< ಆದಿಕಾಂಡ 14 >
1 ೧ ಆ ದಿನಗಳಲ್ಲಿ ಶಿನಾರಿನ ಅರಸನಾದ ಅಮ್ರಾಫೆಲನು, ಎಲ್ಲಜಾರಿನ ಅರಸನಾದ ಅರಿಯೋಕನು, ಏಲಾಮಿನ ಅರಸನಾದ ಕೆದೊರ್ಲಗೋಮರನು, ಗೋಯಿಮದ ಅರಸನಾದ ತಿದ್ಗಾಲನು ಈ ನಾಲ್ವರು ಈಗಿನ ಲವಣಸಮುದ್ರ ಎನ್ನಿಸಿಕೊಳ್ಳುವ ಸಿದ್ದೀಮ್,
Wakati huu Amrafeli mfalme wa Shinari, Arioko mfalme wa Elasari, Kedorlaoma mfalme wa Elamu, na Tidali mfalme wa Goimu
2 ೨ ತಗ್ಗು ಪ್ರದೇಶದಲ್ಲಿ ಒಟ್ಟಾಗಿ ಕೂಡಿದ್ದ ಸೊದೋಮಿನ ಅರಸನಾದ ಬೆರಗನು, ಗೊಮೋರದ ಅರಸನಾದ ಬಿರ್ಶಗನು, ಅದ್ಮಾಹದ ಅರಸನಾದ ಶಿನಾಬನು, ಚೆಬೋಯಿಮನ ಅರಸನಾದ ಶೆಮೇಬರನ, ಬೇಲಗ (ಅಂದರೆ ಚೋಗರದ) ಎಂಬ ಐದು ಅರಸರ ವಿರುದ್ಧವಾಗಿ ಯುದ್ಧ ಮಾಡಿದರು.
kwa pamoja walikwenda kupigana vita dhidi ya Bera mfalme wa Sodoma, Birsha mfalme wa Gomora, Shinabu mfalme wa Adma, Shemeberi mfalme wa Seboimu, na mfalme wa Bela (yaani Soari).
3 ೩ ಈ ಐದು ಅರಸರು ಈಗಿನ ಲವಣಸಮುದ್ರ ಎನ್ನಿಸಿಕೊಳ್ಳುವ ಸಿದ್ದೀಮ್, ತಗ್ಗಿನ ಪ್ರದೇಶದಲ್ಲಿ ಒಟ್ಟಾಗಿ ಕೂಡಿದ್ದರು.
Hawa wote waliotajwa mwishoni waliunganisha majeshi yao kutoka Bonde la Sidimu (yaani Bahari ya Chumvi).
4 ೪ ಬೆರಗ ಮೊದಲಾದ ಈ ಐದು ಅರಸರು ಹನ್ನೆರಡು ವರ್ಷ ಕೆದೊರ್ಲಗೋಮರನಿಗೆ ಅಧೀನರಾಗಿದ್ದು ಹದಿಮೂರನೆಯ ವರ್ಷದಲ್ಲಿ ತಿರುಗಿ ಬಿದ್ದರು.
Walikuwa wametawaliwa na Mfalme Kedorlaoma kwa miaka kumi na miwili, lakini mwaka wa kumi na tatu waliasi.
5 ೫ ಹದಿನಾಲ್ಕನೆಯ ವರ್ಷದಲ್ಲಿ ಕೆದೊರ್ಲಗೋಮರನೂ ಅವನಿಗೆ ಸೇರಿದ್ದ ರಾಜರೂ ಬಂದು ಅಷ್ಟರೋತ್ ಕರ್ನಯಿಮಿನಲ್ಲಿ ರೆಫಾಯರನ್ನೂ ಹಾಮಿನಲ್ಲಿ ಜೂಜ್ಯರನ್ನೂ ಶಾವೆಕಿರ್ಯಾತಯಿಮಿನಲ್ಲಿ ಏಮಿಯರನ್ನೂ ಸೋಲಿಸಿದರು.
Mnamo mwaka wa kumi na nne, Mfalme Kedorlaoma na wafalme waliojiunga naye walikwenda kupigana na kuwashinda Warefai katika Ashtaroth-Kanaimu, Wazuzi katika Hamu, Waemi katika Shawe-Kiriathaimu,
6 ೬ ಇದಲ್ಲದೆ ಸೇಯೀರೆಂಬ ಬೆಟ್ಟದ ಸೀಮೆಯಲ್ಲಿ ವಾಸವಾಗಿದ್ದ ಹೋರಿಯರನ್ನು, ಅಲ್ಲೇ ಸೋಲಿಸಿ ಮರಳುಗಾಡಿನ ಹತ್ತಿರವಿರುವ ಎಲ್ಪಾರಾನಿನ ವರೆಗೂ ಹಿಂದಟ್ಟಿದನು.
na Wahori katika nchi ya kilima cha Seiri, hadi El-Parani karibu na jangwa.
7 ೭ ಆ ಮೇಲೆ ಅವರು ಹಿಂದಿರುಗಿಕೊಂಡು ಕಾದೇಶ್ ಎನ್ನುವ ಎನ್ಮಿಷ್ಟಾಟಿಗೆ ಬಂದು ಅಮಾಲೇಕ್ಯರ ಸಮಸ್ತ ನಾಡನ್ನೂ ಹಚಚೋನ್ ತಾಮರಿನಲ್ಲಿ ವಾಸವಾಗಿದ್ದ ಅಮೋರಿಯರನ್ನೂ ಗೆದ್ದರು.
Kisha wakarudi wakaenda En-Misfati (yaani Kadeshi), wakashinda nchi yote ya Waamaleki, pamoja na Waamori waliokuwa wakiishi Hasason-Tamari.
8 ೮ ಆಗ ಸೊದೋಮ್, ಗೊಮೋರ, ಅದ್ಮಾಹ, ಚೆಬೋಯಿಮ್ ಹಾಗೂ ಚೋಗರೆಂಬ ಬೇಲಗದ ರಾಜರು ಹೊರಟು ಅವರಿಗೆದುರಾಗಿ,
Ndipo mfalme wa Sodoma, mfalme wa Gomora, mfalme wa Adma, mfalme wa Seboimu, na mfalme wa Bela (yaani Soari) wakatoka kupanga majeshi yao kwenye Bonde la Sidimu
9 ೯ ಅಂದರೆ ಏಲಾಮಿನ ರಾಜನಾದ ಕೆದೊರ್ಲಗೋಮರ್, ಗೋಯಿಮದ ರಾಜನಾದ ತಿದ್ಗಾಲ, ಶಿನಾರ್ ಅರಸನಾದ ಅಮ್ರಾಫೆಲ್, ಎಲ್ಲಸಾರಿನ ರಾಜನಾದ ಅರಿಯೋಕ ಇವರಿಗೆ ವಿರೋಧವಾಗಿ ಸಿದ್ದೀಮ್ ಎಂಬ ತಗ್ಗಿನಲ್ಲಿ ತಮ್ಮ ದಂಡನ್ನು ನಿಲ್ಲಿಸಿದರು. ಹೀಗೆ ನಾಲ್ಕು ಮಂದಿ ರಾಜರು ಐದು ಮಂದಿ ರಾಜರನ್ನು ಎದುರಿಸಿದರು.
dhidi ya Kedorlaoma, mfalme wa Elamu, Tidali mfalme wa Goimu, Amrafeli mfalme wa Shinari, na Arioko mfalme wa Elasari, yaani wafalme wanne dhidi ya wafalme watano.
10 ೧೦ ಆದರೆ ಸಿದ್ದೀಮ್ ತಗ್ಗು ಪ್ರದೇಶ ಕಲ್ಲರಗಿನ ಕೆಸರುಗುಣಿಗಳಿಂದ ತುಂಬಿತ್ತು. ಸೊದೋಮ್ ಗೊಮೋರಗಳ ರಾಜರ ಕಡೆಯವರು ಓಡಿಹೋಗುವಾಗ ಆ ಗುಣಿಗಳಲ್ಲಿ ಬಿದ್ದು ಸತ್ತರು; ಉಳಿದವರು ಬೆಟ್ಟಗಳಿಗೆ ಓಡಿಹೋದರು.
Basi Bonde la Sidimu lilikuwa limejaa mashimo ya lami, nao wafalme wa Sodoma na wa Gomora walipokimbia, baadhi ya watu walitumbukia huko na wengine wakakimbilia vilimani.
11 ೧೧ ಗೆದ್ದ ಆ ನಾಲ್ಕು ಅರಸರು ಸೊದೋಮ್ ಗೊಮೋರ ಪಟ್ಟಣಗಳನ್ನು ಸೂರೆಮಾಡಿ ಅವುಗಳಲ್ಲಿದ್ದ ಎಲ್ಲಾ ಸಂಪತ್ತನ್ನೂ ದವಸವನ್ನೂ ತೆಗೆದುಕೊಂಡು ಹೋದರು.
Wale wafalme wanne wakateka mali yote ya Sodoma na Gomora pamoja na vyakula vyao vyote, kisha wakaenda zao.
12 ೧೨ ಸೊದೋಮಿನಲ್ಲಿ ವಾಸವಾಗಿದ್ದ ಅಬ್ರಾಮನ ತಮ್ಮನ ಮಗನಾದ ಲೋಟನನ್ನೂ ಅವನ ಆಸ್ತಿ ಸಹಿತ ಹಿಡಿದುಕೊಂಡು ಹೋದರು.
Pia walimteka Loti mwana wa ndugu yake Abramu pamoja na mali zake, kwa kuwa alikuwa akiishi Sodoma.
13 ೧೩ ತಪ್ಪಿಸಿಕೊಂಡವನೊಬ್ಬನು, ಇಬ್ರಿಯನಾದ ಅಬ್ರಾಮನ ಬಳಿಗೆ ಬಂದು ಈ ಸಂಗತಿಯನ್ನು ತಿಳಿಸಿದನು. ಅಬ್ರಾಮನು ಅಮೋರಿಯನಾದ ಮಮ್ರೆಯನ ಮೋರೆ ತೋಪಿನ ಬಳಿಯಲ್ಲಿ ವಾಸವಾಗಿದ್ದನು. ಮಮ್ರೆಯನಿಗೆ ಎಷ್ಕೋಲ ಮತ್ತು ಆನೇರ ಎಂಬ ಸಹೋದರರಿದ್ದರು; ಇವರಿಬ್ಬರಿಗೂ ಅಬ್ರಾಮನಿಗೂ ಒಡಂಬಡಿಕೆಯಿತ್ತು.
Mtu mmoja aliyekuwa ametoroka akaja kumpa Abramu Mwebrania taarifa. Wakati huu Abramu alikuwa anaishi karibu na mialoni ya Mamre Mwamori, aliyekuwa ndugu yake Eshkoli na Aneri, ambao wote walikuwa wameungana na Abramu.
14 ೧೪ ಅಬ್ರಾಮನು ತನ್ನ ತಮ್ಮನ ಮಗನು ಸೆರೆಗೆ ಸಿಕ್ಕಿದ್ದನ್ನು ಕೇಳಿ ತನ್ನ ಮನೆಯಲ್ಲೇ ಹುಟ್ಟಿ ಬೆಳೆದ ಶಿಕ್ಷಿತರಾದ ಮುನ್ನೂರ ಹದಿನೆಂಟು ಮಂದಿ ಆಳುಗಳನ್ನು ಯುದ್ಧಕ್ಕೆ ಸಿದ್ಧಮಾಡಿಕೊಂಡು ಹೊರಟು ಆ ರಾಜರನ್ನು ದಾನೂರಿನವರೆಗೂ ಹಿಂದಟ್ಟಿದನು.
Abramu alipopata habari kwamba jamaa yake amechukuliwa mateka, akawaita watu 318 wa nyumbani mwake waliokuwa wamefunzwa kupigana vita, wakawafuatilia hadi Dani.
15 ೧೫ ಅವನು ರಾತ್ರಿ ವೇಳೆಯಲ್ಲಿ ತನ್ನ ದಂಡನ್ನು ಎರಡು ಭಾಗಮಾಡಿ ತನ್ನ ಭಟರೊಡನೆ ಅವರ ಮೇಲೆ ಬಿದ್ದು, ಹೊಡೆದು, ದಮಸ್ಕ ಪಟ್ಟಣದ ಉತ್ತರಕಡೆಯಲ್ಲಿರುವ ಹೋಬಾ ಊರಿನ ತನಕ ಅವರನ್ನು ಹಿಂದಟ್ಟಿದ್ದನು.
Wakati wa usiku Abramu aliwagawa watu wake katika vikosi ili awashambulie, na akawafuatilia, akawafukuza hadi Hoba, kaskazini ya Dameski.
16 ೧೬ ರಾಜರು ಅಪಹರಿಸಿದ್ದ ಎಲ್ಲಾ ವಸ್ತುಗಳನ್ನು ಅವನು ತಿರುಗಿ ಪಡೆದುಕೊಂಡನು. ತನ್ನ ತಮ್ಮನ ಮಗನಾದ ಲೋಟನನ್ನೂ ಅವನ ಆಸ್ತಿಯನ್ನೂ ಬಿಡಿಸಿಕೊಂಡದ್ದಲ್ಲದೆ, ಸೆರೆಯಲ್ಲಿದ್ದ ಸ್ತ್ರೀಯರನ್ನೂ, ಉಳಿದಿದ್ದ ಜನರನ್ನು ಕರೆದುಕೊಂಡು ಬಂದನು.
Akarudisha mali zote, na akamrudisha Loti jamaa yake na mali zake, pamoja na wanawake na watu wengine.
17 ೧೭ ಅವನು ಕೆದೊರ್ಲಗೋಮರನ್ನೂ ಅವನೊಂದಿಗೆ ಇದ್ದ ರಾಜರನ್ನೂ ಸೋಲಿಸಿ ಬಂದ ಮೇಲೆ ಸೊದೋಮಿನ ಅರಸನು ಅವನನ್ನು ಅರಸನ ತಗ್ಗು ಎನ್ನಿಸಿಕೊಳ್ಳುವ ಶಾವೆ ತಗ್ಗಿನಲ್ಲಿ ಅಬ್ರಾಮನನ್ನು ಎದುರುಗೊಂಡನು.
Abramu aliporudi baada ya kumshinda Mfalme Kedorlaoma na wale wafalme waliojiunga naye, mfalme wa Sodoma akatoka kwenda kumlaki katika Bonde la Shawe (yaani Bonde la Mfalme).
18 ೧೮ ಸಾಲೇಮಿನ ಅರಸನಾದ ಮೆಲ್ಕೀಚೆದೆಕನು ಸಹ ಬಂದು ರೊಟ್ಟಿಯನ್ನೂ ದ್ರಾಕ್ಷಾರಸವನ್ನೂ ಕೊಟ್ಟನು. ಇವನು ಪರಾತ್ಪರನಾದ ದೇವರ ಯಾಜಕನಾಗಿದ್ದನು.
Ndipo Melkizedeki mfalme wa Salemu alipoleta mkate na divai. Alikuwa kuhani wa Mungu Aliye Juu Sana.
19 ೧೯ ಇವನು ಅಬ್ರಾಮನನ್ನು ಆಶೀರ್ವದಿಸಿ, “ಭೂಮ್ಯಾಕಾಶವನ್ನು ನಿರ್ಮಾಣಮಾಡಿದ ಪರಾತ್ಪರನಾದ ದೇವರ ಆಶೀರ್ವಾದವು ಅಬ್ರಾಮನಿಗೆ ದೊರೆಯಲಿ;
Naye akambariki Abramu, akisema, “Abarikiwe Abramu na Mungu Aliye Juu Sana, Muumba wa mbingu na nchi.
20 ೨೦ ಪರಾತ್ಪರನಾದ ದೇವರು ನಿನ್ನ ಶತ್ರುಗಳನ್ನು ನಿನ್ನ ಕೈಗೆ ಒಪ್ಪಿಸಿದ್ದಕ್ಕಾಗಿ ಆತನಿಗೆ ಸ್ತೋತ್ರ” ಎಂದು ಹೇಳಿದನು. ಅಬ್ರಾಮನು ತಾನು ಗೆದ್ದು ತಂದಿದ್ದ ಎಲ್ಲಾ ವಸ್ತುಗಳಲ್ಲಿ ಹತ್ತನೆಯ ಒಂದು ಭಾಗವನ್ನು ಯಾಜಕನಿಗೆ ಕೊಟ್ಟನು.
Abarikiwe Mungu Aliye Juu Sana, ambaye amewaweka adui zako mkononi mwako.” Ndipo Abramu akampa Melkizedeki sehemu ya kumi ya kila kitu.
21 ೨೧ ಸೊದೋಮಿನ ಅರಸನು, ಅಬ್ರಾಮನಿಗೆ, “ನೀನು ಬಿಡಿಸಿ ತಂದ ಜನರನ್ನು ನನಗೆ ಒಪ್ಪಿಸು; ಆಸ್ತಿಯನ್ನು ನೀನೇ ತೆಗೆದುಕೋ” ಎಂದು ಹೇಳಿದನು.
Mfalme wa Sodoma akamwambia Abramu, “Nipe hao watu na hizo mali uchukue wewe mwenyewe.”
22 ೨೨ ಅಬ್ರಾಮನು, ಸೊದೋಮಿನ ಅರಸನಿಗೆ,
Lakini Abramu akamwambia mfalme wa Sodoma, “Nimeinua mkono wangu kwa Bwana, Mungu Aliye Juu Sana, Muumba wa mbingu na dunia, na nimeapa
23 ೨೩ “ಒಂದು ದಾರವನ್ನಾಗಲಿ, ಕೆರದ ಬಾರನ್ನಾಗಲಿ ನಿನ್ನದರಲ್ಲಿ ಯಾವುದನ್ನೂ ನಾನು ತೆಗೆದುಕೊಳ್ಳುವುದಿಲ್ಲವೆಂದು ಭೂಮ್ಯಾಕಾಶಗಳನ್ನು ನಿರ್ಮಾಣಮಾಡಿದ ಪರಾತ್ಪರನಾದ ದೇವರಾಗಿರುವ ಯೆಹೋವನ ಕಡೆಗೆ ಕೈ ಎತ್ತಿ ಪ್ರಮಾಣಮಾಡುತ್ತೇನೆ. ‘ನನ್ನಿಂದ ಅಬ್ರಾಮನು ಐಶ್ವರ್ಯವಂತನಾದನೆಂದು ಹೇಳಿಕೊಳ್ಳುವುದಕ್ಕೆ ನಿನಗೆ ಆಸ್ಪದವಾಗಬಾರದು, ನನಗೆ ಏನೂ ಬೇಡ.’
kwamba sitapokea kitu chochote kilicho chako, hata kama ni uzi au gidamu ya kiatu, ili kamwe usije ukasema, ‘Nimemtajirisha Abramu.’
24 ೨೪ ಆಳುಗಳು ತಿಂದದ್ದು ಹೊರತು ನನ್ನ ಜೊತೆಯವರಾದ ಆನೇರ ಎಷ್ಕೋಲ ಮಮ್ರೆಯರಿಗೆ ಬರತಕ್ಕ ಪಾಲು ಮಾತ್ರ ಅವರಿಗೆ ಇರಲಿ” ಎಂದು ಹೇಳಿದನು.
Sitapokea chochote, ila kile tu watu wangu walichokula na sehemu ambayo ni fungu la watu waliokwenda pamoja nami, ambao ni Aneri, Eshkoli na Mamre. Wao na wapewe fungu lao.”