< ಎಜ್ರನು 4 >
1 ೧ ಸೆರೆಯಿಂದ ಹಿಂತಿರುಗಿ ಬಂದವರು ಇಸ್ರಾಯೇಲ್ ದೇವರಾದ ಯೆಹೋವನಿಗೋಸ್ಕರ ಮಂದಿರವನ್ನು ಕಟ್ಟುತ್ತಿದ್ದಾರೆ ಎಂಬ ಸುದ್ದಿ ಯೆಹೂದ್ಯರ ಮತ್ತು ಬೆನ್ಯಾಮೀನ್ಯರ ವಿರೋಧಿಗಳಿಗೆ ತಿಳಿದುಬಂತು.
Sa’ad da abokan gāban Yahuda da na Benyamin suka ji cewa waɗanda suka dawo daga bauta suna gina haikalin Ubangiji, Allah na Isra’ila
2 ೨ ಆಗ ಅವರು ಜೆರುಬ್ಬಾಬೆಲನ ಬಳಿಗೂ ಗೋತ್ರಪ್ರಧಾನರ ಬಳಿಗೂ ಬಂದು ಅವರಿಗೆ, “ನಿಮ್ಮೊಡನೆ ದೇವಾಲಯ ಕಟ್ಟುವುದಕ್ಕೆ ನಮಗೂ ಅಪ್ಪಣೆಯಾಗಲಿ, ಯಾಕೆಂದರೆ ನಿಮ್ಮಂತೆ ನಾವು ನಿಮ್ಮ ದೇವರ ಭಕ್ತರಾಗಿದ್ದೇವೆ. ನಮ್ಮನ್ನು ಇಲ್ಲಿ ತಂದಿರಿಸಿದ ಅಶ್ಶೂರದ ಅರಸನಾದ ಏಸರ್ಹದ್ದೋನನ ಕಾಲದಿಂದ ನಾವು ಆತನಿಗೇ ಯಜ್ಞಸಮರ್ಪಣೆಯನ್ನು ಮಾಡುತ್ತಾ ಬಂದಿದ್ದೇವೆ” ಎಂದು ಹೇಳಿದರು.
sai suka zo wurin Zerubbabel da kuma wurin shugabannin iyalai, suka ce, “Bari mu taimake ku ginin domin mu ma muna addu’a ga Allahnku yadda kuke yi, muna miƙa masa hadaya tun lokacin Esar-Haddon sarkin Assuriya wanda ya kawo mu nan.”
3 ೩ ಆಗ ಜೆರುಬ್ಬಾಬೆಲ್, ಯೇಷೂವ ಮತ್ತು ಬೇರೆ ಇಸ್ರಾಯೇಲ್ ಗೋತ್ರಪ್ರಧಾನರೂ ಅವರಿಗೆ, “ನೀವು ನಮ್ಮ ದೇವರ ಆಲಯ ಕಟ್ಟುವುದರಲ್ಲಿ ನಮ್ಮೊಡನೆ ಸೇರಲೇ ಕೂಡದು. ಪರ್ಷಿಯ ದೇಶದ ರಾಜನಾದ ಕೋರೆಷನಿಂದ ನಮಗಾದ ಅಪ್ಪಣೆಯ ಮೇರೆಗೆ ನಾವೇ ಇಸ್ರಾಯೇಲ್ ದೇವರಾದ ಯೆಹೋವನ ಆಲಯವನ್ನು ಕಟ್ಟುತ್ತೇವೆ” ಎಂದು ಉತ್ತರ ಕೊಟ್ಟರು.
Amma Zerubbabel, Yeshuwa, da sauran shugabannin iyalai na Isra’ila suka amsa suka ce, “Ba za ku sa hannu cikin gina wa Allahnmu haikali ba, mu kaɗai za mu gina wa Ubangiji, Allah na Isra’ila gini kamar yadda Sarki Sairus, sarkin Farisa, ya umarce mu.”
4 ೪ ಆಗ ಆ ದೇಶನಿವಾಸಿಗಳು ಯೆಹೂದ್ಯರನ್ನು ಧೈರ್ಯಗುಂದಿಸಿ ದೇವಾಲಯ ಕಟ್ಟದ ಹಾಗೆ ಬೆದರಿಸಿದರು. ಇದರೊಂದಿಗೆ ಅವರ ಉದ್ದೇಶವನ್ನು ಕೆಡಿಸುವುದಕ್ಕೋಸ್ಕರ ಹಣಕೊಟ್ಟು ವಕೀಲರನ್ನು ನೇಮಿಸಿಕೊಂಡರು.
Sai mutanen da suke zama a wurin suka fara yin ƙoƙari su sa mutanen Yahuda su karaya, suka sa su ji tsoron ci gaba da ginin.
5 ೫ ಪರ್ಷಿಯ ರಾಜನಾದ ಕೋರೆಷನ ಕಾಲದಿಂದ ಪರ್ಷಿಯ ರಾಜನಾದ ದಾರ್ಯಾವೆಷನ ಆಳ್ವಿಕೆಯವರೆಗೂ ಇದು ಮುಂದುವರಿಯಿತು.
Suka yi hayar mashawarta don su ga cewa sun ɓata ƙoƙarinsu dukan kwanakin mulkin Sairus sarkin Farisa har zuwa kwanakin mulkin Dariyus sarkin Farisa.
6 ೬ ಅಹಷ್ವೇರೋಷನ ಆಳ್ವಿಕೆಯ ಪ್ರಾರಂಭದಲ್ಲಿ ಅವರು ಯೆಹೂದದಲ್ಲಿಯೂ ಮತ್ತು ಯೆರೂಸಲೇಮಿನಲ್ಲಿಯೂ ವಾಸ ಮಾಡುತ್ತಿದ್ದವರ ವಿರುದ್ಧವಾಗಿ ಆಪಾದನೆಯ ಪತ್ರವನ್ನು ಬರೆದರು.
A farkon mulkin Zerzes, sai abokan gāba suka kawo ƙarar mutanen Yahuda da na Urushalima.
7 ೭ ಮತ್ತು ಅರ್ತಷಸ್ತನ ಕಾಲದಲ್ಲಿ ಬಿಷ್ಲಾಮ್, ಮಿತ್ರದಾತ, ಟಾಬೆಯೇಲ್ ಈ ಮೊದಲಾದವರು ಪರ್ಷಿಯ ರಾಜನಾದ ಅರ್ತಷಸ್ತನಿಗೆ ಬರೆದರು. ಆ ಪತ್ರವು ಅರಾಮ್ಯ ಲಿಪಿಯಲ್ಲಿಯೂ ಮತ್ತು ಅರಾಮ್ಯ ಭಾಷೆಯಲ್ಲಿಯೂ ಇತ್ತು.
A zamanin Artazerzes sarkin Farisa kuma, sai Bishlam, da Mitredat, da Tabeyel, da sauran abokansu suka rubuta wasiƙa zuwa ga Artazerzes. Aka rubuta wasiƙar da harufan Arameyik, aka kuma fassara ta a yaren Arameyik.
8 ೮ ದೇಶಾಧಿಪತಿಯಾದ ರೆಹೂಮ್, ಲೇಖಕನಾದ ಶಿಂಷೈ ಇವರು ಯೆರೂಸಲೇಮಿಗೆ ವಿರುದ್ಧವಾಗಿ ಮುಂದಿನ ಕಾಗದವನ್ನು ಬರೆದು ಅರ್ತಷಸ್ತನಿಗೆ ಕಳುಹಿಸಿದರು.
Rehum shugaban rundunar soja, da Shimshai marubuci, suka rubuta wasiƙar a kan Urushalima zuwa ga sarki Artazerzes, suka ce.
9 ೯ ಅದರಲ್ಲಿ, ದೇಶಾಧಿಪತಿಯಾದ ರೆಹೂಮ್, ಲೇಖಕನಾದ ಶಿಂಷೈ ಇವರೂ ಇವರ ಜೊತೆಗಾರರಾದ ದಿನಾಯರು, ಅಪರ್ಸತ್ಕಾಯರು, ಟರ್ಪಲಾಯರು, ಅಪಾರ್ಸಾಯರು, ಯೆರೆಕ್ಯರು, ಬಾಬಿಲೋನಿನವರು, ಶೂಷನಿನವರು, ದೆಹಾಯರು ಮತ್ತು ಏಲಾಮ್ಯರು.
Rehum shugaban sojoji, da Shimshai marubuci, da sauran abokansu, wato, alƙalai, da masu riƙe da muƙamai daga Farisa, Uruk da Babilon, mutanen Elam da na Shusha,
10 ೧೦ ಇವರೂ ಮಹಾಶ್ರೀಮತ್ ಆಸೆನಪ್ಪರನು ಕರತಂದು ಸಮಾರ್ಯ ಪಟ್ಟಣದಲ್ಲಿ ಮತ್ತು ಹೊಳೆಯ ಈಚೆಗಿರುವ ಬೇರೆ ಊರುಗಳಲ್ಲಿ ಇರಿಸಿದ ಇತರ ಜನರು ಇತ್ಯಾದಿ ಶಿರೋಲೇಖ.
da sauran mutane waɗanda mai girma Osnaffar ya kwaso, ya zaunar da su cikin birnin Samariya da sauran wurare na Kewayen Kogin Yuferites.
11 ೧೧ ಅವರು ಅರಸನಿಗೆ ಕಳುಹಿಸಿದ ಪತ್ರದ ಸಾರಾಂಶ ಹೀಗಿತ್ತು, “ಅರ್ತಷಸ್ತ ರಾಜರಿಗೆ, ನಿಮ್ಮ ಸೇವಕರಾದ ಹೊಳೆಯ ಈಚೆಯವರು.
(Ga abin da suka rubuta.) Zuwa ga sarki Artazerzes. Daga bayinka, mutanen Kewayen Kogin Yuferites.
12 ೧೨ ನಿನ್ನ ಸನ್ನಿಧಿಯಿಂದ ನಮ್ಮ ಬಳಿಗೆ ಬಂದ ಯೆಹೂದ್ಯರು ಯೆರೂಸಲೇಮನ್ನು ಸೇರಿ ರಾಜಕಂಟಕವಾದ ಆ ಕೆಟ್ಟ ಪಟ್ಟಣವನ್ನೂ, ಅದರ ಪೌಳಿಗೋಡೆಯನ್ನೂ ಪುನಃ ಕಟ್ಟುವುದಕ್ಕೆ ಪ್ರಾರಂಭಿಸಿ ಪೌಳಿಗೋಡೆಯ ಅಸ್ತಿವಾರವನ್ನು ಜೀರ್ಣೋದ್ಧಾರಮಾಡಿದ್ದಾರೆ ಎಂಬುದಾಗಿ ನಾವು ತಮಗೆ ಅರಿಕೆಮಾಡಿಕೊಳ್ಳುತ್ತೇವೆ.
Ya kamata sarki ya san cewa Yahudawan da suka hauro wurinmu daga wurinka, sun je Urushalima suna sāke gina wannan mugun birni mai tawaye. Suna sāke gyara katangar, suna kuma gyara harsashin katangar.
13 ೧೩ ಆ ಪಟ್ಟಣವನ್ನೂ ಅದರ ಗೋಡೆಗಳನ್ನೂ ಕಟ್ಟುವುದು ಮುಕ್ತಾಯಗೊಂಡರೆ ಅವರು ಕಪ್ಪ, ತೆರಿಗೆ ಮತ್ತು ಸುಂಕಗಳನ್ನು ಪಾವತಿಸಲಿಕ್ಕಿಲ್ಲ ಮತ್ತು ಕಡೆಯಲ್ಲಿ ಇದರಿಂದ ಅರಸರಿಗೆ ನಷ್ಟವುಂಟಾಗುವುದೆಂದು ತಮಗೆ ತಿಳಿದಿರಲಿ.
Ya kamata fa, sarki ya san cewa in aka sāke gina wannan birni duk da katangar birnin, mutanen birnin ba za su dinga biyan haraji, da kuɗin shiga, da na fitar da kaya ba, wannan zai sa aljihun masarauta yă bushe.
14 ೧೪ ನಾವಂತು ಅರಮನೆಯ ಉಪ್ಪನ್ನು ತಿನ್ನುವವರಾದುದರಿಂದ ಅರಸರಿಗೆ ಅಪಮಾನವುಂಟಾಗುವುದನ್ನು ನೋಡಿ ಸುಮ್ಮನಿರುವುದು ಸರಿಯಲ್ಲವೆಂದು ತಿಳಿದು ಅರಸರಿಗೆ ಈ ಪತ್ರದ ಮೂಲಕವಾಗಿ ವರ್ತಮಾನ ಕಳುಹಿಸಿದ್ದೇವೆ.
Tun da yake muna ƙarƙashin fada, bai kyautu mu bari a rena sarki ba, Saboda haka muke sanar da sarki,
15 ೧೫ ಈ ವಿಷಯವಾಗಿ ತಾವು ತಮ್ಮ ತಂದೆತಾತಂದಿರ ಚರಿತ್ರಗ್ರಂಥಗಳನ್ನು ಪರಿಶೋಧಿಸಿ ತಿಳಿದುಕೊಳ್ಳುವುದು ಸೂಕ್ತ ಎಂಬುದು ನಮ್ಮ ಅಭಿಪ್ರಾಯ. ಆ ಪಟ್ಟಣವು ರಾಜಕಂಟಕವಾದ ಪಟ್ಟಣವು. ಅರಸರಿಗೂ ಸಂಸ್ಥಾನಗಳಿಗೂ ತೊಂದರೆ ಹುಟ್ಟಿಸುವಂಥದು, ಪೂರ್ವಕಾಲದಿಂದಲೇ ದಂಗೆಯೆಬ್ಬಿಸುವಂಥದು ಎಂಬುದೂ ಆ ಕಾರಣದಿಂದಲೇ ಈ ಪಟ್ಟಣವು ನೆಲಸಮವಾಯಿತು ಎಂದು ಆ ಚರಿತ್ರಾ ಗ್ರಂಥದಲ್ಲಿ ಕಂಡುಬರುತ್ತದೆ.
domin a bincika a littattafan tarihin kakanninka. Za ka ga cewa wannan birni mai tawaye ne. Tun daga zamanin dā wannan birnin yana ba sarakuna da yankuna damuwa. Wannan ne ya sa aka ragargazar da birnin.
16 ೧೬ ಆ ಪಟ್ಟಣವನ್ನೂ ಅದರ ಗೋಡೆಗಳನ್ನೂ ಪುನಃ ಕಟ್ಟುವುದಾದರೆ ತಮಗೆ ಹೊಳೆಯ ಈಚೆಯಲ್ಲಿ ಒಂದು ಅಂಗುಲವೂ ಉಳಿಯದು ಎಂಬುದಾಗಿ ಅರಸರಿಗೆ ಅರಿಕೆಮಾಡಿಕೊಳ್ಳುತ್ತೇವೆ ಎಂಬುದೇ.”
Muna sanar da sarki cewa in har aka sāke gina wannan birnin da katangarsa, zai zama ka rasa kome a gefen Kewayen Kogin Yuferites ke nan.
17 ೧೭ ಅರಸನು ಅವರಿಗೆ ಕೊಟ್ಟ ಉತ್ತರವು, “ದೇಶಾಧಿಪತಿಯಾದ ರೆಹೂಮ್, ಲೇಖಕನಾದ ಶಿಂಷೈ ಇವರಿಗೂ ಸಮಾರ್ಯದಲ್ಲಿರುವ ಅವರ ಜೊತೆಗಾರರಿಗೂ ಹೊಳೆಯ ಆಚೆಯಲ್ಲಿರುವ ಇತರರಿಗೂ, ನಮ್ಮ ಕುಶಲಕ್ಷೇಮಗಳ ಅಭಿಲಾಷೆ ವ್ಯಕ್ತಪಡಿಸುತ್ತೇವೆ.
Sarki ya aika da wannan amsa. Zuwa ga Rehum shugaban sojoji, Shimshai marubuci da kuma sauran abokansu waɗanda suke zama a Samariya da kuma sauran wurare a Kewayen Kogin Yuferites. Gaisuwa.
18 ೧೮ ನೀವು ಕಳುಹಿಸಿದ ಪತ್ರವು ನನ್ನ ಮುಂದೆ ಓದಲಾಯಿತು. ಅದರ ಸಂಪೂರ್ಣ ವಿಷಯ ಮನದಟ್ಟಾಯಿತು.
An karanta, an kuma fassara mini wasiƙar da kuma aika.
19 ೧೯ ನನ್ನ ಆಜ್ಞಾನುಸಾರ ವಿಚಾರಣೆ ಮಾಡಿ ಪರಿಶೀಲಿಸಿದಾಗ ಆ ಪಟ್ಟಣದವರು ಪೂರ್ವಕಾಲದಿಂದಲೇ ಅರಸರಿಗೆ ವಿರುದ್ಧವಾಗಿ ತಿರುಗಿಬೀಳುತ್ತಾ, ದ್ರೋಹಮಾಡುತ್ತಾ, ದಂಗೆಯೆಬ್ಬಿಸುತ್ತಾ ಇದ್ದವರು ಎಂದು ತಿಳಿಯಿತು.
Na ba da umarni aka kuma yi bincike, aka tarar cewa wannan birni ya daɗe yana yi wa sarakuna tawaye, an yi tashin hankali a birnin.
20 ೨೦ ಅವರು ಯೆರೂಸಲೇಮಿನಲ್ಲಿ ಬಲಿಷ್ಠರಾಗಿ ರಾಜ್ಯ ಆಳುತ್ತಾ, ಹೊಳೆಯಾಚೆಯ ಎಲ್ಲಾ ಪ್ರದೇಶಗಳಲ್ಲಿ ಅಧಿಕಾರನಡಿಸುತ್ತಾ, ಕಪ್ಪ, ತೆರಿಗೆ ಸುಂಕಗಳನ್ನು ತೆಗೆದುಕೊಳ್ಳುತ್ತಾ ಇದ್ದರೆಂದು ಕಂಡುಬಂದಿತು.
Urushalima ta yi sarakuna masu iko sosai waɗanda suka yi mulkin Kewayen Kogin Yuferites gaba ɗaya, an kuma biya masu haraji, da kuɗin shiga da na fita na kaya.
21 ೨೧ ಆದುದರಿಂದ ಆ ಮನುಷ್ಯರನ್ನು ತಡೆಯಬೇಕೆಂತಲೂ, ನನ್ನ ಅಪ್ಪಣೆಯಾಗುವ ವರೆಗೆ ಆ ಪಟ್ಟಣವನ್ನು ಕಟ್ಟಲು ಆವಕಾಶ ಕೊಡಬಾರದೆಂತಲೂ ಪ್ರಕಟಿಸಿರಿ.
Saboda haka sai ku ba da umarni yanzu cewa mutanen su daina wannan aiki sai lokacin da na ba da umarni.
22 ೨೨ ರಾಜರಿಗೆ ಹಾನಿಯುಂಟಾಗದ ಹಾಗೆ ಜಾಗರೂಕತೆಯಿಂದಿರಿ, ಉದಾಸೀನತೆಯಿಂದ ಲಕ್ಷಿಸದೆ ಇರಬೇಡಿ” ಎಂದು ತಿಳಿಸಿದನು.
Ku tabbata ka ɗauki wannan da muhimmanci. Don me za a bari wannan abu yă zama abin damuwa ga sarauta?
23 ೨೩ ಅರಸನಾದ ಅರ್ತಷಸ್ತನ ಈ ಪತ್ರವನ್ನು ರೆಹೂಮ್, ಲೇಖಕನಾದ ಶಿಂಷೈ ಇವರ ಮುಂದೆಯೂ ಇವರ ಜೊತೆಗಾರರ ಮುಂದೆಯೂ ಓದಿದ ಕೂಡಲೆ ಅವರು ಶೀಘ್ರವಾಗಿ ಯೆರೂಸಲೇಮಿಗೆ ಹೋಗಿ ಬಲವಂತದಿಂದಲೂ ಅಧಿಕಾರದಿಂದಲೂ ಯೆಹೂದ್ಯರನ್ನು ತಡೆದರು.
Da gama karanta wasiƙar sarki Artazerzes wa Rehum da Shimshai marubuci, da abokansu, sai suka yi sauri suka je wurin Yahudawa a Urushalima, suka hana su aikin ƙarfi da yaji.
24 ೨೪ ಅಂದಿನಿಂದ ಪರ್ಷಿಯ ದೇಶದ ರಾಜನಾದ ದಾರ್ಯಾವೆಷನ ಆಳ್ವಿಕೆಯ ಎರಡನೆಯ ವರ್ಷದವರೆಗೂ ಯೆರೂಸಲೇಮಿನ ದೇವಾಲಯವನ್ನು ಕಟ್ಟುವ ಕೆಲಸವು ನಿಂತುಹೋಯಿತು.
Saboda haka aikin a gidan Allah a Urushalima ya tsaya cik sai a shekara ta biyu ta mulkin Dariyus sarkin Farisa.