< ಗಲಾತ್ಯದವರಿಗೆ ಬರೆದ ಪತ್ರಿಕೆ 1 >
1 ೧ ಮನುಷ್ಯರಿಂದಾಗಲಿ ಮನುಷ್ಯರ ಮುಖಾಂತರದಿಂದಾಗಲಿ ಅಪೊಸ್ತಲನಾಗಿರದೆ ಯೇಸು ಕ್ರಿಸ್ತನ ಮುಖಾಂತರವೂ ಮತ್ತು ಆತನನ್ನು ಸತ್ತವರೊಳಗಿಂದ ಎಬ್ಬಿಸಿದ ತಂದೆಯಾದ ದೇವರಿಂದಲೂ ಅಪೊಸ್ತಲೋದ್ಯೋಗವನ್ನು ಹೊಂದಿದ ಪೌಲನೆಂಬ ನಾನು ಹಾಗೂ
Paul, an Apostle (not from men, and not through man, but through Jesus Christ, and God the Father, who made him come back from the dead),
2 ೨ ನನ್ನ ಜೊತೆಯಲ್ಲಿರುವ ಎಲ್ಲಾ ಸಹೋದರರೂ ಗಲಾತ್ಯದಲ್ಲಿರುವ ಸಭೆಗಳಿಗೆ ಬರೆಯುವುದೇನೆಂದರೆ,
And all the brothers who are with me, to the churches of Galatia:
3 ೩ ತಂದೆಯಾದ ದೇವರಿಂದಲೂ ನಮ್ಮ ಕರ್ತನಾದ ಯೇಸು ಕ್ರಿಸ್ತನಿಂದಲೂ ನಿಮಗೆ ಕೃಪೆಯೂ ಶಾಂತಿಯೂ ಆಗಲಿ.
Grace to you and peace from God the Father and our Lord Jesus Christ,
4 ೪ ಆತನು ನಮ್ಮನ್ನು ಈಗಿನ ದುಷ್ಟ ಯುಗದಿಂದ ಬಿಡಿಸಬೇಕೆಂದು ನಮ್ಮ ತಂದೆಯಾದ ದೇವರ ಚಿತ್ತಕ್ಕನುಸಾರವಾಗಿ, ನಮ್ಮ ಪಾಪಗಳ ದೆಸೆಯಿಂದ ತನ್ನನ್ನು ಮರಣಕ್ಕೆ ಒಪ್ಪಿಸಿಕೊಟ್ಟನು. (aiōn )
Who gave himself for our sins, so that he might make us free from this present evil world, after the purpose of our God and Father: (aiōn )
5 ೫ ದೇವರಿಗೆ ಯುಗಯುಗಾಂತರಗಳಲ್ಲಿಯೂ ಮಹಿಮೆಯಾಗಲಿ. ಆಮೆನ್. (aiōn )
To whom be the glory for ever and ever. So be it. (aiōn )
6 ೬ ಕ್ರಿಸ್ತನ ಕೃಪೆಯಿಂದ ನಿಮ್ಮನ್ನು ಕರೆದಾತನನ್ನು ಬಿಟ್ಟು, ಇಷ್ಟು ಬೇಗನೆ ಬೇರೆ ಸುವಾರ್ತೆಯ ಕಡೆಗೆ ನೀವು ತಿರುಗಿದಿರೆಂದು ನಾನು ಆಶ್ಚರ್ಯಪಡುತ್ತೇನೆ.
I am surprised that you are being so quickly turned away from him whose word came to you in the grace of Christ, to good news of a different sort;
7 ೭ ವಾಸ್ತವವಾಗಿ ಬೇರೊಂದು ಸುವಾರ್ತೆ ಇಲ್ಲ, ಆದರೆ ಕೆಲವರು ನಿಮ್ಮಲ್ಲಿ ಬೇಧವನ್ನು ಹುಟ್ಟಿಸುತ್ತಾ ಕ್ರಿಸ್ತನ ಸುವಾರ್ತೆಯನ್ನು ಮಾರ್ಪಡಿಸುವುದಕ್ಕೆ ಪ್ರಯತ್ನಿಸುತ್ತಿದ್ದಾರೆ.
Which is not another sort: only there are some who give you trouble, desiring to make changes in the good news of Christ.
8 ೮ ಆದರೂ ನಾವು ನಿಮಗೆ ಸಾರಿದ ಸುವಾರ್ತೆಗೆ ವಿರುದ್ಧವಾದದ್ದನ್ನು, ನಾವೇ ಆಗಲಿ ಅಥವಾ ಪರಲೋಕದಿಂದ ಬಂದ ದೇವದೂತನೇ ಆಗಲಿ, ನಿಮಗೆ ಸಾರಿದರೆ ಅವನು ಶಾಪಗ್ರಸ್ತನಾಗಲಿ.
But even if we, or an angel from heaven, were to be a preacher to you of good news other than that which we have given you, let there be a curse on him.
9 ೯ ನಾವು ಮೊದಲು ಹೇಳಿದಂತೆಯೇ ಈಗಲೂ ನಾನು ತಿರುಗಿ ಹೇಳುತ್ತೇನೆ. ನೀವು ಸ್ವೀಕರಿಸಿದ ಸುವಾರ್ತೆಗೆ ವಿರುದ್ಧವಾದದ್ದನ್ನು ಯಾವನಾದರೂ ನಿಮಗೆ ಸಾರಿದರೆ ಅವನು ಶಾಪಗ್ರಸ್ತನಾಗುವನು.
As we have said before, so say I now again, If any man is a preacher to you of any good news other than that which has been given to you, let there be a curse on him.
10 ೧೦ ನಾನೀಗ ಯಾರನ್ನು ಒಲಿಸಿಕೊಳ್ಳುತ್ತಾ ಇದ್ದೇನೆ? ಮನುಷ್ಯರನ್ನೋ? ದೇವರನ್ನೋ? ನಾನು ಮನುಷ್ಯರನ್ನು ಮೆಚ್ಚಿಸುವುದಕ್ಕೆ ಪ್ರಯತ್ನಿಸುತ್ತಾ ಇದ್ದೇನೋ? ಇನ್ನೂ ಮನುಷ್ಯರನ್ನು ಮೆಚ್ಚಿಸುವವನಾಗಿದ್ದರೆ ನಾನು ಕ್ರಿಸ್ತನ ಸೇವಕನಲ್ಲ.
Am I now using arguments to men, or God? or is it my desire to give men pleasure? if I was still pleasing men, I would not be a servant of Christ.
11 ೧೧ ಸಹೋದರರೇ, ನಾನು ಸಾರಿದ ಸುವಾರ್ತೆಯಂತೂ ಕೇವಲ ಮನುಷ್ಯನಿಂದ ಬಂದದ್ದಲ್ಲವೆಂದು ನೀವು ತಿಳಿದುಕೊಳ್ಳಬೇಕೆಂದು ನಾನು ಬಯಸುತ್ತೇನೆ.
Because I say to you, my brothers, that the good news of which I was the preacher is not man's.
12 ೧೨ ನಾನು ಅದನ್ನು ಮನುಷ್ಯನಿಂದ ಹೊಂದಲಿಲ್ಲ, ನನಗೆ ಯಾರೂ ಉಪದೇಶಿಸಲಿಲ್ಲ, ಬದಲಾಗಿ ಯೇಸು ಕ್ರಿಸ್ತನೇ ಅದನ್ನು ನನಗೆ ಪ್ರಕಟಪಡಿಸಿದನು.
For I did not get it from man, and I was not given teaching in it, but it came to me through revelation of Jesus Christ.
13 ೧೩ ಹಿಂದೆ ನಾನು ಯೆಹೂದ್ಯ ಮತದಲ್ಲಿದ್ದಾಗ ನನ್ನ ನಡತೆ ಎಂಥದ್ದೆಂದು ನೀವು ಕೇಳಿದ್ದೀರಿ. ನಾನು ದೇವರ ಸಭೆಯನ್ನು ಬಹಳವಾಗಿ ಹಿಂಸೆಪಡಿಸಿ ಹಾಳುಮಾಡುತ್ತಿದ್ದೆನು.
For news has come to you of my way of life in the past in the Jews' religion, how I was cruel without measure to the church of God, and did great damage to it:
14 ೧೪ ಇದಲ್ಲದೆ ನಾನು ನನ್ನ ಪೂರ್ವಿಕರಿಂದ ಬಂದ ಸಂಪ್ರದಾಯಗಳ ಬಗ್ಗೆ ಬಹು ಅಭಿಮಾನವುಳ್ಳವನಾಗಿ, ನನ್ನ ಜನರೊಳಗೆ ಸಮಪ್ರಾಯದವರಾದ ಅನೇಕರಿಗಿಂತ ಯೆಹೂದ್ಯ ಮತಾಚಾರದಲ್ಲಿ ಆಸಕ್ತನಾಗಿದ್ದೆನು.
And I went farther in the Jews' religion than a number of my generation among my countrymen, having a more burning interest in the beliefs handed down from my fathers.
15 ೧೫ ಆದರೆ ನಾನು ನನ್ನ ತಾಯಿಯ ಗರ್ಭದಲ್ಲಿದ್ದಾಗಲೇ ನನ್ನನ್ನು ಪ್ರತ್ಯೇಕಿಸಿ, ತನ್ನ ಕೃಪೆಯಿಂದ ಕರೆದ ದೇವರು,
But when it was the good pleasure of God, by whom I was marked out even from my mother's body, through his grace,
16 ೧೬ ತನ್ನ ಮಗನನ್ನು ನನ್ನೊಳಗೆ ಪ್ರಕಟಪಡಿಸುವುದಕ್ಕೆ ಮತ್ತು ಅನ್ಯಜನರಲ್ಲಿ ಆತನನ್ನು ನಾನು ಪ್ರಸಿದ್ಧಿಪಡಿಸುವವನಾಗಬೇಕೆಂದು ಇಚ್ಛಿಸಿದನು. ನಾನು ಕೂಡಲೇ ಮನುಷ್ಯರ ಆಲೋಚನೆಯನ್ನು ಕೇಳದೆ,
To give the revelation of his Son in me, so that I might give the news of him to the Gentiles; then I did not take the opinion of flesh and blood,
17 ೧೭ ಯೆರೂಸಲೇಮಿಗೆ ನನಗಿಂತ ಮೊದಲು ಅಪೊಸ್ತಲರಾಗಿದ್ದವರ ಬಳಿಗೂ ಹೋಗದೆ ಅರಬಸ್ಥಾನಕ್ಕೆ ಹೋಗಿ ತಿರುಗಿ ದಮಸ್ಕಕ್ಕೆ ಬಂದೆನು.
And I went not up to Jerusalem to those who were Apostles before me; but I went away into Arabia, and again I came back to Damascus.
18 ೧೮ ಮೂರು ವರ್ಷಗಳ ತರುವಾಯ ಕೇಫನ ಪರಿಚಯವನ್ನು ಮಾಡಿಕೊಳ್ಳಬೇಕೆಂದು ಯೆರೂಸಲೇಮಿಗೆ ಹೋಗಿ ಅವನ ಬಳಿಯಲ್ಲಿ ಹದಿನೈದು ದಿನಗಳು ಇದ್ದೆನು.
Then after three years I went up to Jerusalem to see Cephas, and was there with him fifteen days.
19 ೧೯ ಆದರೆ ಕರ್ತನ ಸಹೋದರನಾದ ಯಾಕೋಬನಲ್ಲದೆ ಅಪೊಸ್ತಲರಲ್ಲಿ ಬೇರೆ ಯಾರನ್ನೂ ನಾನು ಕಾಣಲಿಲ್ಲ.
But of the other Apostles I saw only James, the Lord's brother.
20 ೨೦ ನಾನು ನಿಮಗೆ ಬರೆಯುವ ಸಂಗತಿಗಳು ಸುಳ್ಳಲ್ಲವೆಂಬುದಕ್ಕೆ ಇಗೋ, ದೇವರೇ ಸಾಕ್ಷೀ.
Now God is witness that the things which I am writing to you are true.
21 ೨೧ ಆ ಮೇಲೆ ಸಿರಿಯ ಮತ್ತು ಕಿಲಿಕ್ಯ ಪ್ರಾಂತ್ಯಗಳಿಗೆ ಹೋದೆನು.
Then I came to the parts of Syria and Cilicia.
22 ೨೨ ಆದರೆ ಕ್ರಿಸ್ತನಲ್ಲಿರುವ ಯೂದಾಯದ ಸಭೆಗಳಿಗೆ ನನ್ನ ಪರಿಚಯವಿರಲಿಲ್ಲ.
And the churches of Judaea which were in Christ still had no knowledge of my face or person:
23 ೨೩ “ಪೂರ್ವದಲ್ಲಿ ನಮ್ಮನ್ನು ಹಿಂಸೆಪಡಿಸಿದವನು, ತಾನು ಹಾಳು ಮಾಡುತ್ತಿದ್ದ ನಂಬಿಕೆಯನ್ನು ಈಗ ಸಾರುತ್ತಿದ್ದಾನೆ” ಎಂಬ ಸುದ್ದಿಯನ್ನು ಅವರು ಕೇಳಿ,
Only it came to their ears that he who at one time was cruel to us is now preaching the faith which before had been attacked by him;
24 ೨೪ ನನ್ನ ಕುರಿತಾಗಿ ದೇವರನ್ನು ಕೊಂಡಾಡಿದರು.
And they gave glory to God in me.