק֥וֹל הֲמֻלָּ֖ה כְּק֣וֹל מַחֲנֶ֑ה בְּעָמְדָ֖ם תְּרַפֶּ֥ינָה כַנְפֵיהֶֽן׃
25 ೨೫ ಅವುಗಳ ತಲೆಗಳ ಮೇಲ್ಗಡೆಯ ಗಗನಮಂಡಲದ ಮೇಲಿಂದ ಒಂದು ಧ್ವನಿಯು ಕಿವಿಗೆ ಬಿತ್ತು. ಜೀವಿಗಳು ನಿಂತಾಗ ರೆಕ್ಕೆಗಳನ್ನು ಮುದುರಿಕೊಳ್ಳುತ್ತಿದ್ದವು.
וַיְהִי־ק֕וֹל מֵעַ֕ל לָרָקִ֖יעַ אֲשֶׁ֣ר עַל־רֹאשָׁ֑ם בְּעָמְדָ֖ם תְּרַפֶּ֥ינָה כַנְפֵיהֶֽן׃
26 ೨೬ ಅವುಗಳ ತಲೆಗಳ ಮೇಲ್ಗಡೆಯ ಗಗನಮಂಡಲ ಮೇಲೆ ಇಂದ್ರನೀಲಮಣಿಯಂತೆ ಹೊಳೆಯುವ ಸಿಂಹಾಸನಾಕಾರವು ಕಾಣಿಸಿತು; ಅದರ ಮೇಲೆ ನರರೂಪದಂಥ ರೂಪವುಳ್ಳ ಒಬ್ಬಾತನು ಆಸೀನನಾಗಿದ್ದನು.
וּמִמַּ֗עַל לָרָקִ֙יעַ֙ אֲשֶׁ֣ר עַל־רֹאשָׁ֔ם כְּמַרְאֵ֥ה אֶֽבֶן־סַפִּ֖יר דְּמ֣וּת כִּסֵּ֑א וְעַל֙ דְּמ֣וּת הַכִּסֵּ֔א דְּמ֞וּת כְּמַרְאֵ֥ה אָדָ֛ם עָלָ֖יו מִלְמָֽעְלָה׃
27 ೨೭ ಸೊಂಟದ ಹಾಗೆ ತೋರುವ ಆತನ ಮಧ್ಯಭಾಗದಿಂದ ಮೇಲ್ಗಡೆ ಸುವರ್ಣವು ಥಳಥಳಿಸುತ್ತದೋ, ಬೆಂಕಿಯು ಆ ರೂಪದೊಳಗೆಲ್ಲಾ ಪ್ರಜ್ವಲಿಸುತ್ತದೋ ಎಂಬಂತಿರುವ ಅದ್ಭುತಕಾಂತಿಯನ್ನು ಕಂಡೆನು; ಸೊಂಟದ ಹಾಗೆ ತೋರುವ ಆತನ ಮಧ್ಯಭಾಗದಿಂದ ಕೆಳಗಡೆ ಬೆಂಕಿಯು ಉರಿಯುತ್ತದೋ ಎಂಬಂತಿರುವ ಮಹಾ ತೇಜಸ್ಸನ್ನು ನೋಡಿದೆನು; ಮತ್ತು ಪ್ರಕಾಶವು ಆತನನ್ನು ಆವರಿಸಿಕೊಂಡಿತ್ತು.
וָאֵ֣רֶא ׀ כְּעֵ֣ין חַשְׁמַ֗ל כְּמַרְאֵה־אֵ֤שׁ בֵּֽית־לָהּ֙ סָבִ֔יב מִמַּרְאֵ֥ה מָתְנָ֖יו וּלְמָ֑עְלָה וּמִמַּרְאֵ֤ה מָתְנָיו֙ וּלְמַ֔טָּה רָאִ֙יתִי֙ כְּמַרְאֵה־אֵ֔שׁ וְנֹ֥גַֽהּ ל֖וֹ סָבִֽיב׃
28 ೨೮ ಮಳೆಗಾಲದಲ್ಲಿ ಮೇಘಮಂಡಲದೊಳಗೆ ಕಾಮನ ಬಿಲ್ಲು ಹೊಳೆಯುವಂತೆ ಆತನ ಸುತ್ತಲೂ ಪ್ರಕಾಶವು ಹೊಳೆಯುತ್ತಿತ್ತು. ಹೀಗೆ ಯೆಹೋವನ ಮಹಿಮಾದ್ಭುತ ದರ್ಶನವು ಆಯಿತು. ಇದನ್ನು ಕಂಡಾಗ ನಾನು ಅಡ್ಡಬಿದ್ದೆ; ಮಾತನಾಡುವಾತನ ವಾಣಿಯನ್ನು ಕೇಳಿದೆ.
כְּמַרְאֵ֣ה הַקֶּ֡שֶׁת אֲשֶׁר֩ יִֽהְיֶ֨ה בֶעָנָ֜ן בְּי֣וֹם הַגֶּ֗שֶׁם כֵּ֣ן מַרְאֵ֤ה הַנֹּ֙גַהּ֙ סָבִ֔יב ה֕וּא מַרְאֵ֖ה דְּמ֣וּת כְּבוֹד־יְהוָ֑ה וָֽאֶרְאֶה֙ וָאֶפֹּ֣ל עַל־פָּנַ֔י וָאֶשְׁמַ֖ע ק֥וֹל מְדַבֵּֽר׃ ס

< ಯೆಹೆಜ್ಕೇಲನು 1 >