< ಎಜ್ರನು 1 >
1 ೧ ಪರ್ಷಿಯ ಅರಸನಾದ ಕೋರೆಷನ ಮೊದಲನೆಯ ವರ್ಷದಲ್ಲಿ ಯೆಹೋವನು ತಾನು ಯೆರೆಮೀಯನ ಮುಖಾಂತರ ಹೇಳಿಸಿದ ವಾಕ್ಯವನ್ನು ನೆರವೇರಿಸುವುದಕ್ಕಾಗಿ ಆ ಪರ್ಷಿಯ ರಾಜನಾದ ಕೋರೆಷನ ಮನಸ್ಸನ್ನು ಪ್ರೇರೇಪಿಸಿದನು.
Прве године Кира, цара персијског, да би се испунила реч Господња, коју рече на уста Јеремијина, подиже Господ дух Кира, цара персијског, те огласи по свему царству свом и расписа говорећи:
2 ೨ ಅವನು ತನ್ನ ರಾಜ್ಯದಲ್ಲೆಲ್ಲಾ ಡಂಗುರದಿಂದಲೂ, ಪತ್ರಗಳಿಂದಲೂ, “ಪರ್ಷಿಯ ರಾಜನಾದ ಕೋರೆಷನೆಂಬ ನನ್ನ ಮಾತನ್ನು ಕೇಳಿರಿ. ಪರಲೋಕದೇವರಾದ ಯೆಹೋವನು ನನಗೆ ಭೂಲೋಕದ ಎಲ್ಲಾ ರಾಜ್ಯಗಳನ್ನೂ ಕೊಟ್ಟು, ತನಗೋಸ್ಕರ ಯೆಹೂದ ದೇಶದ ಯೆರೂಸಲೇಮಿನಲ್ಲಿ ಆಲಯವನ್ನು ಕಟ್ಟಿಸಬೇಕು ಎಂದು ಆಜ್ಞಾಪಿಸಿದ್ದಾನೆ.
Овако вели Кир, цар персијски: Сва царства земаљска дао ми је Господ Бог небески, и Он ми је заповедио да Му сазидам дом у Јерусалиму у Јудеји.
3 ೩ ನಿಮ್ಮಲ್ಲಿ ಯಾರು ಆತನ ಪ್ರಜೆಗಳಾಗಿರುತ್ತಾರೋ, ಅವರು ಯೆಹೂದ ದೇಶದ ಯೆರೂಸಲೇಮಿಗೆ ಹೋಗಿ ಅಲ್ಲಿ ವಾಸಿಸುತ್ತಿರುವ ಇಸ್ರಾಯೇಲ್ ದೇವರಾದ ಯೆಹೋವನಿಗೋಸ್ಕರ ಆಲಯವನ್ನು ಕಟ್ಟಲಿ. ಅವರ ದೇವರು ಅವರ ಸಂಗಡ ಇರಲಿ.
Ко је између вас од свега народа Његовог? Бог небески нека буде с њим, па нек иде у Јерусалим у Јудеји, и нека зида дом Господа Бога Израиљевог, Бога који је у Јерусалиму.
4 ೪ ಸೆರೆಯವರಲ್ಲಿ ಉಳಿದವರು ಯಾವ ಊರುಗಳಲ್ಲಿ ಪ್ರವಾಸಿಗಳಾಗಿರುತ್ತಾರೋ ಆ ಊರುಗಳವರು ಯೆರೂಸಲೇಮಿನ ದೇವಾಲಯಕ್ಕೋಸ್ಕರ ಕಾಣಿಕೆಗಳನ್ನಲ್ಲದೆ ಬೆಳ್ಳಿಬಂಗಾರ, ಸರಕು, ಪಶು ಇವುಗಳನ್ನೂ ಕೊಟ್ಟು ಅವರಿಗೆ ಸಹಾಯ ಮಾಡಲಿ” ಎಂದು ಪ್ರಕಟಿಸಿದನು.
А ко би остао у коме год месту где се бави, нека га људи оног места потпомогну сребром и златом и имањем и стоком осим драговољног прилога на дом Божји у Јерусалиму.
5 ೫ ಆಗ ಯೆಹೂದ ಮತ್ತು ಬೆನ್ಯಾಮೀನ್ ಗೋತ್ರ ಪ್ರಧಾನರಲ್ಲಿಯೂ, ಯಾಜಕರಲ್ಲಿಯೂ ಮತ್ತು ಲೇವಿಯರಲ್ಲಿಯೂ ದೇವಪ್ರೇರಣೆಗೆ ಒಳಗಾದವರೆಲ್ಲರೂ ಯೆರೂಸಲೇಮಿನಲ್ಲಿ ಯೆಹೋವನಿಗೋಸ್ಕರ ಆಲಯವನ್ನು ಕಟ್ಟುವುದಕ್ಕಾಗಿ ಹೊರಟುಹೋದರು.
Тада усташе главари породица отачких од Јуде и Венијамина, и свештеници и Левити и сви којима Бог подиже дух да иду да зидају дом Господњи у Јерусалиму.
6 ೬ ಅವರ ನೆರೆಯವರೆಲ್ಲರೂ ಕಾಣಿಕೆಗಳನ್ನು ಕೊಟ್ಟಿದ್ದಲ್ಲದೆ ಅವರಿಗೆ ಬೆಳ್ಳಿಯ ಸಾಮಾನು, ಬಂಗಾರ, ಸರಕು, ಪಶು, ಶ್ರೇಷ್ಠವಸ್ತು ಇವುಗಳನ್ನೂ ಕೊಟ್ಟು ಸಹಾಯಮಾಡಿದರು.
И потпомогоше их сви који беху око њих судовима сребрним и златним, имањем и стоком и стварима скупоценим осим свега што драговољно приложише.
7 ೭ ಅಲ್ಲಿಂದ ನೆಬೂಕದ್ನೆಚ್ಚರನು ಯೆರೂಸಲೇಮಿನಿಂದ ಕೊಳ್ಳೆಯಾಗಿ ತಂದು ತನ್ನ ದೇವರ ಗುಡಿಯಲ್ಲಿ ಇಟ್ಟಿದ್ದ ಯೆಹೋವನ ಆಲಯದ ಸಾಮಾನುಗಳನ್ನು ಪರ್ಷಿಯ ರಾಜನಾದ ಕೋರೆಷನು ಅಲ್ಲಿಂದ ತೆಗೆಸಿದನು.
И цар Кир издаде судове дома Господњег које беше однео из Јерусалима цар Навуходоносор и метнуо у дом својих богова;
8 ೮ ಅವನು ಅವುಗಳನ್ನು ಖಜಾನೆಯ ಅಧಿಕಾರಿಯಾದ ಮಿತ್ರದಾತನಿಗೆ ಒಪ್ಪಿಸಿದನು. ಇವನು ಅವುಗಳನ್ನು ಯೆಹೂದದ ಪ್ರಭುವಾಗಿರುವ ಶೆಷ್ಬಚ್ಚರನಿಗೆ ಲೆಕ್ಕಮಾಡಿ ಕೊಟ್ಟನು.
А издаде их Кир, цар персијски, преко Митридата ризничара, који их изброја Сасавасару, кнезу јудејском.
9 ೯ ಆ ಸಾಮಾನುಗಳ ಲೆಕ್ಕ: ಬಂಗಾರದ ಬೋಗುಣಿಗಳು ಮೂವತ್ತು; ಬೆಳ್ಳಿಯ ಬೋಗುಣಿಗಳು ಒಂದು ಸಾವಿರ; ಕತ್ತಿಗಳು ಇಪ್ಪತ್ತೊಂಭತ್ತು;
А ово им је број: здела златних тридесет, здела сребрних хиљада, ножева двадесет и девет,
10 ೧೦ ಚಿನ್ನದ ಬಟ್ಟಲುಗಳು ಮೂವತ್ತು; ಎರಡನೆಯ ದರ್ಜೆಯ ಬೆಳ್ಳಿಯ ಬಟ್ಟಲುಗಳು ನಾನೂರಹತ್ತು ಮತ್ತು ಇತರ ಪಾತ್ರೆಗಳು ಒಂದು ಸಾವಿರ.
Чаша златних тридесет, других чаша сребрних четири стотине и десет, других судова хиљаду;
11 ೧೧ ಬೆಳ್ಳಿಬಂಗಾರದ ಎಲ್ಲಾ ಸಾಮಾನುಗಳ ಒಟ್ಟು ಸಂಖ್ಯೆಯು ಐದು ಸಾವಿರದ ನಾನೂರು. ಶೆಷ್ಬಚ್ಚರನು ಸೆರೆಯಲ್ಲಿದ್ದವರನ್ನು ಬಾಬಿಲೋನಿನಿಂದ ಯೆರೂಸಲೇಮಿಗೆ ಕರೆದುಕೊಂಡು ಬಂದಾಗ ಈ ಎಲ್ಲಾ ಸಾಮಾನುಗಳನ್ನು ತೆಗೆದುಕೊಂಡು ಬಂದನು.
Свега судова златних и сребрних пет хиљада и четири стотине; све то понесе Сасавасар кад се врати из Вавилона у Јерусалим.