< ಗಲಾತ್ಯದವರಿಗೆ ಬರೆದ ಪತ್ರಿಕೆ 4 >
1 ೧ ಆದರೆ ನಾನು ಹೇಳುವುದೇನಂದರೆ, ವಾರಸುದಾರನು, ತಾನು ಆಸ್ತಿಗೆಲ್ಲಾ ಒಡೆಯನಾಗಿದ್ದರೂ ಬಾಲಕನಾಗಿರುವ ತನಕ ದಾಸನಂತೆಯೇ ಇರುವನು.
Tu in hibang i ci tu hi, tua ngamhlua pa sia na theampo ah to hi napi, patang a hi laiteng theampo, sal taw bangma ki tumdang ngawl hi;
2 ೨ ತಂದೆಯು ಗೊತ್ತುಮಾಡಿದ ಸಮಯದವರೆಗೂ ಪಾಲಕರ ಮತ್ತು ಕಾರ್ಯನಿರ್ವಾಹಕರ ಅಧೀನದಲ್ಲಿರುವನು.
Ahihang a pa i ciangtan hun a cin dong a keam te le a uk te nuai ah om hi.
3 ೩ ಹಾಗೆಯೇ ನಾವು ಸಹ ಬಾಲಕರಾಗಿದ್ದಾಗ ಲೋಕದ ಮೂಲತತ್ವಗಳಿಗೆ ಅಧೀನರಾಗಿದ್ದೆವು.
Tasia bangma in eite zong patang i hi lai in, leitung thu kipatna sal hina nuai ah i taang ngei hi:
4 ೪ ಆದರೆ ಸೂಕ್ತಸಮಯ ಬಂದಾಗ ದೇವರು ತನ್ನ ಮಗನನ್ನು ಕಳುಹಿಸಿಕೊಟ್ಟನು. ಧರ್ಮಶಾಸ್ತ್ರಕ್ಕೆ ಅಧೀನರಾದವರನ್ನು ಬಿಡಿಸಬೇಕೆಂತಲೂ, ಪುತ್ರರ ಬಾಧ್ಯತೆಯ ಪದವಿಯನ್ನು ನಮಗೆ ದೊರಕಿಸಿಕೊಡಬೇಕೆಂತಲೂ ಆತನು ಸ್ತ್ರೀಯಲ್ಲಿ ಹುಟ್ಟಿದವನಾಗಿಯೂ, ಧರ್ಮಶಾಸ್ತ್ರಾಧೀನನಾಗಿಯೂ ಬಂದನು.
Ahihang a hun a cin ciang in, Pathian in a Tapa hongpaisak a, numei sung pan, thukham nuai ah hong suak hi,
Tabang in thukham nuai ah a om eite hong tan tu a, ta hina i nga thei natu a hihi.
6 ೬ ನೀವು ಪುತ್ರರಾಗಿರುವುದರಿಂದ ದೇವರು, “ಅಪ್ಪಾ ತಂದೆಯೇ” ಎಂದು ಕೂಗುವ ತನ್ನ ಮಗನ ಆತ್ಮನನ್ನು ನಮ್ಮ ಹೃದಯಗಳಲ್ಲಿ ಕಳುಹಿಸಿಕೊಟ್ಟನು.
Taciang tapa te nahi uhkom na thinsung uh ah Pathian in a Tapa Thaa hong pia a, Abba, Pa awng, ci in au hi.
7 ೭ ಹೀಗಿರುವಲ್ಲಿ ಇನ್ನು ನೀನು ಸೇವಕನಲ್ಲ, ಮಗನಾಗಿದ್ದೀ. ಮಗನೆಂದ ಮೇಲೆ ದೇವರ ಮೂಲಕ ವಾರಸುದಾರನು ಆಗಿದ್ದೀ.
Tua ahikom sal na hi nawn bua uh hi, tapa na hi uh hi, taciang tapa nahile, Christ tungtawn in Pathian ngamhlua pa na hihi.
8 ೮ ಹಿಂದೆ ನೀವು ದೇವರನ್ನು ಅರಿಯದೆ, ಸ್ವಾಭಾವಿಕವಾಗಿ ದೇವರಲ್ಲದವರುಗಳಿಗೆ ದಾಸರಾಗಿದ್ದೀರಿ.
Ahizong Pathian na heak uh ma in, Pathian a hi tatak ngawl te i na na seam ngei uh hi.
9 ೯ ಈಗಲಾದರೋ ನೀವು ದೇವರನ್ನು ತಿಳಿದುಕೊಂಡಿದ್ದೀರಿ, ಅಥವಾ ದೇವರು ನಿಮ್ಮನ್ನು ತಿಳಿದುಕೊಂಡಿದ್ದಾನೆ. ಹೀಗಿರಲಾಗಿ ನೀವು ಬಲವಿಲ್ಲದ, ಕೆಲಸಕ್ಕೆ ಬಾರದ, ದರಿದ್ರವಾದ ಮೂಲತತ್ವಗಳಿಗೆ ಹಿಂತಿರುಗಿ ಅದಕ್ಕೆ ದಾಸರಾಗುವುದಕ್ಕೆ ಏಕೆ ಬಯಸುತ್ತೀರಿ?
Ahihang tu in, Pathian na heak zawk uh ciang, a hibale Pathian in note hong heak zawkciang, thaneam, a kipat pan khutdaw ngen te le sal dinmun ah banghang in heakkik nuam nu ziam?
10 ೧೦ ನೀವು ಆಯಾ ದಿನಗಳನ್ನೂ, ತಿಂಗಳುಗಳನ್ನೂ, ಕಾಲಗಳನ್ನೂ, ಸಂವತ್ಸರಗಳನ್ನೂ ನಿಷ್ಠೆಯಿಂದ ಆಚರಿಸಿದ್ದೀರಿ.
Note in ni te, tha te, hun te le kum te na tang uh hi.
11 ೧೧ ನಾನು ನಿಮಗೋಸ್ಕರ ಪ್ರಯಾಸಪಟ್ಟದ್ದು ನಿಷ್ಫಲವಾಯಿತೋ ಏನೋ ಎಂದು ನಿಮ್ಮ ಕುರಿತು ಭಯಪಡುತ್ತೇನೆ.
Note atu ka nasepna te sia a mannung ngawl lel a hi tu ka lau mama hi.
12 ೧೨ ಸಹೋದರರೇ, ನಾನು ನಿಮ್ಮಂತೆ ಆದಹಾಗೆ ನೀವು ನನ್ನಂತೆ ಹಾಗೆ ಆಗಬೇಕೆಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ. ನೀವು ನನಗೇನೂ ಅನ್ಯಾಯ ಮಾಡಲಿಲ್ಲ.
Suapui te awng, keima bang in om vun, ci in kong thum hi; banghangziam cile keima zong note bangma in ka om hi: note in kei tung ah nong takhial bua uh hi.
13 ೧೩ ನಾನು ದೈಹಿಕವಾಗಿ ಅಸ್ವಸ್ಥನಾಗಿದ್ದುದರಿಂದ ನಿಮ್ಮಲ್ಲಿದ್ದು ಮೊದಲನೆಯ ಬಾರಿಗೆ ನಿಮಗೆ ಸುವಾರ್ತೆ ಸಾರಿದ್ದನ್ನು ನೀವು ಬಲ್ಲಿರಿ.
Note tung ah amasabel lungdamna thupha ka hil lai in cilesa lam ah natna tungtawn in ka phuang hi, ci na he uh hi.
14 ೧೪ ನನ್ನ ದೇಹಸ್ಥಿತಿಯಿಂದ ನಿಮಗೆ ಸಮಸ್ಯೆಗಳು ಬಂದಾಗ್ಯೂ ಕೂಡ, ನೀವು ನನ್ನನ್ನು ಹೀನೈಸಲಿಲ್ಲ, ತಿರಸ್ಕರಿಸಲಿಲ್ಲ. ನನ್ನನ್ನು ದೇವದೂತನಂತೆ, ಕ್ರಿಸ್ತ ಯೇಸುವಿನಂತೆ ಸೇರಿಸಿಕೊಂಡಿದ್ದೀರಿ.
Taciang ka pumpi sung ah a om ze-et na sia note in zawngsak in nong nial bua uh hi; ahihang Pathian vantungmi bang in ahizong, Christ Jesus bang in ahizong, nong sang uh hi.
15 ೧೫ ಆಗ ನಮಗೆ ಶುಭವಾಯಿತೆಂದು ನೀವು ಅಂದುಕೊಂಡಿರಲ್ಲಾ, ಆ ನಿಮ್ಮ ಶುಭವು ಎಲ್ಲಿ ಹೋಯಿತು? ಸಾಧ್ಯವಾಗಿದ್ದರೆ ನಿಮ್ಮ ಕಣ್ಣುಗಳನ್ನಾದರೂ ಕಿತ್ತು ನನಗೆ ಕೊಡುತ್ತಿದ್ದಿರೆಂದು ನಿಮ್ಮನ್ನು ಕುರಿತು ಸಾಕ್ಷಿ ಹೇಳುತ್ತೇನೆ.
Tabang ahile na son uh thupha sia koisia ziam? banghangziam cile a suakthei tu hile note in na mittang te dong khel in hong pia nuam nu hi, ci sia keima in tetti ka pang hi.
16 ೧೬ ಹೀಗಿರಲಾಗಿ ನಾನು ನಿಮಗೆ ಸತ್ಯವನ್ನು ಹೇಳುವುದರಿಂದ ನಿಮಗೆ ಶತ್ರುವಾಗಿದ್ದೇನೋ?
Tua ahikom, note thuman kong son hu in na ngal uh suak khi ziam?
17 ೧೭ ಅವರು ನಿಮ್ಮನ್ನು ಮೆಚ್ಚಿಸುವುದಕ್ಕೆ ಆಸಕ್ತಿಯನ್ನು ತೋರಿಸುತ್ತಿರುವುದು ಒಳಿತಾಗಿ ಅಲ್ಲ, ನೀವು ಅವರಿಗೆ ಆಸಕ್ತಿಯನ್ನು ತೋರಿಸಬೇಕೆಂದು ಅವರು ನಿಮ್ಮನ್ನು ನನ್ನಿಂದ ಆಗಲಿಸುವುದಕ್ಕೆ ಬಯಸುತ್ತಿದ್ದಾರೆ.
Amate in thalawptak in hong thinbot hi, ahihang tua hong thinbot na sia pha ngawl hi; note in amate na thinbot thei natu uh in a tuam in hong koi nuam uh hi.
18 ೧೮ ನಾನು ನಿಮ್ಮ ಸಂಗಡ ಇರುವಾಗ ಮಾತ್ರವಲ್ಲದೆ ಯಾವಾಗಲೂ ಒಳ್ಳೆಯ ವಿಷಯಕ್ಕಾಗಿ ನೀವು ಆಸಕ್ತಿಯನ್ನು ತೋರಿಸುವುದು ಒಳ್ಳೆಯದೇ.
Ahihang note kung ah ka om lai bek hi ngawl in, na pha sung ah a tawntung thalawptak in kideisak sia pha hi.
19 ೧೯ ನನ್ನ ಪ್ರಿಯರಾದ ಮಕ್ಕಳೇ, ಕ್ರಿಸ್ತನ ಸಾರೂಪ್ಯವು ನಿಮ್ಮಲ್ಲಿ ಉಂಟಾಗುವ ತನಕ ನಾನು ನಿಮಗಾಗಿ ಪ್ರಸವವೇದನೆ ಪಡುತ್ತಿರುವೆನು.
Ka tano te awng, nau tun nat thuak bang in kong nei na hi uh a, Christ lim le meal na nei uh dong nau tun nat ka thuak lai tu hi,
20 ೨೦ ನಿಮ್ಮ ವಿಷಯದಲ್ಲಿ ಏನು ಮಾಡಬೇಕೋ ನನಗೆ ತೋಚುತ್ತಿಲ್ಲ. ಬಹುಶಃ ನೇರವಾಗಿ ನಿಮ್ಮ ಬಳಿಗೆ ಬಂದು, ನಿಮ್ಮ ಮಧ್ಯದಲ್ಲೇ ಇದ್ದು ನನ್ನ ಮಾತಿನ ರೀತಿಯನ್ನು ಬದಲಾಯಿಸಿದ್ದರೆ ಚೆನ್ನಾಗಿರುತ್ತಿತ್ತೇನೋ!
Tu in ka aw sua lai tu in note kung ah ka om nuam hi; banghangziam cile note kong muan ngawl hang a hihi.
21 ೨೧ ಧರ್ಮಶಾಸ್ತ್ರಕ್ಕೆ ಅಧೀನರಾಗಿರುವುದಕ್ಕೆ ಬಯಸುವವರೇ, ಧರ್ಮಶಾಸ್ತ್ರವು ಏನು ಹೇಳುತ್ತದೆಂದು ನಿಮಗೆ ತಿಳಿದಿಲ್ಲವೋ? ನನಗೆ ತಿಳಿಯಪಡಿಸಿರಿ.
No thukham nuai ah a om nuam te, hong son tavun, note thukham thu za ngawl nu ziam?
22 ೨೨ ಅದರಲ್ಲಿ ಬರೆದಿರುವುದೇನಂದರೆ, ಅಬ್ರಹಾಮನಿಗೆ ಇಬ್ಬರು ಮಕ್ಕಳಿದ್ದರು. ಒಬ್ಬನು ದಾಸಿಯಲ್ಲಿ ಹುಟ್ಟಿದವನು, ಮತ್ತೊಬ್ಬನು ಸ್ವತಂತ್ರಳಾದವಳಲ್ಲಿ ಹುಟ್ಟಿದವನು.
Banghangziam cile, Abraham in tapa ni nei hi, khat sia a sila nu i tapa hi a, a dang khat sia a suakta nu i tapa a hihi, ci ki at hi.
23 ೨೩ ದಾಸಿಯ ಮಗನು ಶರೀರಕ್ಕನುಸಾರವಾಗಿ ಹುಟ್ಟಿದವನು, ಸ್ವತಂತ್ರಳಾದವಳ ಮಗನಾದರೋ ವಾಗ್ದಾನದ ಮೂಲಕ ಹುಟ್ಟಿದವನು.
Sila nu i tapa sia cilesa ngeina bang in piang hi; ahihang a suakta nu i tapa sia kamciam tungtawn in a piang a hihi.
24 ೨೪ ಈ ಸಂಗತಿಗಳು ಹೋಲಿಕೆಗಳಾಗಿವೆ. ಹೇಗೆಂದರೆ ಆ ಇಬ್ಬರು ಸ್ತ್ರೀಯರು ಎರಡು ಒಡಂಬಡಿಕೆಗಳೇ, ಒಂದು ಒಡಂಬಡಿಕೆಯು ಸೀನಾಯಿ ಪರ್ವತದಿಂದ ಉಂಟಾಗಿ ದಾಸತ್ವದಲ್ಲಿರಬೇಕಾದ ಮಕ್ಕಳನ್ನು ಹೆರುವಂಥದು, ಅದೇ ಹಾಗರಳು.
Hi thu te sia telsakna hi a: hi nupi ni te sia thukham ni te a hihi; khat sia Sinai mual pan hi a, sila hina a piangsak Hagar a hihi.
25 ೨೫ ಹಾಗರಳು ಅಂದರೆ ಅರಬಸ್ಥಾನದಲ್ಲಿರುವ ಸೀನಾಯಿ ಪರ್ವತವನ್ನು ಸೂಚಿಸುವಂತಹದ್ದು ಈಗಿನ ಯೆರೂಸಲೇಮಿಗೆ ಎಂಬುವಳಿಗೆ ಹೋಲಿಕೆಯಾಗಿದ್ದಾಳೆ, ಏಕೆಂದರೆ ಆಕೆಯು ತನ್ನ ಮಕ್ಕಳೊಂದಿಗೆ ಈಗ ದಾಸತ್ವದಲ್ಲಿದ್ದಾಳೆ.
Banghangziam cile Hagar sia Arabia ngam a om Sinai mual hi a, tu in Jerusalem taw a kibang a hihi, taciang a tate taw sila hina sung ah om hi.
26 ೨೬ ಆದರೆ ಮೇಲಣ ಯೆರೂಸಲೇಮ್ ಎಂಬವಳು ಸ್ವತಂತ್ರಳು, ಇವಳೇ ನಮಗೆ ತಾಯಿ.
Ahihang vantung Jerusalem ah a suakta nu hi a, ama sia eite theampo i nu a hihi.
27 ೨೭ “ಹೆರದ ಬಂಜೆಯೇ, ಆನಂದಿಸು. ಪ್ರಸವವೇದನೆಯಿಲ್ಲದವಳೇ, ಹರ್ಷೋದ್ಗಾರಮಾಡು, ಗಂಡನುಳ್ಳವಳಿಗಿಂತ ಗಂಡಬಿಟ್ಟವಳಿಗೆ ಮಕ್ಕಳು ಹೆಚ್ಚು” ಎಂದು ಬರೆದಿದೆಯಲ್ಲಾ.
Banghangziam cile, nang nau nei ngei ngawl numei ciing awng, lungdam in; nang nau tun thuak ngei ngawl nu, mun theampo thawn in au in: banghangziam cile pasal nei nupi sang in a ki hamsiat nupi in ta tamzaw nei hi, ci in ki at hi.
28 ೨೮ ಸಹೋದರರೇ, ನಾವು ಇಸಾಕನಂತೆ ವಾಗ್ದಾನದ ಫಲವಾಗಿ ಹುಟ್ಟಿದ ಮಕ್ಕಳಾಗಿದ್ದೇವೆ.
Tu in, suapui te awng, eite sia Isaac bang in kamciam tate i hihi.
29 ೨೯ ಆದರೆ ಪೂರ್ವದಲ್ಲಿ ಶಾರೀರಿಕವಾಗಿ ಹುಟ್ಟಿದವನು, ದೇವರಾತ್ಮಬಲದಿಂದ ಹುಟ್ಟಿದವನನ್ನು ಹಿಂಸೆಪಡಿಸಿದಂತೆಯೇ ಈಗಲೂ ಆಗುತ್ತಿದೆ.
Ahihang cilesa ngeina bang in a piangpa in Thaa ngeina taw a piang pa sia vawtsia hi, tuzong in tabangma hi lai hi.
30 ೩೦ ಆದರೆ ದೇವರ ವಾಕ್ಯವು ಏನು ಹೇಳುತ್ತದೆ? “ದಾಸಿಯನ್ನೂ ಅವಳ ಮಗನನ್ನೂ ಹೊರಗೆ ಹಾಕು. ದಾಸಿಯ ಮಗನು ಸ್ವತಂತ್ರಳ ಮಗನೊಂದಿಗೆ ಎಷ್ಟು ಮಾತ್ರಕ್ಕೂ ಬಾಧ್ಯಸ್ಥನಾಗಬಾರದು” ಎಂದು ಹೇಳುತ್ತದೆ.
Ahihang laithiangtho in bang ci ziam? Sila nu le a tapa hawlkhia in: banghangziam cile sila nu i tapa le a suakta nu i tapa te sia ngamh lua khawm thei ngawl tu hi.
31 ೩೧ ಸಹೋದರರೇ, ನಾವು ದಾಸಿಯ ಮಕ್ಕಳಲ್ಲ, ಸ್ವತಂತ್ರಳಾದವಳ ಮಕ್ಕಳೇ ಎಂದು ತಿಳಿದುಕೊಳ್ಳಿರಿ.
Tua ahikom, suapui te awng, eite sia sila nu i tate i hi bua hi, ahihang a suakta nu i tate i hihi.