< ಆದಿಕಾಂಡ 15 >

1 ಈ ಸಂಗತಿಗಳು ನಡೆದ ಮೇಲೆ ಅಬ್ರಾಮನಿಗೆ ದರ್ಶನದಲ್ಲಿ ಯೆಹೋವನ ವಾಕ್ಯವುಂಟಾಗಿ ಹೇಳಿದೇನೆಂದರೆ, “ಅಬ್ರಾಮನೇ, ಭಯಪಡಬೇಡ, ನಾನು ನಿನಗೆ ಗುರಾಣಿಯಾಗಿದ್ದೇನೆ ಮತ್ತು ನಿನಗೆ ಅತ್ಯಧಿಕ ಬಹುಮಾನವು ದೊರೆಯುವುದು.”
這些事以後,有上主的話在神視中對亞巴郎說:「亞巴郎,你不要怕,我是你的盾牌;你得的報酬必很豐厚! 」
2 ಅದಕ್ಕೆ ಅಬ್ರಾಮನು, “ಕರ್ತನಾದ ಯೆಹೋವನೇ, ನನಗೆ ಏನು ಕೊಟ್ಟರೇನು? ನಾನು ಸಂತಾನವಿಲ್ಲದವನು. ಮತ್ತು ನನ್ನ ಆಸ್ತಿಯೆಲ್ಲಾ, ದಮಸ್ಕದವನಾದ ಎಲೀಯೆಜರನ ಪಾಲಾಗುತ್ತದೆಯಲ್ಲಾ?” ಎಂದನು.
亞巴郎說:「我主上主! 你能給我什麼﹖我一直沒有兒子;繼承我家業的是大馬士革人厄里則爾。」
3 ಪುನಃ ಅಬ್ರಾಮನು ಹೇಳಿದ್ದೇನೆಂದರೆ, “ನೀನು ನನಗೆ ಸಂತಾನ ಕೊಡಲಿಲ್ಲವಾದ್ದರಿಂದ, ನೋಡು, ನನ್ನ ಮನೆಯಲ್ಲಿ ಹುಟ್ಟಿದವನೇ ನನಗೆ ಬಾಧ್ಯಸ್ಥನಾಗಬೇಕಾಯಿತು” ಎಂದು ಹೇಳಿದನು.
亞巴郎又說:「你既沒有賜給我後裔,那麼只有一個家僕來作我的承繼人。」
4 ಯೆಹೋವನ ವಾಕ್ಯವು ಅವನ ಸಂಗಡ ಮಾತನಾಡಿ, “ಈ ಮನುಷ್ಯನು ನಿನಗೆ ಬಾಧ್ಯಸ್ಥನಾಗುವುದಿಲ್ಲ; ಆದರೆ ನಿನ್ನ ಹೊಟ್ಟೆಯಲ್ಲಿ ಹುಟ್ಟುವವನೇ ನಿನಗೆ ಬಾಧ್ಯಸ್ಥನಾಗುವನು” ಎಂದು ಹೇಳಿ ಅಬ್ರಾಮನನ್ನು ಹೊರಗೆ ಕರೆದುಕೊಂಡು ಬಂದು,
有上主的話答覆他說:「這人決不會是你的承繼人,而是你親生的要做你的承繼人。」
5 “ಆಕಾಶದ ಕಡೆಗೆ ನೋಡು, ನಕ್ಷತ್ರಗಳನ್ನು ಲೆಕ್ಕಿಸುವುದು ನಿನ್ನಿಂದಾದರೆ ಲೆಕ್ಕಿಸು.” ನಂತರ ಯೆಹೋವನು ಅಬ್ರಾಮನಿಗೆ, “ನಿನ್ನ ಸಂತಾನವು ನಕ್ಷತ್ರಗಳಷ್ಟಾಗುವುದು” ಎಂದು ಹೇಳಿದನು.
上主遂領他到外面說:「請你仰觀蒼天,數點星辰,你能夠數清嗎﹖」繼而對他說:「你的後裔也將這樣。」
6 ಅಬ್ರಾಮನು ಯೆಹೋವನನ್ನು ನಂಬಿದನು; ಯೆಹೋವನು ಅವನ ನಂಬಿಕೆಯನ್ನು ಅವನ ಲೆಕ್ಕಕ್ಕೆ ನೀತಿಯೆಂದು ಪರಿಗಣಿಸಿದನು.
亞巴郎相信了上主,上主就以此算為他的正義。
7 ನಂತರ ಆತನು ಅಬ್ರಾಮನಿಗೆ, “ಈ ದೇಶವನ್ನು ನಿನಗೆ ಬಾಧ್ಯಸ್ಥವಾಗಿ ಕೊಡುವುದಕ್ಕೋಸ್ಕರ ನಿನ್ನನ್ನು ಊರ್ ಎಂಬ ಕಲ್ದೀಯರ ಪಟ್ಟಣದಿಂದ ಬರಮಾಡಿದ ಯೆಹೋವನು ನಾನೇ” ಎಂದು ಹೇಳಿದನು.
上主又對他說:「我是上主,我從加色丁人的烏爾領你出來,是為將這地賜給你作為產業。」
8 “ಕರ್ತನಾದ ಯೆಹೋವನೇ, ನಾನು ಇದನ್ನು ಬಾಧ್ಯವಾಗಿ ಹೊಂದುವೆನೆಂದು ತಿಳಿದುಕೊಳ್ಳುವುದು ಹೇಗೆ?” ಎಂದು ಕೇಳಿದನು.
亞巴郎說:「我主上主! 我如何知道我要佔有此地為產業﹖」
9 ಅದಕ್ಕೆ ಆತನು ಯೆಹೋವನಿಗೆ, “ನೀನು ಮೂರು ವರ್ಷದ ಮಣಕ, ಒಂದು ಆಡು, ಒಂದು ಟಗರು, ಒಂದು ಬೆಳವಕ್ಕಿ, ಒಂದು ಪಾರಿವಾಳದ ಮರಿಯನ್ನೂ ತೆಗೆದುಕೊಂಡು ಬಾ” ಎಂದನು.
上主對他說:「你給我拿來一隻三歲的母牛,一隻三歲的母山羊,一隻三歲的公綿羊,一隻斑鳩和一隻雛鴿。」
10 ೧೦ ಅವನು ಇವುಗಳನ್ನೆಲ್ಲಾ ತೆಗೆದುಕೊಂಡು ಬಂದು ಮೃಗಗಳನ್ನು ಎರಡಾಗಿ ಸೀಳಿ, ಒಂದು ತುಂಡನ್ನು ಇನ್ನೊಂದರ ಎದುರಾಗಿ ಇಟ್ಟನು; ಪಕ್ಷಿಗಳನ್ನು ಮಾತ್ರ ಸೀಳಲಿಲ್ಲ.
亞巴郎便把這一切拿了來,每樣從中剖開,將一半與另一半相對排列,只有飛鳥沒有剖開。
11 ೧೧ ಆ ಪಶುಗಳ ಮೇಲೆ ಹದ್ದುಗಳು ಎರಗಲು ಅಬ್ರಾಮನು ಅವುಗಳನ್ನು ಓಡಿಸಿಬಿಟ್ಟನು.
有鷙鳥落在獸屍上,亞巴郎就把牠們趕走。
12 ೧೨ ಹೊತ್ತು ಮುಣುಗುತ್ತಿರುವಾಗ ಅಬ್ರಾಮನಿಗೆ ಗಾಢನಿದ್ರೆ ಹತ್ತಿತು; ಕಾರ್ಗತ್ತಲು ಅವನ ಮೇಲೆ ಕವಿಯಿತು; ಅವನು ಮಹಾಭೀತಿಯಿಂದ ಭಯಭ್ರಾಂತನಾದನು.
太陽快要西落時,亞巴郎昏沉地睡去,忽覺陰森萬分,遂害怕起來。
13 ೧೩ ಆಗ ಯೆಹೋವನು ಅಬ್ರಾಮನಿಗೆ, “ನೀನು ಚೆನ್ನಾಗಿ ತಿಳಿಯತಕ್ಕದ್ದೇನೆಂದರೆ, ನಿನ್ನ ಸಂತತಿಯವರು ಅನ್ಯದೇಶದಲ್ಲಿ ಪ್ರವಾಸಿಯಾಗಿ ವಾಸವಾಗಿದ್ದು ಆ ದೇಶದವರಿಗೆ ದಾಸರಾಗುವರು. ನಾನೂರು ವರ್ಷ ಆ ದೇಶದವರಿಂದ ಬಾಧೆಪಡುವರು.
上主對亞巴郎說:「你當知道,你的後裔必要寄居在異邦,受人奴役虐待四百年之久。
14 ೧೪ ಅವರನ್ನು ದಾಸರನ್ನಾಗಿ ಮಾಡಿಸಿಕೊಂಡ ಜನಾಂಗವನ್ನು ನಾನು ದಂಡಿಸಿದ ನಂತರ ಅವರು ಬಹಳ ಸಂಪತ್ತುಳ್ಳವರಾಗಿ ಆ ದೇಶದಿಂದ ಬಿಡುಗಡೆಯಾಗಿ ಹೊರಟು ಬರುವರು.
但是,我要親自懲罰他們所要服事的民族;如此你的後裔必要帶著豐富的財物由那裏出來。
15 ೧೫ ನೀನಂತೂ ಸಮಾಧಾನದೊಡನೆ ಪೂರ್ವಿಕರ ಬಳಿಗೆ ಸೇರುವಿ, ಬಹಳ ವೃದ್ಧನಾಗಿ ಉತ್ತರಕ್ರಿಯೆಯನ್ನು ಹೊಂದುವಿ.
至於你,你要享受高壽,以後平安回到你列祖那裏,被人埋葬。
16 ೧೬ ನಿನ್ನ ಸಂತತಿಯ ನಾಲ್ಕನೆಯ ತಲೆಮಾರಿನವರು ಇಲ್ಲಿಗೆ ತಿರುಗಿ ಬರುವರು, ಅಮೋರಿಯರ ಅಪರಾಧವು ಇನ್ನೂ ಪೂರ್ಣಸ್ಥಿತಿಗೆ ಬರಲಿಲ್ಲ” ಎಂದು ಹೇಳಿದನು.
到了第四代,他們必要回到這裏,因為阿摩黎人的罪惡至今尚未滿貫。」
17 ೧೭ ಹೊತ್ತು ಮುಳುಗಿ ಕಾರ್ಗತ್ತಲಾದಾಗ, ಇಗೋ, ಹೊಗೆ ಹಾಯುವ ಒಲೆಯೂ ಉರಿಯುವ ದೀಪವೂ ಕಾಣಿಸಿ ಆ ತುಂಡುಗಳ ಮಧ್ಯದಲ್ಲಿ ಹಾದು ಹೋದವು.
當日落天黑的時候,看,有冒煙的火爐和燃著的火炬,由那些肉塊間經過。
18 ೧೮ ಆ ದಿನದಲ್ಲಿ ಯೆಹೋವನು ಅಬ್ರಾಮನ ಸಂಗಡ ಒಡಂಬಡಿಕೆ ಮಾಡಿಕೊಂಡು, “ಐಗುಪ್ತ ದೇಶದ ನದಿಯಿಂದ ಯೂಫ್ರೆಟಿಸ್ ಮಹಾ ನದಿಯವರೆಗೂ ಇರುವ ಈ ದೇಶವನ್ನೆಲ್ಲಾ ನಿನ್ನ ಸಂತತಿಯವರಿಗೆ ಕೊಟ್ಟಿದ್ದೇನೆ.
在這一天,上主與亞巴郎立約說:「我要賜給你後裔的這土地,是從埃及河直到幼發拉的河,
19 ೧೯ ಕೇನಿಯರೂ, ಕೆನಿಜೀಯರೂ, ಕದ್ಮೋನಿಯರೂ,
就是刻尼人、刻納次人、卡德摩尼人、
20 ೨೦ ಹಿತ್ತಿಯರೂ, ಪೆರಿಜೀಯರೂ, ರೆಫಾಯರೂ,
赫特人、培黎齊人、勒法因人、
21 ೨೧ ಅಮೋರಿಯರೂ, ಕಾನಾನ್ಯರೂ, ಗಿರ್ಗಾಷಿಯರೂ, ಯೆಬೂಸಿಯರೂ ವಾಸವಾಗಿರುವ ದೇಶವನ್ನು ನಾನು ನಿನ್ನ ಸಂತತಿಗೆ ಕೊಟ್ಟಿದ್ದೇನೆ,” ಎಂದು ವಾಗ್ದಾನ ಮಾಡಿದನು.
阿摩黎人、客納罕人、基爾加士人和耶步斯人的土地。」

< ಆದಿಕಾಂಡ 15 >