< ಆದಿಕಾಂಡ 11 >
1 ೧ ಆಗ ಭೂಲೋಕದವರೆಲ್ಲರಿಗೂ ಒಂದೇ ಭಾಷೆ; ಒಂದೇ ಮಾತು ಇತ್ತು. ಭಾಷಾಭೇದಗಳೇನೂ ಇರಲಿಲ್ಲ.
To, a lokacin, yaren mutanen duniya ɗaya ne, maganarsu kuma ɗaya ce.
2 ೨ ಜನರು ಪೂರ್ವ ದಿಕ್ಕಿಗೆ ಪ್ರಯಾಣಮಾಡುತ್ತಿರುವಾಗ ಶಿನಾರ್ ದೇಶದ ಬಯಲು ಸೀಮೆಯನ್ನು ಕಂಡು ಅಲ್ಲೇ ನೆಲೆಸಿದರು.
Yayinda mutane suke ta yin ƙaura zuwa gabas, sai suka sami fili a Shinar, suka zauna a can.
3 ೩ “ಅವರೆಲ್ಲರೂ ಬನ್ನಿ, ನಾವು ಇಟ್ಟಿಗೆಗಳನ್ನು ಮಾಡಿ, ಚೆನ್ನಾಗಿ ಸುಡೋಣ,” ಎಂದು ಅವರು ಒಬ್ಬರಿಗೊಬ್ಬರು ಮಾತನಾಡಿಕೊಂಡರು. ಅವರು ಕಲ್ಲಿಗೆ ಬದಲಾಗಿ ಇಟ್ಟಿಗೆಯನ್ನು, ಸುಣ್ಣಕ್ಕೆ ಬದಲಾಗಿ ಜೇಡಿಮಣ್ಣನ್ನು ಉಪಯೋಗಿಸಿದರು.
Suka ce wa juna, “Ku zo, mu yi tubula, mu gasa su sosai.” Suka yi amfani da tubula a maimakon duwatsu, kwalta kuma a maimakon laka.
4 ೪ ಅವರು, “ಬನ್ನಿರಿ, ಒಂದು ಪಟ್ಟಣವನ್ನು ಕಟ್ಟೋಣ, ಆಕಾಶವನ್ನು ಮುಟ್ಟುವ ಒಂದು ಗೋಪುರವನ್ನೂ ಕಟ್ಟಿ ದೊಡ್ಡ ಹೆಸರನ್ನು ಸಂಪಾದಿಸಿಕೊಳ್ಳೋಣ; ಹೀಗೆ ಮಾಡಿದರೆ ಭೂಮಿಯ ಮೇಲೆಲ್ಲಾ ಚದರಿಹೋಗುವುದಕ್ಕೆ ಆಸ್ಪದವಾಗುವುದಿಲ್ಲ” ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡರು.
Sa’an nan suka ce, “Ku zo, mu gina wa kanmu birni da hasumiyar da za tă kai har sammai, domin mu yi wa kanmu suna, don kada mu warwatsu ko’ina a doron ƙasa.”
5 ೫ ಮನುಷ್ಯರು ಕಟ್ಟುತ್ತಿದ್ದ ಆ ಪಟ್ಟಣವನ್ನೂ, ಗೋಪುರವನ್ನೂ ನೋಡುವುದಕ್ಕೆ ಯೆಹೋವನು ಇಳಿದು ಬಂದನು.
Sai Ubangiji ya sauko don yă ga birni da kuma hasumiyar da mutanen suke gini.
6 ೬ ನೋಡಿದ ಮೇಲೆ ಯೆಹೋವನು, “ಇವರು ಒಂದೇ ಜನಾಂಗ; ಇವರೆಲ್ಲರಿಗೂ ಒಂದೇ ಭಾಷೆ. ಪ್ರಾರಂಭದಲ್ಲೇ ಇವರು ಇಷ್ಟು ದೊಡ್ಡ ಯೋಜನೆಯೊಂದಿಗೆ ಒಟ್ಟಾಗಿ ಕೆಲಸ ಮಾಡಲಾರಂಭಿಸಿದ್ದಾರೆ. ಇನ್ನು ಮುಂದೆ ಇವರು ಏನು ಮಾಡಲು ಉದ್ದೇಶಿಸಿದರೂ ಇವರಿಗೆ ಯಾವುದೂ ಅಸಾಧ್ಯವಾಗುವುದಿಲ್ಲ.
Ubangiji ya ce, “Ga su, su jama’a ɗaya ce, su duka kuwa harshensu guda ne. Wannan kuwa masomi ne kawai na abin da za su iya yi, babu kuma abin da suka yi shirya yi da ba za su iya yi ba.
7 ೭ ಇವರಲ್ಲಿ ಒಬ್ಬರ ಮಾತು ಒಬ್ಬರಿಗೆ ತಿಳಿಯದಂತೆ ಇವರ ಭಾಷೆಯನ್ನು ಗಲಿಬಿಲಿ ಮಾಡೋಣ ಬನ್ನಿ” ಎಂದನು.
Zo, mu sauka, mu rikitar da harshensu don kada su fahimci juna.”
8 ೮ ಯೆಹೋವನು ಅದೇ ಪ್ರಕಾರ ಅವರನ್ನು ಭೂಲೋಕದಲ್ಲೆಲ್ಲಾ ಚದರಿಸಿ ಬಿಟ್ಟನು. ಅವರು ಆ ಪಟ್ಟಣ ಕಟ್ಟುವುದನ್ನು ನಿಲ್ಲಿಸಿಬಿಟ್ಟರು.
Saboda haka Ubangiji ya watsar da su daga wurin zuwa ko’ina a doron ƙasa, suka kuwa daina gina birnin.
9 ೯ ಸಮಸ್ತ ಲೋಕದ ಭಾಷೆಯನ್ನು ಯೆಹೋವನು ಅಲ್ಲಿ ಗಲಿಬಿಲಿ ಮಾಡಿ, ಅವರನ್ನು ಭೂಲೋಕದಲ್ಲೆಲ್ಲಾ ಚದರಿಸಿದ್ದರಿಂದ ಆ ಪಟ್ಟಣಕ್ಕೆ ಬಾಬೆಲ್ (ದೇವರ ಬಾಗಿಲು) ಎಂಬ ಹೆಸರಾಯಿತು.
Shi ya sa aka kira birnin Babel, domin a can ne Ubangiji ya rikitar da harshen dukan duniya. Daga can Ubangiji ya watsar da su ko’ina a doron ƙasa.
10 ೧೦ ಶೇಮನ ವಂಶವೃಕ್ಷ: ಜಲಪ್ರಳಯವು ಕಳೆದು ಎರಡು ವರ್ಷಗಳಾದ ಮೇಲೆ ಶೇಮನು ನೂರು ವರ್ಷದವನಾಗಿ ಅರ್ಪಕ್ಷದನನ್ನು ಪಡೆದನು.
Wannan shi ne labarin Shem. Shekara biyu bayan ambaliya, sa’ad da Shem ya yi shekara 100, sai ya haifi Arfakshad.
11 ೧೧ ಶೇಮನು ಅರ್ಪಕ್ಷದನನ್ನು ಪಡೆದ ಮೇಲೆ ಗಂಡು ಮತ್ತು ಹೆಣ್ಣು ಮಕ್ಕಳನ್ನು ಪಡೆದು ಐನೂರು ವರ್ಷ ಬದುಕಿದನು.
Bayan ya haifi Arfakshad, Shem ya yi shekara 500, ya haifi waɗansu’ya’ya maza da mata.
12 ೧೨ ಅರ್ಪಕ್ಷದನು ಮೂವತ್ತೈದು ವರ್ಷದವನಾಗಿ ಶೆಲಹನನ್ನು ಪಡೆದನು.
Sa’ad da Arfakshad ya yi shekara 35, sai ya haifi Shela.
13 ೧೩ ಅರ್ಪಕ್ಷದನು ಶೆಲಹನನ್ನು ಪಡೆದ ಮೇಲೆ ಗಂಡು ಹೆಣ್ಣು ಮಕ್ಕಳನ್ನು ಪಡೆದು ನಾನೂರ ಮೂರು ವರ್ಷ ಬದುಕಿದನು.
Bayan ya haifi Shela kuwa, Arfakshad ya yi shekara 403, ya kuma haifi waɗansu’ya’ya maza da mata.
14 ೧೪ ಶೆಲಹನು ಮೂವತ್ತನಾಲ್ಕು ವರ್ಷದವನಾಗಿ ಎಬರನನ್ನು ಪಡೆದನು.
Sa’ad da Shela ya yi shekaru 30, sai ya haifi Eber.
15 ೧೫ ಶೆಲಹನು ಎಬರನನ್ನು ಪಡೆದ ಮೇಲೆ ಗಂಡು ಮತ್ತು ಹೆಣ್ಣು ಮಕ್ಕಳನ್ನು ಪಡೆದು ನಾನೂರ ಮೂರು ವರ್ಷ ಬದುಕಿದನು.
Bayan ya haifi Eber, Shela ya yi shekara 403, ya kuma haifi waɗansu’ya’ya maza da mata.
16 ೧೬ ಎಬರನು ಮೂವತ್ತನಾಲ್ಕು ವರ್ಷದವನಾಗಿ ಪೆಲೆಗನನ್ನು ಪಡೆದನು.
Sa’ad da Eber ya yi shekaru 34, sai ya haifi Feleg.
17 ೧೭ ಎಬರನು ಪೆಲೆಗನನ್ನು ಪಡೆದ ಮೇಲೆ ಗಂಡು ಹೆಣ್ಣು ಮಕ್ಕಳನ್ನು ಪಡೆದು ನಾನೂರ ಮೂವತ್ತು ವರ್ಷ ಬದುಕಿದನು.
Bayan ya haifi Feleg, Eber ya yi shekara 430, ya kuma haifi waɗansu’ya’ya maza da mata.
18 ೧೮ ಪೆಲೆಗನು ಮೂವತ್ತು ವರ್ಷದವನಾಗಿ ರೆಗೂವನನ್ನು ಪಡೆದನು.
Sa’ad da Feleg ya yi shekaru 30, sai ya haifi Reyu.
19 ೧೯ ಪೆಲೆಗನು ರೆಗೂವನನ್ನು ಪಡೆದ ಮೇಲೆ ಗಂಡು ಮತ್ತು ಹೆಣ್ಣು ಮಕ್ಕಳನ್ನು ಪಡೆದು ಇನ್ನೂರ ಒಂಭತ್ತು ವರ್ಷ ಬದುಕಿದನು.
Bayan ya haifi Reyu, Feleg ya yi shekara 209, ya kuma haifi waɗansu’ya’ya maza da mata.
20 ೨೦ ರೆಗೂವನು ಮೂವತ್ತೆರಡು ವರ್ಷದವನಾಗಿ ಸೆರೂಗನನ್ನು ಪಡೆದನು.
Sa’ad da Reyu ya yi shekaru 32, sai ya haifi Serug.
21 ೨೧ ಸೆರೂಗನು ರೆಗೂವನನ್ನು ಪಡೆದ ಮೇಲೆ ಗಂಡು ಮತ್ತು ಹೆಣ್ಣು ಮಕ್ಕಳನ್ನು ಪಡೆದು ಇನ್ನೂರ ಏಳು ವರ್ಷ ಬದುಕಿದನು.
Bayan ya haifi Serug, Reyu ya yi shekara 207, ya kuma haifi waɗansu’ya’ya maza da mata.
22 ೨೨ ಸೆರೂಗನು ಮೂವತ್ತು ವರ್ಷದವನಾಗಿ ನಾಹೋರನನ್ನು ಪಡೆದನು.
Sa’ad da Serug ya yi shekaru 30, sai ya haifi Nahor.
23 ೨೩ ಸೆರೂಗನು ನಾಹೋರನನ್ನು ಪಡೆದ ಮೇಲೆ ಗಂಡು ಮತ್ತು ಹೆಣ್ಣು ಮಕ್ಕಳನ್ನು ಪಡೆದು ಇನ್ನೂರು ವರ್ಷ ಬದುಕಿದನು.
Bayan ya haifi Nahor, Serug ya yi shekara 200, ya kuma haifi waɗansu’ya’ya maza da mata.
24 ೨೪ ನಾಹೋರನು ಇಪ್ಪತ್ತೊಂಭತ್ತು ವರ್ಷದವನಾಗಿ ತೆರಹನನ್ನು ಪಡೆದನು.
Sa’ad da Nahor ya yi shekaru 29, sai ya haifi Tera.
25 ೨೫ ನಾಹೋರ್ ತೆರಹನನ್ನು ಪಡೆದ ಮೇಲೆ ಗಂಡು ಮತ್ತು ಹೆಣ್ಣು ಮಕ್ಕಳನ್ನು ಪಡೆದು ನೂರ ಹತ್ತೊಂಬತ್ತು ವರ್ಷ ಬದುಕಿದನು.
Bayan ya haifi Tera, Nahor ya yi shekara 119, ya kuma haifi waɗansu’ya’ya maza da mata.
26 ೨೬ ತೆರಹನು ಎಪ್ಪತ್ತು ವರ್ಷದವನಾಗಿ ಅಬ್ರಾಮ, ನಾಹೋರ್, ಹಾರಾನ್ ಎಂಬ ಮಕ್ಕಳನ್ನು ಪಡೆದನು.
Bayan Tera ya yi shekaru 70, sai ya haifi Abram, Nahor da Haran.
27 ೨೭ ತೆರಹನ ವಂಶದವರ ಚರಿತ್ರೆಯು: ತೆರಹನು ಅಬ್ರಾಮ, ನಾಹೋರ್, ಹಾರಾನ್ ಎಂಬುವರನ್ನು ಪಡೆದನು. ಹಾರಾನನು ಲೋಟನನ್ನು ಪಡೆದನು.
Wannan ita ce zuriyar Tera. Tera ya haifi Abram, Nahor da Haran. Haran kuma ya haifi Lot.
28 ೨೮ ಹಾರಾನನು ತಾನು ಹುಟ್ಟಿದ ದೇಶದೊಳಗೆ ಕಲ್ದೀಯರ ಊರ್ ಎಂಬ ಪಟ್ಟಣದಲ್ಲಿ ತನ್ನ ತಂದೆಯಾದ ತೆರಹನ ಮುಂದೆಯೇ ಸತ್ತನು.
Yayinda mahaifinsa Tera yana da rai, Haran ya rasu a Ur ta Kaldiyawa, a ƙasar haihuwarsa.
29 ೨೯ ಅಬ್ರಾಮನೂ ನಾಹೋರನೂ ಮದುವೆಮಾಡಿಕೊಂಡರು. ಅಬ್ರಾಮನ ಹೆಂಡತಿಯ ಹೆಸರು ಸಾರಯಳು, ನಾಹೋರನ ಹೆಂಡತಿಯ ಹೆಸರು ಮಿಲ್ಕಾ. ಈಕೆಯು ಹಾರಾನನ ಮಗಳು; ಹಾರಾನನು ಮಿಲ್ಕಳಿಗೂ ಇಸ್ಕಳಿಗೂ ತಂದೆ.
Abram da Nahor suka yi aure. Sunan matar Abram, Saira ne, sunan matar Nahor kuwa Milka; ita’yar Haran ce, mahaifin Milka da Iska.
30 ೩೦ ಸಾರಯಳು ಬಂಜೆಯಾಗಿದುದರಿಂದ ಆಕೆಗೆ ಮಕ್ಕಳಿರಲಿಲ್ಲ.
Saira kuwa bakararriya ce, ba ta da yara.
31 ೩೧ ತೆರಹನು ತನ್ನ ಮಗನಾದ ಅಬ್ರಾಮನನ್ನೂ, ತನಗೆ ಮೊಮ್ಮಗನೂ, ಹಾರಾನನಿಗೆ ಮಗನೂ ಆಗಿರುವ ಲೋಟನನ್ನೂ, ತನಗೆ ಸೊಸೆಯೂ ಅಬ್ರಾಮನಿಗೆ ಹೆಂಡತಿಯೂ ಆಗಿರುವ ಸಾರಯಳನ್ನೂ ಕರೆದುಕೊಂಡು ಕಾನಾನ್ ದೇಶಕ್ಕೆ ಹೋಗಬೇಕೆಂದು ಕಲ್ದೀಯರ ಊರ್ ಎಂಬ ಪಟ್ಟಣವನ್ನು ಬಿಟ್ಟು ಅವರು ಹಾರಾನ ಪಟ್ಟಣಕ್ಕೆ ಬಂದು ಅಲ್ಲೇ ವಾಸಮಾಡಿಕೊಂಡರು.
Tera ya ɗauki ɗansa Abraham, jikansa Lot ɗan Haran, da surukarsa Saira, matar Abram, tare kuwa suka bar Ur ta Kaldiyawa, don su tafi Kan’ana. Amma sa’ad da suka zo Haran sai suka zauna a can.
32 ೩೨ ತೆರಹನು ಇನ್ನೂರ ಐದು ವರ್ಷ ಬದುಕಿ ನಂತರ ಹಾರಾನಿನಲ್ಲಿ ಸತ್ತನು.
Tera yi shekaru 205, ya kuma mutu a Haran.