< ಗಲಾತ್ಯದವರಿಗೆ ಬರೆದ ಪತ್ರಿಕೆ 2 >
1 ೧ ಹದಿನಾಲ್ಕು ವರ್ಷಗಳ ನಂತರ ನಾನು ಬಾರ್ನಬನ ಜೊತೆಯಲ್ಲಿ ತೀತನನ್ನು ಸಹ ಕರೆದುಕೊಂಡು, ಮತ್ತೊಮ್ಮೆ ಯೆರೂಸಲೇಮಿಗೆ ಹೋದೆನು.
Then after the space of fourteen years I went up again to Jerusalem with Barnabas, taking Titus with me.
2 ೨ ದೈವಪ್ರೇರಣೆಗೆ ಅನುಸಾರವಾಗಿ ಹೋಗಿ, ಅನ್ಯಜನರಲ್ಲಿ ನಾನು ಸಾರುವ ಸುವಾರ್ತೆಯು ಏನೆಂಬುದನ್ನು ಅಲ್ಲಿದ್ದ ಗಣ್ಯರಿಗೆ ಪ್ರತ್ಯೇಕವಾಗಿ ತಿಳಿಸಿದೆನು. ಏಕೆಂದರೆ ನಾನು ಸುವಾರ್ತೆಗಾಗಿ ಪಟ್ಟ ಶ್ರಮವಾಗಲಿ, ಈಗ ಪಡುತ್ತಿರುವ ಶ್ರಮವಾಗಲಿ ನಿಷ್ಫಲವಾಗಬಾರದೆಂದು ತಿಳಿಸಿದೆನು.
And I went up by revelation; and I put before them the good news which I was preaching among the Gentiles, but privately before those who were of good name, so that the work which I was or had been doing might not be without effect.
3 ೩ ನನ್ನ ಜೊತೆಯಲ್ಲಿದ್ದ ತೀತನು ಗ್ರೀಕನಾಗಿದ್ದರೂ ಅವನಿಗೆ ಸುನ್ನತಿಯಾಗಬೇಕೆಂದು ಯಾರೂ ಒತ್ತಾಯಮಾಡಲಿಲ್ಲ.
But not even Titus who was with me, being a Greek, was made to undergo circumcision:
4 ೪ ಆದರೆ ರಹಸ್ಯವಾಗಿ ಒಳಗೆ ಬಂದಿದ್ದ ಸುಳ್ಳು ಸಹೋದರರು ನಮ್ಮನ್ನು ಧರ್ಮಶಾಸ್ತ್ರದ ದಾಸತ್ವದಲ್ಲಿ ಸಿಕ್ಕಿಸಬೇಕೆಂದು, ಕ್ರಿಸ್ತ ಯೇಸುವಿನಲ್ಲಿರುವ ನಮ್ಮ ಸ್ವಾತಂತ್ರ್ಯವನ್ನು ಗೂಢವಾಗಿ ವಿಚಾರಿಸಲು ಬಂದಿದ್ದರು.
And that because of the false brothers let in secretly, who came searching out our free condition which we have in Christ Jesus, so that they might make servants of us;
5 ೫ ಸುವಾರ್ತೆಯ ಸತ್ಯಾರ್ಥವು ನಿಮ್ಮಲ್ಲಿ ಸ್ಥಿರವಾಗಿರಬೇಕೆಂದು ನಾವು ಅವರ ಅಧೀನಕ್ಕೆ ಒಂದು ಗಳಿಗೆಯೂ ಒಳಪಡಲಿಲ್ಲ.
To whom we gave way not even for an hour; so that the true words of the good news might still be with you.
6 ೬ ಆದರೆ ಗಣ್ಯವ್ಯಕ್ತಿಗಳಾಗಿದ್ದವರಿಂದ ನನಗೇನೂ ದೊರೆಯಲಿಲ್ಲ. ಅವರು ಹಿಂದಿನ ಕಾಲದಲ್ಲಿ ಎಂಥವರಾಗಿದ್ದರೋ ನನಗೆ ಲಕ್ಷ್ಯವಿಲ್ಲ. ದೇವರಿಗೆ ಮನುಷ್ಯರನ್ನು ಮೆಚ್ಚಿಸಬೇಕಾಗಿಲ್ಲ. ಗಣ್ಯವ್ಯಕ್ತಿಗಳೆಂದು ಎನಿಸಿಕೊಂಡವರು ನನಗೇನನ್ನೂ ತಿಳಿಸಿಕೊಡಲಿಲ್ಲ.
But from those who seemed to be important (whatever they were has no weight with me: God does not take man's person into account): those who seemed to be important gave nothing new to me;
7 ೭ ಆದರೆ ಸುನ್ನತಿಯಾದವರಿಗೆ ಸುವಾರ್ತೆಯನ್ನು ಸಾರುವ ಕೆಲಸವು ಹೇಗೆ ಪೇತ್ರನಿಗೆ ಕೊಡಲ್ಪಟ್ಟಿತೋ, ಹಾಗೆಯೇ ಅನ್ಯಜನರಿಗೆ ಅದನ್ನು ಸಾರುವ ಕಾರ್ಯವನ್ನು ನನಗೆ ಕೊಡಲ್ಪಟ್ಟಿತು.
But, quite the opposite, when they saw that I had been made responsible for preaching the good news to those without circumcision, even as Peter had been for those of the circumcision
8 ೮ ಸುನ್ನತಿಯಾದವರಲ್ಲಿ ಅಪೊಸ್ತಲತನವನ್ನು ನಡೆಸುವುದಕ್ಕೋಸ್ಕರ ಪೇತ್ರನಿಗೆ ವಹಿಸಿಕೊಟ್ಟಂಥ ದೇವರು, ಸುನ್ನತಿಯಿಲ್ಲದವರಲ್ಲಿ ಅದನ್ನು ನಡೆಸುವುದಕ್ಕಾಗಿ ನನಗೆ ವಹಿಸಿದ್ದನು.
(Because he who was working in Peter as the Apostle of the circumcision was working no less in me among the Gentiles);
9 ೯ ಸಭೆಯ ಸ್ತಂಭಗಳೆಂದು ಕರೆಸಿಕೊಂಡಿರುವ ಯಾಕೋಬ, ಕೇಫ, ಯೋಹಾನರು ದೇವರು ನನಗೆ ದಯಪಾಲಿಸಿರುವ ವರವನ್ನು ತಿಳಿದುಕೊಂಡು, ಅನ್ಯೋನ್ಯತೆಯನ್ನು ತೋರಿಸುವುದಕ್ಕಾಗಿ ನನಗೂ ಬಾರ್ನಬನಿಗೂ ಸಹಕಾರ ನೀಡಿ ಬಲಗೈ ಕೊಟ್ಟು, ನೀವು ಅನ್ಯಜನಗಳ ಬಳಿಗೆ ಹೋಗಿರಿ, ನಾವು ಸುನ್ನತಿಯವರ ಬಳಿಗೆ ಹೋಗುತ್ತೇವೆ ಅಂದರು.
When they saw the grace which was given to me, James and Cephas and John, who had the name of being pillars, gave to me and Barnabas their right hands as friends so that we might go to the Gentiles, and they to the circumcision;
10 ೧೦ ಆದರೆ ನೀವು ನಮ್ಮಲ್ಲಿರುವ ಬಡವರನ್ನು ಮರೆಯಬಾರದೆಂಬ ಒಂದೇ ಸಂಗತಿಯನ್ನು ಬೇಡಿಕೊಂಡರು, ಹಾಗೆ ಮಾಡುವುದರಲ್ಲಿ ನಾನೂ ಆಸಕ್ತನಾಗಿದ್ದೆನು.
Only it was their desire that we would give thought to the poor; which very thing I had much in mind to do.
11 ೧೧ ಕೇಫನು ಅಂತಿಯೋಕ್ಯಕ್ಕೆ ಬಂದಾಗ ಅವನಲ್ಲಿ ತಪ್ಪು ಕಾಣಿಸಿಕೊಂಡದ್ದರಿಂದ ನಾನು ಅವನನ್ನು ಮುಖಾಮುಖಿಯಾಗಿ ಖಂಡಿಸಿದೆನು.
But when Cephas came to Antioch, I made a protest against him to his face, because he was clearly in the wrong.
12 ೧೨ ಏಕೆಂದರೆ ಯಾಕೋಬನ ಕಡೆಯಿಂದ ಕೆಲವರು ಬರುವುದಕ್ಕೆ ಮೊದಲು ಅವನು ಅನ್ಯಜನರೊಂದಿಗೆ ಊಟ ಮಾಡುತ್ತಿದ್ದನು. ಅವರು ಬಂದ ಮೇಲೆ ಸುನ್ನತಿಯವರಾದ ಅವರಿಗೆ ಅವನು ಭಯಪಟ್ಟು, ಅನ್ಯಜನರನ್ನು ಬಿಟ್ಟು ತನ್ನನ್ನು ಪ್ರತ್ಯೇಕಿಸಿಕೊಂಡನು.
For before certain men came from James, he did take food with the Gentiles: but when they came, he went back and made himself separate, fearing those who were of the circumcision.
13 ೧೩ ಇದಲ್ಲದೆ ಉಳಿದ ಯೆಹೂದ್ಯರೂ ಅವನೊಂದಿಗೆ ಸೇರಿ ಹಾಗೆಯೇ ಕಪಟತನದಿಂದ ವರ್ತಿಸಿದರು. ಹೀಗೆ ಬಾರ್ನಬನೂ ಅವರ ಕಪಟದ ಸೆಳವಿಗೆ ಬಿದ್ದನು.
And the rest of the Jews went after him, so that even Barnabas was overcome by their false ways.
14 ೧೪ ಅವರು ಸುವಾರ್ತೆಯ ಸತ್ಯಾರ್ಥದ ಪ್ರಕಾರ ಸರಿಯಾಗಿ ನಡೆಯುತ್ತಿಲ್ಲವೆಂಬುದನ್ನು ನಾನು ಕಂಡಾಗ ಎಲ್ಲರ ಮುಂದೆ ಕೇಫನಿಗೆ ಹೇಳಿದ್ದೇನಂದರೆ, “ನೀನು ಯೆಹೂದ್ಯನಾಗಿದ್ದು ಯೆಹೂದ್ಯರಂತೆ ನಡೆಯದೆ ಅನ್ಯಜನರಂತೆ ಬದುಕಿ, ಅನ್ಯಜನರಿಗೆ, ನೀವು ಯೆಹೂದ್ಯರಂತೆ ನಡೆದುಕೊಳ್ಳಬೇಕೆಂದು ಒತ್ತಾಯಪಡಿಸಿ ಹೇಳುವುದಾದರೂ ಹೇಗೆ?”
But when I saw that they were not living uprightly in agreement with the true words of the good news, I said to Cephas before them all, If you, being a Jew, are living like the Gentiles, and not like the Jews, how will you make the Gentiles do the same as the Jews?
15 ೧೫ ನಾವಂತೂ ಜನ್ಮತ ಯೆಹೂದ್ಯರು “ಪಾಪಿಗಳೆನಿಸಿಕೊಂಡ ಅನ್ಯಜನರಲ್ಲ.”
We being Jews by birth, and not sinners of the Gentiles,
16 ೧೬ ಯಾವನಾದರೂ ಯೇಸು ಕ್ರಿಸ್ತನ ಮೇಲೆ ನಂಬಿಕೆ ಇಡುವುದರಿಂದಲೇ ಹೊರತು ಧರ್ಮಶಾಸ್ತ್ರದ ನೇಮನಿಷ್ಠೆಗಳನ್ನು ಅನುಸರಿಸುವುದರಿಂದ ನೀತಿವಂತನೆಂದು ನಿರ್ಣಯಿಸಲ್ಪಡುವುದಿಲ್ಲವೆಂಬುದು ನಮಗೆ ತಿಳಿದಿರುವುದರಿಂದ ನಾವು ಸಹ ಧರ್ಮಶಾಸ್ತ್ರದ ನೇಮನಿಷ್ಠೆಗಳನ್ನು ಬಿಟ್ಟು ಕ್ರಿಸ್ತ ಯೇಸುವಿನಲ್ಲಿ ನಂಬಿಕೆಯಿಟ್ಟೆವು. ಏಕೆಂದರೆ ಯಾರೂ ಧರ್ಮಶಾಸ್ತ್ರದ ನೇಮನಿಷ್ಠೆಗಳನ್ನನುಸರಿಸಿ ನೀತಿವಂತನೆಂದು ನಿರ್ಣಯಿಸಲ್ಪಡುವುದಿಲ್ಲ.
Being conscious that a man does not get righteousness by the works of the law, but through faith in Jesus Christ, we had faith in Christ Jesus, so that we might get righteousness by faith in Christ, and not by the works of the law: because by the works of the law will no flesh get righteousness.
17 ೧೭ ಆದರೆ ನಾವು ಕ್ರಿಸ್ತನ ಮೂಲಕ ನೀತಿವಂತರೆಂಬ ನಿರ್ಣಯ ಹೊಂದುವುದಕ್ಕೆ ಪ್ರಯತ್ನಿಸುತ್ತಿರುವಾಗ, ನಾವೂ ಪಾಪಿಗಳಾಗಿ ತೋರಿಬಂದರೆ ಕ್ರಿಸ್ತನು ಪಾಪಕ್ಕೆ ಸಹಾಯಕನಾಗಿರುವನೋ? ಎಂದಿಗೂ ಇಲ್ಲ.
But if, while we were desiring to get righteousness through Christ, we ourselves were seen to be sinners, is Christ a servant of sin? In no way!
18 ೧೮ ನಾನು ಕೆಡವಿದ್ದನ್ನೇ ತಿರುಗಿ ಕಟ್ಟಿದರೆ ನನ್ನನ್ನು ನಾನೇ ಅಪರಾಧಿ ಎಂದು ತೋರಿಸಿಕೊಳ್ಳುತ್ತೇನಲ್ಲಾ.
For if I put up again those things which I gave to destruction, I am seen to be a wrongdoer.
19 ೧೯ ನಾನಂತೂ ದೇವರಿಗಾಗಿ ಜೀವಿಸುವುದಕ್ಕೋಸ್ಕರ ಧರ್ಮಶಾಸ್ತ್ರದ ಮೂಲಕವಾಗಿ ಧರ್ಮಶಾಸ್ತ್ರದ ಪಾಲಿಗೆ ಸತ್ತವನಾಗಿದ್ದೇನೆ.
For I, through the law, have become dead to the law, so that I might be living to God.
20 ೨೦ ನಾನು ಸಹ ಕ್ರಿಸ್ತನೊಂದಿಗೆ ಶಿಲುಬೆಗೆ ಹಾಕಿಸಿಕೊಂಡವನಾಗಿದ್ದೇನೆ, ಇನ್ನು ಜೀವಿಸುವವನು ನಾನಲ್ಲ, ಕ್ರಿಸ್ತನು ನನ್ನಲ್ಲಿ ಜೀವಿಸುತ್ತಾನೆ. ಈಗ ಶರೀರದಲ್ಲಿರುವ ನಾನು ಜೀವಿಸುವುದು ಹೇಗೆಂದರೆ ದೇವಕುಮಾರನ ಮೇಲಣ ನಂಬಿಕೆಯಿಂದಲೇ. ಆತನು ನನ್ನನ್ನು ಪ್ರೀತಿಸಿ ನನಗಾಗಿ ತನ್ನನ್ನು ಒಪ್ಪಿಸಿಕೊಟ್ಟನು.
I have been put to death on the cross with Christ; still I am living; no longer I, but Christ is living in me; and that life which I now am living in the flesh I am living by faith, the faith of the Son of God, who in love for me, gave himself up for me.
21 ೨೧ ನಾನು ದೇವರ ಕೃಪೆಯನ್ನು ತಿರಸ್ಕರಿಸುವುದಿಲ್ಲ. ಧರ್ಮಶಾಸ್ತ್ರದ ಮೂಲಕ ನೀತಿವಂತರಾಗಬಹುದಾದರೆ ಕ್ರಿಸ್ತನು ಮರಣಕ್ಕೀಡಾದುದು ನಿರರ್ಥಕವೇ ಸರಿ.
I do not make the grace of God of no effect: because if righteousness is through the law, then Christ was put to death for nothing.