< ಗಲಾತ್ಯದವರಿಗೆ ಬರೆದ ಪತ್ರಿಕೆ 3 >

1 ಎಲೈ ಬುದ್ಧಿಹೀನರಾದ ಗಲಾತ್ಯದವರೇ! ನಿಮ್ಮನ್ನು ಮರುಳುಗೊಳಿಸಿದವರು ಯಾರು? ಯೇಸು ಕ್ರಿಸ್ತನು ಶಿಲುಬೆಗೆ ಹಾಕಿಸಿಕೊಂಡವನಾಗಿ ನಿಮ್ಮ ಕಣ್ಣೆದುರಿನಲ್ಲಿಯೇ ವರ್ಣಿಸಲ್ಪಟ್ಟನಲ್ಲವೇ?
ହେ ନିର୍ବୋଧ ଗାଲାତୀୟମାନେ, କିଏ ତୁମ୍ଭମାନଙ୍କୁ ମୋହିତ କଲା? ତୁମ୍ଭମାନଙ୍କ ଚକ୍ଷୁ ସମ୍ମୁଖରେ ତ କ୍ରୁଶରେ ହତ ଯୀଶୁ ଖ୍ରୀଷ୍ଟଙ୍କ ଚିତ୍ର ଅଙ୍କିତ ହୋଇଥିଲା।
2 ಒಂದು ಸಂಗತಿಯನ್ನು ಮಾತ್ರ ನಿಮ್ಮಿಂದ ತಿಳಿದುಕೊಳ್ಳಬೇಕೆಂದಿದ್ದೇನೆ. ನೀವು ದೇವರಾತ್ಮನನ್ನು ಹೊಂದಿದ್ದು ಧರ್ಮಶಾಸ್ತ್ರದ ನೇಮನಿಷ್ಠೆಗಳನ್ನು ಅನುಸರಿಸಿದ್ದರಿಂದಲೋ ಅಥವಾ ನಂಬಿಕೆಯ ಸುವಾರ್ತೆಯನ್ನು ಕೇಳಿದ್ದರಿಂದಲೋ?
ମୁଁ ତୁମ୍ଭମାନଙ୍କଠାରୁ କେବଳ ଏହା ଜାଣିବାକୁ ଇଚ୍ଛା କରେ, ତୁମ୍ଭେମାନେ କଅଣ ମୋଶାଙ୍କ ବ୍ୟବସ୍ଥାର କର୍ମ ହେତୁ ନା ବିଶ୍ୱାସରେ ସୁସମାଚାର ଶୁଣିବା ହେତୁ ପବିତ୍ର ଆତ୍ମା ପାଇଥିଲ?
3 ನೀವು ಇಷ್ಟು ಬುದ್ಧಿಯಿಲ್ಲದವರೋ? ದೇವರಾತ್ಮಾನುಸಾರವಾಗಿ ಪ್ರಾರಂಭಿಸಿ ಈಗ ಶಾರೀರಿಕ ಸಂಬಂಧವಾಗಿ ಕೊನೆಗೊಳಿಸುವಿರೋ?
ତୁମ୍ଭେମାନେ କଅଣ ଏପରି ନିର୍ବୋଧ? ପବିତ୍ର ଆତ୍ମାରେ ଆରମ୍ଭ କରି ତୁମ୍ଭେମାନେ କି ଏବେ ଶରୀରରେ ସିଦ୍ଧ ହେବାକୁ ଯାଉଅଛ?
4 ನೀವು ಇವೆಲ್ಲವುಗಳನ್ನು ಅನುಭವಿಸಿದ್ದು ವ್ಯರ್ಥವೋ? ವ್ಯರ್ಥವೇ ಎಂದು ಹೇಳಬೇಕೇನು?
ତୁମ୍ଭେମାନେ କି ବ୍ୟର୍ଥରେ ଏତେ କ୍ଳେଶଭୋଗ କରିଅଛ? ତାହା କଅଣ ପ୍ରକୃତରେ ବୃଥା?
5 ದೇವರು ತನ್ನ ಆತ್ಮನನ್ನು ನಿಮಗೆ ಹೇರಳವಾಗಿ ಕೊಟ್ಟು ನಿಮ್ಮಲ್ಲಿ ಮಹತ್ಕಾರ್ಯಗಳನ್ನು ನಡಿಸುತ್ತಾ ಬಂದದ್ದು, ನೀವು ಧರ್ಮಶಾಸ್ತ್ರವನ್ನು ಅನುಸರಿಸಿದ್ದರಿಂದಲೋ ಅಥವಾ ಸುವಾರ್ತೆಯನ್ನು ಕೇಳಿ ನಂಬಿದ್ದರಿಂದಲೋ?
ଅତଏବ, ଯେ ତୁମ୍ଭମାନଙ୍କୁ ପବିତ୍ର ଆତ୍ମା ଦାନ କରନ୍ତି, ଆଉ ତୁମ୍ଭମାନଙ୍କ ମଧ୍ୟରେ ମହତର କାର୍ଯ୍ୟ ସାଧନ କରନ୍ତି, ସେ କି ମୋଶାଙ୍କ ବ୍ୟବସ୍ଥାର କ୍ରିୟାକର୍ମ ହେତୁ ତାହା କରନ୍ତି ନା ବିଶ୍ୱାସରେ ସୁସମାଚାର ଶୁଣିବା ହେତୁ କରନ୍ତି?
6 ಅಬ್ರಹಾಮನು “ದೇವರನ್ನು ನಂಬಿದನು, ಆ ನಂಬಿಕೆಯು ಅವನ ಪಾಲಿಗೆ ನೀತಿಯೆಂದು ಎಣಿಸಲ್ಪಟ್ಟಿತು” ಎಂಬುದಾಗಿ ಬರೆದಿದೆಯಲ್ಲಾ.
ଯେପରି ଅବ୍ରହାମ ଈଶ୍ବରଙ୍କୁ ବିଶ୍ୱାସ କଲେ, ଆଉ ତାହାଙ୍କ ପକ୍ଷରେ ତାହା ଧାର୍ମିକତା ବୋଲି ଗଣିତ ହେଲା।
7 ಆದ್ದರಿಂದ ನಂಬುವವರೇ ಅಬ್ರಹಾಮನ ಮಕ್ಕಳೆಂದು ತಿಳಿದುಕೊಳ್ಳಿರಿ.
ଅତଏବ ଯେଉଁମାନେ ବିଶ୍ୱାସୀ, ସେମାନେ ଅବ୍ରହାମଙ୍କର ସନ୍ତାନ।
8 ದೇವರು ಅನ್ಯಜನರನ್ನು ನಂಬಿಕೆಯ ನಿಮಿತ್ತವಾಗಿಯೇ ನೀತಿವಂತರೆಂದು ನಿರ್ಣಯಿಸುವನೆಂಬುದಾಗಿರುವ ವೇದವಾಕ್ಯವನ್ನು ಮೊದಲೇ ಕಂಡು ಅಬ್ರಹಾಮನಿಗೆ, “ನಿನ್ನ ಮೂಲಕ ಎಲ್ಲಾ ಜನಾಂಗಗಳವರಿಗೆ ಆಶೀರ್ವಾದವುಂಟಾಗುವುದೆಂಬ” ಸುವಾರ್ತೆಯನ್ನು ಮುಂಚಿತವಾಗಿಯೇ ತಿಳಿಸಿತು.
ଆଉ ଈଶ୍ବର ଅଣଯିହୁଦୀମାନଙ୍କୁ ବିଶ୍ୱାସ ହେତୁ ଧାର୍ମିକ ଗଣନା କରିବେ, ଏହା ଧର୍ମଶାସ୍ତ୍ର ପୂର୍ବରୁ ଦେଖି ଅବ୍ରହାମଙ୍କ ନିକଟରେ ସୁସମାଚାର ପ୍ରଚାର କରି କହିଲେ, “ତୁମ୍ଭ ଦେଇ ସମସ୍ତ ଜାତି ଆଶୀର୍ବାଦ ପ୍ରାପ୍ତ ହେବେ।”
9 ಹೀಗಿರಲಾಗಿ ಯೇಸು ಕ್ರಿಸ್ತನಲ್ಲಿ ನಂಬಿಕೆಯಿಡುವವರು, ನಂಬಿಕೆಯಿಟ್ಟ ಅಬ್ರಹಾಮನೊಂದಿಗೆ ಆಶೀರ್ವಾದವನ್ನು ಹೊಂದುವರು.
ଏଣୁ ଯେଉଁମାନେ ବିଶ୍ୱାସୀ, ସେମାନେ ବିଶ୍ୱାସର ପୁରୁଷ ଅବ୍ରହାମଙ୍କ ସହିତ ଆଶୀର୍ବାଦ ପ୍ରାପ୍ତ ହୁଅନ୍ତି।
10 ೧೦ ಮೋಶೆಯ ಧರ್ಮಶಾಸ್ತ್ರದ ನೇಮನಿಷ್ಠೆಗಳನ್ನು ಆಧಾರಮಾಡಿಕೊಂಡಿರುವವರೆಲ್ಲರೂ ಶಾಪಾಗ್ರಸ್ತರಾಗಿದಾರೆ. ಹೇಗೆಂದರೆ, “ಧರ್ಮಶಾಸ್ತ್ರದಲ್ಲಿ ಬರೆದಿರುವವುಗಳೆಲ್ಲವನ್ನೂ ಪ್ರತಿನಿತ್ಯವೂ ಪಾಲಿಸದಿರುವ ಪ್ರತಿಯೊಬ್ಬನು ಶಾಪಗ್ರಸ್ತನೇ” ಎಂದು ಧರ್ಮಶಾಸ್ತ್ರದಲ್ಲಿ ಬರೆದಿದೆ.
କାରଣ ଯେତେ ଲୋକ ମୋଶାଙ୍କ ବ୍ୟବସ୍ଥାର କ୍ରିୟାକର୍ମ କରନ୍ତି, ସେମାନେ ଶାପଗ୍ରସ୍ତ, ଯେଣୁ ଲେଖାଅଛି, “ଯେ କେହି ମୋଶାଙ୍କ ବ୍ୟବସ୍ଥା ପୁସ୍ତକରେ ଲିଖିତ ସମସ୍ତ କଥା ପାଳନ କରିବା ପାଇଁ ସେଥିରେ ନିତ୍ୟ ପ୍ରବୃତ୍ତ ନ ହୁଏ, ସେ ଶ୍ରାପଗ୍ରସ୍ତ।”
11 ೧೧ ಇದಲ್ಲದೆ ಧರ್ಮಶಾಸ್ತ್ರದಿಂದ ಯಾರೂ ದೇವರ ಸನ್ನಿಧಿಯಲ್ಲಿ ನೀತಿವಂತರಾಗಲು ಸಾಧ್ಯವಿಲ್ಲವೆಂದು ಸ್ಪಷ್ಟವಾಗಿದೆ, ಏಕೆಂದರೆ “ನೀತಿವಂತನು ನಂಬಿಕೆಯಿಂದಲೇ ಬದುಕುವನು” ಎಂದು ಪ್ರಕಟವಾಗಿದೆ.
ମୋଶାଙ୍କ ବ୍ୟବସ୍ଥା ଦ୍ୱାରା କେହି ଯେ ଈଶ୍ବରଙ୍କ ସାକ୍ଷାତରେ ଧାର୍ମିକ ଗଣିତ ହୁଏ ନାହିଁ, ଏହା ତ ପବିତ୍ର ଶାସ୍ତ୍ରରେ ସ୍ପଷ୍ଟ, “କାରଣ ଧାର୍ମିକ ବିଶ୍ୱାସ ଦ୍ୱାରା ବଞ୍ଚିବ।”
12 ೧೨ ಹಾಗೆಯೇ ಮೋಶೆಯ ಧರ್ಮಶಾಸ್ತ್ರಕ್ಕೆ ನಂಬಿಕೆಯು ಆಧಾರವಾಗಿಲ್ಲ, “ಅದರ ನೇಮಗಳನ್ನು ಆಚರಿಸುವವನೇ ಅವುಗಳ ಮೂಲಕ ಬದುಕುವನು” ಎಂದು ಬರೆದಿದೆ.
ଆଉ ବିଶ୍ୱାସ ମୋଶାଙ୍କ ବ୍ୟବସ୍ଥାର ମୂଳ ବିଷୟ ନୁହେଁ; ମୋଶାଙ୍କ ବ୍ୟବସ୍ଥାର ମୂଳ ବିଷୟ ଏହି, ଯେ ଏହିସବୁ ପାଳନ କରେ, ସେ ସେଥିରେ ବଞ୍ଚିବ।
13 ೧೩ ಯೇಸು ಕ್ರಿಸ್ತನು ನಮನ್ನು ಶಾಪದಿಂದ ಬಿಡಿಸುವುದಕ್ಕಾಗಿ ತಾನೇ ಶಾಪಗ್ರಸ್ತನಾದನು. ಏಕೆಂದರೆ ಮೋಶೆಯ ಧರ್ಮಶಾಸ್ತ್ರದಲ್ಲಿ ಬರೆದಿರುವ ಪ್ರಕಾರ “ಮರಕ್ಕೆ ತೂಗುಹಾಕಲ್ಪಟ್ಟು ಪ್ರತಿಯೊಬ್ಬನು ಶಾಪಗ್ರಸ್ತನು” ಎಂದು ತಿಳಿದಿದ್ದೇವೆ.
ଯୀଶୁ ଖ୍ରୀଷ୍ଟଙ୍କ ଦ୍ୱାରା ଅବ୍ରହାମଙ୍କର ଆଶୀର୍ବାଦ ଯେପରି ଅଣଯିହୁଦୀମାନଙ୍କ ପ୍ରତି ବର୍ତ୍ତେ, ପୁଣି ଆମ୍ଭେମାନେ ଯେପରି ବିଶ୍ୱାସ ହେତୁ ପ୍ରତିଜ୍ଞାତ ଆତ୍ମା ପ୍ରାପ୍ତ ହେଉ,
14 ೧೪ ಅಬ್ರಹಾಮನಿಗೆ ಉಂಟಾದ ಆಶೀರ್ವಾದವು, ಕ್ರಿಸ್ತ ಯೇಸುವಿನಲ್ಲಿ ಅನ್ಯಜನರಿಗೆಲ್ಲ ಸಿಗುವಂತೆಯೂ ಮತ್ತು ದೇವರು ವಾಗ್ದಾನ ಮಾಡಿದ ಪರಿಶುದ್ಧಾತ್ಮನು ನಮಗೆ ನಂಬಿಕೆಯ ಮೂಲಕ ದೊರಕುವಂತೆಯೂ, ತನ್ನ ಮರಣದ ಮೂಲಕ ಕ್ರಿಸ್ತನು ನಮ್ಮನ್ನು ಕೊಂಡುಕೊಂಡನು.
ଏଥିପାଇଁ ଖ୍ରୀଷ୍ଟ ଆମ୍ଭମାନଙ୍କ ନିମନ୍ତେ ଅଭିଶପ୍ତ ହୋଇ ମୋଶାଙ୍କ ବ୍ୟବସ୍ଥାର ଅଭିଶାପରୁ ଆମ୍ଭମାନଙ୍କୁ ମୂଲ୍ୟ ଦେଇ ମୁକ୍ତ କଲେ; କାରଣ ଯେପରି ପବିତ୍ର ଶାସ୍ତ୍ରରେ ଲେଖାଅଛି, ଯେ କେହି ଖୁଣ୍ଟରେ ଟଙ୍ଗାଯାଏ, ସେ ଅଭିଶପ୍ତ।
15 ೧೫ ಸಹೋದರರೇ, ದೈನಂದಿನ ಜೀವನದಿಂದ ಒಂದು ದೃಷ್ಟಾಂತವನ್ನು ನಿಮಗೆ ಹೇಳುತ್ತೇನೆ, ಒಬ್ಬನು ಮತ್ತೊಬ್ಬನೊಡನೆ ಸ್ಥಿರಪಡಿಸಿದ ಒಂದು ಒಪ್ಪಂದವು ಕೇವಲ ಮನುಷ್ಯನದ್ದಾಗಿದ್ದರೂ, ಅದನ್ನು ಯಾರೂ ರದ್ದುಮಾಡುವಂತಿಲ್ಲ ಮತ್ತು ಅದಕ್ಕೆ ಏನನ್ನೂ ಸೇರಿಸುವಂತಿಲ್ಲ.
ହେ ଭାଇମାନେ, ମୁଁ ମନୁଷ୍ୟ ଭାବରେ କହୁଅଛି; ଚୁକ୍ତି ମନୁଷ୍ୟ ଦ୍ୱାରା କରାଗଲେ ସୁଦ୍ଧା ଯେତେବେଳେ ତାହା ସ୍ଥିରୀକୃତ ହୁଏ, ସେତେବେଳେ କେହି ତାହା ଅନ୍ୟଥା କରିପାରେ ନାହିଁ ବା ସେଥିରେ କିଛି ଯୋଗ କରିପାରେ ନାହିଁ।
16 ೧೬ ಹಾಗೆಯೇ, ದೇವರು ಅಬ್ರಹಾಮನಿಗೆ ಮತ್ತು ಅವನಿಂದ ಬರುವ ಪೀಳಿಗೆಗೆ ವಾಗ್ದಾನ ಮಾಡಿದನು. ಆದರೆ “ಪೀಳಿಗೆ” ಎಂದು ಹೇಳಿದಾಗ, ಅದು ವಂಶದಲ್ಲಿ ಇರುವ ಎಲ್ಲರಿಗೂ ಅನ್ವಯಿಸದೇ, ಅಬ್ರಹಾಮನ ವಂಶಕ್ಕೆ ಸೇರಿದ ಒಬ್ಬ ವ್ಯಕ್ತಿಯನ್ನೇ ಸೂಚಿಸುತ್ತದೆ. ಆ ಒಬ್ಬನು ಕ್ರಿಸ್ತನೇ.
ଅବ୍ରହାମ ଓ ତାହାଙ୍କ ସନ୍ତାନ ପ୍ରତି ପ୍ରତିଜ୍ଞାସମୂହ ଉକ୍ତ ହୋଇଥିଲା। ଅନେକଙ୍କୁ ଲକ୍ଷ୍ୟ କରି ସନ୍ତାନମାନଙ୍କୁ ବୋଲି କୁହାଯାଏ ନାହିଁ, କିନ୍ତୁ ଜଣଙ୍କୁ ଅର୍ଥାତ୍‍ ଖ୍ରୀଷ୍ଟଙ୍କୁ ଲକ୍ଷ୍ୟ କରି ତୁମ୍ଭର ସନ୍ତାନକୁ ବୋଲି କୁହାଯାଏ।
17 ೧೭ ನಾನು ಹೇಳಬಯಸುವುದೇನೆಂದರೆ, ದೇವರು ಮೊದಲು ಅನುಮೋದಿಸಿದ ಒಡಂಬಡಿಕೆಯನ್ನು, ನಾನೂರ ಮೂವತ್ತು ವರ್ಷಗಳ ನಂತರ ಬಂದ ಮೋಶೆಯ ಧರ್ಮಶಾಸ್ತ್ರವು ಅದನ್ನು ನಿರರ್ಥಕಗೊಳಿಸಿ, ಆ ವಾಗ್ದಾನವನ್ನು ಬರಿದಾಗಿಮಾಡಲು ಸಾಧ್ಯವಿಲ್ಲ.
ମୋହର ଭାବ ଏହି, ଯେଉଁ ନିୟମ ଈଶ୍ବରଙ୍କ କର୍ତ୍ତୃକ ପୂର୍ବରୁ ସ୍ଥିରୀକୃତ ହୋଇଥିଲା, ଚାରି ଶହ ତିରିଶ ବର୍ଷ ପରେ ଦିଆଯାଇଥିବା ମୋଶାଙ୍କ ବ୍ୟବସ୍ଥା ତାହା ବ୍ୟର୍ଥ କରେ ନାହିଁ, ଯେପରି ତଦ୍ୱାରା ପ୍ରତିଜ୍ଞା ନିଷ୍ଫଳ କରାଯାଏ।
18 ೧೮ ಅಬ್ರಹಾಮನಿಗೆ ಸಿಕ್ಕ ಆ ಬಾಧ್ಯತೆ ಮೋಶೆಯ ಧರ್ಮಶಾಸ್ತ್ರದ ಮೇಲೆ ಆಧಾರಗೊಂಡಿರುವುದಾದರೆ, ವಾಗ್ದಾನದ ಮೇಲೆ ಆಧಾರವಾಗಲು ಸಾಧ್ಯವಾಗುತ್ತಿರಲಿಲ್ಲ. ಆದರೆ ದೇವರು ಅಬ್ರಹಾಮನಿಗೆ ಕೊಟ್ಟ ಬಾಧ್ಯತೆಯನ್ನು ವಾಗ್ದಾನದ ಮೂಲಕವಾಗಿಯೇ ದಯಪಾಲಿಸಿದ್ದಾನೆ.
କାରଣ ଅଧିକାର ଯଦି ମୋଶାଙ୍କ ବ୍ୟବସ୍ଥାମୂଳକ ହୁଏ, ତେବେ ତାହା ଆଉ ପ୍ରତିଜ୍ଞାମୂଳକ ନୁହେଁ; କିନ୍ତୁ ଈଶ୍ବର ପ୍ରତିଜ୍ଞା ଦ୍ୱାରା ଅବ୍ରହାମଙ୍କୁ ତାହା ଦାନ କରିଅଛନ୍ତି।
19 ೧೯ ಹಾಗಾದರೆ ಮೋಶೆಯ ಧರ್ಮಶಾಸ್ತ್ರವು ಯಾತಕ್ಕೆ? ವಾಗ್ದಾನದಲ್ಲಿ ಸೂಚಿತನಾದವನು ಹುಟ್ಟಿ ಬರುವತನಕ ದೇವರು ಇಂಥಿಂಥದು ಅಪರಾಧವೆಂದು ತೋರಿಸುವುದಕ್ಕಾಗಿ ಅದನ್ನು ವಾಗ್ದಾನದ ತರುವಾಯ ನೇಮಿಸಿ ದೇವದೂತರ ಮುಖಾಂತರ ಒಬ್ಬ ಮಧ್ಯಸ್ಥನ ಕೈಯಲ್ಲಿ ಕೊಟ್ಟನು.
ତେବେ ମୋଶାଙ୍କ ବ୍ୟବସ୍ଥା କାହିଁକି ଦିଆଗଲା? ଯେଉଁ ସନ୍ତାନଙ୍କୁ ଲକ୍ଷ୍ୟ କରି ପ୍ରତିଜ୍ଞା କରାଯାଇଥିଲା, ତାହାଙ୍କ ନ ଆସିବା ପର୍ଯ୍ୟନ୍ତ ତାହା ଆଜ୍ଞାଲଙ୍ଘନ ହେତୁ ଯୋଗ କରାଗଲା, ପୁଣି, ତାହା ଦୂତମାନଙ୍କ ଦ୍ୱାରା ଜଣେ ମଧ୍ୟସ୍ଥଙ୍କ ହସ୍ତରେ ସ୍ଥାପିତ ହୋଇଥିଲା।
20 ೨೦ ಒಂದೇ ಪಕ್ಷವಿದ್ದರೆ ಮಧ್ಯಸ್ಥನು ಬೇಕಿಲ್ಲ. ದೇವರಾದರೋ ಒಬ್ಬನೇ.
ମଧ୍ୟସ୍ଥ ଗୋଟିଏ ପକ୍ଷର ପ୍ରତିନିଧି ନୁହଁନ୍ତି, କିନ୍ତୁ ଈଶ୍ବର ଏକ।
21 ೨೧ ಹಾಗಾದರೆ ಮೋಶೆಯ ಧರ್ಮಶಾಸ್ತ್ರವು ದೇವರ ವಾಗ್ದಾನಗಳಿಗೆ ವಿರುದ್ಧವೋ? ಹಾಗೆ ಎಂದಿಗೂ ತಿಳಿದುಕೊಳ್ಳಬಾರದು. ಬದುಕಿಸುವುದಕ್ಕೆ ಶಕ್ತವಾಗಿರುವ ಧರ್ಮಶಾಸ್ತ್ರವು ಕೊಡಲ್ಪಟ್ಟಿದ್ದರೆ ಅದನ್ನು ಅನುಸರಿಸುವುದರ ಮೂಲಕ ನಿಸ್ಸಂದೇಹವಾಗಿ ನೀತಿಯುಂಟಾಗುತ್ತಿತ್ತು.
ତେବେ ମୋଶାଙ୍କ ବ୍ୟବସ୍ଥା କି ଈଶ୍ବରଙ୍କ ପ୍ରତିଜ୍ଞାସମୂହର ବିରୁଦ୍ଧ? ତାହା କେବେ ହେଁ ନ ହେଉ; କାରଣ ଯଦି ଜୀବନ ଦେବାକୁ ସମର୍ଥ ଏପରି ମୋଶାଙ୍କ ବ୍ୟବସ୍ଥା ଦିଆଯାଇଥାଆନ୍ତା, ତେବେ ଧାର୍ମିକତା ପ୍ରକୃତରେ ମୋଶାଙ୍କ ବ୍ୟବସ୍ଥାମୂଳକ ହୁଅନ୍ତା।
22 ೨೨ ಸಮಸ್ತ ಲೋಕವು ಪಾಪಕ್ಕೆ ಅಧೀನವಾಯಿತೆಂದು ಪವಿತ್ರಗ್ರಂಥವು ಸ್ಪಷ್ಪೀಕರಿಸುತ್ತದೆ. ಹೀಗಿರುವುದರಿಂದ ವಾಗ್ದಾನ ಮಾಡಿದ ಸೌಭಾಗ್ಯವನ್ನು ಯೇಸು ಕ್ರಿಸ್ತನಲ್ಲಿ ನಂಬಿಕೆಯಿಟ್ಟವರಿಗೆ ಅವರ ನಂಬಿಕೆಯ ಆಧಾರದ ಮೇಲೆ ಕೊಡಲಾಗುತ್ತದೆ.
କିନ୍ତୁ ଯେପରି ଯୀଶୁ ଖ୍ରୀଷ୍ଟଙ୍କଠାରେ ବିଶ୍ୱାସ ହେତୁ ପ୍ରତିଜ୍ଞା ବିଶ୍ୱାସ କରୁଥିବା ଲୋକମାନଙ୍କୁ ଦିଆଯାଏ, ଏଥିପାଇଁ ଧର୍ମଶାସ୍ତ୍ର ସମସ୍ତ ବିଷୟକୁ ପାପର ଅଧୀନ ବୋଲି ଗଣନା କରିଅଛି।
23 ೨೩ ಆದರೆ ಯೇಸು ಕ್ರಿಸ್ತನ ನಂಬಿಕೆಯಲ್ಲಿ ಜೀವಿಸುವ ಕಾಲ ಬರುವುದಕ್ಕೆ ಮೊದಲು ನಾವು ಮುಂದಕ್ಕೆ ಪ್ರಕಟವಾಗಬೇಕಾಗಿದ್ದ ಆ ನಂಬಿಕೆಗೆ ವಶವಾಗುವುದಕ್ಕಾಗಿ ಮೋಶೆಯ ಧರ್ಮಶಾಸ್ತ್ರದಿಂದ ನಾವು ಬಂಧಿಸಲ್ಪಟ್ಟಿದ್ದೆವು.
ମାତ୍ର ସେହି ବିଶ୍ୱାସ ଆସିବା ପୂର୍ବେ, ପ୍ରକାଶିତ ହେବାକୁ ଯାଉଥିବା ସେହି ବିଶ୍ୱାସ ପ୍ରାପ୍ତି ଉଦ୍ଦେଶ୍ୟରେ, ଆମ୍ଭେମାନେ ମୋଶାଙ୍କ ବ୍ୟବସ୍ଥାର ଅଧୀନରେ ବନ୍ଦୀ ହୋଇ ରକ୍ଷିତ ହେଉଥିଲୁ।
24 ೨೪ ನಾವು ನಂಬಿಕೆಯಿಂದ ಯೇಸು ಕ್ರಿಸ್ತನಲ್ಲಿ ನೀತಿವಂತರೆಂಬ ನಿರ್ಣಯವನ್ನು ಹೊಂದುವ ಕಾಲ ಬರುವ ತನಕ, ಮೋಶೆಯ ಧರ್ಮಶಾಸ್ತ್ರವು ನಮ್ಮನ್ನು ಮುನ್ನಡೆಸುವ ಪಾಲಕನಂತಾಗಿತ್ತು.
ଏହି ପ୍ରକାରେ ବିଶ୍ୱାସ ହେତୁ ଆମ୍ଭମାନଙ୍କର ଧାର୍ମିକ ଗଣିତ ହେବା ନିମନ୍ତେ ଖ୍ରୀଷ୍ଟଙ୍କ ଆଗମନ ପର୍ଯ୍ୟନ୍ତ, ମୋଶାଙ୍କ ବ୍ୟବସ୍ଥା ଆମ୍ଭମାନଙ୍କର ଶିକ୍ଷକ ସ୍ୱରୂପ ହୋଇଥିଲା।
25 ೨೫ ಆದರೆ ಈಗ ಕ್ರಿಸ್ತ ನಂಬಿಕೆಯು ಬಂದಿರಲಾಗಿ ನಾವು ಮುನ್ನಡೆಸುವಂಥ ಧರ್ಮಶಾಸ್ತ್ರದ ಹತೋಟಿಯಲ್ಲಿ ಇಲ್ಲ.
କିନ୍ତୁ ଏବେ ସେହି ବିଶ୍ୱାସ ଉପସ୍ଥିତ ହେଲା ପରେ ଆମ୍ଭେମାନେ ଆଉ ସେହି ଶିକ୍ଷକର ଅଧୀନରେ ନାହୁଁ।
26 ೨೬ ಹಾಗೆ ನೀವೆಲ್ಲರೂ ಕ್ರಿಸ್ತ ಯೇಸುವಿನಲ್ಲಿಟ್ಟಿರುವ ನಂಬಿಕೆಯ ಮೂಲಕ ದೇವರ ಮಕ್ಕಳಾಗಿದ್ದೀರಿ.
କାରଣ ତୁମ୍ଭେମାନେ ସମସ୍ତେ ଯୀଶୁ ଖ୍ରୀଷ୍ଟଙ୍କଠାରେ ବିଶ୍ୱାସ ଦ୍ୱାରା ଈଶ୍ବରଙ୍କର ସନ୍ତାନ ହୋଇଅଛ;
27 ೨೭ ಹೇಗೆಂದರೆ ಕ್ರಿಸ್ತನಲ್ಲಿ ಸೇರುವುದಕ್ಕೆ ದೀಕ್ಷಾಸ್ನಾನ ಮಾಡಿಸಿಕೊಂಡಿರುವ ನೀವೆಲ್ಲರೂ ಕ್ರಿಸ್ತನನ್ನು ಧರಿಸಿಕೊಂಡಿದ್ದೀರಿ.
ଯେଣୁ ତୁମ୍ଭେମାନେ ଯେତେ ଲୋକ ଖ୍ରୀଷ୍ଟଙ୍କ ଉଦ୍ଦେଶ୍ୟରେ ବାପ୍ତିଜିତ ହୋଇଅଛ, ତୁମ୍ଭେମାନେ ସମସ୍ତେ ଖ୍ରୀଷ୍ଟଙ୍କୁ ପରିଧାନ କରିଅଛ।
28 ೨೮ ನೀವೆಲ್ಲರೂ ಕ್ರಿಸ್ತ ಯೇಸುವಿನಲ್ಲಿ ಒಂದೇ ಆಗಿರುವುದರಿಂದ ಯೆಹೂದ್ಯನು ಅಥವಾ ಗ್ರೀಕನು ಎಂದಾಗಲೀ, ಆಳು ಅಥವಾ ಒಡೆಯ ಎಂದಾಗಲೀ, ಗಂಡು ಹಾಗೂ ಹೆಣ್ಣು ಎಂದಾಗಲೀ ಭೇದವಿಲ್ಲ.
ଯିହୁଦୀ କି ଗ୍ରୀକ୍‍, ଦାସ କି ସ୍ୱାଧୀନ, ପୁରୁଷ କି ସ୍ତ୍ରୀ, ତୁମ୍ଭମାନଙ୍କ ମଧ୍ୟରେ କିଛିର ହିଁ ପ୍ରଭେଦ ନାହିଁ, କାରଣ ଖ୍ରୀଷ୍ଟ ଯୀଶୁଙ୍କଠାରେ ତୁମ୍ଭେମାନେ ଏକ।
29 ೨೯ ನೀವು ಕ್ರಿಸ್ತನವರಾಗಿದ್ದರೆ ಅಬ್ರಹಾಮನ ವಂಶದವರಾಗಿ ಹಾಗೂ ದೇವರ ವಾಗ್ದಾನಕ್ಕನುಸಾರವಾಗಿ ಬಾಧ್ಯರೂ ಆಗಿದ್ದೀರಿ.
ଆଉ ଯଦି ତୁମ୍ଭେମାନେ ଖ୍ରୀଷ୍ଟଙ୍କର, ତେବେ ତୁମ୍ଭେମାନେ ତ ଅବ୍ରହାମଙ୍କ ବଂଶ, ପ୍ରତିଜ୍ଞା ଅନୁସାରେ ଉତ୍ତରାଧିକାରୀ।

< ಗಲಾತ್ಯದವರಿಗೆ ಬರೆದ ಪತ್ರಿಕೆ 3 >