< ಆದಿಕಾಂಡ 13 >
1 ೧ ಹೀಗೆ ಅಬ್ರಾಮನು ತನ್ನದನ್ನೆಲ್ಲಾ ತೆಗೆದುಕೊಂಡು ಹೆಂಡತಿಯನ್ನೂ, ಲೋಟನನ್ನೂ ಸಂಗಡ ಕರೆದುಕೊಂಡು ಐಗುಪ್ತದೇಶವನ್ನು ಬಿಟ್ಟು ಕಾನಾನ್ ದೇಶದ ದಕ್ಷಿಣ ಪ್ರಾಂತ್ಯಕ್ಕೆ ಬಂದನು.
और इब्रहाम मिस्र से अपनी बीवी और अपने सब माल और लूत को साथ ले कर कनान के दख्खिन की तरफ़ चला।
2 ೨ ಅಬ್ರಾಮನು ಬಹು ಐಶ್ವರ್ಯವಂತನಾಗಿದ್ದನು; ಅವನಿಗೆ ಪಶುಗಳೂ ಬೆಳ್ಳಿಬಂಗಾರವೂ ಇದ್ದವು.
और इब्रहाम के पास चौपाए और सोना चाँदी बकसरत था।
3 ೩ ಅವನು ದಕ್ಷಿಣ ದೇಶವನ್ನು ಬಿಟ್ಟು ಮುಂದೆ ಪ್ರಯಾಣ ಮಾಡುತ್ತಾ ಬೇತೇಲಿನವರೆಗೆ ಅಂದರೆ ಬೇತೇಲಿಗೂ ಆಯಿ ಎಂಬ ಊರಿಗೂ
और वह कनान के दख्खिन से सफ़र करता हुआ बैत — एल में उस जगह पहुँचा जहाँ पहले बैत — एल और एे के बीच उसका डेरा था।
4 ೪ ನಡುವೆ ಪೂರ್ವದಲ್ಲಿ ಗುಡಾರ ಹಾಕಿಸಿ ಯಜ್ಞವೇದಿಯನ್ನು ಕಟ್ಟಿದ್ದ ಸ್ಥಳಕ್ಕೆ ಅಬ್ರಾಮನು ಹಿಂತಿರುಗಿ ಬಂದು ಅಲ್ಲಿ ಯೆಹೋವನ ಹೆಸರಿನಲ್ಲಿ ಆರಾಧಿಸಿದನು.
या'नी वह मक़ाम जहाँ उसने शुरु' में क़ुर्बानगाह बनाई थी, और वहाँ इब्रहाम ने ख़ुदावन्द से दुआ की।
5 ೫ ಅಬ್ರಾಮನ ಜೊತೆಯಲ್ಲಿದ್ದ ಲೋಟನಿಗೂ ಕುರಿ, ಎತ್ತು, ಕುಟುಂಬಗಳು ಇದ್ದವು.
और लूत के पास भी जो इब्रहाम का हमसफ़र था भेड़ — बकरियाँ, गाय — बैल और डेरे थे।
6 ೬ ಆ ಸ್ಥಳವು ಅವರಿಬ್ಬರ ಜೀವನಕ್ಕೆ ಸಾಲದೆ ಹೋಯಿತು.
और उस मुल्क में इतनी गुन्जाइश न थी कि वह इकट्ठे रहें, क्यूँकि उनके पास इतना माल था कि वह इकट्ठे नहीं रह सकते थे।
7 ೭ ಅವರಿಬ್ಬರ ಆಸ್ತಿ ಬಹಳವಾಗಿದ್ದುದರಿಂದ ಅವರು ಒಟ್ಟಿಗೆ ವಾಸವಾಗಿರುವುದು ಅಸಾಧ್ಯವಾಯಿತು. ಇದರಿಂದ ಅಬ್ರಾಮನ ದನ ಕಾಯುವವರಿಗೂ ಲೋಟನ ದನ ಕಾಯುವವರಿಗೂ ಜಗಳವಾಗುತ್ತಿತ್ತು. ಇದಲ್ಲದೆ ಕಾನಾನ್ಯರೂ ಪೆರಿಜೀಯರೂ ಆ ಕಾಲದಲ್ಲಿ ದೇಶದೊಳಗೆ ವಾಸವಾಗಿದ್ದರು.
और इब्रहाम के चरवाहों और लूत के चरवाहों में झगड़ा हुआ; और कना'नी और फ़रिज़्ज़ी उस वक़्त मुल्क में रहते थे।
8 ೮ ಹೀಗಿರಲು ಅಬ್ರಾಮನು ಲೋಟನಿಗೆ, “ನನಗೂ ನಿನಗೂ, ನನ್ನ ದನ ಕಾಯುವವರಿಗೂ ನಿನ್ನ ದನ ಕಾಯುವವರಿಗೂ ಜಗಳವಾಗಬಾರದು; ನಾವು ಸಹೋದರರಲ್ಲವೇ.
तब इब्रहाम ने लूत से कहा कि मेरे और तेरे बीच और मेरे चरवाहों और तेरे चरवाहों के बीच झगड़ा न हुआ करे, क्यूँकि हम भाई हैं।
9 ೯ ದೇಶವೆಲ್ಲಾ ನಿನ್ನ ಎದುರಿಗೆ ಇದೆ; ದಯವಿಟ್ಟು ನನ್ನನ್ನು ಬಿಟ್ಟು ಪ್ರತ್ಯೇಕವಾಗಿ ಹೋಗು. ನೀನು ಎಡಗಡೆಗೆ ಹೋದರೆ ನಾನು ಬಲಗಡೆಗೆ ಹೋಗುವೆನು; ನೀನು ಬಲಗಡೆಗೆ ಹೋದರೆ ನಾನು ಎಡಗಡೆಗೆ ಹೋಗುವೆನು” ಎಂದು ಹೇಳಿದನು.
क्या यह सारा मुल्क तेरे सामने नहीं? इसलिए तू मुझ से अलग हो जा: अगर तू बाएँ जाए तो मैं दहने जाऊँगा, और अगर तू दहने जाए तो मैं बाएँ जाऊँगा।
10 ೧೦ ಲೋಟನು ಕಣ್ಣೆತ್ತಿ ನೋಡಲಾಗಿ, ಯೊರ್ದನ್ ಹೊಳೆಯ ಸುತ್ತಲಿನ ಪ್ರದೇಶವು ಚೋಗರಿನವರೆಗೆ ನೀರಾವರಿಯ ಪ್ರದೇಶವೆಂದು ತಿಳಿದುಕೊಂಡನು. ಯೆಹೋವನು ಸೊದೋಮ್ ಗೊಮೋರ ಪಟ್ಟಣಗಳನ್ನು ನಾಶಮಾಡುವುದಕ್ಕಿಂತ ಮೊದಲು ಆ ಸೀಮೆಯು ಯೆಹೋವನ ವನದಂತೆಯೂ, ಐಗುಪ್ತ ದೇಶದಂತೆಯೂ ನೀರಾವರಿಯ ಪ್ರದೇಶವಾಗಿತ್ತು.
तब लूत ने आँख उठाकर यरदन की सारी तराई पर जो ज़ुग़र की तरफ़ है नज़र दौड़ाई। क्यूँकि वह इससे पहले कि ख़ुदावन्द ने सदूम और 'अमूरा को तबाह किया, ख़ुदावन्द के बाग़ और मिस्र के मुल्क की तरह खू़ब सेराब थी।
11 ೧೧ ಆದುದರಿಂದ ಲೋಟನು ಯೊರ್ದನ್ ಹೊಳೆಯ ಸುತ್ತಣ ಪ್ರದೇಶವನ್ನು ಆರಿಸಿಕೊಂಡು ಮೂಡಣ ಕಡೆಗೆ ಹೊರಟನು.
तब लूत ने यरदन की सारी तराई को अपने लिए चुन लिया, और वह मशरिक़ की तरफ़ चला; और वह एक दूसरे से जुदा हो गए।
12 ೧೨ ಹೀಗೆ ಅವರಿಬ್ಬರೂ ಪ್ರತ್ಯೇಕವಾದರು. ಅಬ್ರಾಮನು ಕಾನಾನ್ ದೇಶದಲ್ಲಿ ವಾಸಮಾಡಿದನು. ಲೋಟನು ಯೊರ್ದನ್ ಹೊಳೆಯ ಸುತ್ತಣ ಊರುಗಳಲ್ಲಿ ವಾಸ ಮಾಡುತ್ತಾ ಸೊದೋಮಿನ ಸಮೀಪದಲ್ಲಿ ಗುಡಾರ ಹಾಕಿದನು.
इब्रहाम तो मुल्क — ए — कना'न में रहा, और लूत ने तराई के शहरों में सुकूनत इख़्तियार की और सदूम की तरफ़ अपना डेरा लगाया।
13 ೧೩ ಆದರೆ ಸೊದೋಮ್ ಪಟ್ಟಣದ ಜನರು ಯೆಹೋವನ ದೃಷ್ಟಿಯಲ್ಲಿ ಬಹು ದುಷ್ಟರೂ ಪಾಪಿಷ್ಠರು ಆಗಿದ್ದರು.
और सदूम के लोग ख़ुदावन्द की नज़र में निहायत बदकार और गुनहगार थे।
14 ೧೪ ಲೋಟನು ಅಬ್ರಾಮನನ್ನು ಬಿಟ್ಟು ಬೇರೆಯಾದ ನಂತರ ಯೆಹೋವನು ಅಬ್ರಾಮನಿಗೆ, “ನೀನಿರುವ ಸ್ಥಳದಿಂದ ದಕ್ಷಿಣಕ್ಕೂ, ಉತ್ತರಕ್ಕೂ, ಪೂರ್ವಕ್ಕೂ, ಪಶ್ಚಿಮಕ್ಕೂ, ಕಣ್ಣೆತ್ತಿ ನೋಡು.
और लूत के जुदा हो जाने के बाद ख़ुदावन्द ने इब्रहाम से कह कि अपनी आँख उठा और जिस जगह तू है वहाँ से शिमाल दख्खिन और मशरिक़ और मग़रिब की तरफ़ नज़र दौड़ा।
15 ೧೫ ನೀನು ನೋಡುವ ಈ ದೇಶವನ್ನೆಲ್ಲಾ ನಿನಗೂ ನಿನ್ನ ಸಂತತಿಗೂ ಶಾಶ್ವತವಾಗಿ ಕೊಡುವೆನು.
क्यूँकि यह तमाम मुल्क जो तू देख रहा है, मैं तुझ को और तेरी नसल को हमेशा के लिए दूँगा।
16 ೧೬ ನಿನ್ನ ಸಂತಾನದವರನ್ನು ಭೂಮಿಯ ಧೂಳಿನಷ್ಟು ಅಸಂಖ್ಯವಾಗಿ ಮಾಡುವೆನು. ಭೂಮಿಯಲ್ಲಿರುವ ಧೂಳನ್ನು ಲೆಕ್ಕಮಾಡುವುದಾದರೆ ನಿನ್ನ ಸಂತಾನವನ್ನೂ ಲೆಕ್ಕಿಸಬಹುದು.
और मैं तेरी नसल को ख़ाक के ज़र्रों की तरह बनाऊँगा, ऐसा कि अगर कोई शख़्स ख़ाक के ज़र्रों को गिन सके तो तेरी नसल भी गिन ली जाएगी।
17 ೧೭ ನೀನೆದ್ದು, ಈ ದೇಶದ ಎಲ್ಲಾ ಕಡೆಯಲ್ಲಿಯೂ ತಿರುಗಾಡು; ಇದನ್ನು ನಿನಗೆ ಕೊಡುವೆನು” ಎಂದು ಹೇಳಿದನು.
उठ, और इस मुल्क की लम्बाई और चौड़ाई में घूम, क्यूँकि मैं इसे तुझ को दूँगा।
18 ೧೮ ತರುವಾಯ ಅಬ್ರಾಮನು ಗುಡಾರವನ್ನು ತೆಗೆದುಕೊಂಡು ಹೆಬ್ರೋನಿನಲ್ಲಿರುವ ಮಮ್ರೆ ಮೋರೆ ಎಂಬ ತೋಪಿಗೆ ಬಂದು ಅಲ್ಲೇ ವಾಸಮಾಡಿಕೊಂಡು, ಯೆಹೋವನಿಗೆ ಯಜ್ಞವೇದಿಯನ್ನು ಕಟ್ಟಿಸಿದನು.
और इब्रहाम ने अपना डेरा उठाया, और ममरे के बलूतों में जो हबरून में हैं जा कर रहने लगा; और वहाँ ख़ुदावन्द के लिए एक क़ुर्बानगाह बनाई।