< ಎಜ್ರನು 9 >

1 ಇದಾದನಂತರ ಪ್ರಧಾನಪುರುಷರು ನನ್ನ ಬಳಿಗೆ ಬಂದು, “ಇಸ್ರಾಯೇಲರಲ್ಲಿ ಸಾಧಾರಣಜನರೂ, ಯಾಜಕರೂ, ಲೇವಿಯರೂ, ಕಾನಾನ್ಯರು, ಹಿತ್ತಿಯರು, ಪೆರಿಜ್ಜೀಯರು, ಯೆಬೂಸಿಯರು, ಅಮ್ಮೋನಿಯರು, ಮೋವಾಬ್ಯರು, ಐಗುಪ್ತ್ಯರು ಮತ್ತು ಅಮೋರಿಯರು ಎಂಬ ಅನ್ಯ ದೇಶಗಳವರ ಬಳಿಕೆಯನ್ನು ತೊರೆಯದೆ ಅವರ ಅಸಹ್ಯಕಾರ್ಯಗಳನ್ನು ಅನುಸರಿಸಿದ್ದಾರೆ.
これらの事がなされた後、つかさたちは、わたしのもとに来て言った、「イスラエルの民、祭司およびレビびとは諸国の民と離れないで、カナンびと、ヘテびと、ペリジびと、エブスびと、アンモンびと、モアブびと、エジプトびと、アモリびとなどの憎むべき事を行いました。
2 ಅವರು ತಮಗೂ ತಮ್ಮ ಗಂಡುಮಕ್ಕಳಿಗೂ ಅವರಿಂದ ಹೆಣ್ಣುಮಕ್ಕಳನ್ನು ತೆಗೆದುಕೊಂಡದ್ದರಿಂದ ದೇವಕುಲವು ಅನ್ಯದೇಶಗಳವರೊಡನೆ ಮಿಶ್ರವಾಯಿತು. ಪ್ರಭುಗಳೂ ಮತ್ತು ಪ್ರಧಾನರೂ ಈ ದ್ರೋಹಕ್ಕೆ ಮುಂದಾಳುಗಳಾದರು” ಎಂದು ತಿಳಿಸಿದರು.
すなわち、彼らの娘たちをみずからめとり、またそのむすこたちにめとったので、聖なる種が諸国の民とまじりました。そしてつかさたる者、長たる者が先だって、このとがを犯しました」。
3 ಈ ವರ್ತಮಾನವನ್ನು ಕೇಳಿದೊಡನೆ ನಾನು ಬಟ್ಟೆಗಳನ್ನು ಮತ್ತು ಮೇಲಂಗಿಗಳನ್ನು ಹರಿದುಕೊಂಡು ತಲೆಯ ಮತ್ತು ಗಡ್ಡದ ಕೂದಲುಗಳನ್ನು ಕಿತ್ತುಕೊಂಡು, ಸ್ತಬ್ಧನಾಗಿ ಕುಳಿತುಕೊಂಡೆನು.
わたしはこの事を聞いた時、着物と上着とを裂き、髪の毛とひげを抜き、驚きあきれてすわった。
4 ಇಸ್ರಾಯೇಲ್ ದೇವರ ವಿಧಿಗಳನ್ನು ಗೌರವಿಸಿದವರೆಲ್ಲರೂ ಸೆರೆಯಿಂದ ಬಂದವರ ದ್ರೋಹದ ಸಲುವಾಗಿ ಕಳವಳಗೊಂಡು ನನ್ನನ್ನು ಕೂಡಿಕೊಂಡರು.
イスラエルの神の言葉におののく者は皆、捕囚から帰って来た人々のとがのゆえに、わたしのもとに集まったが、わたしは夕の供え物の時まで、驚きあきれてすわった。
5 ನಾನು ಸಂಧ್ಯಾ ನೈವೇದ್ಯ ಸಮರ್ಪಣೆಯ ಹೊತ್ತಿನವರೆಗೂ ಸ್ತಬ್ಧನಾಗಿ ಕುಳಿತುಕೊಂಡಿದ್ದೆನು. ಆ ಮೇಲೆ ದೇಹದಂಡನೆಮಾಡುವುದನ್ನು ಬಿಟ್ಟು ಹರಿದ ಬಟ್ಟೆಮೇಲಂಗಿಗಳಿಂದ ಕೂಡಿದವನಾಗಿಯೇ ಮೊಣಕಾಲೂರಿ ನನ್ನ ದೇವರಾದ ಯೆಹೋವನ ಕಡೆಗೆ ಕೈಗಳನ್ನೆತ್ತಿ ಪ್ರಾರ್ಥಿಸಿದ್ದೇನೆಂದರೆ:
夕の供え物の時になって、わたしは断食から立ちあがり、着物と上着を裂いたまま、ひざをかがめて、わが神、主にむかって手をさし伸べて、
6 “ನನ್ನ ದೇವರೇ, ನಾನು ಮನಗುಂದಿದವನಾಗಿದ್ದೇನೆ, ನಿನ್ನ ಕಡೆಗೆ ತಿರುಗಿಕೊಳ್ಳಲು ನಾಚಿಕೊಳ್ಳುತ್ತೇನೆ. ನನ್ನ ದೇವರೇ, ನಮ್ಮ ಪಾಪಗಳು ನಮ್ಮ ತಲೆಮೀರಿ ಬೆಳೆದಿವೆ, ನಮ್ಮ ಅಪರಾಧವು ಆಕಾಶವನ್ನು ಮುಟ್ಟುವಷ್ಟು ದೊಡ್ಡದಾಗಿವೆ.
言った、「わが神よ、わたしはあなたにむかって顔を上げるのを恥じて、赤面します。われわれの不義は積って頭よりも高くなり、われわれのとがは重なって天に達したからです。
7 ನಾವು ನಮ್ಮ ಪೂರ್ವಿಕರ ಕಾಲದಿಂದ ಇಂದಿನ ವರೆಗೂ ಮಹಾಪರಾಧಿಗಳೇ. ನಮ್ಮ ಪಾಪಗಳ ದೆಸೆಯಿಂದ ನಾವೂ, ನಮ್ಮ ಅರಸರೂ ಮತ್ತು ಯಾಜಕರೂ ಅನ್ಯದೇಶಗಳ ರಾಜರ ಕೈಗೆ ಒಪ್ಪಿಸಲ್ಪಟ್ಟು ಈಗಿರುವಂತೆ ಕತ್ತಿಗೂ, ಸೆರೆಗೂ, ಸುಲಿಗೆಗೂ, ಅಪಮಾನಕ್ಕೂ ಗುರಿಯಾದೆವು.
われわれの先祖の日から今日まで、われわれは大いなるとがを負い、われわれの不義によって、われわれとわれわれの王たち、および祭司たちは国々の王たちの手にわたされ、つるぎにかけられ、捕え行かれ、かすめられ、恥をこうむりました。今日のとおりです。
8 ಆದರೂ ನಮ್ಮ ದೇವರಾದ ಯೆಹೋವನು ಒಂದು ಕ್ಷಣ ನಮಗೆ ಪ್ರಸನ್ನನಾಗಿ ನಮ್ಮಲ್ಲಿ ಸ್ವಲ್ಪ ಜನರನ್ನು ರಕ್ಷಣೆಗಾಗಿ ಉಳಿಸಿ ತನ್ನ ಪರಿಶುದ್ಧಸ್ಥಳದಲ್ಲಿ ಮೊಳೆಯಂತೆ ನಮ್ಮನ್ನು ನೆಲೆಗೊಳಿಸಿ, ನಮ್ಮ ಕಣ್ಣುಗಳನ್ನು ಕಳೆಗೊಳಿಸಿ ನಮ್ಮ ದಾಸತ್ವದಲ್ಲಿ ನಮಗೆ ಸ್ವಲ್ಪಮಟ್ಟಿಗೆ ಉಜ್ಜೀವನವನ್ನು ಅನುಗ್ರಹಿಸಿದ್ದಾನೆ.
ところがいま、われわれの神、主は、しばし恵みを施して、のがれ残るべき者をわれわれのうちにおき、その聖所のうちに確かなよりどころを与え、こうしてわれわれの神はわれわれの目を明らかにし、われわれをその奴隷のうちにあって、少しく生き返らせられました。
9 ನಾವು ದಾಸರಾದರೂ ನಮ್ಮ ದೇವರು ನಮ್ಮ ದಾಸತ್ವದಲ್ಲಿ ನಮ್ಮನ್ನು ಕೈಬಿಡಲಿಲ್ಲ; ಹಾಳುಬಿದ್ದ ನಮ್ಮ ದೇವರ ಆಲಯವನ್ನು ಪುನಃ ಕಟ್ಟಿ ಭದ್ರಪಡಿಸುವುದಕ್ಕೋಸ್ಕರ ನಮಗೆ ಉಜ್ಜೀವನ ಪ್ರಾಪ್ತವಾಗುವಂತೆಯೂ, ಯೆಹೂದದಲ್ಲಿಯೂ ಮತ್ತು ಯೆರೂಸಲೇಮಿನಲ್ಲಿಯೂ ನಮಗೆ ಅಭಯಾಶ್ರಯ ಸಿಕ್ಕುವಂತೆಯೂ ಪರ್ಷಿಯ ರಾಜರ ಮುಂದೆ ನಮಗೆ ಕೃಪೆಯನ್ನು ಅನುಗ್ರಹಿಸಿದ್ದಾನೆ.
われわれは奴隷の身でありますが、その奴隷たる時にも神はわれわれを見捨てられず、かえってペルシャ王たちの目の前でいつくしみを施して、われわれを生き返らせ、われわれの神の宮を建てさせ、その破壊をつくろわせ、ユダとエルサレムでわれわれに保護を与えられました。
10 ೧೦ ಇಷ್ಟು ಉಪಕಾರವನ್ನು ಪಡೆದ ನಾವು ಏನು ಅರಿಕೆಮಾಡಿಕೊಳ್ಳಲು ಸಾಧ್ಯ? ನಮ್ಮ ದೇವರೇ, ನಿನ್ನ ಆಜ್ಞೆಗಳನ್ನು ಉಲ್ಲಂಘಿಸಿದ್ದೇವೆ.
われわれの神よ、この後、何を言うことができましょう。われわれは、あなたの戒めを捨てたからです。
11 ೧೧ ನೀನು ನಿನ್ನ ಸೇವಕರಾದ ಪ್ರವಾದಿಗಳ ಮುಖಾಂತರ ನಮಗೆ, ‘ನೀವು ಸ್ವತಂತ್ರಿಸಿಕೊಳ್ಳುವುದಕ್ಕೆ ಹೋಗುವ ದೇಶವು ಅನ್ಯದೇಶಗಳವರ ಅಶುದ್ಧತ್ವದಿಂದಲೂ, ಅವರ ವಿಗ್ರಹಗಳಿಂದಲೂ ಮಲಿನವಾಗಿದೆ. ಆ ದೇಶವು ಎಲ್ಲೆಲ್ಲೂ ಆ ವಿಗ್ರಹಗಳ ಅಸಹ್ಯತೆಯಿಂದ ತುಂಬಿರುತ್ತದೆ.
あなたはかつて、あなたのしもべである預言者たちによって命じて仰せられました、『おまえたちが行って獲ようとする地は、各地の民の汚れにより、その憎むべきわざによって汚れた地で、この果から、かの果まで、その汚れに満ちている。
12 ೧೨ ಹೀಗಿರಲಾಗಿ ನೀವು ನಿಮ್ಮ ಹೆಣ್ಣುಮಕ್ಕಳನ್ನು ಅವರ ಗಂಡುಮಕ್ಕಳಿಗೆ ಕೊಡಲೂ ಬಾರದು, ನಿಮ್ಮ ಗಂಡುಮಕ್ಕಳಿಗೋಸ್ಕರ ಅವರ ಹೆಣ್ಣು ಮಕ್ಕಳನ್ನು ತೆಗೆದುಕೊಳ್ಳಲೂ ಬಾರದು, ಅವರಿಗೋಸ್ಕರ ಸುಖಕ್ಷೇಮಗಳನ್ನು ಎಂದಿಗೂ ಬಯಸಬಾರದು. ಈ ಪ್ರಕಾರ ನಡೆದರೆ ನೀವು ಬಲಗೊಂಡು ಆ ದೇಶದ ಸಮೃದ್ಧಿಯನ್ನು ಅನುಭವಿಸಿ, ಅದನ್ನು ನಿಮ್ಮ ಸಂತಾನದವರಿಗೆ ಶಾಶ್ವತಸ್ವಾಸ್ಥ್ಯವನ್ನಾಗಿ ಬಿಡುವಿರಿ’ ಎಂದು ಹೇಳಿದಿಯಲ್ಲಾ.
それでおまえたちの娘を、彼らのむすこに与えてはならない。彼らの娘を、おまえたちのむすこにめとってはならない。また永久に彼らの平安をも福祉をも求めてはならない。そうすればおまえたちは強くなり、その地の良き物を食べ、これを永久におまえたちの子孫に伝えて嗣業とさせることができる』と。
13 ೧೩ ನಮ್ಮ ದುಷ್ಕರ್ಮ ಮಹಾಪರಾಧಗಳ ನಿಮಿತ್ತವಾಗಿ ಇಷ್ಟೆಲ್ಲಾ ಕೇಡು ಬಂದರೂ ನಮ್ಮ ದೇವರಾದ ನೀನು ನಮ್ಮ ಪಾಪಗಳಿಗೆ ತಕ್ಕಂತೆ ನಮ್ಮನ್ನು ದಂಡಿಸದೆ, ನಮ್ಮಲ್ಲಿ ಇಷ್ಟು ಜನರನ್ನು ಉಳಿಸಿದಿ.
われわれの悪い行いにより、大いなるとがによって、これらすべてのことが、すでにわれわれに臨みましたが、われわれの神なるあなたは、われわれの不義よりも軽い罰をくだして、このように残りの者を与えてくださったのを見ながら、
14 ೧೪ ಹೀಗಿರುವಲ್ಲಿ ನಾವು ತಿರುಗಿ ನಿನ್ನ ಆಜ್ಞೆಗಳನ್ನು ಮೀರಿ ವಿಗ್ರಹಾರಾಧಕರಾದ ಈ ಜನರ ಸಂಗಡ ಬೀಗತನ ಮಾಡುವುದು ಯೋಗ್ಯವೋ? ಹಾಗೆ ಮಾಡಿದರೆ ನೀನು ನಮ್ಮ ಮೇಲೆ ರೌದ್ರಾವೇಶವುಳ್ಳವನಾಗಿ ಯಾರೂ ತಪ್ಪಿಸಿಕೊಂಡು ಉಳಿಯದಂತೆ ನಮ್ಮನ್ನು ಮುಗಿಸಿಬಿಡುವಿಯಲ್ಲವೋ?
われわれは再びあなたの命令を破って、これらの憎むべきわざを行う民と縁を結んでよいでしょうか。あなたはわれわれを怒って、ついに滅ぼし尽し、残る者も、のがれる者もないようにされるのではないでしょうか。
15 ೧೫ ಯೆಹೋವನೇ, ಇಸ್ರಾಯೇಲ್ ದೇವರೇ, ಈಗಿರುವಷ್ಟು ಜನರನ್ನು ನಮ್ಮಲ್ಲಿ ಉಳಿಸಿದ್ದರಿಂದ ನೀನು ಧರ್ಮಸ್ವರೂಪನೆಂದು ಪ್ರಕಟವಾಯಿತು. ನಾವಾದರೋ ನಿನ್ನ ದೃಷ್ಟಿಯಲ್ಲಿ ಅಪರಾಧಿಗಳು. ಈ ನಮ್ಮ ದುಷ್ಕೃತ್ಯದ ನಿಮಿತ್ತವಾಗಿ ನಿನ್ನೆದುರಿನಲ್ಲಿ ನಿಲ್ಲಲಾರೆವು” ಎಂದು ಬೇಡಿಕೊಂಡೆನು.
ああ、イスラエルの神、主よ、あなたは正しくいらせられます。われわれはのがれて残ること今日のとおりです。われわれは、とがをもってあなたの前にあります。それゆえだれもあなたの前に立つことはできません」。

< ಎಜ್ರನು 9 >