< ಎಜ್ರನು 9 >
1 ೧ ಇದಾದನಂತರ ಪ್ರಧಾನಪುರುಷರು ನನ್ನ ಬಳಿಗೆ ಬಂದು, “ಇಸ್ರಾಯೇಲರಲ್ಲಿ ಸಾಧಾರಣಜನರೂ, ಯಾಜಕರೂ, ಲೇವಿಯರೂ, ಕಾನಾನ್ಯರು, ಹಿತ್ತಿಯರು, ಪೆರಿಜ್ಜೀಯರು, ಯೆಬೂಸಿಯರು, ಅಮ್ಮೋನಿಯರು, ಮೋವಾಬ್ಯರು, ಐಗುಪ್ತ್ಯರು ಮತ್ತು ಅಮೋರಿಯರು ಎಂಬ ಅನ್ಯ ದೇಶಗಳವರ ಬಳಿಕೆಯನ್ನು ತೊರೆಯದೆ ಅವರ ಅಸಹ್ಯಕಾರ್ಯಗಳನ್ನು ಅನುಸರಿಸಿದ್ದಾರೆ.
जब ये सब काम हो चुके तो सरदारों ने मेरे पास आकर कहा कि इस्राईल के लोग और काहिन और लावी इन अतराफ़ की क़ौमों से अलग नहीं रहे, क्यूँकि कना'नियों और हित्तियों और फ़रिज़्ज़ियों और यबूसियों 'अम्मोनियों और मोआबियों और मिस्रियों और अमोरियों के से नफ़रती काम करते हैं।
2 ೨ ಅವರು ತಮಗೂ ತಮ್ಮ ಗಂಡುಮಕ್ಕಳಿಗೂ ಅವರಿಂದ ಹೆಣ್ಣುಮಕ್ಕಳನ್ನು ತೆಗೆದುಕೊಂಡದ್ದರಿಂದ ದೇವಕುಲವು ಅನ್ಯದೇಶಗಳವರೊಡನೆ ಮಿಶ್ರವಾಯಿತು. ಪ್ರಭುಗಳೂ ಮತ್ತು ಪ್ರಧಾನರೂ ಈ ದ್ರೋಹಕ್ಕೆ ಮುಂದಾಳುಗಳಾದರು” ಎಂದು ತಿಳಿಸಿದರು.
चुनाँचे उन्होंने अपने और अपने बेटों के लिए उनकी बेटियाँ ली हैं; इसलिए मुक़द्दस नसल इन अतराफ़ की क़ौमों के साथ ख़ल्त — मल्त हो गई, और सरदारों और हाकिमों का हाथ इस बदकारी में सब से बढ़ा हुआ है।
3 ೩ ಈ ವರ್ತಮಾನವನ್ನು ಕೇಳಿದೊಡನೆ ನಾನು ಬಟ್ಟೆಗಳನ್ನು ಮತ್ತು ಮೇಲಂಗಿಗಳನ್ನು ಹರಿದುಕೊಂಡು ತಲೆಯ ಮತ್ತು ಗಡ್ಡದ ಕೂದಲುಗಳನ್ನು ಕಿತ್ತುಕೊಂಡು, ಸ್ತಬ್ಧನಾಗಿ ಕುಳಿತುಕೊಂಡೆನು.
जब मैंने ये बात सुनी तो अपने लिबास और अपनी चादर को फाड़ दिया, और सिर और दाढ़ी के बाल नोचे और हैरान हो बैठा।
4 ೪ ಇಸ್ರಾಯೇಲ್ ದೇವರ ವಿಧಿಗಳನ್ನು ಗೌರವಿಸಿದವರೆಲ್ಲರೂ ಸೆರೆಯಿಂದ ಬಂದವರ ದ್ರೋಹದ ಸಲುವಾಗಿ ಕಳವಳಗೊಂಡು ನನ್ನನ್ನು ಕೂಡಿಕೊಂಡರು.
तब वह सब जो इस्राईल के ख़ुदा की बातों से काँपते थे, ग़ुलामों की इस बदकारी के ज़रिए' मेरे पास जमा' हुए; और मैं शाम की क़ुर्बानी तक हैरान बैठा रहा।
5 ೫ ನಾನು ಸಂಧ್ಯಾ ನೈವೇದ್ಯ ಸಮರ್ಪಣೆಯ ಹೊತ್ತಿನವರೆಗೂ ಸ್ತಬ್ಧನಾಗಿ ಕುಳಿತುಕೊಂಡಿದ್ದೆನು. ಆ ಮೇಲೆ ದೇಹದಂಡನೆಮಾಡುವುದನ್ನು ಬಿಟ್ಟು ಹರಿದ ಬಟ್ಟೆಮೇಲಂಗಿಗಳಿಂದ ಕೂಡಿದವನಾಗಿಯೇ ಮೊಣಕಾಲೂರಿ ನನ್ನ ದೇವರಾದ ಯೆಹೋವನ ಕಡೆಗೆ ಕೈಗಳನ್ನೆತ್ತಿ ಪ್ರಾರ್ಥಿಸಿದ್ದೇನೆಂದರೆ:
और शाम की क़ुर्बानी के वक़्त मैं अपना फटा लिबास पहने, और अपनी फटी चादर ओढ़े हुए अपनी शर्मिन्दगी की हालत से उठा, और अपने घुटनों पर गिर कर ख़ुदावन्द अपने ख़ुदा की तरफ़ अपने हाथ फैलाए,
6 ೬ “ನನ್ನ ದೇವರೇ, ನಾನು ಮನಗುಂದಿದವನಾಗಿದ್ದೇನೆ, ನಿನ್ನ ಕಡೆಗೆ ತಿರುಗಿಕೊಳ್ಳಲು ನಾಚಿಕೊಳ್ಳುತ್ತೇನೆ. ನನ್ನ ದೇವರೇ, ನಮ್ಮ ಪಾಪಗಳು ನಮ್ಮ ತಲೆಮೀರಿ ಬೆಳೆದಿವೆ, ನಮ್ಮ ಅಪರಾಧವು ಆಕಾಶವನ್ನು ಮುಟ್ಟುವಷ್ಟು ದೊಡ್ಡದಾಗಿವೆ.
और कहा, ऐ मेरे ख़ुदा, मैं शर्मिन्दा हूँ, और तेरी तरफ़, ऐ मेरे ख़ुदा, अपना मुँह उठाते मुझे शर्म आती है; क्यूँकि हमारे गुनाह बढ़ते बढ़ते हमारे सिर से बुलन्द हो गए, और हमारी ख़ताकारी आसमान तक पहुँच गई है।
7 ೭ ನಾವು ನಮ್ಮ ಪೂರ್ವಿಕರ ಕಾಲದಿಂದ ಇಂದಿನ ವರೆಗೂ ಮಹಾಪರಾಧಿಗಳೇ. ನಮ್ಮ ಪಾಪಗಳ ದೆಸೆಯಿಂದ ನಾವೂ, ನಮ್ಮ ಅರಸರೂ ಮತ್ತು ಯಾಜಕರೂ ಅನ್ಯದೇಶಗಳ ರಾಜರ ಕೈಗೆ ಒಪ್ಪಿಸಲ್ಪಟ್ಟು ಈಗಿರುವಂತೆ ಕತ್ತಿಗೂ, ಸೆರೆಗೂ, ಸುಲಿಗೆಗೂ, ಅಪಮಾನಕ್ಕೂ ಗುರಿಯಾದೆವು.
अपने बाप — दादा के वक़्त से आज तक हम बड़े ख़ताकार रहे; और अपनी बदकारी के ज़रिए' हम और हमारे बादशाह और हमारे काहिन, और मुल्कों के बादशाहों और तलवार और ग़ुलामी और ग़ारत और शर्मिन्दगी के हवाले हुए हैं, जैसा आज के दिन है।
8 ೮ ಆದರೂ ನಮ್ಮ ದೇವರಾದ ಯೆಹೋವನು ಒಂದು ಕ್ಷಣ ನಮಗೆ ಪ್ರಸನ್ನನಾಗಿ ನಮ್ಮಲ್ಲಿ ಸ್ವಲ್ಪ ಜನರನ್ನು ರಕ್ಷಣೆಗಾಗಿ ಉಳಿಸಿ ತನ್ನ ಪರಿಶುದ್ಧಸ್ಥಳದಲ್ಲಿ ಮೊಳೆಯಂತೆ ನಮ್ಮನ್ನು ನೆಲೆಗೊಳಿಸಿ, ನಮ್ಮ ಕಣ್ಣುಗಳನ್ನು ಕಳೆಗೊಳಿಸಿ ನಮ್ಮ ದಾಸತ್ವದಲ್ಲಿ ನಮಗೆ ಸ್ವಲ್ಪಮಟ್ಟಿಗೆ ಉಜ್ಜೀವನವನ್ನು ಅನುಗ್ರಹಿಸಿದ್ದಾನೆ.
अब थोड़े दिनों से ख़ुदावन्द हमारे ख़ुदा की तरफ़ से हम पर फ़ज़ल हुआ है, ताकि हमारा कुछ बक़िया बच निकलने को छूटे, और उसके मकान — ए — मुक़द्दस में हम को एक खूँटी मिले, और हमारा ख़ुदा हमारी आँखें रोशन करे और हमारी ग़ुलामी में हम को कुछ ताज़गी बख़्शे।
9 ೯ ನಾವು ದಾಸರಾದರೂ ನಮ್ಮ ದೇವರು ನಮ್ಮ ದಾಸತ್ವದಲ್ಲಿ ನಮ್ಮನ್ನು ಕೈಬಿಡಲಿಲ್ಲ; ಹಾಳುಬಿದ್ದ ನಮ್ಮ ದೇವರ ಆಲಯವನ್ನು ಪುನಃ ಕಟ್ಟಿ ಭದ್ರಪಡಿಸುವುದಕ್ಕೋಸ್ಕರ ನಮಗೆ ಉಜ್ಜೀವನ ಪ್ರಾಪ್ತವಾಗುವಂತೆಯೂ, ಯೆಹೂದದಲ್ಲಿಯೂ ಮತ್ತು ಯೆರೂಸಲೇಮಿನಲ್ಲಿಯೂ ನಮಗೆ ಅಭಯಾಶ್ರಯ ಸಿಕ್ಕುವಂತೆಯೂ ಪರ್ಷಿಯ ರಾಜರ ಮುಂದೆ ನಮಗೆ ಕೃಪೆಯನ್ನು ಅನುಗ್ರಹಿಸಿದ್ದಾನೆ.
क्यूँकि हम तो ग़ुलाम हैं लेकिन हमारे ख़ुदा ने हमारी ग़ुलामी में हम को छोड़ा नहीं, बल्कि हम को ताज़गी बख़्शने और अपने ख़ुदा के घर को बनाने और उसके खण्डरों की मरम्मत करने, और यहूदाह और येरूशलेम में हम को शहर — ए — पनाह देने को फ़ारस के बादशाहों के सामने हम पर रहमत की।
10 ೧೦ ಇಷ್ಟು ಉಪಕಾರವನ್ನು ಪಡೆದ ನಾವು ಏನು ಅರಿಕೆಮಾಡಿಕೊಳ್ಳಲು ಸಾಧ್ಯ? ನಮ್ಮ ದೇವರೇ, ನಿನ್ನ ಆಜ್ಞೆಗಳನ್ನು ಉಲ್ಲಂಘಿಸಿದ್ದೇವೆ.
और अब ऐ हमारे ख़ुदा, हम इसके बाद क्या कहें? क्यूँकि हम ने तेरे उन हुक्मों को छोड़ दिया है,
11 ೧೧ ನೀನು ನಿನ್ನ ಸೇವಕರಾದ ಪ್ರವಾದಿಗಳ ಮುಖಾಂತರ ನಮಗೆ, ‘ನೀವು ಸ್ವತಂತ್ರಿಸಿಕೊಳ್ಳುವುದಕ್ಕೆ ಹೋಗುವ ದೇಶವು ಅನ್ಯದೇಶಗಳವರ ಅಶುದ್ಧತ್ವದಿಂದಲೂ, ಅವರ ವಿಗ್ರಹಗಳಿಂದಲೂ ಮಲಿನವಾಗಿದೆ. ಆ ದೇಶವು ಎಲ್ಲೆಲ್ಲೂ ಆ ವಿಗ್ರಹಗಳ ಅಸಹ್ಯತೆಯಿಂದ ತುಂಬಿರುತ್ತದೆ.
जो तू ने अपने ख़ादिमों या'नी नबियों के ज़रिए' फ़रमाए कि वह मुल्क जिसे तुम मीरास में लेने को जाते हो और मुल्कों की क़ौमों की नापाकी और नफ़रती कामों की वजह से नापाक मुल्क है, क्यूँकि उन्होंने अपनी नापाकी से उसको इस सिरे से उस सिरे तक भर दिया है।
12 ೧೨ ಹೀಗಿರಲಾಗಿ ನೀವು ನಿಮ್ಮ ಹೆಣ್ಣುಮಕ್ಕಳನ್ನು ಅವರ ಗಂಡುಮಕ್ಕಳಿಗೆ ಕೊಡಲೂ ಬಾರದು, ನಿಮ್ಮ ಗಂಡುಮಕ್ಕಳಿಗೋಸ್ಕರ ಅವರ ಹೆಣ್ಣು ಮಕ್ಕಳನ್ನು ತೆಗೆದುಕೊಳ್ಳಲೂ ಬಾರದು, ಅವರಿಗೋಸ್ಕರ ಸುಖಕ್ಷೇಮಗಳನ್ನು ಎಂದಿಗೂ ಬಯಸಬಾರದು. ಈ ಪ್ರಕಾರ ನಡೆದರೆ ನೀವು ಬಲಗೊಂಡು ಆ ದೇಶದ ಸಮೃದ್ಧಿಯನ್ನು ಅನುಭವಿಸಿ, ಅದನ್ನು ನಿಮ್ಮ ಸಂತಾನದವರಿಗೆ ಶಾಶ್ವತಸ್ವಾಸ್ಥ್ಯವನ್ನಾಗಿ ಬಿಡುವಿರಿ’ ಎಂದು ಹೇಳಿದಿಯಲ್ಲಾ.
इसलिए तुम अपनी बेटियाँ उनके बेटों को न देना और उनकी बेटियाँ अपने बेटों के लिए न लेना, और न कभी उनकी सलामती या भलाई चाहना, ताकि तुम मज़बूत बनो और उस मुल्क की अच्छी — अच्छी चीज़ें खाओ, और अपनी औलाद के वास्ते हमेशा की मीरास के लिए उसे छोड़ जाओ।
13 ೧೩ ನಮ್ಮ ದುಷ್ಕರ್ಮ ಮಹಾಪರಾಧಗಳ ನಿಮಿತ್ತವಾಗಿ ಇಷ್ಟೆಲ್ಲಾ ಕೇಡು ಬಂದರೂ ನಮ್ಮ ದೇವರಾದ ನೀನು ನಮ್ಮ ಪಾಪಗಳಿಗೆ ತಕ್ಕಂತೆ ನಮ್ಮನ್ನು ದಂಡಿಸದೆ, ನಮ್ಮಲ್ಲಿ ಇಷ್ಟು ಜನರನ್ನು ಉಳಿಸಿದಿ.
और हमारे बुरे कामों और बड़े गुनाह की वजह से जो कुछ हम पर गुज़रा, उसके बाद ऐ हमारे ख़ुदा, हक़ीक़त ये है कि तू ने हमारे गुनाहों के अन्दाज़े से हम को कम सज़ा दी और हम में से ऐसा बक़िया छोड़ा;
14 ೧೪ ಹೀಗಿರುವಲ್ಲಿ ನಾವು ತಿರುಗಿ ನಿನ್ನ ಆಜ್ಞೆಗಳನ್ನು ಮೀರಿ ವಿಗ್ರಹಾರಾಧಕರಾದ ಈ ಜನರ ಸಂಗಡ ಬೀಗತನ ಮಾಡುವುದು ಯೋಗ್ಯವೋ? ಹಾಗೆ ಮಾಡಿದರೆ ನೀನು ನಮ್ಮ ಮೇಲೆ ರೌದ್ರಾವೇಶವುಳ್ಳವನಾಗಿ ಯಾರೂ ತಪ್ಪಿಸಿಕೊಂಡು ಉಳಿಯದಂತೆ ನಮ್ಮನ್ನು ಮುಗಿಸಿಬಿಡುವಿಯಲ್ಲವೋ?
क्या हम फिर तेरे हुक्मों को तोड़ें, और उन क़ौमों से नाता जोड़ें जो इन नफ़रती कामों को करती हैं? क्या तू हम से ऐसा ग़ुस्सा न होगा कि हम को बर्बाद कर दे, यहाँ तक कि न कोई बक़िया रहे और न कोई बचे?
15 ೧೫ ಯೆಹೋವನೇ, ಇಸ್ರಾಯೇಲ್ ದೇವರೇ, ಈಗಿರುವಷ್ಟು ಜನರನ್ನು ನಮ್ಮಲ್ಲಿ ಉಳಿಸಿದ್ದರಿಂದ ನೀನು ಧರ್ಮಸ್ವರೂಪನೆಂದು ಪ್ರಕಟವಾಯಿತು. ನಾವಾದರೋ ನಿನ್ನ ದೃಷ್ಟಿಯಲ್ಲಿ ಅಪರಾಧಿಗಳು. ಈ ನಮ್ಮ ದುಷ್ಕೃತ್ಯದ ನಿಮಿತ್ತವಾಗಿ ನಿನ್ನೆದುರಿನಲ್ಲಿ ನಿಲ್ಲಲಾರೆವು” ಎಂದು ಬೇಡಿಕೊಂಡೆನು.
ऐ ख़ुदावन्द, इस्राईल के ख़ुदा! तू सादिक़ है, क्यूँकि हम एक बक़िया हैं जो बच निकला है, जैसा आज के दिन है। देख, हम अपनी ख़ताकारी में तेरे सामने हाज़िर हैं, क्यूँकि इसी वजह से कोई तेरे सामने खड़ा रह नहीं सकता।