< ಎಜ್ರನು 7 >
1 ೧ ಇದಾದ ಮೇಲೆ ಪರ್ಷಿಯ ರಾಜನಾದ ಅರ್ತಷಸ್ತನ ಆಳ್ವಿಕೆಯಲ್ಲಿ ಎಜ್ರನು ಬಾಬಿಲೋನಿನಿಂದ ಬಂದನು. ಇವನು ಸೆರಾಯನ ಮಗ; ಸೆರೆಯನು ಅಜರ್ಯನ ಮಗ; ಇವನು ಹಿಲ್ಕೀಯನ ಮಗ.
MAHOHE iho o keia mau mea, i ka wa i alii ai o Aretasaseta, ke alii o Peresia, o Ezera ke keiki a Seraia, ke keiki a Azaria, ke keiki a Hilekia,
2 ೨ ಹಿಲ್ಕೀಯನು ಶಲ್ಲೂಮನ ಮಗ; ಇವನು ಚಾದೋಕನ ಮಗ; ಇವನು ಅಹೀಟೂಬನ ಮಗ; ಇವನು ಅಮರ್ಯನ ಮಗ.
Ke keiki a Saluma, ke keiki a Zadoka, ke keiki a Ahituba,
3 ೩ ಅಮರ್ಯನು ಅಜರ್ಯನ ಮಗ; ಇವನು ಮೆರಾಯೋತನ ಮಗ.
Ke keiki a Amaria, ke keiki a Azaria, ke keiki a Meraiota,
4 ೪ ಮೆರಾಯೋತನು ಜೆರಹ್ಯನ ಮಗ; ಇವನು ಉಜ್ಜೀಯ ಮಗ; ಇವನು ಬುಕ್ಕೀಯ ಮಗ.
Ke keiki a Zerahia, ke keiki a Uzi, ke keiki a Buki,
5 ೫ ಬುಕ್ಕೀಯನು ಅಬೀಷೂವನ ಮಗ; ಇವನು ಫೀನೆಹಾಸನ ಮಗ; ಇವನು ಎಲ್ಲಾಜಾರನ ಮಗ; ಇವನು ಪ್ರಧಾನಯಾಜಕನಾದ ಆರೋನನ ಮಗ.
Ke keiki a Abisua, ke keiki a Pinehasa, ke keiki a Eleazara, ke keiki a Aarona ke kakuna nui:
6 ೬ ಎಜ್ರನು ಇಸ್ರಾಯೇಲ್ ದೇವರಾದ ಯೆಹೋವನಿಂದ ದೊರಕಿದ ಮೋಶೆಯ ಧರ್ಮೋಪದೇಶದಲ್ಲಿ ಪಾರಂಗತನಾದ ಶಾಸ್ತ್ರಿಯಾಗಿದ್ದನು. ಅವನ ದೇವರಾದ ಯೆಹೋವನ ಹಸ್ತಪಾಲನೆಯಿಂದ ಅರಸನು ಅವನಿಗೆ ಇಷ್ಟವಾದದ್ದನ್ನೆಲ್ಲಾ ಅನುಗ್ರಹಿಸಿದನು.
O ua Ezera la, pii aku la ia mai Babulona aku; a he kakauolelo makaukau no ia ma ke kanawai o Mose, ka mea a Iehova ke Akua o ka Iseraela i haawi mai ai; a haawi mai ke alii ia ia i ka mea a pau ana i noi ai, mamuli o ka lima o Iehova o kona Akua maluna ona.
7 ೭ ಅವನೊಡನೆ ಕೆಲವು ಜನರು ಇಸ್ರಾಯೇಲರೂ, ಯಾಜಕರೂ, ಲೇವಿಯರೂ, ಗಾಯಕರೂ, ದ್ವಾರಪಾಲಕರೂ ಮತ್ತು ದೇವಸ್ಥಾನದಾಸರೂ ಅರ್ತಷಸ್ತ ಅರಸನ ಆಳ್ವಿಕೆಯ ಏಳನೆಯ ವರ್ಷದಲ್ಲಿ ಯೆರೂಸಲೇಮಿಗೆ ಬಂದರು.
A pii ae la kekahi poe o na mamo a Iseraela, a o na kahuna, a me ua Levi, a me ka poe mele, a me na kiaipuka, a me ka poe Netini, i Ierusalema, i ka hiku o ka makahiki o Aretasaseta ke alii.
8 ೮ ಎಜ್ರನು ಆ ಅರಸನ ಆಳ್ವಿಕೆಯ ಏಳನೆಯ ವರ್ಷದ ಐದನೆಯ ತಿಂಗಳಲ್ಲಿ ಯೆರೂಸಲೇಮನ್ನು ತಲುಪಿದನು.
A hele mai ia i Ierusalema i ka lima o ka malama, oia hoi ka hiku o ka makahiki o ke alii.
9 ೯ ಅವನು ಮೊದಲನೆಯ ತಿಂಗಳಿನ ಮೊದಲ ದಿನದಲ್ಲಿ ಬಾಬಿಲೋನಿನಿಂದ ಹೊರಟನು; ತನ್ನ ದೇವರ ಕೃಪಾ ಹಸ್ತಪಾಲನೆಯಿಂದ ಐದನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಯೆರೂಸಲೇಮಿಗೆ ಬಂದು ಸೇರಿದನು.
No ka mea, i ka la mua o ka malama mua kona hoomaka ana e pii mai Babulona aku, a i ka la mua o ka lima o ka malama, hiki aku ia i Ierusalema, mamuli o ka lima o kona Akua maluna ona e pono ai.
10 ೧೦ ಎಜ್ರನು ಯೆಹೋವನ ಧರ್ಮಶಾಸ್ತ್ರವನ್ನು ಅಭ್ಯಾಸಿಸಿ ಅನುಸರಿಸಲಿಕ್ಕೂ, ಇಸ್ರಾಯೇಲರಿಗೆ ಅದರ ವಿಧಿನ್ಯಾಯಗಳನ್ನು ಕಲಿಸಬೇಕೆಂದು ದೃಢಮಾಡಿಕೊಂಡಿದ್ದನು.
No ka mea, ua hoomakaukau o Ezera i kona naau e imi i ke kanawai o Iehova, a e hana aku hoi, a e ao aku iloko o ka Iseraela i ke kanawai, a me ka olelo kupaa.
11 ೧೧ ಯಾಜಕನು ಮತ್ತು ಶಾಸ್ತ್ರಿಯೂ, ಇಸ್ರಾಯೇಲರಿಗಾಗಿ ಕೊಡಲ್ಪಟ್ಟ ಯೆಹೋವನ ಆಜ್ಞಾವಿಧಿಸೂತ್ರಗಳಲ್ಲಿ ವಿದ್ವಾಂಸನೂ ಆಗಿದ್ದ ಎಜ್ರನಿಗೆ ಅರಸನಾದ ಅರ್ತಷಸ್ತನು ಕೊಟ್ಟ ಪತ್ರ.
Eia ko kope o ka palapala a Aretasaseta ke alii i haawi aku ai ia Ezera ke kahuna, ke kakauolelo, he kakauolelo no na kauoha a Iehova, a me kona mau kanawai i ka Iseraela.
12 ೧೨ “ರಾಜಾಧಿರಾಜನಾದ ಅರ್ತಷಸ್ತನು, ಯಾಜಕನೂ ಪರಲೋಕದೇವರ ಧರ್ಮಶಾಸ್ತ್ರದಲ್ಲಿ ಪ್ರವೀಣನೂ ಆದ ಎಜ್ರನಿಗೆ ತಿಳಿಸುವುದೇನೆಂದರೆ,
O Aretasaseta, ke alii o na'lii, ia Ezera ke kahuna, he kakauolelo akamai ma ke kanawai o ke Akua o ka lani, a pela aku no.
13 ೧೩ ನನ್ನ ರಾಜ್ಯದಲ್ಲಿರುವ ಇಸ್ರಾಯೇಲರು ತಮ್ಮ ಯಾಜಕರು ಮತ್ತು ಲೇವಿಯರು ಹಾಗು ಯೆರೂಸಲೇಮಿಗೆ ಹೋಗಬೇಕೆಂದು ಮನಸ್ಸುಳ್ಳವರೆಲ್ಲರೂ ನಿನ್ನ ಸಂಗಡ ಹೋಗಬಹುದೆಂದು ಅಪ್ಪಣೆ ಕೊಡುತ್ತಿದ್ದೇನೆ.
Na'u no e kauoha aku, o kela mea keia mea o na kanaka o ka Iseraela, o na kahuna, a me na Levi iloko o ko'u aupuni, i makemake e hele i Ierusalema, e hele no me oe.
14 ೧೪ ನೀನು ಹೋಗಿ ಯೆಹೂದದವರ ಮತ್ತು ಯೆರೂಸಲೇಮಿನವರ ಆಚರಣೆಯು ನಿನ್ನ ಕೈಯಲ್ಲಿರುವ ನಿನ್ನ ದೇವರ ಧರ್ಮೋಪದೇಶಗ್ರಂಥಕ್ಕೆ ಅನುಸಾರವಾಗಿದೆಯೋ ಇಲ್ಲವೋ ಎಂದು ಪರಿಶೀಲಿಸಬೇಕು.
No ka mea, ua hoounaia'ku oe mai ke alo aku o ke alii, a me na kakaolelo ona ehiku, e nana aku i ko Iudea, a me ko Ierusalema, mamuli o ke kanawai o kou Akua ma kou lima;
15 ೧೫ ಮತ್ತು ಅರಸನೂ ಅವನ ಮಂತ್ರಿಗಳೂ ಯೆರೂಸಲೇಮಿನಲ್ಲಿ ವಾಸಿಸುತ್ತಿರುವ ಇಸ್ರಾಯೇಲ್ ದೇವರಿಗೊಸ್ಕರ ಕಾಣಿಕೆಯಾಗಿ ಸಮರ್ಪಿಸಿದ ಬೆಳ್ಳಿಬಂಗಾರ,
A e lawe aku hoi i ke kala a me ke gula a ke alii, a me kona mau kakaolelo i mohai aku ai no ke Akua o ka Iseraela, aia ma Ierusalema kona noho ana,
16 ೧೬ ಬಾಬೆಲ್ ಸಂಸ್ಥಾನದಲ್ಲಿ ನಿನಗೆ ಸಿಕ್ಕುವ ಬೆಳ್ಳಿಬಂಗಾರ, ಇಸ್ರಾಯೇಲ್ ಸಾಧಾರಣಜನರೂ, ಯಾಜಕರೂ, ಯೆರೂಸಲೇಮಿನಲ್ಲಿರುವ ತಮ್ಮ ದೇವರ ಆಲಯಕ್ಕಾಗಿ ಸ್ವ ಇಚ್ಛೆಯಿಂದ ಕೊಡುವ ಕಾಣಿಕೆ ಇವುಗಳನ್ನು ಅಲ್ಲಿಗೆ ಒಪ್ಪಿಸಬೇಕು; ಹೀಗೆಂದು ನಾನೂ ಮತ್ತು ನನ್ನ ಏಳು ಜನ ಮಂತ್ರಿಗಳೂ ನಿನ್ನನ್ನು ಕಳುಹಿಸುತ್ತೇವೆ.
A o ke kala a pau a me ke gula e loaa ia oe iloko o ka aina o Babulona nei, me na manawalea a na kanaka, a me na kahuna i mohai ai no ka hale o ko lakou Akua ma Ierusalema;
17 ೧೭ ನೀನು ಈ ಹಣದಿಂದ ಹೋರಿ, ಟಗರು, ಕುರಿ ಇವುಗಳನ್ನೂ ಮತ್ತು ಇವುಗಳೊಡನೆ ಸಮರ್ಪಣೆಯಾಗತಕ್ಕ ಧಾನ್ಯದ್ರವ್ಯ, ಪಾನದ್ರವ್ಯಗಳನ್ನೂ ಕೊಂಡುಕೊಂಡು ಅವುಗಳನ್ನು ಯೆರೂಸಲೇಮಿನಲ್ಲಿರುವ ನಿಮ್ಮ ದೇವರ ಆಲಯದ ಯಜ್ಞವೇದಿಯ ಮೇಲೆ ಸಮರ್ಪಿಸಬೇಕು.
I kuai koke aku ai oe me keia kala i na bipikane, a me na hipakane, a me na keikihipa a me ka lakou mohai ai a me na mohai inu, a kaumaha aku ia lakou maluna o ke kuahu o ka hale o ko oukou Akua ma Ierusalema.
18 ೧೮ ಉಳಿದ ಬೆಳ್ಳಿಬಂಗಾರವನ್ನು, ನಿಮ್ಮ ದೇವರ ಆಜ್ಞೆಯನ್ನು ಅನುಸರಿಸಿ, ನಿನಗೂ ನಿನ್ನ ಸಹೋದರರಿಗೂ ಸರಿತೋರುವಂತೆ ವೆಚ್ಚಮಾಡಿರಿ.
A o ka pono ia oe, a i kou poe hoahanau, e hana me ke koena o ke kala, a me ke gula, oia ka oukou e hana'i ma ka makemake o ko oukou Akua.
19 ೧೯ ನಿನ್ನ ದೇವರ ಆಲಯದ ಆರಾಧನೆಗಾಗಿ ನಿನ್ನ ವಶಕ್ಕೆ ಕೊಡುವ ಸಾಮಾನುಗಳನ್ನು ಯೆರೂಸಲೇಮಿನ ದೇವರ ಸನ್ನಿಧಿಗೆ ತೆಗೆದುಕೊಂಡು ಹೋಗು.
A o na kiaha hoi i haawiia nou no ka hana ma ka hale o kou Akua, oia mau mea kau e hoihoi aku ai imua o ke Akua o Ierusalema.
20 ೨೦ ನಿನ್ನ ದೇವರ ಆಲಯಕ್ಕೋಸ್ಕರ ನೀನು ಬೇರೆ ಯಾವುದನ್ನಾದರೂ ವೆಚ್ಚಮಾಡಬೇಕಾದರೆ ಅದನ್ನು ರಾಜಭಂಡಾರದಿಂದ ತೆಗೆದುಕೊಂಡು ವೆಚ್ಚಮಾಡು.
A o na mea e ae i pono ai ka hale o kou Akua, au e manao e haawi aku, e haawi aku no oe noloko mai o ka halewaiwai o ke alii.
21 ೨೧ “ಅರ್ತಷಸ್ತ ರಾಜನಾದ ನಾನು ಹೊಳೆಯಾಚೆಯ ಪ್ರಾಂತ್ಯಗಳ ಭಂಡಾರಗಳ ಮುಖ್ಯಸ್ಥರಿಗೆ ಆಜ್ಞಾಪಿಸುವುದು ಏನೆಂದರೆ, ‘ಯಾಜಕರೂ ಪರಲೋಕದೇವರ ಧರ್ಮಾಚಾರ್ಯನೂ ಆದ ಎಜ್ರನು ಕೇಳಿಕೊಳ್ಳುವುದನ್ನೆಲ್ಲಾ ನೀವು ತಪ್ಪದೆ ಕೊಡಬೇಕು.
A owau, owau o Aretasaseta ke alii, ke kauoha aku nei i ka poe malama waiwai a pau ma kela aoao o ka muliwai, o na mea a pau a Ezera ke kahuna, ke kakauolelo o ke kanawai o ke Akua o ka lani, e noi aku ai ia oukou, e hana koke ia ia mea;
22 ೨೨ ನೂರು ತಲಾಂತು ಬೆಳ್ಳಿ, ನೂರು ಕೋರ್ ಗೋದಿ ನೂರು ಬತ್ ದ್ರಾಕ್ಷಾರಸ, ಎಣ್ಣೆ ನೂರು ಬತ್ ಇಷ್ಟರ ಮಟ್ಟಿಗೂ ಕೊಡಬಹುದು; ಉಪ್ಪನ್ನು ಎಷ್ಟು ಬೇಕಾದರೂ ಕೊಡಬಹುದು.
A hiki i ka haneri talena kala, a i haneri kora hua palaoa, a i ka haneri bato waina, a i ka haneri bato aila, a me ka paakai aole e hoakakaia.
23 ೨೩ ಅರಸನ ಮತ್ತು ಅವನ ಸಂತಾನದವರ ರಾಜ್ಯದ ಮೇಲೆ ದೈವಕೋಪ ಉಂಟಾಗದ ಹಾಗೆ ನೀವು ಪರಲೋಕದೇವರ ಆಜ್ಞಾನುಸಾರ ಬೇಕಾದದ್ದನ್ನೆಲ್ಲಾ ಯಾವ ಕೊರತೆಯೂ ಇಲ್ಲದೆ ಒದಗಿಸಿ ಕೊಡಬೇಕು.
A o ka mea a pau i kauohaia e ke Akua o ka lani, e hana koke ia ia mea no ka hale o ke Akua o ka lani: no ka mea, no ke aha la e kauia mai ai ka inaina maluna o ke aupuni o ke alii, a me kana poe keiki?
24 ೨೪ ಇದಲ್ಲದೆ ಆ ದೇವಾಲಯದ ಸೇವೆಯಲ್ಲಿರುವ ಯಾಜಕರು, ಲೇವಿಯರು, ಗಾಯಕರು, ದ್ವಾರಪಾಲಕರು, ದಾಸರು ಮುಂತಾದ ಸೇವಕರಲ್ಲಿ ಯಾರಿಂದಲೂ ಕಪ್ಪ, ತೆರಿಗೆ, ಸುಂಕ ಇವುಗಳನ್ನು ವಸೂಲಿಮಾಡುವುದಕ್ಕೆ ನಿಮಗೆ ಅಧಿಕಾರವಿಲ್ಲ ಎಂಬುದು ತಿಳಿದಿರಲಿ.’
Ke hoike aku nei no hoi makou ia oukou, no na kahuna a pau, a no na Levi, no ka poe mele, no na kiaipuka, no ka poe Netini, a me ka poe lawelawe ma keia hale o ke Akua, aole he pono ke auhau ia lakou i ka uku, a me ka hookupu, a me ke dute.
25 ೨೫ “ಎಜ್ರನೇ, ನಿನ್ನ ಕೈಯಲ್ಲಿರುವ ನಿನ್ನ ದೇವರ ಜ್ಞಾನೋಪದೇಶಗ್ರಂಥಕ್ಕೆ ಅನುಸಾರವಾಗಿ ನ್ಯಾಯಾಧೀಶರನ್ನೂ ಮತ್ತು ಪಂಚಾಯತರನ್ನೂ ನೇಮಿಸು. ಅವರು ಹೊಳೆಯಾಚೆಯ ಇಸ್ರಾಯೇಲರಲ್ಲಿ ನಿನ್ನ ದೇವರ ಧರ್ಮವನ್ನು ಅರಿತಿರುವವರೆಲ್ಲರ ವ್ಯಾಜ್ಯಗಳನ್ನು ತೀರಿಸಲಿ. ಅರಿಯದವರಿಗೆ ನೀವು ಅದನ್ನು ಕಲಿಸಬೇಕು.
A o oe, e Ezera, ma ka naauao o kou Akua, ka mea ma kou lima, e hoonoho i na luna, a i na lunakanawai, na mea e hooponopono i na kanaka a pau ma kela aoao o ka muliwai, i ua mea a pau i ike i na kanawai o kou Akua, a e ao aku i ka poe ike ole.
26 ೨೬ ನಿನ್ನ ದೇವರ ಧರ್ಮಶಾಸ್ತ್ರವನ್ನೂ ಮತ್ತು ರಾಜಾಜ್ಞೆಯನ್ನೂ ಕೈಕೊಳ್ಳದವರಿಗೆಲ್ಲಾ ಮರಣದಂಡನೆ, ಬೇಡಿಹಾಕುವುದು ಈ ವಿಧವಾದ ಶಿಕ್ಷೆಯನ್ನು ತಪ್ಪದೆ ವಿಧಿಸಬೇಕು” ಎಂಬುದು ನಿಮಗೆ ತಿಳಿದಿರಲಿ.
A o ka mea malama ole i ke kanawai o kou Akua, a me ke kanawai o ke alii, e hoopai koke ia'ku oia, ina no ka make, a no ke kipakuia ana, a no ka hao ana o ka waiwai, a no ka hoopaa iloko o ka halepaahao.
27 ೨೭ ಎಜ್ರನು ನೀಡಿದ ಪ್ರತಿಕ್ರಿಯೆ, “ನಮ್ಮ ಪೂರ್ವಿಕರ ದೇವರಾದ ಯೆಹೋವನಿಗೆ ಸ್ತೋತ್ರವಾಗಲಿ. ಅರಸನು ಯೆರೂಸಲೇಮಿನಲ್ಲಿರುವ ಯೆಹೋವನ ಆಲಯವನ್ನು ಶೋಭಾಯಮಾನದ ಸ್ಥಿತಿಗೆ ತರುವುದಕ್ಕೆ ಆತನ ಪ್ರೇರಣೆಯಿಂದಲೇ ಮನಸ್ಸುಮಾಡಿದ್ದಾನೆ. ಅರಸನು ಅವನ ಮಂತ್ರಿಗಳ ಮತ್ತು ಅವನ ಎಲ್ಲಾ ಶ್ರೇಷ್ಠರಾದ ಸರದಾರರ ಮುಂದೆ ನನಗೆ ದಯೆತೋರಿಸಿದ್ದಾನೆ.
E hoomaikaiia o Iehova ke Akua o ko kakou poe kupuna, nana i haawi keia manao iloko o ka naau o ke alii, e hoonani i ka hale o Iehova ma Ierusalema;
28 ೨೮ ನನ್ನ ದೇವರಾದ ಯೆಹೋವನ ಹಸ್ತಪಾಲನೆಯು ನನ್ನೊಂದಿಗೆ ಇರುವುದರಿಂದ ಅರಸನ ಮುಂದೆ ನನಗೆ ದೊರಕ್ಕಿದ್ದರಿಂದ ನಾನು ಧೈರ್ಯವಾಗಿ ನನ್ನೊಂದಿಗೆ ಪ್ರಯಾಣ ಮಾಡುವುದಕ್ಕೆ ಕೆಲವು ಜನ ಇಸ್ರಾಯೇಲ್ ಪ್ರಧಾನರನ್ನು ಕೂಡಿಸಿಕೊಂಡೆನು” ಎಂದು ಹೇಳಿದನು.
A i lokomaikai hoi ia'u imua o ke alii, a me kona poe kakaolelo, a me na luna nui o ke alii. A ua hooikaikaia au ma ka lima o Iehova ko'u Akua maluna o'u; a hoakoakoa ae la au i na luna o ka Iseraela, e pii pu me au.